BY Vijayendra : ರಾಜ್ಯ ಬಿಜೆಪಿಗೆ ಇನ್ನು ಬಿ ವೈ ವಿಜಯೇಂದ್ರ ಸಾರಥ್ಯ; ಆಯ್ಕೆಗೆ 10 ಕಾರಣಗಳು - Vistara News

ಕರ್ನಾಟಕ

BY Vijayendra : ರಾಜ್ಯ ಬಿಜೆಪಿಗೆ ಇನ್ನು ಬಿ ವೈ ವಿಜಯೇಂದ್ರ ಸಾರಥ್ಯ; ಆಯ್ಕೆಗೆ 10 ಕಾರಣಗಳು

BY Vijayendra : ಬಿ ವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಹೈಕಮಾಂಡ್‌ ಆಯ್ಕೆ ಮಾಡಿದ್ದರ ಹಿಂದಿನ 10 ಕಾರಣಗಳೇನು? ಇಲ್ಲಿದೆ ವಿಸ್ತೃತ ವಿಶ್ಲೇಷಣೆ.

VISTARANEWS.COM


on

BJP State President blessed by Amit Shah
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
vistara-vishleshane-

ಬೆಂಗಳೂರು: ವಿಧಾನಸಭಾ ಚುನಾವಣೆಯ (Assembly Elections 2023) ಸೋಲಿನಿಂದ ಕಂಗೆಟ್ಟಿರುವ ಕರ್ನಾಟಕ ಬಿಜೆಪಿಗೆ (BJP Karnataka) ನವಚೈತನ್ಯವನ್ನು ನೀಡುವ ಭಾಗವಾಗಿ ಹೈಕಮಾಂಡ್‌ (BJP High command) ಯುವ ನಾಯಕ, ಲಿಂಗಾಯತ ಸಮುದಾಯದ ಪ್ರಭಾವಿ ಮುಖಂಡ ಬಿ.ವೈ. ವಿಜಯೇಂದ್ರ (BY Vijayendra) ಅವರನ್ನು ಸಾರಥಿಯಾಗಿ (BJP State President) ನೇಮಕ ಮಾಡಿದೆ. ಮುಂದಿನ ಲೋಕಸಭಾ ಚುನಾವಣೆಯ (Parliament Election 2024) ದೃಷ್ಟಿಯಿಂದಲೂ ಒಬ್ಬ ಪ್ರಬಲ ನಾಯಕ ರಾಜ್ಯಾಧ್ಯಕ್ಷರಾಗುವುದು ಬಿಜೆಪಿಗೆ ಅತ್ಯಂತ ಅವಶ್ಯವಿತ್ತು. ಇದೀಗ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಪುತ್ರನ ಮೇಲೆ ನಂಬಿಕೆಯಿಟ್ಟು ಈ ಆಯ್ಕೆ ಮಾಡಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಇದುವರೆಗೆ ನಳಿನ್‌ ಕುಮಾರ್‌ ಕಟೀಲ್‌ ಅವರು ನಿಭಾಯಿಸಿದ ಈ ಹುದ್ದೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿ.ಟಿ. ರವಿ, ಮಾಜಿ ಸಚಿವ ವಿ. ಸೋಮಣ್ಣ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರು. ಅಂತಿಮವಾಗಿ ಹೈಕಮಾಂಡ್‌ ಅಳೆದು ತೂಗಿ ವಿಜಯೇಂದ್ರ ಅವರನ್ನು ಈ ಹುದ್ದೆಗೆ ಏರಿಸಿದೆ. ಹಾಗಿದ್ದರೆ ವಿಜಯೇಂದ್ರ ಅವರನ್ನು ನೇಮಿಸುವುದಕ್ಕೆ ಕಾರಣವಾದ 10 ಅಂಶಗಳೇನು?

ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಕಾರಣವಾದ 10 ಅಂಶಗಳು

1. ವಿಧಾನಸಭಾ ಚುನಾವಣೆಯ ಸೋಲಿನಿಂದ ಕಂಗೆಟ್ಟಿರುವ ಪಕ್ಷದಲ್ಲಿ ಹೊಸ ಸಂಚಲನ ಮೂಡಿಸಿ, ಸ್ಫೂರ್ತಿ ತುಂಬಿ ಮುಂದಿನ ಲೋಕಸಭಾ ಚುನಾವಣೆಗೆ ಸಜ್ಜುಗೊಳಿಸಬಲ್ಲ ಏಕೈಕ ನಾಯಕ ಬಿ.ವೈ ವಿಜಯೇಂದ್ರ ಎಂಬುದು ಹೈಕಮಾಂಡ್‌ಗೆ ಸ್ಪಷ್ಟವಾಗಿ ಗೊತ್ತಿದೆ. ಅವರನ್ನು ಹೊರತುಪಡಿಸಿ ಬೇರೆ ಯಾರನ್ನೇ ನೇಮಕ ಮಾಡಿದರೂ ಇಡೀ ರಾಜ್ಯಾದ್ಯಂತ ತಿರುಗಾಡಿ, ಎಲ್ಲರನ್ನೂ ಜತೆಯಾಗಿ ಕರೆದುಕೊಂಡು ಹೋಗುವುದು ಕಷ್ಟ.

