Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌! - Vistara News

ರಾಜಕೀಯ

Agniveer: ಹುತಾತ್ಮ ʼಅಗ್ನಿವೀರʼನ ಕುಟುಂಬಕ್ಕೆ 1.08 ಕೋಟಿ ರೂ. ಪರಿಹಾರ; ರಾಹುಲ್‌ ಗಾಂಧಿ ಆರೋಪ ಠುಸ್‌!

ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಆರೋಪಿಸಿದ್ದರು. ಅನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಪಷ್ಟೀಕರಣ ನೀಡಿದ್ದರು. ಇದೀಗ ಅಗ್ನಿವೀರ್‌ ಕುಟುಂಬದ ಸದಸ್ಯರೇ ಪರಿಹಾರ ಪಡೆದಿರುವುದಾಗಿ ಹೇಳಿದ್ದಾರೆ.

VISTARANEWS.COM


on

Agniveer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರ್ತವ್ಯದ ವೇಳೆ ಕಳೆದ ವರ್ಷ ಮೃತಪಟ್ಟಿದ್ದ ಮಹಾರಾಷ್ಟ್ರದ (maharastra) ಅಗ್ನಿವೀರ್ (agniveer) ಅಕ್ಷಯ್ ಗವಾಟೆ (Agniveer Akshay Gawate) ಅವರ ಕುಟುಂಬಕ್ಕೆ ಕೇಂದ್ರ ಸರ್ಕಾರದಿಂದ 1.08 ಕೋಟಿ ರೂಪಾಯಿ ನೆರವು ನೀಡಲಾಗಿದೆ ಎಂದು ಸೋಮವಾರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಇದರಿಂದಾಗಿ, ಅಗ್ನಿವೀರ್‌ ಯೋಜನೆಯಡಿ ಆಯ್ಕೆಯಾದವರು ಸತ್ತರೆ ಯಾವುದೇ ಪರಿಹಾರ ಸಿಗುವುದಿಲ್ಲ ಎಂದು ಸಂಸತ್‌ನಲ್ಲಿ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮುಖಭಂಗ ಅನುಭವಿಸಿದಂತಾಗಿದೆ.

ಲೋಕಸಭೆಯಲ್ಲಿ (loksabha) ರಕ್ಷಣಾ ಸಚಿವ ರಾಜನಾಥ್ ಸಿಂಗ್ (rajnath singh) ಅವರು ಕರ್ತವ್ಯದ ವೇಳೆಯಲ್ಲಿ ಪ್ರಾಣ ತ್ಯಾಗ ಮಾಡುವ ಅಗ್ನಿವೀರನಿಗೆ 1 ಕೋಟಿ ರೂಪಾಯಿ ಪರಿಹಾರ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಯನ್ನು ಉಲ್ಲೇಖಿಸಿ ಸರ್ಕಾರವು ಅಗ್ನಿವೀರರನ್ನು “ಬಳಸಿ-ಎಸೆಯುವ ಕಾರ್ಮಿಕರು” ಎಂದು ಪರಿಗಣಿಸುತ್ತದೆ. ಅವರಿಗೆ “ಹುತಾತ್ಮ” ಸ್ಥಾನಮಾನವನ್ನೂ ನೀಡುವುದಿಲ್ಲ ಎಂದು ತೀವ್ರವಾಗಿ ಆರೋಪಿಸಿದ್ದರು. ಅನಂತರ ರಾಜನಾಥ್ ಸಿಂಗ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದರು.

