Site icon Vistara News

Viral News: ‘ಅಸ್ವಾಭಾವಿಕ ಲೈಂಗಿಕಕ್ರಿಯೆ’ಗೆ ಒತ್ತಾಯಿಸುತ್ತಿದ್ದ ಗಂಡನ ಶಿಶ್ನವನ್ನೇ ಬಾಯಿಂದ ಕತ್ತರಿಸಿದ ಹೆಂಡತಿ!

wife bites genitals of her husband who was forcing her to have unnatural sex

ನವದೆಹಲಿ: ಗಂಡನ ‘ಅಸ್ವಾಭಾವಿಕ ಲೈಂಗಿಕ ಕ್ರಿಯೆ’ಯ (Unnatural Sex) ಬೇಡಿಕೆಯಿಂದ ಬೇಸತ್ತ ಪತ್ನಿಯು ಆತನ ಶಿಶ್ನವನ್ನು ಬಾಯಿಂದ ಕಚ್ಚಿ ತೀವ್ರವಾಗಿ ಗಾಯಗೊಳಿಸಿದ (Woman Bites Husband Genitals) ಘಟನೆ ಉತ್ತರ ಪ್ರದೇಶದ (Uttar Pradesh) ಹಮಿರ್ಪುರ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು (UP Police) ತಿಳಿಸಿದ್ದಾರೆ. ಆರೋಪಿ ಮಹಿಳೆಯ ವಿರುದ್ಧ ಕೇಸ್ ದಾಖಲಿಸಿ, ವಿಚಾರಣೆ ನಡೆಸಲಾಗುತ್ತಿದೆ. ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ(Viral News).

ಗಾಯಗೊಂಡ ಗಂಡನನ್ನು ರಾಮು ನಿಶಾದ್ ಎಂದು ಗುರುತಿಸಲಾಗಿದೆ. 34 ವರ್ಷದ ರಾಮು ಜನವರಿ 28ರಂದು ಗಾಯಗೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿದ್ದಾನೆಂದು ಹೇಳಲಾಗುತ್ತಿದೆ.

ಗಂಡ ನಿತ್ಯ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸುತ್ತಿದ್ದ. ಇದರಿಂದ ಆತನ ಪತ್ನಿ ರೋಸಿ ಹೋಗಿದ್ದರು. ಅಂತಿಮವಾಗಿ ಆತನ ಶಿಶ್ನವನ್ನು ಬಾಯಿಂದ ಕತ್ತರಿಸಿದ್ದಾಳೆ. ಅಸ್ವಾಭಾವಿಕ ಲೈಂಗಿಕತೆಯ ಬಗ್ಗೆ ದಂಪತಿಗಳ ನಡುವೆ ಜಗಳ ನಡೆದ ನಂತರ ರಾತ್ರಿ ಈ ಘಟನೆ ನಡೆದಿದೆ. ಪತ್ನಿಯು ತನ್ನ ಪತಿಯ ಖಾಸಗಿ ಭಾಗಗಳನ್ನು ತನ್ನ ಹಲ್ಲುಗಳಿಂದ ಕಚ್ಚಿದ ನಂತರ ತೀವ್ರ ರಕ್ತಸ್ರಾವವಾಯಿತು, ನಂತರ ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಪರಿಸ್ಥಿತಿ ಚಿಂತಾಜನಕವಾಗಿರುವುದರಿಂದ ಮತ್ತೆ ಆತನನ್ನು ಅತ್ಯುತ್ತಮ ಸೌಲಭ್ಯವಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೂ, ಆತನ ಪರಿಸ್ಥಿತಿ ಸುಧಾರಿಸಿಲ್ಲ ಎಂದು ಹೇಳಲಾಗುತ್ತಿದೆ. ತೀವ್ರ ರಕ್ತಸ್ರಾವವಾಗಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಪತ್ನಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 326 ರ ಅಡಿಯಲ್ಲಿ ಸ್ವಯಂಪ್ರೇರಣೆಯಿಂದ ಘೋರವಾದ ಗಾಯವನ್ನು ಉಂಟುಮಾಡಿದ ಮತ್ತು ಕ್ರಿಮಿನಲ್ ಬೆದರಿಕೆಗಾಗಿ ಸೆಕ್ಷನ್ 506 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ತನಿಖೆ ಆರಂಭಿಸಲಾಗಿದ್ದು, ಆರೋಪಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿ ಅನೂಪ್ ಸಿಂಗ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Viral Video: ರೈಲುಗಳಲ್ಲಿ ಬದಲಾದ ಟಾಯ್ಲೆಟ್, ಕೇಂದ್ರ ಸಚಿವರ ಟ್ವೀಟ್ ವೈರಲ್

Exit mobile version