BJP State President BY Vijayendra

2. ಬಿ.ವೈ ವಿಜಯೇಂದ್ರ ಅವರು ತಮ್ಮ ಸಂಘಟನಾ ಶಕ್ತಿ, ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ತಾಕತ್ತನ್ನು ಹಲವು ಬಾರಿ ತೋರಿಸಿಕೊಟ್ಟಿದ್ದಾರೆ. ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿಯೂ ಅವರು ದುಡಿದಿದ್ದಾರೆ. ಅವರಿಗೆ ರಾಜ್ಯಾದ್ಯಂತ ಅಭಿಮಾನಿಗಳಿದ್ದಾರೆ. ಯಾವ ಹುದ್ದೆ ಇಲ್ಲದೆ ಇದ್ದಾಗಲೂ ಅವರ ಸೂಚನೆಯಂತೆ ಕೆಲಸ ಮಾಡುವ ಟೀಮ್‌ಗಳು ರಾಜ್ಯಾದ್ಯಂತ ಇವೆ.

3. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಬಿ.ಎಸ್‌. ಯಡಿಯೂರಪ್ಪ ಅವರು ಪಕ್ಷದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುವುದು ತುಂಬ ಮುಖ್ಯ. ಬಿ.ವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದರೆ ಬಿಎಸ್‌ವೈ ಅವರನ್ನು ನೇರವಾಗಿ ಬಳಸಿಕೊಳ್ಳಬಹುದು ಮತ್ತು ಅವರ ಅನುಭವವನ್ನು ಪೂರ್ಣವಾಗಿ ಬಳಸಿಕೊಳ್ಳಬಹುದು ಎಂಬ ಲೆಕ್ಕಾಚಾರ.

BJP State President BY Vijayendra

4. ಬಿಜೆಪಿಯ ಗಟ್ಟಿ ಅಸ್ತಿವಾರವಾಗಿದ್ದ ಲಿಂಗಾಯತ ಸಮಾಜ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೇಲೆ ಮುನಿಸಿಕೊಂಡಿತ್ತು. ಈ ಹಾನಿಯನ್ನು ಸರಿ ಮಾಡಿ ಮತ್ತೆ ಅವರನ್ನು ಸೆಳೆಯಲು ಲಿಂಗಾಯತ ಸಮಾಜದ ಪ್ರಭಾವಿ ನಾಯಕನಿಗೆ ಪಟ್ಟ ಕಟ್ಟಲಾಗಿದೆ.

5. ಲಿಂಗಾಯತ ಸಮಾಜ ಬಿಜೆಪಿಯಿಂದ ದೂರ ಸರಿಯಲು ಕಾರಣವಾಗಿದ್ದು, ಬಿಎಸ್‌ವೈ ಅವರನ್ನು ಕಡೆಗಣಿಸಲಾಗಿದೆ ಎಂಬ ಸಂದೇಶ. ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಇಳಿಸಿದ್ದು, ಅವರು ಕಣ್ಣೀರು ಹಾಕಿದ್ದು ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿತ್ತು. ಇದೀಗ ಬಿವೈ ವಿಜಯೇಂದ್ರ ಅವರಿಗೆ ನಾಯಕತ್ವ ನೀಡಿ ಸಮುದಾಯದಲ್ಲಿ ವಿಶ್ವಾಸ ಮೂಡಿಸುವುದು.

BY Vijayendra with Amit Shah

6. ಬಿಜೆಪಿ ಕುಟುಂಬ ರಾಜಕಾರಣದ ಹೆಸರಿನಲ್ಲಿ ಒಂದು ಕುಟುಂಬದ ಇತರ ನಾಯಕರನ್ನು ಕಡೆಗಣಿಸುತ್ತಿದೆ ಎಂಬ ಆರೋಪವಿದೆ. ಹಿರಿಯ ನಾಯಕರ ಮಕ್ಕಳಿಗೆ ಬಿಜೆಪಿಯಲ್ಲಿ ಭವಿಷ್ಯವಿಲ್ಲ ಎಂಬಂತೆ ಹರಡಿರುವ ತಪ್ಪು ಅಭಿಪ್ರಾಯವನ್ನು ಸುಳ್ಳು ಮಾಡುವ ಉದ್ದೇಶವನ್ನು ಈ ನೇಮಕಾತಿ ಹೊಂದಿದೆ.

