Anupam Kher: ಪ್ರಾಮಾಣಿಕ ವ್ಯಕ್ತಿ ಸಹಿಸಿಕೊಳ್ಳಲೇಬೇಕು; ಉ.ಪ್ರ ಹಿನ್ನಡೆ ಕುರಿತು ಅನುಪಮ್ ಖೇರ್‌ ಟ್ವೀಟ್ - Vistara News

ರಾಜಕೀಯ

Anupam Kher: ಪ್ರಾಮಾಣಿಕ ವ್ಯಕ್ತಿ ಸಹಿಸಿಕೊಳ್ಳಲೇಬೇಕು; ಉ.ಪ್ರ ಹಿನ್ನಡೆ ಕುರಿತು ಅನುಪಮ್ ಖೇರ್‌ ಟ್ವೀಟ್

ಉತ್ತರ ಪ್ರದೇಶದಲ್ಲಿ ಲೋಕಸಭಾ ಫಲಿತಾಂಶ ಬಿಜೆಪಿಗೆ ಬಹುದೊಡ್ಡ ಆಘಾತವನ್ನು ನೀಡಿದೆ. ಈ ಕುರಿತು ನಟ, ಚಿತ್ರ ನಿರ್ಮಾಪಕ ಅನುಪಮ್ ಖೇರ್ ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

VISTARANEWS.COM


on

Anupam Kher
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲೋಕಸಭೆ ಚುನಾವಣೆ 2024ರ (Loksabha election-2024) ಫಲಿತಾಂಶ ಮಂಗಳವಾರ ಪ್ರಕಟವಾಗಿದೆ. ಬಿಜೆಪಿ (Bjp) ಗರಿಷ್ಠ ಸಂಖ್ಯೆಯ ಸ್ಥಾನಗಳನ್ನು ಗಳಿಸಿದರೂ ಉತ್ತರ ಪ್ರದೇಶದಲ್ಲಿ (uttarpradesh) ಪಕ್ಷಕ್ಕೆ ಭಾರಿ ಆಘಾತವಾಗಿದೆ. ಅಯೋಧ್ಯೆ ಇರುವ ಫೈಜಾಬಾದ್ (Faizabad) ಸೇರಿದಂತೆ ಹಲವು ಕ್ಷೇತ್ರಗಳನ್ನು ಅದು ಸ್ಥಾನಗಳನ್ನು ಕಳೆದುಕೊಂಡಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ (Ayodhya) ರಾಮಮಂದಿರವನ್ನು (rammandir) ನಿರ್ಮಿಸಿದರೂ ಬಿಜೆಪಿ ಅಲ್ಲಿ ಹಿನ್ನಡೆ ಕಂಡಿದೆ.

ಈ ಕುರಿತು ಬಾಲಿವುಡ್ ನಟ (Bollywood actor) ಮತ್ತು ಬಿಜೆಪಿ ಬೆಂಬಲಿಗ ಅನುಪಮ್ ಖೇರ್ (Anupam Kher) ಅವರು ಆಘಾತ ವ್ಯಕ್ತಪಡಿಸಿದ್ದಾರೆ. ಫಲಿತಾಂಶದ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕಭಿ ಕಭಿ ಸೋಚ್ತಾ ಹೂಂ ಕಿ ಇಮಾಂದಾರ್ ವ್ಯಕ್ತಿ ಕೋ ಬಹೋತ್ ಝಾದಾ ಇಮಾಂದಾರ್ ನಹೀ ಹೋನಾ ಚಾಹಿಯೇ. ಜಂಗಲ್ ಮೇ ಸೀಧೇ ತಾನೆ ವಾಲೇ ಪೇಡ್ ಹೇ ಸಬ್ಸೇ ಪೆಹಲೇ ಕಾತೇ ಜಾತೇ ಹೈ. ಬಹುತ್ ಝಾದಾ ಇಮಾಂದಾರ್ ವ್ಯಕ್ತಿ ಕೋ ಹೇ ಸಬ್ಸೇ ಝ್ಯಾದಾ ಕಷ್ಟ ಉಠನೇ ಪಡತೇ ಹೈ. ಪರ್ ಫಿರ್ ಭಿ ವೋ ಅಪ್ನಿ ಇಮಾಂದಾರಿ ನಹೀ ಛೋಡ್ತಾ. ಇಸ್ಲಿಯೇ ಕರೋಡೋ ಲೋಗೋ ಕೆ ಲಿಯೇ ಪ್ರೇರಣಾ ಕಾ ಸ್ತೋತ್ರ ಬಂತ ಹೈ” ಎಂದು ಅವರು ಹೇಳಿದ್ದಾರೆ.


