Site icon Vistara News

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

40 per cent commission advertisement against BJP and Summons to CM Siddaramaiah and DCM DK Shivakumar

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್​ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್ ನೀಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂ. 1ಕ್ಕೆ ಹಾಜರಾಗಲು ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಬಿಜೆಪಿಗೆ ಡ್ಯಾಮೇಜ್‌ ಮಾಡಿದ್ದ 40 ಪರ್ಸೆಂಟ್‌ ಅಭಿಯಾನ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌ ಆಗಿತ್ತು. ಈ ಸಂಬಂಧ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್‌ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗ ಪ್ರತಿಕ್ರಿಯೆ ನೀಡಿದ್ದು, ವಕೀಲರು ಸೂಕ್ತ ಉತ್ತರ ನೀಡಲಿದ್ದಾರೆ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

Exit mobile version