Site icon Vistara News

Basavaraja Bommai : ಟಿಕೆಟ್‌ ಸಿಗದವರು ಕಾಂಗ್ರೆಸ್‌ಗೆ ಹೋಗ್ತಿದಾರೆ, ನಾವು ತಲೆ ಕೆಡಿಸಿಕೊಳ್ಳಲ್ಲ ಎಂದ ಬೊಮ್ಮಾಯಿ

Basavaraja Bommai

#image_title

ಹುಬ್ಬಳ್ಳಿ: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ (Congress government Lost charm). ಹೀಗಾಗಿ ಮತ್ತೆ ಆಪರೇಷನ್‌ಗೆ (Operation Hasta) ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಹೇಳಿದರು.

ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲವರು ಟಿಕೆಟ್ ಸಿಗದೇ ಇದ್ದವರು ಕಾಂಗ್ರೆಸ್‌ಗೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್‌ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದೇ ಇದ್ದವರು ಹೋಗುವುದು ಸಹಜ ಅದರ ಬಗ್ಗೆ ನಾವೇನು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್‌ನ ಈ‌ ಆಪರೇಶನ್‌ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದು ಹೇಳಿದರು. ಬಿಜೆಪಿಯ ಕೆಲವು ಮಾಜಿ ಶಾಸಕರು ಕಾಂಗ್ರೆಸ್‌ಗೆ ಹೋಗುತ್ತಿರುವ ಸುದ್ದಿಯ ಬಗ್ಗೆ ಅವರು ಪ್ರತಿಕ್ರಿಯಿಸಿದರು.

ಹುಬ್ಬಳ್ಳಿ ಭಾಗದಲ್ಲಿ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರ ನೇತೃತ್ವದಲ್ಲಿ ಹಲವಾರು ಬಿಜೆಪಿ ನಾಯಕರು ಕಾಂಗ್ರೆಸ್‌ ಸೇರಲು ಮುಂದಾಗಿರುವ ವಿದ್ಯಮಾನ ನಡೆದಿದೆ. ಜಗದೀಶ್‌ ಶೆಟ್ಟರ್‌ ಅವರು ಒಂದು ಸುತ್ತಿನ ಮಾತುಕತೆ ನಡೆಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಬಳಿ ಕರೆ ತರುತ್ತಿದ್ದಾರೆ.

ಕಾವೇರಿ ಹೋರಾಟಕ್ಕೆ ಬಿಜೆಪಿ ನಿರಂತರ ಬೆಂಬಲ

ಕಾವೇರಿ ನದಿ ನೀರಿಗಾಗಿ ಎಲ್ಲಿವರೆಗೂ ಹೋರಾಟ ನಡೆಯುತ್ತದೆಯೋ ಅಲ್ಲಿವರೆಗೂ ನಮ್ಮ ಬಿಜೆಪಿ ಬೆಂಬಲ ಇರುತ್ತದೆ. ರಾಜ್ಯ ಸರ್ಕಾರಕ್ಕೆ ತಡವಾಗಿಯಾದರೂ ಬುದ್ಧಿ ಬಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ತಮಿಳುನಾಡಿಗೆ ಈಗ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸಲು ಆದೇಶ ಬಂದಿದೆ. 10 ಸಾವಿರ ಕ್ಯೂಸೆಕ್ಸ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ಧಿ ಬಂದಿದೆ ಎಂದರು. ಸರ್ಕಾರಕ್ಕೆ ಬುದ್ಧಿ ಬರಲು ಜನರು ಬೀದಿಗಿಳಿದು ಹೋರಾಟ ಮಾಡಬೇಕಾಯಿತು ಎಂದರು.

ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು‌ ಕೂಡಾ ಟ್ರಿಬ್ಯುನಲ್ ಆದೇಶವನ್ನು ಉಲ್ಲಂಘನೆ ಮಾಡಿದೆ. ರಾಜ್ಯದಲ್ಲಿ ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು ಎಂದು ತಿಳಿಸಿದರು.

ಬಂದ್‌ಗೆ ಬಿಜೆಪಿ ಆಗಲೇ ತನ್ನ ಬೆಂಬಲವನ್ನು ಪ್ರಕಟಿಸಿದೆ, ನಾವು ಮತ್ತು ಜೆಡಿಎಸ್‌ ಜತೆಯಾಗಿ ಬಂದ್‌ ಬೆಂಬಲಿಸುತ್ತಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Karnataka Bandh : ಇಂದು ರಾತ್ರಿಯಿಂದಲೇ ಸೆಕ್ಷನ್‌ 144 ಜಾರಿ; ರ‍್ಯಾಲಿ, ಮೆರವಣಿಗೆಗೆ ಅವಕಾಶವಿಲ್ಲ

ಬರ ಪರಿಹಾರ ನೀಡಬೇಕು ಎಂದ ಬೊಮ್ಮಾಯಿ

ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಬರಗಾಲ ಇದೆ. ಮಳೆಯಿಲ್ಲದೆ ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಆದರೆ ಈವರೆಗೂ ಬೆಳೆ ಪರಿಹಾರಕ್ಕೆ ರಾಜ್ಯಸರ್ಕಾರ ಮುಂದಾಗಿಲ್ಲ. ಹಿಂದೆ ಪ್ರವಾಹ ಬಂದಾಗ ನಾವು 2 ಪಟ್ಟು ಪರಿಹಾರ ನೀಡಿದ್ದೇವು . ರಾಜ್ಯ ಸರ್ಕಾರ ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲ. ರಾಜ್ಯ ಸರ್ಕಾರ ಕಾವೇರಿ ಅಷ್ಟೇ ಅಲ್ಲ ಕೃಷ್ಣೆಯ ಹಿತರಕ್ಷಣೆಗೂ ಮುಂದಾಗಬೇಕು. ಈ‌ ವಿಚಾರದಲ್ಲಿ‌ ನಾವೆಲ್ಲ ಒಂದಾಗಿದ್ದೇವೆ ಎಂದರು ಬೊಮ್ಮಾಯಿ.

Exit mobile version