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಪಿಂಪಲ್ಗಾಂವ್ ಸರೈ ಮೂಲದ ಅಗ್ನಿವೀರ್ ಅಕ್ಷಯ್ ಗವಾಟೆ ಅವರು 2023ರ ಅಕ್ಟೋಬರ್ 21ರಂದು ಸಿಯಾಚಿನ್‌ನಲ್ಲಿ ಕರ್ತವ್ಯದ ವೇಳೆ ಮೃತಪಟ್ಟಿದ್ದರು. ಸೋಮವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅಕ್ಷಯ್ ಅವರ ತಂದೆ ಲಕ್ಷ್ಮಣ ಗವಾಟೆ, ಅಕ್ಷಯ್ ನಿಧನದ ಅನಂತರ ವಿಮಾ ರಕ್ಷಣೆಯಾಗಿ 48 ಲಕ್ಷ ರೂ., 50 ಲಕ್ಷ ರೂ. ಕೇಂದ್ರ ಸರ್ಕಾರದಿಂದ ಮತ್ತು ರಾಜ್ಯ ಸರ್ಕಾರದಿಂದ 10 ಲಕ್ಷ ರೂ ದೊರೆತಿದೆ ಎಂದರು. ಅಕ್ಷಯ್ ಸಹೋದರಿಗೆ ಸರ್ಕಾರಿ ನೌಕರಿ ನೀಡುವಂತೆ ಅವರು ಮನವಿ ಮಾಡಿದರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

2022ರ ಜೂನ್ 14ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು 17 ಮತ್ತು 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅವರಲ್ಲಿ ಶೇಕಡಾ 25 ರಷ್ಟು ಜನರನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ. ಸರ್ಕಾರವು ಇದಕ್ಕಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿದೆ.

ರಾಹುಲ್ ಆರೋಪ ಸುಳ್ಳು ಎಂದಿದ್ದ ಭಾರತೀಯ ಸೇನೆ

ಸಿಯಾಚಿನ್‌ನಲ್ಲಿ ಮೃತಪಟ್ಟಿರುವ ಭಾರತೀಯ ಸೈನ್ಯದ ʼಅಗ್ನಿವೀರʼನಿಗೆ ಸಂದ ಹಾಗೂ ಸಲ್ಲಲಿರುವ ಆರ್ಥಿಕ ನೆರವಿನ ವಿವರಗಳನ್ನು ಸೈನ್ಯಾಧಿಕಾರಿಗಳು ತಿಳಿಸಿದ್ದು, ರಾಹುಲ್‌ ಗಾಂಧಿ ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಈ ಮೊದಲೇ ಹೇಳಿದ್ದರು.

ಸಿಯಾಚಿನ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಮೃತಪಟ್ಟ ಅಗ್ನಿವೀರನ ಕುಟುಂಬಕ್ಕೆ ನೀಡಲಾಗುತ್ತಿರುವ ಹಣಕಾಸಿನ ನೆರವಿನ ಬಗ್ಗೆ ಭಾರತೀಯ ಸೈನ್ಯ ಸ್ಪಷ್ಟನೆ ನೀಡಿತ್ತು. ಮೃತರ ಕುಟುಂಬದವರಿಗೆ ಪರಿಹಾರವನ್ನು ಸೈನಿಕ ಸೇವೆಯ ಸಂಬಂಧಿತ ನಿಯಮಗಳ ಮೂಲಕವೇ ನೀಡಲಾಗುತ್ತಿದೆ ಎಂದು ಹೇಳಿತ್ತು. ಮೃತ ಅಗ್ನಿವೀರರ ಕುಟುಂಬದವರಿಗೆ 48 ಲಕ್ಷ ರೂ. ವಿಮಾ ಹಣದ ಮೊತ್ತ, 44 ಲಕ್ಷ ರೂ. ಪರಿಹಾರ, ಅಗ್ನಿವೀರ್‌ನಿಂದ ಸೇವಾ ನಿಧಿ ಕೊಡುಗೆ ಮತ್ತು ಸರ್ಕಾರದಿಂದ ಇಷ್ಟೇ ಪ್ರಮಾಣದ ಹೊಂದಾಣಿಕೆಯ ಕೊಡುಗೆ ಸಂಚಿತ ಬಡ್ಡಿಯೊಂದಿಗೆ ಕೊಡಲಾಗುತ್ತದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿತ್ತು.

