Viral Video: ಫೋನ್‌ನಲ್ಲೇ ಮುಳುಗಿರಬೇಡ ಎಂದು ಪೋಷಕರು ಬೈದಿದ್ದಕ್ಕೆ ಜಲಪಾತಕ್ಕೆ ಜಿಗಿದ ಯುವತಿ Vistara News

ದೇಶ

Viral Video: ಫೋನ್‌ನಲ್ಲೇ ಮುಳುಗಿರಬೇಡ ಎಂದು ಪೋಷಕರು ಬೈದಿದ್ದಕ್ಕೆ ಜಲಪಾತಕ್ಕೆ ಜಿಗಿದ ಯುವತಿ

Viral Video: ಯುವತಿಯು ಮೂರು ಹೊತ್ತೂ ಮೊಬೈಲ್‌ನಲ್ಲೇ ಮುಳುಗಿದ್ದನ್ನು ಕಂಡು ಪೋಷಕರು ಬೈದಿದ್ದಾರೆ. ಅಷ್ಟಕ್ಕೇ, ಯುವತಿಯು ಜಲಪಾತಕ್ಕೆ ಜಿಗಿದಿದ್ದಾಳೆ. ಅದೃಷ್ಟವಶಾತ್‌, ಆಕೆಯನ್ನು ನಾವಿಕರೊಬ್ಬರು ರಕ್ಷಿಸಿದ್ದಾರೆ.

VISTARANEWS.COM


on

Woman Jumps Into Waterfall
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯ್‌ಪುರ: ಭಾರತ ಸೇರಿ ಪ್ರಪಂಚದಾದ್ಯಂತ ಮೊಬೈಲ್‌ ಈಗ ಗಾಳಿ, ನೀರು, ಆಹಾರದಷ್ಟೇ ಮೂಲಭೂತ ಅವಶ್ಯಕತೆಯಾಗಿದೆ. ಮನುಷ್ಯನ ಅನಿವಾರ್ಯವಾಗಿದೆ. ಮೊಬೈಲ್‌ ಇಲ್ಲದವರು ಹಾಗೂ ಮೂರು ಹೊತ್ತೂ ಮೊಬೈಲ್‌ನಲ್ಲೇ ಮುಳುಗಿರುವವರ ಸಂಖ್ಯೆ ದೊಡ್ಡದಿದೆ. ಛತ್ತೀಸ್‌ಗಢದಲ್ಲಿ ಹೀಗೆ ಮೂರು ಹೊತ್ತೂ ಮೊಬೈಲ್‌ನಲ್ಲಿ ಮುಳುಗಿರುತ್ತಿದ್ದ ಯುವತಿಗೆ ಆಕೆಯ ಪೋಷಕರು ಬೈದರು ಎಂದು ಯುವತಿಯು ಜಲಪಾತಕ್ಕೆ ಜಿಗಿದಿದ್ದಾಳೆ. ಈ ವಿಡಿಯೊ (Viral Video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಸ್ತಾರ್‌ ಜಿಲ್ಲೆ ಚಿತ್ರಕೂಟ ಚೌಕಿ ಪ್ರದೇಶದಲ್ಲಿ ಕಳೆದ ಮಂಗಳವಾರ (July 18) ಯುವತಿಯೊಬ್ಬಳು 90 ಅಡಿ ಎತ್ತರದಿಂದ ಜಲಪಾತಕ್ಕೆ ಜಿಗಿದ ವಿಡಿಯೊ ವೈರಲ್‌ ಆಗಿದೆ. ಯಾವಾಗಲೂ ಮೊಬೈಲ್‌ ಬಳಸುತ್ತಿದ್ದ ಕಾರಣ ಸರಸ್ವತಿ ಮೌರ್ಯ ಎಂಬ ಯುವತಿಯ ಪೋಷಕರು ನಾಲ್ಕು ಮಾತು ಬೈದಿದ್ದಾರೆ. ಇಷ್ಟಕ್ಕೇ ಮನನೊಂದ ಯುವತಿಯು ಜಲಪಾತದಿಂದಲೇ ಜಗಿದಿದ್ದಾಳೆ.

ವೈರಲ್‌ ಆದ ವಿಡಿಯೊ ನೋಡಿ

ಮುಂದೇನಾಯ್ತು?

ಯುವತಿಯು ಜಲಪಾತಕ್ಕೆ ಜಿಗಿಯುತ್ತಲೇ ಅಲ್ಲೇ ಇದ್ದ ನಾವಿಕರೊಬ್ಬರು ಆಕೆಯನ್ನು ರಕ್ಷಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಬುದ್ಧಿಮಾತು ಹೇಳಿ, ಆಕೆಯನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ನಾವಿಕ ಇರಿದ್ದರೆ ಯುವತಿಯು ನೀರುಪಾಲಾಗುವುದು ಖಚಿತವಾಗಿತ್ತು ಎಂದು ತಿಳಿದುಬಂದಿದೆ. ಯುವತಿಯ ಇಂತಹ ನಿರ್ಧಾರದಿಂದ ಪೋಷಕರು ಕಂಗಾಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Self Harming : ವಿದ್ಯಾರ್ಥಿ ಆತ್ಮಹತ್ಯೆ ಕೇಸ್‌; ಪ್ರತಿಷ್ಠಿತ ಕಾಲೇಜಿನ ಮೇಲೆ FIR