ಇದರ ಅನುವಾದ ಇಂತಿದೆ. ಕೆಲವೊಮ್ಮೆ ಪ್ರಾಮಾಣಿಕ ವ್ಯಕ್ತಿ ತುಂಬಾ ಪ್ರಾಮಾಣಿಕವಾಗಿರಬಾರದು ಎಂದು ನಾನು ಭಾವಿಸುತ್ತೇನೆ. ನೇರವಾದ ತೊಗಟೆಯನ್ನು ಹೊಂದಿರುವ ಮರವನ್ನು ಸಾಮಾನ್ಯವಾಗಿ ಮೊದಲು ಕತ್ತರಿಸಲಾಗುತ್ತದೆ. ಪ್ರಾಮಾಣಿಕ ವ್ಯಕ್ತಿ ಜೀವನದಲ್ಲಿ ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಡೆತಡೆಗಳ ಹೊರತಾಗಿಯೂ, ಅವನು ತನ್ನ ಪ್ರಾಮಾಣಿಕತೆಯನ್ನು ಬಿಟ್ಟುಕೊಡುವುದಿಲ್ಲ. ಅದಕ್ಕಾಗಿಯೇ ಅವರು ಕೋಟ್ಯಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Election Results 2024: ಅತಿ ಹೆಚ್ಚು ಮತ್ತು ಅತಿ ಕಡಿಮೆ ಅಂತರದಿಂದ ಗೆದ್ದ ಅಭ್ಯರ್ಥಿಗಳಿವರು!


ಈ ನಡುವೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಸತತ ಮೂರನೇ ಗೆಲುವಿಗೆ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಅವರು ಹೀಗೆ ಬರೆದಿದ್ದಾರೆ: ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ. ಈ ಪ್ರೀತಿಗಾಗಿ ನಾನು ಜನತಾ ಜನಾರ್ದನರಿಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ನಮ್ಮ ಎಲ್ಲಾ ಕಾರ್ಯಕರ್ತರ ಶ್ರಮಕ್ಕೆ ನಾನು ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯವನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

Hemant Soren:ಜಾರ್ಖಂಡ್‌ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್‌ ಗುರುವಾರ ಜೆಎಂಎಂ ನಾಯಕ ಹೇಮಂತ್‌ ಸೊರೆನ್‌ ಅವರನ್ನು ಸರ್ಕಾರ ರಚಿಸುವಂತೆ ಆಹ್ವಾನ ನೀಡಿದರು. ಈ ಆಹ್ವಾನವನ್ನು ಸ್ವೀಕರಿಸಿರುವ ಸೊರೆನ್‌ ಜು.7ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಜೆಎಂಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಮಾಹಿತಿ ನೀಡಿದ್ದು, ಜು.7ರಂದು ಸಿಎಂ ಹಾಗೂ ಎಲ್ಲಾ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

VISTARANEWS.COM


on

Koo

ರಾಂಚಿ: ಅಕ್ರಮ ಹಣ ವರ್ಗಾವಣೆ (Money laundering Case), ಭೂ ವ್ಯವಹಾರ ಸೇರಿ ಹಲವು ಪ್ರಕರಣಗಳಲ್ಲಿ ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಸ್ಥ ಹೇಮಂತ್‌ ಸೊರೆನ್ (Hemant Soren) ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳಿಂದ ಬಂಧಿತರಾಗಿ, ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ ಬೆನ್ನಲ್ಲೇ ರಾಜ್ಯರ ರಾಜಕೀಯ ಮತ್ತೆ ಗರಿಗೆದರಿದೆ. ನಿನ್ನೆಯಷ್ಟೇ ಹಾಲಿ ಸಿಎಂ ಚಂಪೈ ಸೊರೆನ್‌ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಸರ್ಕಾರ ರಚಿಸುವಂತೆ ಜಾರ್ಖಂಡ್‌ ರಾಜ್ಯಪಾಲರು ಹೇಮಂತ್‌ ಸೊರೆನ್‌ಗೆ ಆಹ್ವಾನ ನೀಡಿದ್ದಾರೆ.

ಜಾರ್ಖಂಡ್‌ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್‌ ಗುರುವಾರ ಜೆಎಂಎಂ ನಾಯಕ ಹೇಮಂತ್‌ ಸೊರೆನ್‌ ಅವರನ್ನು ಸರ್ಕಾರ ರಚಿಸುವಂತೆ ಆಹ್ವಾನ ನೀಡಿದರು. ಈ ಆಹ್ವಾನವನ್ನು ಸ್ವೀಕರಿಸಿರುವ ಸೊರೆನ್‌ ಜು.7ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಜೆಎಂಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಪ್ರಿಯೋ ಭಟ್ಟಾಚಾರ್ಯ ಮಾಹಿತಿ ನೀಡಿದ್ದು, ಜು.7ರಂದು ಸಿಎಂ ಹಾಗೂ ಎಲ್ಲಾ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

