Janatha Darshan : ಹಣ ಲೂಟಿ ಯಾಕೆ; ಜನತಾ ದರ್ಶನ ಮಾಡುತ್ತಿರುವ ಸಿಎಂಗೆ ಬಿಜೆಪಿಯಿಂದ 9 ಪ್ರಶ್ನೆ! - Vistara News

ಕರ್ನಾಟಕ

Janatha Darshan : ಹಣ ಲೂಟಿ ಯಾಕೆ; ಜನತಾ ದರ್ಶನ ಮಾಡುತ್ತಿರುವ ಸಿಎಂಗೆ ಬಿಜೆಪಿಯಿಂದ 9 ಪ್ರಶ್ನೆ!

Janatha Darshan : ಸಿಎಂ ಸಿದ್ದರಾಮಯ್ಯ ಅವರಿಗೆ ಜನತಾ ದರ್ಶನದಲ್ಲಿ ಏನೆಲ್ಲ ಪ್ರಶ್ನೆಗಳು ಎದುರಾಗಬಹುದು ಎಂದು ಊಹಿಸಿ ಒಂಬತ್ತು ಪ್ರಶ್ನೆಗಳನ್ನು ಬಿಜೆಪಿ ಮುಂದಿಟ್ಟಿದೆ.

VISTARANEWS.COM


on

CM Janatha Darshan BJP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ ಎರಡನೇ ಅವಧಿಯಲ್ಲೂ ಬಹು ಜನಪ್ರಿಯ ಜನತಾ ದರ್ಶನವನ್ನು (Janatha Darshan) ಮತ್ತೆ ಆರಂಭ ಮಾಡಿದ್ದಾರೆ. ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ (Home Office Krishna) ಆರಂಭಗೊಂಡ ಜನತಾ ದರ್ಶನಕ್ಕೆ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಸಿಎಂ ಅವರು ಕೂಡಾ ಭಾರಿ ಮುತುವರ್ಜಿಯಿಂದ ಇದರಲ್ಲಿ ಪಾಲ್ಗೊಳ್ಳುತ್ತಿದ್ದು, ಸ್ವೀಕರಿಸುವ ಪ್ರತಿಯೊಂದು ದೂರಿನ ಬಗ್ಗೆ ಕಾಳಜಿಯಿಂದ ಪ್ರತಿಕ್ರಿಯಿಸುತ್ತಿದ್ದಾರೆ. ಇದರ ನಡುವೆಯೇ ಭಾರತೀಯ ಜನತಾ ಪಕ್ಷ (BJP Questions) ಈ ಜನತಾ ದರ್ಶನಕ್ಕೆ ಸಂಬಂಧಿಸಿ ಕೆಲವೊಂದು ಪ್ರಶ್ನೆಗಳನ್ನು ಮುಂದಿಟ್ಟಿದೆ.

ಸಿಎಂ ಸಿದ್ದರಾಮಯ್ಯ ಅವರಿಗೆ ಈ ಜನತಾ ದರ್ಶನದಲ್ಲಿ ಯಾವ್ಯಾವ ಪ್ರಶ್ನೆಗಳು ಎದುರಾಗಬಹುದು ಎಂಬುದನ್ನು ಉಲ್ಲೇಖಿಸಿ ಬಿಜೆಪಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ರಾಜಕೀಯ ಕದನವನ್ನು ಪ್ರತಿಫಲಿಸಿದೆ.

ಇದನ್ನೂ ಓದಿ : Janatha Darshan : ಸಿಎಂ ತಲೆಗೆ ಕೈ ಇಟ್ಟು ಆಶೀರ್ವದಿಸಿದ ಅಜ್ಜಿ; ಹೆಗಲುಮುಟ್ಟಿ ಸಿಎಂ ಸಾಂತ್ವನ

ಬಿಜೆಪಿ ಕೇಳಿದ ಪ್ರಶ್ನೆಗಳೇನು?

ಕನ್ನಡಿಗರ ಕಿವಿ ಮೇಲೆ ಹೂವಿಟ್ಟು ಛೀ ಥೂ ಎನಿಸಿಕೊಳ್ಳುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರಿಗೆ ಜನತಾ ದರ್ಶನದಲ್ಲಿ ಎದುರಾಗುವ ಪ್ರಶ್ನೆಗಳು ಇವು- ಎಂದು ಬಿಜೆಪಿ ಹೇಳಿದೆ.

