ಕರ್ನಾಟಕ ಎಲೆಕ್ಷನ್
BJP Manifesto : ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿರುವ ಪ್ರಮುಖ 16 ಭರವಸೆಗಳೇನು?
ರಾಜ್ಯ ಬಿಜೆಪಿಯ ಪ್ರಣಾಳಿಕೆ (Karnataka Election BJP Manifesto) ಬಿಡುಗಡೆಯಾಗಿದೆ. ಪ್ರಮುಖವಾಗಿ 16 ಭರವಸೆಗಳನ್ನು ಪಕ್ಷ ನೀಡಿದೆ. ಈ ಭರವಸೆಗಳೇನು ಎಂಬುದನ್ನು ಸಂಕ್ಷಿಪ್ತವಾಗಿ ಇಲ್ಲಿ ನೀಡಲಾಗಿದೆ.
ಬೆಂಗಳೂರು: ಬಿಜೆಪಿಯು ಕರ್ನಾಟಕ ವಿಧಾನಸಭಾ ಚುನಾವಣೆಯ (Karnataka Election 2023) ಪ್ರಣಾಳಿಕೆಯನ್ನು (BJP Manifesto) ಸೋಮವಾರ ಬಿಡುಗಡೆ ಮಾಡಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ( j p nadda) ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸದಾನಂದ ಗೌಡ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಪ್ರಣಾಳಿಕೆಯಲ್ಲಿ ಸರ್ಕಾರದ ಸಾಧನೆಯನ್ನು ವಿವರಿಸುವುದರ ಜತೆಗೆ ಭರವಸೆಗಳನ್ನು ನೀಡಲಾಗಿದೆ. ಬಿಜೆಪಿ ಪ್ರಣಾಳಿಕೆಯು 16 ಮುಖ್ಯ ಭರವಸೆಗಳನ್ನು ಒಳಗೊಂಡಿದೆ. ಈ ಪ್ರಮುಖ ಭರವಸೆಗಳೇನು ಎಂಬ ಮಾಹಿತಿ ಇಲ್ಲಿದೆ;
1. ಬಿಪಿಎಲ್ ಕುಟಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುತ್ತದೆ.
2. ಕೈಗೆಟುಕುವ ದರದಲ್ಲಿ ಗುಣಮಟ್ಟದ ಮತ್ತು ಆರೋಗ್ಯಕರ ಆಹಾರದವನ್ನು ಒದಗಿಸಲು ರಾಜ್ಯದ ಪ್ರತಿ ಮಹಾನಗರ ಪಾಲಿಕೆಯ ವಾರ್ಡ್‌ಗಳಲ್ಲಿ ʻಅಟಲ್ ಆಹಾರ ಕೇಂದ್ರʼ ಸ್ಥಾಪನೆ ಮಾಡಲಾಗುತ್ತದೆ.
3. ಪೋಷಣೆ ಯೋಜನೆಯ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು ಐದು ಕೆಜಿ “ಶ್ರೀ ಅನ್ನ -ಸಿರಿಧಾನ್ಯ”ವನ್ನು ಒಳಗೊಂಡ ಪಡಿತರ ಕಿಟ್ ನೀಡಲಾಗುತ್ತದೆ.
4. ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಾಗುತ್ತದೆ.
5. ರಾಜ್ಯದಾದ್ಯಂತ ನಿವೇಶನ ರಹಿತ/ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆಯಡಿ ಹತ್ತು ಲಕ್ಷ ವಸತಿ ನಿವೇಶನಗಳನ್ನು ಕಂದಾಯ ಇಲಾಖೆ ಮೂಲಕ ಹಂಚಿಕೆ ಮಾಡುತ್ತೇವೆ.
ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತಿರುವ ಜೆ ಪಿ ನಡ್ಡಾ
6. ʻಒನಕೆ ಓಬವ್ವ ಸಾಮಾಜಿಕ ನ್ಯಾಯ ನಿಧಿʼ ಯೋಜನೆಯನ್ನು ಪ್ರಾರಂಭಿಸಲಾಗುತ್ತದೆ. ಈ ಯೋಜನೆಯಡಿ ಎಸ್‌ಸಿ/ಎಸ್‌ಟಿ ಸಮುದಾಯದ ಮಹಿಳೆಯರು ಐದು ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ ಹತ್ತು ಸಾವಿರದವರೆಗೆ ಠೇವಣಿ ನೀಡಲಾಗುತ್ತದೆ.
7. ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ ಸುಲಲಿತ ಜೀವನಕ್ಕೆ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲಿಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿಗಳನ್ನು ತರಲಾಗುತ್ತದೆ. ಕುಂದುಕೊರತೆಗಳ ಪರಿಹಾರಕ್ಕೆ ಆನ್‌ಲೈನ್ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲಾಗುತ್ತದೆ.
