8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು - Vistara News

ರಾಜಕೀಯ

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಹೊಸ ಸರ್ಕಾರವು ಶೀಘ್ರದಲ್ಲೇ 8 ನೇ ವೇತನ ಆಯೋಗದ (8th Pay Commission) ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

VISTARANEWS.COM


on

8th Pay Commission
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದ 3.0 ಸರ್ಕಾರ ರಚನೆಯಾಗಿದ್ದು, ಸಂಪುಟ ಸಚಿವರು (Cabinet Ministers) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೊಸದಾಗಿ ರಚನೆಯಾಗಿರುವ ಸರಕಾರದಿಂದ ಈಗ 8ನೇ ವೇತನ ಆಯೋಗ (8th Pay Commission) ರಚನೆ ಸೇರಿದಂತೆ ಹಲವಾರು ನಿರೀಕ್ಷೆಗಳಿವೆ.

ಹೊಸ ಸರ್ಕಾರವು ಶೀಘ್ರದಲ್ಲೇ 8ನೇ ವೇತನ ಆಯೋಗದ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಅನುಕೂಲ

ಸರ್ಕಾರಿ ಸಿಬ್ಬಂದಿಯ ವೇತನ ಹೆಚ್ಚಳಕ್ಕೆ ಸಂಬಂಧಿಸಿ 8ನೇ ವೇತನ ಆಯೋಗವು ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಇದು ಜಾರಿಯಾದರೆ ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಹಿಂದೆ ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಹೊಸ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುತ್ತಿತ್ತು. 7ನೇ ವೇತನ ಆಯೋಗವು ಜನವರಿ 2016ರಲ್ಲಿ ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ 8 ನೇ ವೇತನ ಆಯೋಗವು ಜನವರಿ 2026ರಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಮುಂದಿನ 8ನೇ ವೇತನ ಆಯೋಗ 2025ರಲ್ಲೇ ರಚನೆಯಾಗಬೇಕು. ಇದು ನಡೆದರೆ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬುದು ತಜ್ಞರ ಅಭಿಪ್ರಾಯ.

ಹಲವು ಬದಲಾವಣೆ

8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಅಂಶ ಸೇರಿದಂತೆ ಹಲವು ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ಫಿಟ್‌ಮೆಂಟ್ ಅಂಶವೆಂದರೆ ಹಿಂದಿನ ವೇತನದಿಂದ ವೇತನ ಪರಿಷ್ಕೃರಣೆ ಮಾಡಲು ಪರಿಷ್ಕೃತ ವೇತನದ ಲೆಕ್ಕಾಚಾರ ನಡೆಸಲು ವೇತನ ಆಯೋಗವು ಸೂಚಿಸುವ ನಿರ್ದಿಷ್ಟ ಮೌಲ್ಯವಾಗಿದೆ. ಇದು ಒಂದು ವಿಶಿಷ್ಟ ಅಂಶದ ಮೂಲಕ ಮೂಲ ವೇತನದಲ್ಲಿನ ಪರಿಷ್ಕರಣೆಯನ್ನು ಸೂಚಿಸುತ್ತದೆ. ಫಿಟ್‌ಮೆಂಟ್ ಅಂಶವು ಕೇಂದ್ರ ಸರ್ಕಾರಿ ಸೇವೆಗಳಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ.

ಉದ್ಯೋಗಿಗಳ ಫಿಟ್‌ಮೆಂಟ್ ಅಂಶವು 3.68 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನ 18,000 ರೂ. ಗಳಾಗಿದೆ. ಫಿಟ್‌ಮೆಂಟ್ ಅಂಶ ಹೆಚ್ಚಳದಿಂದ ಅವರ ಮೂಲ ವೇತನ 18,000 ರೂ. ನಿಂದ 26,000 ರೂ. ಗೆ ಏರಿಕೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

DK Shivakumar: ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೂ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು ಅರಿತುಕೊಂಡಿದ್ದೇನೆ. ಈ ವಿಚಾರದಲ್ಲಿ ನಾನು ಯಾರನ್ನೂ ದೂಷಣೆ ಮಾಡಲು ಹೋಗುವುದಿಲ್ಲ. ಗೆದ್ದಿರುವ ವ್ಯಕ್ತಿ ತುಂಬು ಹೃದಯದಿಂದ ಸುರೇಶ್‌ಗಿಂತ ಹೆಚ್ಚಿನ ಜನರ ಸೇವೆ ಮಾಡಲಿ ಎಂದು ಶುಭ ಕೋರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM DK Shivakumar visit Kengal Anjaneya temple
Koo