ಅಕ್ರಮವಾಗಿ ಹಣ ವರ್ಗಾವಣೆ ಸೇರಿ ಹಲವು ಪ್ರಕರಣಗಳಲ್ಲಿ ಹೇಮಂತ್‌ ಸೊರೆನ್‌ ಅವರ ಬಂಧನವಾದ ಬಳಿಕ ಅವರ ಆಪ್ತ ಚಂಪೈ ಸೊರೆನ್‌ ಅವರು ಫೆಬ್ರವರಿ 2ರಂದು ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಮತ್ತು ಲಾಲು ಪ್ರಸಾದ್‌ ಯಾದವ್ ಅವರ ರಾಷ್ಟ್ರೀಯ ಜನತಾ ದಳದ ಆಡಳಿತಾರೂಢ ಮೈತ್ರಿಕೂಟವು ಹೇಮಂತ್‌ ಸೊರೆನ್‌ ಅವರು ಮತ್ತೆ ಸಿಎಂ ಆಗಲು ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಅಕ್ರಮವಾಗಿ ಹಣ ವರ್ಗಾವಣೆ, ಭೂ ಅವ್ಯವಹಾರ ಪ್ರಕರಣ ಕೇಳಿಬಂದ ಹಿನ್ನೆಲೆಯಲ್ಲಿ ಇ.ಡಿ ಅಧಿಕಾರಿಗಳು ಹೇಮಂತ್‌ ಸೊರೆನ್‌ ಅವರಿಗೆ 9 ಬಾರಿ ಸಮನ್ಸ್‌ ಜಾರಿಗೊಳಿಸಿದ್ದರು. ಆದರೆ ಹೇಮಂತ್‌ ಸೊರೆನ್‌ ಅವರು ಪ್ರತಿ ಬಾರಿ ಸಮನ್ಸ್‌ ನೀಡಿದಾಗಲೂ ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು. ಇ.ಡಿ ಅಧಿಕಾರಿಗಳು ಮನೆಗೆ ಲಗ್ಗೆ ಇಡುತ್ತಾರೆ ಎಂಬುದನ್ನು ಅರಿತಿದ್ದ ಅವರು ದೆಹಲಿಗೆ ತೆರಳಿ, ಗೌಪ್ಯ ಸ್ಥಳದಲ್ಲಿದ್ದರು. ಆದರೆ ಇ.ಡಿ ಅಧಿಕಾರಿಗಳು ಕೊನೆಗೂ ಹೇಮಂತ್‌ ಸೊರೆನ್‌ ಅವರನ್ನು ಈ ವರ್ಷದ ಜನವರಿ 31ರಂದು ಬಂಧಿಸಿದ್ದರು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್‌ ಸೊರೆನ್‌ ಅವರು ರಾಜೀನಾಮೆ ನೀಡಿದ್ದರು.

ಬಂಧನವನ್ನು ಪ್ರಶ್ನಿಸಿ ಹಾಗೂ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಉದ್ದೇಶದಿಂದ ಹೇಮಂತ್‌ ಸೊರೆನ್‌ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಹೇಮಂತ್ ಸೊರೆನ್ ಅವರು ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ ಎಂಬ ಅಂಶವನ್ನು ಮರೆಮಾಚಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯ ಎಚ್ಚರಿಕೆ ನೀಡಿದ ನಂತರ ಸೊರೆನ್ ಪರವಾಗಿ ಹಾಜರಾದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಜಾಮೀನು ಅರ್ಜಿಯನ್ನು ಹಿಂತೆಗೆದುಕೊಂಡರು. ಇದರಿಂದ ಸೊರೆನ್‌ ಅವರಿಗೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ:Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Continue Reading

ದೇಶ

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Uttar Pradesh Politics: ಬಿಜೆಪಿಯ ಅವನತಿಯ ಹಿಂದಿನ ಪ್ರಮುಖ ಅಂಶವೆಂದರೆ ಆಂತರಿಕ ಭಿನ್ನಾಭಿಪ್ರಾಯ, ಪ್ರಾಥಮಿಕವಾಗಿ ಟಿಕೆಟ್ ಹಂಚಿಕೆಯ ಸಮಸ್ಯೆಗಳು ಮತ್ತು ಠಾಕೂರ್ ಸಮುದಾಯದೊಳಗಿನ ಅತೃಪ್ತಿಗೆ ಕಾರಣವಾಗಿದೆ. ಇದನ್ನು ಹೊರತುಪಡಿಸಿ, ಪ್ರತಿಪಕ್ಷಗಳ ‘ಸಂವಿಧಾನಕ್ಕೆ ಬೆದರಿಕೆ’ಯ ನಿರೂಪಣೆಯು ಬಿಜೆಪಿ ಬಹುದೊಡ್ಡ ಹಿನ್ನಡೆಯನ್ನು ತಂದೊಡ್ಡಿತ್ತು ಎಂದು ಪಕ್ಷದ ಕಾರ್ಯಪಡೆ ಹೇಳಿತ್ತು.

VISTARANEWS.COM


on

Uttar pradesh Politics
Koo

ಲಕ್ನೋ: ಉತ್ತರಪ್ರದೇಶ(Uttar Pradesh Politics)ದಲ್ಲಿ ಈ ಬಾರಿ ಚುನಾವಣೆ(Lok Sabha Election 2024)ಯಲ್ಲಿ ಬಿಜೆಪಿಯ ಸಂಖ್ಯಾಬಲ 33ಕ್ಕೆ ಕುಸಿದಿರುವುದು ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಇದಾದ ಬಳಿಕ ಈ ಹೀನಾಯ ಸೋಲಿಗೆ ಕಾರಣವೇನೆಂಬುದನ್ನು ತಿಳಿಯಲು ಬಿಜೆಪಿ(BJP)ಯ ಕಾರ್ಯಪಡೆ ಅಧ್ಯಯನಕ್ಕೆ ಇಳಿದಿತ್ತು. ಪಕ್ಷದೊಳಗಿನ ಭಿನ್ನಾಭಿಪ್ರಾಯ ಮತ್ತು ಜಿಲ್ಲಾ ಆಡಳಿತದ ಸಹಕಾರದ ಕೊರತೆಯು ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿಯ ಕಳಪೆ ಪ್ರದರ್ಶನಕ್ಕೆ ಎರಡು ಪ್ರಮುಖ ಅಂಶಗಳಾಗಿವೆ ಎಂದು ಪಕ್ಷದ ಕಾರ್ಯಪಡೆಯು ತನ್ನ ವರದಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath)ಗೆ ಸಲ್ಲಿಸಿದೆ.

