Site icon Vistara News

IT Raid : ಕಂಟ್ರಾಕ್ಟರ್ ಮನೆಯಲ್ಲಿ 42 ಕೋಟಿ ರೂ. ಪತ್ತೆ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ

IT Raid R Ashok BJP

ಬೆಂಗಳೂರು:‌ ಗುತ್ತಿಗೆದಾರರ ಸಂಘದ (Contractors Association) ಉಪಾಧ್ಯಕ್ಷ ಅಂಬಿಕಾಪತಿ ಅವರ ಮನೆ ಮೇಲೆ ನಡೆದ ಐಟಿ ದಾಳಿ (IT Raid in Bangalore) ವೇಳೆ ಪತ್ತೆಯಾದ 42 ಕೋಟಿ ರೂ. ಹಣದ ವಿಚಾರವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಬಿಜೆಪಿ (BJP Demands for CBI Enquiry) ಆಗ್ರಹಿಸಿದೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್ (R Ashok) ಅವರು, ಕರ್ನಾಟಕವು ಭ್ರಷ್ಟಾಚಾರದ ಕೂಪವಾಗಿದೆ. ಕಾಂಗ್ರೆಸಿದರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದರು.

ರಾಜ್ಯದ ಕಾಂಗ್ರೆಸ್ ಸರಕಾರವು ಪಂಚರಾಜ್ಯ ಚುನಾವಣೆಗೆ ಹಣ ಕೊಡುವುದಾಗಿ ಕೇಂದ್ರ ಕಾಂಗ್ರೆಸ್ ಜೊತೆ ಒಪ್ಪಂದ ಮಾಡಿಕೊಂಡಿದೆ. ಮಧ್ಯ ಪ್ರದೇಶಕ್ಕೆ 600 ಕೋಟಿ, ರಾಜಸ್ಥಾನಕ್ಕೆ 200 ಕೋಟಿ, ಛತ್ತೀಸ್‌ಗಢಕ್ಕೆ 200 ಕೋಟಿ, ತೆಲಂಗಾಣಕ್ಕೆ 600 ಕೋಟಿ ಮತ್ತು ಮಿಜೋರಾಂಗೆ 100 ಕೋಟಿ ರೂ. ಕೊಟ್ಟು ಸೋನಿಯಾ ಗಾಂಧಿಯವರ ಶಹಬ್ಬಾಸ್‍ಗಿರಿ ಪಡೆಯಲು ಕಾಂಗ್ರೆಸ್ ಸರಕಾರ ಮುಂದಾಗಿದೆ ಎಂದು ಆರ್‌. ಅಶೋಕ್‌ ಹೇಳಿದರು.

ಗುತ್ತಿಗೆದಾರರು ತಮ್ಮ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಬಹುಕಾಲದಿಂದ ಕೇಳುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾರೆ. ವಿಷ ಕುಡಿಯುವ ಬೆದರಿಕೆಗೂ ಜಗ್ಗಲಿಲ್ಲ. ಆದರೆ, ಪಂಚ ರಾಜ್ಯಗಳ ಚುನಾವಣೆ ಬಂದ ತಕ್ಷಣ ಹಣ ಬಿಡುಗಡೆಯಾಗಿದೆ. ಕಾಂಚಾಣ ಕುಣಿತ ಶುರುವಾಗಿದೆ. ಎಷ್ಟು ಕಾಕತಾಳೀಯ ಎಂದು ಅವರು ಅಶೋಕ್‌ ವ್ಯಂಗ್ಯವಾಡಿದರು.

ʻʻಇವರಿಗೆ ಬೇಕಾದವರಿಗೆ ಹಣ ನೀಡಿದ್ದಾಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಅವರೇ ಹೇಳಿದ್ದಾರೆ. ಅಂಬಿಕಾಪತಿ ಮನೆಯಲ್ಲಿ ಹಣ ಶೇಖರಿಸಿ ತೆಲಂಗಾಣಕ್ಕೆ ಕಳಿಸಲು ತಯಾರಿ ನಡೆದಿತ್ತೆಂದು ತೆಲಂಗಾಣದ ಹಣಕಾಸು ಸಚಿವರೂ ನೇರ ಆಪಾದನೆ ಮಾಡಿದ್ದಾರೆʼʼ ಎಂದು ಅಶೋಕ್‌ ವಿವರಿಸಿದರು.