ಚನ್ನಪಟ್ಟಣ: ನನ್ನ ರಾಜಕೀಯ ಜೀವನದಲ್ಲಿ ಮಹತ್ವದ ಬದಲಾವಣೆಯಾಗಿದ್ದು ಚನ್ನಪಟ್ಟಣದಿಂದ. ಈಗ ಇಲ್ಲಿನ ಕೆಂಗಲ್ ಆಂಜನೇಯಸ್ವಾಮಿಯ ದೇವಸ್ಥಾನದಿಂದ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ ಮಾಡಲು ಬಂದಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು.

ಕೆಂಗಲ್ ಆಂಜನೇಯ ದೇವಾಸ್ಥಾನದ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಮನ ಬಂಟ ಆಂಜನೇಯ ಸೇವೆಯ ಪ್ರತೀಕ. ಅದೇ ರೀತಿ ನಾನು ನಿಮ್ಮ ಸೇವೆ ಮಾಡಲು ಮತ್ತೊಮ್ಮೆ ಬಂದಿದ್ದೇನೆ. ಅತಿ ಚಿಕ್ಕ ವಯಸ್ಸಿಗೆ ಬಂಗಾರಪ್ಪ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದು ನಿಮ್ಮ ಆಶೀರ್ವಾದದಿಂದ. ಚನ್ನಪಟ್ಟಣದ ಮಹಾಜನತೆಯ ಆಶೀರ್ವಾದ ನಮಗೆ ಬೇಕಾಗಿದೆ. ಜನರು ಪಕ್ಷಭೇದವನ್ನು ಮರೆತು ಸರ್ಕಾರದ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬೇಕು. ನನ್ನ ಅಧಿಕಾರವನ್ನು ಚನ್ನಪಟ್ಟಣದ ಬದಲಾವಣೆಗೆ ಉಪಯೋಗಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

ನನಗೆ ಬುದ್ಧಿವಾದ ಹೇಳಲು ಜನರು ಸೋಲಿಸಿದ್ದಾರೆ

ನನ್ನ ತಮ್ಮ ಡಿ.ಕೆ. ಸುರೇಶ್‌ಗೆ ಸೋಲಾಗಿದೆ ಎಂದರೆ ನನ್ನಲ್ಲೇ ಏನೋ ನ್ಯೂನ್ಯತೆ ಇದೆ ಎಂದು ಕ್ಷೇತ್ರದ ಜನ ಅರ್ಥ ಮಾಡಿಸಿದ್ದಾರೆ. ನನಗೆ ಬುದ್ಧಿವಾದ ಹೇಳಲು ಜನರು ಈ ತೀರ್ಮಾನ ನೀಡಿದ್ದಾರೆ. ಇದನ್ನು ನಾನು ಅರಿತುಕೊಂಡಿದ್ದೇನೆ. ಈ ವಿಚಾರದಲ್ಲಿ ನಾನು ಯಾರನ್ನೂ ದೂಷಣೆ ಮಾಡಲು ಹೋಗುವುದಿಲ್ಲ. ಗೆದ್ದಿರುವ ವ್ಯಕ್ತಿ ತುಂಬು ಹೃದಯದಿಂದ ಸುರೇಶ್‌ಗಿಂತ ಹೆಚ್ಚಿನ ಜನರ ಸೇವೆ ಮಾಡಲಿ ಎಂದು ಶುಭ ಕೋರುತ್ತೇನೆ ಎಂದು ಹೇಳಿದರು.

ನಾನು ಧೈರ್ಯ ಕಳೆದುಕೊಳ್ಳುವವನಲ್ಲ

ನಾನು ಧೈರ್ಯ ಕಳೆದುಕೊಳ್ಳುವವನು, ಹೆದರಿ ಓಡಿ ಹೋಗುವವನಲ್ಲ. ಹೋರಾಟ ಮಾಡುವವನು. ಎಲ್ಲಿ ಶ್ರಮವಿದೆಯೋ ಅಲ್ಲಿ ಫಲವಿದೆ. ಭಕ್ತಿ ಇರುವ ಕಡೆ ಭಗವಂತ ಇದ್ದಾನೆ. ಪ್ರತಿ ಪಂಚಾಯ್ತಿಗೂ ಭೇಟಿ ನೀಡಿ ಚನ್ನಪಟ್ಟಣದ ಬದಲಾವಣೆಗೆ ನನಗೆ ಇರುವ ಶಕ್ತಿಯಲ್ಲಿ ಪ್ರಯತ್ನಿಸುತ್ತೇನೆ ಎಂದರು.