7. ರಾಜ್ಯದಲ್ಲಿ ಯುವ ನಾಯಕತ್ವಕ್ಕೆ ಮುಂದೆ ಅವಕಾಶ ನೀಡಲಾಗುತ್ತದೆ ಎಂಬ ಸಂದೇಶವನ್ನು ಸಾರುವ ಉದ್ದೇಶವನ್ನು ಇದು ಹೊಂದಿದೆ. ಪಕ್ಷದ ಸಂಘಟನೆ ಮತ್ತು ನಾಯಕತ್ವದ ವಿಷಯದಲ್ಲಿ ʼಗೆಲುವಿನ ಶಕ್ತಿʼಗೇ ಮಣೆ ಎಂಬ ಸಂದೇಶವನ್ನು ಎಲ್ಲ ನಾಯಕರಿಗೆ ನೀಡಲು.

BY Vijayendra

8. ಬಿಜೆಪಿಗೆ ಈಗ ಯಾವುದೇ ಟೀಕೆಗಳಿಗೆ ಹೆದರದೆ, ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಿಕೊಂಡು ಹೋಗುವ ನಾಯಕತ್ವ ಬೇಕಾಗಿದೆ. ಅಂಥ ಗುಣವನ್ನು ಬಿವೈ ವಿಜಯೇಂದ್ರ ಪ್ರದರ್ಶಿಸಿದ್ದಾರೆ.

9. ಹಲವು ಬಾರಿ ಅವಕಾಶ ತಪ್ಪಿದರೂ ಪಕ್ಷಕ್ಕೆ ಕುಂದುಂಟಾಗದಂತೆ ನಡೆದುಕೊಂಡರೆ ಪಕ್ಷ ಸೂಕ್ತ ಕಾಲದಲ್ಲಿ ತಕ್ಕ ಗೌರವ ನೀಡುತ್ತದೆ ಎಂಬುದನ್ನು ಸಾರಲು ಬಿಜೆಪಿ ಮುಂದಾಗಿದೆ.

ಇದನ್ನೂ ಓದಿ: BY Vijayendra: ಚತುರ ಸಂಘಟಕ, ನಿಪುಣ ರಾಜಕೀಯ ತಂತ್ರಗಾರ ಬಿ ವೈ ವಿಜಯೇಂದ್ರ

10. ಇದೆಲ್ಲದಕ್ಕಿಂತಲೂ ಮುಖ್ಯವಾಗಿ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪಕ್ಷ ಸಂಘಟನೆಯ ಮೂಲಕ ಪ್ರತಿಪಕ್ಷಗಳನ್ನು ಬುಲ್ಡೋಜ್‌ ಮಾಡುವ ಪ್ರಯತ್ನದಲ್ಲಿರುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನು ಎದುರಿಸಲು ಬಿಜೆಪಿಗೆ ಒಬ್ಬ ಪ್ರಬಲ ನಾಯಕ ಬೇಕಾಗಿದ್ದಾರೆ. ಇದನ್ನು ಬಿಜೆಪಿ ವಿಜಯೇಂದ್ರ ಅವರಲ್ಲಿ ಕಂಡಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chikkamagaluru News: ವಸತಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿನಿಯರಿಗೆ ಚಿತ್ರಹಿಂಸೆ; ಕ್ರಮಕ್ಕೆ ಪೋಷಕರ ಆಗ್ರಹ

Chikkamagaluru News: ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದ್ದು, ಕ್ರಮಕ್ಕೆ ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಗೆ ಮಕ್ಕಳು ಹಾಗೂ ಪೋಷಕರು ದೂರು ನೀಡಿದ್ದಾರೆ.

VISTARANEWS.COM


on

Residential School
Koo

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ವಸತಿ ಶಾಲೆಯ ಶಿಕ್ಷಕಿ ಚಿತ್ರಹಿಂಸೆ ನೀಡುತ್ತಿದ್ದು, ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಪೋಷಕರು ಆಗ್ರಹಿಸಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ (Chikkamagaluru News) ಕಾಫಿ ಗೋಡೌನ್‌ನಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಮಕ್ಕಳು ಹಾಗೂ ಪೋಷಕರು ದೂರು ನೀಡಿದ್ದಾರೆ.

ಶಿಕ್ಷಕಿ ದೀಪಾ ಎಂಬುವವರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯೋಗೀಶ್‌ಗೆ 40 ಮಕ್ಕಳು ದೂರು ನೀಡಿದ್ದಾರೆ. ವಿನಾಕಾರಣ ಮಕ್ಕಳ ಮೇಲೆ ಶಿಕ್ಷಕಿ ಹಲ್ಲೆ ಮಾಡುತ್ತಾರೆ ಎಂದು ಮಕ್ಕಳು ಆರೋಪಿಸಿದ್ದು, ಕಣ್ಣೀರು ಹಾಕಿದ್ದಾರೆ. ಹೀಗಾಗಿ ಶಿಕ್ಷಕಿಯನ್ನು ಅಮಾನತು ಮಾಡುವಂತೆ, ಮೇಲಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪತ್ರ ಬರೆದಿದ್ದಾರೆ.

