ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ? - Vistara News

ಪೆಟ್ರೋಲ್ ದರ

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರ ಎಷ್ಟಿದೆ?

ಕೇಂದ್ರ ಸರಕಾರ ಇತ್ತೀಚೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ತೈಲ ದರಗಳು ಇಳಿಕೆಯಾಗಿವೆ. ಹಾಗಾದರೆ ನಾನಾ ನಗರಗಳಲ್ಲಿ ಇವುಗಳ ದರ ತಿಳಿಯೋಣ

VISTARANEWS.COM


on

petrol pump
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕೇಂದ್ರ ಸರಕಾರ ಇತ್ತೀಚೆಗೆ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಬಳಿಕ ದೇಶಾದ್ಯಂತ ಇವುಗಳ ದರ ಇಳಿಕೆಯಾಗಿದೆ. ಹಾಗಾದರೆ ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಪ್ರತಿ ಲೀಟರ್‌ ಗೆ ಎಷ್ಟಿದೆ ಎನ್ನುವಿರಾ. ಇಲ್ಲಿದೆ ವಿವರ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಲೀಟರ್‌ಗೆ 101. 94 ರೂ. ಹಾಗೂ ಡೀಸೆಲ್‌ ದರ 87.89 ರೂ. ಇದೆ.

ಕಾಸರಗೋಡಿನಲ್ಲಿ ಪೆಟ್ರೋಲ್‌ ದರ 106.70 ರೂ. ಹಾಗೂ ಡೀಸೆಲ್‌ ದರ 95.60 ರೂ. ಇದೆ.

ಮುಂಬಯಿನಲ್ಲಿ ಪೆಟ್ರೋಲ್‌ ದರ 110.35 ರೂ. ಹಾಗೂ ಡೀಸೆಲ್‌ ದರ 97.28 ರೂ. ಇದೆ

ನವ ದೆಹಲಿಯಲ್ಲಿ ಪೆಟ್ರೋಲ್‌ ದರ 96. 72 ರೂ. ಹಾಗೂ ಡೀಸೆಲ್‌ ದರ 89.62 ರೂ. ಇದೆ.

ಕೋಲ್ಕೊತಾದಲ್ಲಿ ಪೆಟ್ರೋಲ್‌ ದರ 106.03 ರೂ. ಹಾಗೂ ಡೀಸೆಲ್‌ ದರ 92. 76 ರೂ. ಇದೆ.

ಚೆನ್ನೈನಲ್ಲಿ ಪೆಟ್ರೋಲ್‌ ದರ 102.63 ರೂ. ಹಾಗೂ ಡೀಸೆಲ್‌ ದರ 94.24 ರೂ. ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

VISTARANEWS.COM


on

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ 993 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ. ಇಂದಿನಿಂದ (ಮೇ.1) ರಿಂದ ಹೊಸ ದರ ಅನ್ವಯವಾಗಲಿದ್ದು, ಹೋಟೆಲ್‌, ರೆಸ್ಟೋರೆಂಟ್‌, ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 993 ರೂಪಾಯಿ ಹೆಚ್ಚಿಸಲಾಗಿದೆ. ಬೆಂಗಳೂರಿನಲ್ಲಿ ಈ ಹಿಂದೆ 2161 ರೂ ಇದ್ದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ಈಗ 3154 ರೂಪಾಯಿಗೆ ಏರಿದೆ. ಒಂದೇ ಬಾರಿ ಇಷ್ಟೊಂದು ಪ್ರಮಾಣದಲ್ಲಿ ಬೆಲೆ ಹೆಚ್ಚಳವಾಗಿರುವುದು ವ್ಯಾಪಾರ ವಲಯದಲ್ಲಿ ಆತಂಕ ಮೂಡಿಸಿದೆ. ಈ ಬೆಲೆ ಏರಿಕೆಯಿಂದಾಗಿ ಹೋಟೆಲ್‌ ಮತ್ತು ರೆಸ್ಟೋರೆಂಟ್‌ ಉದ್ಯಮಿಗಳಿಗೆ ಹೆಚ್ಚುವರಿ ವೆಚ್ಚದ ಒತ್ತಡ ಎದುರಾಗಲಿದೆ. ಈಗಾಗಲೇ ಹೆಚ್ಚುತ್ತಿರುವ ಇತರೆ ಖರ್ಚುಗಳ ನಡುವೆ ಈ ಏರಿಕೆ ಮತ್ತಷ್ಟು ಭಾರವಾಗಲಿದೆ ಎಂದು ವ್ಯಾಪಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಾಣಿಜ್ಯ ಸಿಲಿಂಡರ್‌ ಬೆಲೆ ಏರಿಕೆಯಿಂದ ಆಹಾರ ಪದಾರ್ಥಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ.