8. ವಿಶ್ವೇಶ್ವರಯ್ಯ ವಿದ್ಯಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳನು ಅತ್ಯುನ್ನತ ಶ್ರೇಣಿಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ ಹೊಂದಲಾಗುತ್ತದೆ.
9. ಸಮನ್ವಯ ಯೋಜನೆ ಇದರಡಿ ತ್ವರಿತಗತಿಯಲ್ಲಿ ಎಸ್‌ಎಂಇಗಳು ಮತ್ತು ಐಟಿಐಗಳ ನಡುವೆ ಸಮನ್ವಯತೆ ಸಾಧಿಸಲಾಗುತ್ತದೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗುತ್ತದೆ.
10. ಐಎಎಸ್/ಕೆಎಎಸ್/ಬ್ಯಾಂಕಿಂಗ್/ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವಜನರಿಗೆ ವೃತ್ತಿ ಬೆಂಬಲವನ್ನು ಒದಗಿಸಲಾಗುತ್ತದೆ.
11. ಮಿಷನ್ ಸ್ವಾಸ್ಥ್ಯ ಕರ್ನಾಟಕದ ಅಡಿ ಸರ್ಕಾರಿ ಆಸ್ಪತ್ರೆ/ ಆರೋಗ್ಯ ಕೇಂದ್ರಗಳಲ್ಲಿನ ಮೂಲ ಸೌಕರ್ಯಗಳನ್ನು ಸುಧಾರಿಸಲಾಗುತ್ತದೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಲ್ಯಾಬೊರೇಟರಿ ಸೌಕರ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪನೆ. ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆಯ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ.
12. ರಾಜಧಾನಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು ʻರಾಜ್ಯ ರಾಜಧಾನಿ ಪ್ರದೇಶʼ ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ-ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸಲಾಗುತ್ತದೆ. ಸುಲಲಿತ ಜೀವನಕ್ಕೆ ಅನುವು ಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸಲಾಗುತ್ತದೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನೋವೇಷನ್‌ನ ಜಾಗತಿಕ ಕೇಂದ್ರವಾಗಿ ರೂಪಿಸಲಾಗುತ್ತದೆ. ಇದಕ್ಕೆ ಪೂರಕ ಪರಿಸರ ವ್ಯವಸ್ಥೆ ಕಲ್ಪಿಸಲಾಗುತ್ತದೆ.
13. ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಲಾಗುತ್ತದೆ. ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ. ಹಾಲಿ ಇರುವ ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟ್ರಿಕಲ್ ಬಸ್‌ಗಳಾಗಿ ಪರಿವರ್ತನೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ ʻಇವಿ ಸಿಟಿʼ ಅಭಿವೃದ್ಧಿ.
14. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳ ಸ್ಥಾಪನೆ. ಇದಕ್ಕಾಗಿ 30 ಸಾವಿರ ಕೋಟಿ ಮೊತ್ತದ ಕೆ-ಅಗ್ರಿಫಂಡ್ ಸ್ಥಾಪನೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ. ಕೃಷಿ ಯಾಂತ್ರೀಕರಣಕ್ಕೆ ಒತ್ತು. ಜತೆಗೆ ಐದು ಹೋಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳ ಮತ್ತು ಮೂರು ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳ ಸ್ಥಾಪನೆ.
ಬಿಜೆಪಿಯ ಪ್ರಣಾಳಿಕೆ ಇಲ್ಲಿದೆ;
15. ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್, ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್, ಗಾಣಗಾಪುರ ಕಾರಿಡಾರ್ ಅಭಿವೃದ್ಧಿ. ಇದಕ್ಕಾಗಿ 1500ಕೋಟಿ ರೂ. ವಿನಿಯೋಗ.
ಇದನ್ನೂ ಓದಿ: BJP Manifesto: ಎನ್‌ಆರ್‌ಸಿ, ಏಕರೂಪ ನಾಗರಿಕ ಸಂಹಿತೆ ಜಾರಿ; ಪ್ರಜಾ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ
16. ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್, ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ ಉತ್ಪಾದನಾ ಆಧಾರಿತ ಪ್ರೋತ್ಸಾಹ ಯೋಜನೆಯ ವ್ಯಾಪ್ತಿಯ ವಿಸ್ತರಣೆ.
ಕರ್ನಾಟಕ
Karnataka Cabinet: 34 ಸಚಿವರ ಪೈಕಿ 16 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್, ನಂ.1 ಸ್ಥಾನದಲ್ಲಿ ಯಾರಿದ್ದಾರೆ?