ಯುವತಿಯು ಜಿಗಿಯುವ ಮುನ್ನ ಅಲ್ಲಿದ್ದವರು ಬೇಡ, ಜಿಗಿಬೇಡ ಎಂದು ಜೋರಾಗಿ ಕೂಗಿದ್ದಾರೆ. ಇಷ್ಟಾದರೂ ಯುವತಿಯು ಜಲಪಾತಕ್ಕೆ ಜಿಗಿದಿದ್ದಾಳೆ. ಯುವತಿಯು ಜಲಪಾತಕ್ಕೆ ಜಿಗಿದ ವಿಡಿಯೊ ವೈರಲ್‌ ಆಗುತ್ತಲೇ ಜನ ಹಲವು ರೀತಿ ಪ್ರತಿಕ್ರಿಯಿಸಿದ್ದಾರೆ. “ಈಗಿನ ಪೀಳಿಗೆಯ ಯುವಕ-ಯುವತಿಯರಿಗೆ ಮೊಬೈಲ್‌ ಸರ್ವಸ್ವವಾಗಿದೆ. ಇವರು ಮೊಬೈಲ್‌ ಇಲ್ಲದೆ ಬದುಕುವುದಿಲ್ಲ ಎಂಬ ಮನಸ್ಥಿತಿಗೆ ಬಂದಿರುವುದು ದುಃಖಕರ” ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ತುಂಬ ಜನ ಯುವತಿಗೆ ಬುದ್ಧಿವಾದ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

Article 370: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನ ಮಾನ ಕಲ್ಪಿಸುವ ಆರ್ಟಿಕಲ್ 370 ಅನ್ನು ಕೇಂದ್ರ ಸರ್ಕಾರವು 2019ರಲ್ಲಿ ರದ್ದು ಮಾಡಿತ್ತು. ಈ ನಿರ್ಧಾರವನ್ನು ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

VISTARANEWS.COM


on

Supreme Court verdict on Article 370 and Know about this article
Koo

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ವಿಶೇಷ ಸ್ಥಾನಮಾನ (Special Status) ಕಲ್ಪಿಸುವ ಆರ್ಟಿಕಲ್ 370 ರದ್ದು (Article 370) ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸುಪ್ರೀಂ ಕೋರ್ಟ್ (Supreme Court) ಡಿ.11, ಸೋಮವಾರ ತೀರ್ಪು ಪ್ರಕಟಿಸಲಿದೆ(Judgment Day). ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ನೇತೃತ್ವದ ಸಾಂವಿಧಾನಿಕ ಪೀಠವು ದೀರ್ಘ ಅವಧಿಯಿಂದ ಈ ಅರ್ಜಿಗಳ ವಿಚಾರಣೆ ನಡೆಸಿದೆ.

ಸೆಪ್ಟೆಂಬರ್ 5 ರಂದು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು. 16 ದಿನಗಳ ಕಾಲ ಸಮಗ್ರ ವಿಚಾರಣೆಗೆ ಸಾಕ್ಷಿಯಾಯಿತು. ಅರ್ಜಿದಾರರು ಮತ್ತು ಸರ್ಕಾರ ಇಬ್ಬರೂ ತಮ್ಮ ವಾದಗಳನ್ನು ಮಂಡಿಸಿದರು, ಆರ್ಟಿಕಲ್ 370 ಅನ್ನು ರದ್ದುಗೊಳಿಸಲು ಬಳಸಿದ ಕಾರ್ಯವಿಧಾನದ ಸಾಂವಿಧಾನಿಕತೆಯನ್ನು ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ನಂತರದ ರದ್ದತಿಯನ್ನು ಪರಿಶೀಲಿಸಲಾಯಿತು. ಅಂತಿಮವಾಗಿ ಸೋಮವಾರ ತೀರ್ಪು ಹೊರ ಬೀಳಲಿದೆ. ಈ ಆರ್ಟಿಕಲ್ 370 ಬಗ್ಗೆ ತಿಳಿದುಕೊಳ್ಳೋಣ ಬನ್ನಿ.

ಏನಿದು ಆರ್ಟಿಕಲ್ 370?

ಆರ್ಟಿಕಲ್ 370 ಭಾರತೀಯ ಸಂವಿಧಾನದಲ್ಲಿ ಅವಿಭಜಿತ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ ಪ್ರಮುಖ ನಿಬಂಧನೆಯಾಗಿದೆ. 1949 ಜುಲೈ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಮಧ್ಯಂತರ ಪ್ರಧಾನ ಮಂತ್ರಿ ಶೇಖ್ ಅಬ್ದುಲ್ಲಾ ಅವರು ಭಾರತೀಯ ಸಂವಿಧಾನ ಸಭೆಯೊಂದಿಗೆ ಮಾತುಕತೆಗಳನ್ನು ನಡೆಸಿ, ಅಂತಿಮವಾಗಿ 370 ನೇ ವಿಧಿಯನ್ನು ಅಳವಡಿಸಲಾಯಿತು. ಆ ವಿಧಿಯ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಲಾಯಿತು. ಉದಾಹರಣೆಗೆ ರಾಜ್ಯವು ತನ್ನದೇ ಆದ ಸಂವಿಧಾನವನ್ನು ಹೊಂದಲು ಅವಕಾಶ ನೀಡಿತು, ಪ್ರತ್ಯೇಕ ಧ್ವಜ ಮತ್ತು ಭಾರತ ಸರ್ಕಾರದ ಸೀಮಿತ ನ್ಯಾಯವ್ಯಾಪ್ತಿಯನ್ನು ಕಲ್ಪಿಸಿತು.