Continue Reading

ದೇಶ

Petrol Price Cut: ಪೆಟ್ರೋಲ್‌, ಡೀಸೆಲ್‌ ಬೆಲೆ ಲೀಟರಿಗೆ ₹2 ಇಳಿಕೆ; ಚುನಾವಣೆಗೂ ಮುನ್ನ ಸಿಹಿ ಸುದ್ದಿ ಕೊಟ್ಟ ಕೇಂದ್ರ

Petrol Price Cut: ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದವು.

VISTARANEWS.COM


on

Petrol, Diesel Price

ಹೊಸದಿಲ್ಲಿ: ಲೋಕಸಭೆ ಚುನಾವಣೆ (Lok Sabha Election 2024) ವೇಳಾಪಟ್ಟಿ ಘೋಷಣೆಗೂ ಮುನ್ನ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ (petrol price) ಮತ್ತು ಡೀಸೆಲ್ (Diesel Price) ಬೆಲೆಯನ್ನು ಲೀಟರ್‌ಗೆ 2 ರೂ.ಗಳಷ್ಟು ಇಳಿಕೆ (Price cut) ಮಾಡಿದೆ.

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬೆಲೆಗಳಲ್ಲಿ ಇತ್ತೀಚೆಗೆ ಕಡಿತ ಮಾಡಲಾಗಿತ್ತು. ಮುಂಬರುವ ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಬಹುದು ಎಂಬ ಊಹಾಪೋಹಗಳು ವ್ಯಾಪಕವಾಗಿದ್ದವು. ಅದು ಈಗ ನಿಜವಾಗಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಅಡುಗೆ ಅನಿಲದ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 100 ರೂಪಾಯಿ ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಈ ಬೆಲೆ ಇಳಿಕೆಯಿಂದ ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಅಡುಗೆ ಇಂಧನವಾಗಿ ಬಳಸುವ ಸುಮಾರು 33 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಿದೆ.

ಕಳೆದ ವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, “ಜಾಗತಿಕ ಇಂಧನ ಮಾರುಕಟ್ಟೆ, ಭೌಗೋಳಿಕ ರಾಜಕೀಯ ಸವಾಲುಗಳು ಮತ್ತು ಕಂಪನಿಗಳ ಆರ್ಥಿಕ ಆರೋಗ್ಯದ ಹಿನ್ನೆಲೆಯಲ್ಲಿ ಸ್ಥಿರತೆಯ ದೃಷ್ಟಿಯಿಂದ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (OMCಗಳು) ಪೆಟ್ರೋಲ್ ಮತ್ತು ಡೀಸೆಲ್ ಚಿಲ್ಲರೆ ಬೆಲೆಯಲ್ಲಿನ ಇಳಿಕೆ ಬಗ್ಗೆ ಯೋಚಿಸಬೇಕಾಗಿದೆ” ಎಂದು ಹೇಳಿದ್ದರು.

ತೈಲ ದರ ಇಳಿಕೆಯ ನಿರೀಕ್ಷೆ ಇತ್ತು:

ಲೋಕಸಭೆ ಚುನಾವಣೆ ಹಾಗೂ ವರ್ಷಾಂತ್ಯದಲ್ಲಿ ಹಲವು ರಾಜ್ಯಗಳಲ್ಲಿ ನಡೆಯುವ ವಿಧಾನಸಭೆ ಚುನಾವಣೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸಕಲ ರೀತಿಯಲ್ಲಿ ಸಜ್ಜಾಗುತ್ತಿದ್ದಾರೆ. ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 200 ರೂ. ಇಳಿಸಿತ್ತು. ಆ ಮೂಲಕ ಬಡವರು ಹಾಗೂ ಮಧ್ಯಮ ವರ್ಗದವರ ಹೊರೆಯನ್ನು ಕಡಿಮೆ ಮಾಡಿದೆ. ಇಷ್ಟೇ ಅಲ್ಲ, ಪೆಟ್ರೋಲ್‌ (Petrol Price Cut) ಸೇರಿ ಹಲವು ಉತ್ಪನ್ನಗಳ ಬೆಲೆಯನ್ನು ಇಳಿಕೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಇಳಿದಿರುವುದೂ ಪೆಟ್ರೋಲ್‌, ಡೀಸೆಲ್‌ ದರ ಇಳಿಸಲು ಪೂರಕ ವಾತಾವರಣ ಸೃಷ್ಟಿಸಿದೆ.

