ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ - Vistara News

ರಾಜಕೀಯ

ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ?: ಆರೋಪಕ್ಕೆ ಅಶ್ವತ್ಥನಾರಾಯಣ ಆಕ್ರೋಶ

ನನ್ನಂತಹ ಪ್ರಾಮಾಣಿಕ ವ್ಯಕ್ತಿ ಸಿಎಂ ಆದರೆ ಹೇಗೆ ಎಂಬ ಭಯ ಡಿ.ಕೆ. ಶಿವಕುಮಾರ್‌ಗೆ ಇರಬೇಕು. ಈ ಭಯ ಇರಲಿ, ಒಳ್ಳೆಯದು ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

VISTARANEWS.COM


on

ಆಶ್ವತ್ಥನಾರಾಯಣ
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಚಿವರೊಬ್ಬರ ಕುಟುಂಬದ ಸದಸ್ಯರ‍್ಯಾರೊ ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ ಎಂದು ತಿಳಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ಐಟಿಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದಲ್ಲಿ ಹಸ್ತಕ್ಷೇಪ ಮಾಡುವುದಕ್ಕೆ ನಮ್ಮದೇನು ಡಿಕೆ ಶಿವಕುಮಾರ ಕುಟುಂಬ ಕೆಟ್ಟೋಯ್ತ? ಎಂದಿದ್ದಾರೆ.

ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಚಿವರು ಪ್ರತಿಕ್ರಿಯೆ ನೀಡಿದರು.

ಪತ್ರಿಕೋಷ್ಠಿಯಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಅಶ್ವತ್ಥನಾರಾಯಣ, ಶಿವಕುಮಾರ್‌ ಬಂಡವಾಳವನ್ನು ಬಿಚ್ಚೋದಕ್ಕೆ ಶುರು ಮಾಡುತ್ತೇನೆ. ಇವರು ಎಲ್ಲೆಲ್ಲಿ, ಹೇಗೆ ಮುಂದೆ ಬಂದರು ಎನ್ನುವುದನ್ನು ಮುಂದಿಡುತ್ತೇನೆ. ಒಬ್ಬ ಭ್ರಷ್ಟಾಚಾರಿ ವ್ಯಕ್ತಿ ನನ್ನ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ಮಾಡುತ್ತಿದ್ದಾರೆ. ನಾವು ಯಾರಿಗೂ ಸಹಾಯ ಮಾಡಿ ಎಂದು ಹೇಳಿಲ್ಲ. ಈ ಆರೋಪ ಮಾಡುತ್ತಿರುವವರು ಯಾವ ವಿಚಾರವನ್ನೂ ಸ್ಪಷ್ಟವಾಗಿ ಹೇಳುತ್ತಿಲ್ಲ. ಅಣ್ಣ ಇರಬಹುದು, ತಮ್ಮ ಇರಬಹುದು, ಸಂಬಂಧಿಕ ಇರಬಹುದು ಎಂದು ಬಾಯಿಗೆ ಬಂದಂತೆ ಹೇಳುತ್ತಿದ್ದಾರೆ. ಯಾರೊ ಒಬ್ಬ ವ್ಯಕ್ತಿ ಉತ್ತಮವಾಗಿದ್ದಾನೆ, ಭ್ರಷ್ಟಾಚಾರ ರಹಿತವಾಗಿ ಕೆಲಸ ಮಾಡುತ್ತಿದ್ದಾನೆ ಎನ್ನುವುದು ಭ್ರಷ್ಟಾಚಾರಿಗಳನ್ನು ಚುಚ್ಚುತ್ತಿದೆ. ಇಂತಹ ಕೀಳು ಮಟ್ಟದ ಹೇಳಿಕೆಯನ್ನು ನೀಡಲು ಹೇಗೆ ಮನಸ್ಸು ಬರುತ್ತದೆ? ಯಾವ ದುರುದ್ದೇಶದಿಂದ ಹೇಳಿಕೆ ಕೊಟ್ಟಿದ್ದಾರೆ ಎಂದು ಗೊತ್ತಿಲ್ಲ. ಅಶ್ವತ್ಥನಾರಾಯಣ ಮುಖ್ಯಮಂತ್ರಿ ಆಗುತ್ತಿದ್ದಾರೆ ಎಂದು ಯಾರಾದರೂ ಶಿವಕುಮಾರ್‌ ಅವರಿಗೆ ಕರೆ ಮಾಡಿದ್ದರೆ, ಅಂತಹ ವ್ಯಕ್ತಿ ಈ ರೀತಿ ಮಾತನಾಡಬಾರದು ಎಂದು ಅವರೇ ಹೇಳಬೇಕು. ನಾನು ಸಿಎಂ ಆದರೆ ಹೇಗೆ ಎಂಬ ಭಯ ಅವರಿಗೆ ಇರಬೇಕು, ಈ ಭಯ ಇರಲಿ, ಒಳ್ಳೆಯದು.

ನಾನು ಜನಸೇವಕನಾಗಲು ರಾಜಕಾರಣಕ್ಕೆ ಬಂದವನು. ನನ್ನ ಜೀವನ ಅತ್ಯಂತ ಪಾರದರ್ಶಕವಾಗಿದೆ. ಕೇಂದ್ರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಿರುವುದನ್ನು ನೋಡಿಕೊಂಡೇ ವಿರೋಧಿಗಳು ನನ್ನ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಇದರಲ್ಲಿ ಕಿಂಚಿತ್ತೂ ಹುರುಳಿಲ್ಲ.