1. ಮೋದಿ ಸರ್ಕಾರದ 5 ಕೆಜಿ ಅಕ್ಕಿ ನೀವು ಕೊಡುತ್ತಿಲ್ಲ ಏಕೆ?
2. ನೀವೇ ಹೇಳಿದ ಹತ್ತು ಕೆಜಿ ಅಕ್ಕಿ ಕೊಟ್ಟಿಲ್ಲ ಏಕೆ?
3. ಗೃಹ ಲಕ್ಷ್ಮಿ ಹೆಸರಲ್ಲಿ ಸ್ವಾಭಿಮಾನಿ ಮಹಿಳೆಯರನ್ನು ವಂಚಿಸಿದ್ದು ಏಕೆ?
4. ಕನ್ನಡಿಗರ ಹಣವನ್ನು ಲೂಟಿ ಮಾಡಿ ಹೈಕಮಾಂಡ್ ಹೊಟ್ಟೆ ತುಂಬಿಸುತ್ತಿರುವುದು ಸರಿಯೇ?
5. ಬರಗಾಲವನ್ನು ನಿರ್ವಹಣೆ ಮಾಡಲಿಲ್ಲ, ಪರಿಹಾರವೂ ಕೊಟ್ಟಿಲ್ಲ ಏಕೆ?
6. ನಾಡಿನ ಜನತೆ ಸಂಕಷ್ಟದಲ್ಲಿರುವಾಗ ನಿಮಗೆ ಪಂಚ ರಾಜ್ಯ ಚುನಾವಣೆ ಮುಖ್ಯವೇ?
7. ನಮ್ಮನ್ನು ಉದ್ಧಾರ ಮಾಡುತ್ತೇವೆಂದು ಬಂದು ಬೆಲೆ ಏರಿಕೆ ಮೂಲಕ ತುಳಿದಿದ್ದು ಸರಿಯೇ?
8. ಕಾವೇರಿಯನ್ನು ಕಳ್ಳತನದಿಂದ ಬಿಟ್ಟು ನಮಗೆ ವಂಚಿಸಿದ್ದೇಕೆ?
9.ತೆಲಂಗಾಣ ಚುನಾವಣೆ ಹಣವನ್ನು ಮಂಚದ ಕೆಳಗೆ ಬಚ್ಚಿಟ್ಟಿದ್ದು ಅಲ್ಲದೆ ಮೋಜು ಮಾಡಲು ಸರ್ಕಾರ ಅಲ್ಲಿಗೆ ಟೂರ್ ಹೋಗಿದ್ದೇಕೆ?
ಸ್ವಯಂಘೋಷಿತ ಆರ್ಥಿಕ ತಜ್ಞ ಮಜವಾದಿ ಸಿದ್ದರಾಮಯ್ಯ ಅವರ ಬಳಿ ಜನರ ಈ ಪ್ರಶ್ನೆಗಳಿಗೆ ಒಂದಕ್ಕಾದರೂ ಉತ್ತರವಿದೆಯೇ ಎಂದು ಬಿಜೆಪಿ ಪ್ರಶ್ನೆ ಮಾಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹಾವೇರಿ

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Haveri Lok Sabha Constituency: ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

VISTARANEWS.COM


on

Haveri Lok Sabha Constituency
Koo

ಹಾವೇರಿ: ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಬ್ಬಾಗಿಲು ಆಗಿರುವ, ಅರೆ ಮಲೆನಾಡು ಎಂದು ಕೂಡ ಖ್ಯಾತಿ ಗಳಿಸಿರುವ ಹಾವೇರಿಯಲ್ಲಿ (Haveri Lok Sabha Constituency) ರಾಜಕೀಯ ಸನ್ನಿವೇಶ ಬದಲಾಗಿದೆ. ಇದೇ ಕಾರಣಕ್ಕಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ (Basavaraj Bommai) ಅವರು ಬಿಜೆಪಿಯಿಂದ ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ. ಇನ್ನು, ಇವರ ವಿರುದ್ಧ ಕಾಂಗ್ರೆಸ್‌ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡಿದ್ದು, ತೀವ್ರ ಜಿದ್ದಾಜಿದ್ದಿನ ಹೋರಾಟ ನಡೆದಿದೆ.

