Site icon Vistara News

BJPಯಿಂದ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ 6 ರ‍್ಯಾಲಿ: ಪಕ್ಷದ ಕಾರ್ಯಕ್ರಮ ಘೋಷಿಸಿದ ಸಿಎಂ ಬೊಮ್ಮಾಯಿ

basavaraj bommai 20

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆ ಮೇರೆಗೆ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನಲ್ಲಿ ಪಕ್ಷದ ಸಂಘಟನೆ, ಪ್ರವಾಸ, ಜನಸಂಪರ್ಕದ ಬಗ್ಗೆ ಚರ್ಚೆ ಮಾಡಲಾಗಿದ್ದು, ಆರು ಕಡೆ ದೊಡ್ಡ ರ‍್ಯಾಲಿಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಜಿ ಮುಖ್ಯ ಮಂತ್ರಿ ಹಾಗೂ ರಾಷ್ಟ್ರೀಯ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಪಕ್ಷದ ಸಂಘಟನೆಯ ಬಗ್ಗೆ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ದಿಲ್ಲಿಗೆ ಹೋಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿಯಾಗಿ ಬಂದಿದ್ದಾರೆ. ಅಲ್ಲಿಯ ಮಾತುಕತೆ, ಸೂಚನೆಯ ಬಗ್ಗೆ ವಿವರವಾಗಿ ಚರ್ಚೆ ಮಾಡಿದ್ದೇವೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅವರು ಭೇಟಿ ನೀಡುವ ಸಂದರ್ಭದಲ್ಲಿ ಪಕ್ಷದ ವತಿಯಿಂದ ಮಾಡಬೇಕಿರುವ ಎಲ್ಲ ಕಾರ್ಯಕ್ರಮಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ.

ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಅರುಣ್ ಸಿಂಗ್ ಅವರು ವಿವಿಧ ತಂಡಗಳಲ್ಲಿ ಪ್ರವಾಸ ಮಾಡುವ ಬಗ್ಗೆ ಚರ್ಚೆಯಾಗಿದೆ. ಬರುವ ದಿನಗಳಲ್ಲಿ ಇನ್ನೊಂದು ಸಭೆಯನ್ನು ರಾಜ್ಯ ಮಟ್ಟದ ಹಿರಿಯ ನಾಯಕರೊಂದಿಗೆ ನಡೆಸಿ, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳ ಕಾರ್ಯಕ್ರಮದ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವ ನಿರ್ಣಯವಾಗಿದೆ.

ಸೆಪ್ಟೆಂಬರ್ 8 ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಅದನ್ನು ಯಶಸ್ವಿ ಮಾಡಲು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಇವುಗಳನ್ನು ಕಾರ್ಯಗತ ಮಾಡಲು ಸಂಘಟಕರಿಗೆ ತಿಳಿಸಲಾಗಿದೆ. ಸಚಿವ ಡಾ: ಸುಧಾಕರ್, ಶಾಸಕರು, ಪದಾಧಿಕಾರಿಗಳು ಎಲ್ಲರೂ ಸೇರಿ ಜನೋತ್ಸವ ಯಶಸ್ವಿ ಮಾಡುತ್ತೇವೆ ಎಂದರು.

ಇದನ್ನೂ ಓದಿ | ವಿಸ್ತಾರ ವಿಶ್ಲೇಷಣೆ | ಕಟೀಲ್‌ಗೆ ಶುಭಾಶಯಗಳ ಮಹಾಪೂರ: ಮುಂದುವರಿಕೆಗೋ ಬೀಳ್ಕೊಡುಗೆಗೋ?

Exit mobile version