ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಎರಡನೇ ಸಿಎಂ ಜನಸ್ಪಂದನ (CM Janaspandana) ಕಾರ್ಯಕ್ರಮಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ. ರಾಜ್ಯದ ಮೂಲೆ ಮೂಲೆಯಿಂದ ಜನಸಾಗರವೇ ಹರಿದುಬಂದಿದೆ. ಬೆಳಗ್ಗೆ 11 ಗಂಟೆಯಿಂದಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ನಾಗರಿಕರ ಅಹವಾಲುಗಳನ್ನು ಆಲಿಸಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎರಡನೇ ಜನಸ್ಪಂದನವಾಗಿದ್ದು, ಒಟ್ಟು 12372 ಅರ್ಜಿಗಳನ್ನು ಸ್ವೀಕಾರ ಮಾಡಲಾಗಿದೆ.
ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿವೆ. ಹೀಗಾಗಿ ಪ್ರಸ್ತುತ ಒಟ್ಟು 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ ಎಂದು ಸಿಎಂ ಕಾರ್ಯಾಲಯ ತಿಳಿಸಿದೆ.
ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು
ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 ಅರ್ಜಿಗಳು ಸಲ್ಲಿಕೆಯಾಗಿವೆ.
ಈ ಐದು ಇಲಾಖೆಗಳಲ್ಲಿ ಯಾವುದೇ ಅರ್ಜಿ ಸ್ವೀಕಾರ ಆಗಿಲ್ಲ
ಸಂಸದೀಯ ವ್ಯವಹಾರಗಳು ಹಾಗೂ ಶಾಸನ ರಚನೆ ಇಲಾಖೆ, ಮುಖ್ಯ ಕಾರ್ಯದರ್ಶಿಗಳ ಕಾರ್ಯಾಲಯ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ- ಆಡಳಿತ) ಮುಖ್ಯಮಂತ್ರಿಗಳ ಕಾರ್ಯಾಲಯ, ಸಂಸದೀಯ ವ್ಯವಹಾರಗಳ ಇಲಾಖೆಗಳಿಗೆ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ. ಬಾಕಿ ಅರ್ಜಿಗಳನ್ನು ಒಂದು ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ
ಇಂದಿನ ಜನಸ್ಪಂದನೆಯಲ್ಲಿ ಒಟ್ಟು 20 ಸಾವಿರ ಮಂದಿ ಭಾಗಿಯಾಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆಹರಿಸುತ್ತಾರೆ. ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಎರಡನೇ ಜನಸ್ಪಂದನದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ. ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ ಶೇ. 98ರಷ್ಟಕ್ಕೆ ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೇಲೆ ಈ ಜವಾಬ್ದಾರಿ ಹೆಚ್ಚು ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ
ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಗಣಿಸಿ ಎಂದು ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಸೂಚನೆ ನೀಡಿದರು.
ಇದನ್ನೂ ಓದಿ: CM Siddaramaiah: ಹೌದು Mr Modi, ಇದು ನಿಮ್ದೇ ಓದಿ! ಕೇಂದ್ರದ ವಿರುದ್ಧ ಸರಣಿ ಪೋಸ್ಟ್ ಹಾಕಿದ ಸಿಎಂ ಸಿದ್ದರಾಮಯ್ಯ
ಅಗೌರವ ತೋರಿದರೆ ಅಧಿಕಾರಿಗಳ ಮೇಲೆ ಕ್ರಮ
ಜನರಿಗೆ ಸ್ಪಂದಿಸದೆ ಅವರಿಗೆ ಅಗೌರವ ತಂದರೆ ಅಂತಹ ಅಧಿಕಾರಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ. ಯಾರು ಕೂಡ ಸಂಶಯ, ಚಿಂತೆ, ಆತಂಕ ಪಡಬೇಕಿಲ್ಲ. ನೀವು ಕೊಟ್ಟ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಸಾರ್ವಜನಿಕರಿಗೆ ಎಲ್ಲ ಭರವಸೆಗಳನ್ನು ಈಡೇರಿಸುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.
ಸ್ವೀಕೃತವಾದ ಅರ್ಜಿಗಳ ಇಲಾಖಾವಾರು ವಿವರ
ಹಿಂದುಳಿದ ವರ್ಗಗಳ ಇಲಾಖೆ – 543
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಆಡಳಿತ ಸುಧಾರಣೆ) – 5
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ( ಇ. ಆಡಳಿತ) – 0
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ 60
ಸಾರ್ವಜನಿಕ ಉದ್ದಿಮೆಗಳ ಇಲಾಖೆ – 0
ಸಾರಿಗೆ ಇಲಾಖೆ – 163
ಸಹಕಾರ ಇಲಾಖೆ – 138
ಸಮಾಜ ಕಲ್ಯಾಣ 870
ಸಣ್ಣ ನೀರಾವರಿ ಇಲಾಖೆ – 37
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ – 670
ವೈದ್ಯಕೀಯ ಶಿಕ್ಷಣ ಇಲಾಖೆ – 68
ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ -05
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ – 11
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ – 217
ವಸತಿ ಇಲಾಖೆ – 1500
ಲೋಕೋಪಯೋಗಿ ಇಲಾಖೆ – 62
ಯೋಜನೆ , ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ – 04
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ – 18
ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ – 06
ಮುಖ್ಯ ಕಾರ್ಯದರ್ಶಿ ಯವರ ಕಚೇರಿ – 01
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 903
ಪ್ರವಾಸೋದ್ಯಮ ಇಲಾಖೆ – 22
ಪಶುಸಂಗೋಪನಾ ಮತ್ತು ಮೀನುಗಾರಿಕೆ ಇಲಾಖೆ – 144
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ – 88
ನಗರಾಭಿವೃದ್ಧಿ ಇಲಾಖೆ -600
ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ 67
ಜಲ ಸಂಪನ್ಮೂಲ ಇಲಾಖೆ – 143
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ – 520
ಗೃಹ ಇಲಾಖೆ – 384
ಕೌಶಲ್ಯ ಅಭಿವೃದ್ಧಿ, ಉದ್ಯಮ ಶೀಲತೆ.ಮತ್ತು ಜೀವನೋಪಾಯ ಇಲಾಖೆ – 256
ಕೃಷಿ ಇಲಾಖೆ – 88
ಕಾರ್ಮಿಕ ಇಲಾಖೆ – 64
ಕಾನೂನು ಇಲಾಖೆ – 17
ಕನ್ನಡ ಮತ್ತು ಸಂಸ್ಕೃತಿ ಇಲಾಖೆ – 49
ಕಂದಾಯ ಇಲಾಖೆ – 3150
ಉನ್ನತ ಶಿಕ್ಷಣ ಇಲಾಖೆ – 185
ಇಂಧನ ಇಲಾಖೆ – 250
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ – 280
ಆರ್ಥಿಕ ಇಲಾಖೆ – 81
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ- 280
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ – 106
ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ – 120
(ಇದು ಸಂಜೆ 5:30 ವರೆಗಿನ ಅಂಕಿ ಅಂಶ ಆಧಾರಿತ)