International Women's Day: ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ಅದ್ಧೂರಿ ಮಹಿಳಾ ದಿನಾಚರಣೆ - Vistara News

ಹೊರನಾಡು ಕನ್ನಡಿಗರು

International Women’s Day: ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ಅದ್ಧೂರಿ ಮಹಿಳಾ ದಿನಾಚರಣೆ

International Women’s Day: ದುಬೈನ ಮಶ್ರೀಫ್ ಪಾರ್ಕ್‌ನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ಅದ್ಧೂರಿಯಾಗಿ ಮಹಿಳಾ ದಿನ ಆಚರಿಸಲಾಗಿದೆ.

VISTARANEWS.COM


on

International Women's Day dubai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ,: ಯುಎಇ ಒಕ್ಕಲಿಗರ ಸಂಘದಿಂದ ದುಬೈನ ಮಶ್ರೀಫ್ ಪಾರ್ಕ್‌ನಲ್ಲಿ ಮಾರ್ಚ್‌ 3ರಂದು ಮಹಿಳಾ ದಿನವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸುಮಾರು 200ಕ್ಕೂ ಹೆಚ್ಚು ಜನರು ಆಗಮಿಸಿದ್ದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಯುಎಇಯಲ್ಲಿದ್ದುಕೊಂಡು ಉದ್ಯೋಗದ ಜತೆಗೆ ಸಾಮಾಜಿಕ, ಅರೋಗ್ಯ, ಶಿಕ್ಷಣ ಮತ್ತು ಕನ್ನಡ ಕ್ಷೇತ್ರದಲ್ಲಿ ನಿರಂತರವಾಗಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿರುವ ಒಕ್ಕಲಿಗರ ಸಂಘದ ವಿಪುಲ ಶೆಟ್ಟಿ, ಡಾ.ಲೇಖಾ ತಮ್ಮಯ್ಯ, ರೂಪಾ ಶಶಿಧರ್ ಮತ್ತು ಪ್ರಭಾ ಪ್ರದೀಪ್ ಅವರಿಗೆ ಸಂಘದಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಮಹಿಳಾ ದಿನಕ್ಕೆ ಆಗಮಿಸಿದ ಎಲ್ಲಾ ಮಹಿಳೆಯರಿಗೂ ಗುಲಾಬಿ ಹೂ ಕೊಡುವ ಮುಖಾಂತರ ಸ್ವಾಗತಿಸಲಾಯಿತು. ಎಲ್ಲಾ ಮಹಿಳೆಯರು, ಮಕ್ಕಳು ಮತ್ತು ಪುರುಷರು ವಿವಿಧ ಕ್ರೀಡೆ, ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂತಸಪಟ್ಟರು. ಇನ್ನು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಜತೆಗೆ ಸಂಘದ ವತಿಯಿಂದ ಎಲ್ಲರಿಗೂ ಗೌಡರ ಶೈಲಿಯ ಊಟದ ವ್ಯವಸ್ಥೆ ಏರ್ಪಡಿಸಲಾಗಿತ್ತು.

ಇದನ್ನೂ ಓದಿ | Raja Marga Column : ಬಹುಮುಖಿ ಸ್ತ್ರೀ; ನೀವು ಕಂಡು ಕೇಳರಿಯದ ಹೆಣ್ಣಿನ ಮುಖಗಳು

ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ಕಾರಣರಾದ ಒಕ್ಕಲಿಗರ ಸಂಘದ ಆಡಳಿತ ಮಂಡಳಿ ನಿರ್ದೇಶಕರಾದ ಶೋಭಾ ಗೌಡ, ಕಾಂತ ಗೌಡ, ಪುಟ್ಟರಾಜು ಗೌಡ, ಯತೀಶ ಗೌಡ, ದೀಪಕ್ ಗೌಡ, ಗೋಕುಲ್ ಗೌಡ, ಸತೀಶ್ ಗೌಡ, ಪ್ರದೀಪ್ ಗೌಡ , ರಮೇಶ್ ರಂಗಪ್ಪ, ಮಹೇಶ್ ಗೌಡ, ಅಕ್ಷಯ್ ಗೌಡ, ಮೋಹನ್ ಗೌಡ, ನಾರಾಯಣ ಸ್ವಾಮಿ, ಚೇತನ್ ಗೌಡ ಅವರನ್ನು ಸಂಘದ ಅಧ್ಯಕ್ಷರಾದ ಡಾ. ರಶ್ಮಿ ನಂದಕಿಶೋರ್ ಅವರು ವೇದಿಕೆ ಮೇಲೆ ಅಭಿನಂದಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಬೆಂಗಳೂರು

Kempegowda Utsava: ದುಬೈನಲ್ಲಿ ಕೆಂಪೇಗೌಡ ಉತ್ಸವ; ನಿರ್ಮಲಾನಂದನಾಥ ಶ್ರೀ, ಎಚ್‌ಡಿಕೆ ಭಾಗಿ

Kempegowda Utsava: ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ನಾಡಪ್ರಭು ಕೆಂಪೇಗೌಡರ ಉತ್ಸವ ಆಯೋಜಿಸಲಾಗಿತ್ತು. ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸೇರಿ ರಾಜ್ಯದ ಹಲವು ನಾಯಕರು ಭಾಗವಹಿಸಿದ್ದರು.