ಸೈನಿಕನ ಮರಣದ ದಿನಾಂಕದಿಂದ ನಾಲ್ಕು ವರ್ಷಗಳು ಪೂರ್ಣಗೊಳ್ಳುವವರೆಗಿನ ಉಳಿದ ಸೇವಾವಧಿಯ ವೇತನವನ್ನು ಸಹ ಇದು ಒಳಗೊಂಡಿದೆ. ಪ್ರಸ್ತುತ ಪ್ರಕರಣದಲ್ಲಿ ಈ ಮೊತ್ತ 13 ಲಕ್ಷ ರೂ. ಗಿಂತ ಹೆಚ್ಚು ಇದೆ. ಇನ್ನು ಸಶಸ್ತ್ರ ಪಡೆಗಳ ಯುದ್ಧ ಅಪಘಾತ ನಿಧಿಯಿಂದ 8 ಲಕ್ಷ ರೂ. ಹೆಚ್ಚುವರಿ ಕೊಡುಗೆಯನ್ನು ಸಂಬಂಧಿಕರಿಗೆ ನೀಡಲಾಗುತ್ತದೆ. ತಕ್ಷಣದ ಪರಿಹಾರವಾಗಿ ಒದಗಿಸಲು ಸೇನಾ ಯೋಧರ ಪತ್ನಿಯರ ಕಲ್ಯಾಣ ಸಂಘ (AWWA) 30 ಸಾವಿರ ರೂ. ಆರ್ಥಿಕ ನೆರವು ನೀಡುತ್ತಿದೆ. ಹೀಗಾಗಿ ಒಟ್ಟಾರೆ ಮೊತ್ತ ₹ 1.13 ಕೋಟಿ ದಾಟಲಿದೆ ಎಂದು ಸೇನೆ ತಿಳಿಸಿತ್ತು.

ಅಗ್ನಿವೀರ್‌ಗಳ ಸೇವಾ ನಿಯಮಗಳ ಪ್ರಕಾರ ಮರಣಹೊಂದಿದ, ಯುದ್ಧದಲ್ಲಿ ಗಾಯಗೊಂಡವರಿಗೆ ಅಧಿಕೃತವಾದ ಪರಿಹಾರಗಳು ಇವುಗಳನ್ನು ಒಳಗೊಂಡಿರುತ್ತವೆ. ಕೊಡುಗೆ ರಹಿತ ವಿಮಾ ಮೊತ್ತ 48 ಲಕ್ಷ ರೂ., ಅಗ್ನಿವೀರ್‌ ಸೇವಾ ನಿಧಿ ಶೇ. 30 ಮತ್ತು ಸರ್ಕಾರ ನೀಡುವ ಸಮಾನ ಹೊಂದಾಣಿಕೆಯ ಕೊಡುಗೆ ಮತ್ತು ಅದಕ್ಕೆ ಬಡ್ಡಿ. ಆರ್ಮಿ ವೈವ್ಸ್ ವೆಲ್ಫೇರ್ ಅಸೋಸಿಯೇಷನ್ ​​(AWWA) ನಿಂದ 30 ಸಾವಿರ ರೂ. ತಕ್ಷಣದ ಆರ್ಥಿಕ ನೆರವು ಎಂದು ಸೇನೆ ಈ ಹಿಂದೆಯೇ ತಿಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ನಮಗೆ ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ; ಸಿದ್ದರಾಮಯ್ಯ ಸವಾಲು

CM Siddaramaiah: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಎಂದು ತಿಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Muda site allocation Politically motivated allegation says CM Siddaramaiah
Koo

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತ ಆರೋಪಗಳೇ ಹೊರತು ಅಂಕಿಅಂಶಗಳ ಮೇಲೆ ಮಾಡಿರುವ ಆರೋಪಗಳಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಬೇರೇನೂ ವಿಷಯವಿಲ್ಲ. ಆರ್.ಎಸ್.ಎಸ್ ಹೇಳಿದಂತೆ ಮಾಡುತ್ತಾರೆ. ವಿಷಯವೇ ಇಲ್ಲ. ಮುಡಾ ನಮ್ಮ 3.16 ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಹಂಚಿದರೆ ನಾವು ಕೇಳಬಾರದೇ. ಹಾಗಿದ್ದಲ್ಲಿ ಜಮೀನಿನ ಮೌಲ್ಯ 60 ಕೋಟಿ ರೂ. ಗಳನ್ನು ಕೊಟ್ಟುಬಿಡಲಿ. ನಮ್ಮ ಜಮೀನು ಒತ್ತುವರಿ ಮಾಡಿಕೊಂಡಿರುವುದನ್ನು ಅವರೇ ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ. ಅದಕ್ಕಾಗಿ ನಿವೇಶನಗಳನ್ನು 50:50 ಅನುಪಾತದಲ್ಲಿ ನೀಡಿದ್ದಾರೆ. ಅದಕ್ಕೆ ನಾವು ಒಪ್ಪಿದ್ದೇವೆ. ಇಂಥ ಕಡೆಯೇ ನಿವೇಶನ ಕೊಡಿ ಎಂದು ನಾವು ಕೇಳಿಲ್ಲ ಎಂದು ಹೇಳಿದರು.