ಬಿಜೆಪಿಯ ಶಿವಕುಮಾರ್‌ ಉದಾಸಿ ಅವರು ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆಲುವು ಸಾಧಿಸಿದ್ದು, ಈ ಬಾರಿ ಅವರು ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. 2008ರಲ್ಲಿ ಹಾವೇರಿ ಲೋಕಸಭೆ ಕ್ಷೇತ್ರ ರಚನೆಯಾಗಿದ್ದು, ಇದುವರೆಗೆ ಬಿಜೆಪಿ ಭದ್ರಕೋಟೆಯೇ ಆಗಿದೆ. ಲಿಂಗಾಯತ ಸಮುದಾಯದವರೇ ನಿರ್ಣಾಯಕರಾಗಿರುವ, ಕುರುಬ ಸಮುದಾಯದ ಮತದಾರರೂ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ಶಾಸಕ ಬಸವರಾಜ್‌ ಬೊಮ್ಮಾಯಿ ಅವರು ಸ್ಪರ್ಧಿಸಿದ್ದು, ಜಾತಿ ಬಲ, ಮೋದಿ ನಾಮಬಲದಿಂದ ಗೆಲುವಿನ ವಿಶ್ವಾಸದಲ್ಲಿದ್ದಾರೆ.

ಕಾಂಗ್ರೆಸ್‌ ಮಾಜಿ ಶಾಸಕ ಜಿ.ಎಸ್‌.ಗಡ್ಡದೇವರಮಠ ಅವರ ಪುತ್ರ, ವೀರಶೈವ ಲಿಂಗಾಯತ ಸಮುದಾಯದ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಟಿಕೆಟ್‌ ನೀಡುವ ಮೂಲಕ ಈ ಬಾರಿ ಕಾಂಗ್ರೆಸ್‌ ಚಾಣಾಕ್ಷತನ ಮೆರೆದಿದೆ. ಆನಂದಸ್ವಾಮಿ ಗಡ್ಡದೇವರ ಮಠ ಅವರು ಇದೇ ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಮತದಾರರ ಸಂಖ್ಯೆ

ಪುರುಷರು9.02 ಲಕ್ಷ
ಮಹಿಳೆಯರು8.90 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು83
ಒಟ್ಟು17.92 ಲಕ್ಷ

ಹಾವೇರಿ ಲೋಕಸಭೆ ಕ್ಷೇತ್ರದಲ್ಲಿ ಹಾವೇರಿಯ 5 ಹಾಗೂ ಗದಗದ 3 ವಿಧಾನಸಭೆ ಕ್ಷೇತ್ರಗಳು ಬರುತ್ತವೆ. ಶಿರಹಟ್ಟಿ, ಗದಗ, ರೋಣ, ಹಾನಗಲ್‌, ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು ವಿಧಾನಸಭೆ ಕ್ಷೇತ್ರಗಳು ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಒಳಪಟ್ಟಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಸಾಧಿಸಿದ್ದು, ಈ ಬಾರಿಯ ವಿಶ್ವಾಸ ಹೆಚ್ಚಾಗಲು ಕಾರಣ ಎಂದು ತಿಳಿದುಬಂದಿದೆ.

2019, 2014ರಲ್ಲಿ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವಕುಮಾರ್‌ ಉದಾಸಿ ಅವರು 1.40 ಲಕ್ಷ ಮತಗಳ ಅಂತರದಿಂದ ಕಾಂಗ್ರೆಸ್‌ನ ಡಿ.ಆರ್.ಪಾಟೀಲ್‌ ಅವರ ವಿರುದ್ಧ ಗೆಲುವು ಸಾಧಿಸಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿಯೂ ಶಿವಕುಮಾರ್‌ ಉದಾಸಿ ಅವರು ಕಾಂಗ್ರೆಸ್‌ನ ಸಲೀಂ ಅಹ್ಮದ್‌ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Continue Reading

ಪ್ರಮುಖ ಸುದ್ದಿ

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Chikballapur lok sabha constituency : ಚಿಕ್ಕಬಳ್ಳಾಪುರ ಕ್ಷೇತ್ರ ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