ಶೀಘ್ರದಲ್ಲೇ ಅಭ್ಯರ್ಥಿ ಘೋಷಣೆ

ಸರ್ಕಾರದಲ್ಲಿ ನಾನು ಉತ್ತಮ ಸ್ಥಾನದಲ್ಲಿದ್ದು, ಚನ್ನಪಟ್ಟಣದ ಅಭಿವೃದ್ದಿಗೆ ರೂಪುರೇಷೆಯನ್ನು ಸಿದ್ಧಪಡಿಸಿದ್ದೇನೆ. ಭೂಮಿ ಋಣ, ತಾಯಿ ಋಣ, ಅನ್ನದ ಋಣ, ಜನರ ಋಣ ತೀರಿಸಬೇಕಾಗಿರುವುದು ನಮ್ಮ ಕರ್ತವ್ಯ. ಈಗ ಮತ್ತೊಮ್ಮೆ ನಿಮ್ಮ ಋಣ ತೀರಿಸುವ ಅವಕಾಶ ದೊರೆತಿದೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಖಾಲಿಯಿದ್ದು ಮುಂದಿನ ದಿನಗಳಲ್ಲಿ ಯಾರು ಅಭ್ಯರ್ಥಿ ಎಂಬುದನ್ನು ತಿಳಿಸುತ್ತೇನೆ ಎಂದರು.

ಇದನ್ನೂ ಓದಿ: CM Siddaramaiah: ಅವಧಿ ಮೀರಿದ ಆಹಾರ ಪದಾರ್ಥ ಮಾರಿದರೆ ಹುಷಾರ್!‌ ಸಿಎಂ ಎಚ್ಚರಿಕೆ

ನಾನು ಸಾತನೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದಾಗ ಚನ್ನಪಟ್ಟಣದ ಒಂದು ಭಾಗ ನನ್ನ ಕ್ಷೇತ್ರದಲ್ಲಿತ್ತು. ನಿಮ್ಮ ಆಶೀರ್ವಾದದಿಂದ ಇಂದು ಉನ್ನತ ಸ್ಥಾನಕ್ಕೆ ಏರಿದ್ದೇನೆ. ಈ ಕ್ಷೇತ್ರದ ಮರುವಿಂಗಡಣೆ ಸಂದರ್ಭದಲ್ಲಿ ಬಿಟ್ಟು ಹೋಗುವಾಗ ನೋವು ಉಂಟಾಗಿತ್ತು. ನಾನು ಹೋದರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿದ್ದು ಇತಿಹಾಸ. ಎಲ್ಲಾ ಜಾತಿ, ಧರ್ಮ, ಜನಾಂಗಗಳು ಇರುವ ಪ್ರಜ್ಞಾವಂತರ ಕ್ಷೇತ್ರವಿದು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 16 ಸಾವಿರ ಮತಗಳು ಮಾತ್ರ ಬಂದಿತ್ತು. ಇದರಿಂದ ನನಗೆ ನೋವಾಗಿತ್ತು. ಜನರ ತೀರ್ಮಾನ ಪ್ರಶ್ನೆ ಮಾಡಲು ಆಗುವುದಿಲ್ಲ. ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಆಗಿರಬಹುದು ಆದರೆ ನಿಮ್ಮ ಮನೆ ಮಗ ಎಂದು ತಿಳಿಸಿದರು.

ದೇಶದ ಪ್ರಧಾನಮಂತ್ರಿಯಾದವರಿಂದ ತೆರವಾದ ರಾಮನಗರ ಕ್ಷೇತ್ರದಲ್ಲಿ ಸಿ.ಎಂ.ಲಿಂಗಪ್ಪ ಅವರನ್ನು ಕಣಕ್ಕೆ ಇಳಿಸಲಾಗಿತ್ತು. ಅವರನ್ನು 9 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದು ಈಗ ಇತಿಹಾಸ. ಲೋಕಸಭೆ ಚುನಾವಣೆಯಲ್ಲಿ 85 ಸಾವಿರ ಮತಗಳು ಕಾಂಗ್ರೆಸ್ ಅಭ್ಯರ್ಥಿಗೆ ಬಂದಿವೆ. ಅಂದರೆ ಸುಮಾರು 70 ಸಾವಿರದಷ್ಟು ಹೆಚ್ಚಿನ ಮತಗಳು ಬಂದಿದ್ದು. ಇದಕ್ಕೆ ಜನತಾದಳ, ರೈತಸಂಘ ಸೇರಿದಂತೆ ಎಲ್ಲಾ ವರ್ಗಗಳ ಜನರು ಸಹಾಯ ಮಾಡಿದ್ದಾರೆ ಎಂದರು.

