Site icon Vistara News

Basavaraj Bommai: ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕಾರಣದಲ್ಲಿ ದೊಡ್ಡ ರಾಜಕೀಯ ಬೆಳವಣಿಗೆ: ಬೊಮ್ಮಾಯಿ ಬಾಂಬ್‌!

Basavaraj Bommai

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಮುಂಚೆ ರಾಜ್ಯ ರಾಜಕಾರಣದಲ್ಲಿ (Karnataka Politics) ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಭವಿಷ್ಯ ನುಡಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಸರಿಯಾದ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರು ಕಾಂಗ್ರೆಸ್ ಮೇಲಿನ ಪ್ರೀತಿಯಿಂದ ಹೋಗಿರಲಿಲ್ಲ. ಬಿಜೆಪಿಯಲ್ಲಿ ಆಗಿರುವ ಬೇಸರದಿಂದ ಕಾಂಗ್ರೆಸ್‌ಗೆ ಹೋಗಿದ್ದರು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಶೆಟ್ಟರ್‌ ಮನಸ್ಸು ಮನಸ್ಸು ಬಿಜೆಪಿಯಲ್ಲಿಯೇ ಇತ್ತು

ಜಗದೀಶ್‌ ಶೆಟ್ಟರ್‌ ಅವರನ್ನು ನಾನು ಜನಸಂಘದಿಂದ ಬಹಳ ಹತ್ತಿರದಿಂದ ನೋಡಿದ್ದೇನೆ. ಅವರಿಗೆ ಕಾಂಗ್ರೆಸ್ ಡಿಎನ್‌ಎ ಒಗ್ಗುವುದಿಲ್ಲ. ಶೆಟ್ಟರ್ ಅವರ ದೇಹ ಮಾತ್ರ ಕಾಂಗ್ರೆಸ್‌ಗೆ ಹೋಗಿತ್ತು. ಅವರ ಮನಸ್ಸು ಬಿಜೆಪಿಯಲ್ಲಿಯೇ ಇತ್ತು. ಅವರಿಗೆ ಕಾಂಗ್ರೆಸ್ ಸೇರಿದ ಮೇಲೆ ಅಲ್ಲಿನ ಮನಸ್ಥಿತಿ ಅರ್ಥವಾಗಿದೆ‌. ಇದು ಬಿಜೆಪಿ ಮತ್ತು ಜಗದೀಶ್ ಶೆಟ್ಟರ್ ಅವರಿಗೂ ಅನಕೂಲವಾಗಲಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದು ಕೇವಲ ಆರಂಭ. ಮುಂದಿನ ದಿನಗಳಲ್ಲಿ ಕೇವಲ ಬಿಜೆಪಿ ನಾಯಕರಷ್ಟೇ ಘರ್ ವಾಪಸಿ ಆಗುವುದಿಲ್ಲ. ಕಾಂಗ್ರೆಸ್ ನ ಪ್ರಮುಖ ನಾಯಕರೂ ಕೂಡ ಪಕ್ಷಕ್ಕೆ ಬರಲಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಭಾಗವಾಗುವ ಸಾಧ್ಯತೆ ಇದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಡಿಕೆಶಿಯಿಂದ ಬ್ಲ್ಯಾಕ್‌ಮೇಲ್ ರಾಜಕಾರಣ

ಜಗದೀಶ್ ಶೆಟ್ಟರ್‌ ಅವರನ್ನು ಯಾರೂ ಬ್ಲ್ಯಾಕ್‌ಮೇಲ್ ಮಾಡಲು ಸಾಧ್ಯವಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಯಾವಾಗಲೂ ಬ್ಲ್ಯಾಕ್‌ಮೇಲ್ ರಾಜಕಾರಣದ ಬಗ್ಗೆ ಮಾತನಾಡುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಈಗ ದೇಶದ ಅಭಿವೃದ್ಧಿ ರಾಜಕೀಯದ ಸಿದ್ಧಾಂತ

ಇಡೀ ದೇಶದಲ್ಲಿ ದೇಶವೇ ಮೊದಲು ಎನ್ನುವುದು ಪ್ರಧಾನಿ ನರೇಂದ್ರ ಮೋದಿಯವರ ಸಿದ್ಧಾಂತವಾಗಿದೆ. ಈಗ ಎಡ, ಬಲ ಸಿದ್ಧಾಂತ ಇಲ್ಲ. ದೇಶದ ಅಭಿವೃದ್ಧಿ ಮೊದಲ ಆದ್ಯತೆ, ಈಗ ಅದೇ ರಾಜಕೀಯದ ಸಿದ್ಧಾಂತವಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: National pension scheme: ಒಪಿಎಸ್‌ ಜಾರಿ; ಅರೆಬರೆ, ತರಾತುರಿ ಆದೇಶವೆಂದ ಎಚ್‌.ಡಿ. ಕುಮಾರಸ್ವಾಮಿ

ಬಿಜೆಪಿ ಯಾವುದೇ ಸಮುದಾಯಕ್ಕೆ ಸೀಮಿತವಾದ ಪಕ್ಷವಲ್ಲ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಇದೆ. ಅದಕ್ಕೆ ಜಗದೀಶ್ ಶೆಟ್ಟರ್ ಬಲ ಸೇರ್ಪಡೆಯಾಗಲಿದೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ಯಾರಿಗೆ ಯಾವುದೇ ಕ್ಷೇತ್ರದ ಟಿಕೆಟ್ ನೀಡಿದರೂ ಅವರ ಪರವಾಗಿ ನಾನು ರಾಜ್ಯಾದ್ಯಂತ ಕೆಲಸ ಮಾಡುತ್ತೇನೆ. ನಾವೆಲ್ಲರೂ ಸೇರಿ ಮತ್ತೆ ಮೋದಿಯವರನ್ನು ಮೂರನೇ ಬಾರಿ ಪ್ರಧಾನಮಂತ್ರಿ ಮಾಡಲು ಕೆಲಸ ಮಾಡುತ್ತೇವೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Exit mobile version