Assembly Session: ಇಂದಿನಿಂದ ಜಂಟಿ ಅಧಿವೇಶನ ಕದನ; 40 ಪರ್ಸೆಂಟ್‌ ಕಮಿಷನ್‌ ವರ್ಸಸ್‌ ಅನುದಾನ ತಾರತಮ್ಯ - Vistara News

ರಾಜಕೀಯ

Assembly Session: ಇಂದಿನಿಂದ ಜಂಟಿ ಅಧಿವೇಶನ ಕದನ; 40 ಪರ್ಸೆಂಟ್‌ ಕಮಿಷನ್‌ ವರ್ಸಸ್‌ ಅನುದಾನ ತಾರತಮ್ಯ

Assembly Session: ವಿಧಾನಮಂಡಲದ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಬೆಳಗ್ಗೆ ಹನ್ನೊಂದು ಗಂಟೆಗೆ ವಿಧಾನ ಸಭೆಯಲ್ಲಿ ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಲಿದ್ದಾರೆ.

VISTARANEWS.COM


on

CM Siddaramaiah HD Kumaraswamy DK Shivakumar R Ashok and BY vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ (Assembly Session) ನಡೆಯಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ಆರೋಪ – ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಲಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಬಿಟ್ಟಿರುವ 40 ಪರ್ಸೆಂಟ್‌ ಕಮಿಷನ್ (40 percent commission) ಬಾಣವು ವಿಪಕ್ಷಗಳಿಗೆ ಅಸ್ತ್ರವಾದರೆ, ಈಗಾಗಲೇ ಕೇಂದ್ರ ಸರ್ಕಾರದಿಂದ ಅನುದಾನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪ ಮಾಡಿರುವ ಕಾಂಗ್ರೆಸ್‌ ಅದನ್ನೇ ಪುನರುಚ್ಚಾರ ಮಾಡಲು ಸಿದ್ಧವಾಗಿದೆ.

ಬೆಳಗ್ಗೆ ಹನ್ನೊಂದು ಗಂಟೆಗೆ ವಿಧಾನ ಸಭೆಯಲ್ಲಿ ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಲಿದ್ದಾರೆ. ಈ ವೇಳೆ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಗುಣಗಾನ ಮಾಡಲಿದ್ದು, ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ.

ಮೇ ತಿಂಗಳಿಂದ ಇಲ್ಲಿಯವರೆಗಿನ ಸರ್ಕಾರದ ಸಾಧನೆಗಳ ಬಗ್ಗೆ ಪ್ರಸ್ತಾಪ ಮಾಡಲಿರುವ ರಾಜ್ಯಪಾಲರು, ಸರ್ಕಾರ ಬಂದ ಬಳಿಕ ಯಶಸ್ವಿಯಾಗಿ ಐದು ಗ್ಯಾರಂಟಿ ಯೋಜನೆಗಳ ಅಂಕಿ – ಅಂಶಗಳನ್ನು ತೆರೆದಿಡಲಿದ್ದಾರೆ. ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ ಫಲಾನುಭವಿಗಳ ಮಾತನಾಡುವ ರಾಜ್ಯಪಾಲರು, ಪ್ರತಿ ಯೋಜನೆಗಳ ಫಲಾನುಭವಿಗಳ ಬಗ್ಗೆ ಪ್ರಸ್ತಾಪಿಸಲಿದ್ದಾರೆ.

ಭವಿಷ್ಯದ 1 ವರ್ಷದ ಬಗ್ಗೆಯೂ ಉಲ್ಲೇಖ

ಒಂದು ವರ್ಷದ ಸಾಧನೆ ಬಗ್ಗೆ ಹೇಳಲಿರುವ ರಾಜ್ಯಪಾಲರು, ಮುಂದಿನ ಒಂದು ವರ್ಷದಲ್ಲಿ ಸರ್ಕಾರದ ಕಾರ್ಯವೈಖರಿ ಹೇಗಿರಲಿದೆ? ಯಾವೆಲ್ಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂಬ ಬಗ್ಗೆ ನೀಲಿನಕ್ಷೆಯನ್ನು ತೆರೆದಿಡಲಾಗುತ್ತದೆ.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಅದನ್ನು ಎದುರಿಸಲು ಸರ್ಕಾರ ಕೈಗೊಂಡ ನಿರ್ಧಾರಗಳ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಹೊಸ ಸರ್ಕಾರ ಬಂದ ಬಳಿಕ ವೈದ್ಯಕೀಯ ಕಾಲೇಜುಗಳಿಗೆ ನೀಡಿದ ಹೆಚ್ಚುವರಿ ಅನುದಾನದ ಬಗ್ಗೆಯೂ ಪ್ರಸ್ತಾಪವಾಗಲಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದರ ಬಗ್ಗೆಯೂ ಪ್ರಸ್ತಾಪ ಮಾಡಲಿರುವ ರಾಜ್ಯಪಾಲರು, ಕಳೆದ ಒಂಬತ್ತು ತಿಂಗಳಲ್ಲಿ ರಾಜ್ಯಕ್ಕೆ ಇತರೆ ದೇಶಗಳ ಕಂಪನಿಗಳು ಮಾಡಿದ ಹೂಡಿಕೆ ಬಗ್ಗೆ ಹೇಳಲಿದ್ದಾರೆ.

ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪ?

ರಾಜ್ಯದಲ್ಲಿ ಆದ ಉದ್ಯೋಗ ಸೃಷ್ಟಿ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಹೆಚ್ಚಿದೆ. ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಕಾಪಾಡಿಕೊಂಡಿದ್ದು, ತೆರಿಗೆ ಸಂಗ್ರಹದಲ್ಲಿ ಸರ್ಕಾರ ಗುರಿ ಮುಟ್ಟಿರುವ ಬಗ್ಗೆ ಪ್ರಸ್ತಾಪ ಮಾಡಬಹುದು ಎಂದು ಹೇಳಲಾಗಿದೆ.

ಪ್ರತಿಪಕ್ಷಗಳಿಗೆ ಅಸ್ತ್ರ ಕೊಟ್ಟಿರುವ ಕೆಂಪಣ್ಣ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಪರ್ಸೆಂಟ್‌ ಕಮಿಷನ್‌ ಪ್ರಸ್ತಾಪ ಮಾಡಿದ್ದ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಕೆಂಪಣ್ಣ, ಈಗ ಈ ಸರ್ಕಾರದ ಬಗ್ಗೆಯೂ ಅದೇ ಆರೋಪ ಮಾಡಿದ್ದಾರೆ. ಈಗ ಸರ್ಕಾರ ಹಾಗೂ ಸಚಿವರ ಬಗ್ಗೆ ಹೇಳದೆ, ಅಧಿಕಾರಿಗಳು 40 ಪರ್ಸೆಂಟ್‌ ಕಮಿಷನ್‌ ಕೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೇ ಈಗ ಪ್ರತಿಪಕ್ಷಗಳಿಗೆ ಅಸ್ತ್ರವಾಗಿದ್ದು, ಸರ್ಕಾರದ ವಿರುದ್ಧ ಗುಡುಗಲು ಸಜ್ಜಾಗಿವೆ. ಇದರ ಜತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ತಗಾದೆ ತೆಗೆಯಲೂ ಸಿದ್ಧವಾಗಿರುವ ಬಿಜೆಪಿ, ನ್ಯೂನತೆಗಳನ್ನು ಎತ್ತಿ ಹಿಡಿಯಲು ಹೊರಟಿದೆ.

ಕಾಂಗ್ರೆಸ್‌ನಿಂದ ಅನುದಾನ ತಾರತಮ್ಯದ ಪ್ರತ್ಯಸ್ತ್ರ

ಇನ್ನು ಆಡಳಿತಾರೂಢ ಕಾಂಗ್ರೆಸ್‌ ಪಕ್ಷವು ಬಿಜೆಪಿ ವಿರುದ್ಧ ಅನುದಾನ ತಾರತಮ್ಯದ ಪ್ರತ್ಯಸ್ತ್ರವನ್ನು ಬಿಡಲು ಸಜ್ಜಾಗಿದೆ. ಈಗಾಗಲೇ ಕೇಂದ್ರದ ವಿರುದ್ಧ ಹರಿಹಾಯುತ್ತಲೇ ಬಂದಿರುವ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ವೇಳೆ ತಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಲಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಐದೂ ಗ್ಯಾರಂಟಿ ಯೋಜನೆಗಳನ್ನು ಒಂದು ತಿಂಗಳೂ ತಪ್ಪದೆ ಜನರಿಗೆ ತಲುಪಿಸುತ್ತಿರುವ ಬಗ್ಗೆ ಹೇಳಲು ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ: Amit Shah: ಲೋಕಸಭೆಗೆ ಬಿಜೆಪಿ ಟಿಕೆಟ್‌; ಫೆ. 20-21ಕ್ಕೆ ಮಹತ್ವದ ಸಭೆ ನಡೆಸಲು ಅಮಿತ್‌ ಶಾ ನಿರ್ಧಾರ!

ಇಲ್ಲಾಗಲಿದೆಯೇ ಲೋಕಸಭಾ ಚುನಾವಣಾ ಪ್ರಚಾರ ಭಾಷಣ?