ಟಾಸ್ಕ್ ಫೋರ್ಸ್ ತನ್ನ ವರದಿಯನ್ನು ಸಲ್ಲಿಸಿದ ಕೂಡಲೇ, ಆದಿತ್ಯನಾಥ್ 12 ಜಿಲ್ಲಾಧಿಕಾರಿಗಳನ್ನು (ಡಿಎಂ) ವರ್ಗಾಯಿಸಿದ್ದರು. ಸೀತಾಪುರ್, ಬಂದಾ, ಬಸ್ತಿ, ಶ್ರಾವಸ್ತಿ, ಕೌಶಂಬಿ, ಸಂಭಾಲ್, ಸಹರಾನ್‌ಪುರ, ಮೊರಾದಾಬಾದ್ ಮತ್ತು ಹತ್ರಾಸ್‌ನಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳನ್ನು ವರ್ಗಾವಣೆ ಮಾಡಲಾಗಿದ್ದು, ಇಟಾ, ಬಂದಾ ಮತ್ತು ಇಟಾವಾ ಕ್ಷೇತ್ರಗಳ ಅಡಿಯಲ್ಲಿ ಬರುವ ಕಾಸ್‌ಗಂಜ್, ಚಿತ್ರಕೂಟ್ ಮತ್ತು ಔರೈಯಾದಲ್ಲಿ ಡಿಎಂಗಳನ್ನು ಮರು ನಿಯೋಜಿಸಲಾಗಿದೆ. ಹತ್ರಾಸ್ ಹೊರತುಪಡಿಸಿ ಈ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸೋಲುಂಡಿತ್ತು.

ಬಿಜೆಪಿಯು ಈ ಬಾರಿ ಟಿಕೆಟ್ ಹಂಚಿಕೆ ಎಡವಿರುವುದುನ್ನು ಟಾಸ್ಕ್‌ ಫೋರ್ಸ್‌ ಗಮನಿಸಿದೆ. ಅದೂ ಅಲ್ಲದೇ ಕಾಂಗ್ರೆಸ್‌ ಸಂವಿಧಾನಕ್ಕೆ ಅಪಾಯವಿದೆ ಎಂಬ ವಾದ, ಬಿಎಸ್‌ಪಿಯ ಮತಗಳು ಸಮಾಜವಾದಿಗೆ ಬದಲಾಗಿರುವುದು ಕೂಡ ಬಿಜೆಪಿ ಸೋಲಿಗೆ ಪ್ರಮುಖ ಕಾರಣ. ಎಸ್‌ಪಿ ತನ್ನ ಪಿಚ್ಚಡಾ ದಲಿತರು ಮತ್ತು ಮುಸ್ಲಿಂ ಮತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ನಮ್ಮ ಸೋಲಿಗೆ ನಮ್ಮವರೇ ಕಾರಣ. ನಮ್ಮನ್ನು ಸೋಲಿಸಲು ಬೇರೆಯವರಿಗೆ ಎಲ್ಲಿ ಶಕ್ತಿ? ಎಲ್ಲಿ ಅತ್ಯಂತ ನೀರು ಇತ್ತೋ ಅಲ್ಲೇ ನಾವು ಮುಳುಗಿದ್ದೇವೆ. ಬಿಜೆಪಿ ಸೋಲು ಆಕಸ್ಮಿಕ ಅಲ್ಲ. ಉದ್ದೇಶಿತ ಎಂದು ಟಾಸ್ಕ್‌ ಫೋರ್ಸ್‌ ಹೇಳಿದೆ.

ಬಿಜೆಪಿಯ ಅವನತಿಯ ಹಿಂದಿನ ಪ್ರಮುಖ ಅಂಶವೆಂದರೆ ಆಂತರಿಕ ಭಿನ್ನಾಭಿಪ್ರಾಯ, ಪ್ರಾಥಮಿಕವಾಗಿ ಟಿಕೆಟ್ ಹಂಚಿಕೆಯ ಸಮಸ್ಯೆಗಳು ಮತ್ತು ಠಾಕೂರ್ ಸಮುದಾಯದೊಳಗಿನ ಅತೃಪ್ತಿಗೆ ಕಾರಣವಾಗಿದೆ. ಇದನ್ನು ಹೊರತುಪಡಿಸಿ, ಪ್ರತಿಪಕ್ಷಗಳ ‘ಸಂವಿಧಾನಕ್ಕೆ ಬೆದರಿಕೆ’ಯ ನಿರೂಪಣೆಯು ಬಿಜೆಪಿ ಬಹುದೊಡ್ಡ ಹಿನ್ನಡೆಯನ್ನು ತಂದೊಡ್ಡಿತ್ತು ಎಂದು ಪಕ್ಷದ ಕಾರ್ಯಪಡೆ ಹೇಳಿತ್ತು.