ಭಾರತೀಯ ಸಂವಿಧಾನ ಆರ್ಟಿಕಲ್ 1, ಜಮ್ಮು ಕಾಶ್ಮೀರಕ್ಕೆ ಆರ್ಟಿಕಲ್ 370 ರ ಮೂಲಕ ಜಾರಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಎಂದು ಆರ್ಟಿಕಲ್ 370(1)(ಸಿ)ನಲ್ಲಿ ತಿಳಿಸಲಾಗಿದೆ. ಆರ್ಟಿಕಲ್ 1 ಒಕ್ಕೂಟ ಎಂದು ಹೇಳುತ್ತದೆ. ಅದರರ್ಥ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಭಾರತೀಯ ಒಕ್ಕೂಟಕ್ಕೆ ಬಂಧಿಸುವ ವಿಧಿ 370 ಆಗಿದೆ. ರಾಷ್ಟ್ರಪತಿಗಳ ಆದೇಶದ ಮೂಲಕ 370 ನೇ ವಿಧಿಯನ್ನು ತೆಗೆದುಹಾಕಬಹುದಾದರೂ, ಹೊಸ ಕಾನೂನುಗಳನ್ನು ಮಾಡದ ಹೊರತು ಅದು ರಾಜ್ಯವನ್ನು ಭಾರತದಿಂದ ಸ್ವತಂತ್ರವಾಗಿರುವಂತೆ ನೋಡಿಕೊಳ್ಳುತ್ತದೆ.

370ನೇ ವಿಧಿ ರದ್ದು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರ್ಕಾರವು ರಾಷ್ಟ್ರಪತಿ ಆದೇಶದ ಮೂಲಕ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ 370 ನೇ ವಿಧಿಯನ್ನು 2019 ಆಗಸ್ಟ್ 5ರಂದು ರದ್ದು ಮಾಡಿತು. ಅಲ್ಲದೇ, ಜಮ್ಮು ಮತ್ತು ಕಾಶ್ಮೀರವನ್ನು ವಿಭಜಿಸಿ, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಕೇಂದ್ರಾಡಳಿತ ಪ್ರದೇಶಗಳನ್ನು ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ರಾಜ್ಯವು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಶಾಸಕಾಂಗವನ್ನು ಹೊಂದಿದ್ದರೆ, ಲಡಾಖ್ ಶಾಸಕಾಂಗವನ್ನು ಹೊಂದಿರುವುದಿಲ್ಲ.

ಅರ್ಜಿದಾರರ ವಾದವೇನು?

ಆರ್ಟಿಕಲ್ 370 ರದ್ಧತಿ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ಮತ್ತು ಗುರುತಿನ ಮೇಲೆ ಪ್ರಭಾರ ಬೀರಲಿದೆ. ಜೊತೆಗೆ ಈ ಪ್ರದೇಶದ ಪ್ರದೇಶದ ಸ್ವಾಯತ್ತತೆ ಮತ್ತು ಜನಸಂಖ್ಯಾ ಸಂಯೋಜನೆಗೆ ಅದರ ಸಂಭಾವ್ಯ ಪರಿಣಾಮಗಳ ಬಗ್ಗೆ ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಈ ನೆಲೆಯಲ್ಲೇ ಅರ್ಜಿದಾರರು ಆರ್ಟಿಕಲ್ 370 ರದ್ಧತಿಯು ಸಂವಿಧಾನಬಾಹಿರವಾಗಿದೆ ಎಂದು ವಾದಿಸಿದರು.

ಪೂರ್ಣ ಪ್ರಮಾಣದ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲು ಕೇಂದ್ರ ಸರ್ಕಾರವು ತನಗಿರುವ ಅಖಂಡ ಬಹುಮತ ಮತ್ತು ಕಾರ್ಯನಿರ್ವಾಹಕ ಆದೇಶಗಳನ್ನು ದುರುಪಯೋಗ ಮಾಡಿಕೊಂಡಿದೆ. ಇದು ಒಕ್ಕೂಟ ವ್ಯವಸ್ಥೆ ಮತ್ತು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾದ ನಡೆಯಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮತ್ತೊಂದೆಡೆ, ಹಿರಿಯ ವಕೀಲ ಕಪಿಲ್ ಸಿಬಲ್, 1957ರಲ್ಲಿ ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಸಭೆಯನ್ನು ವಿಸರ್ಜನೆ ಮಾಡಿದ ಬಳಿಕ, ಆರ್ಟಿಕಲ್ 370ಗೆ ಶಾಶ್ವತ ಸ್ವರೂಪವನ್ನು ಪಡೆದುಕೊಂಡಿದೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತಂದರು. ಹಾಗಾಗಿಯೇ, ಸಂವಿಧಾನ ತಿದ್ದುಪಡಿಗೆ ಸಂಸತ್ತಿಗೆ ಅಧಿಕಾರ ನೀಡುವ ಆರ್ಟಿಕಲ್ 368 ಅನ್ನು, 370 ವಿಧಿ ರದ್ಧತಿಗೆ ಬಳಸಿದ ಕ್ರಮವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರದ ವಾದವೇನು?