ಒಂದೇ ಕೊಠಡಿಯಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ವಾಸ

ವಸತಿ ಶಾಲೆ ನಡೆಸಲು ಕಾಫಿ ಗೋಡೌನ್‌ ಅನ್ನು ಅಧಿಕಾರಿಗಳು ಬಾಡಿಗೆಗೆ ಪಡೆದಿದ್ದು, ತಿಂಗಳಿಗೆ 1.93 ಲಕ್ಷ ರೂ. ನೀಡಲಾಗುತ್ತದೆ. ಒಂದೇ ಕೊಠಡಿಯಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಸವಾಗಿದ್ದು, ಮೂಲಭೂತ ಸೌಕರ್ಯವಿಲ್ಲದೆ ಮಕ್ಕಳು ಪರದಾಡುತ್ತಿದ್ದು, ಸಾಮಗ್ರಿ ಜತೆ ಚಾಪೆ ಮೇಲೆಯೇ ಮಕ್ಕಳು ಮಲಗುವ ಸ್ಥಿತಿಯಿದೆ.

ಇದನ್ನೂ ಓದಿ | Mysuru News : ಪತ್ನಿ ಜತೆಗೆ ವಿಡಿಯೊ ಕಾಲ್‌; ಮಾತಲ್ಲಿ ಮೈಮರೆತಾಗ ಬಡಿಯಿತು ರೈಲು

ಗಾಂಜಾ ನಶೆಯಲ್ಲಿ ಎರ‍್ರಾಬಿರ‍್ರಿ ಓಡಿದ ಥಾರ್ ಜೀಪ್; ಬೈಕ್‌ ಸವಾರ ಸಾವು

Road Accident Mangalore Jeep

ಉಳ್ಳಾಲ (ಮಂಗಳೂರು): ಮಹೀಂದ್ರಾ ಥಾರ್‌ ಜೀಪ್‌ (Mahindra Thar Jeep) ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಸವಾರರೊಬ್ಬರು (Bike rider dead) ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ (Road Accident). ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ ಥಾರ್‌ ಜೀಪ್‌ನಲ್ಲಿದ್ದವರ ಗಾಂಜಾ ನಶೆಯೇ (Ganja Case) ಕಾರಣ ಎಂದು ಆರೋಪಿಸಲಾಗಿದೆ.

ಥಾರ್‌ ಜೀಪ್‌ ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಅದು ಅತಿವೇಗ ಮತ್ತು ಅಜಾಗರೂಕತೆಯಿಂದ ವೇಗವಾಗಿ ಧಾವಿಸಿ ನಿಯಂತ್ರಣ ತಪ್ಪಿ ಎದುರು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಚಕ್ರವೇ ಸಿಡಿದು ಹೊರಬಂತು.

ಹಾಗೆ ಕಾರಿನಿಂದ ಸಿಡಿದ ಕಾರು ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯಿತು. ಚಕ್ರದ ಹೊಡೆತಕ್ಕೆ ಒಮ್ಮಿಂದೊಮ್ಮೆಗೇ ಸವಾರ ಕಕ್ಕಾಬಿಕ್ಕಿಯಾದರು. ಆಗ ಬೈಕ್‌ ಹೋಗಿ ಡಿವೈಡರ್‌ಗೆ ಬಡಿಯಿತು. ಬೈಕ್‌ ಸವಾರ ಅಲ್ಲೇ ಉರುಳಿಬಿದ್ದ ಪರಿಣಾಮವಾಗಿ ತಲೆ ರಸ್ತೆಗೆ ಬಡಿದು ಪ್ರಾಣ ಕಳೆದುಕೊಂಡಿದ್ದಾರೆ.

ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ ( 45) ಮೃತರು. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್‌ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ.

ಇದನ್ನೂ ಓದಿ | Death Threat to Modi: ಮೋದಿ, ಯೋಗಿಗೆ ಜೀವ ಬೆದರಿಕೆ ಹಾಕಿದ್ದ ನಾಸಿರ್;‌ ಕ್ಷಮೆ ಕೋರಿದ ಸಹೋದರ ಖಾಜಾ

ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಬೈಕ್ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬೈಕ್ ಡಿವೈಡರ್ ಗೆ ಬಡಿದ ಪರಿಣಾಮ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ತೆರಳುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಹೆತ್ತವರು, ಇಬ್ಬರು ಹೆಣ್ಮಕ್ಕಳು ಹಾಗೂ ಪತ್ನಿ ಇರುವ ಕುಟುಂಬದ ಆಧಾರಸ್ತಂಭವಾಗಿದ್ದರು.