“ಹೊಸ ಸಂವಿಧಾನವನ್ನು ರಚಿಸಲು” ಸರ್ಕಾರಕ್ಕೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಬಿಜೆಪಿಯ ಅಭ್ಯರ್ಥಿ ಲಲ್ಲು ಸಿಂಗ್ ಅವರ ವೀಡಿಯೊ ವೈರಲ್ ಆದ ನಂತರ ಗದ್ದಲ ಪ್ರಾರಂಭವಾಯಿತು. “272 ಸ್ಥಾನಗಳೊಂದಿಗೆ ರಚನೆಯಾದ ಸರ್ಕಾರವು ಸಂವಿಧಾನವನ್ನು ತಿದ್ದುಪಡಿ ಮಾಡಲು ಸಾಧ್ಯವಿಲ್ಲ. ಅದಕ್ಕಾಗಿ ಅಥವಾ ಹೊಸ ಸಂವಿಧಾನ ರಚನೆಯಾಗಬೇಕಿದ್ದರೂ ಮೂರನೇ ಎರಡರಷ್ಟು ಬಹುಮತದ ಅವಶ್ಯಕತೆ ಇದೆ,” ಎಂದು ಅವರು ಹೇಳಿದ್ದರು. ಇದನ್ನೇ ಅಸ್ತ್ರವನ್ನಾಗಿಸಿಕೊಂಡ ಕಾಂಗ್ರೆಸ್‌, ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬೇಕಾಬಿಟ್ಟಿ ತಿದ್ದುತ್ತಾರೆ ಎಂಬ ಭಯವನ್ನು ಜನರ ಮನಸ್ಸಿನಲ್ಲಿ ಬಿತ್ತಿತ್ತು. ಇದೂ ಕೂಡ ಬಿಜೆಪಿಗೆ ಈ ಬಾರಿ ತಿರುಮಂತ್ರವಾಗಿ ಪರಿಣಮಿಸಿತ್ತು.

ಇದನ್ನೂ ಓದಿ: Drinking Water Tips: ನೀರು ಕುಡಿಯುವುದೇ ನಿಮ್ಮ ಸಮಸ್ಯೆಯೇ? ಇಲ್ಲಿವೆ ಸರಳ ಉಪಾಯಗಳು!

Continue Reading

ಕರ್ನಾಟಕ

Dengue fever: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಿದ ರಾಜ್ಯ ಸರ್ಕಾರ

Dengue fever: ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ನಿಗದಿಗಿಂತ ಹೆಚ್ಚು ಹಣ ಸ್ವೀಕರಿಸದಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Dengue fever
Koo

ಬೆಂಗಳೂರು: ಡೆಂಗ್ಯೂ ಪರೀಕ್ಷೆಗೆ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಡೆಂಗ್ಯೂ ಜ್ವರ ಪತ್ತೆಗೆ ಎರಡು ರೀತಿಯ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಈ ಪರೀಕ್ಷೆಗಳಿಗೆ ಒಟ್ಟು 600 ರೂ. ನಿಗದಿಪಡಿಸಲು ಸರ್ಕಾರ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಸಂಬಂಧ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ.

ಡೆಂಗ್ಯೂ ಜ್ವರ ಪತ್ತೆಗೆ ಎರಡು ಮಾದರಿಯ ಪರೀಕ್ಷೆ ನಡೆಸಲಾಗುತ್ತದೆ. ತಲಾ 300 ರೂ.ನಂತೆ ಒಟ್ಟು 600 ರೂ. ದರವನ್ನು ನಿಗದಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಈ ಸಂದರ್ಭವನ್ನು ಬಳಸಿಕೊಂಡು ಕೆಲ ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ದುಪ್ಪಟ್ಟು ಹಣ ವಸೂಲಿಯಾಗುತ್ತಿದೆ ಎಂಬ ಬಗ್ಗೆ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ರಾಜ್ಯ ಸರ್ಕಾರ ದರ ನಿಗದಿ ಮಾಡಲು ಮುಂದಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಎಚ್ಚರಿಕೆ

ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುತ್ತಿಲ್ಲ. ಕೆಪಿಎಂ ಆಕ್ಟ್ ಪ್ರಕಾರ ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ಕೇಸ್ ರಿಪೋರ್ಟ್ ಮಾಡುವುದು ಕಡ್ಡಾಯ. IHIPಯಲ್ಲಿ ಅನೇಕ ಖಾಸಗಿ ಆಸ್ಪತ್ರೆಗಳು ಅಪ್ಲೋಡ್ ಮಾಡುತ್ತಿಲ್ಲ. ಇನ್ನು ಮುಂದೆ ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕು. ಖಾಸಗಿ ಆಸ್ಪತ್ರೆಯಲ್ಲಿ ಡೆಂಗ್ಯು ತಪಾಸಣೆಗೆ ದರ ನಿಗದಿ ಮಾಡುವ ಬಗ್ಗೆ ಚರ್ಚೆ ಮಾಡಿಲ್ಲ. ಆ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಂಗಳವಾರ ತಿಳಿಸಿದ್ದರು.