ಇದನ್ನೂ ಓದಿ | PSI Scam | ಹೋರಾಟ ಮಾಡೋಣ ಬನ್ನಿ ಎಂದವನೇ A1; ಇಪ್ಪತ್ತೆರಡು ಅಭ್ಯರ್ಥಿಗಳ ವಿರುದ್ಧ FIR

‘ಸತೀಶ್ ಅವರು ನನ್ನ ಅಣ್ಣ ಎನ್ನುವುದು ನಿಜ. ಆದರೆ, ಈ ದರ್ಶನ್ ಗೌಡ ಯಾರೆನ್ನುವುದೂ ನನಗೆ ಗೊತ್ತಿಲ್ಲ. ನಾನು ಅವನನ್ನು ನೋಡಿಯೂ ಇಲ್ಲ. ನನ್ನ ಸಾಧನೆಗಳನ್ನು ಸಹಿಸಿಕೊಳ್ಳಲು ವಿರೋಧಿಗಳಿಗೆ ಆಗುತ್ತಿಲ್ಲ. ಹೀಗಾಗಿ ಮಸಿ ಮೆತ್ತುವ ಕೀಳು ಮಟ್ಟಕ್ಕೆ ಇಳಿದಿದ್ದಾರೆ’ ಎಂದರು.

ಸಮಾಜದಲ್ಲಿ ಬೇರೂರಿರುವ ಭ್ರಷ್ಟಾಚಾರವನ್ನು ಕಿತ್ತೆಸೆಯಬೇಕೆಂದು ಹೇಳುವವನು ನಾನು. ಪಿಎಸ್ಐ ಪರೀಕ್ಷಾ ಅಕ್ರಮದಲ್ಲಿ ಶಾಮೀಲಾಗಿರುವವರನ್ನು ಕೂಡ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರ ವಿರುದ್ಧ ಈಗಾಗಲೇ ವಿಚಾರಣೆ ಆರಂಭವಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗುವುದು. ನನ್ನ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆಯನ್ನು ಯಾರು ಬೇಕಾದರೂ ಪರಿಶೀಲಿಸಬಹುದು. ಮಾಧ್ಯಮಗಳು ಇದರತ್ತ ಗಮನ ಹರಿಸಬೇಕು.

ಕಾಂಗ್ರೆಸ್ ನಾಯಕ ಉಗ್ರಪ್ಪ ಅವರು ಈಗ ಮಾಡುತ್ತಿರುವ ಆರೋಪವನ್ನು ಒಪ್ಪುವುದಾದರೆ, ತಮ್ಮ ಪಕ್ಷದ ಅಧ್ಯಕ್ಷ ಡಿ. ಕೆ. ಶಿವಕುಮಾರರನ್ನೇ ಕಡುಭ್ರಷ್ಟ ಎಂದು ಕೆಲವೇ ದಿನಗಳ ಹಿಂದೆ ಹೇಳಿದ್ದ ಉಗ್ರಪ್ಪನವರ ಹೇಳಿಕೆಯನ್ನೂ ಸತ್ಯ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ನನ್ನ ಏಳಿಗೆಯನ್ನು ಸಹಿಸಲು ಆಗುತ್ತಿಲ್ಲ. ಹೀಗಾಗಿಯೇ ಅವರು ಹಲವರೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು, ಕಟ್ಟಕತೆಗಳನ್ನು ಸೃಷ್ಟಿಸುತ್ತಿದ್ದಾರೆ. ಇವುಗಳನ್ನು ಆಳವಾಗಿ ಪರಿಶೀಲಿಸಿದರೆ, ಇವೆಲ್ಲ ಎಲ್ಲಿ ಸೃಷ್ಟಿಯಾಗುತ್ತಿದೆ ಎನ್ನುವುದೆಲ್ಲ ಗೊತ್ತಾಗುತ್ತದೆ. ಕುಟುಂಬದವರ ಹೆಸರನ್ನು ತೇಲಿಬಿಟ್ಟು ಈಗ ಹೀನ ರಾಜಕೀಯ ಮಾಡಲಾಗುತ್ತಿದೆ. ಎಂತಹ ಸ್ಥಿತಿಯಲ್ಲೂ ನಾವು ಬಡವರ ಹೊಟ್ಟೆಯ ಮೇಲೆ ಹೊಡೆಯುವ ಪದ್ಧತಿ ನಮಗೆ ಗೊತ್ತಿಲ್ಲ.  ನಾವು ಜನಸೇವೆ ಮಾಡಲೆಂದು ಬಂದು ಈ ಕ್ಷೇತ್ರಕ್ಕೆ ಬಂದಿರುವವರು.

ವಿರೋಧಿಗಳು ನನ್ನ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ಸಾಕ್ಷ್ಯಾಧಾರಗಳ ಸಮೇತ ಸಾಬೀತು ಪಡಿಸಬೇಕು. ಇಲ್ಲದೆ ಹೋದರೆ ನಾನು ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಂತೂ ನಿಶ್ಚಿತ. ನಮ್ಮ ಕುಟುಂಬದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಕುಟುಂಬದ ಹಸ್ತಕ್ಷೇಪ ಮಾಡಲು ನಮ್ಮದು ಡಿ.ಕೆ. ಶಿವಕುಮಾರ್‌ ಕುಟುಂಬ ಕೆಟ್ಟೋಯ್ತ? ನಮ್ಮ ಕುಟುಂಬದಲ್ಲಿ ಇಂತಹ ಪದ್ಧತಿ, ಅಧಿಕಾರದಲ್ಲಿ ಹಸ್ತಕ್ಷೇಪದಂತಹ ವಿಚಾರಗಳೇ ಇಲ್ಲ ಎಂದರು. ಆದರೆ ಕೆಲವರು ರಾಜಕೀಯಕ್ಕೆ ಬಂದು ಮನುಷ್ಯತ್ವದ ಸೂಕ್ಷ್ಮತೆಯನ್ನೇ ಕಳೆದುಕೊಂಡಿದ್ದಾರೆ. ಗಾಳಿಯಲ್ಲಿ ಗುಂಡು ಹೊಡೆದಂತೆ ಆರೋಪಗಳನ್ನು ಮಾಡುವ ಇವರಿಗೆ ನಾಚಿಕೆ ಅನ್ನೋದೇ ಇಲ್ಲವಾ? ಎಂದು ಲೇವಡಿ ಮಾಡಿದರು.