VISTARANEWS.COM


on

Chikballapur lok sabha constituency
Koo

ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರ (Chikballapur lok sabha constituency) ಕರ್ನಾಟಕದ ಪ್ರಮುಖ ಕ್ಷೇತ್ರಗಳಲ್ಲಿ ಒಂದು. 1977 ರಲ್ಲಿ ಕ್ಷೇತ್ರ ಮರು ವಿಂಗಡಣೆ ನಂತರ ಈ ಕ್ಷೇತ್ರ ಅಸ್ತಿತ್ವಕ್ಕೆ ಬಂತು. ಇದು ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಭಾಗಗಳನ್ನು ಒಳಗೊಂಡಿದೆ. ಗೌರಿಬಿದನೂರು, ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಯಲಹಂಕ, ಹೊಸಕೋಟೆ, ದೇವನಹಳ್ಳಿ (ಎಸ್ಸಿ), ದೊಡ್ಡಬಳ್ಳಾಪುರ ಮತ್ತು ನೆಲಮಂಗಲ (ಎಸ್ಸಿ) ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಇದು ದೇಶದ 35 ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆ ಹಾಗೂ ಸರಾಸರಿ 71% ಸಾಕ್ಷರತಾ ಪ್ರಮಾಣ ಹೊಂದಿದೆ.

ಈ ಬಾರಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರ ಪುತ್ರ ರಕ್ಷಾ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. 1977ರಿಂದೀಚೆಗೆ ಚಿಕ್ಕಬಳ್ಳಾಪುರದಲ್ಲಿ ಒಟ್ಟು 12 ಚುನಾವಣೆಗಳು ನಡೆದಿವೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 10 ಬಾರಿ, ಜನತಾದಳ ಮತ್ತು ಬಿಜೆಪಿ ತಲಾ ಒಂದು ಬಾರಿ ಗೆಲುವು ಸಾಧಿಸಿವೆ. 1996ರ ಲೋಕಸಭಾ ಚುನಾವಣೆಯಲ್ಲಿ ಆರ್.ಎಲ್.ಜಾಲಪ್ಪ ಗೆಲುವು ಸಾಧಿಸಿದ್ದರು. ದೇವೇಗೌಡ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದ ಜಾಲಪ್ಪ ಅವರು 1998ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಸ್ಪರ್ಧಿಸಿ ಸತತ ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2009 ಮತ್ತು 2014 ರಲ್ಲಿ ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಈ ಸ್ಥಾನವನ್ನು ಸತತವಾಗಿ ಗೆದ್ದರು.

ಈ ಹಿಂದೆ ಗೆದ್ದವರು ಯಾರು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಕಾಂಗ್ರೆಸ್​ನ ಎಂ.ವೀರಪ್ಪ ಮೊಯ್ಲಿ ಅವರನ್ನು 1,82,110 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.53.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಎಂ.ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರನ್ನು 9,520 ಮತಗಳ ಕೆಲವೇ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 33.63% ಮತಗಳನ್ನು ಗಳಿಸಿದೆ.

ಇದನ್ನೂ ಓದಿ: Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2009ರ ಸಾರ್ವತ್ರಿಕ ಚುನಾವಣೆಯಲ್ಲಿ ವೀರಪ್ಪ ಮೊಯ್ಲಿ ಅವರು ಬಿಜೆಪಿಯ ಅಶ್ವತ್ಥನಾರಾಯಣ ಅವರನ್ನು 51,381 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 39.9% ಮತಗಳನ್ನು ಹೊಂದಿತ್ತು. 2014ರ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2009ಕ್ಕೂ ಮೊದಲು ಕಾಂಗ್ರೆಸ್ ನ ಆರ್.ಎಲ್.ಜಾಲಪ್ಪ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ಕ್ಷೇತ್ರ ಹೇಗಿದೆ?