ನಮ್ಮ ವೆಬ್‌ಸೈಟಿನಲ್ಲಿ ಡೆಂಗ್ಯೂ ಬುಲೆಟಿನ್ ಬಿಡುಗಡೆ ಮಾಡುತ್ತೇವೆ. ಪ್ರತಿ ದಿನ ಎಷ್ಟು ಕೇಸ್ ಬಂದಿದೆ ಎನ್ನುವ ಮಾಹಿತಿ ಹಾಕುತ್ತೇವೆ. ದಿನ ನಿತ್ಯ ಡೆಂಗ್ಯೂ ಬುಲೆಟಿನ್ ಕೊಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಬಿಬಿಎಂಪಿ ಎಲ್ಲಾ ಮನೆಗಳ ಸರ್ವೆ ಮಾಡುತ್ತಿದೆ. ಸೂಕ್ಷ್ಮ ಪ್ರದೇಶಗಳು ಮಾತ್ರವಲ್ಲ ಎಲ್ಲಾ ಮನೆಗಳ ಸರ್ವೆ ನಡೆಸಲು ನಾನು ಬಿಬಿಎಂಪಿಗೆ ಸೂಚನೆ ನೀಡಿದ್ದೇನೆ. ಮನೆ ಮನೆಗೆ ಭೇಟಿ ಕೊಡಲು ಸೂಚಿಸಿದ್ದೇನೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟೆಚ್ಚರ ವಹಿಸಲು ಸೂಚನೆ ಕೊಡಲಾಗಿದೆ. ಪ್ರತಿ ಶುಕ್ರವಾರ ಡೆಂಗ್ಯೂ ವಿಚಾರದಲ್ಲಿ ಫೀಲ್ಡ್‌ನಲ್ಲಿ ಇದ್ದು, ಮಾನಿಟರ್ ಮಾಡಲು ಸೂಚಿಸಿದ್ದೇನೆ. ಪ್ರತಿ ಶುಕ್ರವಾರ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ | Dengue Fever: ಮಳೆಗಾಲ ಬರುತ್ತಿದೆ! ಡೆಂಗ್ಯೂ ಬಗ್ಗೆ ಇರಲಿ ಎಚ್ಚರಿಕೆ!

ಹೊಳೆನರಸೀಪುರದಲ್ಲಿ ಡೆಂಗ್ಯೂ ಜ್ವರದಿಂದ ಬಾಲಕಿ ಸಾವು

ಹಾಸನ: ಮಾರಕ ಡೆಂಗ್ಯೂ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಹೊಳೆನರಸೀಪುರ
ತಾಲೂಕಿನ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಕಲಾಶ್ರೀ ಜಿ.ಎಲ್. (11) ಮೃತಪಟ್ಟ ಬಾಲಕಿ.

ಗುಡ್ಡೇನಹಳ್ಳಿ ಗ್ರಾಮದ ಲೋಕೇಶ್ ತನುಜ ದಂಪತಿಗಳ ಪುತ್ರಿ ಕಲಾಶ್ರೀ ಜಿ.ಎಲ್. ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಹೊಳೆನರಸೀಪುರ ಪಟ್ಟಣದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹಿಮ್ಸ್ ಆಸ್ಪತ್ರೆಗೆ ಶನಿವಾರ ಸಂಜೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ. ಇದರಿಂದ ಒಂದು ವಾರದಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಹೆಣ್ಣುಮಕ್ಕಳು ಬಲಿಯಾದಂತಾಗಿದೆ.

ಇದನ್ನೂ ಓದಿ | Dengue fever: ಮಾರಕ ಡೆಂಗ್ಯು ಜ್ವರಕ್ಕೆ ಬಾಲಕಿ ಬಲಿ

ಜೂ.28 ರಂದು ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದ ಕುಮಾರ್ ಎಂಬುವರ ಪುತ್ರಿ ವರ್ಷಿಕ (8) ಮೃತಪಟ್ಟಿದ್ದಳು. ಅತಿಯಾದ ಜ್ವರದಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ವರ್ಷಿಕ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆದಿದ್ದಳು.

Continue Reading

ದೇಶ

Amritpal Singh: ಜೈಲಿನಲ್ಲಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತ್‌ಪಾಲ್‌ ಸಿಂಗ್‌ಗೆ ಪೆರೋಲ್‌

Amritpal Singh: ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಅಮೃತ್‌ಪಾಲ್‌ ಸಿಂಗ್‌ ಕೋರ್ಟ್‌ ಮೊರೆ ಹೋಗಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್‌, ನಾಲ್ಕು ದಿನಗಳ ಪೆರೋಲ್‌ ಮೇಲೆ ಆತನನ್ನು ಬಿಡುಗಡೆ ಮಾಡಿದೆ. ಜು.5ರಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.