VISTARANEWS.COM


on

Kempegowda Utsava in Dubai
Koo

ದುಬೈ (ಯುಎಇ) : ದುಬೈನ ಶೇಕ್ ರಷೀದ್ ಸಭಾಂಗಣದಲ್ಲಿ ಯುಎಇ ಒಕ್ಕಲಿಗರ ಸಂಘದಿಂದ ಭಾನುವಾರ ಅದ್ಧೂರಿಯಾಗಿ ನಾಡಪ್ರಭು ಕೆಂಪೇಗೌಡರ ಉತ್ಸವ (Kempegowda Utsava) ಆಯೋಜಿಸಲಾಗಿತ್ತು. ಶ್ರೀ ಆದಿಚುಂಚನಗಿರಿ ಮಹಸಂಸ್ಥಾನದ ಪೀಠಾಧ್ಯಕ್ಷ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಅವರ ಸಾನ್ನಿಧ್ಯದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಉತ್ತಮ ಬದುಕು ರೂಪಿಸಿಕೊಳ್ಳಲು ಹೊರನಾಡಿಗೆ ಬಂದಿರುವ ಕನ್ನಡಿಗರು ನಮ್ಮ ಸಂಸ್ಕೃತಿ, ಭಾಷೆ, ನೆಲ ಜಲದ ಮೇಲೆ ಇರಿಸಿರುವ ಪ್ರೀತಿ, ಬದ್ಧತೆ ಕಂಡು ನನ್ನ ಹೃದಯ ಉಕ್ಕಿ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಹೊರನಾಡಿನಲ್ಲಿ ನೆಲೆಸಿದ್ದರೂ ತಾಯ್ನಾಡಿನ ಪ್ರೇಮ ಉಳಿಸಿಕೊಂಡು, ಕನ್ನಡ ಸೊಗಡನ್ನು ಬದುಕಿನಲ್ಲಿ ಹಾಸುಹೊಕ್ಕಾಗಿಸಿಕೊಂಡು ಬಾಳ್ವೆ ನಡೆಸುತ್ತಿರುವ ಕನ್ನಡಿಗರಿಗೆ ಎಷ್ಟು ಮೆಚ್ಚುಗೆ ವ್ಯಕ್ತಪಡಿಸಿದರೂ ಸಾಲದು. ಈ ದಿನ ನಡೆದ ಕೆಂಪೇಗೌಡರ ಉತ್ಸವದಲ್ಲಿ ಕನ್ನಡ ಸಂಸ್ಕೃತಿಯ ಸೊಗಡು ಸಾಕ್ಷಾತ್ಕಾರವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಭಾರತದ ಜಿಡಿಪಿ ಏರಿಕೆಯಲ್ಲಿ ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಕೊಡುಗೆ ದೊಡ್ಡದು

HD Kumaraswamy Felicitated in dubai

ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ದೂರದೃಷ್ಟಿ ಎಲ್ಲೆ, ಸೀಮೆಗಳು ಇಲ್ಲ. ಅವರ ಆದರ್ಶ ಆಡಳಿತ ಎಲ್ಲರೂ ಅನುಕರಣೀಯ ಮಾಡಬೇಕು. ಸರ್ವರನ್ನು ಸಮನಾಗಿ ಕಂಡು ಆಳ್ವಿಕೆ ನಡೆಸಿದವರು. ಅಂತಹವರನ್ನು ಇಂದು ದುಬೈನಲ್ಲಿ ಸ್ಮರಿಸಿಕೊಳ್ಳುಟ್ಟಿರುವುದು ಅರ್ಥಪೂರ್ಣವಾಗಿದೆ. ಅದಾವ ಶುಭ ಮುಹೂರ್ತದಲ್ಲಿ ನಾಡಪ್ರಭುಗಳು ಬೆಂಗಳೂರು ಮಹಾನಗರಕ್ಕೆ ಅಡಿಪಾಯ ಹಾಕಿದ್ದರು. ಇಂದು ಜಾಗತಿಕ ನಗರವಾಗಿ ಬೆಳೆದಿದ್ದು, ಕರ್ನಾಟಕ ಹಾಗೂ ಭಾರತದ ಅಭಿವೃದ್ಧಿಗೆ ಅನನ್ಯ ಕೊಡುಗೆ ನೀಡುತ್ತಿದೆ. ಜಾಗತಿಕ ಪೈಪೋಟಿ ನೀಡುತ್ತಾ ಜಗತ್ತಿನ ಅತ್ಯುತ್ತಮ ನಗರಗಳಲ್ಲಿ ಒಂದಾಗಿ ಬೆಳೆದಿದೆ ಎಂದು ಮಾಜಿ ಮುಖ್ಯಮಂತ್ರಿ ನುಡಿದರು.

