Viral Video: ಮಾಡಬಾರದ ಜಾಗದಲ್ಲಿ ಯೋಗ ಮಾಡಿದ ಯುವತಿ; ಬಿದ್ದಿದ್ದು 5 ಅಡಿ ಕೆಳಗೆ, ತಲುಪಿದ್ದು 30 ಅಡಿ ಆಳವನ್ನು! - Vistara News

ದೇಶ

Viral Video: ಮಾಡಬಾರದ ಜಾಗದಲ್ಲಿ ಯೋಗ ಮಾಡಿದ ಯುವತಿ; ಬಿದ್ದಿದ್ದು 5 ಅಡಿ ಕೆಳಗೆ, ತಲುಪಿದ್ದು 30 ಅಡಿ ಆಳವನ್ನು!

ಇಳಿಜಾರಿನ ಗುಂಟ ನೀರು ರಭಸವಾಗಿ ಹರಿಯುತ್ತಿದೆ. ಅದರ ಮೇಲ್ಭಾಗದಲ್ಲಿ ಒಂದು ಮರದ ದಿಬ್ಬಿ ಇದೆ. ಅದೊಂದು ಕಾಲು ಸಂಕದಂತೆ ಇದೆ. ಆ ಯುವತಿ ಅಲ್ಲಿ ಯೋಗ ಮಾಡಲು ಯತ್ನಿಸಿದ್ದಾಳೆ.

VISTARANEWS.COM


on

Woman Falls Into River Viral Video
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುಡ್ಡಗಾಡಿನ ಮಧ್ಯೆ ಕೊರಕಲು ಪ್ರದೇಶದಲ್ಲಿ ಹರಿಯುತ್ತಿರುವ ನದಿ ಮೇಲ್ಭಾಗದಲ್ಲಿ ಇದ್ದ ಮರದ ದಿಮ್ಮಿಯ ಮೇಲೆ ಯೋಗ ಮಾಡಲು ಹೋದ ಯುವತಿ, ಆಯತಪ್ಪಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋದ ವಿಡಿಯೊ ವೈರಲ್ ಆಗುತ್ತಿದೆ. ಇದು 2017ರ ವಿಡಿಯೊ ಆಗಿದ್ದು, ಆಗ Chisa Mariee ಎಂಬುವರು ತಮ್ಮ ಟ್ವಿಟರ್​ ಅಕೌಂಟ್​ನಲ್ಲಿ ಶೇರ್ ಆಗಿತ್ತು. ಅದೀಗ Wtf Scene ಎಂಬ ಟ್ವಿಟರ್ ಅಕೌಂಟ್​ನಲ್ಲಿ ಮತ್ತೆ ಶೇರ್ ಆಗಿ ವ್ಯಾಪಕವಾಗಿ ವೈರಲ್ ಆಗುತ್ತಿದೆ.

ಇಳಿಜಾರಿನ ಗುಂಟ ನೀರು ರಭಸವಾಗಿ ಹರಿಯುತ್ತಿದೆ. ಅದರ ಮೇಲ್ಭಾಗದಲ್ಲಿ ಒಂದು ಮರದ ದಿಬ್ಬಿ ಇದೆ. ಅದೊಂದು ಕಾಲು ಸಂಕದಂತೆ ಇದೆ. ಅದರ ಮೇಲೆ ಯುವತಿ ಹಿಂಭಾಗಕ್ಕೆ ಬಾಗಿ, ಕೈಯೂರಿಕೊಂಡು ನಿಲ್ಲಲು ಯತ್ನಿಸಿದ್ದಾಳೆ. ಆಗ ಆಯತಪ್ಪಿ ನದಿ ನೀರಿಗೆ ಬಿದ್ದಿದ್ದಾಳೆ. ಅಲ್ಲಿಂದ ಕೊಚ್ಚಿಕೊಂಡು ಹೋಗಿದ್ದಾಳೆ. ಅಂದಹಾಗೇ, ಹೀಗೆ ಬಿದ್ದಿದ್ದು ಚೀಸಾ ಮೇರಿ (Chisa Mariee) ಅವರೇ. ಬಳಿಕ ಚೀಸಾ ಮೇರಿ ಈ ಬಗ್ಗೆ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದರು.

