ರಾಜ್ಯಕ್ಕಿಂದು ಅಮಿತ್‌ ಷಾ; ಬಿಜೆಪಿಯಲ್ಲಿ ಆತಂಕದ ʼಸಂತೋಷʼ - Vistara News

ರಾಜಕೀಯ

ರಾಜ್ಯಕ್ಕಿಂದು ಅಮಿತ್‌ ಷಾ; ಬಿಜೆಪಿಯಲ್ಲಿ ಆತಂಕದ ʼಸಂತೋಷʼ

ಹೊಸಬರಿಗೆ ಟಿಕೆಟ್‌ ನೀಡುವ ವಿಚಾರಕ್ಕಿಂತಲೂ ಸದ್ಯ ಬಿಜೆಪಿಯಲ್ಲಿ ಮಂತ್ರಿಮಂಡಲ ಪುನಾರಚನೆ ಹಾಗೂ ಸಿಎಂ ಬದಲಾವಣೆಗೆ ಸಂತೋಷ್‌ ಮಾತು ಕಿಚ್ಚು ಹಚ್ಚಿಸಿದೆ.

VISTARANEWS.COM


on

B L Santosh and LookOut Notice
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಒಂದು ವರ್ಷಕ್ಕೂ ಕಡಿಮೆ ಅವಧಿ ಇರುವ ಸಮಯದಲ್ಲಿ ರಾಷ್ಟ್ರೀಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ನೀಡಿರುವ ʼಬದಲಾವಣೆʼಯ ಹೇಳಿಕೆ ಸಂಚಲನ ಉಂಟುಮಾಡಿದೆ. ಹೇಳಿಕೆ ಬೆನ್ನಲ್ಲೇ “ಚುನಾವಣಾ ಚಾಣಕ್ಯ” ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಸೋಮವಾರ ಆಗಮಿಸುತ್ತಿರುವುದು ಸಂಚಲನಕ್ಕೆ ಮತ್ತಷ್ಟು ವೇಗ ನೀಡಿದೆ.

ಮೈಸೂರಿನ ಕಾರ್ಯಕರ್ತರ ಸಮಾವೇಶದಲ್ಲಿ ಭಾನುವಾರ ಮಾತನಾಡಿದ್ದ ಬಿ.ಎಲ್‌. ಸಂತೋಷ್‌, ಇಂದು ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿಗಳ ಸರಾಸರಿ ವಯಸ್ಸು 56.5 ವರ್ಷ. ಇಬ್ಬರು ಮುಖ್ಯಮಂತ್ರಿಗಳು ಹಿರಿಯರಿರುವ ಕಾರಣ ಇಷ್ಟಿದೆ. ಆ ಇಬ್ಬರೂ ಕಡಿಮೆ ವಯಸ್ಸಿನವರಾಗಿದ್ದರೆ ಸರಾಸರಿ ವಯಸ್ಸು ಇನ್ನೂ ಕಡಿಮೆ ಇರುತ್ತಿತ್ತು. ಕೇಂದ್ರ ಮಂತ್ರಿ ಮಂಡಲದ ಸರಾಸರಿ ವಯಸ್ಸು 57 ವರ್ಷ. ಇದರಲ್ಲಿ 99.9% ಜನರು ನಿಶ್ಚಿತ ಕುಟುಂಬದಿಂದ ಬಂದಿಲ್ಲ ಅಥವಾ ರಾಜಕೀಯ ಕುಟುಂಬದವರನ್ನು ಮದುವೆ ಆಗಿಲ್ಲ. ಸಮಾಜದಿಂದಲೇ ಎಲ್ಲರನ್ನೂ ಕರೆತಂದಿರುವುದರಿಂದ, ಹೊಸ ವ್ಯವಸ್ಥೆ ಸೃಷ್ಟಿಯಾಗುತ್ತಿದೆ ಎಂದರು.

ನವದೆಹಲಿ ಕಾರ್ಪೊರೇಷನ್‌ ಚುನಾವಣೆ ಉದಾಹರಣೆ ನೀಡಿದ ಸಂತೋಷ್‌, ಕಳೆದ ಬಾರಿ(2017) ನವದೆಹಲಿ ಕಾರ್ಪೊರೇಷನ್‌ ಚುನಾವಣೆಯಲ್ಲಿ ಹಾಲಿಗಳಿಗೆ ಟಿಕೆಟ್‌ ಇಲ್ಲ ಎಂದು ನಿರ್ಧಾರ ಮಾಡಲಾಯಿತು. (ಈ ಚುನಾವಣೆಯಲ್ಲಿ ದೆಹಲಿಯ ಮೂರೂ ಪಾಲಿಕೆಗಳಲ್ಲಿ ಬಿಜೆಪಿ ಜಯಗಳಿಸಿತ್ತು). ಗುಜರಾತ್‌ನಲ್ಲಿ ಚುನಾವಣೆ ಟಿಕೆಟ್‌ ನೀಡುವ ವೇಳೆ, ಎರಡು ಬಾರಿ ಶಾಸಕರಾದವರಿಗೆ ಹಾಗೂ ಅವರ ಮೊದಲ ಹಂತದ ಕುಟುಂಬದವರಿಗೆ ಟಿಕೆಟ್‌ ನೀಡಬಾರದು ಎಂದು ನಿರ್ಧಾರ ಮಾಡಲಾಯಿತು. ಇಂದು ಆ ರಾಜ್ಯದ ಸಭೆಯಲ್ಲಿ ಭಾಗವಹಿಸಿದರೆ, ಎಲ್ಲ ಹೊಸ ಮುಖಗಳು ಕಾಣಿಸುತ್ತವೆ ಎಂದರು. ನಂತರ ಕರ್ನಾಟಕದತ್ತ ದೃಷ್ಟಿ ಹರಿಸಿದ ಸಂತೋಷ್‌, “ಕರ್ನಾಟದಲ್ಲೂ ಕೆಲವು ಜಿಲ್ಲೆಗಳಲ್ಲಿ ಕೊನೆಯ ಸಾಲಿನಲ್ಲಿ ಕುಳಿತವರು ಕೊನೆಯವರೆಗೂ ಅಲ್ಲೇ ಇರುವ ಸ್ಥಿತಿಯಿದೆ. ಇಂದು ಆ ಸ್ಥಿತಿಯನ್ನು ಬದಲಾಯಿಸುವ ಧೈರ್ಯ, ತಾಕತ್ತು ಪಕ್ಷಕ್ಕೆ ಬಂದಿದೆʼ ಎಂದರು. ಈ ಮಾತಿಗೆ ಸಂತೋಷಗೊಂಡ ಕಾರ್ಯಕರ್ತರು ಚಪ್ಪಾಳೆಮ ಶಿಳ್ಳೆ ಹೊಡೆದು ಸ್ವಾಗತಿಸಿದರು.