Continue Reading

ರಾಜಕೀಯ

HD Devegowda: ಮೋದಿ ಬಗ್ಗೆ ಮಾತನಾಡಲು ನೀವು ಯಾರು? ಸಿಎಂ ಸಿದ್ದರಾಮಯ್ಯಗೆ ಎಚ್‌.ಡಿ. ದೇವೇಗೌಡ ಪ್ರಶ್ನೆ

HD Devegowda: ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್ ಸಿಂಗ್ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಅವರು ಏನು ಕೊಟ್ಡಿದ್ದಾರೆ ಎಂಬುದನ್ನು ಹೇಳಿ. ಸಿದ್ದರಾಮಯ್ಯನವರೇ ಈ ಬಗ್ಗೆ ಸತ್ಯ ಹೇಳಿ. ನರೇಂದ್ರ ಮೋದಿ ಅವರು ಈ ದೇಶದಲ್ಲಿರುವ ಸಮರ್ಥ ನಾಯಕ ಅನ್ನುವುದನ್ನು ಇಲ್ಲ ಎನ್ನುವುದಕ್ಕೆ ಇವರು ಯಾರು? WHO IS HE? ಎಂದು ದೇವೇಗೌಡರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

HD Deve Gowda lashes out at CM Siddaramaiah and Nikhil Kumaraswamy with him
Koo

ಬೆಂಗಳೂರು: ಶೂನ್ಯ ಸಾಧನೆ ಭಯಕ್ಕೆ ಬಿಜೆಪಿ ಜತೆ ಜೆಡಿಎಸ್ ಮೈತ್ರಿ (BJP JDS Alliance) ಮಾಡಿಕೊಂಡಿದೆ ಎಂದು ಹೇಳಿಕೆ ನೀಡಿರುವ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ಹರಿಹಾಯ್ದ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ (HD Devegowda), ಮುಂದಿನ ಚುನಾವಣೆಯಲ್ಲಿ ಅವರಿಗೆ ಉತ್ತರ ಸಿಗುತ್ತದೆ ಎಂದು ಗುಡುಗಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.

ಪಕ್ಷದ ರಾಜ್ಯ ಕಾವೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಚ್‌.ಡಿ. ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

“ಮುಂದಿನ ಜನ್ಮವಿದ್ದರೆ ಮುಸ್ಲಿಂ ಆಗಿ ಹುಟ್ಟುತ್ತೇನೆ ಎಂದು ದೇವೇಗೌಡರು ಹೇಳಿದ್ದರು. ಈಗ ಬಿಜೆಪಿ ಜತೆ ಸೇರಿಕೊಂಡಿದ್ದಾರೆ” ಎಂದು ಸಿಎಂ ಸಿದ್ದರಾಮಯ್ಯ ಅವರು ಈಚೆಗೆ ಮಂಡ್ಯದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಎಚ್.ಡಿ. ದೇವೇಗೌಡ, ಎಚ್‌.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ತೆಗೆದಿದ್ದು ಯಾರು? ಯಾವ ಕಾರಣಕ್ಕೆ ತೆಗೆದಿರಿ? ಎಂದು ಪ್ರಶ್ನೆ ಮಾಡಿದರು.

ಬಿಜೆಪಿ ಜತೆ ಜೆಡಿಎಸ್ ವಿಲೀನ ಅಂತ ಸಿದ್ದರಾಮಯ್ಯನವರೇ ತೀರ್ಮಾನ ಮಾಡಿಬಿಟ್ಟರು. ನರೇಂದ್ರ ಮೋದಿಗೆ ಪೈಪೋಟಿ ನೀಡುವ ಸಮರ್ಥ ನಾಯಕ ಸಿದ್ದರಾಮಯ್ಯ ಎಂದು ಮಂಡ್ಯದ ನಾಯಕರೊಬ್ಬರು ಹೇಳಿದ್ದರು. ಜಾತ್ಯತೀತ ಎಂಬ ಪದ ಬಳಕೆ ಮಾಡುವ ನೈತಿಕತೆ ಜೆಡಿಎಸ್‌ಗೆ ಇಲ್ಲ ಎಂದು ಕಾಂಗ್ರೆಸ್‌ನವರು ಹೇಳಿದ್ದರು. ಹಾಗಾದರೆ, ಮುಸ್ಲಿಮರಿಗೆ ನಾನು ಕೊಟ್ಟಿದ್ದ 4% ಮೀಸಲಾತಿಯನ್ನು ಇವರು ಮತ್ತೆ ಕೊಡಲಿ ನೋಡೋಣ ಎಂದು ಎಚ್‌.ಡಿ. ದೇವೇಗೌಡ ಸವಾಲು ಹಾಕಿದರು.

ಬಿಜೆಪಿ ಜತೆ‌ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಮಾಡಿದಾಗ ಈ ಮಂಡ್ಯದ ನಾಯಕ ಸಾರಿಗೆ ಮಂತ್ರಿ ಆಗಿದ್ದರು. ಅದು ಮರೆತು ಹೋಯ್ತಾ ಇವರಿಗೆ? ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಕೆಂಡಾಮಂಡಲರಾದರು.