ಎಟಿಎಂ ಸರ್ಕಾರ ಎಂಬ ಮಾತು ನಿಜವಾಗಿದೆ ಎಂದ ಅಶೋಕ್

ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವು ಯಾವ ದಿಕ್ಕಿನಲ್ಲಿ ಹೋಗುತ್ತಿದೆ ಎಂಬುದು ರಾಜ್ಯದ ಜನತೆಗೆ ಚೆನ್ನಾಗಿ ಅರ್ಥವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಟಿಎಂ ಸರಕಾರ ರಚನೆ ಆಗಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಎಚ್ಚರಿಸಿದ್ದರು. ಬಿಜೆಪಿಯ ನಾವೆಲ್ಲರೂ ‘ಎಟಿಎಂ ಸರಕಾರ’ ರಚನೆ ಆದೀತೆಂದು ಎಚ್ಚರಿಕೆ ನೀಡಿದ್ದೆವು ಎಂದು ತಿಳಿಸಿದರು.‌

ʻʻನಮ್ಮ ಆರೋಪಗಳಿಗೆ ಗುತ್ತಿಗೆದಾರ ಅಂಬಿಕಾಪತಿ ಮೂಲಕ ಸಾಕ್ಷಿ ಸಿಕ್ಕಿದೆ. ಅಂಬಿಕಾಪತಿ ಅವರ ಪತ್ನಿ ಕಾಂಗ್ರೆಸ್‌ನ ಮಾಜಿ ಕಾರ್ಪೊರೇಟರ್ʼʼ ಎಂದು ಹೇಳಿದ ಅವರು, ಈ ಹಿಂದೆ ಕಾಂಗ್ರೆಸ್ ಚಿತಾವಣೆಯಿಂದ ಕೆಂಪಣ್ಣ ಮತ್ತಿತರ ಗುತ್ತಿಗೆದಾರರು 40 ಶೇಕಡಾ ಸರಕಾರ ಎಂದು ಬಿಜೆಪಿ ಸರಕಾರದ ವಿರುದ್ಧ ಆರೋಪ ಹೊರಿಸಿದ್ದರು. ಅಂಥವರ ಮನೆಯಲ್ಲೇ ಹಣ ಲಭಿಸಿದೆ ಎಂದರೆ ಅದರ ಮೂಲ ಎಲ್ಲಿ ಎಂದು ಸ್ಪಷ್ಟವಾಗುತ್ತದೆʼʼ ಎಂದರು. ಯಾರ ದುಡ್ಡಿದು ಎಂದು ಅಧಿಕಾರದಲ್ಲಿರುವ ಕಾಂಗ್ರೆಸ್‍ನ್ನು ಜನ ಕೇಳುತ್ತಿದ್ದಾರೆ. ಇದನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: IT Raid in Bangalore : ಇದು ಸಿದ್ದರಾಮಯ್ಯ, ಡಿಕೆಶಿಗೆ ಸೇರಿದ ಕಮಿಷನ್‌ ಹಣ; ಬಿಜೆಪಿ ಆರೋಪ

ಭಗವಾನ್‌ ಹೇಳಿಕೆಗೆ ಕಾಂಗ್ರೆಸ್‌ ಉತ್ತರ ನೀಡಲಿ

ರೈತ ಸಮುದಾಯದ ಒಕ್ಕಲಿಗರ ಬಗ್ಗೆ ತಲೆತಿರುಕ, ಮೆಂಟಲ್ ಗಿರಾಕಿ ಭಗವಾನ್ ಅವಹೇಳನಕಾರಿ ಮಾತನಾಡಿದ್ದಾರೆ. ಇದರ ಎಲ್ಲೆಡೆ ವಿರುದ್ಧ ಪ್ರತಿಭಟನೆಗಳು ನಡೆದಿವೆ. ಇಡೀ ಜನಾಂಗಕ್ಕೆ ಅವಮಾನವಾಗಿದೆ. ಯಾರ ಇದರ ಹಿಂದಿದ್ದಾರೆ? ಭಗವಾನ್ ಕಾರ್ಯಕ್ರಮಕ್ಕೆ ಹೋಗುವವರೆಲ್ಲ ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ ಎಂದು ಟೀಕಿಸಿದರು.
ಅವನಿಗೆ ರಕ್ಷಣೆ ಕೊಡುವವರು, ಬೆಂಬಲ ಕೊಡುವವರು ಕಾಂಗ್ರೆಸ್ ಪಕ್ಷದವರೇ ಆಗಿದ್ದಾರೆ. ಅವನ ಹೇಳಿಕೆಗೆ ಕಾಂಗ್ರೆಸ್ ಪಕ್ಷದವರು ಸರಿಯಾದ ಉತ್ತರ ಕೊಡಬೇಕು ಎಂದು ಒತ್ತಾಯಿಸಿದರು.

Exit mobile version