ಬೆಂಗಳೂರು: ರಾಜ್ಯದ ಸರ್ಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್- 2024) ಅನ್ನು ನಡೆಸಲಾಗುತ್ತಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮುಂದಿನ ನವೆಂಬರ್ 24ರಂದು ಪರೀಕ್ಷೆ ನಡೆಸಲು (KSET 2024) ಯೋಜಿಸಿದೆ. ಅದರಂತೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿ.
ಕಳೆದ ಜುಲೈ 22ರಿಂದಲ್ಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಆಗಸ್ಟ್ 22ರಂದು ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ಆಗಸ್ಟ್ 26ರಂದು ಕಡೆ ದಿನವಾಗಿದೆ. ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್ (Online) ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಯಾವುದೇ ಇತರ ನಮೂನೆಯಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. ಕೆಇಎ ವೆಬ್ ಸೈಟ್ http://kea.kar.nic.in ಅನ್ನು ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಯಾರೆಲ್ಲ ಅರ್ಹರು?
ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಪದವಿ ಕಾಲೇಜು ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ ಹಾಗೂ ಆಯಾ ಸಂಸ್ಥೆಗಳ ನಿಯಮ ಮತ್ತು ಕಾಯ್ದೆಗಳಿಗೆ ಒಳಪಟ್ಟಿರುತ್ತಾರೆ.
ವಿಕಲಚೇತನ (PwD), ತೃತೀಯ ಲಿಂಗ, ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಮತ್ತು ಇತರೆ ಹಿಂದುಳಿದ ವರ್ಗದ (ಪ್ರವರ್ಗ-I, IIA, IIB, IIIA, ಮತ್ತು IIIB) ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದವರ ಪಟ್ಟಿಯಲ್ಲಿರುವಂತಿರಬೇಕು.
ವಯೋಮಿತಿ ಏನು?
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಟ ವಯೋಮಿತಿ ಇಲ್ಲ..
ಪರೀಕ್ಷಾ ಶುಲ್ಕ ಹೀಗಿದೆ
ಸಾಮಾನ್ಯ ವರ್ಗ, ಪ್ರವರ್ಗ IIA, IIB, IIIA, IIIB ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ 1000 ರೂ. ಶುಲ್ಕ ನಿಗದಿ ಮಾಡಲಾಗಿದೆ. ಪ್ರವರ್ಗ-I,SC,ST,PwD ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ 700 ರೂ. ನಿಗದಿ ಮಾಡಲಾಗಿದೆ.
ಇನ್ನೂ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ಪ್ರವರ್ಗ-I, SC, ST, ತೃತೀಯ ಲಿಂಗ ಮತ್ತು ವಿಕಲಚೇತನರ (Medical Certificate with 40% or more disability ) ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. ಅಭ್ಯರ್ಥಿಗಳು ಬೇರೆ ಯಾವುದೇ ವಿಧಾನದ ಮೂಲಕ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ (ಉದಾ : Money Order / Demand Draft / IPO Office Challan ಇತ್ಯಾದಿಗಳನ್ನು ಮಾಡುವಂತಿಲ್ಲ. ಒಮ್ಮೆ ಶುಲ್ಕ ಪಾವತಿಸಿದ ನಂತರ ಅದನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಪರೀಕ್ಷಾ ದಿನಾಂಕ -ಸಮಯದ ವಿವರ
ಕೆಸೆಟ್ ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆ ಇರಲಿದ್ದು, ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯನ್ನು ನವೆಂಬರ್ 24ರಂದು ನಡೆಸಲಾಗುತ್ತದೆ. ನವೆಂಬರ್ 24ರ ಬೆಳಗ್ಗೆ 10ರಿಂದ 1 ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ಪತ್ರಿಕೆ 100 ಅಂಕಗಳಿಗೆ (50 ಪ್ರಶ್ನೆಗಳು ಕಡ್ಡಾಯವಾಗಿರುತ್ತದೆ), ಎರಡನೇ ಪತ್ರಿಕೆ 200 ಅಂಕ (100 ಪ್ರಶ್ನೆಗಳು ಕಡ್ಡಾಯವಾಗಿರುತ್ತದೆ). ಅಭ್ಯರ್ಥಿಗಳು ಮಧ್ಯಾಹ್ನ 1 ಗಂಟೆಯ ಮೊದಲು ಪರೀಕ್ಷಾ ಕೇಂದ್ರದಿಂದ ಹೊರಬರಲು ಅನುಮತಿಸಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳು
ಬೆಂಗಳೂರು, ಬೆಳಗಾವಿ, ಬಳ್ಳಾರಿ, ಬೀದರ್, ದಾವಣಗೆರೆ, ಧಾರವಾಡ ಹಾಗೂ ಕಲಬುರಗಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ವಿಜಯಪುರದಲ್ಲಿ ಪರೀಕ್ಷೆ ನಡೆಯಲಿದೆ.
ಸಾಮಾನ್ಯ ಸೂಚನೆಗಳಿವು
- 1.ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್ ಸೈಟಿನಿಂದ ಡೌನ್ ಲೋಡ್ ಮಾಡಿಕೊಳ್ಳಬೇಕು. ಅದರಲ್ಲಿ ಮುದ್ರಿತವಾಗಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ ಪರೀಕ್ಷಾ ಕೇಂದ್ರವನ್ನು ಖಚಿತಪಡಿಸಿಕೊಳ್ಳಬೇಕು.