ಸಿದ್ದರಾಮಯ್ಯ ಆಡಳಿತ ವೈಖರಿಗೆ ಕಿಡಿ

ಸಿದ್ದರಾಮಯ್ಯ ಅವರೇ ನನ್ನ ಜತೆ ಹಣಕಾಸು ಮಂತ್ರಿ ಅಗಿದ್ದರು. ಒಂದೂವರೆ ವರ್ಷದಲ್ಲಿ ಒಂದು ನಿಗಮ ಮಂಡಳಿಗೂ ನಾನು ಅಧ್ಯಕ್ಷರನ್ನು ನೇಮಕ ಮಾಡಲಿಲ್ಲ. ಆಗ ನಮಗೆ 113 ಸ್ಥಾನ ಇತ್ತು. ಈಗ ನಿಮಗೆ 136 ಸ್ಥಾನ ಕೊಟ್ಟು ಜನ ತೀರ್ಪು ನೀಡಿದ್ದಾರೆ. 5 ಗ್ಯಾರಂಟಿ ಜನರಿಗೆ ತಲುಪಿದೆಯಾ ಇಲ್ಲವೇ ಎಂದು ನೋಡುವುದಕ್ಕೆ 5 ಮಾಜಿ ಮಂತ್ರಿಗಳನ್ನು ನೇಮಕ ಮಾಡಿದ್ದೀರಿ. ಜಿಲ್ಲಾ ಮಟ್ಟದಲ್ಲೂ ಸಮಿತಿ ನೇಮಕ ಮಾಡುತ್ತಿದ್ದೀರಿ. 136 ಶಾಸಕರು, 20-25 ಎಂಎಲ್ಸಿಗಳು, 95 ಜನ ಬೋರ್ಡ್ ಅಧ್ಯಕ್ಷರು, ಅವರಿಗೆ ಸಂಪುಟ ದರ್ಜೆ, ಸಲಹೆಗಾರರಿಗೂ ಸಂಪುಟ ದರ್ಜೆ. ಈಗ ಪಕ್ಷದ ಕಾರ್ಯಕರ್ತರು, ಮುಖಂಡರ ನೇಮಕ ಆಗಿದೆ. ಇದು ಇವರ ಆಡಳಿತದ ವೈಖರಿ ಎಂದು ನೇರವಾಗಿ ಸಿದ್ದರಾಮಯ್ಯ ಅವರನ್ನು ಎಚ್‌.ಡಿ. ದೇವೇಗೌಡರು ತರಾಟೆಗೆ ತೆಗೆದುಕೊಂಡರು.

ಕೇಂದ್ರದಿಂದ ನಮಗೆ ಹಣ ಬಂದಿಲ್ಲ ಅಂತಾರೆ ಇವರು. ಈ ದೇವೇಗೌಡ ಸಿಎಂ ಆಗಿದ್ದಾಗ ಕೇಂದ್ರದವರು ರೈತರ ಸಾಲಮನ್ನಾವನ್ನು ನಾವೇ ಮಾಡುತ್ತೇವೆ ಅಂದರು. ಕೊನೇ ಪಕ್ಷ ನಾವು ಬಡ್ಡಿ ಮನ್ನಾ ಮಾಡುತ್ತೇವೆ, ಒಪ್ಪಿಗೆ ಕೊಡಿ ಎಂದರೂ ಅವರು ಒಪ್ಪಿಗೆ ಕೊಡಲಿಲ್ಲ. ಅವತ್ತು ಸಿದ್ದರಾಮಯ್ಯ ನನ್ನ ಸಂಪುಟದಲ್ಲಿ ಹಣಕಾಸು ಮಂತ್ರಿ ಆಗಿದ್ದರು. ನಿಮಗೆ ಪ್ರಾಮಾಣಿಕತೆ ಇದ್ದರೆ ಅವತ್ತು ಏನ್ ನಡೀತು ಎಂಬುದನ್ನು ಹೇಳಿ. ಈಗ ಯಾಕೆ ಮೋದಿ ಬಗ್ಗೆ ಮಾತನಾಡುತ್ತೀರಿ? ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಖಾರವಾಗಿ ಪ್ರಶ್ನಿಸಿದರು.

ಮೋದಿ ಬಗ್ಗೆ ಮಾತನಾಡಲು ನೀವು ಯಾರು?