Karnataka Cabinet: ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟವು ಶನಿವಾರ ಅಸ್ತಿತ್ವಕ್ಕೆ ಬಂದಿದೆ. 34 ಸಚಿವರ ಪೈಕಿ 16 ಸಚಿವರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ.
ಬೆಂಗಳೂರು, ಕರ್ನಾಟಕ: ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರದಲ್ಲಿ ಎಲ್ಲ ಮಂತ್ರಿ ಸ್ಥಾನಗಳ್ನು (Karnataka Cabinet) ಭರ್ತಿ ಮಾಡಲಾಗಿದೆ. ಕಳೆದ ವಾರ 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರೆ, ನಿನ್ನೆ ಮತ್ತೆ 24 ಶಾಸಕರು ಸಚಿವರಾಗಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಂತಾಗಿದೆ. ಈ ಮಧ್ಯೆ, ಸಿದ್ದರಾಮಯ್ಯ ಸಂಪುಟದಲ್ಲಿರುವ ಸಚಿವರ ಪೈಕಿ ಅಂದರೆ, 34 ಸಚಿವರ ಪೈಕಿ 16 ಜನರು ಕ್ರಿಮಿನಲ್ ಪ್ರಕರಣಗಳನ್ನು (Criminal Cases) ಎದುರಿಸುತ್ತಿದ್ದಾರೆ. ಎಡಿಆರ್ (ADR) ಈ ಮಾಹಿತಿಯನ್ನು ಹೊರ ಹಾಕಿದೆ.
ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕರಾಗಿರುವ ಸಚಿವ ಬಿ ನಾಗೇಂದ್ರ ಅವರ 42 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಮತ್ತು ಈ ಪಟ್ಟಿಯಲ್ಲಿ ಅವರೇ ಅಗ್ರಸ್ಥಾನಿಯಾಗಿದ್ದಾರೆ. ನಾಗೇಂದ್ರ ನಂತರದ ಸ್ಥಾನದಲ್ಲಿ ಉಪ ಮುಖ್ಯಂತ್ರಿಯಾಗಿರುವ ಡಿ ಕೆ ಶಿವಕುಮಾರ್ ಅವರಿದ್ದು, 19 ಕ್ರಿಮಿನಲ್ ಪ್ರಕ್ರಣಗಳ ವಿಚಾರಣೆ ನಡೆಯುತ್ತಿದೆ. ನಾಗೇಂದ್ರ ಅವರ ವಿರುದ್ಧ ಪ್ರಕರಣಗಳಲ್ಲಿ 21 ಪ್ರಕರಣಗಳು ಲೋಕಾಯುಕ್ತ ಮುಂದಿವೆ. ಉಳಿದ ಪ್ರಕರಣಗಳು ಸಿಬಿಐ, ಸಿಐಡಿಗಳ ಮುಂದಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೂಡ 13 ಪ್ರಕರಣಗಳಿವೆ. ಕಾನೂನು ಬಾಹಿರ ಸಭೆ, ಚುನಾವಣೆ ಮೇಲೆ ಪ್ರಭಾವ ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳಿವೆ. ಜಮೀರ್ ಖಾನ್ ಅವರು ವಿರುದ್ಧ 6 ಗಂಭೀರ ಪ್ರಕರಣಗಳಿವೆ. ಇನ್ನುಳಿದಂತೆ ಪ್ರಿಯಾಂಕ್ ಖರ್ಗೆ(9), ಈಶ್ವರ್ ಖಂಡ್ರೆ(7), ಎಂ ಬಿ ಪಾಟೀಲ್(5), ರಾಮಲಿಂಗಾ ರೆಡ್ಡಿ(4), ಡಾ. ಜಿ ಪರಮೇಶ್ವರ್(3), ಎಚ್ ಕೆ ಪಾಟೀಲ್ (2), ಡಿ ಸುಧಾಕರ್ (2), ಸತೀಶ್ ಜಾರಕಿಹೊಳಿ (2), ಕೃಷ್ಣ ಭೈರೇಗೌಡ (1), ಎನ್ ಚಲುವರಾಯಸ್ವಾಮಿ (1), ಕೆ ಎಚ್ ಮುನಿಯಪ್ಪ (1) ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ.
ಇದನ್ನೂ ಓದಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ: ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ 24 ಶಾಸಕರಿಗೆ ಸಚಿವ ಸ್ಥಾನ, ಮತ್ತೆ ಸಿದ್ದು ಮೇಲುಗೈ
ಅಸೋಶಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(Association for Demorcatic Reforms- ADR) ಈ ಮಾಹಿತಿಯನ್ನು ಹೊರ ಹಾಕಿದೆ. ಚುನಾವಣಾ ವೇಳೆ ಆಯೋಗಕ್ಕೆ ಸಲ್ಲಿಸಲಾದ ಅಫಿಡವಿಟ್‌ಗಳ ಮೂಲಕ ಈ ಪಟ್ಟಿಯನ್ನು ರಚಿಸಲಾಗಿದೆ.