ಇದನ್ನೂ ಓದಿ | Karnataka Rajyotsava: ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಕೈಗೊಳ್ಳಿ: ಡಿಸಿಗಳಿಗೆ ಸಚಿವ ಶಿವರಾಜ ತಂಗಡಗಿ ಸೂಚನೆ

ಕೆಂಪೇಗೌಡರ ಅದರ್ಶದೊಂದಿಗೆ ಶ್ರಮಿಸಿದ ನಮ್ಮ ಪೂರ್ವಿಕ ರೈತ ಬಂಧುಗಳು ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ. ಅದರ ಪರಿಣಾಮವಾಗಿಯೇ ಬೆಂಗಳೂರಿನಲ್ಲಿ ಇವತ್ತಿನ ದಿನ ಆಗುತ್ತಿರುವ ಆರ್ಥಿಕ ಉತ್ಪಾದನೆ ನಾಡಿಗೆ, ದೇಶಕ್ಕೆ ಬೆನ್ನುಲುಬಾಗಿ ನಿಂತಿದೆ. ಇವತ್ತು ದೇಶದ ಜಿಡಿಪಿ ಸದಾ ಏರುಮುಖವಾಗಿ ಚಲಿಸುತ್ತಿದೆ ಎಂದರೆ ಕೆಂಪೇಗೌಡರು ಕಟ್ಟಿದ್ದ ಬೆಂಗಳೂರು ನಗರದ ಕಾಣಿಕೆ ಹಿರಿದು ಎಂದರು.

ಕೆಂಪೇಗೌಡರು ಕಟ್ಟಿದ ಕೆರೆಗಳು ಏನಾದವು?

ಇವತ್ತು ನಾವು ಕೆಂಪೇಗೌಡರನ್ನು ಸ್ಮರಣೆ ಮಾಡುತ್ತಿದ್ದೇವೆ. ಆದರೆ, ಅವರು ಬೆಂಗಳೂರಿನಲ್ಲಿ ನಿರ್ಮಿಸಿದ ಕೆರೆಗಳು ಏನಾದವು? ನಮ್ಮ ಸ್ವಾರ್ಥ, ಸಂಕುಚಿತ ಮನಸ್ಥಿತಿಯ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಹೆಸರಿನಲ್ಲಿ ಅನೇಕ ಕೆರೆಗಳನ್ನು ನಾಶ ಮಾಡಲಾಗಿದೆ. ಒಂದು ಕಾಲದಲ್ಲಿ ಬೆಂಗಳೂರನ್ನು ಗಾರ್ಡನ್ ಸಿಟಿ ಎಂದು ನಾವೆಲ್ಲರೂ ಹೆಮ್ಮೆಯಿಂದ ಕರೆಯುತ್ತಿದ್ದೆವು. ಈಗ ಗಾರ್ಬೇಜ್ ಸಿಟಿ ಎಂದು ಕರೆಯಲಾಗುತ್ತಿದೆ. ಇದಕ್ಕೆ ಹೊಣೆ ಯಾರು? ಎಂದು ಮಾಜಿ ಮುಖ್ಯಮಂತ್ರಿಗಳು ಕಳವಳ ವ್ಯಕ್ತಪಡಿಸಿದರು.

ಇವತ್ತು ತಾಂತ್ರಿಕವಾಗಿ ನಾವು ಬಹಳಷ್ಟು ಸಾಧಿಸಿದ್ದೇವೆ. ಚಂದ್ರಯಾನ, ಸೂರ್ಯಯಾನ ಎಂದು ಸಾಧನೆ ಮಾಡುತ್ತಿದ್ದೇವೆ. ಆದರೆ, ಬೆಂಗಳೂರಿನಂಥ ಐತಿಹಾಸಿಕ ನಗರಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಸೋತಿದ್ದೇವೆ. ಇದು ವಿಷಾದನೀಯ. ರಾಜಕಾರಣಿಗಳಾಗಿ ನಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ ನಾವೆಲ್ಲೊ ಸೋತಿದ್ದೇವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಚಿವರಾದ ಸಿ.ಪಿ.ಯೋಗೇಶ್ವರ್, ಶಾಸಕರಾದ ಸಮೃದ್ಧಿ ಮಂಜುನಾಥ್, ಸ್ವರೂಪ್ ಪ್ರಕಾಶ್ ಸೇರಿ ರಾಜ್ಯದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯುಎಇ ಒಕ್ಕಲಿಗರ ಸಂಘದ ಅಧ್ಯಕ್ಷೆ ರಶ್ಮಿ ನಂದಕಿಶೋರ್, ಉಪಾಧ್ಯಕ್ಷ ಹರೀಶ್ ಕೋಡಿ ಸೇರಿ ಸಂಘದ ಪದಾಧಿಕಾರಿಗಳು, ನೂರಾರು ಕನ್ನಡಿಗರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ | Basaveshwara District: ಬಸವೇಶ್ವರ ಜಿಲ್ಲೆ ಪರವೂ ಇಲ್ಲ, ವಿರುದ್ಧವೂ ಇಲ್ಲ: ಡಾ. ಎಸ್.ಬಿ. ಜಾಮದಾರ

ಕೆಂಪೇಗೌಡ ಉತ್ಸವದ ಭಾಗವಾಗಿ ಭರತನಾಟ್ಯ, ಜಾನಪದ ನೃತ್ಯ, ಯಕ್ಷಗಾನ, ಶಾಸ್ತ್ರೀಯ ಸಂಗೀತ, ಹಾಸ್ಯ ಕಾರ್ಯಕ್ರಮ ಸೇರಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನೂರಾರು ಜನರು ಉತ್ಸವದಲ್ಲಿ ಭಾಗಿಯಾಗಿದ್ದರು.