‘ಯೋಗಾಭ್ಯಾಸ ಸರಿಯಾಗಿ ಮಾಡದೆ ಇದ್ದರೆ, ಹೀಗೇ ಆಗುತ್ತದೆ. ನಾನು ಬಿದ್ದಿದ್ದು, ನಾಲ್ಕರಿಂದ ಐದು ಅಡಿ ಆಳಕ್ಕೆ. ಆದರೆ ನದಿ ಪ್ರವಾಹ ನನ್ನನ್ನು 30 ಅಡಿಗಳಷ್ಟು ಕೆಳಗೆ ಕರೆದೊಯ್ಯಿತು. ಅದೃಷ್ಟಕ್ಕೆ ನನಗೆ ಏನೂ ಆಗಿರಲಿಲ್ಲ. ಆ ನದಿಯ ಮಧ್ಯೆ ಬಂಡೆಗಳೂ ಇದ್ದವು. ನನಗೇನಾದರೂ ಅದು ಹೊಡೆದಿದ್ದರೆ, ಪರಿಸ್ಥಿತಿ ಗಂಭೀರ ಆಗಿರುತ್ತಿತ್ತು. ಆದರೆ ನದಿಯಿಂದ ಎದ್ದು, ಪಾರಾಗಿ ಕಾರಿನ ಬಳಿ ಹೋಗುವಾಗ ದೊಡ್ಡದಾಗಿ ನಕ್ಕಿದ್ದೇನೆ. ಹಿಂದೆಂದೂ ಅಚ್ಟು ದೊಡ್ಡದಾಗಿ ನಕ್ಕಿರಲಿಲ್ಲ’ ಎಂದು ಚೀಸಾ ಮೇರಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ 2017ರಲ್ಲಿ ಬರೆದುಕೊಂಡಿದ್ದರು. ಆ ವಿಡಿಯೊ ಈಗ ವೈರಲ್ ಆಗಿ, ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ‘ಯೋಗವನ್ನು ಸರಿಯಾದ ಜಾಗದಲ್ಲಿ ಅಭ್ಯಾಸ ಮಾಡಿ‘ ಎಂದು ಸಲಹೆ ಕೊಟ್ಟವರೂ ಇದ್ದಾರೆ.

ಯೋಗ ಮಾಡಲು ಹೋಗಿ, ಯುವತಿ ನದಿಗೆ ಬಿದ್ದ ವಿಡಿಯೊ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Narendra Modi: ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಮೂರನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಕೆಲವೇ ಕ್ಷಣಗಳಲ್ಲಿ ವಾರಾಣಸಿ(Varanasi)ಯಲ್ಲಿ ನಾಮಪತ್ರ(Nomination Filing) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

Continue Reading

ದೇಶ

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

Viral News:ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

VISTARANEWS.COM


on

Viral News
Koo

ನವದೆಹಲಿ: ಈತ ಒಂದೇ ವರ್ಷದಲ್ಲಿ 200 ವಿಮಾನ(200 Flights) ಗಳನ್ನು ಹತ್ತಿ ಇಳಿದಿದ್ದಾನೆ. ಸಾವಿರಾರು ಕಿಲೋಮೀಟರ್‌ ವಿಮಾನದಲ್ಲೇ ದೇಶದೊಳಗೆ ಪ್ರಯಾಣ ಬೆಳೆಸಿದ್ದಾನೆ. ಸುಮಾರು ನೂರಕ್ಕೂ ಅಧಿಕ ದಿನಗಳ ಕಾಲ ವಿಮಾನಯಾನವನ್ನೇ ಮಾಡಿದ್ದಾನೆ. ಅಬ್ಬಾ.. ಹಾಗಾದ್ರೆ ಈತ ದೊಡ್ಡ ಉದ್ಯಮಿ ಅಥವಾ ಟ್ರಾವೆಲರ್ ಆಗಿರಲೇಬೇಕು ಎಂದು ನಾವು ಭಾವಿಸಿದರೆ ಅದು ನಮ್ಮ ತಪ್ಪು ಕಲ್ಪನೆ. ಈತ ವಿಮಾನ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ದೋಚುವ ಹೈ ಟೆಕ್‌ ಕಳ್ಳ(Viral News) ವಿಮಾನದಲ್ಲೇ ಪ್ರಯಾಣಿಸುವ ಈತ ಕಳ್ಳತನವೇ ಈತನ ಫುಲ್‌ ಟೈಂ ಜಾಬ್‌ ಆಗಿದೆ. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ರಾಜೇಶ್‌ ಕಪೂರ್‌(Rajesh Kapoor) ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ದಿಲ್ಲಿಯ ಪಹಾರ್‌ಗಂಜ್‌ ಇಂದ ಅರೆಸ್ಟ್‌ ಮಾಡಲಾಗಿದೆ.