ಇದನ್ನೂ ಓದಿ: R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಅಧಿಕಾರದಲ್ಲಿತ್ತು

ನಿವೇಶನ ನೀಡಿದಾಗ 2021ನೇ ಇಸವಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಅವರೇ ನಿವೇಶನಗಳನ್ನು ಹಂಚಿ ಈಗ ಕಾನೂನುಬಾಹಿರ ಎಂದರೆ ಹೇಗೆ? ವಿಜಯನಗರ 3ನೇ ಅಥವಾ 4ನೇ ಹಂತದಲ್ಲಿ ಕೊಡಿ ಎಂದು ಕೇಳಲಿಲ್ಲ. ನಮಗೆ ಪರ್ಯಾಯವಾಗಿ 50:50 ಅನುಪಾತದಲ್ಲಿ ಕೊಡಲು ಒಪ್ಪಿದಂತೆ ಕೊಡಿ ಎಂದು ಹೇಳಿದ್ದೇವೆ. ಇದು ರಾಜಕೀಯ ಪ್ರೇರಿತ ಆಪಾದನೆ ಎಂದು ತಿಳಿಸಿದರು.

ನಿವೇಶನ ಕೊಟ್ಟಿರುವುದು ತಪ್ಪು ಎಂದರೆ ಪರಿಹಾರ ಕೊಡಲಿ

ಭೂ ಸ್ವಾಧೀನವಾದಲ್ಲಿಯೇ ಜಮೀನು ಕೊಡಬೇಕೆಂಬ ನಿಯಮವಿದೆ ಎಂದು ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾವು ಇಂಥ ಕಡೆಯೇ ನಿವೇಶನ ಕೊಡಿ ಎಂದು ಕೇಳಿಲ್ಲ. ಜಾಗ ಕೊಟ್ಟಿರುವುದು ತಪ್ಪು ಎನ್ನುವುದಾದರೆ ನಮಗೆ ಪರಿಹಾರ ಕೊಡಲಿ. ಅಕ್ಟೋಬರ್ 2023 ರಲ್ಲಿ ಸಚಿವರು 50:50 ಅನುಪಾತದಲ್ಲಿ ಜಮೀನು ಕೊಡುವುದನ್ನು ರದ್ದು ಮಾಡಿ ಎಂದು ಬರೆದಿದ್ದಾರೆ. ಬರೆಯದೇ ಹೋದರೂ ಕೂಡ 62 ಕೋಟಿ ರೂ. ಗಳನ್ನು ಕಾನೂನಿನ ಪ್ರಕಾರ ಕೊಟ್ಟುಬಿಡಲಿ. ನಮಗೆ ಕೊಟ್ಟಿರುವ 14 ನಿವೇಶನಗಳ ಬೆಲೆ ಇದಕ್ಕಿಂತಲೂ ಕಡಿಮೆ ಇದೆ. ಒಂದು ಎಕರೆಗೆ 44 ಸಾವಿರ ಚದರ ಅಡಿಯಾದರೆ ನನಗೆ ಕೊಟ್ಟಿರುವುದು 38.264 ಚದರ ಅಡಿ. ಒಂದು ಎಕರೆಗಿಂತ ಕಡಿಮೆಯಾಗಿದೆ. ಪರಿಹಾರವಾಗಿ ಕೊಟ್ಟಿರುವ ಜಮೀನಿನ ಬೆಲೆ ಎಷ್ಟಿದೆ ಎಂದು ನನಗೆ ತಿಳಿದಿಲ್ಲ. ನನಗೆ 62 ಕೋಟಿ ರೂ. ಕೊಟ್ಟುಬಿಡಲಿ ಎಂದು ಹೇಳಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

