Site icon Vistara News

40 percent commission: ಸಿಎಂಗೆ ಕೋರ್ಟ್‌ ಸಮನ್ಸ್;‌ ಜಾಹೀರಾತು ಕೊಟ್ಟರೆ ಮಾನನಷ್ಟ ಆಗಲ್ಲ: ವಕೀಲರು ಉತ್ತರಿಸುತ್ತಾರೆಂದ ಸಿದ್ದರಾಮಯ್ಯ

Siddaramaiah

karnataka government transfers animal husbandry department Land To Department of Minority Welfare

ಹಾಸನ: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯ ಸಮನ್ಸ್​ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನು ನಮ್ಮ ವಕೀಲರು ನೋಡಿಕೊಳ್ಳುತ್ತಾರೆ. ಅವರು ಸಮರ್ಪಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ‌ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಿದರೆ, ಪ್ರತಿಭಟನೆ ಜಾಹೀರಾತು ಕೊಟ್ಟರೆ ಅದು ಮಾನನಷ್ಟ ಮೊಕದ್ದಮೆ ಆಗುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಏನಿದು ಪ್ರಕರಣ? ಯಾರು ಯಾರಿಗೆ ಸಮನ್ಸ್‌ ಜಾರಿ?

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಕಮಿಷನ್ ಆರೋಪ ಮಾಡಿದ್ದ ಕಾಂಗ್ರೆಸ್‌ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿವಿ ಸೇರಿದಂತೆ ಮಾಧ್ಯಮಗಳಲ್ಲಿ ಈ ಕುರಿತು ಜಾಹೀರಾತು ನೀಡಿತ್ತು. ಈಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ (Rahul Gandhi), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah), ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ (DK Shivakumar) ಅವರಿಗೆ ಕೋರ್ಟ್​ ಸಮನ್ಸ್​ ಜಾರಿ ಮಾಡಿದ್ದು, ಖುದ್ದು ಹಾಜರಾಗುವಂತೆ ಸೂಚಿಸಿದೆ.

ವಿಧಾನಸಭೆ ಚುನಾವಣೆ ವೇಳೆ ರಾಜ್ಯ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಆರೋಪ ಮಾಡಿತ್ತು. ಅಲ್ಲದೆ, ಈ ಸಂಬಂಧ ಜಾಹೀರಾತನ್ನು ಸಹ ನೀಡಿತ್ತು. ಹೀಗಾಗಿ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದಾರೆಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಖಾಸಗಿ ದೂರು ನೀಡಿತ್ತು. ಈ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಮಾರ್ಚ್ 28ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿ ಮಾಡಲಾಗಿದೆ.

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಈ ಸಂಬಂಧ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: medical negligence: ನವಜಾತ ಶಿಶುವನ್ನು ಬಿಸಿನೀರಲ್ಲಿ ಮುಳುಗಿಸಿ ಚರ್ಮ ಕಾಯಿಲೆ ಕಥೆ ಕಟ್ಟಿದ್ದ ಆಸ್ಪತ್ರೆಗೆ 10 ಲಕ್ಷ ದಂಡ!

ಬಿಜೆಪಿಗೆ ಡ್ಯಾಮೇಜ್‌ ಮಾಡಿದ್ದ 40 ಪರ್ಸೆಂಟ್‌ ಅಭಿಯಾನ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌ ಆಗಿತ್ತು. ಈ ಸಂಬಂಧ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್‌ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗ ಪ್ರತಿಕ್ರಿಯೆ ನೀಡಿದ್ದು, ವಕೀಲರು ಸೂಕ್ತ ಉತ್ತರ ನೀಡಲಿದ್ದಾರೆ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

Exit mobile version