ಅಲ್ಲದೆ, ಕೇಂದ್ರ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಈಗಾಗಲೇ ಆರೋಪ ಮಾಡಿರುವ ಸಿಎಂ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಲು ಈ ಅವಕಾಶವನ್ನು ಬಳಸಿಕೊಳ್ಳಲಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣಾ ಪ್ರಚಾರ ಭಾಷಣವಾಗಿ ಮಾರ್ಪಡುವ ಸಾಧ್ಯತೆಯೇ ಹೆಚ್ಚಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ. ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಜೋರಾಗಿದೆ. ಈಗಾಗಲೇ ದೇಶದಲ್ಲಿ 4 ಹಂತಗಳ ಮತದಾನ ಪೂರ್ಣಗೊಂಡಿದೆ. ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ತಿರುಗೇಟು ಕೊಟ್ಟಿದ್ದಾರೆ. ”ನಾನು ಅಪ್ರಮಾಣಿಕವಾಗಿ ನಡೆದುಕೊಂಡಿದ್ದರೆ ಗಲ್ಲು ಶಿಕ್ಷೆ ಎದುರಿಸಲೂ ಸಿದ್ಧʼʼ ಎಂದು ಭಾವುಕರಾಗಿ ಹೇಳಿದ್ದಾರೆ.

ತಮ್ಮ ಸರ್ಕಾರವು ಕೆಲವು ಆಯ್ದ ಕೈಗಾರಿಕೋದ್ಯಮಿಗಳ ಪರವಾಗಿದೆ ಎಂಬ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಮೋದಿ ಅವರು, ʼʼದೇಶದ ಸಂಪತ್ತಿನ ಸೃಷ್ಟಿಕರ್ತರ ಪರವಾಗಿ ನಾನು ದೃಢವಾಗಿ ನಿಲ್ಲುತ್ತೇನೆ ಮತ್ತು ಯಾರಿಗಾದರೂ ಅಪ್ರಾಮಾಣಿಕ ರೀತಿಯಲ್ಲಿ ಲಾಭ ಮಾಡಿಕೊಟ್ಟರೆ ಶಿಕ್ಷೆಯನ್ನು ಎದುರಿಸಲು ಸಿದ್ಧʼʼ ಎಂದು ತಿಳಿಸಿದ್ದಾರೆ.

“ಜವಾಹರಲಾಲ್ ನೆಹರೂ ಕೂಡ ಸಂಸತ್ತಿನಲ್ಲಿ ʼಬಿರ್ಲಾ-ಟಾಟಾ ಕಿ ಸರ್ಕಾರ್‌ʼನಂತಹ ನಿಂದನೆಗಳನ್ನು ಎದುರಿಸುತ್ತಿದ್ದರು. ಈ ಕುಟುಂಬದ (ನೆಹರೂ) ಸಮಸ್ಯೆಯೆಂದರೆ ಈಗಲೂ ನಾನು ಅದೇ ನಿಂದನೆಗಳನ್ನು ಎದುರಿಸಬೇಕೆಂದು ಬಯಸುತ್ತದೆʼʼ ಎಂದು ಆರೋಪಿಸಿದ್ದಾರೆ. ʼʼದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ಗೌರವಿಸಬೇಕು ಎಂದು ಹೇಳಲು ನನಗೆ ನಾಚಿಕೆಯಾಗುವುದಿಲ್ಲ. ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಅತಿಥಿಗಳ ಪಟ್ಟಿ ತಯಾರಿಸುವಾಗ ನಾನು ಕ್ರೀಡಾಪಟುಗಳು ಮತ್ತು ಸಾಧಕರ ಹೆಸರನ್ನು ಸೇರಿಸುತ್ತೇನೆ. ದೇಶವು ತನ್ನ ಸಾಧಕರನ್ನು ಪೂಜಿಸದಿದ್ದರೆ ಮತ್ತು ಗೌರವಿಸದಿದ್ದರೆ, ವಿಜ್ಞಾನಿ ಮತ್ತು ಪಿಎಚ್‌ಡಿ ಮಾಡುವ ಜನರನ್ನು ನಾವು ಹೇಗೆ ಹೊಂದಲು ಸಾಧ್ಯ? ಎಲ್ಲ ವರ್ಗದ ಸಾಧಕರನ್ನು ಗೌರವಿಸಬೇಕು ಎಂಬುದು ನನ್ನ ಅಭಿಮತ” ಎಂದು ಅವರು ಹೇಳಿದ್ದಾರೆ.

“ನಾನು ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ. ನಾನು ತಪ್ಪು ರೀತಿಯಲ್ಲಿ ಯಾರಿಗಾದರೂ ಪ್ರಯೋಜನ ಉಂಟು ಮಾಡಿದ್ದರೆ ನನ್ನನ್ನು ಗಲ್ಲಿಗೇರಿಸಬೇಕು. ಆದರೆ ನನ್ನ ದೇಶದ ಸಂಪತ್ತಿನ ಸೃಷ್ಟಿಕರ್ತರನ್ನು ನಾನು ಗೌರವಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ. ಆ ಮೂಲಕ ಅದಾನಿ-ಅಂಬಾನಿಯಂತಹ ಶ್ರೀಮಂತ ಉದ್ಯಮಿಗಳಿಗೆ ನೆರವು ನೀಡಿದ್ದಾರೆ ಎನ್ನುವ ವಿಪಕ್ಷಗಳ ಆರೋಪಕ್ಕೆ ಸೂಕ್ಷ್ಮವಾಗಿ ತಿರುಗೇಟು ನೀಡಿದ್ದಾರೆ.