ನಗರಾಭಿವೃದ್ಧಿ ಸಚಿವರು ನಿವೇಶನ ಹಂಚಿಕೆಗೆ ಸಂಬಂಧಿಸಿದ ಕಡತವನ್ನು ತೆಗೆದುಕೊಂಡು ಬಂದಿದ್ದಾರೆ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿ, ಕಡತ ತಂದಿಲ್ಲ ಎಂದು ಈ ವೇಳೆ ಸಿಎಂ ತಿಳಿಸಿದರು.

Continue Reading

ಬೆಂಗಳೂರು

Lakshmi Hebbalkar: ಅಂಗನವಾಡಿ ಹೆಸರು ಶೀಘ್ರದಲ್ಲೇ ಬದಲಾವಣೆ! ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುಳಿವು

Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Anganwadi workers should not be worried says Minister Lakshmi Hebbalkar
Koo

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಭರವಸೆ ನೀಡಿದ್ದಾರೆ.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ, ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಈ ವೇಳೆ ತಿಳಿಸಿದರು.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.

ಅಂಗನವಾಡಿ ಕೇಂದ್ರದ ಹೆಸರು ಬದಲಾವಣೆಗೆ ಚಿಂತನೆ

ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಇದನ್ನೂ ಓದಿ: DK Suresh: ರಾಜ್ಯದ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಿ; ಕೇಂದ್ರಕ್ಕೆ ಡಿ.ಕೆ. ಸುರೇಶ್ ಮನವಿ

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಬಿ. ಅಮ್ಜದ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

ಕರ್ನಾಟಕ

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

R Ashok: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌, 86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

VISTARANEWS.COM


on

Opposition party leader R Ashok latest statement about muda scam
Koo

ಬೆಂಗಳೂರು: ಮುಡಾದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ಇದರಿಂದ ಎಲ್ಲ ಸತ್ಯ ಹೊರಬರಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ (R Ashok) ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಮುಡಾ ಭೂಸ್ವಾಧೀನ ಮಾಡಿಕೊಳ್ಳಲು ಮುಂದಾಗಿ ನಂತರ ಡಿನೋಟಿಫೈ ಮಾಡಿತ್ತು. ಅದಾದ ನಂತರವೂ ಬಡಾವಣೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅರ್ಜಿ ಸಲ್ಲಿಸಿದ ನಂತರ ಮುಡಾ ಅಧ್ಯಕ್ಷ ಮತ್ತು ಆಯುಕ್ತರು 50:50 ಅನುಪಾತದಲ್ಲಿ ನಿವೇಶನ ನೀಡಿದ್ದಾರೆ. ಇದರಿಂದ ಮುಡಾಗೆ ನಷ್ಟವಾಗಿದೆ.

50:50 ಮಾಡುವುದಾದರೆ ಸರ್ಕಾರಕ್ಕೆ ಕಳುಹಿಸಿ ಒಪ್ಪಿಗೆ ಸಿಕ್ಕಿ ಆದೇಶವಾಗಬೇಕು. ಅಕ್ರಮವಾಗಿ ಅವರೇ ಹಂಚಿಕೆ ಮಾಡಿಕೊಂಡಿದ್ದಾರೆ. ಉದಾಹರಣೆಗೆ ದಾಸರಹಳ್ಳಿಯಲ್ಲಿ ಭೂಸ್ವಾಧೀನವಾದರೆ ಎಂ.ಜಿ. ರಸ್ತೆಯ ಜಮೀನು ಕೊಟ್ಟಂತಾಗಿದೆ. ಈ ಹಗರಣದ ತನಿಖೆಯನ್ನು ಸರ್ಕಾರದಡಿಯ ಸಂಸ್ಥೆಗೆ ನೀಡಿದರೆ ಮುಖ್ಯಮಂತ್ರಿಯವರನ್ನು ಆರೋಪಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಿಬಿಐಗೆ ತನಿಖೆಗೆ ವಹಿಸಲಿ ಎಂದು ಒತ್ತಾಯಿಸಿದರು.