ಮಾತು ಮುಂದುವರಿಸಿದ ಸಂತೋಷ್‌, ʼ ಈ ಬದಲಾವಣೆಗಳು ಎಲ್ಲ ಕಡೆಯೂ ಎಲ್ಲ ಸಮಯದಲ್ಲೂ ಆಗುತ್ತದೆ ಎಂದು ಹೇಳುವುದಿಲ್ಲ. ಆದರೆ ಬೇರೆ ಪಕ್ಷಗಳು ಕನಸು ಮನಸ್ಸಿನಲ್ಲೂ ಊಹಿಸಲು ಸಾಧ್ಯವಾಗದ ಬದಲಾವಣೆ ಬಿಜೆಪಿಯಲ್ಲಿ ಆಗುತ್ತಿದೆʼ ಎಂದರು. ಇದರ ನಂತರ ಸಂತೋಷ್‌ ಹೇಳಿದ ಮಾತು; “ಗುಜರಾತ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಆದ ಕೂಡಲೆ ಇಡೀ ಮಂತ್ರಿ ಮಂಡಲ ಬದಲಾಯಿತು” ಈಗ ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಇದನ್ನೂ ಓದಿ | ಭಾರತಕ್ಕೆ ಸಮಸ್ಯೆ ಆದಾಗ ನೀವೆಲ್ಲಿದ್ದಿರಿ? ಯುರೋಪ್‌ಗೆ ಪಾಠ ಮಾಡಿದ ಜೈಶಂಕರ್‌

ಹಿಂದಿನ ಸಾಲಿನಲ್ಲಿ ಕುಳಿತ ಕಾರ್ಯಕರ್ತರು ಪ್ರತಿ ಚುನಾವಣೆಯಲ್ಲೂ ಯಾವುದೋ ಒಂದು ಕುಟುಂಬಕ್ಕೆ ಕೆಲಸ ಮಾಡುವುದಾಗುತ್ತದೆ. ಇದು ಬದಲಾಗಲು ಬಿಜೆಪಿಯಲ್ಲಿ ಅವಕಾಶಗಳಿವೆ ಎನ್ನಲಾಗುತ್ತಿತ್ತು. ಆದರೂ ಕೆಲ ಜಿಲ್ಲೆಗಳಲ್ಲಿ ಅದದೇ ಕುಟುಂಬದವರು ಆಡಳಿತ ನಡೆಸುತ್ತಿದ್ದಾರೆ. ಇದು ಸ್ಥಳೀಯ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಸಂತೋಷ್‌ ಅವರು ಬದಲಾವಣೆಯ ಮಾತನ್ನಾಡಿದ ಕೂಡಲೆ ಇದೇ ಕಾರಣಕ್ಕೆ ಕಾರ್ಯಕರ್ತರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಇದೇ ಮಾತು, ಈಗಾಗಲೆ ಬಿಜೆಪಿಯಲ್ಲಿ ಬೇರು ಬಿಟ್ಟಿರುವ ನಾಯಕರಿಗೆ ನಡುಕ ಉಂಟುಮಾಡಿದೆ. ಇನ್ನೇನು ಚುನಾವಣೆ ಹತ್ತಿರದಲ್ಲಿರುವಾಗ ಸಂತೋಷ್‌ ಈ ಮಾತನ್ನು ಹೇಳಿರುವುದು, ಮುಂದಿನ ಬಾರಿ ತಮಗೆ ಟಿಕೆಟ್‌ ಕೈತಪ್ಪಬಹುದೇ ಎಂಬ ಲೆಕ್ಕಾಚಾರಕ್ಕೆ ಕಾರಣವಾಗಿದೆ.

ಮುಖ್ಯಮಂತ್ರಿ ಬದಲಾವಣೆ?

ಹೊಸಬರಿಗೆ ಟಿಕೆಟ್‌ ನೀಡುವ ವಿಚಾರಕ್ಕಿಂತಲೂ ಸದ್ಯ ಬಿಜೆಪಿಯಲ್ಲಿ ಮಂತ್ರಿಮಂಡಲ ಪುನಾರಚನೆಗೆ ಸಂತೋಷ್‌ ಮಾತು ಕಿಚ್ಚು ಹಚ್ಚಿಸಿದೆ. ಗುಜರಾತ್‌ನಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸಿದ ಕೂಡಲೆ ಇಡೀ ಮಂತ್ರಿಮಂಡಲ ಬದಲಾಯಿತು ಎಂದು ಸಂತೋಷ್‌ ಹೇಳಿದ್ದಾರೆ. ಸದ್ಯ ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಚರ್ಚೆ ನಡೆಯುತ್ತಿದೆ. ಕೇಂದ್ರ ಗೃಹಸಚಿವ ಅಮಿತ್‌ ಷಾ ಸೋಮವಾರ ರಾತ್ರಿ ಕರ್ನಾಟಕಕ್ಕೆ ಆಗಮಿಸುತ್ತಾರೆ.

ಮಂಗಳವಾರ ಕೆಲವು ಸರ್ಕಾರಿ ಹಾಗೂ ಕೆಲವು ಸಂಘಟನಾತ್ಮಕ ಸಭೆಗಳಲ್ಲಿ ಭಾಗವಹಿಸುತ್ತಾರೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಆಗುತ್ತದೆ ಎಂಬ ನಿರೀಕ್ಷೆ ಇದೆ. ಇದೇ ವೇಳೆ, ರಾಜ್ಯದಲ್ಲಿ ಈಗ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸರ್ಕಾರ ನಡೆಯುತ್ತಿದೆ. ಇತ್ತೀಚೆಗೆ ಸರ್ಕಾರದ ಮೇಲಿನ 40% ಕಮಿಷನ್‌ ಆರೋಪ, ಈಶ್ವರಪ್ಪ ರಾಜೀನಾಮೆಯಂತಹ ಅನೇಕ ವಿಚಾರಗಳು ಸರ್ಕಾರದ ವರ್ಚಸ್ಸನ್ನು ತಗ್ಗಿಸಿವೆ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೆ ಚುನಾವಣೆ ಎದುರಿಸಿದರೆ ಜಯಗಳಿಸುವ ಕುರಿತು ಪಕ್ಷದಲ್ಲೆ ಎರಡು ರೀತಿಯ ಭಾವನೆಗಳಿವೆ. ಇದೀಗ ಗುಜರಾತ್‌ನಲ್ಲು ಮುಖ್ಯಮಂತ್ರಿ ಬದಲಾವಣೆ ಹೇಳಿಕೆ, ಅದೇ ವೇಳೆಗೆ ಅಮಿತ್‌ ಷಾ ಆಗಮನದ ವಿಚಾರಗಳು ರಾಜ್ಯದಲ್ಲೂ ಸಿಎಂ ಬದಲಾವಣೆಯ ಚರ್ಚೆಗೆ ವೇಗ ನೀಡಿವೆ.

