ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಿರಿಯ ಸಚಿವರ ಜತೆಗೆ ಆರ್‌ಎಸ್‌ಎಸ್ ಸಭೆ ನಡೆಸಿದ್ದು, ದಿಢೀರನೆ ನಡೆದ ಸಭೆ ಕುತೂಹಲ ಕೆರಳಿಸಿದೆ.
ಸಂಜೆ ವೇಳೆಗೆ ಚಾಮರಾಜಪೇಟೆಯ ಕೆಂಪೇಗೌಡ ನಗರದ ಕೇಶವ ಶಿಲ್ಪಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್. ಅಶೋಕ್, ಡಾ. ಅಶ್ವತ್ಥನಾರಾಯಣ, ಡಾ. ಸುಧಾಕರ್, ಮುನಿರತ್ನ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಸುಮಾರು ಎರಡು ಗಂಟೆ ಸಭೆಯಲ್ಲಿ ಭಾಗಿಯಾದರು.
ಸದ್ಯ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜತೆಗೆ ಮಂಗಳೂರು ಸ್ಫೋಟ, ರಾಜ್ಯದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಾಗಿದೆ. ಮುಂಬರುವ ಕೆಲವು ಪ್ರಶಿಕ್ಷಣ ವರ್ಗಗಳಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಂಘಟನೆಯ ಸೈದ್ಧಾಂತಿಕ ವಿಚಾರಗಳನ್ನು ಸ್ಪಷ್ಟಪಡಿಸಲು ಆರ್‌ಎಸ್‌ಎಸ್ ಮುಖಂಡರು ತಿಳಿಸಿದ್ದಾರೆ ಎನ್ನಲಾಗಿದೆ. ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಒಪ್ಪಿಗೆ ಪಡೆಯುವುದು ಸೇರಿ ಅನೇಕ ವಿಚಾರಗಳನ್ನು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ನಡೆಯುತ್ತಿರುವ ವಿವಿಧ ರಾಜಕೀಯ ಬೆಳವಣಿಗೆಗಳು, ಚುನಾವಣೆಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ದಿಢೀರ್ ಸಭೆ ಕುತೂಹಲ ಮೂಡಿಸಿದೆ.
ಇದನ್ನೂ ಓದಿ | RSS | ಸಂಘ ಪರಿವಾರದ ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರಿಗೆ ಹೆಚ್ಚೆಚ್ಚು ಅವಕಾಶ ನೀಡಲು ಆರ್‌ಎಸ್‌ಎಸ್ ಚಿಂತನೆ