ಇದನ್ನೂ ಓದಿ: Nalanda University: ನಳಂದಾ ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್‌ನಲ್ಲಿ ಏನೇನಿವೆ?

ಚನ್ನಪಟ್ಟಣವನ್ನು ಚಿನ್ನದ ನಾಡು ಮಾಡುತ್ತೇನೆ

ರಾಮನಗರಕ್ಕೆ ಸುಮಾರು 1 ಸಾವಿರ ಕೋಟಿ ಅನುದಾನ ಕೊಟ್ಟಿದ್ದೇನೆ. ಚನ್ನಪಟ್ಟಣವನ್ನು ಚಿನ್ನದ ನಾಡನ್ನಾಗಿ ಮಾಡುತ್ತೇನೆ. ಮದ್ದೂರು ಗಡಿ, ಸಂಗಮ, ಹುಲಿಯೂರುದುರ್ಗ, ಕೋಲಾರ ಗಡಿ, ನಂದಿ ಬೆಟ್ಟದ ತನಕ ನಾವೆಲ್ಲಾ ಬೆಂಗಳೂರಿಗೆ ಸೇರಿದವರು. ಬೆಂಗಳೂರಿನ ಸುತ್ತ ಹೊಸ ನಾಮಕರಣ ಮಾಡಲಾಗುತ್ತದೆ. ಈ ವಿಚಾರವಾಗಿ ಮುಂದಿನ ದಿನಗಳಲ್ಲಿ ಮಾಹಿತಿ ನೀಡಲಾಗುವುದು. ಚನ್ನಪಟ್ಟಣದ 15 ಕ್ಕೂ ಹೆಚ್ಚು ಗ್ರಾಮ ದೇವರುಗಳಿಗೆ ಭೇಟಿ ನೀಡಿ, ದೇವರ ಆಶೀರ್ವಾದ ಪಡೆಯುತ್ತೇನೆ ಎಂದು ತಿಳಿಸಿದರು.

Continue Reading

ಕರ್ನಾಟಕ

Renukaswamy murder case: ಎಸ್‌ಪಿಪಿ ಬದಲಿಸಲು ಯಾರ ಒತ್ತಡವೂ ಇಲ್ಲ, ಹಾಕಿದ್ರೆ ಕೇಳೋದೂ ಇಲ್ಲ: ಸಿದ್ದರಾಮಯ್ಯ

Renukaswamy murder case: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಬದಲಾವಣೆಗೆ ಒತ್ತಡ ಹಾಕಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Renukaswamy murder case
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy murder case) ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ಪಿಪಿ) ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ. ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಬದಲಾವಣೆಗೆ ಒತ್ತಡ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ. ಪೊಲೀಸ್‌ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ. ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ನನ್ನ ಮುಂದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಇದನ್ನೂ ಓದಿ | DK Shivakumar: ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಎಂದ ಡಿ.ಕೆ. ಶಿವಕುಮಾರ್

ಜಾತಿ ವ್ಯವಸ್ಥೆಯಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿ: ಸಿಎಂ‌ ಸಿದ್ದರಾಮಯ್ಯ

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಢ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥ ಮೌಢ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದ ಅವರು, ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದರು.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.

ಬುದ್ದ, ಬಸವಣ್ಣ ಎಷ್ಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

SDLC ಮತ್ತು PUC ಯಲ್ಲಿ ಹೆಚ್ಚು ಅಂಕ ಗಳಿಸಿದ, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಈ ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಎಲ್ಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.

ಇದನ್ನೂ ಓದಿ | Kempegowda Jayanti: ಬೆಂಗಳೂರಲ್ಲಿ ಜೂನ್ 27ಕ್ಕೆ ಕೆಂಪೇಗೌಡ ಜಯಂತಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು . ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದು ತಿಳಿಸಿದರು.