ಇದನ್ನೂ ಓದಿ | PSI Scam | 18 ದಿನ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ದಿವ್ಯಾ ಹಾಗರಗಿ ಅರೆಸ್ಟ್‌: ಒಟ್ಟು 18 ಆರೋಪಿಗಳ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

Modi in Karnataka: ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

VISTARANEWS.COM


on

Modi in Karnataka on April 20 Massive rallies in Chikkaballapura and Bengaluru
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರದ ಭರಾಟೆ ಜೋರಾಗಿಯೇ ಇದೆ. ಚುನಾವಣೆ ಘೋಷಣೆಯಾಗಿ ಈಗಾಗಲೇ ರಾಜ್ಯಕ್ಕೆ ಎರಡು ಬಾರಿ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೂರನೇ ಬಾರಿಗೆ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಏಪ್ರಿಲ್ 20ರಂದು ಮೋದಿ ರಾಜ್ಯಕ್ಕೆ )Modi in Karnataka) ಆಗಮಿಸುತ್ತಿದ್ದು, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಸುತ್ತಮುತ್ತಲಿನ ಲೋಕಸಭಾ ಕ್ಷೇತ್ರಗಳಲ್ಲಿ ಮೋಡಿ ಮಾಡಲಿದ್ದಾರೆ.

ಮೈಸೂರಿನ ಬೃಹತ್‌ ಸಮಾವೇಶ ಹಾಗೂ ಮಂಗಳೂರಿನ ರೋಡ್‌ ಶೋ ಯಶಸ್ಸಿನ ನಂತರ ಪುನಃ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮೋದಿ ಹವಾ!

ಏಪ್ರಿಲ್‌ 20ರಂದು ಮೊದಲಿಗೆ ಚಿಕ್ಕಬಳ್ಳಾಪುರ ನಗರದಲ್ಲಿ ಮಧ್ಯಾಹ್ನ 3 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಜತೆಗೆ ಪಕ್ಕದ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಪರವೂ ಮತಯಾಚನೆ ಮಾಡಲಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರವೂ ಸೇರುವುದರಿಂದ ಭಾರಿ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ನಿರೀಕ್ಷೆ ಇದೆ.

ಬೆಂಗಳೂರಲ್ಲಿ ಬೃಹತ್‌ ರ‍್ಯಾಲಿ

ಶನಿವಾರ ಸಂಜೆ 5.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಪ್ರಚಾರ ರ‍್ಯಾಲಿಯನ್ನು ಆಯೋಜನೆ ಮಾಡಲಾಗಿದೆ. ಇಲ್ಲಿ ಬೆಂಗಳೂರು ಉತ್ತರ, ದಕ್ಷಿಣ ಹಾಗೂ ಕೇಂದ್ರ ಲೋಕಸಭಾ ಕ್ಷೇತ್ರಗಳು ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನೊಳಗೊಂಡಂತೆ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಸಿಗುವುದೇ ಮೋದಿ ಬೂಸ್ಟ್‌!

ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನಾಗಿ ಡಾ. ಸಿ.ಎನ್.‌ ಮಂಜುನಾಥ್‌ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಡಿಎ ಅಭ್ಯರ್ಥಿಗಳ ನಡುವೆ ಟಫ್‌ ಫೈಟ್‌ ಏರ್ಪಟ್ಟಿದೆ. ಕಾರಣ ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮತಗಳು ಕ್ರೋಡೀಕರಣಗೊಂಡರೆ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ಅವರ ಗೆಲುವಿನ ಹಾದಿ ಅಷ್ಟು ಸುಲಭವಿಲ್ಲ. ಈ ಹಿನ್ನೆಲೆಯಲ್ಲಿ ಡಿಕೆ ಬ್ರದರ್ಸ್‌ ರಾತ್ರಿ – ಹಗಲು ಎನ್ನುವಂತೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಅಲ್ಲದೆ, ಕ್ಷೇತ್ರದ ಗೆಲುವಿಗೆ ನಾನಾ ಕಸರತ್ತುಗಳನ್ನು, ರಣತಂತ್ರಗಳನ್ನು ಹೆಣೆಯುತ್ತಾ ಬರುತ್ತಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಸಹ ಬರಲಿದ್ದು, ಅವರು ಪಕ್ಷದ ಅಭ್ಯರ್ಥಿಯಾದ ಡಾ. ಸಿ.ಎನ್.‌ ಮಂಜುನಾಥ್‌ ಪರ ಏನು ಹೇಳಲಿದ್ದಾರೆ? ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧ ಯಾವ ಬಾಂಬ್‌ ಎಸೆಯಲಿದ್ದಾರೆ? ಇದು ಮತದಾರರ ಮೇಲೆ ಬೀರುವ ಪರಿಣಾಮ ಏನು ಎಂಬಿತ್ಯಾದಿ ಲೆಕ್ಕಾಚಾರಗಳನ್ನು ಹಾಕಲಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಮೈಸೂರು ಸಮಾವೇಶದಲ್ಲಿ ಗುಡುಗಿದ್ದ ಮೋದಿ!

