Site icon Vistara News

Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

Yogi Adityanath

ಲಖನೌ: ಎರಡು ದಿನಗಳ ಹಿಂದೆಯಷ್ಟೇ ನಡುರಸ್ತೆಯಲ್ಲಿ ಯುಕವರ ಗುಂಪೊಂದು ನೀರು ಎರಚಿ ಕಿರುಕುಳ ಕೊಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಉತ್ತರಪ್ರದೇಶ ಮುಖ್ಯಮಂತ್ರಿ(Uttar Pradesh Chief Minister) ಯೋಗಿ ಆದಿತ್ಯಾನಾಥ್‌(Yogi Adityanath) ಘಟನಾ ಸ್ಥಳ ವ್ಯಾಪ್ತಿಗೆ ಬರುವ ಪೊಲೀಸ್‌ ಠಾಣೆಯ ಎಲ್ಲಾ ಪೊಲೀಸರನ್ನು ಅಮಾನತುಗೊಳಿಸಿದ್ದಾರೆ. ಲಖನೌದಲ್ಲಿ ನಡೆದ ಈ ಘಟನೆ ಬಗ್ಗೆ ಅಸೆಂಬ್ಲಿಯಲ್ಲಿ ಮಾತನಾಡಿದ ಯೋಗಿ, ಇನ್ನು ಮುಂದೆ ʼಬುಲೆಟ್‌ ರೈಲುʼ ಶುರುವಾಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣದ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದ್ದು, ಅವರನ್ನು ಪವನ್‌ ಯಾದವ್‌ ಮತ್ತು ಮೊಹಮ್ಮದ್‌ ಅರ್ಬಾಜ್‌ ಎಂದು ಗುರುತಿಸಲಾಗಿದೆ. ಇವರಾ ನಿಮ್ಮ ಸದ್ಭಾವನೆಯ ವ್ಯಕ್ತಿಗಳು? ಇವರಿಗೆ ಸದ್ಭಾವನೆ ರೈಲು ಓಡಿಸಬೇಕೆ? ಚಿಂತಿಸಬೇಡಿ ಇಂತವರಿಗೆ ಇನ್ನು ಮುಂದೆ ಬುಲೆಟ್‌ ರೈಲು ಓಡಿಸಲಾಗುವುದು ಎಂದು ಖಡಕ್‌ ವಾರ್ನಿಂಗ್‌ ಕೊಟ್ಟಿದ್ದಾರೆ.

ಮಹಿಳೆಯರಿಗೆ ಕಿರುಕುಳ ನೀಡುವವರನ್ನು ಬಿಡುವುದಿಲ್ಲ ಎಂದು ಹೇಳಿದ ಸಿಎಂ ಯೋಗಿ, ಮಹಿಳೆಯರ ರಕ್ಷಣೆಯಲ್ಲಿ ವಿಫಲರಾಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. “ಮಹಿಳೆಯರ ಸುರಕ್ಷತೆಯು ನಮಗೆ ಪ್ರಮುಖ ಸಮಸ್ಯೆಯಾಗಿದೆ ಮತ್ತು ನಾವು ಇದನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ನಾವು ಪ್ರತಿಯೊಬ್ಬ ಸಹೋದರಿ ಮತ್ತು ಮಗಳಿಗೆ ಭರವಸೆ ನೀಡಿದ್ದೇವೆ. ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಗಂಭೀರವಾಗಿ ತೆಗೆದುಕೊಂಡ ಪರಿಣಾಮ ಇಡೀ ಚೌಕಿಯನ್ನು ಅಮಾನತುಗೊಳಿಸಲಾಗಿದೆ, ಇನ್ಸ್‌ಪೆಕ್ಟರ್ ಅಮಾನತು ಮಾಡಲಾಗಿದೆ, ಎಎಸ್ಪಿ, ಡಿಸಿಪಿ, ಎಲ್ಲರನ್ನೂ ತೆಗೆದುಹಾಕಲಾಗಿದೆ ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಏನಿದು ಘಟನೆ?

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಬಳಿ ಈ ಘಟನೆ ನಡೆದಿದ್ದು, ಮೊಣಕಾಲು ಆಳದ ನೀರಿನಲ್ಲಿ ಮಳೆಯ ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದ ಪುರುಷರ ಗುಂಪೊಂದು ಅದೇ ಮಾರ್ಗದಲ್ಲಿ ಬಂದ ಬೈಕ್​ನಲ್ಲಿ ಕುಳಿತಿದ್ದ ಪುರುಷ ಮತ್ತು ಯುವತಿಗೆ ಆ ಮಳೆನೀರನ್ನು ಎರಚಿ ಕಿರುಕುಳ ನೀಡಿದ್ದಾರೆ. ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ. ಇನ್ನು ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Exit mobile version