ಇದನ್ನೂ ಓದಿ | ಗದಾಧಾರಿ V/S ಘಂಟಾಧಾರಿ ಹಿಂದುತ್ವ: ಬಿಜೆಪಿ ವಿರುದ್ಧ ಹರಿಹಾಯ್ದ ಮಹಾರಾಷ್ಟ್ರ CM ಠಾಕ್ರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

Lok Sabha Election: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆಯಲಿದ್ದು, ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಸಿದ್ಧತೆ ಮಾಡಿಕೊಂಡಿದೆ. ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೆಲ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ ಶುಕ್ರವಾರ (ಏಪ್ರಿಲ್‌ 26) ಮತದಾನ ನಡೆಯಲಿದೆ. ಆ ಮೂಲಕ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ (Lok Sabha Election 2024) ಅಬ್ಬರವು ಮತ್ತೊಂದು ಹಂತ ತಲುಪಲಿದೆ. ಶುಕ್ರವಾರ ಬೆಳಗ್ಗೆಯಿಂದಲೇ ಮತದಾನ ಆರಂಭವಾಗಲಿದ್ದು, ಚುನಾವಣೆ ಆಯೋಗವು ಶಾಂತಿಯುತ ಹಾಗೂ ಪಾರದರ್ಶಕ ಮತದಾನಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಇನ್ನು, ಮತದಾನದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಕೆಲ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಶಾಲೆ-ಕಾಲೇಜುಗಳಿಗೆ ರಜೆ

ಮತದಾನದ ಹಿನ್ನೆಲೆಯಲ್ಲಿ ಶುಕ್ರವಾರ ಶಾಲೆ-ಕಾಲೇಜುಗಳು ಸೇರಿ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅನಿವಾರ್ಯವಲ್ಲದ ಸರ್ಕಾರಿ ಸೇವೆಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಕಾರ್ಪೊರೇಟ್‌ ಕಚೇರಿಗಳು ಕೂಡ ಉದ್ಯೋಗಿಗಳಿಗೆ ಕಡ್ಡಾಯವಾಗಿ ರಜೆ ಘೋಷಿಸಬೇಕು ಎಂದು ಸೂಚಿಸಲಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಹೆಚ್ಚಿನ ಜನ ಭಾಗವಹಿಸಲು ಉತ್ತೇಜನ ನೀಡುವ ದಿಸೆಯಲ್ಲಿ ರಜೆ ಘೋಷಿಸಲು ಸೂಚಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ ಕೂಡ ರಜೆ ಘೋಷಣೆ ಮಾಡಿದೆ.

Voters' Pledge

ಮತದಾನದ ಹಿನ್ನೆಲೆಯಲ್ಲಿ ಬುಧವಾರ (ಏಪ್ರಿಲ್‌ 24) ಸಂಜೆಯಿಂದಲೇ ಮದ್ಯ ಮಾರಾಟ ನಿಷೇಧಗೊಳಿಸಲಾಗಿದೆ. ಏಪ್ರಿಲ್‌ 26ರ ಮದ್ಯರಾತ್ರಿವರೆಗೆ ಮದ್ಯ ಸಿಗುವುದಿಲ್ಲ. ಹಾಗೆಯೇ, ಸಿಆರ್‌ಪಿಎಸಿ ಸೆಕ್ಷನ್‌ 144 ಜಾರಿಯಲ್ಲಿರುವ ಕಾರಣ ಐದಕ್ಕೂ ಅಧಿಕ ಜನ ಸೇರುವಂತಿಲ್ಲ. ರಾಜಕೀಯ ಘೋಷಣೆ ಕೂಗುವಂತಿಲ್ಲ ಹಾಗೂ ಪ್ರಚೋದನಕಾರಿ ಭಾಷಣಗಳನ್ನು ಮಾಡುವಂತಿಲ್ಲ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಮತದಾನ?

ಕೋಲಾರ, ಮಂಡ್ಯ, ಉಡುಪಿ-ಚಿಕ್ಕಮಗಳೂರು, ಹಾಸನ, ಮೈಸೂರು, ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರ ಕೇಂದ್ರ, ಬೆಂಗಳೂರು ಉತ್ತರ, ದಕ್ಷಿಣ ಕನ್ನಡ, ಚಾಮರಾಜನಗರ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನರ ಸರತಿ ಸಾಲು ಇದ್ದರೆ ಮತದಾನದ ಸಮಯವನ್ನು ಒಂದು ಗಂಟೆವರೆಗೆ ವಿಸ್ತರಣೆ ಮಾಡಲಾಗುತ್ತದೆ.

ಯಾವ ರಾಜ್ಯದ ಎಷ್ಟು ಕ್ಷೇತ್ರಗಳಲ್ಲಿ ಮತದಾನ?

ಕೇರಳದ ಎಲ್ಲ 20, ಕರ್ನಾಟಕ 14, ರಾಜಸ್ಥಾನ 13, ಉತ್ತರ ಪ್ರದೇಶ ಹಾಗೂ ಮಹಾರಾಷ್ಟ್ರದ ತಲಾ 8, ಮಧ್ಯಪ್ರದೇಶ 6, ಬಿಹಾರ ಹಾಗೂ ಅಸ್ಸಾಂನ ತಲಾ 5, ಛತ್ತೀಸ್‌ಗಢ ಹಾಗೂ ಪಶ್ಚಿಮ ಬಂಗಾಳದ ತಲಾ 3, ತ್ರಿಪುರ, ಜಮ್ಮು-ಕಾಶ್ಮೀರ ಹಾಗೂ ಮಣಿಪುರದ ತಲಾ 1 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಒಟ್ಟು 7 ಹಂತಗಳಲ್ಲಿ ನಡೆಯುವ ಚುನಾವಣೆಯು ಜೂನ್‌ 1ರಂದು ಮುಕ್ತಾಯವಾಗಲಿದೆ. ಜೂನ್‌ 4ರಂದು ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

Continue Reading

Lok Sabha Election 2024

Lok Sabha Election 2024: ವೋಟರ್‌ ಲಿಸ್ಟ್‌ನಲ್ಲಿ ಚುನಾವಣಾ ಅಧಿಕಾರಿಗಳ ಹೆಸರೇ ಇಲ್ಲ; ಮತಗಟ್ಟೆ ಮುಂದೆಯೇ ಪ್ರೊಟೆಸ್ಟ್!