ಆರ್ಟಿಕಲ್ 370 ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳೊಂದಿಗೆ ಏಕೀಕರಣಕ್ಕೆ ಅಡ್ಡಿಪಡಿಸುತ್ತದೆ. ಈ ಪ್ರದೇಶದ ಅಭಿವೃದ್ಧಿಯನ್ನು ಸೀಮಿತಗೊಳಿಸುತ್ತದೆ ಎಂಬ ಕಾರಣಕ್ಕಾಗಿ ರದ್ದುಗೊಳಿಸಲಾಯಿತು ಎಂದು ಕೇಂದ್ರ ಸರಕಾರವು ತನ್ನ ವಾದವನ್ನು ಮಂಡಿಸಿತು. ರದ್ಧು ನಿರ್ಧಾರವು ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ, ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ಉತ್ತೇಜಿಸಲು ಮತ್ತು ಪ್ರದೇಶದಲ್ಲಿ ಉತ್ತಮ ಆಡಳಿತವನ್ನು ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ವಾದಿಸಲಾಯಿತು. ಈ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪೂರ್ಣವಾಗಿ ಅನ್ವಯವಾಗದ ರಾಷ್ಟ್ರೀಯ ಕಾನೂನುಗಳು ಮತ್ತು ಕಾರ್ಯಕ್ರಮಗಳ ಅನ್ವಯಕ್ಕೆ ಇದು ಅನುಕೂಲವಾಗುತ್ತದೆ.

ಜಮ್ಮು ಮತ್ತು ಕಾಶ್ಮೀರವನ್ನು ಭಾರತದ ಏಕತೆಯ ಭಾಗವಾಗಿ ಮಾಡಲು 370 ಆರ್ಟಿಕಲ್ ರದ್ದು ಅಗತ್ಯವಾಗಿತ್ತು. ವಿಶೇಷ ಸ್ಥಾನಮಾನವನ್ನು ವಾಪಸ್ ಪಡೆದುಕೊಂಡು ಬಳಿಕ ಅಂದರೆ, 2019ರ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ಸಾಧ್ಯವಾಗುತ್ತದೆ. ಈ ಭಾಗದಲ್ಲಿ ಚುನಾವಣೆ ನಡೆಸುವುದು ಬಾಕಿ ಇದೆ. ಪರಿಸ್ಥಿತಿ ಸುಧಾರಿಸಿದ ನಂತರ ಚುನಾವಣೆಯನ್ನು ನಡೆಸಲಾಗುವುದು ಮತ್ತು ರಾಜ್ಯದ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ವಾದಿಸಿತು.

370 ರದ್ದತಿ ಬಳಿಕ ಕಾಶ್ಮೀರದಲ್ಲಿ ಭಯೋತ್ಪಾದನೆ (ಶೇ. 45.2), ಒಳನುಸುಳುವಿಕೆ (ಶೇ. 90.2), ಕಲ್ಲು ತೂರಾಟದ ಘಟನೆಗಳು (ಶೇ. 97.2), ಮತ್ತು ಭದ್ರತಾ ಸಿಬ್ಬಂದಿ ಸಾವು (ಶೇ. 65.9) ಕಡಿಮೆಯಾಗಿವೆ ಅಂಶವನ್ನು ಕೇಂದ್ರ ಸರ್ಕಾರವು ಕೋರ್ಟ್‌ ಗಮನಕ್ಕೆ ತಂದಿದೆ.

ಸಂವಿಧಾನ ಪೀಠದ ಪರಿಶೀಲನೆ ಏನು?

ಆರ್ಟಿಲ್ 370 ರದ್ಧತಿಯ ಕುರಿತಾದ ಎಲ್ಲ ಆಯಾಮಗಳನ್ನು, ಸಾಂವಿಧಾನಿಕ ನಿಲುವುಗಳನ್ನು ಪೀಠ ಪರಿಶೀಲಿಸಿದೆ. ಅಂದರೆ, ಜಮ್ಮು ಮತ್ತು ಕಾಶ್ಮೀರದ ಮೇಲೆ ರಾಷ್ಟ್ರಪತಿ ಆಡಳಿತ, ಸಂಸತ್ತಿನ ಒಪ್ಪಿಗೆ, ರಾಜ್ಯ ಮರು ಸಂಘಟನೆಯಂಥ ಘಟನೆಗಳನ್ನು ಸಂವಿಧಾನ ಪೀಠವು ಪರಿಶೀಲಿಸಿದೆ.

