ನಿಮ್ಮ ನಾಲಗೆ ಕತ್ತರಿಸುತ್ತೇವೆ, ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಜಡ್ಜ್‌ಗೆ ಕೈ ನಾಯಕ ಬೆದರಿಕೆ - Vistara News

ದೇಶ

ನಿಮ್ಮ ನಾಲಗೆ ಕತ್ತರಿಸುತ್ತೇವೆ, ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿದ ಜಡ್ಜ್‌ಗೆ ಕೈ ನಾಯಕ ಬೆದರಿಕೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್‌ ಕೋರ್ಟ್‌ ನ್ಯಾಯಾಧೀಶ ಎಚ್‌. ವರ್ಮಾ ಅವರಿಗೆ ತಮಿಳುನಾಡು ಕಾಂಗ್ರೆಸ್‌ ಮುಖಂಡ ಬೆದರಿಕೆ ಹಾಕಿದ್ದಾರೆ. ಹಾಗಾಗಿ, ಅವರ ವಿರುದ್ಧ ಕೇಸ್‌ ದಾಖಲಾಗಿದೆ.

VISTARANEWS.COM


on

Will chop tongue off: Congress leader threatens judge who sentenced Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಮೋದಿ ಎಂಬ ಉಪನಾಮ ಹೊಂದಿರುವ ಎಲ್ಲರೂ ಕಳ್ಳರೇ ಎಂದು ಹೇಳಿಕೆ ನೀಡಿದ ಬಳಿಕ ದಾಖಲಾದ ಮಾನಹಾನಿ ಕೇಸ್‌ನಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಸೂರತ್‌ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿ, ಎರಡು ಶಿಕ್ಷೆ ವಿಧಿಸಿದೆ. ಹಾಗಾಗಿ, ರಾಹುಲ್ ಗಾಂಧಿ ಅವರು ಸಂಸತ್‌ನಿಂದ ಅನರ್ಹಗೊಂಡಿದ್ದಾರೆ. ಈ ವಿಚಾರವು ದೇಶಾದ್ಯಂತ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ದೋಷಿ ಎಂದು ತೀರ್ಪು ನೀಡಿದ ಸೂರತ್‌ ನ್ಯಾಯಾಲಯದ ನ್ಯಾಯಾಧೀಶ ಎಚ್‌. ವರ್ಮಾ ಅವರಿಗೆ ಕಾಂಗ್ರೆಸ್‌ ನಾಯಕರೊಬ್ಬರು ಬೆದರಿಕೆ ಹಾಕಿದ್ದಾರೆ. “ನಿಮ್ಮ ನಾಲಗೆಯನ್ನು ಕತ್ತರಿಸುತ್ತೇವೆ” ಎಂದು ಹೇಳಿದ್ದಾರೆ.

ಹೌದು, ತಮಿಳುನಾಡಿನ ದಿಂಡಿಗಲ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮಣಿಕಂದನ್‌ ಅವರು ಸೂರತ್‌ ಕೋರ್ಟ್‌ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದಾರೆ. ರಾಹುಲ್‌ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸದ್ದನ್ನು ಖಂಡಿಸಿ ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ನ ಎಸ್‌ಸಿ ಹಾಗೂ ಎಸ್‌ಟಿ ವಿಭಾಗದಿಂದ ಪ್ರತಿಭಟನೆ ನಡೆಸಲಾಗಿದೆ. ಇದೇ ವೇಳೆ ಮಾತನಾಡಿದ ಮಣಿಕಂದನ್‌, “ರಾಹುಲ್‌ ಗಾಂಧಿ ಅವರಿಗೆ ಸೂರತ್‌ ನ್ಯಾಯಾಲಯವು ಮಾರ್ಚ್‌ 23ರಂದು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಎಚ್‌. ವರ್ಮಾ ಅವರೇ ಕೇಳಿ, ಕಾಂಗ್ರೆಸ್‌ ಯಾವಾಗ ಅಧಿಕಾರಕ್ಕೆ ಬರುತ್ತದೆಯೋ, ಆಗ ನಿಮ್ಮ ನಾಲಗೆಯನ್ನು ಕತ್ತರಿಸಲಾಗುತ್ತದೆ” ಎಂದಿದ್ದಾರೆ.