ಸಂಪತ್ತಿನ ಸೃಷ್ಟಿಕರ್ತರು ಮತ್ತು ಕಾರ್ಮಿಕರ ಬಗ್ಗೆಯೂ ಸಮಾನವಾಗಿ ಚಿಂತಿಸುತ್ತೇನೆ ಎಂದು ಮೋದಿ ಈ ಸಂದರ್ಭದಲ್ಲಿ ಘೋಷಿಸಿದ್ದಾರೆ. “ನನ್ನ ಪ್ರಕಾರ ದೇಶದ ಅಭಿವೃದ್ಧಿಗೆ ಬಂಡವಾಳಶಾಹಿಗಳ ಹಣ, ಆಡಳಿತ ಮಂಡಳಿಯವರ ಯೋಚನೆ ಮತ್ತು ಕಾರ್ಮಿಕರ ಕಠಿಣ ಪರಿಶ್ರಮ ಅಗತ್ಯ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

ಮುಸ್ಲಿಂ ವಿರೋಧಿ ಆರೋಪಕ್ಕೂ ತಿರುಗೇಟು

ಕೆಲವು ದಿನಗಳ ಹಿಂದಯಷ್ಟೇ ಮೋದಿ ಅವರು ಮುಸ್ಲಿಂ ವಿರೋಧಿ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಟಾಂಗ್‌ ಕೊಟ್ಟಿದ್ದರು. ʼʼಹಿಂದು ಮುಸ್ಲಿಂ ಅಂತ ತಾರತಮ್ಯ ಮಾಡಿದ ದಿನ ನಾನು ರಾಜಕೀಯ ಬದುಕಿಗೆ ಅನರ್ಹನಾಗುತ್ತೇನೆ. ನಾನು ನನ್ನ ಜೀವನದಲ್ಲಿ ಎಂದಿಗೂ ಹಿಂದು-ಮುಸ್ಲಿಂ ಎಂದು ಭೇದ ಮಾಡೋದಿಲ್ಲ ಎಂಬುದು ನನ್ನ ಬದುಕಿನ ಧ್ಯೇಯʼʼ ಎಂದು ಸ್ಪಷ್ಟವಾಗಿ ಹೇಳಿದ್ದರು. ʼʼಹಿಂದು ಮುಸ್ಲಿಂ ಅಂತ ಹೇಳಿಕೊಂಡು ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಜೀವಕ್ಕೆ ಅರ್ಹನಾದ ವ್ಯಕ್ತಿಯಾಗುವುದಿಲ್ಲ. ನಾನು ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆʼʼ ಎಂದರು. 

Continue Reading

ದೇಶ

Lok Sabha Election 2024: ಬಿಜೆಪಿ 400+ ಸೀಟು ಗೆಲ್ಲುತ್ತಾ? ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Lok Sabha Election 2024:ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪೂರ್ಣಗೊಂಡಿದ್ದು, ಈಗಿನಿಂದಲೇ ಸೋಲು ಗೆಲವಿನ ಲೆಕ್ಕಾಚಾರ ಒಂದೆಡೆಯಾದರೆ ಬಿಜೆಪಿ(BJP)ಯ 400 ಸ್ಥಾನಗಳ ಟಾರ್ಗೆಟ್‌ ಬಗೆಗಿನ ಚರ್ಚೆ ಮತ್ತೊಂದೆಡೆ. ಇದರ ನಡುವೆ ನಿಖರ ಚುನಾವಣಾ ಫಲಿತಾಂಶ(Election Result)ದ ಬಗ್ಗೆ ನಿಖರವಾದ ಸಮೀಕ್ಷೆ ವರದಿಗೆ ಖ್ಯಾತಿ ಪಡೆದಿರುವ ಪಲೋಡಿ ಸಟ್ಟಾ ಬಜಾರ್‌(Phalodi Satta Bazar) ಫಲಿತಾಂಶದ ಬಗ್ಗೆ ವರದಿಯೊಂದನ್ನು ನೀಡಿದೆ. ಈ ಬಾರಿ 400ಕ್ಕೂ ಅಧಿಕ ಸೀಟ್‌ ಪಡೆಯುವ ನಿರೀಕ್ಷೆಯಲ್ಲಿರುವ ಬಿಜೆಪಿಗೆ ಈ ವರದಿ ಶಾಕ್‌ ನೀಡಿದೆ. ಈ ವರದಿ ಬಿಜೆಪಿಯ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಈಗಾಗಲೇ ಮೊದಲ ನಾಲ್ಕು ಹಂತಗಳಲ್ಲಿ ಒಟ್ಟು 379 ಕ್ಷೇತ್ರಗಳಲ್ಲಿ ಅಂದರೆ ಶೇ.70ರಷ್ಟು ಕ್ಷೇತ್ರಗಳಲ್ಲಿ ಚುನಾವಣೆ ಪೂರ್ಣಗೊಂಡಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲೂ ಸ್ವಲ್ಪ ಇಳಿಕೆ ಆಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ತಾನು ಈ ಹಿಂದೆ ನೀಡಿದ್ದ ವರದಿಯನ್ನು ಮರು ಪರಿಷ್ಕರಣೆ ಮಾಡಿರುವ ಪಲೋಡಿ ಸಟ್ಟಾ ಬಜಾರ್‌, ಬಿಜೆಪಿ 2019ರ ಚುನಾವಣೆಗಿಂತಲೂ ಕಡಿಮೆ ಅಂದರೆ 303 ಸ್ಥಾನಗಳಿಗಿಂತಲೂ ಕಡಿಮೆ ಸ್ಥಾನಗಳನ್ನು ಗಳಿಸಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ನಾಲ್ಕನೇ ಹಂತದ ಮತದಾನ ನಡೆಯುವ ಮುನ್ನ ಪಲೋಡಿ ಸಟ್ಟಾ ಬಜಾರ್‌ ಫಲಿತಾಂಶದ ಸಮೀಕ್ಷೆ ವರದಿಯೊಂದನ್ನು ನೀಡಿತ್ತು. ಅದರಲ್ಲಿ ಈ ಬಾರಿ ಬಿಜೆಪಿ 307-310 ಸ್ಥಾನಗಳನ್ನು ಗಳಿಸಲಿದೆ ಎಂಬುದು ತಿಳಿದುಬಂದಿತ್ತು. ಆದರೆ ಈಗ ಹೊಸದಾಗಿ ಒಂದು ವರದಿ ನೀಡಿದ್ದು, ಈ ಬಾರಿ ಬಿಜೆಪಿ ಕೇವಲ 296-300 ಸ್ಥಾನಗಳನ್ನು ಹಾಗೂ ಎನ್‌ಡಿಎ 329 to 332 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ಇನ್ನು ಕಾಂಗ್ರೆಸ್‌ 58 ರಿಂದ 62 ಸ್ಥಾನಗಳನ್ನು ಗೆಲ್ಲಲಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ಇನ್ನುಳಿದ 164 ಕ್ಷೇತ್ರಗಳಲ್ಲಿ ಮೇ 20, ಮೇ 25 ಮತ್ತು ಜೂ. 1 ರಂದು ಮತದಾನ ನಡೆಯಲಿದೆ.