Continue Reading

ಕರ್ನಾಟಕ

DK Shivakumar: ಜನ ಒಲವು ತೋರಿದರೆ ಚನ್ನಪಟ್ಟಣದಲ್ಲಿ ಸ್ಪರ್ಧೆ ಎಂದ ಡಿ.ಕೆ. ಶಿವಕುಮಾರ್

DK Shivakumar: ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆ ಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದರು.

ಚನ್ನಪಟ್ಟಣ ಪ್ರವಾಸಕ್ಕೂ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

“ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು. ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗೂ ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.

ಇದನ್ನೂ ಓದಿ | HSRP Number Plate: HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು 3 ತಿಂಗಳು ವಿಸ್ತರಣೆ; ವಾಹನ ಸವಾರರಿಗೆ ಗುಡ್‌ ನ್ಯೂಸ್

ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಅಧಿಕಾರಿಗಳ ಪರಿಶೀಲನೆ ನಂತರ ನೀರಿನ ದರ ಏರಿಕೆ ತೀರ್ಮಾನ

ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂಎಸ್‌ಎಸ್‌ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್‌ಗಳು ಮುಂದೆ ಬರುತ್ತಿಲ್ಲ. ಸದ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ.

ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ. ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸಾಧ್ಯಾಸಾಧ್ಯತೆಗಳ ಪರಿಶೀಲಿಸಿದ ನಂತರ ದರ ಏರಿಕೆ ವಿಚಾರವಾಗಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ | MLC By Election: ಕರ್ನಾಟಕದಲ್ಲಿ ವಿಧಾನ ಪರಿಷತ್‌ ಉಪ ಚುನಾವಣೆ ಜುಲೈ 12ರಂದು

ಪ್ರಧಾನಿಯಿಂದ ಕೆಂಪೇಗೌಡ ಪ್ರತಿಮೆ ಅನಾವರಣ ಮಾಡಿಸಿದ್ದು ಯಾವ ಕಾರಣಕ್ಕೆ?

ಲೋಕಸಭೆ ಚುನಾವಣೆಯಲ್ಲಿ ಒಕ್ಕಲಿಗರು ಕೈ ಹಿಡಿಯಲಿಲ್ಲ ಎಂದು ಕೆಂಪೇಗೌಡ ಜಯಂತಿ ಆಚರಣೆಗೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, “ಬಿಜೆಪಿಯವರು ವಿಮಾನ ನಿಲ್ದಾಣದ ಬಳಿ ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸಿದ್ದು ಯಾಕೆ? ಆ ಕಾರ್ಯಕ್ರಮಕ್ಕೆ ಜನ ಸೇರಿಸಲಾಗದೆ ಬಲವಂತವಾಗಿ ಶಾಲಾ, ಕಾಲೇಜು ಮಕ್ಕಳನ್ನು ಕರೆಸಿದ್ದು ಯಾಕೆ? ಆ ಕಾರ್ಯಕ್ರಮದಲ್ಲಿ ಪ್ರತಿಮೆಗೆ ತಗುಲಿದ ವೆಚ್ಚಕ್ಕಿಂತ ಉದ್ಘಾಟನಾ ಕಾರ್ಯಕ್ರಮದ ವೆಚ್ಚವೇ ಹೆಚ್ಚಾಗಿತ್ತು. ಈ ಬಗ್ಗೆ ಕೃಷ್ಣಭೈರೇಗೌಡರನ್ನು ಕೇಳಿ ಸಂಪೂರ್ಣ ದಾಖಲೆ ನೀಡುತ್ತಾರೆ” ಎಂದು ತಿಳಿಸಿದರು.

Continue Reading

ರಾಜಕೀಯ

‌DK Shivakumar: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಣಕ್ಕಿಳಿಯಲು ಡಿಕೆ ಶಿವಕುಮಾರ್ ರೆಡಿ; ಕನಕಪುರ ತಮ್ಮನಿಗೆ?