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಮೂರು ಸೆಕ್ಷನ್‌ಗಳ ಅಡಿಯಲ್ಲಿ ದಿಂಡಿಗಲ್‌ ಪೊಲೀಸರು ಮಣಿಕಂದನ್‌ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಕರ್ನಾಟಕದ ಕೋಲಾರದಲ್ಲಿ 2019ರಲ್ಲಿ ಚುನಾವಣೆ ರ‍್ಯಾಲಿ ವೇಳೆ ರಾಹುಲ್‌ ಗಾಂಧಿ ಅವರು ಮಾತನಾಡಿದ್ದರು. ಲಲಿತ್‌ ಮೋದಿ, ನೀರವ್‌ ಮೋದಿ ಅವರ ಹೆಸರನ್ನು ಉಲ್ಲೇಖಿಸಿ ಮೋದಿ ವಿರುದ್ಧ ಟೀಕಿಸಿದ್ದರು. “ಮೋದಿ ಸರ್‌ನೇಮ್‌ ಹೊಂದಿರುವ ಎಲ್ಲರೂ ಏಕೆ ಕಳ್ಳರು?” ಎಂದು ಹೇಳಿದ್ದರು.

ರಾಹುಲ್‌ ಗಾಂಧಿ ಹೇಳಿಕೆಯನ್ನು ಪ್ರಶ್ನಿಸಿ ಗುಜರಾತ್‌ ಬಿಜೆಪಿ ನಾಯಕ ಪೂರ್ಣೇಶ್‌ ಮೋದಿ ಅವರು ಸೂರತ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯವು ಮಾರ್ಚ್‌ 23ರಂದು ರಾಹುಲ್‌ ಗಾಂಧಿ ದೋಷಿ ಎಂದು ತೀರ್ಪು ನೀಡಿ, ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹಾಗಾಗಿ, ಜನಪ್ರತಿನಿಧಿ ಕಾಯ್ದೆ ಅನ್ವಯ ರಾಹುಲ್‌ ಗಾಂಧಿ ಅವರು ಲೋಕಸಭೆಯಿಂದ ಅನರ್ಹಗೊಂಡಿದ್ದಾರೆ. ಅವರ ಅನರ್ಹತೆ ಪ್ರಶ್ನಿಸಿ ಪ್ರತಿಪಕ್ಷಗಳು ಈಗಾಗಲೇ ಪ್ರತಿಭಟನೆ ನಡೆಸಿವೆ. ಸಂಸತ್‌ ಬಜೆಟ್‌ ಅಧಿವೇಶನದ ಕಲಾಪಗಳು ಕೂಡ ಇದೇ ವಿಷಯಕ್ಕೆ ಸಂಬಂಧಿಸಿದ ಪ್ರತಿಭಟನೆಗಳಿಗೆ ಬಲಿಯಾಗಿವೆ.

ಇದನ್ನೂ ಓದಿ: Rahul Gandhi: ಸರ್ಕಾರಿ ಬಂಗಲೆಯಿಂದ ಹೊರ ಬಿದ್ದಿರುವ ರಾಹುಲ್‌ ಗಾಂಧಿಗೆ ಆಶ್ರಮಕ್ಕೆ ಬನ್ನಿ ಎಂದ ಅಯೋಧ್ಯೆಯ ಶ್ರೀ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡಿರುವುದು ಭಾರಿ ಅನುಕೂಲವಾಗಿದೆ ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

VISTARANEWS.COM


on

Dr Jitendra Singh
Koo

ನವದೆಹಲಿ: 2023ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಚಂದ್ರಯಾನ-3 (Chandrayaan 3) ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಬಳಿಕ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಆತ್ಮವಿಶ್ವಾಸವು ನೂರ್ಮಡಿಯಾಗಿದೆ. ಕೇಂದ್ರ ಸರ್ಕಾರವೂ (Central Government) ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡುತ್ತಿದೆ. ಇದರ ಬೆನ್ನಲ್ಲೇ, “2025ರ ವೇಳೆಗೆ ಭಾರತವು ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಹಾಗೂ ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್‌ ಕಳುಹಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ (Dr. Jitendra Singh) ತಿಳಿಸಿದ್ದಾರೆ.

