ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly elections 2023) 135 ಸ್ಥಾನಗಳನ್ನು ಗೆಲ್ಲುವ ಮೂಲಕ ಪೂರ್ಣ ಬಹುಮತದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರಕ್ಕೆ ಇಂದಿಗೆ ನೂರು ದಿನ. ಗ್ಯಾರಂಟಿ ಯೋಜನೆಗಳ (Congress Guarantee Scheme) ಮೂಲಕ ಜನಮನ ಗೆದ್ದಿರುವ ಈ ಸರ್ಕಾರದ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಗ್ಯಾರಂಟಿಯ ಜತೆ ಜತೆಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೂ ತಾವು ಬದ್ಧ ಎಂದು ಹೇಳಿದ್ದಾರೆ. ಅಲ್ಲದೆ, ಜನತೆಗೆ ಧನ್ಯವಾದವನ್ನು ಅರ್ಪಿಸಿದ್ದಾರೆ.
ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಜನರು ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ: Honour killing : ಕೋಲಾರದಲ್ಲಿ ಮರ್ಯಾದಾ ಹತ್ಯೆ; ಅನ್ಯಕೋಮಿನ ಯುವಕನ ಪ್ರೀತಿಸಿದ ಮಗಳನ್ನು ಹೂತುಹಾಕಿದರು!
ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಖುಷಿಯನ್ನು ಹಂಚಿಕೊಂಡಿದ್ದಾರೆ.
ಸಿಎಂ ಟ್ವೀಟ್‌ನಲ್ಲೇನಿದೆ?
“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ " 100 ದಿನಗಳು" ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ… pic.twitter.com/6V6SULrXFI
— Siddaramaiah (@siddaramaiah) August 27, 2023
ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜತೆಜತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕದ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.
ಇದನ್ನೂ ಓದಿ: Weather report : ಉತ್ತರ ಒಳನಾಡಿನಲ್ಲಿಂದು ಸುರಿಯಲಿದೆ ಮಳೆ; ಬೆಂಗಳೂರಲ್ಲಿ ಹೇಗೆ?
ಗ್ಯಾರಂಟಿ ಯೋಜನೆಗೆ ಸಿಎಂ ಅಭಯ
ಈ ಮೂಲಕ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಭಯ ಬೇಡ. ಅದರ ಜತೆಯಲ್ಲಿ ಅಭಿವೃದ್ಧಿ ಯೋಜನೆಗಳನ್ನೂ ಸಹ ತಮ್ಮ ಸರ್ಕಾರ ಮಾಡಿಕೊಂಡು ಹೋಗಲಿದೆ ಎಂಬ ಭರವಸೆಯನ್ನು ಸಿಎಂ ಸಿದ್ದರಾಮಯ್ಯ ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ. ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪಿಸುವ ಕಾರ್ಯವನ್ನು ಮಾಡುವುದರೊಂದಿಗೆ ಸಮಾನತೆಯ ಸರ್ಕಾರವನ್ನು ಮುನ್ನಡೆಸುವುದಾಗಿ ತಿಳಿಸಿದ್ದಾರೆ.