ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ದೃಷ್ಟಿಯಿಂದ ಬಿಜೆಪಿ ಹಲವು ಕಾರ್ಯಯೋಜನೆಯನ್ನು ಹಾಕಿಕೊಂಡಿದೆ. ಈಗಾಗಲೇ ಪಕ್ಷ ಸಂಘಟನೆ ಸೇರಿದಂತೆ ಬಿಜೆಪಿಯ (BJP Karnataka) ವಿವಿಧ ವಿಭಾಗಗಳ ಬಲವರ್ಧನೆ ಸೇರಿದಂತೆ ಇನ್ನಿತರ ಚಟುವಟಿಕೆಗೆ ಕೈಹಾಕಿದೆ. ಇದರ ಭಾಗವಾಗಿ ಮಂಗಳವಾರ (ಜ. 9) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BJP state president BY Vijayendra) ನೇತೃತ್ವದಲ್ಲಿ ಮಾಧ್ಯಮ ಕಾರ್ಯಾಗಾರವನ್ನು (Media Workshop) ಆಯೋಜಿಸಲಾಗಿತ್ತು. ಇಲ್ಲಿ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಾರ್ಯಚಟುವಟಿಕೆ ಹೇಗಿರಬೇಕು? ಮುಂದಿರುವ ಜವಾಬ್ದಾರಿಗಳು ಏನು? ಮಾಡಬೇಕಾದ ಕಾರ್ಯಗಳೇನು ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಆಯೋಜನೆ ಮಾಡಲಾಗಿದ್ದ ಮಾಧ್ಯಮ ಕಾರ್ಯಾಗಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕೋಷ್ಠದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಒಗ್ಗಟ್ಟಾಗಿ ಕಾರ್ಯನಿರ್ವಹಣೆ ಮಾಡಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ: Ram Mandir: ರಾಮನನ್ನು ಕೇವಲ ಕಾಲ್ಪನಿಕ ಎಂದಿದ್ದು ನೀವಲ್ಲವೇ? ಕಾಂಗ್ರೆಸ್‌ಗೆ ಬಿಜೆಪಿ ತಿರುಗೇಟು
ಮಾಧ್ಯಮ ಪ್ರಕೋಷ್ಠದ ಕಾರ್ಯ ಅತ್ಯಂತ ಜವಾಬ್ದಾರಿಯುತವಾಗಿದ್ದು, ಅದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಬಿ.ವೈ. ವಿಜಯೇಂದ್ರ ಕರೆ ನೀಡಿದರು.
ಲೋಕಸಭೆ ಚುನಾವಣೆಗೆ ಕಾರ್ಯತಂತ್ರ
ಇದೇ ವೇಳೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಜಯ ಸಾಧಿಸಬೇಕು. ಈ ನಿಟ್ಟಿನಲ್ಲಿ ಅನುಸರಿಸಬೇಕಾದ ಕ್ರಮಗಳು ಏನು? ಹಾಗೂ ಪಕ್ಷದ ಪರವಾಗಿ ಜನಾಭಿಪ್ರಾಯ ಮೂಡಿಸಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು. ಇದರಲ್ಲಿ ಮಾಧ್ಯಮ ಪ್ರಕೋಷ್ಠರ ಜವಾಬ್ದಾರಿಗಳು ಏನು? ಮುಂದಿನ ನಡೆ ಯಾವ ರೀತಿ ಇರಬೇಕು ಎಂಬಿತ್ಯಾದಿ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಇದನ್ನೂ ಓದಿ: BJP Karnataka: ಬಿಜೆಪಿ ಮಾದರಿ ಕೂಡಲೇ ಪರಿಹಾರ ಕೊಡಿ, ಇಲ್ಲವಾದರೆ ರಾಜೀನಾಮೆ ಕೊಡಿ: ಆರ್. ಅಶೋಕ್ ಸವಾಲು
ರಾಷ್ಟ್ರೀಯ ವಕ್ತಾರರಾದ ಜಾಫರ್ ಇಸ್ಲಾಂ, ಶ್ರೀ ತೂಹಿನ್ ಸಿನ್ಹಾ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ
ರಾಜೇಶ್ ಜಿ.ವಿ., ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥನಾರಾಯಣ್ ಗೌಡ, ರಾಜ್ಯ ವಕ್ತಾರರಾದ ಹರಿಪ್ರಕಾಶ್ ಕೋಣೆಮನೆ ಸೇರಿದಂತೆ ಮಾಧ್ಯಮ ವಿಭಾಗದ ನೂತನ ಪದಾಧಿಕಾರಿಗಳು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.