ಭಾರತ್‌ 24 ನ್ಯೂಸ್‌ ನೆಟ್‌ವರ್ಕ್‌ ಜತೆಗಿನ ವಿಶೇಷ ಸಂವಾದದಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. “ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭೂಮಿ ದಾಖಲೆ ನಿರ್ವಹಣೆ, ಹೊಸ ಭೌಗೋಳಿಕ ನೀತಿ, ಹೊಸ ಬಾಹ್ಯಾಕಾಶ ನೀತಿ, ಮಣ್ಣಿನ ಆರೋಗ್ಯ ಕಾರ್ಡ್‌, ಲ್ಯಾಂಡ್‌ ಮ್ಯಾಪಿಂಗ್‌ ಸೇರಿ ಮುಂತಾದ ವಲಯಗಳಿಗೆ ಅನುಕೂಲವಾಗಲಿದೆ” ಎಂಬುದಾಗಿ ಅವರು ತಿಳಿಸಿದರು.

“ಭಾರತದ ಬಾಹ್ಯಾಕಾಶ ಕ್ಷೇತ್ರವು ಗಣನೀಯವಾಗಿ ಏಳಿಗೆ ಹೊಂದುತ್ತಿದೆ. 2022ರಲ್ಲಿ ದೇಶದಲ್ಲಿ ಬಾಹ್ಯಾಕಾಶಕ್ಕೆ ಸಂಬಂದಿಸಿದ ಒಂದೇ ಒಂದು ನವೋದ್ಯಮ ಇತ್ತು. ಬಾಹ್ಯಾಕಾಶದಲ್ಲೂ ಖಾಸಗಿ ಸಹಭಾಗಿತ್ವಕ್ಕೆ 2024ರಲ್ಲಿ ಅವಕಾಶ ನೀಡಿದ ಬಳಿಕ ನಾವೀಗ 200 ನವೋದ್ಯಮಗಳನ್ನು ಹೊಂದಿದ್ದೇವೆ. ಇವುಗಳಲ್ಲೇ ಕೆಲವು ಸ್ಟಾರ್ಟಪ್‌ಗಳು ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿವೆ. ಅಷ್ಟೇ ಅಲ್ಲ, ಖಾಸಗಿ ವಲಯದಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ 1 ಸಾವಿರ ಕೋಟಿ ರೂ. ಹೂಡಿಕೆ ಹರಿದು ಬಂದಿದೆ” ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. “ಈಶಾನ್ಯ ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ ಭಾರಿ ಅಭಿವೃದ್ಧಿಯಾಗಿದೆ. ಎಲ್ಲ ಹವಾಮಾನದಲ್ಲೂ ಸುಗಮವಾಗಿ ಸಂಚಾರಕ್ಕೆ ಅನುಕೂಲವಾಗುವ ರಸ್ತೆಗಳ ಅಭಿವೃದ್ಧಿ, ಹೆದ್ದಾರಿಗಳ ಮೂಲಕ ಉತ್ತಮ ಸಂಪರ್ಕ, ನಗರ ಪ್ರದೇಶಗಳಿಂದ ದೂರವಿರುವ ಪಟ್ಟಣ, ಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಇದು ಈಶಾನ್ಯ ರಾಜ್ಯಗಳ ಮಟ್ಟಿಗೆ ಅತ್ಯುತ್ತಮ ಬೆಳವಣಿಗೆ” ಎಂದು ಹೇಳಿದರು.

ಇದನ್ನೂ ಓದಿ: Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Continue Reading

ದೇಶ

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

Mukesh Ambani: ಜುಲೈ 12ರಂದು ಮುಂಬೈಯಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ವಿವಾಹ ನಡೆಯಲಿದೆ. ಅದಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿದೆ. ಈಗ ಮುಕೇಶ್‌ ಅಂಬಾನಿ ಅವರು ದೇಶದ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುವಲ್ಲಿ ಬ್ಯುಸಿಯಾಗಿದ್ದಾರೆ.