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಎಂಟು ಲೋಕಸಭಾ ಕ್ಷೇತ್ರಗಳೊಂದಿಗೆ ಗಡಿಯನ್ನು ಹಂಚಿಕೊಂಡಿದೆ. ಚಿಕ್ಕಬಳ್ಳಾಪುರಕ್ಕೆ ಹೊಂದಿಕೊಂಡಿರುವ ಇತರ ಲೋಕಸಭಾ ಕ್ಷೇತ್ರಗಳು ಹೀಗಿವೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಆಂಧ್ರಪ್ರದೇಶ: ಹಿಂದೂಪುರ, ರಾಜಂಪೇಟೆ. ಈ ಕ್ಷೇತ್ರವು ಆಂಧ್ರಪ್ರದೇಶದೊಂದಿಗೆ ಅಂತರರಾಜ್ಯ ಗಡಿಯನ್ನು ಹಂಚಿಕೊಂಡಿದೆ

ಈ ಕ್ಷೇತ್ರದಲ್ಲಿ ಶೇ.70.1ರಷ್ಟು ಗ್ರಾಮೀಣ ಮತದಾರರಿದ್ದಾರೆ. ಸರಾಸರಿ ಸಾಕ್ಷರತಾ ಪ್ರಮಾಣವು 69.76% – ಮಹಿಳೆಯರಲ್ಲಿ 61.55% ಮತ್ತು ಪುರುಷರಲ್ಲಿ 77.75% ಆಗಿತ್ತು. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಚಿಕ್ಕಬಳ್ಳಾಪುರದ ಜನಸಂಖ್ಯೆ 1255104.

Continue Reading

ಕರ್ನಾಟಕ

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Bangalore Rain: ಬೆಂಗಳೂರಿನಲ್ಲಿ ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇನ್ನು ಹಲವೆಡೆ ಭಾರಿ ಮಳೆಯಿಂದ ಹತ್ತಾರು ಮರಗಳು ಧರೆಗುರುಳಿದ್ದು, ಹಲವು ವಾಹನಗಳು ಜಖಂಗೊಂಡಿವೆ.

VISTARANEWS.COM


on

Bangalore Rain
Koo

ಬೆಂಗಳೂರು: ನಗರದಲ್ಲಿ ಭಾನುವಾರ ರಾತ್ರಿಯೂ ಮಳೆಯ ಅಬ್ಬರ ಮುಂದುವರಿದಿದ್ದು, ಹಲವೆಡೆ ಬಿರುಗಾಳಿ, ಗುಡುಗು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಪ್ರಮುಖ ರಸ್ತೆಗಳು ಜಲಾವೃತವಾಗಿ ವಾಹನ ಸವಾರರು ಪರದಾಡಿದರು. ಇನ್ನು ಕೆಲವು ಕಡೆ ಬೃಹತ್‌ ಮರಗಳು ನೆಲಕ್ಕುರುಳಿದ್ದು, ತಗ್ಗು ಪ್ರದೇಶಗಳಲ್ಲಿನ ಮನೆಗಳಿಗೆ ನೀರು ನುಗ್ಗಿದ್ದರಿಂದ ಜನರು ಪರದಾಡಿದರು.

ತಪ್ಪಿದ ಮತ್ತೊಂದು ದುರಂತ

ಕೆ.ಆರ್. ಸರ್ಕಲ್ ಅಂಡರ್ ಪಾಸ್ ದುರಂತದ ಬಳಿಕ ಮತ್ತೊಂದು ದುರಂತ ತಪ್ಪಿದೆ. ಶೇಷಾದ್ರಿಪುರಂ ಅಂಡರ್ ಪಾಸ್‌ನ ನೀರಿನಲ್ಲಿ ಬಿಎಂಟಿಸಿ ಬಸ್ ಸಿಲುಕಿದ್ದು, 20 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ ಮುಂದೆ ಮೂವ್ ಆಗ್ತಿದ್ದಂತೆ, ಅಪಾಯದ ಮುನ್ಸೂಚನೆ ಅರಿತು ಬಸ್ ಚಾಲಕ ಅಲ್ಲೇ ನಿಲ್ಲಿಸಿದ್ದಾರೆ. ನಂತರ ಬಸ್‌ನಲ್ಲಿದ್ದವರನ್ನು ಸ್ಥಳೀಯ ವ್ಯಕ್ತಿ ಮಣಿಕಂಠ ಹೊರ ಕರೆತಂದಿದ್ದಾರೆ. ಓರ್ವ ವೃದ್ಧೆ, ಇಬ್ಬರು ಮಹಿಳೆಯರು, ಮಗುವನ್ನು ಬಸ್‌ನಿಂದ ರಕ್ಷಣೆ ಮಾಡಲಾಗಿದೆ.

