Site icon Vistara News

Basavaraja Bommai : ನೋ ವೇ, ಚಾನ್ಸೇ ಇಲ್ಲ; ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ ಎಂದ ಬಸವರಾಜ ಬೊಮ್ಮಾಯಿ

Basavaraja Bommai

#image_title

ಹಾವೇರಿ: ʻʻನಾನು ಲೋಕಸಭಾ ಚುನಾವಣೆಗೆ (Parliament Election 2024) ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ (Haveri constituency Candidate) ಆಗುತ್ತೇನೆ ಅನ್ನುವುದೆಲ್ಲ ಊಹಾಪೋಹʼʼ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸ್ಪಷ್ಟಪಡಿಸಿದ್ದಾರೆ.

ಹಾವೇರಿಯಲ್ಲಿ ಶನಿವಾರ ನಡೆದ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. ಪಕ್ಷದ ಅಧ್ಯಕ್ಷರು ಪದಾದಿಕಾರಿಗಳು ಸೇರಿ ತಂಡ ಮಾಡಿ ಕೋರ್ ಸಮಿತಿ ಮಾಡಬೇಕು ಎಂಬ ನಿರ್ಣಯ ಆಗಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದ್ದೇನೆʼʼ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಜನಾಂದೋಲನ ರೂಪಿಸುವ ಬಗ್ಗೆ ಚರ್ಚೆ ಆಯಿತು
ಸಭೆಯಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ. ಬೂತ್ ಮಟ್ಟದಿಂದ ಮತ್ತೆ ಸಂಘಟನೆ ಮಾಡುವುದು. ಯುವಕರಿಗೆ, ಮಹಿಳೆಯರಿಗೆ, ಒಬಿಸಿಯವರಿಗೆ ಹೆಚ್ಚಿನ ಪ್ರಧಾನ್ಯತೆ ಕೊಡುವುದು. ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡುವ ಬಗ್ಗೆ ಚರ್ಚೆ ಆಯಿತು ಎಂದು ಬೊಮ್ಮಾಯಿ ತಿಳಿಸಿದರು.

ನಾನು ಯಾವತ್ತಾದರೂ ಹೇಳಿದೀನಾ?

ʻʻನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಅಂತ ನಾನು ಎಲ್ಲಾದರೂ ಹೇಳಿದಿನಾ? ಅಂಥ ಯಾವುದೇ ಚಾನ್ಸ್‌ ಇಲ್ಲʼʼ ಎಂದು ಹೇಳಿದರು ಬಸವರಾಜ ಬೊಮ್ಮಾಯಿ.

ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಈಶ್ವರಪ್ಪ ಅವರ ಪುತ್ರ ಕಾಂತೇಶ್‌ ಅವರು ಪ್ರಯತ್ನ ಮಾಡುತ್ತಿರುವ ಬಗ್ಗೆ ಕೇಳಿದಾಗ, ಈ ವಿಚಾರರಕ್ಕೆ ನನ್ನ ಉತ್ತರ ಇಷ್ಟೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಜೆಡಿಎಸ್- ಬಿಜೆಪಿ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿಯಲ್ಲಿ ಏನು ನಡೆದಿದೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ಈ ಅನಿಷ್ಟ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುವ ಭಾವನೆ ಎಲ್ಲರಿಗೂ ಇದೆ. ಅಮಿತ್ ಶಾ- ದೇವೆಗೌಡರ ಭೇಟಿ ಸ್ವಾಗತಾರ್ಹ. ಜೆಡಿಎಸ್ ನವರೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ. ಕೆಲವೇ ವಾರಗಳಲ್ಲಿ ಯಾರಿಗೆ ಎಷ್ಟು ಕ್ಷೇತ್ರ ಎನ್ನುವ ಅಂಕಿ ಸಂಖ್ಯೆ ಸ್ಪಷ್ಟ ಆಗಲಿದೆ ಎಂದರು.

ವಿಪಕ್ಷ ನಾಯಕನ ಆಯ್ಕೆ ವಿಳಂಬದ ಬಗ್ಗೆಯೂ ಗೊತ್ತಿಲ್ಲ!

