ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಪಾದಯಾತ್ರೆ (BJP Padayatra) ನಡೆಸಲು ನಿರ್ಧರಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಿ ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಬಿಜೆಪಿ ನಾಯಕರು ಒತ್ತಾಯಿಸಲಿದ್ದಾರೆ.
ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯ ಬಳಿಕ ಮುಡಾ ಅಕ್ರಮ ಪ್ರಕರಣ ಯಾವ ಹಂತಕ್ಕೆ ಬರಲಿದೆ ಎಂದು ನೋಡಿಕೊಂಡು ಪಾದಯಾತ್ರೆ ನಡೆಸಲು ಬಿಜೆಪಿ ರಾಜ್ಯ ನಾಯಕರು ತೀರ್ಮಾನಿಸಿದ್ದು, ಒಂದು ವೇಳೆ ಸಿಎಂ ರಾಜೀನಾಮೆ ಕೊಡದಿದ್ದರೆ ಪಾದಯಾತ್ರೆ ಮೂಲಕ ಮೈಸೂರಿಗೆ ತೆರಳಿ ಸಿಎಂ ರಾಜೀನಾಮೆಗೆ ಆಗ್ರಹಿಸಲಿದ್ದಾರೆ.
ಅಧಿವೇಶನ ಬಳಿಕ ಜುಲೈ 29ರಂದು 120 ಕಿ.ಮೀ. ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಸುನೀಲ್ ಕುಮಾರ್ ಸೇರಿ ವಿವಿಧ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲು ರಾಜ್ಯ ಬಿಜೆಪಿ ನಿರ್ಧರಿಸಿದೆ.
ಇದನ್ನೂ ಓದಿ | Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್
ಇನ್ನು ಪಾದಯಾತ್ರೆ ವೇಳೆ ಬೆಂಗಳೂರು- ಮೈಸೂರು ಹೆದ್ದಾರಿ ಮೂಲಕ ಸಾಗದೆ, ಚನ್ನಪಟ್ಟಣ, ಮಂಡ್ಯ ಒಳರಸ್ತೆಯಲ್ಲಿ ಪಾದಯಾತ್ರೆ ಮೂಲಕ ತೆರಳಿ ಜನರ ಗಮನ ಸೆಳೆಯಲು ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ.
ಇಡಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ದ್ವೇಷ ರಾಜಕೀಯವನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದ ಸಿಎಂ
ಬೆಂಗಳೂರು: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಖ್ಯಮಂತ್ರಿಗಳು, ಸಚಿವರ ಹೆಸರು ಹೇಳಲು ಇಡಿ ಅಧಿಕಾರಿಗಳು ಒತ್ತಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ (Congress Protest) ಕಾಂಗ್ರೆಸ್ ಶಾಸಕರು, ಸಚಿವರು ಮಂಗಳವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯ ಸೇಡು, ದ್ವೇಷದಿಂದ ಕೂಡಿದ ನಡೆಯನ್ನು ನಮ್ಮ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಇದನ್ನು ನಾವು ಪ್ರತಿಭಟಿಸುತ್ತೇವೆ. ಪ್ರಜಾಪ್ರಭುತ್ವದಲ್ಲಿ ಯಾವುದೇ ತನಿಖೆಯನ್ನು ಕಾನೂನುಬಾಹಿರವಾಗಿ ಮಾಡುವಂತಿಲ್ಲ ಎಂದು ಕಿಡಿಕಾರಿದರು.
ಸಂಸತ್‌ನಲ್ಲಿ ಪ್ರಸ್ತಾಪ ಮಾಡಲಾಗುವುದು
ಸಂಸತ್‌ನಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ವಾಲ್ಮೀಕಿ ನಿಗಮದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಮಾತನಾಡಿ, ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರೊಂದಿಗೆ ಮಾತನಾಡಿದ್ದು, ಇಡಿ ದುರೂಪಯೋಗ ಮಾಡಿಕೊಳ್ಳುತ್ತಿರುವ ಬಗ್ಗೆ ಪಕ್ಷದ ವರಿಷ್ಠರು ಕೂಡ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿಸಿದರು.
ಕಾನೂನು ಹೋರಾಟಕೆ ಸಿದ್ಧ
ನಾವು ಕೂಡ ಕಾನೂನಿನ ಪ್ರಕಾರ ಹೋರಾಟ ಮಾಡಲು ಸಿದ್ಧರಿದ್ದೇವೆ. ಇಡಿ, ಸಿಬಿಐ ಏನು ಮಾಡುತ್ತಾರೆ ಎಂದು ನಮಗೆ ತಿಳಿದಿಲ್ಲ. ಆದರೆ ಎಸ್‌ಐಟಿ ತನಿಖೆ ಮುಗಿದಿದೆ. ಸದನದಿಂದ ಹೊರಗೆ ಹೋರಾಟ ಮಾಡುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದರು.
ಇದನ್ನೂ ಓದಿ | Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ
ತಪ್ಪಿತಸ್ಥರಿಗೆ ಶಿಕ್ಷೆ
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಯಾರೇ ತಪ್ಪು ಮಾಡಿದ್ದರೂ ಮುಲಾಜಿಗೆ ಒಳಗಾಗುವುದಿಲ್ಲ. ಯಾರನ್ನೂ ರಕ್ಷಣೆ ಮಾಡುವುದಿಲ್ಲ. ನಾವು ತಪ್ಪಿತಸ್ಥರಿಗೆ ಶಿಕ್ಷೆ ಕೊಟ್ಟೆ ಕೊಡುತ್ತೇವೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.