ಇದನ್ನೂ ಓದಿ: Hassan News: ಆಲೂರಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್‌ಬುಕ್‌, ಬ್ಯಾಗ್‌ ವಿತರಣೆ

ಡಿನೋಟಿಫೈ ಆದ ಭೂಮಿಯ ಬದಲಿಗೆ ಪ್ರತಿಷ್ಠಿತ ಸ್ಥಳದ ಕಡೆ ಜಾಗ ನೀಡಲಾಗಿದೆ. ಡಿನೋಟಿಫೈ ಆದ ಜಮೀನನ್ನು ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಭೂ ಮಾಲೀಕರು ಅದನ್ನು ನೋಡಿಕೊಂಡು ಏಕೆ ಸುಮ್ಮನಿದ್ದರು ಎಂದು ಅನುಮಾನವಾಗುತ್ತದೆ. ನಾನು ಕೂಡ ಈ ಕುರಿತು ದಾಖಲೆಗಳನ್ನು ಕೇಳಿದ್ದರೂ ಏನೂ ಸಿಕ್ಕಿಲ್ಲ. ಈ ವಹಿವಾಟುಗಳಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ. ಮೈಸೂರು ಜಿಲ್ಲಾಧಿಕಾರಿ ಹಲವಾರು ಬಾರಿ ಮುಡಾಗೆ ಪತ್ರ ಬರೆದು ಸ್ಪಷ್ಟನೆ ಕೇಳಿದ್ದಾರೆ. ಆದರೆ ಇದಕ್ಕೆ ಮುಡಾದಿಂದ ಉತ್ತರ ದೊರೆತಿಲ್ಲ. ಅಲ್ಲೇ ಎಲ್ಲರೂ ಸೇರಿಕೊಂಡು ಗ್ಯಾಂಗ್‌ ಮಾಡಿಕೊಂಡಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದೆ ಎಂದು ಆರೋಪಿಸಿದರು.

ಇದು ಬಿಜೆಪಿ ಕಾಲದಲ್ಲೇ ನಡೆದಿದ್ದು ಎಂದು ಸಿಎಂ ಹೇಳಿದ್ದಾರೆ. ಅದು ಯಾರೇ ಆಗಿದ್ದರೂ ಅವರನ್ನು ಮೊದಲು ಬಂಧನ ಮಾಡಿಸಬೇಕು. ಇದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಇದರಲ್ಲಿ ಬಿಜೆಪಿ ಸರ್ಕಾರದ ಯಾವುದೇ ಪಾತ್ರವಿಲ್ಲ. ಈ ನಿವೇಶನ ಮಂಜೂರನ್ನು ಮೊದಲು ರದ್ದುಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

86 ಸಾವಿರ ಜನರು ನಿವೇಶನ ಕೊಡಿ ಎಂದು ಮನವಿ ಮಾಡಿದ್ದರೂ ಕಾಂಗ್ರೆಸ್‌ ನಾಯಕರಿಗೆ ಮಾತ್ರ ಸೈಟುಗಳು ಸಿಕ್ಕಿದೆ. ಸರ್ಕಾರದ ಆಸ್ತಿಗಳನ್ನು ಯಾರ‍್ಯಾರೋ ಲೂಟಿ ಮಾಡುತ್ತಿದ್ದಾರೆ ಎಂದು ದೂರಿದರು.

Continue Reading

ದೇಶ

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Om Birla: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು. ವ್ಯಾಪಕ ಚರ್ಚೆಗೆ ಕಾರಣವಾಗಿತ್ತು.

