Site icon Vistara News

Yoga Day 2023: ಜೂನ್‌ 21ರಂದು ವಿಶ್ವಸಂಸ್ಥೆಯಲ್ಲಿ ಯೋಗ ಮಾಡಲಿದ್ದಾರೆ ಮೋದಿ; ಪ್ರಧಾನಿಯದ್ದೇ ನೇತೃತ್ವ

Narendra Modi Yoga

Narendra Modi Yoga

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತದ ‘ಯೋಗ’ಕ್ಕೆ ಒಳ್ಳೆಯ ಯೋಗ ಬಂದಿದೆ. ನರೇಂದ್ರ ಮೋದಿ ಅವರ ಪ್ರಯತ್ನದ ಫಲವಾಗಿಯೇ ಪ್ರತಿ ವರ್ಷ ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನ (Yoga Day 2023) ಆಚರಿಸಲಾಗುತ್ತದೆ. ಹೀಗೆ, ಜಗತ್ತಿಗೇ ಯೋಗವನ್ನು ಪರಿಚಯಿಸಿದ ಭಾರತಕ್ಕೆ ಮತ್ತೊಂದು ಗರಿ ಮೂಡಿದೆ. ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ವಿಶ್ವಸಂಸ್ಥೆ ಕೇಂದ್ರ ಕಚೇರಿಯಲ್ಲಿ ಯೋಗಾಭ್ಯಾಸ ನಡೆಯಲಿದೆ.

“9ನೇ ಅಂತಾರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಯೋಗ ಸೆಷನ್‌ ನಡೆಯಲಿದೆ. ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಯೋಗಾಭ್ಯಾಸ ನಡೆಯಲಿದ್ದು, ಎಲ್ಲರೂ ಭಾಗವಹಿಸಬೇಕು ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ಆಹ್ವಾನಿಸಿದ್ದಾರೆ” ಎಂದು ಪ್ರಕಟಣೆ ತಿಳಿಸಿದೆ. ವಿಶ್ವಸಂಸ್ಥೆ ಕೇಂದ್ರ ಕಚೇರಿಯ ನಾರ್ತ್‌ ಲಾನ್‌ನಲ್ಲಿ ಬೆಳಗ್ಗೆ 8ರಿಂದ 9ರವರೆಗೆ ಯೋಗಾಭ್ಯಾಸ ನಡೆಯಲಿದೆ.

ಯೋಗ ಮಾಡಲು ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಉತ್ಸುಕ

ಪ್ರಧಾನಿ ನರೇಂದ್ರ ಮೋದಿ ಸರ್ಕಾರವು 2014ರಲ್ಲಿ ಯೋಗವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲು, ಯೋಗ ಮಹತ್ವ ಸಾರಲು ತೀರ್ಮಾನಿಸಿ ವಿಶ್ವಸಂಸ್ಥೆಯಲ್ಲಿ ಯೋಗ ದಿನಾಚರಣೆ ಕುರಿತು ನಿರ್ಣಯ ಮಂಡಿಸಿತ್ತು. ವಿಶ್ವದ ಸುಮಾರು 175 ರಾಷ್ಟ್ರಗಳು ಭಾರತದ ನಿರ್ಣಯಕ್ಕೆ ಅಂಗೀಕಾರ ನೀಡಿದ ಬಳಿಕ ಪ್ರತಿ ವರ್ಷ ಜೂನ್‌ 21ರಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲು ತೀರ್ಮಾನಿಸಲಾಯಿತು. 2015ರ ಜೂನ್‌ 21ರಿಂದ ಪ್ರತಿ ವರ್ಷ ಯೋಗ ದಿನ ಆಚರಣೆ ಮಾಡಲಾಗುತ್ತದೆ.

ನರೇಂದ್ರ ಮೋದಿ ರಿಪ್ಲೈ

ಇದನ್ನೂ ಓದಿ: Yoga Day 2023: ವೇದಪೂರ್ವ ಕಾಲದಲ್ಲೂ ಇತ್ತು ಯೋಗ! ಇಲ್ಲಿದೆ ಯೋಗದ ಇತಿಹಾಸ

ನರೇಂದ್ರ ಮೋದಿ ಅವರು ಜೂನ್‌ 21ರಿಂದ ಜೂನ್‌ 24ರವರೆಗೆ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಜೂನ್‌ 22ರಂದು ಅಮೆರಿಕ ಸಂಸತ್‌ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಮೆರಿಕ ಸಂಸತ್‌ನಲ್ಲಿ ಮೋದಿ ಮಾಡುತ್ತಿರುವ ಎರಡನೇ ಭಾಷಣ ಇದಾಗಿದೆ. ಆ ಮೂಲಕ ಮೋದಿ ಅವರು ಅಮೆರಿಕ ಸಂಸತ್‌ನಲ್ಲಿ ಭಾಷಣ ಮಾಡಿದ ಭಾರತದ ಎರಡನೇ ಪ್ರಧಾನಿ ಎನಿಸಲಿದ್ದಾರೆ. ಮೋದಿ ಭಾಷಣದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರ ಜತೆ ಭೋಜನಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಜೂನ್‌ 23ರಂದು ಅನಿವಾಸಿ ಭಾರತೀಯರನ್ನುದ್ದೇಶಿಸಿ ವಾಷಿಂಗ್ಟನ್‌ ಡಿಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮೋದಿ ಮಾತನಾಡಲಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Exit mobile version