Site icon Vistara News

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

prajwal revanna actress swara bhasker angry government silence on prajwal revanna

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣ (Hassan Pen Drive Case) ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಕನ್ನಡ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ನಟಿಸಿರುವ ಜನಪ್ರಿಯ ನಟಿ ಪೂನಂ ಕೌರ್ (Poonam Kaur) ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಈ ಪ್ರಕರಣದ ಬಗ್ಗೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

ಪ್ರಜ್ವಲ್ ರೇವಣ್ಣ ಲೈಂಗಿಕ ಕಿರುಕುಳ ಪ್ರಕರಣ ವಿವಾದ ಭುಗಿಲೇಳುತ್ತಿದ್ದಂತೆ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಕೂಡ ಎಕ್ಸ್ ಖಾತೆಯ ಮೂಲಕ ಕಿಡಿ ಕಾರಿದ್ದಾರೆ. ಅಪರಾಧಿ ಮುಸ್ಲಿಂ, ಟಿಎಂಸಿ ಇಲ್ಲವೇ ಕಾಂಗ್ರೆಸ್‌ನವರು ಆಗಿದ್ದರೆ ಮಾತ್ರ ಮಹಿಳಾ ಸುರಕ್ಷತೆ ಬಗ್ಗೆ ಕೆಲವರು ಕಾಳಜಿ ವಹಿಸುತ್ತಾರೆಂದು ಆಕ್ರೋಶ ಹೊರ ಹಾಕಿದ್ದಾರೆ.

ʻʻಲೈಂಗಿಕ ದೌರ್ಜನ್ಯದ ಅಪರಾಧಗಳ ಬಗ್ಗೆ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೌನಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಇವೆಲ್ಲ ಗೊತ್ತಿದ್ದೂ ಮೋದಿ ಅವರು ಪ್ರಚಾರ ಮಾಡಿದ್ದಕ್ಕೆ ನಾವೇಕೆ ಶಾಕ್‌ ಆಗಿದ್ದೇವೆ? ಕಥುವಾ, ಉನ್ನಾವೋ, ಹತ್ರಾಸ್, ಕುಲದೀಪ್ ಸೆಂಗರ್, ಬ್ರಿಜ್ಭೂಷಣ್ ಶರಣ್ ಮತ್ತು ಇತರರ ಉದಾಹರಣೆ ನಮ್ಮ ಮುಂದೆ ಇದೆ! ಅಪರಾಧಿ ಮುಸ್ಲಿಂ ಅಥವಾ ಟಿಎಂಸಿ/ಕಾಂಗ್ರೆಸ್‌ನವರಾಗಿದ್ದರೆ ಮಾತ್ರ ಅವರು ಮಹಿಳಾ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುತ್ತಾರೆʼʼಎಂದ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಇದಕ್ಕೂ ಮುಂಚೆ ನಟಿ ಪೂನಂ ಕೌರ್ (Poonam Kaur) ಪ್ರತಿಕ್ರಿಯಿಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಕಿಡಿ ಕಾರಿದ್ದರು. ʼಪ್ರಜ್ವಲ್ ರೇವಣ್ಣ ಮೃಗಕ್ಕಿಂತ ಕಡೆ. 2,900ಕ್ಕೂ ಹೆಚ್ಚು ವಿಡಿಯೊಗಳನ್ನು ಮಾಡಿದ್ದಾರೆ ಎಂದರೆ ಅವರೆಷ್ಟು ವಿಕೃತ ಮನೋಭಾವ ಹೊಂದಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತದೆ. ಪ್ರಾಣಿಗಳು ಕೂಡ ರೀತಿ ಮಾಡೋದಿಲ್ಲʼʼ ಎಂದು ಹೇಳಿದ್ದಾರೆ. ʼʼಈ ರೀತಿಯ ಕೃತ್ಯ ಎಸಗಿದ ಪ್ರಜ್ವಲ್ ರೇವಣ್ಣ ಅವರನ್ನು ಬಿಡಬೇಡಿʼʼ ಎಂದು ಅವರು ವಿಡಿಯೊ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು.

ʼʼಪ್ರಜ್ವಲ್‌ ಬಳಿ ದುಡ್ಡು ಹಾಗೂ ಅಧಿಕಾರ ಇದೆ. ಹೀಗಾಗಿ ಅವರ ವಿರುದ್ಧ ಧ್ವನಿ ಎತ್ತಿದರೂ, ದೂರು ಕೊಟ್ಟರೂ ಶಿಕ್ಷೆಯಾಗುತ್ತದೆ ಎನ್ನುವ ಬಗ್ಗೆ ಗ್ಯಾರಂಟಿ ಇಲ್ಲʼʼ ಎಂದು ಪೂನಂ ಕೌರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ʼʼಹೀಗಾಗಿ ನಾನು ಕೈ ಮುಗಿದು ಬೇಡಿಕೊಳ್ತಿನಿ. ಪ್ರಜ್ಚಲ್‌ಗೆ ಯಾರು ವೋಟ್ ಹಾಕಬೇಡಿ. ಅಂತಹವರು ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ಇರೋದಿಲ್ಲʼʼ ಎಂದು ಹೇಳಿದ್ದರು.

ಇದನ್ನೂ ಓದಿ: Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’

ʼʼಹೆಣ್ಣು ಮಕ್ಕಳು ಎಚ್ಚೆತ್ತುಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ. ಪ್ರತಿ ಮನೆಯ ಹೆಣ್ಣು ಮಗಳು ಎಚ್ಚರವಾದಾಗ ಮಾತ್ರ ದೇಶದ ಹೆಣ್ಣು ಮಕ್ಕಳು ಬಚವಾಗಲು ಸಾಧ್ಯ. ನಮ್ಮ ದೇಶ ರಾವಣ ರಾಜ್ಯದ ಕಡೆ ಹೋಗುತ್ತಿದೆಯಾ ಅಥವಾ ರಾಮರಾಜ್ಯದ ಕಡೆ ಹೋಗುತ್ತಿದೆಯಾ ?ʼ ಎಂದೂ ಅವರು ಪ್ರಶ್ನಿಸಿದ್ದರು.

ಸ್ವರಾ ಭಾಸ್ಕರ್ ಜೊತೆಗೆ ಕನ್ನಡದ ನಟ ಆದಿನಗಳು ಚೇತನ್, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಆಕ್ರೋಶ ಹೊರಹಾಕಿದ್ದಾರೆ.

Exit mobile version