ಕರ್ನಾಟಕ ರಾಜಕೀಯದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
Karnataka Cabinet Expansion: ಸರ್ಕಾರ ಟೇಕಾಫ್ ಆದ ಬೆನ್ನಲ್ಲೇ ಅಸಮಾಧಾನದ ಹೊಗೆ; ಖಾತೆ ಬದಲಿಸಿದ ಸಿದ್ದು
Karnataka Cabinet Expansion: ಸಿದ್ದರಾಮಯ್ಯ ಅವರು ಸಿಎಂ ಆಗಿ, ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ಸರ್ಕಾರ ಟೇಕಾಫ್ ಆಯಿತು ಎನ್ನುವಷ್ಟರಲ್ಲಿಯೇ ಸಚಿವರಿಗೆ ನೀಡಲಾದ ಖಾತೆ ಬಗ್ಗೆ ಅಸಮಾಧಾನ ಶುರುವಾಗಿದೆ. ಹಾಗಾಗಿ, ಕೆಲ ಖಾತೆಗಳನ್ನು ಸಿದ್ದರಾಮಯ್ಯ ಅವರು ಬದಲಾಯಿಸಿದ್ದಾರೆ.
ಬೆಂಗಳೂರು: ‘ಮಳೆ ನಿಂತರೂ ಮಳೆ ಹನಿ ನಿಲ್ಲಲಿಲ್ಲ’ ಎಂಬ ಮಾತಿನಂತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು, ಕಾಂಗ್ರೆಸ್ ಗೆಲುವು ಸಾಧಿಸಿ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ, ಸಚಿವ ಸಂಪುಟ ಸಭೆ ವಿಸ್ತರಣೆಯಾದರೂ ಪಕ್ಷದಲ್ಲಿ ಆಂತರಿಕ ಗೊಂದಲ, ಅಸಮಾಧಾನ ಮಾತ್ರ ನಿಂತಿಲ್ಲ. ಖಾತೆ ಹಂಚಿಕೆ ಬಳಿಕವೂ ಸಚಿವರ ಮಧ್ಯೆಯೇ ಅಸಮಾಧಾನದ ಹೊಗೆ ಜಾಸ್ತಿಯಾದ ಕಾರಣ ರಾತ್ರೋರಾತ್ರಿ ಸಿದ್ದರಾಮಯ್ಯ ಅವರು ಖಾತೆಗಳನ್ನು ಬದಲಾವಣೆ ಮಾಡಿದ್ದಾರೆ.
ಹೌದು, ಎಂ.ಸಿ.ಸುಧಾಕರ್ ಅವರಿಗೆ ನೀಡಿದ್ದ ವೈದ್ಯಕೀಯ ಶಿಕ್ಷಣ ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಲಾಗಿದೆ. ಇನ್ನು ಶರಣ ಪ್ರಕಾಶ್ ಪಾಟೀಲ್ ಅವರಿಗೆ ನೀಡಿದ್ದ ಉನ್ನತ ಶಿಕ್ಷಣ ಖಾತೆಯನ್ನು ಎಂ.ಸಿ.ಸುಧಾಕರ್ ಅವರಿಗೆ ನೀಡಿ ಸಮಾಧಾನ ಮಾಡಿದ್ದಾರೆ. ಹಾಗೆಯೇ, ಪ್ರಿಯಾಂಕ್ ಖರ್ಗೆ ಅವರಿಗೆ ಪಂಚಾಯತ್ ರಾಜ್ ಜತೆಗೆ ಐಟಿಬಿಟಿ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಕಾನೂನು ಸಂಸದೀಯ ಜತೆಗೆ ಪ್ರವಾಸೋದ್ಯಮ ಖಾತೆಯನ್ನು ಎಚ್.ಕೆ.ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದೆ. ಬೋಸರಾಜು ಅವರಿಗೆ ಸಣ್ಣ ನೀರಾವರಿ ಖಾತೆ ಜತೆಗೆ ವೈಜ್ಞಾನ ಮತ್ತು ತಂತ್ರಜ್ಞಾನ ಖಾತೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಮತ್ತೊಂದೆಡೆ, ಡಾ.ಜಿ.ಪರಮೇಶ್ವರ್ ಅವರಿಗೆ ಗೃಹ ಖಾತೆಯನ್ನು ನಿರ್ವಹಣೆ ಮಾಡಲು ಇಷ್ಟವಿಲ್ಲ. ರಾಮಲಿಂಗಾರೆಡ್ಡಿ ಅವರಿಗೆ ಸಾರಿಗೆ ಖಾತೆ ಸುತಾರಾಂ ಬೇಕಾಗಿಲ್ಲ. ಇವರಿಬ್ಬರು ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿರುವುದು ಸಿದ್ದರಾಮಯ್ಯ ಅವರಿಗೆ ತಲೆನೋವು ತಂದಿದೆ. ಹಾಗಾಗಿಯೇ, ಸಚಿವರು ಹಾಗೂ ಅವರ ಖಾತೆ ಕುರಿತ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲು ವಿಳಂಬವಾಗಿದೆ ಎಂದು ತಿಳಿದುಬಂದಿದೆ.