ಮೈಸೂರಿನಲ್ಲಿ ನಡೆದಿದ್ದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ಪಕ್ಷದ ಭ್ರಷ್ಟಾಚಾರದ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೆ, ಹಿಂದುತ್ವದ ವಿರುದ್ಧ ಆ ಪಕ್ಷ ಹಾಗೂ ಮಿತ್ರ ಪಕ್ಷಗಳು ಕೆಲಸ ಮಾಡುತ್ತಿವೆ ಎಂದು ದೂರಿದ್ದರು. ಇನ್ನು ದೇಶದ ಎಲ್ಲ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಇಲ್ಲಿನ ಕಾಂಗ್ರೆಸ್‌ ಸರ್ಕಾರವು ಎಟಿಎಂ ಆಗಿದ್ದು, ನೂರಾರು ಕೋಟಿ ರೂಪಾಯಿ ಸಂದಾಯವಾಗಿದೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಏಪ್ರಿಲ್‌ 20 ರಂದು ನಡೆಯಲಿರುವ ಎರಡು ಸಮಾವೇಶಗಳಲ್ಲಿ ಮೋದಿ ಏನು ಮಾತನಾಡಲಿದ್ದಾರೆ? ಯಾವೆಲ್ಲ ಹೊಸ ವಿಷಯಗಳನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

Continue Reading

Lok Sabha Election 2024

Lok Sabha Election 2024: ಸಂಸತ್‌ ಸ್ಥಾನ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಸಂಗಣ್ಣ ಕರಡಿ ರಾಜೀನಾಮೆ; ನಾಳೆ ಕಾಂಗ್ರೆಸ್‌ ಸೇರ್ಪಡೆ?

Lok Sabha Election 2024: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಆದರೆ, ಒಳಗೊಳಗೇ ಕುದಿಯುತ್ತಿದ್ದ ಸಂಗಣ್ಣ ಕರಡಿ ಕೊನೆಗೂ ಕಾಂಗ್ರೆಸ್‌ ಕದ ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ತಮ್ಮ ಸಂಸತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಾಳೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗುವ ಸಾಧ್ಯತೆ ಇದೆ.

VISTARANEWS.COM


on

Lok Sabha Election 2024 Sanganna Karadi resigns from primary membership of BJP
Koo

ಕೊಪ್ಪಳ: ಲೋಕಸಭಾ ಚುನಾವಣೆ (Lok Sabha Election 2024) ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ (Sanganna Karadi) ಅವರು ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ. ಅವರು ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ (CM Siddaramaiah) ಸಮ್ಮುಖದಲ್ಲಿ ಕಾಂಗ್ರೆಸ್‌ (Congress Karnataka) ಸೇರ್ಪಡೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಬಯಸಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಟಿಕೆಟ್‌ ನಿರಾಕರಿಸಲಾಗಿತ್ತು. ಅವರ ಬದಲಿಗೆ ಡಾ‌. ಬಸವರಾಜ ಕ್ಯಾವಟೋರ್ ಅವರಿಗೆ ಟಿಕೆಟ್‌ ನೀಡಿದ್ದರಿಂದ ಬಂಡಾಯದ ಕಹಳೆ ಊದಿದ್ದರು. ಆದರೆ, ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿ ಮಾಡಿದ್ದರು. ಅಲ್ಲದೆ, ಅವರಿಗೆ ರಾಜ್ಯಸಭೆಗೆ ಆಯ್ಕೆ ಮಾಡುವ ಭರವಸೆಯನ್ನೂ ನೀಡಲಾಗಿತ್ತು. ಕೊನೆಗೆ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುವುದಾಗಿ ಸಂಗಣ್ಣ ಕರಡಿ ಸಹ ಒಪ್ಪಿಕೊಂಡಿದ್ದರು.

ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ ಎಂದು ಅಂದುಕೊಳ್ಳುವಷ್ಟರಲ್ಲಿ ಸಂಗಣ್ಣ ಕರಡಿ ತಮ್ಮ ಮನಸ್ಸನ್ನು ಬದಲಾಯಿಸಿದ್ದರು. ಕೆಲವು ಕಾಂಗ್ರೆಸ್‌ ಮುಖಂಡರು ಅವರನ್ನು ಸಂಪರ್ಕ ಮಾಡಿದ್ದರು. ಈ ವೇಳೆ ಕೆಲವು ಸುತ್ತಿನ ಚರ್ಚೆಗಳು ಸಹ ನಡೆದಿವೆ. ಹೀಗಾಗಿ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ತಮ್ಮ ಲೋಕಸಭಾ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದಾರೆ.

ಲೋಕಸಭಾಧ್ಯಕ್ಷರಿಗೆ ಇ- ಮೇಲ್ ಮೂಲಕ ರಾಜಿನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ಹತ್ತು ವರ್ಷದಿಂದ ಲೋಕಸಭಾ ಸದಸ್ಯರಾಗಿದ್ದ ಸಂಗಣ್ಣ ಕರಡಿ ಬಿಜೆಪಿಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಆದರೆ, ಬಿಜೆಪಿಯೊಂದಿಗಿನ ತಮ್ಮ ಹಲವು ವರ್ಷಗಳ ಸಂಬಂಧವನ್ನು ಕಡಿದುಕೊಂಡಿದ್ದು, ಈಗ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ.

ಇದರ ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ಸಂಗಣ್ಣ ಕರಡಿ ರಾಜೀನಾಮೆ ನೀಡಿದ್ದಾರೆ. ಈ ಸಂಬಂಧ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇ-ಮೇಲ್ ಮೂಲಕ ಪ್ರಾಥಮಿಕ ಸ್ಥಾನಕ್ಕೆ ರಾಜಿನಾಮೆಯನ್ನು ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರ್ಪಡೆ?

