Site icon Vistara News

KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

KPSC Exam

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (KPSC Exam) 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್‌ 25ರಂದು ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಆದರೆ ಆ ದಿನದಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಮಾಲೋಚಿಸಿದ್ದಾರೆ. ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪೂರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹೀಗಾಗಿ ಹೆಚ್ಚಿನ ಕಾಲಾವಕಾಶ ನೀಡದೆ, ಬೇರೆ ಪರೀಕ್ಷೆಗಳೊಂದಿಗೆ Overlap ಆಗದಂತೆ ಅಲ್ಪಕಾಲ ಮುಂದೂಡಲು ನಿರ್ಧರಿಸಿದೆ.

ಈ ಹಿನ್ನೆಲೆಯಲ್ಲಿ ಆಗಸ್ಟ್‌ 25ರ ಬದಲು 27ರಂದು ಪೂರ್ವಭಾವಿ ಪರೀಕ್ಷೆಯನ್ನು ನಡೆಸಲು ಮರುನಿಗದಿಪಡಿಸಲು ಆಯೋಗವು ತೀರ್ಮಾನಿಸಿದೆ. ಅಭ್ಯರ್ಥಿಗಳು ಆಗಸ್ಟ್‌ 15ರ ನಂತರ ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲದಿಂದ ಡೌನ್‌ ಲೋಡ್ ಮಾಡಿಕೊಳ್ಳಬಹುದು. ಉಳಿದಂತೆ ಯಾವುದೇ ರೀತಿಯ ಬದಲಾವಣೆಗಳು ಇರುವುದಿಲ್ಲ ಎಂದು ಆಯೋಗ ತಿಳಿಸಿದೆ.

ಮುಂದುವರೆಸುತ್ತಾ, ದಿನಾಂಕ:27-08-2024 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ ರಾಜ್ಯದ ಎಲ್ಲಾ ಜಿಲ್ಲೆಗಳ ಪರೀಕ್ಷಾ ಉಪಕೇಂದ್ರಗಳಿಗೆ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಲು ಹಾಗೂ ಸದರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತದೆ.

ಇದನ್ನೂ ಓದಿ: Job Vacancies: ಸಾವಿರ ಮಹಿಳಾ ಪೊಲೀಸ್ ಕಾನ್‌‌ಸ್ಟೇಬಲ್ ಹುದ್ದೆಗಳಿಗೆ ಲಕ್ಷಕ್ಕೂ ಹೆಚ್ಚು ಅರ್ಜಿ! ಫುಟ್‌‌ಪಾತ್‌‌ನಲ್ಲೇ ಮಲಗಿದ್ದ ಮಹಿಳಾ ಅಭ್ಯರ್ಥಿಗಳು

ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version