ಡಿ.11ಕ್ಕೆ ತೀರ್ಪು ಪ್ರಕಟ

ಆರ್ಟಿಕಲ್ 370 ರದ್ದುಗೊಳಿಸುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ 23 ಅರ್ಜಿಗಳನ್ನು ದಾಖಲಾಗಿದ್ದವು. ದೂರಗಾಮಿ ಪರಿಣಾಮಗಳನ್ನು ಬೀರು ಮತ್ತು ಹೆಗ್ಗುರಾತಾಗಬಹುದಾದ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ದೀರ್ಘ ಸಮಯದಿಂದ ನಡೆಸುತ್ತಾ ಬಂದಿದೆ. 16 ಮ್ಯಾರಥಾನ್ ದಿನಗಳ ವಿಚಾರಣೆಗಳು ಮತ್ತು ಎರಡೂ ಕಡೆಯವರು ಮಂಡಿಸಿದ ವಾದಗಳ ನಂತರ, ನ್ಯಾಯಾಲಯವು ಸೆಪ್ಟೆಂಬರ್ 5 ರಂದು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠವು ಸೋಮವಾರ ತೀರ್ಪು ಪ್ರಕಟಿಸಲಿದೆ. 370 ನೇ ವಿಧಿಯ ರದ್ದತಿಯನ್ನು ಸಂವಿಧಾನ ಮತ್ತು ಕಾನೂನು ತತ್ವಗಳಿಗೆ ಅನುಗುಣವಾಗಿ ನಡೆಸಲಾಗಿದೆಯೇ ಎಂದು ನಿರ್ಧರಿಸುವ ಅವರ ಈ ತೀರ್ಮಾನವು ಭಾರೀ ಮಹತ್ವವನ್ನು ಪಡೆದುಕೊಳ್ಳಲಿದೆ.

ಕಪಿಲ್ ಸಿಬಲ್, ಗೋಪಾಲ್ ಸುಬ್ರಮಣ್ಯಂ, ದುಶ್ಯಂತ್ ದವೆ ಮತ್ತು ರಾಜೀವ್ ಧವನ್ ಸೇರಿದಂತೆ 18 ವಕೀಲರು ಕೇಂದ್ರದ ನಿರ್ಧಾರದ ಸಿಂಧುತ್ವವನ್ನು ಪ್ರಶ್ನಿಸಿ ವಾದ ಮಂಡಿಸಿದರೆ, ಅಟಾರ್ನಿ ಜನರಲ್ ಆರ್ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮತ್ತು ಇತರ ಕಾನೂನು ತಜ್ಞರು ಕೇಂದ್ರವನ್ನು ಪ್ರತಿನಿಧಿಸಿ, ಕೇಂದ್ರದ ನಿರ್ಧಾರವು ಸಂಪೂರ್ಣವಾಗಿ ತಾರ್ಕಿಕ ಮತ್ತು ಸೂಕ್ತವಾಗಿದೆ ಎಂದು ವಾದ ಮಂಡಿಸಿದ್ದರು.

ಈ ಸುದ್ದಿಯನ್ನೂ ಓದಿ: Article 370: ರಾಷ್ಟ್ರಪತಿಯವರೇ ರಾಜ್ಯದ ಸ್ಥಾನ ನೀಡಬಹುದು; ಕಾಶ್ಮೀರ ವಿಷಯದಲ್ಲಿ ಸುಪ್ರೀಂ ಮಹತ್ವದ ಪ್ರಸ್ತಾಪ

Continue Reading

ದೇಶ

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Chhattisgarh: ಆದಿವಾಸಿ ಸಮುದಾಯದ ಪ್ರಮುಖ ನಾಯಕ ವಿಷ್ಣು ದೇವ ಸಾಯಿ ಅವರನ್ನು ಬಿಜೆಪಿಯು ಛತ್ತೀಸ್‌ಗಢ ಮುಖ್ಯಮಂತ್ರಿಗೆ ಆಯ್ಕೆ ಮಾಡಿದೆ.

VISTARANEWS.COM


on

Chhattisgarh to be CM Vishnu has two deputies and Raman Singh Speaker
Koo

ನವದೆಹಲಿ: ಛತ್ತೀಸ್‌ಗಢದಲ್ಲಿ (Chhattisgarh) ಎಲ್ಲರ ನಿರೀಕ್ಷೆ ಹುಸಿ ಮಾಡಿ ಭಾರತೀಯ ಜನತಾ ಪಾರ್ಟಿ (BJP Party) ಗೆಲುವು ಸಾಧಿಸಿ, ವಾರದ ಬಳಿಕ ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಮುಖ್ಯಮಂತ್ರಿಯಾಗಿ ಪಕ್ಷವು ಭಾನುವಾರ ಘೋಷಿಸಿದೆ. ಸಿಎಂ ಪೋಸ್ಟ್‌ಗೆ ಸಾಕಷ್ಟು ಹೆಸರುಗಳು ಕೇಳಿ ಬಂದಿದ್ದವು. ಹಾಗಾಗಿ, ಎರಡು ಉಪ ಮುಖ್ಯಮಂತ್ರಿ (Two Deputy CM) ಹುದ್ದೆಗಳನ್ನು ಸೃಜಿಸಲಾಗಿದೆ. ಸಿಎಂ ರೇಸ್‌ನಲ್ಲಿ ತೀವ್ರ ಪೈಪೋಟಿ ನೀಡಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಹಾಗೂ ಇತರ ಹಿಂದುಳಿದ ವರ್ಗದ ನಾಯಕ ವಿಜಯ್ ಶರ್ಮಾ ಅವರನ್ನು ಡಿಸಿಎಂಗಳಾಗಿ ನೇಮಕ ಮಾಡಲಾಗಿದೆ. ಮಾಜಿ ಸಿಎಂ ರಮಣ್ ಸಿಂಗ್ (Raman singh) ಅವರು ವಿಧಾನಸಭೆ ಸ್ಪೀಕರ್ (Speaker) ಆಗಲಿದ್ದಾರೆ.