Continue Reading

ಕಲೆ/ಸಾಹಿತ್ಯ

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

World Culture Festival ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ.

VISTARANEWS.COM


on

World culture fest
Koo

ಬೆಂಗಳೂರು: ಆರ್ಟ್‌ ಆಫ್‌ ಲಿವಿಂಗ್‌ನ 4ನೇ ಆವೃತ್ತಿಯ ʼವಿಶ್ವ ಸಾಂಸ್ಕೃತಿಕ ಉತ್ಸವʼ ವನ್ನು (World Culture Festival) ಸೆ.29ರಿಂದ ಅ.1ರವರೆಗೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ಆಯೋಜಿಸಲಾಗಿದೆ. 17,000 ಕಲಾವಿದರು ಭಾಗವಹಿಸುವ ಈ ʼಸಾಂಸ್ಕೃತಿಕ ಒಲಿಂಪಿಕ್ಸ್ʼನ ಮುಂದಾಳತ್ವವನ್ನು ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರು ವಹಿಸಲಿದ್ದಾರೆ.

ಆರ್ಟ್‌ ಆಫ್‌ ಲಿವಿಂಗ್‌ನ ಅವಿಸ್ಮರಣೀಯವಾದಂತಹ ವೈವಿಧ್ಯತೆಯ ಹಾಗೂ ಏಕತೆಯ ಉತ್ಸವಕ್ಕೆ ಅಮೆರಿಕದ ರಾಜಧಾನಿ ವಾಷಿಂಗ್ಟನ್‌ ಡಿ.ಸಿ. ಆತಿಥ್ಯ ವಹಿಸಿದೆ. ವಿಶ್ವ ವಿಖ್ಯಾತ ಯುಎಸ್ ಕ್ಯಾಪಿಟಲ್‌ನ ಹಿನ್ನೆಲೆಯನ್ನು ಹೊಂದಿರುವ ವೇದಿಕೆಯೇ ಒಂದು ಫುಟ್ಬಾಲ್‌ ಆಟದ ಮೈದಾನದಷ್ಟಿದೆ. ಈ ಉತ್ಸವದಲ್ಲಿ 17,000 ಕಲಾವಿದರು, ಅನೇಕ ರಾಜ್ಯಗಳ ಮುಖ್ಯಸ್ಥರು, 100ಕ್ಕಿಂತಲೂ ಹೆಚ್ಚು ದೇಶಗಳ ಚಿಂತಕರು ಭಾಗವಹಿಸಲಿದ್ದು, ಎಲ್ಲರೂ ನ್ಯಾಷನಲ್ ಮಾಲ್‌ನಲ್ಲಿ ಸೇರಲಿದ್ದಾರೆ.

ಅರ್ಧ ಮಿಲಿಯನ್ ಜನರು ಈ ಉತ್ಸವದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಇದರಿಂದಾಗಿ ಈ ಉತ್ಸವವು ವ್ಯಾಪಕವಾದ ಜಾಗತಿಕ ಉತ್ಸವವಾಗಲಿದೆ. ಈ ಉತ್ಸವದಲ್ಲಿ 50 ಪ್ರದರ್ಶನಗಳು ನಡೆಯಲಿವೆ.

ಇದನ್ನೂ ಓದಿ | Raja Marga Column : ಸೆ. 27, ವಿಶ್ವ ಪ್ರವಾಸೋದ್ಯಮ ದಿನ; ನೀವು ಹೋಗಲೇಬೇಕಾದ ಭಾರತದ TOP 10 ತಾಣ

