Site icon Vistara News

BJP Karnataka: ಬೆಂಗಳೂರಿನ ನೂತನ ಜಿಲ್ಲಾಧ್ಯಕ್ಷರಿಂದ ಬಿ.ವೈ. ವಿಜಯೇಂದ್ರಗೆ ಅಭಿನಂದನೆ

BJP District presidents meet BY Vijayendra

ಬೆಂಗಳೂರು: ಹೊಸ ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಗೆ ಬಿಜೆಪಿ (BJP Karnataka) ಜಿಲ್ಲಾಧ್ಯಕ್ಷರನ್ನು ಘೋಷಿಸುವ ಮೂಲಕ ಪಕ್ಷದ ಕಾರ್ಯಕರ್ತರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಭರ್ಜರಿ ಗಿಫ್ಟ್‌ ನೀಡಿದ್ದಾರೆ. ಹೀಗಾಗಿ ನೂತನವಾಗಿ ಆಯ್ಕೆಯಾಗಿರುವ ಬೆಂಗಳೂರಿನ ಉತ್ತರ, ದಕ್ಷಿಣ, ಕೇಂದ್ರ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಆಗಮಿಸಿ ವಿಜಯೇಂದ್ರ ಅವರಿಗೆ ಸಂಕ್ರಾಂತಿಯ ಶುಭ ಕೋರಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಿ.ಕೆ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಮಕರ ಸಂಕ್ರಾಂತಿಯ ಶುಭಾಶಯ ಕೋರಿದರು.

ಈ ವೇಳೆ ಕೆಲವು ಕಾಲ ಮಾತುಕತೆಯನ್ನು ನಡೆಸಲಾಗಿದೆ. ಬಳಿಕ ನೂತನ ಜಿಲ್ಲಾಧ್ಯಕ್ಷರಿಗೆ ಶುಭ ಹಾರೈಸಿದ ಬಿ.ವೈ. ವಿಜಯೇಂದ್ರ, ನೂತನ ಜವಾಬ್ದಾರಿಯಲ್ಲಿ ನಿರೀಕ್ಷಿತ ಯಶಸ್ಸು ಲಭಿಸಲಿ, ಶ್ರಮ ಪಟ್ಟು ಕೆಲಸ ಮಾಡಿ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಯಶಸ್ಸು ಬಿಜೆಪಿಯದ್ದಾಗಬೇಕು. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿ ಆಗಬೇಕು. ಆ ನಿಟ್ಟಿನಲ್ಲಿ ನಮ್ಮೆಲ್ಲರ ಗುರಿ ಇರಲಿ ಎಂದು ಹೇಳಿದರು.

ಬಸವೇಶ್ವರ ಸ್ವಾಮಿ ರಥೋತ್ಸವದಲ್ಲಿ ಭಾಗಿ

ಬೆಂಗಳೂರಿನ ಕೆಂಗೇರಿ ಹೋಬಳಿಯ ಸೋಂಪುರದಲ್ಲಿನ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಹಾಗೂ ಕಡಲೆಕಾಯಿ ಪರಿಷೆಯಲ್ಲಿ ಬಿ.ವೈ. ವಿಜಯೇಂದ್ರ ಅವರು ಪತ್ನಿ ಜತೆ ಭಾಗವಹಿಸಿದ್ದಾರೆ. ಬಳಿಕ ದೇವರ ದರ್ಶನ ಪಡೆದು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ವರ್ಷದ ಮೊದಲ ಹಬ್ಬ ಸಂಕ್ರಮಣದಂದು ನಾಡಿಗೆ ಒಳಿತಾಗಲೆಂದು ಪ್ರಾರ್ಥಿಸಿದ್ದಾಗಿ ವಿಜಯೇಂದ್ರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆ.ಆರ್.ಐ.ಡಿ.ಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಮರಿಸ್ವಾಮಿ, ಸ್ಥಳೀಯ ಮುಖಂಡರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು.

BJP Karnataka: 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಬಿಜೆಪಿ ಅಧ್ಯಕ್ಷರ ನೇಮಕ

ರಾಜ್ಯ ಬಿಜೆಪಿಯ 39 ಸಂಘಟನಾತ್ಮಕ ಜಿಲ್ಲೆಗಳಿಗೆ ನೂತನ ಅಧ್ಯಕ್ಷರು ಹಾಗೂ ವಿವಿಧ ಘಟಕಗಳಿಗೆ ಮುಖ್ಯಸ್ಥರನ್ನು ನೇಮಿಸಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆದೇಶ ಹೊರಡಿಸಿದ್ದಾರೆ. ವಿವಿಧ ಜಿಲ್ಲೆಗಳ ನೂತನ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.

ಬಿಜೆಪಿ ವಿವಿಧ ಘಟಕಗಳ ಮುಖ್ಯಸ್ಥರು

1.ಪ್ರಕೋಷ್ಠಗಳ ರಾಜ್ಯ ಸಂಯೋಜಕರು- ಎಸ್‌. ದತ್ತಾತ್ರಿ, ಶಿವಮೊಗ್ಗ
2.ರಾಜ್ಯ ಕಾರ್ಯಾಲಯ ಕಾರ್ಯದರ್ಶಿ- ಲೋಕೇಶ್‌ ಅಂಬೇಕಲ್ಲು , ಬೆಂಗಳೂರು ಉತ್ತರ
3.ರಾಜ್ಯ ಕಾರ್ಯಾಲಯ ಸಹ ಕಾರ್ಯದರ್ಶಿ- ಬಿ.ಎಚ್‌. ವಿಶ್ವನಾಥ, ದಾವಣಗೆರೆ

Exit mobile version