ಅಂಡರ್‌ಪಾಸ್‌ನಲ್ಲಿ ನೀರಿಗೆ ಬಿದ್ದ ಇಬ್ಬರು ಯುವಕರು

ಬಿರುಸಿನ ಮಳೆಯಿಂದ ಕೋರಮಂಗಲ, ಮಡಿವಾಳ, ವಿಲ್ಸನ್ ಗಾರ್ಡನ್, ಡೈರಿ ಸರ್ಕಲ್ ಸುತ್ತಮುತ್ತ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇನ್ನು K.R. ಸರ್ಕಲ್ ಅಂಡರ್ ಪಾಸ್‌ನಲ್ಲಿ ಭಾರಿ ಪ್ರಮಾಣದ ನೀರು ನಿಂತಿದ್ದರಿಂದ ಬ್ಯಾರಿಕೇಡ್ ಹಾಕಿ ಮುಚ್ಚಲಾಗಿತ್ತು. ಹೆಚ್ಚು ನೀರು ಇರುವುದು ತಿಳಿಯದೇ ಬೈಕ್‌ನಲ್ಲಿ ವೇಗವಾಗಿ ಬಂದ ಇಬ್ಬರು ಯುವಕರು ನೀರಿಗೆ ಬಿದ್ದಿದ್ದು, ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.‌

ಮೆಟ್ರೋ ವಯಡಕ್ಟ್ ಮೇಲೆ ಬಿದ್ದ ಮರ

ಸಂಜೆ ಭಾರಿ ಮಳೆಯಿಂದಾಗಿ ಎಂಜಿ ರಸ್ತೆ ಮತ್ತು ಟ್ರಿನಿಟಿ ರೋಡ್‌ ನಿಲ್ದಾಣದ ನಡುವಿನ ವಯಡಕ್ಟ್ ಟ್ರ್ಯಾಕ್‌ನಲ್ಲಿ ಮರ ಬಿದ್ದ ಹಿನ್ನೆಲೆಯಲ್ಲಿ ಎಂಜಿ ರಸ್ತೆ ಮತ್ತು ಇಂದಿರಾನಗರ ನಡುವೆ ರೈಲು ಸೇವೆ ಸ್ಥಗಿತಗೊಂಡಿದೆ. ಆದರೆ, ಇಂದಿರಾನಗರ ಮತ್ತು ವೈಟ್‌ಫೀಲ್ಡ್ ನಡುವೆ ಶಾರ್ಟ್ ಲೂಪ್‌ಗಳು ಚಾಲನೆಯಲ್ಲಿವೆ. ಚಲ್ಲಘಟ್ಟ ಮತ್ತು ಎಂಜಿ ರೋಡ್ ನಡುವೆ
ಉಂಟಾದ ಅನನುಕೂಲತೆ ಬಗ್ಗೆ ಬಿಎಂಆರ್‌ಸಿಎಲ್‌ ವಿಷಾದ ವ್ಯಕ್ತಪಡಿಸಿದೆ.

ನಗರದ ಬನಶಂಕರಿ, ಕುಮಾರಸ್ವಾಮಿ ಲೇಔಟ್, ಎಳಚೇನಹಳ್ಳಿ, ಉತ್ತರಹಳ್ಳಿ, ಪದ್ಮನಾಭ ನಗರ, ಜಯನಗರ, ಪೀಣ್ಯ, ಬನ್ನೇರುಘಟ್ಟ ರಸ್ತೆ, ಮಲ್ಲೇಶ್ವರ, ರೇಸ್ ಕೋರ್ಸ್, ವಿಜಯನಗರ, ಶಾಂತಿನಗರ, ಎಂಜಿ ರೋಡ್, ಕೆ.ಆರ್ ಸರ್ಕಲ್, ಚಾಲುಕ್ಯ ಸರ್ಕಲ್ ಸೇರಿದಂತೆ ಹಲವು ಕಡೆ ಬಿರುಸಿನ ಮಳೆಯಾಗಿದೆ.