VISTARANEWS.COM


on

Amritpal Singh
Koo

ಹೊಸದಿಲ್ಲಿ: ಲೋಕಸಭೆ ಚುನಾವಣೆ(Lok Sabha Election)ಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ(Khalistani) ಅಮೃತ್‌ ಪಾಲ್‌ ಸಿಂಗ್‌(Amritpal Singh)ಗೆ ನಾಲ್ಕು ದಿನಗಳ ಪೆರೋಲ್‌(Parole) ಸಿಕ್ಕಿದೆ. ಜು.5ರಂದು ಅಸ್ಸಾಂನ ದಿಬ್ರುಗರ್‌ ಜೈಲಿನಿಂದ ಹೊರಬರಲಿದ್ದಾರೆ. ಇನ್ನು ಜೈಲಿನಿಂದಲೇ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿರುವ ಖಲಿಸ್ತಾನಿ ಪ್ರತ್ಯೇಕತಾವಾದಿ ಅಮೃತಪಾಲ್‌ ಸಿಂಗ್‌ ಪ್ರಮಾಣವಚನ ಸ್ವೀಕರಿಸಿಲ್ಲ.

ಹೀಗಾಗಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಅಮೃತ್‌ಪಾಲ್‌ ಸಿಂಗ್‌ ಕೋರ್ಟ್‌ ಮೊರೆ ಹೋಗಿದ್ದರು. ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್‌, ನಾಲ್ಕು ದಿನಗಳ ಪೆರೋಲ್‌ ಮೇಲೆ ಆತನನ್ನು ಬಿಡುಗಡೆ ಮಾಡಿದೆ. ಜು.5ರಂದು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ.

ಅಮೃತ್‌ ಪಾಲ್‌ ಸಿಂಗ್‌ ಖಡೂರ್‌ ಸಾಹೀಬ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಕಾಂಗ್ರೆಸ್‌ ಅಭ್ಯರ್ಥಿ ಕುಲ್ಬೀರ್‌ ಸಿಂಗ್‌ ವಿರುದ್ಧ ಬರೋಬ್ಬರಿ 2 ಲಕ್ಷ ವೋಟುಗಳ ಅಂತರದಲ್ಲಿ ಭಾರೀ ಗೆಲವು ಸಾಧಿಸಿದ್ದರು.

ಯಾರು ಈ ಅಮೃತ್‌ಪಾಲ್‌ ಸಿಂಗ್‌?

ಅಮೃತಸರದ ಜಲ್ಲುಪುರ್‌ ಖೇರಾ ಎಂಬ ಗ್ರಾಮದಲ್ಲಿ 1993ರಲ್ಲಿ ಜನಿಸಿದ ಅಮೃತ್‌ಪಾಲ್‌, 12ನೇ ತರಗತಿವರೆಗೆ ಓದಿದ್ದಾನೆ. 2012ರಲ್ಲಿ ಭಾರತ ತೊರೆದು, ದುಬೈಯಲ್ಲಿ ತನ್ನ ಚಿಕ್ಕಪ್ಪನ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ದುಡಿದ. ಈತ ಪಂಜಾಬ್‌ನ ಪೊಲೀಸರ ಹಾಗೂ ರಾಜಕಾರಣಿಗಳ ಗಮನಕ್ಕೆ ಬಂದುದೇ ಕೆಲವು ದಿನಗಳ ಹಿಂದೆ- ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ಮುಖ್ಯಸ್ಥನಾಗಿ ನಿಯುಕ್ತನಾದ ಸಂದರ್ಭದಲ್ಲಿ. ಈ ಸಂಘಟನೆಯನ್ನು ಸ್ಥಾಪಿಸಿದವನು ನಟ, ಚಳವಳಿಗಾರ ದೀಪ್‌ ಸಿಧು. ಇವನು 2022ರ ಫೆಬ್ರವರಿಯಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದ. ಇವನನ್ನು ಸರ್ಕಾರ ಸಾಯಿಸಿದೆ ಎಂದು ಅಮೃತ್‌ಪಾಲ್‌ ಮತ್ತು ಬೆಂಬಲಿಗರು ಆರೋಪಿಸುತ್ತ ಬಂದಿದ್ದಾರೆ. ಅಮೃತ್‌ಪಾಲ್‌ ಯಾವತ್ತೂ ಸಿಧುವನ್ನು ಭೇಟಿ ಮಾಡಿದವನೇ ಅಲ್ಲ. ಆದರೆ ಆನ್‌ಲೈನ್‌ನಲ್ಲಿ ತನ್ನನ್ನು ಅತ್ಯಂತ ಪ್ರಭಾವಿಸಿದ್ದ ಎಂದು ಹೇಳಿಕೊಳ್ಳುತ್ತಾನೆ. ಸಿಧುವಿನ ಸಾವಿನ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಸಿಧುವಿನ ಸಲಹೆಯಂತೆ ತಾನು ಗಡ್ಡ ಟ್ರಿಮ್‌ ಮಾಡಿಕೊಳ್ಳುವುದು ಬಿಟ್ಟಿರುವುದಾಗಿ ಹೇಳಿದ್ದ.