ರಾಜ್ಯಗಳಲ್ಲಿ ಗೆಲುವಿನ ಲೆಕ್ಕಾಚಾರ ಹೇಗಿದೆ?

ಪಲೋಡಿ ಸಟ್ಟಾ ಬಜಾರ್‌ ನೀಡಿರುವ ವರದಿ ಪ್ರಕಾರ, ಗುಜರಾತ್‌ನ ಎಲ್ಲಾ 26 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವ ಸಾಧಿಸಿದರೆ, ಮಧ್ಯಪ್ರದೇಶದ 29 ಕ್ಷೇತ್ರಗಳಲ್ಲಿ 27-28 ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವುದು ಖಚಿತವಾಗಿದೆ. ರಾಜಸ್ಥಾನದಲ್ಲಿ 25 ಸ್ಥಾನಗಳಲ್ಲಿ ಈ ಬಾರಿ 18-20 ಸ್ಥಾನಗಳನ್ನು ಮಾತ್ರ ಬಿಜೆಪಿ ಗೆಲ್ಲಬಹುದಾಗಿದೆ. ಒಡಿಶಾದ 21 ಸ್ಥಾನಗಳಲ್ಲಿ, ಬಿಜೆಪಿ 11-12 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ .

ಪಂಜಾಬ್‌ನಲ್ಲಿ ಪಕ್ಷವು ಯಾವುದೇ ಪ್ರಮುಖ ಬದಲಾವಣೆಯನ್ನು ಕಾಣುವ ಸಾಧ್ಯತೆಯಿಲ್ಲ, ರಾಜ್ಯದಲ್ಲಿ 2-3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷಿ ಇದೆ. 2019ರ ಚುನಾವಣೆಯಲ್ಲಿ ಬಿಜೆಪಿ 2 ಸ್ಥಾನಗಳನ್ನು ಗೆದ್ದಿತ್ತು. ಕಳೆದ ಬಾರಿ 1೦ಸ್ಥಾನಗಳನ್ನು ಗೆದ್ದುಕೊಂಡಿದ್ದ ನೆರೆಯ ಹರಿಯಾಣದಲ್ಲಿ, ಪಕ್ಷಕ್ಕೆ 5-6 ಸ್ಥಾನಗಳು ಮಾತ್ರ ದೊರೆಯಲಿದೆ. ತೆಲಂಗಾಣದಲ್ಲಿ ಬಿಜೆಪಿಗೆ 5-6 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ಹಿಮಾಚಲ ಪ್ರದೇಶದಲ್ಲಿ ಪಕ್ಷವು ತನ್ನ ಪ್ರಾಬಲ್ಯವನ್ನು ಉಳಿಸಿಕೊಳ್ಳುವ ಸಾಧ್ಯತೆಯಿದೆ, ಕ್ಲೀನ್ ಸ್ವೀಪ್ ಆಗುವ ಸಾಧ್ಯತೆ ಇದೆ. ಪಕ್ಷ ಉತ್ತರಾಖಂಡದಲ್ಲಿ 5 ಸ್ಥಾನ ಬಿಜೆಪಿ ಬಿಜೆಪಿ ಪಾಲಾಗಾಲಿದೆ.