ದೇಶದಲ್ಲಿ ಎಲ್ಲಿಯೇ ಚುನಾವಣೆ ನಡೆದರೂ ಬೆಲೆಯೇರಿಕೆಯು ಪ್ರತಿಪಕ್ಷಗಳ ಅಸ್ತ್ರವಾಗಿದೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿದ್ದು ಇದಕ್ಕೆ ಕಾರಣವಾಗಿದೆ. ಹಾಗಾಗಿ, ಪ್ರತಿಪಕ್ಷಗಳ ಅಸ್ತ್ರದಿಂದ ತಪ್ಪಿಸಿಕೊಳ್ಳುವುದು ಹಾಗೂ ಜನರ ಹೊರೆ ಕಡಿಮೆ ಮಾಡುವ ಮೂಲಕ ಅವರ ವಿಶ್ವಾಸ ಗಳಿಸುವುದು ಕೇಂದ್ರದ ಉದ್ದೇಶವಾಗಿದೆ. ಹಾಗಾಗಿ, ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನೂ ಇಳಿಕೆ ಮಾಡಲಾಗಿದೆ.

ಕಿಸಾನ್‌ ಸಮ್ಮಾನ್‌ ನಿಧಿ ಹೆಚ್ಚಳ?

ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ ಅಡಿಯಲ್ಲಿ ದೇಶದ ಕೋಟ್ಯಂತರ ರೈತರಿಗೆ ವಾರ್ಷಿಕವಾಗಿ ನೀಡುವ 6 ಸಾವಿರ ರೂ. ಸಹಾಯಧನದ ಮೊತ್ತವನ್ನು ಹೆಚ್ಚಿಸುವ ಪ್ರಸ್ತಾಪವೂ ಕೇಂದ್ರ ಸರ್ಕಾರದ ಮುಂದಿದೆ. ಕಿಸಾನ್‌ ಸಮ್ಮಾನ್‌ ನಿಧಿಯನ್ನು ಹೆಚ್ಚಿಸುವ ಮೂಲಕ ಕೋಟ್ಯಂತರ ರೈತರ ಬೆಂಬಲ ಗಳಿಸುವುದು ಸರ್ಕಾರದ ತಂತ್ರವಾಗಿದೆ.

ಇದನ್ನೂ ಓದಿ: Fuel Price Cut: ಪೆಟ್ರೋಲ್‌, ಡೀಸೆಲ್ ಬೆಲೆ ಇಳಿಕೆ ಆಗುತ್ತಾ? ಕೇಂದ್ರದಿಂದ ಮಹತ್ವದ ಅಪ್‌ಡೇಟ್‌

Continue Reading

ದೇಶ

ಮಾತು ತಪ್ಪದ ಸಿಎಂ ಶಿಂಧೆ; ಮಹಾರಾಷ್ಟ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಕಡಿತ

ಮುಂಬೈನಲ್ಲಿ ಪೆಟ್ರೋಲ್‌ ಬೆಲೆ 111 ರೂಪಾಯಿ ಇತ್ತು. ಅದೀಗ 106.35ಕ್ಕೆ ಇಳಿಕೆಯಾಗಿದೆ. ಇದು ರಾಜ್ಯ ಸರ್ಕಾರಕ್ಕೆ ಹೊರೆಯಾದರೂ ಜನಾನುಕೂಲವೇ ನಮ್ಮ ಆದ್ಯತೆ ಎಂದು ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