VISTARANEWS.COM


on

Om Birla
Koo

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಲೋಕಸಭಾ ಸ್ಪೀಕರ್ (Lok Sabha Speaker) ಓಂ ಬಿರ್ಲಾ (Om Birla) ಅವರು ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಿಯಮದಲ್ಲಿ ಕೆಲವು ತಿದ್ದುಪಡಿಗಳನ್ನು ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ಸದಸ್ಯರು ಪ್ರಮಾಣ ವಚನ ಸ್ವೀಕರಿಸುವಾಗ ಯಾವುದೇ ಘೋಷಣೆ ಕೂಗುವಂತಿಲ್ಲ. ಈ ಬಾರಿ ಸಂಸದರು ಪ್ರಮಾಣ ವಚನ ಸ್ವೀಕರಿಸುವಾಗ ಘೋಷಣೆ ಕೂಗಿದ್ದು ವಿವಾದದ ಕಿಡಿ ಹೊತ್ತಿಸಿದ ಹಿನ್ನೆಲೆಯಲ್ಲಿ ಸ್ಪೀಕರ್‌ ಈ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ವಾರ ನಡೆದ ಸಂಸದರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕೆಲವರು ಜೈ ಸಂವಿಧಾನ ಎಂದು ಕೂಗಿದ್ದರೆ, ಹೈದರಾಬಾದ್‌ ಸಂಸದ, ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ʼಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಮೊಳಗಿಸಿದ್ದರು. ಉತ್ತರ ಪ್ರದೇಶದ ಬರೇಲಿಯ ಬಿಜೆಪಿ ಸಂಸದ ಛತ್ರ ಪಾಲ್ ಸಿಂಗ್ ಗಂಗ್ವಾರ್ ಪ್ರಮಾಣ ವಚನದ ಕೊನೆಗೆ “ಜೈ ಹಿಂದೂ ರಾಷ್ಟ್ರ” ಎಂದು ಹೇಳಿದ್ದರು.

ಬಳಿಕ ಈ ವಿಚಾರ ವಿವಾದ ಎಬ್ಬಿಸಿತ್ತು. ದೇಶಾದ್ಯಂತ ಪರ-ವಿರೋಧ ಚರ್ಚೆ ನಡೆದಿದ್ದವು. ಇದರ ನಂತರ ಬಿರ್ಲಾ ಅವರು ಸದಸ್ಯರ ಪ್ರಮಾಣ ವಚನ ಸ್ವೀಕಾರ ಮತ್ತು ದೃಢೀಕರಣಕ್ಕಾಗಿ ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಿದ್ದರು. ಸಮಿತಿಯ ಶಿಫಾರಸ್ಸಿನಂತೆ ಇದೀಗ ಲೋಕಸಭೆಯ ಕಾರ್ಯ ವಿಧಾನ ಮತ್ತು ನಡವಳಿಕೆಯ ನಿಯಮಗಳ 389ನೇ ನಿಯಮಕ್ಕೆ ತಿದ್ದುಪಡಿ ತರಲಾಗಿದೆ. ಓಂ ಬಿರ್ಲಾ ಅವರು ಸ್ಪೀಕರ್ ನಿರ್ದೇಶನಗಳಿಗೆ ಹೊಸ ಷರತ್ತು ಸೇರಿಸಿದ್ದಾರೆ.

ಹೊಸ ನಿಯಮದಲ್ಲಿ ಏನಿದೆ?

ಹೊಸ ನಿಯಮದ ಪ್ರಕಾರ ಸಂಸದರು ಪ್ರಮಾಣ ವಚನ ಸ್ವೀಕರಿಸುವ ಮೊದಲು ಅಥವಾ ಬಳಿಕ ಯಾವುದೇ ಪದಗಳು ಅಥವಾ ಅಭಿವ್ಯಕ್ತಿಗಳನ್ನು ಬಳಸಬಾರದು. ಒಂದುವೇಳೆ ನಿಯಮ ಉಲ್ಲಂಘಿಸಿದರೆ ಸಂಸದರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ 18ನೇ ಲೋಕಸಭೆಯ ಮೊದಲ ಅಧಿವೇಶನದ ಕೊನೆಯಲ್ಲಿ ಮಾಹಿತಿ ನೀಡಿದರು.

ಏನಿದು ವಿವಾದ?