VISTARANEWS.COM


on

Mukesh Ambani
Koo

ನವದೆಹಲಿ: ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (RIL) ಮುಖ್ಯಸ್ಥ, ದೇಶದ ಆಗರ್ಭ ಶ್ರೀಮಂತ ಮುಕೇಶ್‌ ಅಂಬಾನಿ (Mukesh Ambani) ಅವರ ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ರಾಧಿಕಾ ಮರ್ಚಂಟ್‌ (Radhika Merchant) ಅವರ ವಿವಾಹಕ್ಕೆ ದಿನಗಣನೆ ಆರಂಭವಾಗಿದೆ. ಜುಲೈ 12ರಂದು ಮುಂಬೈನಲ್ಲಿರುವ ಜಿಯೋ ವರ್ಲ್ಡ್‌ ಕನ್ವೆನ್ಶನ್‌ ಸೆಂಟರ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಜೋಡಿಯು ದಾಂಪತ್ಯ ಜೀವನಕ್ಕೆ ಕಾಲಿಡಲಿದೆ. ಹಾಗಾಗಿ, ಗುರುವಾರ (ಜುಲೈ 4) ಮುಕೇಶ್‌ ಅಂಬಾನಿ ಅವರು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರನ್ನು ಭೇಟಿಯಾಗಿ, ಮಗನ ಮದುವೆಗೆ ಆಹ್ವಾನಿಸಿದ್ದಾರೆ.

ನವದೆಹಲಿಯ 10 ಜನಪಥದಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ತೆರಳಿದ ಮುಕೇಶ್‌ ಅಂಬಾನಿ ಅವರು ಕಾಂಗ್ರೆಸ್‌ ನಾಯಕಿಯನ್ನು ಮದುವೆಗೆ ಆಹ್ವಾನಿಸಿದ್ದಾರೆ. ಅದ್ಧೂರಿಯಾಗಿ ನಡೆಯುವ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ನೂರಾರು ರಾಜಕಾರಣಿಗಳು, ಬಾಲಿವುಡ್‌ ನಟ-ನಟಿಯರು, ಕ್ರಿಕೆಟಿಗರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಬಹುತೇಕ ಜನರಿಗೆ ಮುಕೇಶ್‌ ಅಂಬಾನಿ ಅವರ ಕುಟುಂಬದಿಂದ ವಿವಾಹ ಆಮಂತ್ರಣ ಪತ್ರಿಕೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಜುಲೈ 12ರಂದು ನಡೆಯುವ ಅದ್ಧೂರಿ ವಿವಾಹ ಸಮಾರಂಭಕ್ಕೆ ಮುನ್ನುಡಿಯಾಗಿ ಜುಲೈ 2ರಂದು ಮುಕೇಶ್‌ ಅಂಬಾನಿ ಮತ್ತು ನೀತಾ ಅಂಬಾನಿ ಸುಮಾರು 50 ಬಡ ಜೋಡಿಗಳ ಸಾಮೂಹಿಕ ವಿವಾಹ ನೆರವೇರಿಸಿ ಮಾದರಿಯಾಗಿದ್ದಾರೆ. ಮುಂಬೈಯಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಫಾಲ್ಘರ್‌ನಲ್ಲಿ ಈ ಸಾಮೂಹಿಕ ವಿವಾಹ ನೆರವೇರಿತು. ರಿಲಯನ್ಸ್‌ ಕಾರ್ಪೋರೇಟ್‌ ಪಾರ್ಕ್‌ನಲ್ಲಿ ನಡೆದ ಈ ವಿವಾಹ ಸಮಾರಂಭದಲ್ಲಿ ಆರ್ಥಿಕವಾಗಿ ಹಿಂದುಳಿದ 50 ಜೋಡಿಗಳು ಹಸೆಮಣೆ ಏರಿದವು.

ಈ ಸಾಮೂಹಿಕ ವಿವಾಹದಲ್ಲಿ ವಧು-ವರರ ಕುಟುಂಬದ ಸುಮಾರು 800 ಮಂದಿ ಪಾಲ್ಗೊಂಡಿದ್ದರು. ಸ್ವತಃ ಮುಕೇಶ್‌ ಅಂಬಾನಿ, ನೀತಾ ಅಂಬಾನಿ, ಆಕಾಶ್‌ ಅಂಬಾನಿ, ಶ್ಲೋಕ ಮೆಹ್ತಾ, ಇಶಾ ಅಂಬಾನಿ, ಆನಂದ್‌ ಪಿರಮಾಲ್‌ ಆಗಮಿಸಿ ನೂತನ ವಧು-ವರರನ್ನು ಹಾರೈಸಿದರು.