ಬುಧವಾರ (ಏಪ್ರಿಲ್‌ 17) ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಈ ಸಂಬಂಧ ಕೆಲವು ಸುತ್ತಿನ ಮಾತುಕತೆ ಸಹ ನಡೆದಿವೆ ಎನ್ನಲಾಗಿದೆ. ಅಲ್ಲದೆ, ಬಿಜೆಪಿಯಲ್ಲಿ ಟಿಕೆಟ್‌ ಸಿಗದೇ ಇರುವುದಕ್ಕೆ ಮುನಿಸಿಕೊಂಡಿರುವ ಕರಡಿಯನ್ನು ಪಕ್ಷಕ್ಕೆ ಸೆಳೆದರೆ ಲಾಭವಾಗುತ್ತದೆ ಎಂಬ ಲೆಕ್ಕಾಚಾರವನ್ನು ಕಾಂಗ್ರೆಸ್‌ ಹಾಕಿಕೊಂಡಿತ್ತು. ಹೀಗಾಗಿ ನಿರಂತರವಾಗಿ ಸಂಪರ್ಕ ಸಾಧಿಸಿ ಕರಡಿಯನ್ನು ಕಾಂಗ್ರೆಸ್‌ನತ್ತ ಸೆಳೆಯುವಲ್ಲಿ ಯಶ ಕಾಣಲಾಗಿದೆ ಎಂದೇ ಹೇಳಲಾಗುತ್ತಿದೆ. ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಭೇಟಿ ಮಾಡಲಿರುವ ಸಂಗಣ್ಣ ಕರಡಿ, ತಮ್ಮ ಕೆಲವು ಷರತ್ತುಗಳನ್ನು ಇಡಲಿದ್ದಾರೆ. ಇದಕ್ಕೆ ಅವರು ಒಪ್ಪಿದಲ್ಲಿ ಕೂಡಲೇ ಪಕ್ಷ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ವಿಧಾನಸಭೆ ಚುನಾವಣೆಯಲ್ಲಿ ಸೊಸೆಗೆ ಟಿಕೆಟ್‌

ಇನ್ನು ಕಳೆದ ವಿಧಾನಸಭಾ ಚುನಾವಣೆ ವೇಳೆ ಸಂಗಣ್ಣ ಕರಡಿ ಸೊಸೆ ಮಂಜುಳಾ ಅಮರೇಶ್ ಸ್ಪರ್ಧೆ ಮಾಡಿದ್ದರು. ಇವರನ್ನೇ ಕಣಕ್ಕಿಳಸಬೇಕು ಎಂದು ಸಂಗಣ್ಣ ಕರಡಿ ಪಟ್ಟು ಹಿಡಿದಿದ್ದರು. ಕೊನೆಗೆ ಇವರ ಒತ್ತಡಕ್ಕೆ ಬಿಜೆಪಿ ಹೈಕಮಾಂಡ್‌ ಮಣಿದಿತ್ತು. ಆದರೆ, ಚುನಾವಣೆಯಲ್ಲಿ ಮಂಜುಳಾ ಅವರು ಸೋಲು ಕಂಡಿದ್ದರು. ಆದರೆ, ಸಂಗಣ್ಣ ಕರಡಿ ಅವರಿಗೆ ಕೊಪ್ಪಳ ಭಾಗದಲ್ಲಿ ಒಳ್ಳೆಯ ಹಿಡಿತವಿದೆ. ಈ ಹಿನ್ನೆಲೆಯಲ್ಲಿ ಅವರ ಕಾಂಗ್ರೆಸ್‌ ಸೇರ್ಪಡೆ ಹಿಂದೆ ತಂತ್ರಗಾರಿಕೆ ಅಡಗಿದೆ ಎನ್ನಲಾಗಿದೆ.

Continue Reading

ಕರ್ನಾಟಕ

DK Shivakumar: ಕುಮಾರಸ್ವಾಮಿ ನನಗೆ ಮರ್ಯಾದೆ ಕೊಟ್ಟರೆ, ನಾನೂ ಕೊಡುತ್ತೇನೆ: ಡಿ.ಕೆ. ಶಿವಕುಮಾರ್

DK Shivakumar: ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದಾರೆ.