ಮರಗಳು ಬಿದ್ದು ಹಲವು ವಾಹನ ಜಖಂ

ಭಾರಿ ಮಳೆಯಿಂದ ಹಲವೆಡೆ ಬೃಹತ್ ಮರಗಳು ಧರೆಗುರುಳಿವೆ. ಜಯನಗರ-ಬನ್ನೇರುಘಟ್ಟ ರಸ್ತೆ, ಪೀಣ್ಯ ಬಳಿ ಮರಗಳು ನೆಲಕ್ಕುರುಳಿವೆ. ಪೀಣ್ಯದ ಅರವಿಂದ ಮೋಟಾರ್ಸ್ ಬಳಿ ಕಾರಿನ ಮೇಲೆ ಮರ ಬಿದ್ದಿದ್ದು, ಕಾರಿನಲ್ಲಿ ಸಿಲುಕಿರುವ ಚಾಲಕನನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಇನ್ನು ಬನ್ನೇರುಘಟ್ಟ ರಸ್ತೆ ವೆಗಾ ಸಿಟಿ ಮಾಲ್ ಬಳಿ ಮರ ಧರೆಗುರುಳಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅದೇ ರೀತಿ ಜಯನಗರದ 4ನೇ ಟಿ ಬ್ಲಾಕ್ ಬಳಿ ಮರ ಧರೆಗುರುಳಿದಿದೆ, ರಾಜಾಜಿನಗರದ ಮಂಜುನಾಥನಗರದಲ್ಲಿ ಮರ ಬಿದ್ದಿದೆ. ಬಸವನಗುಡಿ ರಾಮಕೃಷ್ಣ ಆಶ್ರಮ ಬಳಿ ಮತ್ತು ಕೆಜಿ ರಸ್ತೆ ಪೋತೀಸ್ ಮುಂಭಾಗ ಬೃಹತ್ ಮರ ಧರೆಗಿರುಳಿದೆ. ಹುಳಿಮಾವು ರಸ್ತೆಯಲ್ಲಿ ಮರ ಧರೆಗುರುಳಿದಿದ್ದು, ಪಾನಿಪುರಿ ಅಂಗಡಿ, ಸುಮಾರು 10 ಬೈಕ್‌ಗಳು ಜಖಂಗೊಂಡಿವೆ.

ಇದನ್ನೂ ಓದಿ | Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

ಇನ್ನು ಹಲವು ಕಡೆ ತಗ್ಗು ಪ್ರದೇಶಗಳ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಗೋವಿಂದರಾಜ ನಗರದ ಪಟ್ಟೇಗಾರ ಪಾಳ್ಯದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜೋರಾದ ಮಳೆ ಹಿನ್ನೆಲೆ ಪ್ರಮುಖ ರಸ್ತೆಗಳು ಹೊಳೆಯಂತೆ ಬದಲಾಗಿದ್ದರಿಂದ ಬೈಕ್ ಸವಾರರು ಪರದಾಡಿದರು. ಹಲವೆಡೆ ವಾಹನಗಳು ಕೆಟ್ಟುನಿಂತು ಸವಾರರು ತೊಂದರೆಪಟ್ಟರು.

Continue Reading

ಕೊಪ್ಪಳ

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Koppal Lok Sabha Constituency: ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಹಾಗಾಗಿ, ಕೊಪ್ಪಳದ ಲೋಕಸಭೆ ಚುನಾವಣೆಯು ಕುತೂಹಲ ಕೆರಳಿಸಿದೆ.