‌DK Shivakumar: “ಚನ್ನಪಟ್ಟಣ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಇವತ್ತು ಚನ್ನಪಟ್ಟಣದ ದೇವಸ್ಥಾನಗಳಿಗೆ ಭೇಟಿ ಕೊಡ್ತಿದ್ದೇನೆ. ಜನರ ನಾಡಿಮಿಡಿತ ಅರಿಯೋಕೆ ‌ಹೊರಟಿದ್ದೇನೆ. ಜನರು ಏನು ಹೇಳ್ತಾರೆ ಅದರಂತೆ ನಡೆಯುತ್ತೇನೆ. ಪಕ್ಷ ಏನು ಹೇಳುತ್ತದೆ ಅದರಂತೆ ಮಾಡಬೇಕು” ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಚನ್ನಪಟ್ಟಣ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಇಲ್ಲಿನ ಜನರ ನಾಡಿಮಿಡಿತ ಅರಿತು ಮುಂದಿನ ಹೆಜ್ಜೆ ತೆಗೆದುಕೊಳ್ಳುತ್ತೇನೆ” ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಹೇಳಿದ್ದು, ಆ ಮೂಲಕ ಉಪಚುನಾವಣೆಯಲ್ಲಿ (Chnnapatna By Election) ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆ ಸದ್ಯದಲ್ಲೇ ನಡೆಯಲಿದೆ. ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ವತಃ ಡಿಕೆಶಿ ಕಣಕ್ಕಿಳಿಯಲಿದ್ದಾರೆ ಎಂಬ ಊಹಾಪೋಹಗಳು ದಟ್ಟವಾಗುತ್ತಿರುವಂತೆಯೇ, ಇಂದು ಡಿಕೆಶಿಯವರು ಕ್ಷೇತ್ರದಾದ್ಯಂತ ಟೆಂಪಲ್‌ ರನ್‌ ನಡೆಸಿದರು. ಚನ್ನಪಟ್ಟಣದಿಂದ ಸ್ಪರ್ಧಿಸುವ ಒಲವನ್ನೂ ಮಾಧ್ಯಮಗಳ ಮುಂದೆ ವ್ಯಕ್ತಪಡಿಸಿದರು.

“ಚನ್ನಪಟ್ಟಣ ನನಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಇವತ್ತು ಚನ್ನಪಟ್ಟಣದ ದೇವಸ್ಥಾನಗಳಿಗೆ ಭೇಟಿ ಕೊಡ್ತಿದ್ದೇನೆ. ಜನರ ನಾಡಿಮಿಡಿತ ಅರಿಯೋಕೆ ‌ಹೊರಟಿದ್ದೇನೆ. ಜನರು ಏನು ಹೇಳ್ತಾರೆ ಅದರಂತೆ ನಡೆಯುತ್ತೇನೆ. ಪಕ್ಷ ಏನು ಹೇಳುತ್ತದೆ ಅದರಂತೆ ಮಾಡಬೇಕು” ಎಂದು ಡಿಕೆಶಿ ಹೇಳಿದ್ದಾರೆ.

“ಚನ್ನಪಟ್ಟಣ ನನ್ನ ಹೃದಯವಿದ್ದಂತೆ. ನಾನು ಚನ್ನಪಟ್ಟಣವನ್ನು ಪ್ರೀತಿಸ್ತೇನೆ. ಇದು ನನಗೆ ರಾಜಕೀಯ ಜೀವನ ಕೊಟ್ಟ ಕ್ಷೇತ್ರ. ನಾಲ್ಕು ‌ಬಾರಿ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ಕಷ್ಟಕಾಲದಲ್ಲಿ ಅಲ್ಲಿನ ಜನ ಕೈಹಿಡಿದಿದ್ದಾರೆ. ಕನಕಪುರದಂತೆ ಚೆನ್ನಪಟ್ಟಣವನ್ನೂ ಅಭಿವೃದ್ಧಿ ಮಾಡುತ್ತೇನೆ. ಇಲ್ಲಿ ಮತ್ತಷ್ಟು ಅಭಿವೃದ್ಧಿ ಮಾಡುವ ಆಸೆಯಿದೆ. ಇವತ್ತು ಎಲ್ಲ ದೇವಸ್ಥಾನಗಳಿಗೆ ಭೇಟಿ ಕೊಡ್ತೇನೆ. ಜನರ ಅಭಿಮತ ಹೇಗಿದೆ ನೋಡ್ತೇನೆ. ವಿಧಿಯೇ ಇಲ್ಲ, ಜನ ಏನು ಹೇಳ್ತಾರೆ ಮಾಡ್ತೇನೆ” ಎಂದಿದ್ದಾರೆ ಡಿಕೆಶಿ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಡಿಕೆ ಸುರೇಶ್‌ (DK Suresh) ಕಣಕ್ಕಿಳಿಯಬಹುದು ಎನ್ನಲಾಗಿತ್ತು. ಆದರೆ ತಾವು ಸ್ಪರ್ಧಿಸುವುದಿಲ್ಲ ಎಂದು ಡಿಕೆ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಅನುಭವಿಸಿರುವ ಡಿಕೆ ಸುರೇಶ್‌, ಇನ್ನೊಮ್ಮೆ ಅಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿಲ್ಲ. ಆದರೆ ಕನಕಪುರದಲ್ಲಿ ಸಹೋದರರ ಹಿಡಿತ ಗಟ್ಟಿಯಾಗಿದ್ದು, ಇಲ್ಲಿ ಸೋಲುವ ಭಯವಿಲ್ಲ. ಹೀಗಾಗಿ ಕನಕಪುರದ ಮೇಲೆ ತಮ್ಮನಿಗೆ ದೃಷ್ಟಿಯಿದೆ.