VISTARANEWS.COM


on

DK Shivakumar attack on HD Kumaraswamy
Koo

ಬೆಂಗಳೂರು: ನಾನು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ವೈಯಕ್ತಿಕವಾಗಿ ಗೌರವ ನೀಡುತ್ತೇನೆ. ಈಗಲೂ ನೀಡುತ್ತಿದ್ದೇನೆ, ಮುಂದೆಯೂ ನೀಡುತ್ತೇನೆ. ಅವರು ನನಗೆ ಗೌರವ ಕೊಟ್ಟರೆ, ನಾನು ಅದೇ ಗೌರವವನ್ನು ಅವರಿಗೆ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಹೇಳಿದರು. ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪರಸ್ಪರರ ನಡುವೆ ನಡೆಯುತ್ತಿರುವ ವಾಕ್ಸಮರದ ಬಗ್ಗೆ ಡಿಕೆಶಿ ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ನಾನು ಕುಮಾರಸ್ವಾಮಿ ಅವರಿಗೆ ಗೌರವ ನೀಡುತ್ತಿದ್ದರೂ ಅವರು ಪದೇ ಪದೆ ನನ್ನ ಬಗ್ಗೆ ವೈಯಕ್ತಿಕ ವಿಚಾರವಾಗಿ ಬಂಡೆ ಒಡೆದ, ವಿಷ ಹಾಕಿದ, ಹೆಣ್ಣು ಮಕ್ಕಳ ಕೈಯಿಂದ ಜಮೀನು ಬರೆಸಿಕೊಂಡಿದ್ದೇನೆ ಎಂದು ಆಧಾರರಹಿತವಾಗಿ ಟೀಕೆ ಮಾಡುತ್ತಿದ್ದಾರೆ. ನಾನು ಒಂದು ಕಾಲದಲ್ಲಿ ಬಂಡೆ ಒಡೆದಿದ್ದರೆ, ನನ್ನ ಜಮೀನಿನ ಬಂಡೆಯನ್ನು ಕಾನೂನುಬದ್ಧವಾಗಿ ಒಡೆದಿದ್ದೇನೆ. ನಾವು ಹಿರಿಯರಿಗೆ ಗೌರವ ನೀಡುವುದೇ ಅವರಿಂದಲೂ ಅದನ್ನು ಸ್ವೀಕರಿಸಲು. ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಚುನಾವಣೆ ನಂತರ ಅವರ ಪಕ್ಷ ಯಾವ ಸ್ಥಿತಿಗೆ ತಲುಪಲಿದೆ ಕಾದು ನೋಡಿ. ನಮ್ಮಂತಹವರನ್ನು, ಅಂದರೆ ಸಮುದಾಯವನ್ನು ಕಳೆದುಕೊಳ್ಳುವುದು ಸರಿಯಲ್ಲ. ಸಮುದಾಯಕ್ಕಾಗಿ ನಾನು ಅವರಿಗೆ ಗೌರವ ಕೊಟ್ಟು ಅವರು ಏನೇ ಅಂದರೂ ಸಹಿಸಿಕೊಂಡಿದ್ದೇನೆ. ಅವರು ಸವಾಲು ಸ್ವೀಕರಿಸಿದ್ದರೆ ಚುನಾವಣೆ ನಂತರ ಅಧಿವೇಶನದಲ್ಲಿ ಮಾತನಾಡೋಣ ಎಂದು ತಿಳಿಸಿದರು.

ಅವರ ನುಡಿಮುತ್ತು ಮರೆಮಾಚಲು ನನ್ನ ಮೇಲೆ ಆರೋಪ

ಎನ್‌ಒಸಿ ನೀಡಲು ಅಪಾರ್ಟ್ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಎಚ್‌ಡಿಕೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾವು ನೀರಿನ ಕಷ್ಟಕಾಲದಲ್ಲೂ ಬೆಂಗಳೂರಿನ ಎಲ್ಲ ಜನರಿಗೂ ಕುಡಿಯಲು ನೀರು ಪೂರೈಸುತ್ತಿದ್ದೇವೆ. ಕುಮಾರಸ್ವಾಮಿ ಅವರು ತಮ್ಮ ನುಡಿಮುತ್ತುಗಳನ್ನು ಮರೆಮಾಚಿಕೊಂಡು ಜನರ ಗಮನ ಬೇರೆಡೆ ಸೆಳೆಯಲು ಈ ರೀತಿ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಮಾಧ್ಯಮಗಳಲ್ಲಿ ಬೇರೆ ಬೇರೆ ಆಯಾಮಗಳಲ್ಲಿ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಅವರಿಗೆ ಆ ರೀತಿ ಮಾತನಾಡಿ ಎಂದು ಹೇಳಿದವರು ಯಾರು? ನಾನು ಆ ವಿಚಾರ ಬಿಡುತ್ತೇನೆ. ಆದರೆ, ಅವರ ಮಾತುಗಳಿಂದ ಮಹಿಳೆಯರಿಗೆ ಆಗಿರುವ ಅಪಮಾನವನ್ನು ಅವರ ಮನಸ್ಸಿನಿಂದ ತೆಗೆಯಲು ಆಗುವುದಿಲ್ಲ. ಇದು ರಾಜ್ಯದ ವಿಚಾರವಾಗಿದ್ದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೂ ಇದಕ್ಕೂ ಸಂಬಂಧವಿಲ್ಲ. ಇದು ಮಹಿಳೆಯರು ಹಾಗೂ ಅವರ ಸ್ವಾಭಿಮಾನದ ವಿಚಾರ. ಇವರ ವಿಚಾರ ಬಿಡಿ. ನಮ್ಮ ಗುರಿ ಬಿಜೆಪಿ. ಕುಮಾರಸ್ವಾಮಿ ಅವರು ಹೇಳಿಕೆ ಕೊಟ್ಟರು ಸರಿ, ಬಿಜೆಪಿಯವರು ಯಾಕೆ ಆ ವಿಚಾರವಾಗಿ ಪ್ರತಿಕ್ರಿಯೆ ನೀಡುತ್ತಿಲ್ಲ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ‌ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಈ ಬಗ್ಗೆ ಬಾಯಿ ಬಿಡುತ್ತಿಲ್ಲವೇಕೆ?” ಎಂದು ಹೇಳಿದರು.

ಇದನ್ನೂ ಓದಿ: Lok Sabha Election 2024: ಎಚ್‌.ಡಿ. ದೇವೇಗೌಡರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಕಿರಿಕ್‌; ಚುನಾವಣಾ ಆಯೋಗಕ್ಕೆ ದೂರು

ಡಿಕೆಶಿ ಒಕ್ಕಲಿಗ ನಾಯಕನಲ್ಲ ಎಂಬ ಆರ್. ಅಶೋಕ್ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ನಾನು ನಾಯಕನೇ ಅಲ್ಲ. ಅವರು ನಾಯಕರು, ದೊಡ್ಡ ನಾಯಕರು. ನಾನು ಸಾಮಾನ್ಯ ಕಾರ್ಯಕರ್ತ ಎಂದು ಹೇಳಿದರು.

ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ರಾಜ್ಯ ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್‌, ರಾಹುಲ್ ಗಾಂಧಿ ಅವರು ನಾಳೆ (ಬುಧವಾರ – ಏಪ್ರಿಲ್‌ 17) ಮಂಡ್ಯ ಹಾಗೂ ಕೋಲಾರಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12.30ಕ್ಕೆ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಧ್ಯಾಹ್ನ ಮಂಡ್ಯಕ್ಕೆ ತೆರಳಿ, ನಂತರ ಕೋಲಾರಕ್ಕೆ ಹೋಗಿ ಅಲ್ಲಿಂದ ದೆಹಲಿಗೆ ಹೋಗುತ್ತಾರೆ. ಪ್ರಿಯಾಂಕಾ ಗಾಂಧಿ ಅವರು ಕೆಲವು ದಿನಾಂಕ ಕೊಟ್ಟಿದ್ದು, ಅವರಿಗೆ ಬೇರೆ ರಾಜ್ಯಗಳಲ್ಲಿ ಪ್ರಚಾರದ ಒತ್ತಡವಿದೆ. ಅವರ ಕೊಟ್ಟಿರುವ ದಿನಾಂಕಗಳ ಸಮಯವನ್ನು ಹೊಂದಾಣಿಕೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

Continue Reading

ದೇಶ

Lok Sabah Election : ಹೇಮಮಾಲಿನಿಗೆ ಅವಹೇಳನ; ಕಾಂಗ್ರೆಸ್​ ನಾಯಕ ಸುರ್ಜೇವಾಲಾಗೆ 48 ಗಂಟೆ ನಿಷೇಧ

Lok Sabah Election: ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

Lok Sabha Election
Koo

ಬೆಂಗಳೂರು: ಲೋಕ ಸಭಾ ಚುನಾವಣೆಯಲ್ಲಿ ಹಿನ್ನೆಲೆಯ (Lok Sabah Election) ಪ್ರಚಾರ ಸಭೆಯಲ್ಲಿ ಬಿಜೆಪಿ ನಾಯಕಿ ಹೇಮಾ ಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರಿಗೆ ಚುನಾವಣಾ ಆಯೋಗ 48 ಗಂಟೆಗಳ ಕಾಲ ಪ್ರಚಾರ ಮಾಡದಂತೆ ನಿಷೇಧ ಹೇರಿದೆ. ಮಾಲಿನಿ ಬಗ್ಗೆ “ಅಮಾನವೀಯ, ಅನಾಗರಿಕ ಮತ್ತು ಅಶ್ಲೀಲ” ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಚುನಾವಣಾ ಆಯೋಗವು ಸುರ್ಜೆವಾಲಾ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಸುರ್ಜೆವಾಲಾ ಅವರ ಉತ್ತರದಲ್ಲಿ ನೀಡಿದ ಹೇಳಿಕೆಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದ ವಿಷಯದಲ್ಲಿ ಹೊರಡಿಸಲಾದ ಅಥವಾ ನಂತರ ಅವರಿಗೆ ನೀಡಿರುವ ಆದೇಶದಲ್ಲಿ ಯಾವುದೇ ಪೂರ್ವಾಗ್ರಹವಿಲ್ಲ. ಹರಿಯಾಣದಲ್ಲಿ ನಡೆದ ಚುನಾವಣಾ ಪ್ರಚಾರದ ಸಮಯದಲ್ಲಿ ಸುರ್ಜೇವಾಲಾ ನೀಡಿದ ಹೇಳಿಕೆಯನ್ನು ಆಯೋಗವು ಬಲವಾಗಿ ಖಂಡಿಸುತ್ತದೆ. ದುರ್ನಡತೆಗಾಗಿ ರಣದೀಪ್ ಸುರ್ಜೆವಾಲಾ ಅವರಿಗೆ ಛೀಮಾರಿ ಹಾಕಲಾಗುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.

ಸಂವಿಧಾನದ 324 ನೇ ವಿಧಿ ಮತ್ತು ಈ ನಿಟ್ಟಿನಲ್ಲಿ ಇರುವ ಎಲ್ಲ ಅಧಿಕಾರಗಳ ಅಡಿಯಲ್ಲಿ, ಆಯೋಗವು ಏಪ್ರಿಲ್ 16 ರಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಸುರ್ಜೇವಾಲಾ ಅವರಿಗೆ ನಿಷೇಧ ಹೇರುತ್ತದೆ. ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಸಭೆಗಳು, ಸಾರ್ವಜನಿಕ ಮೆರವಣಿಗೆಗಳು, ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಂದರ್ಶನಗಳು, ಮಾಧ್ಯಮಗಳಲ್ಲಿ ಸಾರ್ವಜನಿಕ ಹೇಳಿಕೆಗಳು (ಎಲೆಕ್ಟ್ರಾನಿಕ್, ಮುದ್ರಣ, ಸಾಮಾಜಿಕ ಮಾಧ್ಯಮ) ಇತ್ಯಾದಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: Lok Sabha Election 2024: ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್ ಚಂದ್ರುಗೆ ಬೆಂಬಲ ನೀಡಿ: ಶಾಸಕ ಉದಯ್

ಸೂಕ್ಷ್ಮವಾಗಿ ಪರಿಶೀಲಿಸಿದಾಗ, ಈ ಹೇಳಿಕೆಗಳು “ಅತ್ಯಂತ ಅಮಾನವೀಯ, ಅಶ್ಲೀಲ ಮತ್ತು ಅನಾಗರಿಕ” ಮತ್ತು ಮೇಲ್ನೋಟಕ್ಕೆ ಮಾದರಿ ನೀತಿ ಸಂಹಿತೆಯ ನಿಬಂಧನೆಗಳ ಉಲ್ಲಂಘನೆಯಾಗಿದೆ. ಕಳೆದ ತಿಂಗಳು ಪಕ್ಷಗಳಿಗೆ ಚುನಾವಣಾ ಆಯೋಗ ನೀಡಿದ ಸಲಹೆಯನ್ನು ಇಲ್ಲಿ ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಮೊದಲ ನಿಷೇಧ