VISTARANEWS.COM


on

Petrol rate hike in Pakistan by rs 10 per liter

ಮುಂಬೈ: ಮಹಾರಾಷ್ಟ್ರದ ನೂತನ ಸರ್ಕಾರ ಅಲ್ಲಿನ ಪ್ರಜೆಗಳಿಗೆ ಒಂದೊಳ್ಳೆ ಗಿಫ್ಟ್‌ ಕೊಟ್ಟಿದೆ. ಸಿಎಂ ಶಿಂಧೆ ಬಹುಮತ ಸಾಬೀತಾಗುತ್ತಿದ್ದಂತೆ ಮಾತೊಂದನ್ನು ಕೊಟ್ಟಿದ್ದರು. ಅದನ್ನೀಗ ಉಳಿಸಿಕೊಂಡಿದ್ದಾರೆ. ಅಂದು ವಿಧಾನಸಭೆಯಲ್ಲಿ ಮಾತನಾಡುತ್ತ ಪೆಟ್ರೋಲ್‌-ಡೀಸೆಲ್‌ ಮೇಲಿನ ತೆರಿಗೆ ಕಡಿಮೆ ಮಾಡುವುದಾಗಿ ಹೇಳಿದ್ದ ಅವರೀಗ ಅದನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ಮಹಾರಾಷ್ಟ್ರಲ್ಲಿ ಪೆಟ್ರೋಲ್‌-ಡೀಸೆಲ್‌ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಅದರ ಅನ್ವಯ ಇನ್ಮುಂದೆ ಪೆಟ್ರೋಲ್‌ ಬೆಲೆ ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್‌ ಬೆಲೆ ಲೀಟರ್‌ಗೆ 3 ರೂಪಾಯಿ ಕಡಿಮೆಯಾಗಿದೆ.

ಪೆಟ್ರೋಲ್‌ ಬೆಲೆ ಮುಂಬೈ ಮಹಾನಗರದಲ್ಲಿ ಕಳೆದ 11 ದಿನಗಳಿಂದ 111.35 ರೂಪಾಯಿ ಇತ್ತು. ಅದೀಗ ಲೀಟರ್‌ಗೆ 106.35ಕ್ಕೆ ಇಳಿದಿದೆ. ಹಾಗೇ ಡೀಸೆಲ್‌ ಬೆಲೆ 97.28 ರೂಪಾಯಿ ಇದ್ದಿದ್ದು, 94.28ಕ್ಕೆ ಇಳಿಕೆಯಾಗಿದೆ. ಈ ಮೂಲಕ ಜನರ ಮೇಲಿನ ಹೊರೆ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದೆ. ಶಿವಸೇನೆ-ಬಿಜೆಪಿಯ ನೂತನ ಮೈತ್ರಿ ಸರ್ಕಾರ ಜನಾನುಕೂಲಕರ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುತ್ತದೆ. ಅದರ ಭಾಗವಾಗಿಯೇ ಪೆಟ್ರೋಲ್‌-ಡೀಸೆಲ್‌ ಬೆಲೆ ಕಡಿತ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ತಿಳಿಸಿದ್ದಾರೆ.

ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್‌ ದರವೆಷ್ಟು?
ನವ ದೆಹಲಿ: ಪೆಟ್ರೋಲ್‌ 96.72 ರೂ.-ಡೀಸೆಲ್‌ 89.62 ರೂ.
ಮುಂಬೈ: ಪೆಟ್ರೋಲ್‌ 111.35 ರೂ. (ನಾಳೆಯಿಂದ 106.35 ರೂ.)- ಡೀಸೆಲ್‌ 97.28 ರೂ. (ನಾಳೆಯಿಂದ 94.28)
ಕೋಲ್ಕತ್ತಾ: ಪೆಟ್ರೋಲ್‌ 106.03 ರೂ.-ಡೀಸೆಲ್‌ 92.76 ರೂ.
ಚೆನ್ನೈ: ಪೆಟ್ರೋಲ್‌ 102.63 ರೂ.- ಡೀಸೆಲ್‌ 94.24 ರೂಪಾಯಿ.
ಗುವಾಹಟಿ: ಪೆಟ್ರೋಲ್‌ 96.48 ರೂ. -ಡೀಸೆಲ್‌ 84.37 ರೂ.
ಬೆಂಗಳೂರು: ಪೆಟ್ರೋಲ್‌ 101.94 ರೂ.-ಡೀಸೆಲ್‌ 87.89 ರೂ.

ಇದನ್ನೂ ಓದಿ: ಇನ್ನು ಐದು ವರ್ಷದಲ್ಲಿ ದೇಶದಲ್ಲಿ ಪೆಟ್ರೋಲ್‌ ಬ್ಯಾನ್‌ ಆಗುತ್ತಾ? ನಿತಿನ್‌ ಗಡ್ಕರಿ ಹೇಳಿದ್ದೇನು?