- 2.ಪ್ರವೇಶ ಪತ್ರದ ಜತೆಯಲ್ಲಿ ಡೌನ್ ಲೋಡ್ ಮಾಡಿಕೊಳ್ಳುವ ಸೂಚನೆಗಳನ್ನು ತಪ್ಪದೆ ಓಸಬೇಕು.
- 3.ತಪ್ಪು ಉತ್ತರಗಳಿಗೆ ಅಂಕಗಳನ್ನು (negative answers) ಕಳೆಯುವುದಿಲ್ಲ.
- 4.ಕೇವಲ ಕೆಸೆಟ್-2024ಕ್ಕೆ ಹಾಜರಾದ ಮಾತ್ರಕ್ಕೆ ಅರ್ಹತೆಯನ್ನು ಪಡೆದಿದ್ದೇನೆಂದು ಅಭ್ಯರ್ಥಿಗಳು ಭಾವಿಸುವಂತಿಲ್ಲ.
- 5.ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಫೋನ್, ಬ್ಲೂಟೂತ್, ಗ್ಯಾಡ್ಜೆಟ್ಸ್, ಮಾರ್ಕರ್, ಕ್ಯಾಲ್‌ಕ್ಯುಲೇಟರ್, ವೈಟ್ ಪ್ಯೂಯಿಡ್, ರ್ವೈಲಿಸ್ ಸೆಟ್ಸ್, ಚೀಟಿಗಳು, ಬುಕ್ಸ್ / ಪುಸ್ತಕ ಇತ್ಯಾದಿಗಳನ್ನು ನಿಷೇಧಿಸಲಾಗಿದೆ.
- 6.ಅಲ್ಲದೆ ಈ ಮೇಲಿನ ಯಾವುದೇ ವಸ್ತುಗಳನ್ನು ಸಂರಕ್ಷಿಸಿಡಲು ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಇರುವುದಿಲ್ಲ.
- 7.ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಮಧ್ಯಂತರದಲ್ಲಿ ಬಾರಿಸುವ ಎಚ್ಚರಿಕೆಯ ಗಂಟೆಗಳ ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸುವ ಬೆಲ್ ಸಮಯವನ್ನು ನೋಡಲು ಕೋರಿದೆ.
- 8.ಅಭ್ಯರ್ಥಿಗಳು ಮೊಣಕೈವರೆಗೆ ಬರುವಂತಹ ಅರ್ಧ ತೋಳಿನ ಉಡುಪುಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಬಹದು, ಕಿವಿ, ತಲೆ ಮುಚ್ಚುವಂತಹ ವಸ್ತ್ರವನ್ನು ನಿಷೇಧಿಸಲಾಗಿದೆ.
- 9.ಯಾವುದೇ ರೀತಿಯ ಲೋಪದ ಆಭರಣಗಳನ್ನು ಧರಿಸಿಕೊಂಡು ಬರುವುದನ್ನು ನಿಷೇಧಿಸಿದೆ. (ಮಂಗಳ ಸೂತ್ರವನ್ನು ಹೊರತುಪಡಿಸಿ)
- 10.ಅಭ್ಯರ್ಥಿತನವು ಸಂಪೂರ್ಣವಾಗಿ ತಾತ್ಕಾಲಿಕವಾಗಿರುತ್ತದೆ ಎಂಬುದನ್ನು ಗಮನಿಸಬೇಕು. ಕೇವಲ ಪ್ರವೇಶ ಪತ್ರವನ್ನು ನೀಡಿದ ಮಾತ್ರಕ್ಕೆ ಹಾಗೂ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಿದ ಮಾತ್ರಕ್ಕೆ, ಪ್ರಾಧಿಕಾರವು ಅಭ್ಯರ್ಥಿಗಳ ವಿವರವನ್ನು ಒಪ್ಪಿದೆಯೆಂದು ಪರಿಗಣಿಸಬಾರದು.
- 11.ಪ್ರವೇಶ ಪತ್ರದ ಜತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಸರ್ಕಾರದಿಂದ ಮಾನ್ಯತೆ ಇರುವ ಭಾವಚಿತ್ರವುಳ್ಳ ಯಾವುದಾದರೂ ಒಂದು ಗುರುತಿನ ಚೀಟಿ / ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ ಅನ್ನು ತೆಗೆದುಕೊಂಡು ಹೋಗಬೇಕು.
- 12.ಕೊಠಡಿ ಮೇಲ್ವಿಚಾರಕರು ನೀಡುವ ಎಲ್ಲಾ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಸೂಚನೆಗಳನ್ನು ಪಾಲಿಸದೇ ಇರುವ ಅಭ್ಯರ್ಥಿಗಳನ್ನು ಅನ್ಯಾಯದ ವಿಧಾನವೆಂದು ಪರಿಗಣಿಸಿ ಅಂತಹ ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗುವುದು.
- 13.ಪ್ರವೇಶ ಪತ್ರದಲ್ಲಿ ನಮೂದಿಸಿರುವ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು.
- 14.ಪ್ರವೇಶ ಪತ್ರದಲ್ಲಿ ನಿಗದಿಪಡಿಸಿರುವ ಪರೀಕ್ಷಾ ಕೇಂದ್ರವನ್ನು ಹೊರತುಪಡಿಸಿ ಬೇರೆ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯನ್ನು ಬರೆಯಲು ಅನುವು ಮಾಡಿಕೊಡುವುದಿಲ್ಲ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