ವಿಶ್ವ ಸಾಂಸ್ಕೃತಿಕ ಉತ್ಸವದ ವಿಶೇಷತೆ

  • ಪಾರಂಪರಿಕ ಚೀನಾದ ಸಾಂಸ್ಕೃತಿಕ ಪ್ರದರ್ಶನ: ಇದರಲ್ಲಿ 1,000 ಹಾಡುಗಾರರು ಮತ್ತು ನರ್ತಕರು ಭಾಗವಹಿಸಲಿದ್ದಾರೆ.
  • 7,000 ನರ್ತಕರನ್ನೊಳಗೊಂಡ ಗಾರ್ಬಾ ನೃತ್ಯ ವೈಭವ.
  • ನೇರ ಸ್ವರಮೇಳದ ಸಹಿತ 700 ಭಾರತೀಯ ಶಾಸ್ತ್ರೀಯ ನರ್ತಕರು.
  • ಹಿಪ್ ಹಾಪ್‌ನ 50ನೇ ವರ್ಷದ ಸಂಭ್ರಮ, ಕುರ್ಟಿಸ್ ಬ್ಲೋ, ಎಸ್ ಹೆಚ್ ಎ- ರಾಕ್, ಸೀಕ್ವೆನ್ಸ್ ಗರ್ಲ್ಸ್, ಡಿಜೆಕೂಲ್ ಮತ್ತಿತರ ಹಿಪ್ ಹಾಪ್‌ನ ಖ್ಯಾತನಾಮರು. ಇವರೊಂದಿಗೆ , ಕಿಂಗ್ ಚಾರ್ಲ್ಸ್ ಹಾಗೂ ಕೆಲ್ಲಿ ಫಾರ್ಮನ್ ರವರಿಂದ ಸಂಯೋಜಿಸಲ್ಪಟ್ಟ ನೃತ್ಯ ಸಂಯೋಜನೆಯಲ್ಲಿ 100 ಬ್ರೇಕ್ ಡಾನ್ಸ್ ನ ನರ್ತಕರು ತಮ್ಮ ಚೊಚ್ಚಲ ಪ್ರದರ್ಶನವನ್ನು ನೀಡಲಿದ್ದಾರೆ.
  • ತಮ್ಮ ಪಾರಂಪರಿಕ ನೃತ್ಯವಾದ ಹೋಪಾಕ್ ನೃತ್ಯ ಪ್ರದರ್ಶನವನ್ನು ನೀಡಲಿರುವ 1000 ಯೂಕ್ರೇನ್ ನ ನರ್ತಕರು.
  • ಗ್ರ್ಯಾಮಿ ಪ್ರಶಸ್ತಿ ವಿಜೇತರಾದ ಮಿಕ್ಕಿ ಫ್ರೀ ಅವರ ನೇತೃತ್ವದಲ್ಲಿ 1000 ಗಿಟಾರ್ ವಾದ್ಯ.
  • ಬಾಬ್ ಮಾರ್ಲೆಯವರ ಖ್ಯಾತ ” ಒನ್ ಲವ್” ನ ಮರುಸೃಷ್ಟಿ ಅವರ ಮೊಮ್ಮಗ ಸ್ಕಿಪ್ ಮಾರ್ಲಿನ್ ಅವರಿಂದ.

ನ್ಯಾಷನಲ್ ಮಾಲ್‌ನಲ್ಲಿ 1963ಯಲ್ಲಿ, ಮಾರ್ಟಿನ್ ಲೂಥರ್ ಕಿಂಗ್ ತಮ್ಮ ಖ್ಯಾತ ” ಐ ಹ್ಯಾವ್‌ ಎ ಡ್ರೀಮ್” ಭಾಷಣವನ್ನು ನೀಡಿ, ಜಗತ್ತಿಗೆ ಸಮನ್ವಯತೆಯ, ಏಕತೆಯ ಸಂದೇಶವನ್ನು ಸಾರಿದರು. ಅದಕ್ಕಿಂತಲೂ ನೂರು ವರ್ಷಗಳ ಹಿಂದೆ (1893) ಚಿಕಾಗೋನಲ್ಲಿ ನಡೆದ ಪ್ರಥಮ ವಿಶ್ವ ಧಾರ್ಮಿಕ ಸಂಸತ್‌ನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಮಿಂಚಿನ ಭಾಷಣವನ್ನು ನೀಡಿ, ಸಭಿಕರನ್ನು ತಮ್ಮ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿದರು. ಜಗತ್ತಿನ ದೊಡ್ಡ ಧರ್ಮಗಳ ಪ್ರತಿನಿಧಿಗಳನ್ನು ಸಹೋದರ, ಸಹೋದರಿಯರೇ ಎಂದು ಕರೆದು, ಧಾರ್ಮಿಕ ದ್ವಂದ್ವತೆ ಅಸಹಿಷ್ಣುತೆಯನ್ನು ಕೊನೆಗಾಣಿಸಬೇಕೆಂಬ ಕರೆಯನ್ನು ನೀಡಿದರು.

ಅದೇ ರೀತಿ 2023ರ ಸೆ.29ರಂದು ನ್ಯಾಷನಲ್ ಮಾಲ್‌ನಲ್ಲಿ ಗುರುದೇವ್ ಶ್ರೀ ಶ್ರೀ ರವಿಶಂಕರರು ” ಒಂದೇ ಜಾಗತಿಕ ಕುಟುಂಬ” ದ ಫಲಕದಡಿ ಎಲ್ಲಾ ಗಡಿಗಳ, ಧರ್ಮಗಳ, ಪಂಥಗಳ, 180 ದೇಶಗಳ ಜನರನ್ನು ಒಗ್ಗೂಡಿಸಿ, ಎಲ್ಲರ ನಡುವೆಯೂ ಇರುವ ವಿಭನೆಗಳನ್ನು ಜೋಡಿಸುವ ಸೇತುವೆಯಾಗಲಿದ್ದಾರೆ.