ವಿಪಕ್ಷ ನಾಯಕನ ಆಯ್ಕೆ ವಿಳಂಬ ಆಗುತ್ತಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ರಾಜ್ಯಾದ್ಯಕ್ಷ ಹಾಗೂ ವಿಪಕ್ಷ ನಾಯಕ ಎರಡೂ ಒಟ್ಟಿಗೆ ಮಾಡಲು ಸಮಯ ಹಿಡಿದಿರಬಹುದು ಅಂತ ನನ್ನ ವಯಕ್ತಿಕ ಅಭಿಪ್ರಾಯ ಎಂದರು.

ಇದನ್ನೂ ಓದಿ: Lok Sabha Election 2024 : ಬಿಜೆಪಿ ಟಿಕೆಟ್‌ ಪಾಲಿಟಿಕ್ಸ್; 3 ಕ್ಷೇತ್ರ, 3 ನಾಯಕರು!‌ ಏನಿದೆ ಬೊಮ್ಮಾಯಿ ಲೆಕ್ಕಾಚಾರ?

ಸಿದ್ದರಾಮಯ್ಯ ಒನ್ ಮತ್ತು ಟು ಮಧ್ಯೆ ಭಾರಿ ವ್ಯತ್ಯಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಒನ್ ಹಾಗೂ ಸಿದ್ದರಾಮಯ್ಯ ಟೂ ನಡುವೆ ಬಹಳಷ್ಟು ವ್ಯತ್ಯಾಸ ಇದೆ. 2013-18 ವರೆಗಿನ ಸಿದ್ದರಾಮಯ್ಯ ಒನ್ ಮತ್ತು 2023 ರ ಸಿದ್ದರಾಮಯ್ಯ 2ಗೂ ಬಹಳಷ್ಟು ವ್ಯತ್ಯಾಸ ಇದೆ ಎಂದರು.

ʻʻಈಗ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆದರೂ ಏನೂ ಮಾಡದ ಸ್ಥಿತಿಯಲ್ಲಿದ್ದಾರೆ. ಅದಕ್ಕಾಗಿ ಬರಗಾಲ ಘೋಷಣೆ ಆಗಿಲ್ಲ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಗೆ ಕೇಂದ್ರ ಹಣ ಬಿಡುಗಡೆ ಮಾಡಿದರೂ ಬಳಸಿಲ್ಲ. ಇವರಿಗೆ ರೈತ ವಿರೋಧಿ ಅನ್ನದೇ ಇನ್ನೇನು ಅನ್ನಲು ಸಾಧ್ಯ. ರೈತರ ಆತ್ಮಹತ್ಯೆಯ ಬಗ್ಗೆ ಗಂಭೀರತೆ ಇಲ್ಲ. ಹಣಕ್ಕಾಗಿ ಆತ್ಮಹತ್ಯೆ ಆಗುತ್ತವೆ ಅಂತ ನೀವು ಹೇಳಿಬಿಡಿ ಇದು ನಿಮ್ಮ ನೀತಿನಾʼʼ ಎಂದು ಮುಖ್ಯಮಂತ್ರಿಯನ್ನು ಪ್ರಶ್ನಿಸಿದರು.

ಇನ್ನು ಮಹಾದಾಯಿ ವಿಚಾರದಲ್ಲಿ ಕೇಂದ್ರಕ್ಕೆ ಆಸಕ್ತಿ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ʻʻಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಟ್ರಿಬುನಲ್ ಮಾಡಿ ಅಂತ ಅಫಿಡವಿಟ್ ಕೊಟ್ಟರು. ಅದರ ಬಗ್ಗೆ ಸಿದ್ದರಾಮಯ್ಯ ಯಾಕೆ ಮಾತನಾಡುವುದಿಲ್ಲ. ಮಹದಾಯಿ ಯೋಜನೆ ಆಗಬಾರದು ಅಂತ ಗೋವಾದವರು ಗೋಡೆ ಕಟ್ಟಿದರು. ನೀರು ಹೇಗೆ ಬರುತ್ತದೆ. ಆಗ ಸಿದ್ದರಾಮಯ್ಯ ಯಾಕೆ ಮಾತನಾಡಲಿಲ್ಲ? ಪರಿಸರ ಅನುಮತಿ ನೀಡುವ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ಇದೆ. ಇವರು ಕ್ಲಿಯರನ್ಸ್ ಪಡೆಯಲಿʼʼ ಎಂದು ಹೇಳಿದರು.

Exit mobile version