ಬೆಳಗ್ಗೆ ಎದ್ದರೆ ಮೋದಿ ಮೋದಿ ಅಂತಾರೆ. ಹಿಂದೆ ಮನಮೋಹನ್ ಸಿಂಗ್ ಅವರು ಏನು ಕೊಟ್ಟಿದ್ದರು? ಅದನ್ನು ಇವರು ಹೇಳಬೇಕು. ಅದಕ್ಕೂ ಮೊದಲು ವಾಜಪೇಯಿ ಅವರು ಏನು ಕೊಟ್ಡಿದ್ದಾರೆ ಎಂಬುದನ್ನು ಹೇಳಿ. ಸಿದ್ದರಾಮಯ್ಯನವರೇ ಈ ಬಗ್ಗೆ ಸತ್ಯ ಹೇಳಿ. ನರೇಂದ್ರ ಮೋದಿ ಅವರು ಈ ದೇಶದಲ್ಲಿರುವ ಸಮರ್ಥ ನಾಯಕ ಅನ್ನುವುದನ್ನು ಇಲ್ಲ ಎನ್ನುವುದಕ್ಕೆ ಇವರು ಯಾರು? WHO IS HE? ಮೋದಿ ಅವರನ್ನು ಇಡೀ ವಿಶ್ವ ಒಪ್ಪಿದೆ. ಮಾತಾಡೋಕೂ ಇತಿಮಿತಿ ಇರಬೇಕು ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಕಿಡಿಕಾರಿದರು.

ಕಿರಿಯ ಅಧಿಕಾರಿ ನೇಮಕ ಪ್ರಸ್ತಾಪಿಸಿದ ಮಾಜಿ ಪ್ರಧಾನಿ

ನಾನು ಯಾವುದೇ ಕಾಮಗಾರಿಯ ಎಲ್‌ಒಸಿ ನೀಡಬೇಕಾದರೆ ಐದು ಪೈಸೆ ಪಡೆದಿದ್ದೇನೆ ಎಂದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 5 ಪೈಸೆ ಪಡೆಯುವು ಎಲ್ಲಾದರೂ ಉಂಟೆ? ಅದು ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ತರುತ್ತಾ? ಅವರು ಒಬ್ಬರು ನೀರಾವರಿ ಕಾರ್ಯದರ್ಶಿಯನ್ನು ನೇಮಕ ಮಾಡಿದ್ದಾರೆ. ನಾನು ಫೊನ್ ಮಾಡಿದೆ ಫೋನ್ ರಿಸೀವ್ ಮಾಡಿಲ್ಲ. ನಾನು ಒಂದು ದೇಶದ ಸಣ್ಣ ರಾಜಕಾರಣಿ. ಪಾಪ ಅವರ ಕಾರ್ಯದರ್ಶಿ ಫೋನ್ ತೆಗೆದುಕೊಂಡಿಲ್ಲ. ಅವರು ಯಾರು ಅಂತ ಕೇಳಿದರೆ ಸಿದ್ದರಾಮಯ್ಯ ಅವರ ಸಂಬಂಧಿ ಅಂತ ಹೇಳೋದಿಲ್ಲ, ಅವರು ಸಿದ್ದರಾಮಯ್ಯ ಅವರ ಸಮಾಜದವರು. ಆ ಹಿರಿಯ ಹುದ್ದೆಗೆ ಅತ್ಯಂತ ಕಿರಿಯ ಅಧಿಕಾರಿಯನ್ನು ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಏಕೆ? ಎಂದು ಎಚ್‌.ಡಿ. ದೇವೇಗೌಡ ಪ್ರಶ್ನೆ ಮಾಡಿದರು.

ಜನಪರ ಕಳಕಳಿಯ ಸರ್ಕಾರ ನನ್ನದು ಅಂತಾರೆ ಸಿದ್ದರಾಮಯ್ಯ. ‌ಎಚ್.ಡಿ. ಕುಮಾರಸ್ವಾಮಿ ಅವರ ಪಂಚರತ್ನ, ಜಲಧಾರೆ ಕಾರ್ಯಕ್ರಮ ಮಾಡಿದ್ದರಲ್ಲವೇ? ಅವರಿಗೆ ಜನಪರ ಕಳಕಳಿ ಇರಲಿಲ್ಲವಾ? ಅವರ ಸರ್ಕಾರ ತೆಗೆದಿದ್ದು ಯಾರು ಹಾಗಾದರೆ? ನೀವು ಮಾಡಿದ ಎಲ್ಲ ಕಾರ್ಯಕ್ರಮ ಅನುಷ್ಠಾನ ಮಾಡಿದ್ದು ಕುಮಾರಸ್ವಾಮಿ. ಇಂಥ ನೀವು ಜೆಡಿಎಸ್ ಪಕ್ಷ ಉಳಿಯಲ್ಲ ಅಂತೀರಾ? ಎಂದು ಎಚ್‌.ಡಿ. ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಈ ಮುದುಕಪ್ಪನಿಗೆ ಸ್ವಾಭಿಮಾನ ಇದೆ