Continue Reading

ಕ್ರೈಂ

ಲಷ್ಕರೆ ಉಗ್ರ ತಾಲಿಬ್‌ ಹುಸೇನ್ ಐಟಿ ಸೆಲ್‌ ಚೀಫ್‌ ಅಲ್ಲ,‌ ನಮಗೆ ಸಂಬಂಧವೇ ಇಲ್ಲ ಎಂದ ಬಿಜೆಪಿ

ಪಾಕಿಸ್ತಾನದ ಲಷ್ಕರೆ ತಯ್ಬಾ ಸಂಘಟನೆ ಜತೆ ಸಂಬಂಧ ಹೊಂದಿರುವ ಉಗ್ರ ತಾಲಿಬ್‌ ಹುಸೇನ್‌ಗೂ ಪಕ್ಷಕ್ಕೂ ಸಂಬಂಧವೇ ಇಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

VISTARANEWS.COM


on

Talib hussain

ನವ ದೆಹಲಿ: ಅಮರನಾಥ ಯಾತ್ರೆ ಮೇಲೆ ದಾಳಿ ಮಾಡಲು ಸಂಚು ಮಾಡುತ್ತಿದ್ದ, ಪಾಕಿಸ್ತಾನದ ಲಷ್ಕರೆ ತಯ್ಬಾ ಸಂಘಟನೆಗೆ ಸೇರಿದ ಉಗ್ರ ತಾಲಿಬ್‌ ಹುಸೇನ್‌ ಶಾಗೆ ಬಿಜೆಪಿ ಜತೆ ಸಂಬಂಧವಿದೆ ಎಂಬ ಅಂಶದ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ನಡುವೆಯೇ ಪಕ್ಷ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾಗಿದೆ.

ತಾಲಿಬ್‌ ಹುಸೇನ್‌ ಕಾಶ್ಮೀರದ ಐಟಿ ಸೆಲ್‌ ಮುಖ್ಯಸ್ಥನಾಗಿದ್ದ ಎಂಬ ಆರೋಪವನ್ನು ಬಲವಾಗಿ ತಳ್ಳಿ ಹಾಕಿರುವ ಬಿಜೆಪಿ, ಅವನು ಐಟಿ ಸೆಲ್‌ ಮುಖ್ಯಸ್ಥನಾಗಿರಲಿಲ್ಲ ಮತ್ತು ಅವನಿಗೂ ಪಕ್ಷಕ್ಕೂ ಸಂಬಂಧವೇ ಇಲ್ಲ ಎಂದು ವಾದಿಸಿದೆ. ಈ ಬಗ್ಗೆ ಎನ್‌ಐಎ ತನಿಖೆ ನಡೆಸಿ ಎಲ್ಲ ಸತ್ಯಾಂಶಗಳನ್ನು ಬಯಲಿಗೆ ತರಬೇಕು ಎಂದು ಒತ್ತಾಯಿಸಿದೆ.

ಕಾಶ್ಮೀರದ ರಜೌರಿ ಜಿಲ್ಲೆಯ ತಾಲಿಬ್‌ ಹುಸೇನ್‌ ಮತ್ತು ಪುಲ್ವಾಮಾ ಜಿಲ್ಲೆಯ ಫೈಜಲ್‌ ಅಹಮದ್‌ ಎಂಬಿಬ್ಬರನ್ನು ಭದ್ರತಾ ಪಡೆಗಳ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಜುಲೈ ೫ರಂದು ಬಂಧಿಸಿದ್ದು. ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯ ಟುಕ್ಸನ್‌ ಧೋಕ್‌ ಗ್ರಾಮದಲ್ಲಿ ಬಂಧಿತರಾದ ಅವರಿಂದ ಎರಡು ಎ.ಕೆ. ರೈಫಲ್‌ಗಳು, ಏಳು ಗ್ರೆನೇಡ್‌ಗಳು, ಒಂದು ಪಿಸ್ತೂಲನ್ನು ವಶಕ್ಕೆ ಪಡೆಯಲಾಗಿತ್ತು. ತಾಲಿಬ್‌ ಹುಸೇನ್‌ ಒಬ್ಬ ಘೋಷಿತ ಅಪರಾಧಿಯಾಗಿದ್ದು, ಆತನ ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡುವವರಿಗೆ ಬಹುಮಾನ ಘೋಷಿಸಲಾಗಿತ್ತು. ಹುಸೇನ್‌ಗೆ ಲಷ್ಕರ್‌ಗೆ ಸಂಘಟನೆ ಜತೆ ಸಂಬಂಧವಿರುವುದು ಮಾತ್ರವಲ್ಲ, ಉಗ್ರ ಸಂಘಟನೆ ಆತನಿಗೆ ಡ್ರೋನ್‌ ಮೂಲಕ ಶಸ್ತ್ರಾಸ್ತ್ರಗಳನ್ನು ಒದಗಿಸಿತ್ತು ಎಂದು ಹೇಳಲಾಗಿದೆ.