VISTARANEWS.COM


on

Koppal Lok Sabha Constituency
Koo

ಕೊಪ್ಪಳ: ಕೊಪ್ಪಳದಲ್ಲಿ ಮಾಜಿ ಶಾಸಕರ ಪುತ್ರರ ನಡುವೆ ಲೋಕಸಭೆ ಚುನಾವಣೆ (Koppal Lok Sabha Constituency) ಸಮರ ನಡೆದಿದ್ದು, ಬದಲಾದ ರಾಜಕೀಯ ವಿದ್ಯಮಾನದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ಕೊಪ್ಪಳ ಮಾಜಿ ಶಾಸಕ ಕೆ. ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ಕೆ. ರಾಜಶೇಖರ್‌ ಹಿಟ್ನಾಳ್‌ (Rajashekar Hitnal) ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿಯಿಂದ ಕುಷ್ಟಗಿ ಮಾಜಿ ಶಾಸಕ ಕೆ. ಶರಣಪ್ಪ ಅವರ ಪುತ್ರ ಡಾ.ಬಸವರಾಜ್‌ ಕ್ಯಾವಟರ್‌ (Dr Basavaraj Kyavator) ಅವರು ಕಣಕ್ಕಿಳಿದಿದ್ದು, ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ಖಂಡಿತವಾಗಿಯೂ ನರೇಂದ್ರ ಮೋದಿ ಅವರ ಅಲೆಯು ಕೆಲಸ ಮಾಡಲಿದೆ. ಆದರೆ, ಟಿಕೆಟ್‌ ವಂಚಿತ ಸಂಗಣ್ಣ ಕರಡಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಬಸವರಾಜ್‌ ಕ್ಯಾವಟರ್‌ ಅವರಿಗೆ ನುಂಗಲಾರದ ತುತ್ತಾಗಿದೆ. ಹಾಗಾಗಿ, ಕೊಪ್ಪಳ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಡಾ.ಬಸವರಾಜ್‌ ಕ್ಯಾವಟರ್‌ ಅವರ ರಾಜಕೀಯ ಅನುಭವದ ಕೊರತೆಯನ್ನು ಪ್ಲಸ್‌ ಪಾಯಿಂಟ್ ಅನ್ನಾಗಿ ಮಾಡಿಕೊಂಡಿದ್ದಾರೆ. ಆದರೂ, ತೀವ್ರ ಪೈಪೋಟಿ ಇದೆ.

ಮತದಾರರ ಸಂಖ್ಯೆ

ಪುರುಷರು9.12 ಲಕ್ಷ
ಮಹಿಳೆಯರು9.38 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು132
ಒಟ್ಟು18.51 ಲಕ್ಷ

2014, 2019ರ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಗಣ್ಣ ಕರಡಿ ವಿರುದ್ಧ ಕಾಂಗ್ರೆಸ್‌ ಮಾಜಿ ಶಾಸಕ ಬಸವರಾಜ್‌ ಹಿಟ್ನಾಳ್‌ ಸೋಲನುಭವಿಸಿದ್ದರು. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ರಾಜಶೇಖರ್‌ ಹಿಟ್ನಾಳ್‌ ಅವರು ಸ್ಪರ್ಧಿಸಿ, ಬಿಜೆಪಿಯ ಸಂಗಣ್ಣ ಕರಡಿ ಅವರ ವಿರುದ್ಧವೇ ಪರಾಭವಗೊಂಡಿದ್ದರು. ಸುಮಾರು 38 ಸಾವಿರ ಮತಗಳಿಂದ ರಾಜಶೇಖರ್‌ ಹಿಟ್ನಾಳ್‌ ಅವರು ಸೋಲನುಭವಿಸಿದ್ದರು. ಈಗ ರಾಜಶೇಖರ್‌ ಹಿಟ್ನಾಳ್‌ ಅವರಿಗೆ ಮೊದಲ ಬಾರಿಗೆ ಸಂಗಣ್ಣ ಕರಡಿಯೇತರ ಕುಟುಂಬದವರು ಎದುರಾಳಿಯಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Continue Reading
Advertisement
Haveri Lok Sabha Constituency
ಹಾವೇರಿ19 mins ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ23 mins ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 202429 mins ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ49 mins ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ1 hour ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ1 hour ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ1 hour ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ2 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Money Guide
ಮನಿ-ಗೈಡ್2 hours ago

Money Guide: ಗೃಹಸಾಲದ ಕಂತು ಪೂರ್ತಿಯಾಯ್ತೆ? ನಿಲ್ಲಿ, ನಿಮ್ಮ ಜವಾಬ್ದಾರಿ ಇನ್ನೂ ಇದೆ!

mandya lok sabha constituency
ಪ್ರಮುಖ ಸುದ್ದಿ2 hours ago

Mandya Lok Sabha Constituency : ಜಿದ್ದಾಜಿದ್ದಿನ ಸ್ಪರ್ಧೆಯಲ್ಲಿ ಕುಮಾರಸ್ವಾಮಿಗೆ ಗೆಲುವು ಸಿಗುವುದೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