Site icon Vistara News

DK Shivakumar: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ; ಸಿಬಿಐ, ಯತ್ನಾಳ್ ಅರ್ಜಿ ವಜಾ: ಡಿಕೆ ಶಿವಕುಮಾರ್‌ಗೆ ಬಿಗ್ ರಿಲೀಫ್

DK Shivakumar

ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ (DK Shivakumar) ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಹಿಂದಿನ ಬಿಜೆಪಿ ಸರ್ಕಾರದಿಂದ ಅನುಮತಿ ನೀಡಲಾಗಿತ್ತು. ಆದರೆ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆದಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಮತ್ತು ಸಿಬಿಐ ರಿಟ್‌ ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: CM Siddaramaiah : ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್‌; ಆ.31ಕ್ಕೆ ವಿಚಾರಣೆ ಮುಂದೂಡಿಕೆ

ಗುರುವಾರ (ಆ.29) ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಪೀಠವು ಎರಡು ಕಡೆಯ ವಕೀಲರಿಂದ ವಾದ-ಪ್ರತಿವಾದ ಆಲಿಸಲಾಗಿದೆ. ಪಿಸಿ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿಲಾಗಿತ್ತು. ಇದು ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ ನಡೆಸುವುದು ಸೂಕ್ತ. ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ವಿವಾದ ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್, ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್‌ ಸಿಕ್ಕಿದೆ.

ಇನ್ನು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾವು ಶ್ರಮ ಪಟ್ಟು ರಾಜಕಾರಣ ಮಾಡುತ್ತಿದ್ದೇವೆ. ಬಿಜೆಪಿ ನಾಯಕರ ಮೇಲೆ ಸಾವಿರಾರು ಕೇಸ್ ಇವೆ. ಯಾವುದನ್ನು ಕೂಡ ತನಿಖೆ ಮಾಡುತ್ತಿಲ್ಲ. ಲೋಕಾಯುಕ್ತ ಕೋರ್ಟ್‌ನಲ್ಲೂ ಕೂಡ ಇವೆ. ಈ ಹಿಂದೆ ಕೇಸ್ ಹಾಕಿ ನನ್ನ ಜೈಲಿಗೆ ಕಳುಹಿಸಿದ್ದರು. ನಾನು ಏನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತೆ ಎಂದು ಅವತ್ತೆ ಹೇಳಿದ್ದೆ, ಇವತ್ತು ಹೇಳುತ್ತೇನೆ. ಸಿಬಿಐಗೆ ಕೊಟ್ಟಿದ್ದು ಸರಿಯಲ್ಲ, ಸಿಬಿಐ ಅರ್ಧ ತನಿಖೆ ಮಾಡಿದ್ದೇವೆ ಎಂದು ಹೇಳಿದರು. ಆದರೆ ಯಾವುದೇ ತನಿಖೆ ಮಾಡಿರಲಿಲ್ಲ. ನಾವು ನ್ಯಾಯುತವಾಗಿ ಆಸ್ತಿ ಮಾಡಿದ್ದೇವೆ. ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದರು.

Exit mobile version