Lok Sabha Election 2024: ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ.

VISTARANEWS.COM


on

Lok Sabha Election 2024 No names of election officials in voter list Protest in front of the polling booth
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಏಪ್ರಿಲ್‌ 26ರ ಶುಕ್ರವಾರ ಬೆಂಗಳೂರಿನಲ್ಲಿ ಮೊದಲ ಹಂತದ ಮತದಾನ (First phase of polling) ನಡೆಯಲಿದೆ. ಈಗಾಗಲೇ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ನಡೆಸಿದೆ. ಚುನಾವಣಾ ಪ್ರಕ್ರಿಯೆಗೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಆದರೆ, ಬೆಂಗಳೂರಲ್ಲಿ ಚುನಾವಣಾ ಸೇವೆಗೆ ನಿಯೋಜನೆಗೊಂಡ ಅಧಿಕಾರಿಗಳ ಹೆಸರೇ ವೋಟರ್‌ ಲಿಸ್ಟ್‌ನಲ್ಲಿ (Voter List) ಇಲ್ಲದಿರುವುದು ಗೊತ್ತಾಗಿದೆ. ಈ ಸಂಬಂಧ ಆ ಅಧಿಕಾರಿಗಳು ಮತಗಟ್ಟೆ ಎದುರೇ ಧರಣಿ ಕುಳಿತಿದ್ದಾರೆ.

ಚುನಾವಣಾ ಕೆಲಸಕ್ಕೆ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ. ಕೆಲವರಿಗೆ ನಿಯೋಜನೆಗೊಂಡ ಮತಗಟ್ಟೆಯಲ್ಲಿಯೇ ಮತ ಹಾಕಲು ವ್ಯವಸ್ಥೆಯನ್ನು ಮಾಡಲಾಗಿದೆ. ಆದರೆ, ಎಚ್ಎಸ್ಆರ್ ಲೇಔಟ್ ಬಳಿ ಇರುವ ಜೆಎಸ್‌ಎಸ್ ಶಾಲೆ ಮತಗಟ್ಟೆಯಲ್ಲಿ ನಿಯೋಜನೆಗೊಂಡ ಅಧಿಕಾರಿಗಳ ಹೆಸರು ವೋಟರ್‌ ಲಿಸ್ಟ್‌ನಲ್ಲಿಯೇ ಇಲ್ಲ. ಇದು ಅಧಿಕಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವೋಟಿಂಗ್ ನಡೆಯುವ ಶಾಲೆ ಮುಂದೆಯೇ ಧರಣಿ ಕುಳಿತಿದ್ದಾರೆ. ಹಲವು ಅಧಿಕಾರಿಗಳ ಹೆಸರು ಮಿಸ್‌ ಆಗಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇವಿಎಂನಲ್ಲಿ ನಿಮ್ಮ ಮತ ದಾಖಲಾಗುವುದು ಹೇಗೆ? ವಿವಿಪ್ಯಾಟ್‌ ಕೆಲಸ ಏನು? ಇಲ್ಲಿದೆ ಸಮಗ್ರ ವಿವರ

ವಿದ್ಯುನ್ಮಾನ ಮತಯಂತ್ರಗಳ (EVM- ಇವಿಎಂ) ಕುರಿತು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಕಾನೂನು ಹೋರಾಟದ ನಡುವೆಯೇ ಲೋಕಸಭೆ ಚುನಾವಣೆ (Lok Sabha Election 2024) ಮೊದಲ ಹಂತದ ಮತದಾನ (1st phase Voting) ನಡೆಯುತ್ತಿದೆ. ಇವಿಎಂಗಳಲ್ಲಿ ಚಲಾವಣೆಯಾದ 100% ಮತಗಳನ್ನೂ ವಿವಿಪ್ಯಾಟ್ (VVPAT) ವ್ಯವಸ್ಥೆಯ ಮೂಲಕ ಪರಿಶೀಲಿಸುವ ವ್ಯವಸ್ಥೆ ಜಾರಿ ಮಾಡಬೇಕು (VVPAT Verification) ಎಂದು ಅರ್ಜಿದಾರರು ಕೋರಿದ್ದಾರೆ. ಈ ಸಂದರ್ಭದಲ್ಲಿ, ಇವಿಎಂ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ, ವಿವಿಪ್ಯಾಟ್‌ ಮೂಲಕ ಅದರ ಪರಿಶೀಲನೆ ಹೇಗೆ, ಎಂಬುದನ್ನು ವಿವರವಾಗಿ ತಿಳಿಯೋಣ.

ಕೋರ್ಟ್‌ನಲ್ಲಿ ನಡೆಸದ ವಾದವಿವಾದಗಳ ಸಮಯದಲ್ಲಿ, ಬ್ಯಾಲೆಟ್ ವೋಟಿಂಗ್ ಸಿಸ್ಟಮ್‌ಗೆ ಹಿಂತಿರುಗಲು ಸಲಹೆಗಳು ಬಂದಿವೆ. ಅರ್ಜಿದಾರರು ಯುರೋಪಿಯನ್ ರಾಷ್ಟ್ರಗಳ ಉದಾಹರಣೆ ತೋರಿಸಿದ್ದಾರೆ. ಆದರೆ, “ಪಶ್ಚಿಮ ಬಂಗಾಳದ ಜನಸಂಖ್ಯೆಯೇ ಜರ್ಮನಿಗಿಂತ ಹೆಚ್ಚಿರುವುದನ್ನು ಗಮನಿಸಿ. ಇಂತಹ ಹೋಲಿಕೆಗಳನ್ನು ಮಾಡಬೇಡಿ” ಎಂದು ನ್ಯಾಯಾಲಯವು ಅರ್ಜಿದಾರರಿಗೆ ಹೇಳಿದೆ. ನಿನ್ನೆ, ಭಾರತೀಯ ಚುನಾವಣಾ ಆಯೋಗದ ವಕೀಲರು ಇವಿಎಂ ವ್ಯವಸ್ಥೆಯು ಹೇಗೆ ಕಾರ್ಯನಿರ್ವಹಿಸುತ್ತದೆ ಮತ್ತು ಯಾವುದೇ ರೀತಿಯ ಟ್ಯಾಂಪರಿಂಗ್ ವಿರುದ್ಧ ಹೇಗೆ ದೋಷರಹಿತವಾಗಿದೆ ಎಂಬುದನ್ನು ವಿವರಿಸಿದರು.