15 ವರ್ಷಗಳ ಕಾಲ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿದ್ದ ರಮಣ್ ಸಿಂಗ್ ಅವರು ಈ ಬಾರಿ ಸಿಎಂ ಹುದ್ದೆಗೆ ಭಾರೀ ಪೈಪೋಟಿ ನಡೆಸಿದ್ದರು. ಆದರೆ, ಸಿಎಂ ಪೋಸ್ಟ್‌ಗೆ ಹೊಸ ಮುಖವನ್ನು ಹುಡುಕಿರುವ ಬಿಜೆಪಿ, ರಮಣ್ ಸಿಂಗ್ ಅವರಿಗೆ ವಿಧಾನಸಭೆ ಸ್ಪೀಕರ್ ಹುದ್ದೆಯನ್ನು ದಯಾ ಪಾಲಿಸಿದೆ.

ರಮಣ್ ಸಿಂಗ್ ಜೊತೆಗೆ, ಅರುಣ್ ಸಾವೊ ಕೂಡ ರಾಜ್ಯದ ಉನ್ನತ ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲಾಗಿದೆ. ಆ ಮೂಲಕ, ಸಂಭಾವ್ಯ ಗುಂಪುಗಾರಿಕೆಯನ್ನು ತಡೆಯುವ ಪ್ರಯತ್ನವನ್ನು ಬಿಜೆಪಿ ಮಾಡಿದೆ. ಮತ್ತೊಬ್ಬ ಡಿಸಿಎಂ ಆಗಿರುವ ವಿಜಯ್ ಶರ್ಮಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅಲ್ಲದೇ, ಮಾಜಿ ಸಿಎಂ ರಮಣ್ ಸಿಂಗ್ ಅವರ ಅತ್ಯಂತ ನಿಕಟವರ್ತಿಯಾಗಿದ್ದಾರೆ.

ಇನ್ನು ಮುಖ್ಯಮಂತ್ರಿಯಾಗಿ ನೇಮಕವಾಗಿರುವ ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲಿ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Continue Reading

ದೇಶ

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

Reliance Retail: ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ.

VISTARANEWS.COM


on

Reliance Retail launches beauty retail store 'Tira' in Bengaluru
Koo

ಬೆಂಗಳೂರು: ಇದೀಗ ‘ಟಿರಾ’ ಬೆಂಗಳೂರಿಗೆ (Bengaluru) ಕಾಲಿಟ್ಟಿದೆ. ಅಂದ ಹಾಗೆ ಟಿರಾ ಎಂಬುದು ರಿಲಯನ್ಸ್ ರೀಟೇಲ್ ನ (Reliance Retail) ಸೌಂದರ್ಯ ರೀಟೇಲ್ ಪ್ಲಾಟ್ ಪ್ಲಾರ್ಮ್. ಫೀನಿಕ್ಸ್ ಮಾಲ್ ಆಫ್ ಏಷ್ಯಾದಲ್ಲಿ (phoenix mall of Asia) ರೀಟೇಲ್ ಕೇಂದ್ರವನ್ನು ಶುರು ಮಾಡುವ ಮೂಲಕ ಟಿರಾ ಬೆಂಗಳೂರು ನಗರಕ್ಕೆ ಪ್ರವೇಶ ಮಾಡಿದೆ. ಇಲ್ಲಿಯ ತನಕ ಮುಂಬೈ, ಹೈದರಾಬಾದ್ ಹಾಗೂ ಚೆನ್ನೈನಲ್ಲಿ ಮಾತ್ರ ‘ಟಿರಾ’ (Tira) ಇತ್ತು. ಅದರ ಹೆಜ್ಜೆ ಗುರುತು ಬೆಂಗಳೂರಲ್ಲೂ ಮೂಡಿದೆ.

