Site icon Vistara News

BJP Karnataka: ಪ್ರಧಾನಿ ಮೋದಿಯೇ ಬಿಜೆಪಿಯ ಆಸ್ತಿ; ಕಾಂಗ್ರೆಸ್‌ನವರು ರಾಹುಲ್‌ ಹೆಸರಲ್ಲಿ ಮತ ಕೇಳಲಿ: ಬಿ.ಎಸ್‌. ಯಡಿಯೂರಪ್ಪ ಸವಾಲು

bjp-karnataka-BS Yediyurappa says Narendra modi is Biggest asset of BJP

#image_title

ಬೆಂಗಳೂರು: ಬಿಜೆಪಿಯ ಪ್ರಮುಖ ಆಸ್ತಿಯೇ ಪ್ರಧಾನಿ ನರೇಂದ್ರ ಮೋದಿ ಎಂದಿರುವ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ, ಕಾಂಗ್ರೆಸ್‌ನವರು ರಾಹುಲ್‌ ಗಾಂಧಿಯನ್ನು ಮುಂದಿಟ್ಟುಕೊಂಡು ಮತ ಕೇಳಲು ಸಾಧ್ಯವೇ? ಎಂದು ಸವಾಲು ಹಾಕಿದ್ದಾರೆ. ನಗರದ ಖಾಸಗಿ ಹೋಟೆಲ್‍ನಲ್ಲಿ ರಾಜ್ಯ ಬಿಜೆಪಿ (BJP Karnataka)ಮಂಡಲ ಪ್ರಭಾರಿಗಳ ಕಾರ್ಯಾಗಾರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.

ನರೇಂದ್ರ ಮೋದಿಜಿ ಅವರ ಶ್ರೇಷ್ಠ ನಾಯಕತ್ವ ನಮ್ಮ ಜತೆಗಿದೆ. ಎಂಕ, ನಾಣಿ ನಾಯಕತ್ವವು ಜೊತೆಗಿರುವ ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯ ಇಲ್ಲ. ವಿಶ್ವಾಸಾರ್ಹ ಮತ್ತು ಕ್ರಿಯಾಶೀಲ ಕಾರ್ಯಕರ್ತರ ದೊಡ್ಡ ಪಡೆ ನಮ್ಮ ಪಕ್ಷದ ಜೊತೆ ಇದೆ. ನಮ್ಮದು ಕಾರ್ಯಕರ್ತರ ಪಕ್ಷ. ಮೋದಿಜಿ ಸರಕಾರದ 8-9 ವರ್ಷಗಳ ಸಾಧನೆ, ಜನಪರ ಆಡಳಿತವನ್ನು ಜನರಿಗೆ ತಿಳಿಸಬೇಕು. ಮೋದಿಜಿ ನಮ್ಮ ಪಕ್ಷದ ಪ್ರಮುಖ ಆಸ್ತಿ ಎಂದು ವಿವರಿಸಿದರು.

ಜನ್‍ಧನ್, ಆಯುಷ್ಮಾನ್, ಶೌಚಾಲಯ ನಿರ್ಮಾಣ, ಮನೆಮನೆಗೆ ನಳ್ಳಿನೀರು ಸೇರಿ ಹಲವು ಯೋಜನೆ ಜಾರಿಯನ್ನು ಉಲ್ಲೇಖಿಸಿದರು. ಪ್ರತಿ ಮನೆಯಲ್ಲೂ ಒಂದಿಲ್ಲೊಂದು ಫಲಾನುಭವಿ ಇದ್ದಾರೆ. ಅಂಥ ಫಲಾನುಭವಿಗಳನ್ನು ಗುರುತಿಸಿ ತಲುಪುವ ಕಾರ್ಯ ನಮ್ಮಿಂದ ಆಗಬೇಕೆಂದು ಕಿವಿಮಾತು ಹೇಳಿದರು. ಪಕ್ಷದ ಬೆನ್ನೆಲುಬಿನಂತೆ ಕೆಲಸ ಮಾಡಬೇಕೆಂದು ವಿನಂತಿಸಿದರು. ಸೀಟ್ ಹಂಚಿಕೆ ಬಳಿಕ ಸಣ್ಣಪುಟ್ಟ ಅಸಮಾಧಾನ ಇದ್ದರೆ ಅದನ್ನು ಶಮನಗೊಳಿಸಬೇಕೆಂದು ತಿಳಿಸಿದರು.

ಇದನ್ನೂ ಓದಿ: BJP Karnataka: ಮಾರ್ಚ್ 1ರಿಂದ ಬಿಜೆಪಿ ರಥಯಾತ್ರೆ: ಸರ್ಕಾರದ ವಿವಿಧ ಯೋಜನೆಗಳನ್ನು ಜನರಿಗೆ ತಿಳಿಸಿ ಎಂದ ಸಿಎಂ ಬಸವರಾಜ ಬೊಮ್ಮಾಯಿ

ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್‍ನವರು ತಿರುಕನ ಕನಸು ಕಾಣುತ್ತಿದ್ದಾರೆ. ನಾಯಕತ್ವ ಇಲ್ಲದೆ ಪರದಾಡುವ ಕಾಂಗ್ರೆಸ್ಸಿಗೆ ಭವಿಷ್ಯ ಇಲ್ಲ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಎದುರು ರಾಹುಲ್‌ ಗಾಂಧಿ ಕರೆಸಿ ನೀವು ಕೇಳುತ್ತೀರ? ಎಂದು ಕಾಂಗ್ರೆಸ್‌ಗೆ ಸವಾಲೆಸೆದರು.

ಸಭೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಷ್ರ್ಟೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್‌, ಸಿಎಂ ಬಸವರಾಜ ಬೊಮ್ಮಾಯಿ ಮತ್ತಿತರರಿದ್ದರು.

Exit mobile version