ಪ್ರತಿ ಜೋಡಿಗೆ ಚಿನ್ನದ ಉಂಗುರ, ಮಂಗಳ ಸೂತ್ರ, ಮೂಗುತ್ತಿ ಉಡುಗೊರೆಯಾಗಿ ನೀಡಲಾಯಿತು. ಜತೆಗೆ ಬೆಳ್ಳಿಯ ಆಭರಗಳನ್ನೂ ನೀಡಲಾಗಿದೆ. ಜತೆಗೆ ಸ್ತ್ರೀಧನವಾಗಿ ಪ್ರತಿ ವಧುವಿಗೆ 1.01 ಲಕ್ಷ ರೂ. ಚೆಕ್‌ ಅನ್ನು ಅಂಬಾನಿ ಕುಟುಂಬಸ್ಥರು ವಿತರಿಸಿದ್ದಾರೆ. ಮಾತ್ರವಲ್ಲ ಪ್ರತಿ ಜೋಡಿಗೆ ಒಂದು ವರ್ಷಕ್ಕೆ ಅಗತ್ಯವಾದ ದಿನಸಿ ಸಾಮಗ್ರಿಗಳನ್ನೂ ವಿತರಿಸಲಾಗಿದೆ. ಇದು ಪಾತ್ರೆ ಪರಿಕರಗಳು, ಗ್ಯಾಸ್‌ ಸ್ಟವ್‌, ಮಿಕ್ಸಿ, ಫ್ಯಾನ್‌, ಹಾಸಿಗೆ ಮತ್ತು ತಲೆ ದಿಂಬುಗಳನ್ನು ಒಳಗೊಂಡಿದೆ. ಅದ್ಧೂರಿ ಭೋಜನದ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಈ ವೇಳೆ ವರ್ಲಿ ಬುಡಕಟ್ಟು ಜನಾಂಗದವರು ಪ್ರದರ್ಶಿಸಿದ ಸಾಂಪ್ರದಾಯಿಕ ತಾರ್ಪ ನೃತ್ಯವನ್ನು ಅತಿಥಿಗಳು ಮತ್ತು ಅಂಬಾನಿ ಕುಟುಂಬದ ಸದಸ್ಯರು ವೀಕ್ಷಿಸಿದರು.

ಇದನ್ನೂ ಓದಿ: Anant Ambani: ಅನಂತ್ ಅಂಬಾನಿ ಬಳಿ ಇವೆ 300 ಕೋಟಿಯ ವಾಚ್‌ಗಳು! ಎಂಥೆಂಥ ಗಡಿಯಾರಗಳಿವೆ ನೋಡಿ!

Continue Reading

ದೇಶ

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

Hathras Stampede:ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

VISTARANEWS.COM


on

Hatras Stampede
Koo

ಲಖನೌ: ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತ(Hathras Stampede) ದುರ್ಘಟನೆಗೆ ಸಂಬಂಧಿಸಿದ ಕೆಲವೊಂದು ಸಿಸಿಟಿವಿ ದೃಶ್ಯಾವಳಿಗಳು ಇದೀಗ ವೈರಲ್‌ ಆಗುತ್ತಿದೆ. ಅದರಲ್ಲಿ ಪ್ರಮುಖವಾಗಿ ಘಟನೆ ಬಳಿಕ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ(Bhole Baba) ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ಎಸ್ಕೇಪ್‌ ಆಗುತ್ತಿರುವ ದೃಶ್ಯ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ ಪಂಪ್‌ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ತನಿಖೆ ಆರಂಭಿಸಿರುವ ಉತ್ತರ ಪ್ರದೇಶ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಹಾಗೆಯೇ, ಪ್ರಮುಖ ಆರೋಪಿಯ ಕುರಿತು ಸುಳಿವು ನೀಡಿದವರಿಗೆ 1 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದ್ದಾರೆ.

“ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಹಾಗೂ ನಾಲ್ವರು ಪುರುಷರು ಸೇರಿ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ಮಾಡಲಾಗುತ್ತಿದೆ. ಇದುವರೆಗೆ 121 ಮಂದಿ ಮೃತಪಟ್ಟಿದ್ದು, ಎಲ್ಲರ ಶವಗಳನ್ನು ಗುರುತಿಸಲಾಗಿದೆ. ಮರಣೋತ್ತರ ಪರೀಕ್ಷೆ ಪ್ರಕ್ರಿಯೆಯೂ ಮುಕ್ತಾಯಗೊಂಡಿದೆ” ಎಂದು ಅಲಿಗಢ ಐಜಿ ಶಾಲಾಭ್‌ ಮಾಥುರ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಭೋಲೆ ಬಾಬಾ ನಂತರ ಪ್ರತ್ಯಕ್ಷರಾಗಿದ್ದು, “ನಾನು ಸತ್ಸಂಗ ಮುಗಿಸಿ ತೆರಳಿದ ಬಳಿಕ ಘಟನೆ ನಡೆದಿದೆ. ಇದು ಸಮಾಜಘಾತುಕ ಶಕ್ತಿಗಳ ಕೃತ್ಯ” ಎಂದಿದ್ದಾರೆ. ಕಾಲ್ತುಳಿತದ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.

ಹತ್ರಾಸ್‌ ಕಾಲ್ತುಳಿತ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದ್ದು, ಈಗಾಗಲೇ ಮೃತರ ಸಂಬಂಧಿಕರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂ., ಕೇಂದ್ರ ಸರ್ಕಾರ ತಲಾ 2 ಲಕ್ಷ ರೂ. ಘೋಷಿಸಿದೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗಾಗಿ ಎಸ್‌ಐಟಿಯನ್ನೂ ರಚಿಸಲಾಗಿದೆ. ಮತ್ತೊಂದೆಡೆ, ನೂರಾರು ಜನರ ಸಾವಿನ ಬಳಿಕ ಭೋಲೆ ಬಾಬಾ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ದೇಶ

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

PF Interest: ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದೆ. ಪ್ರಸಕ್ತ ಹಣಕಾಸು ವರ್ಷದ ಜುಲೈ 1ರಿಂದ ಸೆಪ್ಟೆಂಬರ್‌ 30ರವರೆಗಿನ ತ್ರೈಮಾಸಿಕದಲ್ಲಿ ಜಿಪಿಎಫ್‌ ಸೇರಿ ಹಲವು ಭವಿಷ್ಯ ನಿಧಿಗಳ ಮೇಲಿನ ಬಡ್ಡಿದರವನ್ನು ಶೇ.7.1ರಷ್ಟು ಘೋಷಿಸಲಾಗಿದೆ. ಇದೊಂದು ಔಪಚಾರಿಕ ಮಾಹಿತಿಯಾಗಿದೆ ಎಂಬುದಾಗಿ ಮಾಹಿತಿ ನೀಡಿದೆ.

VISTARANEWS.COM


on

PF Interest
Koo

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ಗುರುವಾರ (ಜುಲೈ 4) ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸಾಮಾನ್ಯ ಭವಿಷ್ಯ ನಿಧಿ (GPF) ಸೇರಿ ಹಲವು ಭವಿಷ್ಯ ನಿಧಿ ಯೋಜನೆಗಳಿಗೆ ಬಡ್ಡಿದರವನ್ನು ಘೋಷಣೆ ಮಾಡಿದೆ. ಸಾಮಾನ್ಯ ಭವಿಷ್ಯ ನಿಧಿ ಸೇರಿ ಹಲವು ಭವಿಷ್ಯ ನಿಧಿಗಳಿಗೆ ಕೇಂದ್ರ ಸರ್ಕಾರವು ಜುಲೈ-ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ.7.1ರಷ್ಟು ಬಡ್ಡಿದರವನ್ನು (PF Interest) ಘೋಷಣೆ ಮಾಡಿದೆ.

ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಪ್ರಸಕ್ತ ಹಣಕಾಸು ವರ್ಷದ ಜುಲೈ 1ರಿಂದ ಸೆಪ್ಟೆಂಬರ್‌ 30ರವರೆಗಿನ ತ್ರೈಮಾಸಿಕದಲ್ಲಿ ಜಿಪಿಎಫ್‌ ಸೇರಿ ಹಲವು ಭವಿಷ್ಯ ನಿಧಿಗಳ ಮೇಲಿನ ಬಡ್ಡಿದರವನ್ನು ಶೇ.7.1ರಷ್ಟು ಘೋಷಿಸಲಾಗಿದೆ. ಇದೊಂದು ಔಪಚಾರಿಕ ಮಾಹಿತಿಯಾಗಿದೆ. ನೂತನ ಬಡ್ಡಿದರವು ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದೆ” ಎಂಬುದಾಗಿ ಮಾಹಿತಿ ನೀಡಿದೆ.