ಹಲವು ಸಮಯದಿಂದ ಆತ ಫೇಸ್‌ಬುಕ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಖಲಿಸ್ತಾನ್ ಪರ ಪೋಸ್ಟ್‌ಗಳನ್ನು ಹಾಕುತ್ತಿದ್ದ. 2021ರಲ್ಲಿ ಕೆಂಪು ಕೋಟೆಯ ಮೇಲೆ ನಡೆದ ಗುಂಪು ದಾಳಿಯ ವೇಳೆ ಅದರ ನೇತೃತ್ವ ವಹಿಸಿದ್ದ ದೀಪ್‌ ಸಿಧುವಿನ ಕೃತ್ಯವನ್ನು ಈತ ಸಮರ್ಥಿಸಿಕೊಂಡಿದ್ದ. 2022ರಲ್ಲಿ ಪಂಜಾಬ್‌ನಲ್ಲಿ ಅಮೃತ್‌ಪಾಲ್‌ನನ್ನು ಅರೆಸ್ಟ್‌ ಮಾಡಲಾಗಿತ್ತು.

ಇನ್ನು ಲೋಕಸಭೆ ಚುನಾವಣೆಯಲ್ಲಿ ಜೈಲಿನಿಂದಲೇ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ (Sheikh Abdul Rashid) ಸಂಸದನಾಗಿ ಪ್ರಮಾಣವಚನ ಸ್ವೀಕರಿಸಲು ಎನ್‌ಐಎ ಅನುಮತಿ ನೀಡಿದೆ. ಭಯೋತ್ಪಾದಕರಿಗೆ ಹಣಕಾಸಿನ ನೆರವು ಒದಗಿಸಿದ ಆರೋಪ ಎದುರಿಸುತ್ತಿರುವ ಎಂಜಿನಿಯರ್ ರಶೀದ್ ಎಂದೇ ಜನಪ್ರಿಯವಾಗಿರುವ ಶೇಖ್ ಅಬ್ದುಲ್ ರಶೀದ್ ಜು. 25ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಬಗ್ಗೆ ದಿಲ್ಲಿ ಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶ ಚಂದರ್‌ ಜಿತ್‌ ಸಿಂಗ್‌(Chander Jit Singh) ಆದೇಶ ಹೊರಡಿಸಲಿದ್ದಾರೆ.

ಇದನ್ನೂ ಓದಿ: Koo Shut Down: ‘ಕೂ’ಗು ನಿಲ್ಲಿಸಿದ ಕನ್ನಡಿಗನೇ ಕಟ್ಟಿದ ಆ್ಯಪ್‌; ದೇಶೀಯ ಟ್ವಿಟರ್‌ ಇನ್ನು ನೆನಪು ಮಾತ್ರ!

Continue Reading
Advertisement
ದೇಶ4 mins ago

Hemant Soren: ಹೇಮಂತ್‌ ಸೊರೆನ್‌ಗೆ ಮತ್ತೆ ಒಲಿದ ಸಿಎಂ ಪಟ್ಟ; ಜು.7ರಂದು ಪ್ರಮಾಣ ವಚನ- ರಾಜ್ಯಪಾಲರಿಂದ ಗ್ರೀನ್‌ ಸಿಗ್ನಲ್‌

drivers protest
ಪ್ರಮುಖ ಸುದ್ದಿ13 mins ago

Drivers Protest: ಆಟೋ, ಕ್ಯಾಬ್ ಚಾಲಕರಿಂದ ದಿಢೀರ್‌ ರಸ್ತೆ ತಡೆ, ಸಾರಿಗೆ ಇಲಾಖೆ ಕಚೇರಿಗೆ ಮುತ್ತಿಗೆ, ಸಂಚಾರ ಅಸ್ತವ್ಯಸ್ತ

Viral News
ವೈರಲ್ ನ್ಯೂಸ್36 mins ago

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Chikkaballapura News
ಚಿಕ್ಕಬಳ್ಳಾಪುರ45 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

Team India
ಕ್ರೀಡೆ57 mins ago

Team India: ಟೀಮ್‌ ಇಂಡಿಯಾ ಆಟಗಾರರನ್ನು ಸನ್ಮಾನಿಸಿದ ಪ್ರಧಾನಿ ಮೋದಿ

Bhole Baba
Latest1 hour ago

Hathras Case: ಭೋಲೆ ಬಾಬಾ ಇರುತ್ತಿದ್ದುದು ಫೈವ್‌ ಸ್ಟಾರ್‌ ಆಶ್ರಮದಲ್ಲಿ! ಅವರಿಗಿದೆ ಅಪಾರ ಆಸ್ತಿ!

Team India victory parade
ಪ್ರಮುಖ ಸುದ್ದಿ1 hour ago

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Yuva Rajkumar Shreedevi Divorce Application case
ಸ್ಯಾಂಡಲ್ ವುಡ್1 hour ago

Yuva Rajkumar: ಶ್ರೀದೇವಿ-ಯುವರಾಜ್ ವಿಚ್ಛೇದನ: ಆಗಸ್ಟ್ 23ಕ್ಕೆ ವಿಚಾರಣೆ ಮುಂದೂಡಿದ ನ್ಯಾಯಾಲಯ

Job Alert
ಉದ್ಯೋಗ1 hour ago

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Chikkaballapura News
ಚಿಕ್ಕಬಳ್ಳಾಪುರ45 mins ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 hour ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ3 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ3 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

ಟ್ರೆಂಡಿಂಗ್‌