Site icon Vistara News

Budget 2023 : ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಗರಿಷ್ಠ ಅನುದಾನ ನೀಡಲಾಗಿದೆ: ಅರುಣ್ ಸಿಂಗ್

BJP Meeting budget-2023-‌Union govt gave preference to karnataka in budget

ಬೆಂಗಳೂರು: ಕೇಂದ್ರ ಬಜೆಟ್‍ನಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಕರ್ನಾಟಕಕ್ಕೆ ಗರಿಷ್ಠ ಅನುದಾನ ಲಭಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅರುಣ್‌ ಸಿಂಗ್‌, ಬಜೆಟ್‍ನಲ್ಲಿ ಕರ್ನಾಟಕಕ್ಕೆ ವಿಶೇಷ ಆದ್ಯತೆ ಲಭಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ನೀಡಲಾಗುತ್ತಿದೆ. ರೈಲ್ವೆಯ ಹಲವು ಯೋಜನೆಗಳಿಗೂ ಪ್ರಧಾನಿ ನರೇಂದ್ರ ಮೋದಿಜಿ ಅವರ ಸರಕಾರವು ಹಣ ನೀಡಲಿದೆ ಎಂದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕದಲ್ಲಿ ತ್ವರಿತಗತಿಯಲ್ಲಿ ಕೆಲಸ ಆಗುತ್ತಿದೆ. ಗರಿಷ್ಠ ಮನೆಗಳ ನಿರ್ಮಾಣಕ್ಕೆ ನೆರವು ಲಭಿಸಲಿದೆ. ಜಲಜೀವನ್ ಮಿಷನ್‍ನಲ್ಲೂ ವೇಗವಾಗಿ ಕೆಲಸ ನಡೆಯುತ್ತಿದೆ. ಜಲಜೀವನ್ ಮಿಷನ್‍ನಲ್ಲಿ 70 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದ್ದು, ಕರ್ನಾಟಕದ ಹೆಚ್ಚು ಜನರಿಗೆ ಪ್ರಯೋಜನ ಸಿಗಲಿದೆ. ಮನೆಮನೆಗೆ ನೀರು ಸರಬರಾಜಾಗಲಿದೆ ಎಂದು ತಿಳಿಸಿದರು. ಇದಕ್ಕಾಗಿ ಮೋದಿಜಿ ಸರಕಾರಕ್ಕೆ ಧನ್ಯವಾದಗಳು ಎಂದು ತಿಳಿಸಿದರು.

ಇದನ್ನೂ ಓದಿ : Karnataka Politics : ಬಿಜೆಪಿಯಿಂದಲೂ ರಥಯಾತ್ರೆ ಪ್ಲಾನ್‌: ಅರುಣ್‌ ಸಿಂಗ್‌ ಸುಳಿವು

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಪರಿಹರಿಸಲು ವಿಶೇಷ ಅನುದಾನ ಕೊಟ್ಟಿದ್ದಾರೆ ಎಂದು ಕೃತಜ್ಞತೆ ಸಲ್ಲಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿ ಎಲ್ಲರ ಗಮನ 150 ಸೀಟು ಗೆಲ್ಲುವ ಕಡೆ ಇರಲಿದೆ ಎಂದು ಅವರು ತಿಳಿಸಿದರು. ಕರ್ನಾಟಕದಲ್ಲಿ ಸಂಪೂರ್ಣ ಬಹುಮತದಿಂದ ಸರಕಾರ ರಚಿಸುವುದೇ ನಮ್ಮೆಲ್ಲರ ಆದ್ಯತೆ ಆಗಲಿದೆ ಎಂದು ಅವರು ಹೇಳಿದರು.

Exit mobile version