ಇದರ ಜತೆಗೆ, ಇದೇ ತ್ರೈಮಾಸಿಕದಲ್ಲಿ ಹಿರಿಯ ನಾಗರಿಕರ ಉಳಿತಾಯ ಯೋಜನೆಗಳ ಬಡ್ಡಿದರವನ್ನು ಶೇ.8.2ರಷ್ಟು ಹಾಗೂ ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (NSC) ಯೋಜನೆಯ ಬಡ್ಡಿದರವನ್ನು ಶೇ.7.7ರಷ್ಟೇ ಮುಂದುವರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಯಾವೆಲ್ಲ ಭವಿಷ್ಯ ನಿಧಿಗಳಿಗೆ ಶೇ.7.1ರಷ್ಟು ಬಡ್ಡಿದರ?

  1. ಸಾಮಾನ್ಯ ಭವಿಷ್ಯ ನಿಧಿ (ಕೇಂದ್ರ ಸೇವೆಗಳು)
  2. ಕೊಡುಗೆ ಭವಿಷ್ಯ ನಿಧಿ (ಭಾರತ)
  3. ಅಖಿಲ ಭಾರತ ಸೇವೆಗಳ ಭವಿಷ್ಯ ನಿಧಿ
  4. ರಾಜ್ಯ ರೈಲ್ವೆ ಭವಿಷ್ಯ ನಿಧಿ
  5. ಸಾಮಾನ್ಯ ಭವಿಷ್ಯ ನಿಧಿ (ರಕ್ಷಣಾ ಸೇವೆಗಳು)
  6. ಭಾರತೀಯ ಶಸ್ತ್ರಾಸ್ತ್ರ ಇಲಾಖೆ ಭವಿಷ್ಯ ನಿಧಿ

ಜಿಪಿಎಫ್‌ಗೂ, ಪಿಎಫ್‌ಗೂ ಏನು ವ್ಯತ್ಯಾಸ?

ಸಾಮಾನ್ಯ ಭವಿಷ್ಯ ನಿಧಿಗೂ (GPF), ಉದ್ಯೋಗಿಗಳ ಭವಿಷ್ಯ ನಿಧಿಗೂ (EPF) ಅಂತಹ ವ್ಯತ್ಯಾಸವೇನಿಲ್ಲ. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವವರಿಗೆ ಕಂಪನಿಗಳು ನೀಡುವ ಭವಿಷ್ಯ ನಿಧಿಯನ್ನು ಇಪಿಎಫ್‌ ಎನ್ನುತ್ತಾರೆ. ಇನ್ನು ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಭವಿಷ್ಯ ನಿಧಿಯನ್ನು ಸಾಮಾನ್ಯ ಭವಿಷ್ಯ ನಿಧಿ ಎಂದು ಕರೆಯಲಾಗುತ್ತದೆ. ಎರಡೂ ಕಡೆಗಳಲ್ಲಿ ಉದ್ಯೋಗಿಯ ನೌಕರನ ಸಂಬಳದಲ್ಲಿ ಮಾಸಿಕವಾಗಿ ಒಂದಷ್ಟು ನಿಗದಿತ ಹಣವನ್ನು ಕಡಿತಗೊಳಿಸಲಾಗುತ್ತದೆ. ಈ ಮೊತ್ತಕ್ಕೆ ಬಡ್ಡಿಯನ್ನೂ ನೀಡಲಾಗುತ್ತದೆ.

ಇದನ್ನೂ ಓದಿ: Money Guide: ಪಿಎಫ್‌ ಅಕೌಂಟ್‌ಗೆ ಹೊಸ ಮೊಬೈಲ್‌ ನಂಬರ್‌ ಸೇರಿಸಬೇಕೆ? ಜಸ್ಟ್‌ ಹೀಗೆ ಮಾಡಿ ಸಾಕು

Continue Reading
Advertisement
India's open-bus parade
ಪ್ರಮುಖ ಸುದ್ದಿ9 mins ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ20 mins ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್50 mins ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ2 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ2 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Team India
ಪ್ರಮುಖ ಸುದ್ದಿ3 hours ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ3 hours ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ3 hours ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ3 hours ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ3 hours ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ7 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ8 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ10 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ10 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ11 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ12 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