ಇವಿಎಂ ಕೆಲಸ ಮಾಡುವುದು ಹೇಗೆ?

EVM ಎರಡು ಘಟಕಗಳನ್ನು ಹೊಂದಿದೆ- ನಿಯಂತ್ರಣ ಘಟಕ ಮತ್ತು ಮತದಾನ ಘಟಕ. ಇವುಗಳನ್ನು ಕೇಬಲ್ ಮೂಲಕ ಸಂಪರ್ಕಿಸಲಾಗಿದೆ. ಇವಿಎಂ ನಿಯಂತ್ರಣ ಘಟಕವು ಪೋಲಿಂಗ್ ಆಫೀಸರ್‌ ಬಳಿ ಇರುತ್ತದೆ. ಮತಯಂತ್ರ ಸಾಮಾನ್ಯವಾಗಿ ಮತದಾರನ ಖಾಸಗಿತನಕ್ಕಾಗಿ ಮುಚ್ಚಿದ ಆವರಣದೊಳಗೆ ಇರುತ್ತದೆ.

ಮತಗಟ್ಟೆಯಲ್ಲಿ, ಮತಗಟ್ಟೆ ಅಧಿಕಾರಿಯು ನಿಮ್ಮ ಗುರುತನ್ನು ಪರಿಶೀಲಿಸುತ್ತಾರೆ. ನಂತರ ನೀವು ಮತ ​​ಚಲಾಯಿಸಲು ಅನುವು ಮಾಡಿಕೊಡುವ ಬ್ಯಾಲೆಟ್ ಬಟನ್ ಅನ್ನು ಒತ್ತುತ್ತಾರೆ. ಬ್ಯಾಲೆಟ್ ಯೂನಿಟ್‌ನಲ್ಲಿ ಅಭ್ಯರ್ಥಿಗಳ ಹೆಸರುಗಳು ಮತ್ತು ಚಿಹ್ನೆಗಳು ಅವುಗಳ ಪಕ್ಕದಲ್ಲಿ ನೀಲಿ ಬಟನ್‌ಗಳಿರುತ್ತವೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತಬೇಕು.

ಮತದಾನ ಪ್ರಕ್ರಿಯೆ

ಮತಗಟ್ಟೆ ಅಧಿಕಾರಿಯ ನಿಯಂತ್ರಣ ಘಟಕವು ಬಹು ಬಟನ್‌ಗಳನ್ನು ಹೊಂದಿದೆ. ಅವುಗಳಲ್ಲಿ ಒಂದು ʼballot’ ಎಂಬ ಶೀರ್ಷಿಕೆಯಿದು. ಒಮ್ಮೆ ಅಧಿಕಾರಿಯು ಈ ಗುಂಡಿಯನ್ನು ಒತ್ತಿದರೆ, ʼಬ್ಯುಸಿ’ ಎಂಬ ಶೀರ್ಷಿಕೆಯ ಕೆಂಪು ದೀಪವು ಬೆಳಗುತ್ತದೆ. ಒಂದು ಮತವನ್ನು ದಾಖಲಿಸಲು ನಿಯಂತ್ರಣ ಘಟಕ ಸಿದ್ಧವಾಗಿದೆ ಎಂದು ಇದು ಸೂಚಿಸುತ್ತದೆ. ಮತದಾರ ಇರುವ ಬ್ಯಾಲೆಟ್ ಯೂನಿಟ್‌ನಲ್ಲಿ ಹಸಿರು ದೀಪ ಆನ್ ಆಗಿದ್ದು, ಮತದಾನಕ್ಕೆ ಯಂತ್ರ ಸಿದ್ಧವಾಗಿದೆ ಎಂದು ಸಂಕೇತಿಸುತ್ತದೆ. ನಂತರ ಮತದಾರನು ತನ್ನ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒತ್ತುತ್ತಾನೆ. ಬ್ಯಾಲೆಟ್ ಯೂನಿಟ್ ದೃಷ್ಟಿಹೀನ ಮತದಾರರಿಗೆ ಬ್ರೈಲ್ ಲಿಪಿಯನ್ನು ಸಹ ಹೊಂದಿದೆ.

ಮತದಾರರು ಮತದಾನ ಮಾಡಿದ ನಂತರ, ನಿಯಂತ್ರಣ ಘಟಕವು ಬೀಪ್ ಧ್ವನಿಯನ್ನು ಹೊರಸೂಸುತ್ತದೆ. ಇದು ಮತದಾನ ಪೂರ್ಣಗೊಂಡಿದೆ ಎಂದು ಸೂಚಿಸುತ್ತದೆ. ನಿಯಂತ್ರಣ ಘಟಕವು ಎಲ್‌ಇಡಿ ಪರದೆ ಮತ್ತು ಬಟನ್‌ಗಳನ್ನು ಹೊಂದಿದ್ದು, ಅದರಲ್ಲಿ ದಾಖಲಾಗಿರುವ ಒಟ್ಟು ಮತಗಳ ಸಂಖ್ಯೆಯನ್ನು ನೋಡಲು ಬಳಸಬಹುದು. ಎಲ್ಲಾ ಮತಗಳು ದಾಖಲಾದ ನಂತರ, ಮತಗಟ್ಟೆ ಅಧಿಕಾರಿಯು ನಿಯಂತ್ರಣ ಘಟಕದ ಬದಿಯಲ್ಲಿರುವ ಗುಂಡಿಯನ್ನು ಒತ್ತಿ, ಯಂತ್ರವನ್ನು ಮುಚ್ಚುತ್ತಾರೆ. ಎಣಿಕೆಯ ದಿನದಂದು, ಪ್ರತಿ ಅಭ್ಯರ್ಥಿ ಪಡೆದ ಒಟ್ಟು ಮತಗಳನ್ನು ನೋಡಲು ʼresult’ ಶೀರ್ಷಿಕೆಯ ಬಟನ್ ಅನ್ನು ಬಳಸಲಾಗುತ್ತದೆ. ನಿಯಂತ್ರಣ ಘಟಕದಿಂದ ಎಲ್ಲಾ ಡೇಟಾವನ್ನು ಅಳಿಸಲು ಬಳಸಬಹುದಾದ ʼclear’ ಬಟನ್ ಕೂಡ ಇದೆ.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಇದನ್ನೂ ಓದಿ: Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

ಸಮಯ ಉಳಿಕೆ

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ.