ಖತರ್ನಾಕ್‌ ಕಳ್ಳ ಬಲೆಗೆ ಬಿದ್ದಿದ್ದು ಹೇಗೆ?

ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಕಳ್ಳತನ ಹೇಗೆ ಮಾಡುತ್ತಿದ್ದ?

ದಿಲ್ಲಿ ಡೆಪ್ಯೂಟಿ ಪೊಲೀಸ್‌ ಕಮಿಷನರ್‌ ಉಷಾ ರಂಗ್ರಾಣಿ ಪ್ರತಿಕ್ರಿಯಿಸಿದ್ದು, ರಾಜೇಶ್‌ ವಿಚಾರಣೆ ವೇಳೆ ತನ್ನ ಕುಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅವರು ಹೇಗೆ ಕಳ್ಳತನ ಮಾಡುತ್ತಿದ್ದ, ಹೇಗೆ ಎಸ್ಕೇಪ್‌ ಆಗುತ್ತಿದ್ದ ಎಂಬ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಹೇಳಿದರು. ಅವರು ಹೇಳುವ ಪ್ರಕಾರ ಆತ ಕನೆಕ್ಟಿಂಗ್‌ ಫ್ಲೈಟ್ಸ್‌ ಅಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಆ ಮಹಿಳೆ ಏಪ್ರಿಲ್‌ನಲ್ಲಿ ಹೈದರಾಬಾದ್‌ನಿಂದ ದಿಲ್ಲಿಗೆ ಬಂದು, ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಳು. ಅದೇ ರೀತಿ ಅಮೆರಿಕ ಮೂಲದ ಆ ವ್ಯಕ್ತಿಯೂ ಅಮೃತಸರದಿಂದ ದಿಲ್ಲಿಗೆ ಬಂದು ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದ. ಇಂತವರನ್ನೇ ಗುರಿಯನ್ನಾಗಿಸಿಕೊಳ್ಳುವ ರಾಜೇಶ್‌, ಪ್ರಯಾಣಿಕರ ಚಲನವಲನ, ವರ್ತನೆ ಮೇಲೆ ತೀವ್ರ ನಿಗಾ ಇರಿಸಿಕೊಳ್ಳುತ್ತಾನೆ. ಅವರ ಬ್ಯಾಗ್‌ ಮೇಲಿರುವ ಸ್ಲಿಪ್‌ನಿಂದಾಗಿ ಅವನಿಗೆ ಅವರ ಬ್ಯಾಗ್‌ನಲ್ಲಿ ಏನಿದೆ ಎಂಬುದು ತಿಳಿಯುತ್ತಿತ್ತು. ಬೋರ್ಡಿಂಗ್‌ ಗೇಟ್‌ ಬಳಿ ಈತ ಅವರ ಜೊತೆ ಮಾತುಕತೆ ನಡೆಸುತ್ತಾನೆ. ಇದಾದ ಬಳಿಕ ವಿಮಾನದಲ್ಲಿ ತನ್ನ ಸೀಟು ಬಲಿಸಿಕೊಡುವಂತೆ ವಿಮಾನ ಸಿಬ್ಬಂದಿಯನ್ನು ಕೇಳುತ್ತಾನೆ. ಹೇಗಾದರೂ ಮಾಡಿ ತಾನು ಟಾರ್ಗೆಟ್‌ ಮಾಡಿರುವ ವ್ಯಕ್ತಿಯ ಪಕ್ಕವೇ ಸೀಟು ಸಿಗುವಂತೆ ಮಾಡುತ್ತಾನೆ. ಆಗ ತನ್ನ ಕೈಚಳಕ ತೋರಿಸಿ ಚಿನ್ನ, ನಗದು ದೋಚಿದ್ದಾನೆ.