ಈ ಲೋಕಸಭಾ ಚುನಾವಣಾ ಚಕ್ರದಲ್ಲಿ ಚುನಾವಣಾ ಆಯೋಗವು ವಿಧಿಸಿದ ಮೊದಲ ಪ್ರಚಾರ ನಿಷೇಧ ಇದಾಗಿದೆ. ಬಿಜೆಪಿಯನ್ನು ಟೀಕಿಸುವಾಗ ಸುರ್ಜೆವಾಲಾ ಅವರು ಹೇಮಾ ಮಾಲಿನಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಆ ವಿಡಿಯೊವನ್ನು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಹಂಚಿಕೊಂಡ ನಂತರ ಈ ವಿವಾದ ಉದ್ಭವಿಸಿದೆ.

ಸುರ್ಜೇವಾಲಾ ಅವರ ಹೇಳಿಕೆಯನ್ನು “ಅಶ್ಲೀಲ, ಲೈಂಗಿಕ ಮತ್ತು ಅವಮಾನಕರ” ಎಂದು ಖಂಡಿಸಿ ಬಿಜೆಪಿ ತಕ್ಷಣ ಚುನಾವಣಾ ಆಯೋಗಕ್ಕೆ ದೂರು ನೀಡಿತು. ಸುರ್ಜೆವಾಲಾ ತಮ್ಮನ್ನು ಸಮರ್ಥಿಸಿಕೊಂಡಿದ್ದು, ವೀಡಿಯೊವನ್ನು ನಕಲಿ ಮತ್ತು ತಿರುಚಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ ಸಂಸದರನ್ನು ನೋಯಿಸುವ ಅಥವಾ ಅವಮಾನಿಸುವ ಉದ್ದೇಶ ನನಗಿಲ್ಲ ಎಂದು ಅವರು ಪ್ರತಿಪಾದಿಸಿದರು.

Continue Reading
Advertisement
Universal Coaching Centre
ಬೆಂಗಳೂರು7 mins ago

UPSC Results 2023: ಯುಪಿಎಸ್‌ಸಿ ಪರೀಕ್ಷೆ; ಯುನಿವರ್ಸಲ್‌ನ 18 ಅಭ್ಯರ್ಥಿಗಳ ಅಭೂತಪೂರ್ವ ಸಾಧನೆ

Sanju Samson
ಪ್ರಮುಖ ಸುದ್ದಿ13 mins ago

Sanju Samson : ಸಂಜು ಸ್ಯಾಮ್ಸನ್​ಗೆ ರಾಯಲ್ಸ್​ ತಂಡದಲ್ಲಿ ದಶಕದ ಸಾಧನೆ; ಬೆಸ್ಟ್​ ಕ್ಯಾಪ್ಟನ್ ಎಂದ ಅಭಿಮಾನಿಗಳು

UPSC Result 2024
ಶಿಕ್ಷಣ27 mins ago

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

Lok Sabha Election 2024 Rs 18 crore seized from raids for liquor
Lok Sabha Election 202429 mins ago

Lok Sabha Election 2024: ಲಿಕ್ಕರ್‌ ಇದೆ ಎಂದು ದಾಳಿ ಮಾಡಿದರೆ ಸಿಕ್ಕಿದ್ದು 18 ಕೋಟಿ ರೂ.; ಧಾರವಾಡದಲ್ಲಿ ಭರ್ಜರಿ ಬೇಟೆ!

Akshya Kumar
ಸಿನಿಮಾ40 mins ago

Akshya Kumar: ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅಕ್ಷಯ್ ಕುಮಾರ್!

Drinking water problem Provide water immediately by tanker says DC
ಉತ್ತರ ಕನ್ನಡ42 mins ago

Uttara Kannada News: ಟ್ಯಾಂಕರ್ ಮೂಲಕ ತಕ್ಷಣ ನೀರು ಒದಗಿಸಲು ಉತ್ತರ ಕನ್ನಡ ಡಿಸಿ ಸೂಚನೆ

MS Dhoni
ಪ್ರಮುಖ ಸುದ್ದಿ43 mins ago

MS Dhoni : ಮೊಣಕಾಲು ನೋವಿನಿಂದ ರೈನಾ ಕೈಹಿಡಿದು ಮೆಟ್ಟಿಲು ಇಳಿದ ಧೋನಿ…

UPSC Results 2023
ಕರ್ನಾಟಕ49 mins ago

UPSC Results 2023: ಯುಪಿಎಸ್‌ಸಿಯಲ್ಲಿ ವಿಜಯಪುರದ ವಿಜೇತಾ ರಾಜ್ಯಕ್ಕೆ ಪ್ರಥಮ, 20ಕ್ಕೂ ಹೆಚ್ಚು ಮಂದಿ ತೇರ್ಗಡೆ

Modi in Karnataka on April 20 Massive rallies in Chikkaballapura and Bengaluru
Lok Sabha Election 202456 mins ago

Modi in Karnataka: ಏಪ್ರಿಲ್‌ 20ರಂದು ರಾಜ್ಯಕ್ಕೆ ಮೋದಿ; ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಬೃಹತ್‌ ಸಮಾವೇಶ

IPL 2024
ಪ್ರಮುಖ ಸುದ್ದಿ1 hour ago

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ17 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20241 day ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