ಇಲ್ಲಿದೆ ಸಚಿವರು ಹಾಗೂ ಅವರ ಖಾತೆಗಳ ಅಂತಿಮ ಪಟ್ಟಿ
ಮೂಲ-ವಲಸಿಗ ಜಗಳ
ಸಚಿವ ಸಂಪುಟ ವಿಸ್ತರಣೆ ನಂತರ ಸಚಿವರಲ್ಲಿ ಅಸಮಾಧಾನದ ಜತೆಗೆ ಕಾಂಗ್ರೆಸ್‌ನಲ್ಲಿ ಮತ್ತೆ ಮೂಲ ಹಾಗೂ ವಲಸಿಗ ಜಗಳ ಆರಂಭವಾಗಿದೆ. ಅತ್ಯಂತ ಹಿರಿಯ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷ ನಾಯಕನಾಗಿ ಕೆಲಸ ಮಾಡಿದ್ದರೂ ಸಚಿವ ಸ್ಥಾನ ಸಿಗದೇ ಇರುವ ಬಗ್ಗೆ ಬಿ.ಕೆ. ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಮುಖವಾಗಿ ʼಹೊರಗಿನಿಂದ ಬಂದʼ ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ.
ಇದನ್ನೂ ಓದಿ: Karnataka Cabinet expansion: ಸಂಪುಟದಲ್ಲಿನ್ನು ಸೀಟಿಲ್ಲ; ನಾಯಕರ, ಬೆಂಬಲಿಗರ ಆಕ್ರೋಶಕ್ಕೆ ಬೆಲೆ ಇಲ್ಲ
ಸಚಿವ ಸ್ಥಾನ ಮಿಸ್ ಆದ ಕುರಿತು ಮಾತನಾಡಿದ ಹರಿಪ್ರಸಾದ್, ಸಿಎಂ ಏನು ಬೇಕೋ ಹಾಗೆ ಮಾಡಿಕೊಂಡಿದ್ದಾರೆ. ಸಭಾ ನಾಯಕನಿಗೆ ಸಚಿವ ಸ್ಥಾನ ನೀಡುವ ಪದ್ಧತಿ, ಸಂಪ್ರದಾಯ ಇತ್ತು. ಸಿಎಂ ಅದನ್ನು ಈಗ ಬದಲಾಯಿಸಿದ್ದಾರೆ. ಅಷ್ಟಕ್ಕೂ ನನ್ನನ್ನು ಮಂತ್ರಿ ಮಾಡಿ ಎಂದು ಯಾರಲ್ಲೂ ಕೇಳಿಕೊಂಡಿರಲಿಲ್ಲ. ಎಲ್ಲಿಯವರೆಗೂ ಹೇಳುತ್ತಾರೋ ಅಲ್ಲಿಯವರೆಗೂ ನಾನು ಇರುತ್ತೇನೆ ಎಂದರು. ಮತ್ತೊಂದೆಡೆ, ಖಾತೆ ಸಿಗದ ಕಾರಣ ಟಿ.ಬಿ.ಜಯಚಂದ್ರ ಅವರೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ
New Parliament Building: ಸಂಸತ್ ಭವನ ಉದ್ಘಾಟನೆ ಬಹಿಷ್ಕಾರ ನಾಚಿಕೆಗೇಡಿನ ಸಂಗತಿ: ಎನ್. ರವಿಕುಮಾರ್
New Parliament Building: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿರುವ ಮೂಲಕ ಕಾಂಗ್ರೆಸ್ ಸೇರಿ ಕೆಲ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹೇಳಿದ್ದಾರೆ.
ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಶುಭ ಸಂದರ್ಭದಲ್ಲಿ ಮೇ 28ರಂದು ನವದೆಹಲಿಯಲ್ಲಿ ನೂತನ ಸಂಸತ್ ಭವನವನ್ನು ಕೇಂದ್ರ ಸರ್ಕಾರವು ಉದ್ಘಾಟನೆ (New Parliament Building) ಮಾಡುತ್ತಿದೆ. ಆದರೆ, ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ಕಾಂಗ್ರೆಸ್ ಸೇರಿ ಕೆಲ ವಿರೋಧ ಪಕ್ಷಗಳು ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್‌ಸಿ ಎನ್.ರವಿಕುಮಾರ್ ತಿಳಿಸಿದ್ದಾರೆ.
ಅಲ್ಲದೇ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ ಅವರ ಜನ್ಮದಿನದಂದು ನೂತನ ಸಂಸತ್ ಉದ್ಘಾಟನೆಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಸ್ವಾತಂತ್ರ್ಯ ನಂತರ ಭಾರತದಲ್ಲಿ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಹಲವು ನಾಯಕರು ಸಂಸತ್ತಿನಲ್ಲಿ ಕುಳಿತು ದೇಶವನ್ನು ಮುನ್ನಡೆಸಬೇಕಿತ್ತು, ವಿಪರ್ಯಾಸವೆಂದರೆ ನೆಹರು ಕುಟುಂಬಸ್ಥರು ಇಡೀ ದೇಶವನ್ನೇ ತಮ್ಮ ಕುಟುಂಬದ ಸುಪರ್ದಿಗೆ ನೀಡುವ ಮೂಲಕ ಸಂಸತ್ತನ್ನು ತಮ್ಮ ಕುಟುಂಬಕ್ಕೆ ಸೀಮಿತ ಮಾಡಿಬಿಟ್ಟರು ಎಂದು ಕಿಡಿ ಕಾರಿದ್ದಾರೆ.
ಕೇಂದ್ರ ಸರ್ಕಾರದ ಪ್ರತಿಯೊಂದು ಯೋಜನೆಯ ಬಗ್ಗೆ ಕಾಲು ಕೆರೆದುಕೊಂಡು ಜಗಳಕ್ಕೆ ನಿಲ್ಲುವ ಕಾಂಗ್ರೆಸ್, ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದೆ. ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯವರನ್ನು ಆಹ್ವಾನಿಸಿಲ್ಲವೆಂದು ಆರೋಪ ಮಾಡುತ್ತಾ ರಾಜಕೀಯ ದ್ವೇಷ ಸಾಧಿಸುತ್ತಿರುವುದು ಸರಿಯಲ್ಲ. ಈ ಹಿಂದೆ 1987ರಲ್ಲಿ ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಸಂಸತ್ತಿನ ನೂತನ ಗ್ರಂಥಾಲಯ ಉದ್ಘಾಟನೆಯನ್ನು ಅವರೇ ಮಾಡಿದ್ದರು, ಅಂದಿನ ರಾಷ್ಟ್ರಪತಿಗಳಿಗೆ ಕೂಡ ಆಹ್ವಾನವಿರಲಿಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ | New Parliament Building: ರಾಜಸ್ಥಾನದ ಶಿಲೆ, ಮಹಾರಾಷ್ಟ್ರದ ತೇಗದ ಮರ; ವೈವಿಧ್ಯತೆಯಲ್ಲಿ ಏಕತೆಯ ಸಂಕೇತ ಈ ಸಂಸತ್ ಭವನ
ಇನ್ನು 2010ರಲ್ಲಿ ಸೋನಿಯಾ ಗಾಂಧಿ ಅವರು ‘ಅಟಲ್ ಟನೆಲ್’ಗೆ ಭೂಮಿ ಪೂಜೆ ಮಾಡಿದ್ದರು. ಕೇಂದ್ರ ಸರ್ಕಾರದ ಯೋಜನೆಯೊಂದಕ್ಕೆ ಭೂಮಿ ಪೂಜೆ ಮಾಡಲು ಸೋನಿಯಾ ಗಾಂಧಿ ಯಾಕೆ ಬರಬೇಕಿತ್ತು? 