ಇದನ್ನೂ ಓದಿ: Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಛತ್ತೀಸ್‌ಗಢದ 11 ಸ್ಥಾನಗಳಲ್ಲಿ ಪಕ್ಷವು 10-11 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 2019ರ ಚುನಾವಣೆಯಲ್ಲಿ 9 ಸ್ಥಾನಗಳನ್ನು ಗೆದ್ದಿತ್ತು. ಪಕ್ಷವು ದೆಹಲಿಯಲ್ಲಿ 6-7 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ – ಅದು 2019 ರಲ್ಲಿಯೂ ಎಲ್ಲಾ 7 ಸ್ಥಾನಗಳನ್ನು ಗೆದ್ದಿತ್ತು. ಸಟ್ಟಾ ಬಜಾರ್ ಪ್ರಕಾರ ತಮಿಳುನಾಡಿನಲ್ಲಿ ಪಕ್ಷವು 3-4 ಸ್ಥಾನಗಳೊಂದಿಗೆ ಕೆಲವು ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ. ಫಲೋಡಿ ಸತ್ತಾ ಬಜಾರ್ ಪ್ರಕಾರ, ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ತನ್ನ ಸಂಖ್ಯೆಯನ್ನು ಸುಧಾರಿಸುವ ಸಾಧ್ಯತೆಯಿದೆ, ಅದರ ಅಂದಾಜಿನ ಪ್ರಕಾರ 42 ಸ್ಥಾನಗಳಲ್ಲಿ 21-22 ಸ್ಥಾನಗಳನ್ನು ಗೆಲ್ಲಬಹುದೆಂದು ಸೂಚಿಸುತ್ತದೆ.

Continue Reading

ಪ್ರಮುಖ ಸುದ್ದಿ

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

R Ashok: ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Opposition party leader r ashok latest statement in Mysuru
Koo

ಮೈಸೂರು: ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆಯಾಗಿ ಒಂದು ತಿಂಗಳು ಕಳೆಯುವಾಗಲೇ ಅಂಜಲಿ ಎಂಬ ಯುವತಿ ಕೊಲೆಯಾಗಿದ್ದಾಳೆ. ರಾಜ್ಯದಲ್ಲಿ ಪೊಲೀಸ್‌ ಇಲಾಖೆ ಸತ್ತಿದೆಯೋ, ಬದುಕಿದೆಯೋ ಒಂದೂ ತಿಳಿಯುತ್ತಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.‌ ಅಶೋಕ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಣ್ಣುಮಕ್ಕಳು ಸರಣಿಯಾಗಿ ಕೊಲೆಯಾಗುತ್ತಿದ್ದಾರೆ. ಇದರ ಜತೆಗೆ ಲವ್‌ ಜಿಹಾದ್‌ ಕೂಡ ನಡೆಯುತ್ತಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ ಎಂದರು.

ಇದನ್ನೂ ಓದಿ: Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

ಈ ಎಲ್ಲ ಸಮಸ್ಯೆಗಳ ನಡುವೆ ಬರಗಾಲದಿಂದಾಗಿ ಜನರು ತೊಂದರೆಗೊಳಗಾಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಐದು ವರ್ಷವೂ ಬರಗಾಲ ಬಂದಿತ್ತು. ಬರಗಾಲದ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಿದೆ. ತಮ್ಮ ಪಾಲಿನ ಹಣವಾಗಿ ಒಂದು ನಯಾ ಪೈಸೆಯನ್ನೂ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡಿಲ್ಲ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ 3 ಕೋಟಿ ರೂಪಾಯಿ ಆಸ್ತಿ ಇದೆ. ಆದರೆ ಡಿ.ಕೆ. ಶಿವಕುಮಾರ್ ಅವರ ಆಸ್ತಿ ಹೆಚ್ಚಾಗಿದೆ. ಹಾಲಿನ ಪ್ರೋತ್ಸಾಹಧನ 700 ಕೋಟಿ ರೂ‌. ಉಳಿಸಿಕೊಂಡಿದ್ದಾರೆ. ಆಂಬ್ಯುಲೆನ್ಸ್ ಚಾಲಕರು, ಗುತ್ತಿಗೆ ಸಿಬ್ಬಂದಿಗೆ ಸಂಬಳ ಪಾವತಿಯಾಗಿಲ್ಲ. ಕೇರಳಕ್ಕೆ ಬಂದ ಪರಿಸ್ಥಿತಿಯೇ ಇನ್ನು ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನದಲ್ಲಿ ಅಕ್ಕಿ, ಬೇಳೆ, ಗೋಧಿ ಬೆಲೆ 2 ಸಾವಿರ ರೂ.ಗೆ ತಲುಪಿದೆ. ಚಹ ಕುಡಿದರೆ 500 ರೂ. ಕೊಡಬೇಕು. ಸಿದ್ದರಾಮಯ್ಯನವರ ಸರ್ಕಾರ ಇನ್ನೂ ಇದ್ದರೆ ಪಾಕಿಸ್ತಾನದ ಆರ್ಥಿಕತೆ ಕರ್ನಾಟಕಕ್ಕೆ ಬರಲಿದೆ ಎಂದು ಹೇಳಿದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ವಿದ್ಯಾವಂತ ಮತದಾರರು