ಟಿರಾದಿಂದ ಖರೀದಿ ಮಾಡುವಂಥ ಅನುಭವವೇ ಬಹಳ ವಿಶಿಷ್ಟವಾದದ್ದು. ಈಗಿನ ತಲೆಮಾರಿನ ಅಗತ್ಯಗಳು ಹಾಗೂ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ರೂಪಿಸಿದಂಥ ಜಾಗತಿಕ ಹಾಗೂ ಸ್ಥಳೀಯವಾದ ಸೌಂದರ್ಯ ಬ್ರ್ಯಾಂಡ್ ಗಳ ವಿಶೇಷ ಉತ್ಪನ್ನಗಳು ಇಲ್ಲಿ ದೊರೆಯುತ್ತವೆ. ಖರೀದಿ ಮಾಡುವಂಥ ಗ್ರಾಹಕರಿಗೆ ಸೌಂದರ್ಯ ರೀಟೇಲ್ ಉತ್ಪನ್ನಗಳ ಪೈಕಿ ಬೇರೆಲ್ಲೂ ಸಿಗದಂಥ ಅನುಭವ ದೊರೆಯಲಿ ಎಂಬ ಕಾರಣಕ್ಕಾಗಿಯೇ ‘ಟಿರಾ’ದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸದಾಗಿ ಶುರುವಾಗಿರುವ ಟಿರಾ ಮಳಿಗೆಯಲ್ಲಿ ತಮಗೆ ಬೇಕಾದಂಥ ಸುಗಂಧ ಅಥವಾ ಸುವಾಸನೆಯನ್ನು ಹುಡುಕಿಕೊಳ್ಳುವುದಕ್ಕೆ ಗ್ರಾಹಕರಿಗೆ ವಿಶಾಲವಾದ ಆಯ್ಕೆಗಳಿವೆ. ಪ್ರತಿ ವ್ಯಕ್ತಿಯೂ ತಮ್ಮದೇ ಆದ ಆದ್ಯತೆಯ ಮೇಲೆ ಸುಗಂಧ ದ್ರವ್ಯಗಳನ್ನು ಆರಿಸಿಕೊಳ್ಳಬಹುದಾಗಿದೆ. ಇನ್ನೂ ವಿಶೇಷ ಏನೆಂದರೆ, ಟಿರಾದಲ್ಲಿ ಲಭ್ಯ ಇರುವಂಥ ಸ್ಮಾರ್ಟ್ ಕನ್ನಡಿಗಳು ಹಾಗೂ ಆಗ್ಯುಮೆಂಟೆಡ್ ರಿಯಾಲಿಟಿ ಕಾರಣಕ್ಕೆ ಗ್ರಾಹಕರು ಉತ್ಪನ್ನಗಳನ್ನು ವರ್ಚುವಲ್ ಆಗಿ ಪ್ರಯೋಗಿಸಬಹುದು. ಅದೇ ರೀತಿ ಇಲ್ಲಿ ಲಭ್ಯ ಇರುವಂಥ ಬ್ಯೂಟಿ ಟ್ರೀಟ್ಸ್ ಮತ್ತು ನಮೂನೆಗಳನ್ನು ವಿತರಿಸುವಂಥ ವಿತರಣೆ ಯಂತ್ರಗಳ ಸಹಾಯದಿಂದ ಗ್ರಾಹಕರು ತಮಗೆ ಬೇಕಾದಂಥದ್ದನ್ನು ತಮ್ಮ ಮನೆಗೆ ಕೊಂಡೊಯ್ಯಬಹುದು.
ಅಂದಹಾಗೆ ಸೌಂದರ್ಯದ ವಿಚಾರದಲ್ಲಿ ಸಲಹೆ ನೀಡುವುದರಲ್ಲಿ ಪರಿಣತರಾದಂಥವರೇ ರೂಪಿಸಿರುವ ‘ಟಿರಾ ಸಿಗ್ನೇಚರ್ ಲುಕ್ಸ್’ ಬಗ್ಗೆ ಗ್ರಾಹಕರು ದೊಡ್ಡ ಮಟ್ಟದಲ್ಲಿ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರ ಜತೆಗೆ ಇಲ್ಲಿ ಗ್ರಾಹಕರು ತಮ್ಮ ಅಚ್ಚುಮೆಚ್ಚಿನ ಉಚಿತ ಗ್ಲಾಮ್ ಲುಕ್ ಪಡೆಯಬಹುದಾಗಿದೆ. ಇನ್ನೂ ಮುಂದುವರಿದು ಹೇಳಬೇಕು ಅಂದರೆ, ‘ಟಿರಾ’ದಲ್ಲಿ ಉಡುಗೊರೆ ನೀಡುವುದಕ್ಕೆ ಅಂತಲೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಗ್ರಾಹಕರು ತಾವು ಖರೀದಿ ಮಾಡಿದ ವಸ್ತುಗಳ ಮೇಲೆ ಪ್ರೀತಿಪಾತ್ರರ ಹೆಸರನ್ನು ಬರೆಸಿ, ನೀಡುವುದರೊಂದಿಗೆ ತಮ್ಮ ಉಡುಗೊರೆಗಳನ್ನು ಇನ್ನಷ್ಟು ವಿಶೇಷ ಎನ್ನುವಂತೆ ಮಾಡಬಹುದು.

ಸೌಂದರ್ಯ ಉತ್ಪನ್ನಗಳ ರೀಟೇಲ್ ವ್ಯಾಪ್ತಿಯಲ್ಲಿ ಟಿರಾ ಹಿಗ್ಗಿಸುತ್ತಾ ಬಂದಿದ್ದು, ಪ್ರತಿ ಗ್ರಾಹಕರಿಗೆ ತಮಗೆ ಬೇಕಾದದ್ದು ಇಲ್ಲಿ ದೊರೆಯುತ್ತದೆ ಎಂಬ ಭರವಸೆಯನ್ನು ನೀಡಿತ್ತಾ ಬಂದಿದೆ. ಇನ್ನು ‘ಟಿರಾ’ ಆಪ್ ಡೌನ್ ಲೋಡ್ ಸಂಖ್ಯೆಯು ಐದು ಮಿಲಿಯನ್ ಸಂಖ್ಯೆಯ ಮೈಲುಗಲ್ಲು ದಾಟಿದೆ. ಈ ಸಂಖ್ಯೆಯೇ ಮೂಲಕ ತಿಳಿಯಬಹುದಾದದ್ದು ಏನೆಂದರೆ, ಸೌಂದರ್ಯ ಅಭಿಮಾನಗಳಲ್ಲಿ ಟಿರಾಗೆ ಜನಪ್ರಿಯತೆಯು ಹೆಚ್ಚುತ್ತಲೇ ಬರುತ್ತಿದೆ. ಭಾರತ ದೇಶದಾದ್ಯಂತ ಶೇ 98ರಷ್ಟು ಪಿನ್ ಕೋಡ್ ಗಳ ವ್ಯಾಪ್ತಿಯಲ್ಲಿ ಟಿರಾ ಉತ್ಪನ್ನಗಳನ್ನು ವೇಗವಾಗಿ ಪೂರೈಕೆ ಮಾಡಲಾಗುತ್ತಿದ್ದು, 100ಕ್ಕೂ ಹೆಚ್ಚು ನಗರಗಳ ಗ್ರಾಹಕರನ್ನು ತಲುಪುತ್ತಿದೆ.