ಹೀಗಾಗಿ, ಸಹೋದರನಿಗಾಗಿ ಕ್ಷೇತ್ರ ತ್ಯಾಗ ಮಾಡಲು ಡಿಕೆಶಿ ಸಿದ್ಧವಾಗಿದ್ದಾರೆ ಎಂದು ಊಹಿಸಲಾಗಿದೆ. ಡಿಕೆ ಸುರೇಶ್ ಕಣಕ್ಕಿಳಿಸುವಂತೆ ಚನ್ನಪಟ್ಟಣ ಸ್ಥಳೀಯ ಕಾಂಗ್ರೆಸ್ ಮುಖಂಡರು ಒತ್ತಾಯಿಸಿದ್ದಾರೆ. ಆದರೆ ನನ್ನನ್ನು ಲೋಕಸಭೆಯಲ್ಲಿ ಸೋಲಿಸಿದ್ದಾರೆ, ನಾನು ಅಲ್ಲಿ ಸ್ಪರ್ಧೆ ಮಾಡಲ್ಲ ಎಂದು ಡಿಕೆಶಿ ಮುಂದೆ ಡಿಕೆಸು ಹೇಳಿದ್ದರು. ಹೀಗಾಗಿ ರಿಸ್ಕ್ ತೆಗೆದುಕೊಳ್ಳಲು ಮುಂದಾಗಿರುವ ಡಿಕೆಶಿ, ತಾವೇ ಚನ್ನಪಟ್ಟಣದಿಂದ ಕಣಕ್ಕಿಳಿದು ಕನಕಪುರ ಕ್ಷೇತ್ರವನ್ನು ತಮ್ಮನಿಗೆ ಬಿಟ್ಟುಕೊಡಲು ಚಿಂತನೆ ನಡೆಸಿದ್ದಾರೆ.

ಅದರ ಭಾಗವಾಗಿಯೇ ಇಂದು ಡಿಸಿಎಂ ಡಿಕೆ ಶಿವಕುಮಾರ್ ಚನ್ನಪಟ್ಟಣ ರೌಂಡ್ಸ್ ಹಾಕಿದ್ದಾರೆ. ಚನ್ನಪಟ್ಟಣ ಕ್ಷೇತ್ರ ವ್ಯಾಪ್ತಿಯ 14 ದೇವಸ್ಥಾನಗಳಿಗೆ ಡಿಕೆ ಶಿವಕುಮಾರ್ ಭೇಟಿ ನೀಡುತ್ತಿದ್ದಾರೆ. ಟೆಂಪಲ್ ರನ್ ಮೂಲಕ ಗ್ರೌಂಡ್ ರಿಯಾಲಿಟಿ ತಿಳಿಯಲು, ಜನರನ್ನು ಮಾತನಾಡಿಸಲು ಮುಂದಾಗಿದ್ದಾರೆ. ಬಹುತೇಕ ಇಂದೇ ಉಪ ಚುನಾವಣೆ ಸ್ಪರ್ಧೆ ಬಗ್ಗೆ ಘೋಷಣೆ ‌ಮಾಡಬಹುದು ಎನ್ನಲಾಗಿದೆ. ಇಲ್ಲದಿದ್ದರೆ ಜೂನ್ 21ರಂದು ಮತ್ತೊಮ್ಮೆ ಚನ್ನಪಟ್ಟಣ ಕ್ಷೇತ್ರಕ್ಕೆ ಅವರು ಭೇಟಿ ನೀಡಲಿದ್ದು, ಅಂದು ಕೂಡ ಘೋಷಣೆ ಮಾಡುವ ಸಾಧ್ಯತೆ ಇದೆ.