ಈಗ ವಿಧಾನಪರಿಷತ್‌ನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯುತ್ತಿದ್ದು, ಇಲ್ಲಿ ವಿದ್ಯಾವಂತರೇ ಇದ್ದಾರೆ. ಇದು ಕೈ ಮುಗಿದುಕೊಂಡು ಕೇಳುವ ಮತದಾನ ಅಲ್ಲ. ಎಲ್ಲರನ್ನೂ ಸಂಪರ್ಕಿಸಿ ಮನ ಒಲಿಸಬೇಕಾಗುತ್ತದೆ. ನಾವು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಿದ್ದು, ಬಿಜೆಪಿ ಅಭ್ಯರ್ಥಿ ನಾಳೆ ನಾಮಪತ್ರ ವಾಪಸ್ ಪಡೆಯಲಿದ್ದಾರೆ. ಮತದಾರರು ಬಿಜೆಪಿ-ಜೆಡಿಎಸ್ ಮೈತ್ರಿಗೆ ಮತ ನೀಡಿ ಎಂದು ಮನವಿ ಮಾಡಿದರು.

Continue Reading

ಉತ್ತರ ಕನ್ನಡ

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

Lok Sabha Election 2024: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

BJP district president N S Hegde pressmeet in Yallapur
Koo

ಯಲ್ಲಾಪುರ: ಲೋಕಸಭಾ ಚುನಾವಣೆಗೆ (Lok Sabha Election 2024) ಸಂಬಂಧಿಸಿದಂತೆ ಬಿಜೆಪಿಯ ಉತ್ತರ ಕನ್ನಡ ಕ್ಷೇತ್ರದ ಅವಲೋಕನ ಸಭೆ ಇಂದು ನಡೆಸಲಾಗಿದ್ದು, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 2.5 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಮಧ್ಯಾಹ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಪ್ರತಿ ಬೂತ್‌ನಿಂದ ಮತಗಳಿಕೆಯ ಕುರಿತು ಮಾಹಿತಿ ಪಡೆಯಲಾಗಿದ್ದು, ಪ್ರತಿ ಬೂತ್‌ನಲ್ಲಿ ಬಿಜೆಪಿಗೆ ಮುನ್ನಡೆ ದೊರೆತಿರುವ ಕುರಿತು ಬೂತ್‌ ಅಧ್ಯಕ್ಷರುಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿನ ಶಾಸಕರು, ಮಾಜಿ ಶಾಸಕರುಗಳು ತಮ್ಮ ತಮ್ಮ ಕ್ಷೇತ್ರದಲ್ಲಿ ಉತ್ತಮ ಅಂತರದ ಮುನ್ನಡೆ ದೊರಕುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 28ರಂದು ಕಳೆದ ಒಂದು ವರ್ಷದಲ್ಲಿ ಜಿಲ್ಲೆಗೆ ಎರಡನೇ ಬಾರಿ ಪ್ರಧಾನಮಂತ್ರಿ ಮೋದಿಜಿಯವರು ಆಗಮಿಸಿದ ಕಾರ್ಯಕ್ರಮ ಉತ್ತಮ ರೀತಿಯಲ್ಲಿ ಸಂಘಟಸಿದ್ದು, ಅದಕ್ಕೂ ಸಹ ಕೇಂದ್ರದಿಂದ ಪ್ರಶಂಸನೆ ದೊರೆತಿದೆ ಎಂದರು.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಕ್ಷೇತ್ರದಲ್ಲಿ ಚುನಾವಣೆಯ ದೃಷ್ಟಿಯಿಂದ ಕಾರ್ಯನಿರ್ವಹಿಸಿದ ಸಮಿತಿಗಳಿಗೆ, ಪದಾಧಿಕಾರಿಗಳಿಗೆ ಹಾಗೂ ಕಾರ್ಯಕರ್ತರುಗಳಿಗೆ ಮೇ 27ರೊಳಗೆ ಪ್ರತಿ ಮಂಡಲದಲ್ಲಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಖುದ್ದು ಪ್ರವಾಸ ಮಾಡಿ, ಅಭಿನಂದನೆ ಸಲ್ಲಿಸಲಿದ್ದಾರೆ ಎಂದು ಅವರು ತಿಳಿಸಿದರು.

ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ್‌ ಕೋಣೆಮನೆ ಮಾತನಾಡಿ, ಬರದಿಂದ ಕಂಗಾಲಾದ ರೈತರಿಗೆ ಕೇಂದ್ರ ಸರ್ಕಾರದಿಂದ ಸಮಯಕ್ಕೆ ಸರಿಯಾಗಿ ಬೆಳೆ ಪರಿಹಾರ ಧನ ಬಿಡುಗಡೆಯಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಸುಮಾರು 41 ಕೋಟಿ ಪರಿಹಾರ ದೊರೆತಿದ್ದು, ಈ ಪೈಕಿ ಮುಖ್ಯ ಆಹಾರ ಬೆಳೆ ಬೆಳೆಯುವ ಯಲ್ಲಾಪುರ, ಮುಂಡಗೋಡ ಭಾಗದ ರೈತರಿಗೆ ಸಿಂಹಪಾಲು ಸಿಕ್ಕಿರುವುದು ಸಂತಸದ ಸಂಗತಿಯಾಗಿದೆ. ಕೇಂದ್ರ ಸರ್ಕಾರದ ಯೋಜನೆಯಡಿ, ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ, ಬ್ಯಾಂಕ್‌ ಮೂಲಕ ನೇರವಾಗಿ ರೈತರಿಗೆ ಈ ಪರಿಹಾರ ಧನ ದೊರಕುವಂತೆ ಮಾಡಿರುವ ಪ್ರಧಾನಮಂತ್ರಿ ಹಾಗೂ ಕೇಂದ್ರ ಕೃಷಿ ಮಂತ್ರಿಗಳಿಗೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಧನ್ಯವಾದಗಳನ್ನು ಸಲ್ಲಿಸ ಬಯಸುತ್ತೇವೆ ಎಂದರು.

ಇದನ್ನೂ ಓದಿ: Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗಜಾನನ ಗುನಗಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಮಾಜಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಗಾಂವ್ಕರ್‌ ಪ್ರಮುಖರಾದ ಉಮೇಶ ಭಾಗ್ವತ್‌ ಉಪಸ್ಥಿತರಿದ್ದರು.

Continue Reading
Advertisement
Viral Video
ಕ್ರೀಡೆ4 mins ago

Viral Video: ಗಲ್ಲಿ ಕ್ರಿಕೆಟ್​ನಲ್ಲಿ ಎಡಗೈ ಬ್ಯಾಟಿಂಗ್​ ನಡೆಸಿದ ಕೆ.ಎಲ್​ ರಾಹುಲ್​

Physical Abuse
ಕ್ರೈಂ19 mins ago

Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

anjali murder suspect girish2
ಕ್ರೈಂ21 mins ago

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Viral video
ವೈರಲ್ ನ್ಯೂಸ್25 mins ago

Viral Video: ಅಬ್ಬಾ.. ಮದ್ವೆ ಮಂಟಪದಲ್ಲೇ ಬಿಗ್‌ ಫೈಟ್‌; ವರನಿಗಾಗಿ ಯುವತಿಯರ ಮಾರಾಮಾರಿ-ವಿಡಿಯೋ ವೈರಲ್‌

T20 World Cup 2024
ಕ್ರೀಡೆ32 mins ago

T20 World Cup 2024: ಅಭ್ಯಾಸ ಪಂದ್ಯಗಳ ವೇಳಾಪಟ್ಟಿ ಪ್ರಕಟ; ಭಾರತದ ಎದುರಾಳಿ ಯಾರು?

Anushka Shetty producer marriage news viral
ಟಾಲಿವುಡ್42 mins ago

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

RCB vs CSK
ಕ್ರೀಡೆ56 mins ago

RCB vs CSK: ಅದೇ ದಿನ, ಅದೇ ವಾರ, ಮಳೆ ಭೀತಿ; ಇದೆಂಥಾ ಕಾಕತಾಳೀಯ! ಆರ್​ಸಿಬಿಗೆ ಇದು ಅದೃಷ್ಟವಾ?

shoot out doddaballapur murder case
ಕ್ರೈಂ1 hour ago

Shoot Out: ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

Narendra Modi
Lok Sabha Election 20241 hour ago

Narendra Modi: ಅಪ್ರಾಮಾಣಿಕನಾಗಿದ್ದರೆ ನನ್ನನ್ನು ಗಲ್ಲಿಗೇರಿಸಿ: ವಿಪಕ್ಷಕ್ಕೆ ಪ್ರಧಾನಿ ಮೋದಿ ತಿರುಗೇಟು

Pakistan
ವಿದೇಶ1 hour ago

Pakistan: ಟಾಪ್‌ ಕಂಪನಿಗಳಲ್ಲಿ ಭಾರತೀಯರೇ CEO; ಆದರೆ ನಮ್ಮ ಮಕ್ಕಳು? ಪಾಕ್‌ ಸಂಸದನ ವಿಡಿಯೊ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ4 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ18 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ20 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು24 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