ಎಲ್ಲರ ಸಮ್ಮುಖದಲ್ಲಿ ಪರಿಶೀಲನೆ

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಈ ಬಗ್ಗೆ ಚುನಾವಣಾ ಆಯೋಗವು ಇನ್ನೂ ಯಾವುದೇ ರೀತಿಯ ಸ್ಪಷ್ಟನೆಯನ್ನು ನೀಡಿಲ್ಲ. ಈ ಅಧಿಕಾರಿಗಳಿಗೆ ಪರ್ಯಾಯವಾಗಿ ಯಾವ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಇನ್ನೂ ಮಾಹಿತಿ ಗೊತ್ತಾಗಿಲ್ಲ.

Continue Reading

Lok Sabha Election 2024

Lok Sabha Election 2024: ಕಾಂಗ್ರೆಸ್‌ಗೆ ಅಧಿಕಾರ ಸಿಕ್ಕರೆ ಪಿತ್ರಾರ್ಜಿತ ಆಸ್ತಿಯಲ್ಲಿ ಸರ್ಕಾರಕ್ಕೆ ಪಾಲು; ‘ಕೈ’ಗೆ ಇಕ್ಕಟ್ಟು, ಬಿಜೆಪಿಗೆ ಅಸ್ತ್ರ

Lok Sabha Election 2024: ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ.

VISTARANEWS.COM


on

Lok Sabha Election 2024 BJP rejects Sam Pitroda statement
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಆಡುವ ಒಂದೊಂದು ಮಾತುಗಳೂ ಪ್ರಾಮುಖ್ಯತೆಯನ್ನು ಪಡೆಯುತ್ತವೆ. ಕೆಲವು ಮಾತುಗಳು ಪ್ಲಸ್‌ ಮಾಡಿದರೆ, ಮತ್ತೆ ಕೆಲವು ಭಾರಿ ಡ್ಯಾಮೇಜ್‌ ಮಾಡುತ್ತವೆ. ಈಗ ಉದ್ಯಮಿ ಸ್ಯಾಮ್‌ ಪಿತ್ರೋಡ (Sam Pitroda) ಕಾಂಗ್ರೆಸ್‌ ಪರವಾಗಿ ಆಡಿದ ಮಾತುಗಳು ಕೈಪಡೆಯನ್ನು ಇಕ್ಕಟ್ಟಿಗೆ ಸಿಲುಕಿಸಿದೆ. “ಪಿತ್ರಾರ್ಜಿತ ಆಸ್ತಿಗಳನ್ನು (Ancestral property) ಮಕ್ಕಳಿಗೆ ಹಸ್ತಾಂತರಿಸುವ ಸಂದರ್ಭದಲ್ಲಿ ಅಮೆರಿಕದಲ್ಲಿ ಜಾರಿಯಲ್ಲಿರುವ ಕಾನೂನನ್ನು ಭಾರತದಲ್ಲಿಯೂ ಅನುಷ್ಠಾನಕ್ಕೆ ತರಬೇಕು. ಪಿತ್ರಾರ್ಜಿತ ಆಸ್ತಿಗೂ ತೆರಿಗೆ ವಿಧಿಸಬೇಕು. ಇದರಲ್ಲಿ ಶೇಕಡಾ 55ರಷ್ಟು ಪಾಲನ್ನು ಸರ್ಕಾರಕ್ಕೆ ಕೊಡಬೇಕು” ಎಂಬ ಸ್ಯಾಮ್ ‌ಪಿತ್ರೋಡ ಹೇಳಿಕೆಯು ಈಗ ಭಾರಿ ವಿವಾದವನ್ನು ಸೃಷ್ಟಿಸಿದೆ. ಇದನ್ನು ಬಿಜೆಪಿ ಚುನಾವಣಾ ಅಸ್ತ್ರ ಮಾಡಿಕೊಂಡಿದ್ದು, ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕಿದೆ. ಈ ಹೇಳಿಕೆಗೂ ನಮಗೂ ಸಂಬಂಧವೇ ಇಲ್ಲವೆಂದು ಸ್ಪಷ್ಟೀಕರಣ ಕೊಡುತ್ತಿದೆ. ಅಲ್ಲದೆ, ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಸಹ ಈ ಹೇಳಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಡಿಕೆಶಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿ, ಈ ರೀತಿ ಮಾಡಲು ಕಾನೂನಿನಲ್ಲಿ ಅವಕಾಶವೇ ಇಲ್ಲ ಎಂದು ಹೇಳಿದ್ದಾರೆ.

ದೇಶದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆ ಶುರುವಾಗುವ ಮುನ್ನ ಕಾಂಗ್ರೆಸ್‌ಗೆ ಸ್ಯಾಮ್‌ ಪಿತ್ರೋಡ ಹೇಳಿಕೆ ನುಂಗಲಾರದ ತುತ್ತಾಗಿದೆ. ಕಾರಣ, ಈ ಹೇಳಿಕೆಯನ್ನು ಸರಿಯಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ. ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಮಾಡಿಕೊಂಡಿದೆ. “ಪಿತ್ರಾರ್ಜಿತ ಆಸ್ತಿಗೆ ಕಾಂಗ್ರೆಸ್ ಕೊಕ್ಕೆ” ಎಂಬ ಅಭಿಯಾನವನ್ನೂ ಬಿಜೆಪಿ ಶುರು ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರಿಂದ ಹಿಡಿದು ಸಾಮಾನ್ಯ ಕಾರ್ಯಕರ್ತನವರೆಗೂ ಈ ವಿಚಾರವನ್ನು ಪ್ರಸ್ತಾಪ ಮಾಡಲು ತಂತ್ರಗಾರಿಕೆ ಹೆಣೆಯಲಾಗಿದೆ. ಮಾಸ್ ಮತದಾರರನ್ನು ಟಾರ್ಗೆಟ್ ಮಾಡಿ ಈ ವಿಚಾರವನ್ನು ಬಿಜೆಪಿ ಪ್ರಸ್ತಾಪ ಮಾಡುತ್ತಿದೆ. ದಿನೇ ದಿನೇ ಬಿಜೆಪಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಿದ್ದಂತೆ ಕಾಂಗ್ರೆಸ್‌ಗೆ ಇದರ ಡ್ಯಾಮೇಜ್‌ನ ಅರಿವಾಗಿದೆ. ಚುನಾವಣೆಯಲ್ಲಿ ಇದು ದೊಡ್ಡ ಹೊಡೆತವನ್ನು ಕೊಡಬಹುದು ಎಂದು ಅಂದಾಜಿಸಿದೆ. ಈ ಕಾರಣಕ್ಕೆ ಎಚ್ಚೆತ್ತುಕೊಂಡ ಕೈಪಡೆ ಈಗ ಸ್ಯಾಮ್‌ ಪಿತ್ರೋಡ ಹೇಳಿಕೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಮಟ್ಟದಲ್ಲಿಯೂ ಸ್ಪಷ್ಟೀಕರಣವನ್ನು ನೀಡಲಾಗಿದೆ. ಆದರೆ, ಬಿಜೆಪಿ ಮಾತ್ರ ಇದನ್ನೂ ಹಳ್ಳಿ ಹಳ್ಳಿಗೂ ಕೊಂಡೊಯ್ಯಲು ಪ್ಲ್ಯಾನ್‌ ಮಾಡಿಕೊಂಡಿದೆ.