ಆಹಾರದಂತಹ ಒಗ್ಗೂಡಿಸುವ ವಿಷಯ ಮತ್ತೊಂದಿಲ್ಲ. ಈ ಉತ್ಸವದಲ್ಲಿ ಜಗತ್ತಿನ ಎಲ್ಲೆಡೆಯ ಆಹಾರಗಳ ಮೇಳವೂ ನಡೆಯಲಿದೆ. ಈ ಉತ್ಸವದ ವಿಶೇಷತೆಯೆಂದರೆ, ಚಿಗುರುತ್ತಿರುವ ಕಲಾವಿದರಿಗೆ, ಪ್ರದರ್ಶಕರಿಗೆ, ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ನೀಡುತ್ತಿರುವುದು.

ಇದನ್ನೂ ಓದಿ | UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

ಉತ್ಸವದಲ್ಲಿ ಭಾಗವಹಿಸಲಿರುವ ಗಣ್ಯ ಭಾಷಣಕಾರರು

ವಿಶ್ವ ಸಂಸ್ಥೆಯ 8ನೇ ಪ್ರಧಾನ ಕಾರ್ಯದರ್ಶಿ ಎಚ್. ಇ. ಬಾನ್ ಕೀ ಮೂನ್, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್, ಅಮೆರಿಕದ ಸರ್ಜನ್ ಜನರಲ್ ಡಾ. ವಿವೇಕ್ ಮೂರ್ತಿ, ಯುಎಸ್‌ ಸಂಸದರಾದ ರಿಕ್ ಸ್ಕಾಟ್, ನಾನ್ಸಿ ಪೆಲೋಸಿ, ಭಾರತದ ಮಾಜಿ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

Continue Reading

ಕರ್ನಾಟಕ

NAVIKA Summit: ಭರ್ಜರಿಯಾಗಿ ನಡೆದ ನಾವಿಕ ವಿಶ್ವ ಕನ್ನಡ ಸಮಾವೇಶ; ಅನಿವಾಸಿಗಳ ಕನ್ನಡ ಪ್ರೇಮ ಶ್ಲಾಘಿಸಿದ ಶಿವಣ್ಣ

NAVIKA Summit: ಸೆಪ್ಟೆಂಬರ್ 1ರಿಂದ 3ರವರೆಗೆ ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್‌ನಲ್ಲಿ ಅದ್ಧೂರಿಯಾಗಿ ʼ7ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2023″ ನಡೆಯಿತು.

VISTARANEWS.COM


on

Actor shivarajkumar
Koo

| ಬೆಂಕಿ ಬಸಣ್ಣ, ನ್ಯೂಯಾರ್ಕ್
‘ಆನಂದ- ಅನುಭವ-ಅನುಬಂಧ’ ಎಂಬ ಟ್ಯಾಗ್‌ಲೈನ್ನೊಂದಿಗೆ ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್‌ನಲ್ಲಿ ಆಯೋಜಿಸಿದ್ದ ಮೂರು ದಿನಗಳ ʼ7ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2023″ (NAVIKA Summit) ಭಾನುವಾರ ಮುಕ್ತಾಯಗೊಂಡಿತು. ಈ ಮಹಾ ಸಮ್ಮೇಳನದಲ್ಲಿ ಅಮೆರಿಕದ ಮೂಲೆ ಮೂಲೆಗಳಿಂದ ಸುಮಾರು 3 ಸಾವಿರ ಜನರು ಭಾಗವಹಿಸಿದ್ದರು.

ಅರ್ಜುನ್ ಜನ್ಯ ಅವರ ಲೈವ್ ಸಂಗೀತ ಸಂಜೆಯಲ್ಲಿ ಕೊನೆಯ ದಿನ ಶಿವಣ್ಣ ಅವರು ಅಮೆರಿಕದಲ್ಲಿ ಹುಟ್ಟಿ ಬೆಳೆದ ಕನ್ನಡ ಮಕ್ಕಳ ಜತೆ ವೇದಿಕೆ ಮೇಲೆ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದರು. ಹ್ಯಾಟ್ರಿಕ್ ಹೀರೋ ಶಿವಣ್ಣ ಮತ್ತು ಅವರ ಪತ್ನಿ ಗೀತಾ ಅಮೆರಿಕದ ಕನ್ನಡಿಗರ ಮಾತೃ ಭಾಷೆಯ ಅಭಿಮಾನವನ್ನು ಮುಕ್ತಕಂಠದಿಂದ ಹೊಗಳಿದರು.