ಇದನ್ನೂ ಓದಿ: Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಹುತೇಕ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ಕದಿಯುತ್ತಿದ್ದ ಈತ ಪಹಾರ್‌ಗಂಜ್‌ನಲ್ಲಿ ಸ್ವಂತ ಗೆಸ್ಟ್‌ ಹೌಸ್‌ವೊಂದನ್ನು ಹೊಂದಿದ್ದಾನೆ. ಅಲ್ಲದೇ ಮನಿ ಎಕ್ಸ್‌ಚೇಂಜ್‌ ಉದ್ಯಮ ಮತ್ತು ಮೊಬೈಲ್‌ ಅಂಗಡಿಗಳನ್ನು ಈತ ಹೊಂದಿದ್ದಾನೆ ಎನ್ನಲಾಗಿದೆ. ಇನ್ನು ತಾನು ಕದ್ದ ಚಿನ್ನಾಭರಣಗಳನ್ನು ಸ್ಥಳೀಯ ಚಿನ್ನದ ಅಂಗಡಿ ಮಾಲೀಕ ಶರದ್‌ ಜೈನ್‌ಗೆ ಮಾರುತ್ತಿದ್ದ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Hoarding Collapse: ಮುಂಬಯಿ ಮಹಾನಗರಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

VISTARANEWS.COM


on

mumbai hoarding collapse
Koo

ಮುಂಬಯಿ: ಮಂಗಳವಾರ ಮುಂಜಾನೆ ಮುಂಬಯಿಯಲ್ಲಿ ಬೃಹತ್ ಹೋರ್ಡಿಂಗ್ ಕುಸಿದ (Mumbai Hoarding Collapse) ಪರಿಣಾಮ ಅದರಡಿಗೆ ಸಿಕ್ಕಿ ಸತ್ತವರ ಸಂಖ್ಯೆ (Death toll) 14ಕ್ಕೆ ಏರಿದೆ. ಸಿಕ್ಕಿಬಿದ್ದವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ (Rescue Operation) ನಡೆಸುತ್ತಿದೆ. ಘಟನೆಯಲ್ಲಿ ಕನಿಷ್ಠ 74 ಜನರು ಗಾಯಗೊಂಡಿದ್ದಾರೆ.

ಕುಸಿದ ಜಾಹೀರಾತು ಫಲಕದ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ತೀವ್ರ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ನಾಲ್ಕು ಶವಗಳು ಅವಶೇಷಗಳೊಳಗೆ ಇವೆ ಎಂದು NDRF ಇನ್ಸ್‌ಪೆಕ್ಟರ್ ಗೌರವ್ ಚೌಹಾಣ್ ತಿಳಿಸಿದ್ದಾರೆ. “ನಾವು ಶವಗಳನ್ನು ಪತ್ತೆ ಮಾಡಿದ್ದೇವೆ. ಆದರೆ ಅಡಿಯಲ್ಲಿ ಪೆಟ್ರೋಲ್ ಬಂಕ್‌ ಇರುವುದರಿಂದ ಕಾರ್ಯಾಚರಣೆ ಕಷ್ಟವಾಗುತ್ತಿದೆ. ಪರಿಸ್ಥಿತಿ ಅಪಾಯಕಾರಿಯಾಗಬಹುದು” ಎಂದು ಅವರು ಹೇಳಿದರು.

ಮುಂಬೈನ ಘಾಟ್‌ಕೋಪರ್‌ನಲ್ಲಿ ನಡೆದ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಸಂತಾಪ ಸೂಚಿಸಿದ್ದು, ಹೋರ್ಡಿಂಗ್ ಕುಸಿತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಮುಂಬಯಿಯಲ್ಲಿ ಏನಾಯಿತು?

ಮುಂಬೈನ ಘಾಟ್‌ಕೋಪರ್‌ನಲ್ಲಿ ಸೋಮವಾರ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ 70 ಮೀಟರ್ ಎತ್ತರದ ಜಾಹೀರಾತು ಫಲಕ ಕುಸಿದಿದೆ. ಘಾಟ್‌ಕೋಪರ್‌ನ ಚೆಡ್ಡಾನಗರ ಜಂಕ್ಷನ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಅಕ್ರಮ ಹೋರ್ಡಿಂಗ್ ಬಿದ್ದಿದೆ. ಸೋಮವಾರ ಸಂಜೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, 64 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಲ್ಲಿ ಇನ್ನೂ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ಎನ್‌ಡಿಆರ್‌ಎಫ್ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ಅಗೆಯುವ ಯಂತ್ರಗಳೊಂದಿಗೆ ನಡೆಸಿತು.