ಚನ್ನಪಟ್ಟಣದ ಶಾಸಕರಾಗಿದ್ದ ಎಚ್‌ಡಿ ಕುಮಾರಸ್ವಾಮಿ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸಿ ಗೆದ್ದಿದ್ದು, ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಇದೀಗ ಚನ್ನಪಟ್ಟಣದಲ್ಲಿ ಉಪಚುನಾವಣೆ ನಡೆಯಬೇಕಿದೆ.

ಇದನ್ನೂ ಓದಿ: HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Continue Reading
Advertisement
Hooch Tragedy
ದೇಶ55 mins ago

Hooch Tragedy: ಕಳ್ಳಬಟ್ಟಿ ಸೇವಿಸಿ 16 ಮಂದಿ ಸಾವು, 70ಕ್ಕೂ ಅಧಿಕ ಜನ ಅಸ್ವಸ್ಥ

Blacklist contractors who do not complete work within time says Minister Mankala Vaidya
ಉತ್ತರ ಕನ್ನಡ1 hour ago

Uttara Kannada News: ಅವಧಿಯೊಳಗೆ ಕಾಮಗಾರಿ ಮುಕ್ತಾಯಗೊಳಿಸದ ಗುತ್ತಿಗೆದಾರರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಿ: ಸಚಿವ ಮಂಕಾಳ ವೈದ್ಯ

Appu Cup Season 2 to be held in July A team building event was held in Bengaluru
ಬೆಂಗಳೂರು1 hour ago

Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್

RSA vs USA
ಕ್ರೀಡೆ1 hour ago

SA vs USA: ಮಿಂಚಿದ ಡಿಕಾಕ್; ಯುಎಸ್‌ಎ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 18 ರನ್‌ಗಳ ಜಯ

NET 2024
ದೇಶ2 hours ago

NET 2024: ಪರೀಕ್ಷೆ ನಡೆದ ಒಂದೇ ದಿನದಲ್ಲಿ ನೆಟ್ ರದ್ದುಗೊಳಿಸಿದ ಕೇಂದ್ರ ಸರ್ಕಾರ; ಏನಿದು ಕೇಸ್?‌

Hajj Pilgrims
ದೇಶ3 hours ago

Hajj Pilgrims: ಬಿಸಿಗಾಳಿ, ಬಿಸಿಲಿನ ಹೊಡೆತ; ಹಜ್‌ ಯಾತ್ರೆ ಕೈಗೊಂಡ 68 ಭಾರತೀಯರ ಸಾವು

Bescom complaint against false information video about electricity compensation for farmers
ಕರ್ನಾಟಕ3 hours ago

Fact Check: ಹೊಲದಲ್ಲಿ ಟ್ರಾನ್ಸ್‌ಫಾರ್ಮರ್‌ ಇದ್ದರೆ ರೈತರಿಗೆ ಪರಿಹಾರ? ಬೆಸ್ಕಾಂ ಹೇಳಿದ್ದೇನು?

Murder Case
ಕರ್ನಾಟಕ4 hours ago

Murder Case: 3 ವರ್ಷದ ಬಾಲಕನ ಕತ್ತು ಸೀಳಿ ಕೊಂದ ಚಿಕ್ಕಪ್ಪ; ನದಿಯಲ್ಲಿ ಈಜಲು ಹೋಗಿ ಇಬ್ಬರು ನಾಪತ್ತೆ

Suniel Shetty
ಬಾಲಿವುಡ್4 hours ago

Suniel Shetty: ಅಪ್ಪ ವೇಟರ್‌ ಆಗಿ ಕೆಲಸ ಮಾಡುತ್ತಿದ್ದ ರೆಸ್ಟೋರೆಂಟ್‌ಗೆ ಈಗ ಸುನೀಲ್‌ ಶೆಟ್ಟಿ ಒಡೆಯ; ಇದಪ್ಪ Success ಅಂದ್ರು ಜನ!

DCM DK Shivakumar visit Kengal Anjaneya temple
ಕರ್ನಾಟಕ4 hours ago

DK Shivakumar: ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದಿಂದ ನನ್ನ ಹೊಸ ರಾಜಕೀಯ ಅಧ್ಯಾಯ ಪ್ರಾರಂಭ: ಡಿ.ಕೆ.ಶಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು2 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು3 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ3 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ4 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ4 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ5 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ5 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