ಇದನ್ನೂ ಓದಿ: Bank fraud: ಗುರು ರಾಘವೇಂದ್ರ, ವಸಿಷ್ಠ ಸಹಕಾರ ಬ್ಯಾಂಕ್‌ಗಳ ಹಗರಣ ಎಸ್‌ಐಟಿ ಹೆಗಲಿಗೆ; ಶೀಘ್ರ ಕ್ರಮವೆಂದ ಡಿಕೆಶಿ

ಡಿ.ಕೆ. ಶಿವಕುಮಾರ್‌ ಹೇಳಿದ್ದೇನು?

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಇಂತಹ ಕಾನೂನನ್ನು ತರಲು ಸಾಧ್ಯವೇ ಇಲ್ಲ. ನಮ್ಮದು ಕೂಡಾ ಆಸ್ತಿ ಇದೆ. ಸ್ಯಾಮ್‌ ಪಿತ್ರೋಡ ಅವರ ಹೇಳಿಕೆಯನ್ನು ತಿರುಚುವ ಕೆಲಸ ಆಗುತ್ತಿದೆ ಎಂದು ಹೇಳಿದ್ದಾರೆ. ಇತ್ತ ಸಿಎಂ ಸಿದ್ದರಾಮಯ್ಯ ಸಹ ಈ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಣೆ ಮಾಡಿದ್ದಾರೆ.

Continue Reading

ದೇಶ

ನೀತಿ ಸಂಹಿತೆ ಉಲ್ಲಂಘನೆ; ಮೋದಿ, ರಾಹುಲ್‌ ಗಾಂಧಿ ಪ್ರತಿಕ್ರಿಯೆ ಕೇಳಿದ ಚುನಾವಣೆ ಆಯೋಗ!

ದ್ವೇಷ ಭಾಷಣ, ಧರ್ಮ, ಜಾತಿ, ಸಮುದಾಯಗಳನ್ನು ಪ್ರಸ್ತಾಪಿಸಿ ಮತಯಾಚನೆ, ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರಿಗೆ ಚುನಾವಣಾ ಆಯೋಗವು ನೋಟಿಸ್‌ ನೀಡಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಸೂಚನೆ ನೀಡಿದೆ.

VISTARANEWS.COM


on

Election Commission
Koo

ನವದೆಹಲಿ: ಲೋಕಸಭೆ ಚುನಾವಣೆಯ (Lok Sabha Election 2024) ಮಾದರಿ ನೀತಿ ಸಂಹಿತೆ ಉಲ್ಲಂಘನೆ (MCC Violations) ಮಾಡಿದ ಕುರಿತಂತೆ ಚುನಾವಣೆ ಆಯೋಗವು ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರ ಪ್ರತಿಕ್ರಿಯೆ ಕೇಳಿದೆ. ಏಪ್ರಿಲ್‌ 29ರ ಬೆಳಗ್ಗೆ 11 ಗಂಟೆಯೊಳಗೆ ಇಬ್ಬರೂ ನಾಯಕರು ಪ್ರತಿಕ್ರಿಯೆ ನೀಡಬೇಕು ಎಂಬುದಾಗಿ ಚುನಾವಣೆ ಆಯೋಗವು (Election Commission) ಸೂಚನೆ ನೀಡಿದೆ.

ನರೇಂದ್ರ ಮೋದಿ ಹಾಗೂ ರಾಹುಲ್‌ ಗಾಂಧಿ ಅವರು ಚುನಾವಣೆ ಪ್ರಚಾರದ ವೇಳೆ ಜಾತಿ, ಧರ್ಮ, ಸಮುದಾಯ ಹಾಗೂ ಭಾಷೆ ಆಧಾರದ ಮೇಲೆ ಮತಗಳನ್ನು ಕೇಳಿದ್ದಾರೆ. ದ್ವೇಷ ಹರಡುವ ರೀತಿಯಲ್ಲಿ ಇವರು ಮಾತನಾಡಿದ್ದಾರೆ ಎಂಬ ಕುರಿತು ಆರೋಪಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಚುನಾವಣೆ ಆಯೋಗವು ಇಬ್ಬರು ನಾಯಕರ ಪ್ರತಿಕ್ರಿಯೆ ಕೇಳಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಆಸ್ತಿ ಹಂಚಿಕೆ ವಿಷಯ ಪ್ರಸ್ತಾಪಿಸಿದ್ದರು. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವನ್ನು ಮುಸ್ಲಿಮರಿಗೆ ನೀಡುತ್ತದೆ ಎಂದಿದ್ದರು. “ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ನಿಮ್ಮ ಆದಾಯ ಮತ್ತು ಆಸ್ತಿಯ ಮೇಲೆ ಕಣ್ಣಿಟ್ಟಿವೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದನ್ನು ಉಲ್ಲೇಖಿಸಿದೆ. ಮಹಿಳೆಯರು ಚಿನ್ನವನ್ನು ಆಭರಣಗಳ ರೂಪದಲ್ಲಿ ಧರಿಸಲು ಮಾತ್ರವಲ್ಲ, ಅದನ್ನು ರಸಕ್ಷಿಸಲು ಕಾನೂನಿನಲ್ಲಿ ಅವಕಾಶವಿದೆ. ಆದರೆ ಈಗ ಅವರ ಕಣ್ಣು ಮಹಿಳೆಯರ ಮಂಗಳಸೂತ್ರದ ಮೇಲೆ ನೆಟ್ಟಿದೆ. ತಾಯಿ ಮತ್ತು ಸಹೋದರಿಯರ ಚಿನ್ನವನ್ನು ದೋಚುವುದು ಇವರ ಉದ್ದೇಶ. ಹೀಗಾಗಿ ಅವರು ಅಧಿಕಾರಕ್ಕೆ ಬಂದರೆ ನಿಮ್ಮ ಮಂಗಳಸೂತ್ರವೂ ಸುರಕ್ಷಿತವಲ್ಲʼʼ ಎಂದು ಮೋದಿ ಹೇಳಿದ್ದರು.