ಕರುನಾಡ ಚಕ್ರವರ್ತಿ, ಸ್ಯಾಂಡಲ್‌ವುಡ್ ಕಿಂಗ್, ಸೆಂಚುರಿ ಸ್ಟಾರ್, ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್‌ಕುಮಾರ್ ತಾವು ಮೊದಲನೇ ನಾವಿಕ ವಿಶ್ವ ಕನ್ನಡ ಸಮ್ಮೇಳನವನ್ನು 14 ವರ್ಷಗಳ ಹಿಂದೆ 2010ರಲ್ಲಿ ಲಾಸ್ ಎಂಜಲೀಸ್ ನಗರದಲ್ಲಿ ಭಾಗವಹಿಸಿದ್ದನ್ನು ತುಂಬು ಹೃದಯದಿಂದ ಸ್ಮರಿಸಿದರು. ನಾವಿಕ ಸಂಸ್ಥೆಯ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಿವಕುಮಾರ್ ಬೆಂಗಳೂರು ಅವರನ್ನು ಅಧ್ಯಕ್ಷ ಮಂಜುನಾಥ್ ರಾವ್ ವೇದಿಕೆ ಮೇಲೆ ಸನ್ಮಾನಿಸಿದರು.

ಕನ್ನಡ ಸಿನಿಮಾ ರಂಗದ ಪ್ರಸಿದ್ಧ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ತಂಡ ಪ್ರೈಮ್ ಟೈಮ್‌ನಲ್ಲಿ ಪ್ರದರ್ಶನ ಕೊಟ್ಟಿತು. ಖ್ಯಾತ ಹಿನ್ನೆಲೆ ಗಾಯಕರಾದ ವ್ಯಾಸರಾಜ ಸಾಸೋಲೆ, ಕೀರ್ತನ್ ಹೊಳ್ಳ, ಇಂದು ನಾಗರಾಜ್, ಐಶ್ವರ್ಯ ರಂಗ ರಾಜನ್, ಮುಂತಾದ ಗಾಯಕರು ಪ್ರೇಕ್ಷಕರನ್ನು ರಂಜಿಸಿದರು.

ಕರ್ನಾಟಕ ರಾಜ್ಯದ ಪ್ರತಿನಿಧಿಗಳಾಗಿ ಡಾ. ಎಸ್ ರಾಮಾನುಜ ಮತ್ತು ಮಹಮ್ಮದ್ ರಫೀ ಪಾಶ ಭಾಗವಹಿಸಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ರಾಮಯ್ಯನವರ ಸರ್ಕಾರದಿಂದ ಅನಿವಾಸಿ ಕನ್ನಡಿಗರಿಗೆ ಶುಭಾಶಯ ಮತ್ತು ಹೊಸ ಸರ್ಕಾರದಿಂದ ನಾವಿಕ ಸಂಸ್ಥೆಗೆ ಪ್ರೋತ್ಸಾಹ, ಸಹಕಾರ ಮತ್ತು ಬೆಂಬಲಗಳನ್ನು ಬೆಂಬಲಗಳನ್ನು ವ್ಯಕ್ತಪಡಿಸಿದರು.

ಆಸ್ಟಿನ್ ಕನ್ನಡ ಸಂಘದವರು ನಡೆಸಿಕೊಟ್ಟ ತುಳುನಾಡ ಐಸಿರಿ ಪ್ರಮುಖ ಆಕರ್ಷಣೆಗಳು ಒಂದಾಗಿತ್ತು. ಉತ್ತರ ಕರ್ನಾಟಕದ ಪ್ರಸಿದ್ಧ ಸಹೋದರರಾದ ಖಾನ್ ಬ್ರದರ್ಸ್ ಪ್ರೇಕ್ಷಕರನ್ನು ರಂಜಿಸಿದರು.”ಬೀಟ್ ಗುರೂಸ್ ” ಮ್ಯೂಸಿಕ್ ಬ್ಯಾಂಡ್ ವಿನೂತನ ರೀತಿಯಲ್ಲಿ ಪ್ರೇಕ್ಷಕರನ್ನು ರೋಮಾಂಚನಗೊಳಿಸಿತು. ಶನಿವಾರ ಸಂಜೆ ಪ್ರೈಮ್ ಶೋನಲ್ಲಿ ರಘು ದೀಕ್ಷಿತ್ ಪ್ರೇಕ್ಷಕರನ್ನು ಸಂಗೀತ ಲೋಕಕ್ಕೆ ತೆಗೆದುಕೊಂಡು ಹೋಗಿದ್ದರು.

Dance programme in Navika summit

ಈ ಸಮಾವೇಶದಲ್ಲಿ ಇನ್ವೆಸ್ಟ್ಮೆಂಟ್ ( Investment / ಹೂಡಿಕೆದಾರರ ) ಫೋರಮ್, ವುಮೆನ್ಸ್ ಫೋರಮ್, ಸಾಹಿತ್ಯ ಗೋಷ್ಠಿ, ಆಧ್ಯಾತ್ಮಿಕ ವೇದಿಕೆ, ವೈದ್ಯರ ಫೋರಮ್ , ಮೆರವಣಿಗೆ ಹೀಗೆ ಅನೇಕ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಸತತವಾಗಿ ನಡೆದವು. ಈ ಸಮಾವೇಶದಲ್ಲಿ ಅನಿವಾಸಿಯರು ಮಾತ್ರವಲ್ಲದೇ ಕರ್ನಾಟಕದ ಖ್ಯಾತನಾಮ ಕಲಾವಿದರಿಂದ ವೈವಿದ್ಯಮಯ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

