Site icon Vistara News

BY Vijayendra : ನ.16ರ ಬಿಜೆಪಿ ಸಮಾವೇಶ ಮುಂದಕ್ಕೆ; ಈ ಮಾಸಾಂತ್ಯಕ್ಕೆ ಸಭೆ, ನಡ್ಡಾ ಆಗಮನ

JP Nadda and BY Vijayendra

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ (BJP State President) ಸ್ಥಾನಕ್ಕೆ ಆಯ್ಕೆಯಾಗಿರುವ ಬಿ.ವೈ. ವಿಜಯೇಂದ್ರ (BY Vijayendra) ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಅಲ್ಪ ಮಟ್ಟಿನ ಬದಲಾವಣೆಯನ್ನು ಮಾಡಲಾಗಿದೆ. ನ. 15ರಂದು ಪಕ್ಷದ ಕಚೇರಿಯಲ್ಲಿ ಬಿ.ವೈ. ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮ ಮಾತ್ರ ನಿಗದಿಯಾಗಿದೆ. ಆದರೆ, ನವೆಂಬರ್ 16ರಂದು ಅರಮನೆ ಮೈದಾನದಲ್ಲಿ ನಡೆಯಬೇಕಿದ್ದ ರಾಜ್ಯ ಬಿಜೆಪಿ (BJP Karnataka) ಕಾರ್ಯಕರ್ತರ ಸಮಾವೇಶವು ಮುಂದೂಡಿಕೆ ಆಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (JP Nadda) ಅವರ ಆಗಮನ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ವಿಧಾನ ಪರಿಷತ್‌ ಸದಸ್ಯ ಎನ್. ರವಿಕುಮಾರ್‌, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಸಮಾವೇಶಕ್ಕೆ ಬರುವುದಾಗಿ ಅವರು ಒಪ್ಪಿಗೆ ಕೊಟ್ಟಿದ್ದಾರೆ. ಹೀಗಾಗಿ ನ. 23ರ ಬಳಿಕ 30ರ ಒಳಗೆ ಬೃಹತ್‌ ಸಾರ್ವಜನಿಕ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.‌

ಇದನ್ನೂ ಓದಿ: BY Vijayendra : ಬಿ.ವೈ. ವಿಜಯೇಂದ್ರ 3 ವರ್ಷಕ್ಕೆ ಅಧ್ಯಕ್ಷ, ನಂತರ ಮತ್ತೊಬ್ಬರು ಎಂದ ಪ್ರಲ್ಹಾದ್‌ ಜೋಶಿ

ನವೆಂಬರ್ 23ಕ್ಕೆ ತೆಲಂಗಾಣ ಹೊರತುಪಡಿಸಿ ಉಳಿದ ರಾಜ್ಯಗಳ ಚುನಾವಣೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ನಮ್ಮ ವರಿಷ್ಠರಾದ ಅಮಿತ್ ಶಾ ಹಾಗೂ ಜೆ.ಪಿ. ನಡ್ಡಾ ಅವರಿಗೂ ಆಹ್ವಾನ ಕೊಡಲಾಗುತ್ತದೆ. ಹೀಗಾಗಿ ನ. 15ರಂದು ಪಕ್ಷದ ಕಚೇರಿಯಲ್ಲಿ ಬಿ.ವೈ. ವಿಜಯೇಂದ್ರ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮಾತ್ರವೇ ಇರುತ್ತದೆ ಎಂದು ರವಿಕುಮಾರ್‌ ಸ್ಪಷ್ಟನೆ ನೀಡಿದರು.

10 ಗಂಟೆಗೆ ಅಧಿಕಾರ ಸ್ವೀಕಾರ!

ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮೀಜಿ ಗದ್ದುಗೆಗೆ ತೆರಳಿ ಪೂಜೆ ನೆರವೇರಿಸಿದ ಬಿ.ವೈ. ವಿಜಯೇಂದ್ರ ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಬುಧವಾರ (ನ. 15) ಬೆಂಗಳೂರಿನ ಬಿಜೆಪಿ ಕಚೇರಿಯಾದ ಜಗನ್ನಾಥ ಭವನದಲ್ಲಿ ಬೆಳಗ್ಗೆ 10 ಗಂಟೆಗೆ ಪಕ್ಷದ ಜವಾಬ್ದಾರಿ ಸ್ವೀಕಾರ ಮಾಡುತ್ತೇನೆ. ನಳಿನ್‌ ಕುಮಾರ್‌ ಕಟೀಲ್‌ ಅವರು ಅತ್ಯಂತ ಯಶಸ್ವಿಯಾಗಿ ಪಕ್ಷ ಸಂಘಟನೆಯನ್ನು ಮಾಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಭಾನುವಾರ ತುಮಕೂರಿನಲ್ಲಿ ಹೇಳಿಕೆ ನೀಡಿದ್ದರು.

ಗುರುವಾರ ಅರಮನೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕರ್ತರ ಸಭೆಯನ್ನು ನಿಗದಿಪಡಿಸಲಾಗಿದೆ. ಈ ವೇಳೆ ಸಮಾವೇಶ ಕೂಡ ಇರಲಿದೆ. ಪಕ್ಷದ ಹಿರಿಯ ಮುಖಂಡರು ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ,‌ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ, ಮಾಜಿ ಸಚಿವರಾದ ಬಸನಗೌಡ ಪಾಟೀಲ್‌ ಯತ್ನಾಳ್, ವಿ. ಸೋಮಣ್ಣ ಸೇರಿದಂತೆ ಹಲವು ಪ್ರಮುಖರ ಸಮ್ಮುಖದಲ್ಲಿ ಜವಾಬ್ದಾರಿಯನ್ನು ಸ್ವೀಕರಿಸಲಿದ್ದೇನೆ. ಚುನಾವಣೆ ಇರುವುದರಿಂದ ರಾಷ್ಟ್ರೀಯ ನಾಯಕರು ಬರುತ್ತಿಲ್ಲ. ವೀಕ್ಷಕರು ಬರುವ ಸಾಧ್ಯತೆಯಿದೆ ಎಂದು ವಿಜಯೇಂದ್ರ ಹೇಳಿದ್ದರು.

ಇದನ್ನೂ ಓದಿ: DK Shivakumar : ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಕೇಳಿ ತಿಳಿದುಕೊಳ್ಳಲಿ: ಡಿಕೆಶಿ ತಿರುಗೇಟು

ಅಸಮಾಧಾನಗಳನ್ನು ಸರಿಪಡಿಸುವೆ

ಪಕ್ಷದಲ್ಲಿ ಕೆಲವು ಅಸಮಾಧಾನಗಳಿವೆ. ಮುಂದಿನ ದಿನಗಳಲ್ಲಿ ಅದನ್ನೆಲ್ಲ ಸರಿ ಮಾಡುತ್ತೇವೆ. ಯಾರು ಯಾರನ್ನು ಕೂಡ ಸೈಡ್ ಲೈನ್ ಮಾಡಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ಮತ್ತಷ್ಟು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದರು.

Exit mobile version