ನರೇಂದ್ರ ಮೋದಿ ಅವರ ಹೇಳಿಕೆಗೆ ದೇಶಾದ್ಯಂತ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು. ನರೇಂದ್ರ ಮೋದಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದರು. ಇದಕ್ಕೂ ಮೊದಲು ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಬೇಕು ಚುನಾವಣೆ ಆಯೋಗವು ನಿರಾಕರಿಸಿತ್ತು. ರಾಹುಲ್‌ ಗಾಂಧಿ ಅವರ ಕೆಲ ಹೇಳಿಕೆಗಳ ಕುರಿತು ಕೂಡ ಅಸಮಾಧಾನ ವ್ಯಕ್ತವಾಗಿತ್ತು. ಹಾಗಾಗಿ, ಚುನಾವಣಾ ಆಯೋಗವು ಇಬ್ಬರೂ ನಾಯಕರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ರಾಜಕೀಯ ಭಾಷಣ ತೆರವಿಗೆ ಆಯೋಗ ಆದೇಶ

ರಾಜಕೀಯ ನಾಯಕರು ನೀಡುವ ವಿವಾದಾತ್ಮಕ ಹೇಳಿಕೆಗಳ ಭಾಷಣಗಳ ವಿಡಿಯೊ, ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಇದಕ್ಕೂ ಮೊದಲು ಚುನಾವಣಾ ಆಯೋಗವು ಎಕ್ಸ್‌ ಸಾಮಾಜಿಕ ಜಾಲತಾಣಕ್ಕೆ ಸೂಚಿಸಿದೆ. ಈ ಮಧ್ಯೆ ಚುನಾವಣಾ ಆಯೋಗ ಆದೇಶದಂತೆ ಸಾಮಾಜಿಕ ಜಾಲತಾಣ ಎಕ್ಸ್‌ ರಾಜಕಾರಣಿಗಳು, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಭಾಷಣವನ್ನು ಒಳಗೊಂಡಿರುವ ಕೆಲವು ಪೋಸ್ಟ್‌ಗಳನ್ನು ತೆಗೆದು ಹಾಕಿದೆ.

ಇದನ್ನೂ ಓದಿ: Lok Sabha Election 2024: ಹಿಂದೂ ಧರ್ಮದ ಉಳಿವಿಗಾಗಿ ಮತ್ತೆ ಮೋದಿ ಬೆಂಬಲಿಸಿ: ಪ್ರಲ್ಹಾದ್‌ ಜೋಶಿ

Continue Reading
Advertisement
Ranji Trophy
ಪ್ರಮುಖ ಸುದ್ದಿ6 mins ago

Ranji Trophy : ರಣಜಿ ಟ್ರೋಫಿ ಆಡುವವರಿಗೆ ಇನ್ನು ಮುಂದೆ ಒಂದು ಕೋಟಿ ರೂ. ವೇತನ!

Fire Tragedy
ದೇಶ24 mins ago

Fire Tragedy: ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ; 6 ಮಂದಿ ಸಾವು

World Malaria Day April 25
ಆರೋಗ್ಯ28 mins ago

World Malaria Day: ಮಲೇರಿಯಾದಿಂದ ಮಕ್ಕಳನ್ನು ರಕ್ಷಿಸಿಕೊಳ್ಳುವುದು ಹೇಗೆ?

Bismah Maroof
ಕ್ರೀಡೆ30 mins ago

Bismah Maroof : ಹೆಣ್ಣು ಮಗುವಿನ ಸಮೇತ ಆಡಲು ಹೋಗುತ್ತಿದ್ದ ಪಾಕಿಸ್ತಾನದ ಮಹಿಳಾ ಕ್ರಿಕೆಟರ್ ನಿವೃತ್ತಿ

Modi in Karnataka Pm Modi to visit Karnataka on April 28 and 29 Raichur conference maybe cancelled
Lok Sabha Election 202438 mins ago

Modi in Karnataka: ಏಪ್ರಿಲ್‌ 28 – 29ರಂದು ರಾಜ್ಯಕ್ಕೆ ಮೋದಿ; ರಾಯಚೂರು ಸಮಾವೇಶ ರದ್ದು?

Lok Sabha Election
ಕರ್ನಾಟಕ41 mins ago

Lok Sabha Election: ನಾಳೆ ಮೊದಲ ಹಂತದ ಮತದಾನ; ಬೆಂಗಳೂರಿನಲ್ಲಿ ಏನಿರತ್ತೆ? ಏನಿರಲ್ಲ?

KKR vs PBKS
ಕ್ರೀಡೆ51 mins ago

KKR vs PBKS: ಪಂಜಾಬ್​ಗೆ ಮಸ್ಟ್​ ವಿನ್​ ಗೇಮ್; ಕೆಕೆಆರ್​ ಎದುರಾಳಿ

IPL 2024
ಕ್ರೀಡೆ54 mins ago

IPL 2024 : ಸಾಯಿ ಕಿಶೋರ್ ನಿಂದನೆ; ರಸಿಕ್ ಸಲಾಂಗೆ ಪಾಠ ಕಲಿಸಿದ ಜಯ್​ ಶಾ

Haji Akbar Afridi
ವಿದೇಶ56 mins ago

Lashkar-e-Islam: ಮತ್ತೊಬ್ಬ ಭಾರತ ವಿರೋಧಿ ಉಗ್ರ ಪಾಕಿಸ್ತಾನದಲ್ಲಿ ಅಪರಿಚಿತರ ಗುಂಡಿಗೆ ಖತಂ

Tata Motors gets approval for 333 patents
ದೇಶ1 hour ago

Tata Motors: ಟಾಟಾ ಮೋಟಾರ್ಸ್‌ನಿಂದ ಹೊಸ ಮೈಲುಗಲ್ಲು; 333 ಪೇಟೆಂಟ್‌ಗಳಿಗೆ ಅನುಮೋದನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case in hubblli
ಹುಬ್ಬಳ್ಳಿ1 hour ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ1 hour ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ5 hours ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20246 hours ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

ಟ್ರೆಂಡಿಂಗ್‌