ಮಾಲ್ ಆಫ್ ಏಷ್ಯಾದಲ್ಲಿನ ಮಳಿಗೆಯು ಬೆಂಗಳೂರು ಮಾತ್ರವಲ್ಲದೆ ಅದರ ಆಚೆಗೆ ಇರುವಂಥ ಸೌಂದರ್ಯ ಉತ್ಪನ್ನಗಳ ಬಳಕೆದಾರರ ಪಾಲಿಗೆ ಪ್ರಮುಖ ಕೇಂದ್ರ ಆಗುವುದಕ್ಕೆ ಎಲ್ಲ ರೀತಿಯಿಂದಲೂ ಸಜ್ಜಾಗಿದ್ದು, ಉನ್ನತ ಮಟ್ಟದ- ಅತ್ಯಾಧುನಿಕ ತಂತ್ರಜ್ಞಾನದ ಅನುಭವದ ಹೊಸ ಯುಗಕ್ಕೆ ಇದು ನಾಂದಿ ಹಾಡಿದೆ. ಟಿರಾ ಮಳಿಗೆ ವಿಳಾಸ: ಕೆಳ ಮಹಡಿ, 239/240, ಬ್ಯಾಟರಾಯನಪುರ, ಯಲಹಂಕ ಹೋಬಳಿ, ಯಲಹಂಕ ತಾಲೂಕು, ಬಳ್ಳಾರಿ ರಸ್ತೆ, ಬೆಂಗಳೂರು, ಕರ್ನಾಟಕ 560092.

ಈ ಸುದ್ದಿಯನ್ನೂ ಓದಿ: ರಿಲಯನ್ಸ್‌ ರಿಟೇಲ್‌ ಅಧ್ಯಕ್ಷರಾಗಿ ಮುಕೇಶ್‌ ಅಂಬಾನಿ ಪುತ್ರಿ ಇಶಾ ಅಂಬಾನಿ ನೇಮಕ

Continue Reading

ದೇಶ

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

VISTARANEWS.COM


on

Shri Ram Janmabhoomi Mandir carvings are wonderful
Koo

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಜನವರಿ 22ರಂದು ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ನಡುವೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಿಲೀಸ್ ಮಾಡಿದೆ.

ಅದ್ಭುತ ಕೆತ್ತನೆಗಳನ್ನು ಹೊಂದಿರುವ ಮಂದಿರ ಒಳಾಂಗಣ ಫೋಟೋಗಳು ಭಾರೀ ವೈರಲ್ ಆಗಿವೆ. ಸುಂದರ ಕಲಾಕೃತಿಗಳನ್ನು ಮಂದಿರದೊಳಗೆ ಕಾಣಬಹುದಾಗಿದೆ. ನಿನ್ನೆಯಷ್ಟೇ ರಾಮ ಮಂದಿರದ ಗರ್ಭಗಡಿಯು ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಮಂತ್ರಣ ನೀಡಲಾಗಿದೆ. ಸುಮಾರು 10 ಸಾವಿರದಿಂದ 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮನಮೋಹಕ ರಾಮ ಮಂದಿರ ಗರ್ಭ ಗುಡಿ

ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Continue Reading
Advertisement
girl students fall ill
ಕರ್ನಾಟಕ16 mins ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್27 mins ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್49 mins ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ1 hour ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Supreme Court verdict on Article 370 and Know about this article
ದೇಶ2 hours ago

ನಾಳೆ ಆರ್ಟಿಕಲ್ 370 ರದ್ದು ತೀರ್ಪು; ಅದಕ್ಕೂ ಮೊದಲು ಈ ಸಂಗತಿ ತಿಳಿದುಕೊಂಡಿರಿ

WPL 2024 Auction
ಕ್ರಿಕೆಟ್2 hours ago

ಬಿಡ್ಡಿಂಗ್​ ಹಣದಲ್ಲಿ ತಂದೆ-ತಾಯಿಗೆ ವಿಶೇಷ ಉಡುಗೊರೆ ನೀಡಲು ಮುಂದಾದ ಕರ್ನಾಟಕದ ​ ವೃಂದಾ ದಿನೇಶ್​

Naveen Ammembala
ದಕ್ಷಿಣ ಕನ್ನಡ2 hours ago

ಹೈಪರ್ ಲೋಕಲ್ ಸುದ್ದಿಗೂ ಅಭ್ಯುದಯ ಪತ್ರಿಕೋದ್ಯಮಕ್ಕೂ ಅವಿನಾಭಾವ ಸಂಬಂಧ: ನವೀನ್ ಅಮ್ಮೆಂಬಳ

Chhattisgarh to be CM Vishnu has two deputies and Raman Singh Speaker
ದೇಶ2 hours ago

ಛತ್ತೀಸ್‍‌ಗಢ ಸಿಎಂ ವಿಷ್ಣುಗೆ ಇಬ್ಬರು ಡೆಪ್ಯುಟಿಗಳು; ರಮಣ್ ಸಿಂಗ್ ಸ್ಪೀಕರ್

Rambhapuri seer and MB Patil
ಕರ್ನಾಟಕ3 hours ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್3 hours ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ7 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ9 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ17 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