ಈ ಮಹಾಸಮ್ಮೇಳನದ ಆಯೋಜನೆಯ ಜವಾಬ್ದಾರಿಯನ್ನು ಸಂಚಾಲಕರಾದ ಸದಾಶಿವ ಕಲ್ಲೂರ್ ನೂರಾರು ಸ್ವಯಂಸೇವಕರ ತಂಡಗಳನ್ನು ಕಟ್ಟಿ ಕಳೆದ ಆರು ತಿಂಗಳಿಂದ ತುಂಬಾ ಪರಿಶ್ರಮವಹಿಸಿ ತುಂಬಾ ಯಶಸ್ವಿಯಾಗಿ ನಡೆಸಿಕೊಟ್ಟರು. ಇವರಿಗೆ ಸಹ-ಸಂಚಾಲಕರಾದ ಹೂಸ್ಟನ್ ಕನ್ನಡ ಸಂಘದ ಅನು ಅಯ್ಯಂಗಾರ್, ಸ್ಯಾನ್ ಅಂಟೋನಿಯೋ ಕುವೆಂಪು ಕನ್ನಡ ಸಂಘದ ಕಾರ್ತಿಕ್ ಹುಲಿಕುಂಟೆ, ಡಲ್ಲಾಸ್ ಕನ್ನಡ ಬಳಗದ ಗೌರಿಶಂಕರ್ ಮತ್ತು ಆಸ್ಟಿನ್ ಕನ್ನಡ ಸಂಘದ ಪ್ರಕಾಶ್ ಉಡುಪ ಮುಂತಾದ ಲೀಡರ್‌ಗಳು ಹೆಗಲುಕೊಟ್ಟರು.

ಈ ಸಮಾವೇಶದಲ್ಲಿ ನೃತ್ಯ, ಸಂಗೀತ, ನಾಟಕ, ಫ್ಯಾಷನ್ ಶೋ , ಸ್ಟ್ಯಾಂಡ್-ಅಪ್ ಕಾಮಿಡಿ , ಮ್ಯಾಜಿಕ್ ಶೋ, ಗಾಲ್ಫ್ ಪಂದ್ಯಾವಳಿ, ಮೆರವಣಿಗೆ – ಹೀಗೆ ಹಲವಾರು ಕಾರ್ಯಕ್ರಮಗಳು ನಡೆದವು. ಕರ್ನಾಟಕದ ಪ್ರಖ್ಯಾತ ಯುವ ಸ್ಟಾಂಡ್ ಅಪ್ ಕಾಮಿಡಿಯನ್‌ಗಳಾದ ರಾಘವೇಂದ್ರ ಆಚಾರ್, ಕಾರ್ತಿಕ್ ಪತ್ತಾರ್ ಮತ್ತು ನಿರೂಪ್ ಪ್ರೇಕ್ಷಕರನ್ನು ಹೊಟ್ಟೆ ಹುಣ್ಣಾಗುವಂತೆ ನಗಿಸಿದರು.

ನಾವಿಕ ಮೆರವಣಿಗೆಯಲ್ಲಿ ಶಿವಣ್ಣ ದಂಪತಿ ಉತ್ಸಾಹದಿಂದ ಭಾಗವಹಿಸಿದ್ದರು. ಈ ಮೆರವಣಿಗೆಯಲ್ಲಿ
ಕರ್ನಾಟಕದ ವಿವಿಧ ಪ್ರದೇಶಗಳ ಚರಿತ್ರೆಯನ್ನು, ಪರಂಪರೆಯನ್ನು ಮೆರವಣಿಗೆಯಲ್ಲಿ ಪ್ರದರ್ಶಿಸಲಾಯಿತು. ನಾವಿಕ 2023 ಸಾಹಿತ್ಯ ವೇದಿಕೆಯು ಕನ್ನಡದ ಹೆಸರಾಂತ ಸಾಹಿತಿ ಡಾ. ಗಜಾನನ ಶರ್ಮ ಅವರೊಂದಿಗೆ ಮುಕ್ತ “ಸಂವಾದ” ವನ್ನು ಪ್ರಸ್ತುತ ಪಡಿಸಿತು.

Navika summit

ಈ ವಿಶ್ವ ಕನ್ನಡ ಸಮಾವೇಶದಲ್ಲಿ ರಂಗಸ್ಥಳ ನಾಟಕ, ನಾವಿಕ ಕೋಗಿಲೆ ಗಾಯನ ಸ್ಪರ್ಧೆ, ನೃತ್ಯೋತ್ಸವ ನೃತ್ಯ , ಶೃಂಗಾರ ಸಿರಿ ಫ್ಯಾಶನ್ ಶೋ ಈಗ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ಕರ್ನಾಟಕದ ಪ್ರಾದೇಶಿಕ ವೈವಿಧ್ಯಮಯ ಸವಿ ಭೋಜನವನ್ನು ಮೂರು ದಿನಗಳ ಕಾಲ ಸವಿದರು.

Continue Reading
Advertisement
Prajwal Revanna Case
ಕರ್ನಾಟಕ13 mins ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ28 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ36 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest50 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ2 hours ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ2 hours ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest3 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