ಇನ್ನೂ 20ರಿಂದ 30 ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಪೆಟ್ರೋಲ್ ಪಂಪ್‌ನಲ್ಲಿ ಸಂಭವಿಸಿದ ಕುಸಿತದಿಂದಾಗಿ ಅವಶೇಷಗಳನ್ನು ತೆಗೆದುಹಾಕುವಲ್ಲಿ NDRF ಸಮಸ್ಯೆಗಳನ್ನು ಎದುರಿಸುತ್ತಿದೆ, ಇದು ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗಬಹುದು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಾಗಿ ಘೋಷಿಸಿದರು. ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೀವಹಾನಿಗೆ ಸಂತಾಪ ಸೂಚಿಸಿರುವ ರಾಷ್ಟ್ರಪತಿ ಮುರ್ಮು, “ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಹಲವಾರು ಸಾವುನೋವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಗೊಂಡವರ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗೆ ಹಾರೈಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Continue Reading

ದೇಶ

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು? ಇಲ್ಲಿದೆ ಲೈವ್

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ಅಂದರೆ ಸೋಮವಾರ (ಮೇ 13) ಸಂಜೆ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಆ ಮೂಲಕ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಮೋದಿ ಅವರು ಶಕ್ತಿ ಪ್ರದರ್ಶನ ಮಾಡಿದರು. ಇನ್ನು, ಮಂಗಳವಾರ ಮೋದಿ ಅವರು ವಾರಾಣಸಿಯಲ್ಲಿ ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

Narendra Modi
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.45ಕ್ಕೆ ಕಾಲಭೈರವ ದೇಗುಲಕ್ಕೆ ಭೇಟಿ

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.

ವಾರಾಣಸಿಯಲ್ಲಿ ಮೋದಿ ರೋಡ್‌ ಶೋ ಝಲಕ್

11.40ಕ್ಕೆ ನಾಮಪತ್ರ ಸಲ್ಲಿಕೆ

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ರೋಡ್‌ ಶೋ ಬಳಿಕ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading
Advertisement
Salman Khan
ಬಾಲಿವುಡ್9 mins ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ10 mins ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

bomb hoax bengaluru
ಕ್ರೈಂ41 mins ago

Bomb Hoax: ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್, ತಪಾಸಣೆ

Team India Coach
ಕ್ರಿಕೆಟ್54 mins ago

Team India Coach: ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್‌ ಹುದ್ದೆಗೆ ಅರ್ಜಿ ಆಹ್ವಾನ; ಮೇ 27 ಕೊನೆಯ ದಿನ

Job Alert
ಉದ್ಯೋಗ1 hour ago

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Narendra Modi
ದೇಶ1 hour ago

Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

HD Deve gowda prajwal revanna case
ಪ್ರಮುಖ ಸುದ್ದಿ1 hour ago

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

Thailand Open
ಕ್ರೀಡೆ2 hours ago

Thailand Open 2024: ಇಂದಿನಿಂದ ಥಾಯ್ಲೆಂಡ್‌ ಓಪನ್‌ ಟೂರ್ನಿ; ಚಿರಾಗ್‌-ಸಾತ್ವಿಕ್‌ ಜೋಡಿ ಮೇಲೆ ಪದಕ ಭರವಸೆ

US Sanction
ವಿದೇಶ2 hours ago

US sanction: ಇರಾನ್‌ ಜೊತೆ ವ್ಯಾಪಾರ ಒಪ್ಪಂದ ಬೇಡ; ಭಾರತಕ್ಕೆ ನಿರ್ಬಂಧದ ಎಚ್ಚರಿಕೆ ಕೊಟ್ಟ ಅಮೆರಿಕ

Prajwal Revanna Case Devaraje Gowda
ಕ್ರೈಂ2 hours ago

Prajwal Revanna Case: ವಕೀಲ ದೇವರಾಜೇಗೌಡ ಇಂದು ಪೊಲೀಸ್‌ ಕಸ್ಟಡಿಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ17 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ17 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ17 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ18 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ18 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