18ನೇ ಲೋಕಸಭೆಯ ಸದಸ್ಯರಾಗಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅಸಾದುದ್ದೀನ್ ಓವೈಸಿ ಕೊನೆಗೆ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದರು. ಜೈ ಪ್ಯಾಲೆಸ್ತೀನ್​’ ಘೋಷಣೆಗೆ ಬಿಜೆಪಿ ತೀವ್ರ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಓವೈಸಿ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು. ಸದನದ ಹೊರಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್ ಎಂದು ಹೇಳುವುದರಲ್ಲಿ ಯಾವುದೇ ತಪ್ಪಿಲ್ಲʼʼ ಎಂದಿದ್ದರು. “ಇತರ ಸದಸ್ಯರು ಸಹ ವಿವಿಧ ರೀತಿಯ ಘೋಷಣೆ ಕೂಗುತ್ತಾರೆ. ಅದು ಹೇಗೆ ತಪ್ಪಾಗುತ್ತದೆ? ನಾನು ಏನು ಹೇಳಬೇಕೋ ಅದನ್ನು ಹೇಳಿದೆ. ಪ್ಯಾಲೆಸ್ತೀನ್ ಬಗ್ಗೆ ಮಹಾತ್ಮ ಗಾಂಧಿ ಹೇಳಿದ್ದನ್ನು ಓದಿ” ಎಂದು ಓವೈಸಿ ಹೇಳಿದ್ದರು. ಬಳಿಕ ಇದು ವ್ಯಾಪಕ ವಿವಾದ ಹುಟ್ಟು ಹಾಕಿತ್ತು.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Continue Reading
Advertisement
Mukesh Ambani
ದೇಶ51 mins ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ55 mins ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Team India
ಪ್ರಮುಖ ಸುದ್ದಿ2 hours ago

Team India : ಅಪರೂಪದಲ್ಲಿ ಅಪರೂಪ; ಮುಂಬೈ ವಿಮಾನ ನಿಲ್ದಾಣದಲ್ಲಿ ಟೀಂ ಇಂಡಿಯಾದ ವಿಮಾನಕ್ಕೆ ಸೆಲ್ಯೂಟ್

BS Yediyurappa
ಕರ್ನಾಟಕ2 hours ago

BS Yediyurappa: ಪೋಕ್ಸೊ ಕೇಸ್;‌ ಜುಲೈ 17ರಂದು ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ಕೋರ್ಟ್‌ ಸಮನ್ಸ್!

Hatras Stampede
ದೇಶ2 hours ago

Hathras Stampede: ಕಾಲ್ತುಳಿತದ ಬಳಿಕ ಕಾಲ್ಕಿತ್ತಿದ್ದ ಡೋಂಗಿ ಬಾಬಾ- ವೈರಲ್‌ ಆಯ್ತು ವಿಡಿಯೋ

PF Interest
ದೇಶ2 hours ago

PF Interest: ನೌಕರರಿಗೆ ಗುಡ್‌ ನ್ಯೂಸ್;‌ ಪಿಎಫ್‌ ಬಡ್ಡಿದರ ಘೋಷಿಸಿದ ಕೇಂದ್ರ ಸರ್ಕಾರ, ಎಷ್ಟಿದೆ ನೋಡಿ

Hardik Pandya
ಪ್ರಮುಖ ಸುದ್ದಿ2 hours ago

Hardik Pandya : ಅವಮಾನ ಮಾಡಿದ ಪ್ರೇಕ್ಷಕರಿಂದಲೇ ಜೈಕಾರ ಹಾಕಿಸಿಕೊಂಡ ಹಾರ್ದಿಕ್ ಪಾಂಡ್ಯ!

Heavy rain in Uttara Kannada district district NDRF team for rescue says DC Gangubai Manakar
ಉತ್ತರ ಕನ್ನಡ2 hours ago

Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

Central Govt approves quadrilateral road in Shira at a cost of Rs 1000 rs crore says TB Jayachandra
ತುಮಕೂರು2 hours ago

Shira News: ಶಿರಾದಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆಗೆ ಕೇಂದ್ರದಿಂದ ಅನುಮೋದನೆ: ಟಿ.ಬಿ ಜಯಚಂದ್ರ

Viral Video
Latest2 hours ago

Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ6 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ7 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ9 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ9 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ11 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ11 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