ಐಟಿ ಸೆಲ್‌ ಮುಖ್ಯಸ್ಥನೇ?
ಇಂಥ ಉಗ್ರಗಾಮಿಯೊಬ್ಬ ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕದ ಸದಸ್ಯನೆಂಬ ಮಾಹಿತಿ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. ಅತ ಜಮ್ಮು ಪ್ರಾಂತ್ಯದ ಅಲ್ಪಸಂಖ್ಯಾತ ಮೋರ್ಚಾದ ಉಸ್ತುವಾರಿಯಾಗಿದ್ದ ಮತ್ತು ಐಟಿ ಹಾಗೂ ಸೋಷಿಯಲ್‌ ಮೀಡಿಯಾ ಸೆಲ್‌ನ್ನೂ ನೋಡಿಕೊಳ್ಳುತ್ತಿದ್ದ ಎಂಬ ಸುದ್ದಿ ಹರಡಿತ್ತು.

ಬಿಜೆಪಿ ಕೂಡಾ ಒಪ್ಪಿಕೊಂಡಿತ್ತು
ಒಂದು ಹಂತದಲ್ಲಿ ಹುಸೇನಿ ಬಿಜೆಪಿ ಸದಸ್ಯನಾಗಿದ್ದ ಎಂದು ಬಿಜೆಪಿ ಕೂಡಾ ಆರಂಭದಲ್ಲಿ ಒಪ್ಪಿಕೊಂಡಿತ್ತು. ಆದರೆ, ಬಳಿಕ ಆತ ಕೇವಲ ೧೮ ದಿನಗಳ ಕಾಲ ಸದಸ್ಯನಾಗಿದ್ದ. ಮೇ ತಿಂಗಳಲ್ಲಿ ರಾಜೀನಾಮೆ ಕೊಟ್ಟಿದ್ದಾನೆ ಎಂದು ಹೇಳಿತು. ಆದರೆ, ಅವನಿಗೆ ಪಕ್ಷದಲ್ಲಿ ಯಾವುದೇ ಜವಾಬ್ದಾರಿ ಇರಲಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಮುಖ್ಯಸ್ಥ ರವೀಂದ್ರ ರೈನಾ ಸ್ಪಷ್ಟಪಡಿಸಿದ್ದರು. ತಾಲಿಬ್‌ ಹುಸೇನ್‌ ಪಕ್ಷದ ಸದಸ್ಯನೇ ಆಗಿರಲಿಲ್ಲ. ಅವನು ಪತ್ರಕರ್ತನ ಸೋಗಿನಲ್ಲಿ ಬಿಜೆಪಿ ಕಚೇರಿಗೆ ಬರುತ್ತಿದ್ದರು ಎಂದು ರೈನಾ ಹೇಳಿಕೊಂಡಿದ್ದಾರೆ.

ಬಿಜೆಪಿ ನಾಯಕರೇ ಹಿಟ್‌ ಲಿಸ್ಟಲ್ಲಿದ್ದರು!

ತಾಲಿಬ್‌ ಹುಸೇನ್‌ನ ಹಿಟ್‌ ಲಿಸ್ಟ್‌ನಲ್ಲಿ ಬಿಜೆಪಿ ನಾಯಕರು ಇದ್ದರು. ಅವನು ನನ್ನ ಕಚೇರಿಗೆ ಬಂದು ವಿಡಿಯೊ ಮಾಡಿದ್ದ. ಅವುಗಳನ್ನು ಪಾಕಿಸ್ತಾನದ ಉಗ್ರ ಸಂಘಟನೆಗಳಿಗೆ ಕಳುಹಿಸಿದ್ದ. ಪತ್ರಕರ್ತನೆಂದು ಹೇಳಿಕೊಂಡು ಬಿಜೆಪಿ ನಾಯಕರನ್ನು ಭೇಟಿಯಾಗುತ್ತಿದ್ದ ಎನ್ನುವುದು ರವೀಂದ್ರ ರೈನಾ ನೀಡುವ ವಿವರಣೆ.

ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಗೆ ನೋಟಿಸ್‌
ಈ ನಡುವೆ, ತಾಲಿಬ್‌ ಹುಸೇನ್‌ನನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿರುವ ವಿವಾದಕ್ಕೆ ಸಂಬಂಧಿಸಿ ೪೮ ಗಂಟೆಗಳ ಒಳಗೆ ವಿವರ ನೀಡುವಂತೆ ಜಮ್ಮು ಮತ್ತು ಕಾಶ್ಮೀರದ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಶೇಖ್‌ ಬಶೀರ್‌ ಅವರಿಗೆ ರೈನಾ ಶೋಕಾಸ್‌ ನೋಟಿಸ್‌ ನೀಡಿದ್ದಾರೆ. ʻʻಅವರಿಗೆ ಯಾರನ್ನೇ ಅದರೂ ನೇಮಕ ಮಾಡಿಕೊಳ್ಳಲು ಅಧಿಕಾರವಿಲ್ಲ. ಪ್ರತಿಯೊಂದು ನೇಮಕವನ್ನೂ ಪಕ್ಷದ ಅಧ್ಯಕ್ಷರೇ ನಡೆಸಬೇಕುʼʼ ಎಂದು ರೈನಾ ಹೇಳಿದ್ದಾರೆ.

ಇದನ್ನೂ ಓದಿ| ಅಮರನಾಥ ಯಾತ್ರಿಕರ ಮೇಲೆ ದಾಳಿಗೆ ಸ್ಕೆಚ್‌, ಇಬ್ಬರು ಮೋಸ್ಟ್‌ ವಾಂಟೆಡ್‌ ಉಗ್ರರು ಅರೆಸ್ಟ್, ಒಬ್ಬ I love NAMO ಎಂದಿದ್ದ!

Continue Reading
Advertisement
Latest2 hours ago

ಟೀಮ್‌ ಇಂಡಿಯಾಗೆ ವೈಭವ್‌ ಸೂರ್ಯವಂಶಿ ಎಂಟ್ರಿ

Latest4 hours ago

ಸಿಇಟಿ ಫಲಿತಾಂಶ ಪ್ರಕಟ

ಅವಿಭಾಗೀಕೃತ6 hours ago

ರಾಮಲಿಂಗಾರೆಡ್ಡಿ ರಾಜೀನಾಮೆ ಕಗ್ಗಂಟಿಗೆ ತೆರೆ? ಸುರ್ಜೇವಾಲಾ ಮಾತುಕತೆ ಯಶಸ್ವಿ?

Latest1 day ago

ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

Latest1 day ago

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

Latest1 day ago

ರಾಹುಲ್ ಗಾಂಧಿ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

Latest1 day ago

ಖಾತೆ ಹಂಚಿಕೆ ಬಗ್ಗೆ ಮುನಿಯಪ್ಪ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಚಿಂತನೆ?

Latest1 day ago

ರಾಮಲಿಂಗಾ ರೆಡ್ಡಿ ರಾಜೀನಾಮೆ ಕಾಂಗ್ರೆಸ್ ಒಳಜಗಳದ ಪರಿಣಾಮ: ವಿಜಯೇಂದ್ರ ವಾಗ್ದಾಳಿ

Latest1 day ago

ಅಣ್ಣಾಮಲೈ ರಾಜೀನಾಮೆ ಸ್ವೀಕಾರ : ಹೊಸ ಪಕ್ಷ ಘೋಷಣೆ ಕುರಿತು ಇಂದು ಮಹತ್ವದ ಸುದ್ದಿಗೋಷ್ಠಿ

Latest1 day ago

ರಾಜ್ಯಸಭಾ ಚುನಾವಣೆಗೆ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಲಿರುವ ಮಲ್ಲಿಕಾರ್ಜುನ ಖರ್ಗೆ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