2009ರಲ್ಲಿ ಮುಂಬೈ ನಗರದ ‘ಬಾಂದ್ರಾ ಮತ್ತು ವರ್ಲಿ’ ಸೀ ಲಿಂಕ್ ಉದ್ಘಾಟನೆಯನ್ನು ಸೋನಿಯಾ ಗಾಂಧಿ ಅವರು ಮಾಡಿದ್ದರು. ತನ್ನ ಅಧಿಕಾರಾವಧಿಯಲ್ಲಿ ಜಾರಿಗೆ ತಂದಿರುವ ಅಷ್ಟೂ ಯೋಜನೆಗಳಿಗೆ ತಮ್ಮ ಕುಟುಂಬ ಸದಸ್ಯರ ಹೆಸರನ್ನೇ ಬಳಸಿಕೊಂಡಿರುವ ನೆಹರು ಕುಟುಂಬದ ಕುಡಿಗಳು ಈಗ ಸೆಂಟ್ರಲ್ ವಿಸ್ಟಾ ಬಗ್ಗೆ ಈಗ ಮಾತನಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಅಲ್ಲದೇ ಪಕ್ಕದ ರಾಜ್ಯವಾದ ತೆಲಂಗಾಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರು ಹೈದರಾಬಾದ್‌ನಲ್ಲಿ ನೂತನ ಸಚಿವಾಲಯ ಉದ್ಘಾಟನೆಗೆ ತೆಲಂಗಾಣದ ‘ರಾಜ್ಯಪಾಲ’ರನ್ನೂ ಆಹ್ವಾನಿಸಿರಲಿಲ್ಲ, ಆದರೆ ಈಗ ಸೆಂಟ್ರಲ್ ವಿಸ್ಟಾ ಉದ್ಘಾಟನೆಗೆ ರಾಷ್ಟ್ರಪತಿಗಳು ಬರದಿರುವುದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
1947 ರಲ್ಲಿ ಬ್ರಿಟಿಷರು ಭಾರತಕ್ಕೆ ಅಧಿಕಾರ ಹಸ್ತಾಂತರಿಸಿದ ಸಂದರ್ಭದಲ್ಲಿ ಮೊದಲ ಪ್ರಧಾನಮಂತ್ರಿಯಾಗಿದ್ದ ನೆಹರು ಅವರಿಗೆ ನೀಡಿದ್ದ ತಮಿಳುನಾಡಿನ ‘ಸೆಂಗೋಲ್’ ಅನ್ನು ನೂತನ ಸಂಸತ್ತಿನಲ್ಲಿ ಸ್ಪೀಕರ್ ಕುರ್ಚಿ ಬಳಿ ಇಡುತ್ತಿರುವುದು ಮತ್ತೊಂದು ವಿಶೇಷ. ಬ್ರಿಟಿಷರಿಂದ ಅಧಿಕಾರ ಹಸ್ತಾಂತರವಾಗಿದ್ದರೂ ಅವರು ಕಟ್ಟಿಸಿದ್ದ ಸಂಸತ್ತಿನಿಂದ ನಾವು ಹೊರಬಂದಿರಲಿಲ್ಲ. ಬ್ರಿಟಿಷರ ಮನಸ್ಥಿತಿಯನ್ನೇ ತೋರುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಭಾರತೀಯರೇ ನಿರ್ಮಾಣ ಮಾಡಿರುವ ನೂತನ ಸಂಸತ್ ಕಟ್ಟಡ ಇಷ್ಟವಿಲ್ಲ ಎಂದು ಆರೋಪಿಸಿದರು.
ಇದನ್ನೂ ಓದಿ | New Parliament Building: ಸೆಂಗೋಲ್ ಎಂಬ ರಾಜದಂಡ ಸ್ವಾತಂತ್ರ್ಯದ ಸಂಕೇತ; ಪ್ರತಿಷ್ಠಾಪನೆಗೆ ಕಾರಣ ತಿಳಿಸಿದ ಮೋದಿ
ನೂತನ ಸಂಸತ್ ಭವನದ ಉದ್ಘಟನಾ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಭಾಗವಹಿಸುತ್ತಿರುವುದು ಸಂತೋಷದ ಸಂಗತಿ. ಆದರೆ ಇಲ್ಲಸಲ್ಲದ ನೆಪವೊಡ್ಡಿ ಸೆಂಟ್ರಲ್ ವಿಸ್ಟಾ ಉದ್ಘಾಟನೆಯ ಕಾರ್ಯಕ್ರಮವನ್ನು ಕೆಲ ವಿರೋಧ ಪಕ್ಷಗಳು ಬಹಿಷ್ಕರಿಸುವುದಾಗಿ ಹೇಳಿರುವುದು ಸರಿಯಲ್ಲ. ಸಂಸತ್ ಭವನ ಕೇವಲ ಕಟ್ಟಡವಲ್ಲಿ ಅದು ದೇಶದ ಪ್ರಜಾಪ್ರಭುತ್ವ ಎಂಬುದನ್ನು ವಿರೋಧಪಕ್ಷಗಳು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ಕರ್ನಾಟಕ
Praveen Nettaru: ಆಕ್ರೋಶದ ಬೆನ್ನಲ್ಲೇ ಔದಾರ್ಯ ಮೆರೆದ ಸಿದ್ದರಾಮಯ್ಯ; ನೆಟ್ಟಾರು ಪತ್ನಿ ಮರುನೇಮಕಕ್ಕೆ ನಿರ್ಧಾರ
Praveen Nettaru: ವಿಶೇಷ ಪ್ರಕರಣವೆಂದು ಪರಿಗಣಿಸಿ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಗ್ರೂಪ್ ಸಿ ಹುದ್ದೆಗೆ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.
ಬೆಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿಯನ್ನು (Praveen Nettaru) ಗ್ರೂಪ್ ಸಿ ಹುದ್ದೆಗೆ ಮರುನೇಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹೊಸ ಸರ್ಕಾರ ರಚನೆಯಾದ ಬೆನ್ನಲ್ಲೇ ಬೊಮ್ಮಾಯಿ ಸರ್ಕಾರದಲ್ಲಿ ನೇಮಕ ಮಾಡಿದ್ದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು. ಇದಕ್ಕೆ ಬಿಜೆಪಿ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ರಾಜ್ಯ ಸರ್ಕಾರ ಮರು ನೇಮಕ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಆದರೂ ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
— Siddaramaiah (@siddaramaiah) May 27, 2023
ಇದನ್ನು… pic.twitter.com/Y3hz7EVTVi
ಇದನ್ನೂ ಓದಿ | Karnataka Cabinet: ಕಾಂಗ್ರೆಸ್‌ನಲ್ಲಿ ಮತ್ತೆ ಶುರುವಾಯಿತು ಮೂಲ-ವಲಸಿಗ ಜಗಳ: ಸಿಎಂ ವಿರುದ್ಧ ಹರಿಪ್ರಸಾದ್ ಪ್ರಹಾರ
ಬೊಮ್ಮಾಯಿ ಸರ್ಕಾರದಲ್ಲಿ ಗ್ರೂಪ್ ಸಿ ಹುದ್ದೆ
ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬಳಿಕ ಮಾನವೀಯ ದೃಷ್ಟಿಯಿಂದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಕುಮಾರಿಗೆ ಬೊಮ್ಮಾಯಿ ಸರ್ಕಾರವು ತಾತ್ಕಾಲಿಕ ನೆಲೆಯ ನೇಮಕಾತಿ ಮಾಡಿತ್ತು. ಮೊದಲಿಗೆ ಮುಖ್ಯಮಂತ್ರಿ ಸಚಿವಾಲಯದಲ್ಲಿ ಉದ್ಯೋಗ ನೀಡಲಾಗಿತ್ತು. ಗ್ರೂಪ್ ಸಿ ಹುದ್ದೆಗೆ ನೇಮಕಗೊಳಿಸಿ, 30,350 ರೂ. ವೇತನ ನಿಗದಿಪಡಿಸಲಾಗಿತ್ತು. ನಂತರ ನೂತನ ಕುಮಾರಿ ಅಪೇಕ್ಷೆ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯ ಪ್ರಾಕೃತಿಕ ವಿಕೋಪ ವಿಭಾಗದಲ್ಲಿ ಕೆಲಸ ಮಾಡಲು ಅನುಮತಿ ನೀಡಲಾಗಿತ್ತು.
ಈ ಹುದ್ದೆಯ ಅವಧಿಯು ಈ ಹಿಂದಿನ ಮುಖ್ಯಮಂತ್ರಿಗಳ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ನೇಮಿಸಲಾಗಿತ್ತು. ಈಗ ಹೊಸ ಸರ್ಕಾರ ರಚನೆಯಾಗಿರುವುದರಿಂದ ಕೆಲಸದ ಅವಧಿ ಮುಕ್ತಾಯವಾಗಿತ್ತು. ಹೀಗಾಗಿ ಪ್ರವೀಣ್ ನೆಟ್ಟಾರು (Praveen Nettaru) ಪತ್ನಿ ನೂತನ ಕುಮಾರಿಯನ್ನು ಕೆಲಸದಿಂದ ವಜಾ ಮಾಡಲಾಗಿತ್ತು.
2022ರ ಸೆ. 22ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಲಾಗಿತ್ತು. ಹೊಸ ಸರ್ಕಾರ ಬಂದ ಕೂಡಲೇ ನೆಟ್ಟಾರ್ ಪತ್ನಿಯನ್ನು ಕೆಲಸದಿಂದ ವಜಾ ಮಾಡಿದ್ದರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಈಗ, ನೂತನ ಕುಮಾರಿ ಮರು ನೇಮಕಕ್ಕೆ ನಿರ್ಧರಿಸಿದೆ.
-
ಕರ್ನಾಟಕ23 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ23 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ22 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ17 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್13 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ6 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ14 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER4 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?