ಮಂಡ್ಯದ ನಾಯಕರೊಬ್ಬರು ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ತುಂಬಾ ತುಂಬಾ ಎತ್ತರಕ್ಕೆ ಬೆಳೆದಿದ್ದಾರೆ. ಆ ಮುದುಕಪ್ಪನನ್ನ ಕಟ್ಟಿಕೊಂಡು ಏನೇನೋ ಮಾಡೋಕೆ ಹೋಗ್ತಿದ್ದಾರೆ ಅಂತಾರೆ. ಈ ಮುದುಕಪ್ಪನಿಗೆ ಸ್ವಾಭಿಮಾನ ಇದೆ. ಈ ಪಕ್ಷ ಉಳಿಸೋದು ಕಾವೇರಿ ನೀರಿಗಾಗಿ, ನಿಮಗೆ ಮಾತಾಡೋ ಯೋಗ್ಯತೆ ಇಲ್ಲ. ಹೇಮಾವತಿ ಕಟ್ಟಿದವನು, ಹಾರಂಗಿ ಕಟ್ಟಿರೋನು ನಿಮ್ಮ ಮುಂದೆ ಇದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಸಚಿವ ಚೆಲುವರಾಯಸ್ವಾಮಿ ವಿರುದ್ಧ ಗುಡುಗಿದರು.

ಇದನ್ನೂ ಓದಿ: Death Threat to Modi: ತಲ್ವಾರ್‌ ಹಿಡಿದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿಗೆ ಜೀವ ಬೆದರಿಕೆ ಒಡ್ಡಿದ್ದ ನಾಸಿರ್‌ ಸೆರೆ

ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಎಚ್.ಎಂ. ರಮೇಶ್ ಗೌಡ, ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅವರು ಹಾಜರಿದ್ದರು.

Continue Reading

ಮಳೆ

karnataka Weather : ರಾಯಚೂರಲ್ಲಿ ತಾಪಮಾನದ ಬಿಸಿ; ಉಳಿದೆಡೆ ಹೇಗೆ?

Karnataka Weather Forecast : ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮುಂದುವರಿಯಲಿದ್ದು, ಉತ್ತರ ಕರ್ನಾಟಕದಲ್ಲಿ ತಾಪಮಾನ ಏರಿಕೆ ಆಗುವ ಸಾಧ್ಯತೆ ಇದೆ.

VISTARANEWS.COM


on

By

Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಮಲೆನಾಡಿನಲ್ಲಿ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿ.ಸೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಬಿಸಿಲ ಧಗೆಯು ಹೆಚ್ಚಿರಲಿದೆ.

ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 3 ಡಿ.ಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಆಯ್ದ ಕಡೆಗಳಲ್ಲಿ ಕನಿಷ್ಠ ಉಷ್ಣಾಂಶವು ಒಂದೆರಡು ಕಡೆಗಳಲ್ಲಿ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾತಾವರಣದಲ್ಲಿ ಯಾವುದೇ ಬದಲಾವಣೆ ಇಲ್ಲ. ಆಕಾಶವು ನಿರ್ಮಲವಾಗಿರಲಿದೆ. ಗರಿಷ್ಠ ಉಷ್ಣಾಂಶ 34 ಹಾಗೂ ಕನಿಷ್ಠ ಉಷ್ಣಾಂಶ 20 ಡಿ.ಸೆ ಇರಲಿದೆ.

Dam Water Level
ಜಲಾಶಯಗಳ ನೀರಿನ ಮಟ್ಟ ಹೀಗಿದೆ..

ಬಿರುಬೇಸಿಗೆಗೆ ಜನರು ತತ್ತರ

ರಾಜ್ಯಾದ್ಯಂತ ಸೋಮವಾರದಂದು ಶುಷ್ಕ ವಾತಾವರಣ ಇತ್ತು. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 37.8 ಡಿ.ಸೆ ದಾಖಲಾಗಿದ್ದರೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಉಷ್ಣಾಂಶ 17.2 ಡಿ.ಸೆ ದಾಖಲಾಗಿತ್ತು. ಕೋಲಾರ ಜಿಲ್ಲೆಯಲ್ಲಿ ಕನಿಷ್ಠ ಉಷ್ಣಾಂಶ 17.3 ಡಿಗ್ರಿ ಸೆಲ್ಸಿಯಸ್ ವರದಿ ಆಗಿದೆ.

Weather

ಕೋಲಾರ, ಬೆಳಗಾವಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್ ನಿಂದ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಾವೇರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ನಿಂದ 41 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಕ್ಷಿಣ ಕನ್ನಡ

Road Accident : ಗಾಂಜಾ ನಶೆಯಲ್ಲಿ ಎರ‍್ರಾಬಿರ‍್ರಿ ಓಡಿದ ಥಾರ್ ಜೀಪ್; ಬೈಕ್‌ ಸವಾರ ಸಾವು

Road Accident : ಮಂಗಳೂರು-ಕಾಸರಗೋಡು ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಒಬ್ಬಯ ಬೈಕ್‌ ಸವಾರ ಮೃತಪಟ್ಟಿದ್ದಾರೆ. ಮಹೀಂದ್ರಾ ಥಾರ್‌ ಜೀಪ್‌ನಲ್ಲಿ ಸಾಗುತ್ತಿದ್ದ ಯುವಕರ ನಶೋನ್ಮತ್ತ ಸ್ಥಿತಿಯೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.

VISTARANEWS.COM


on

Road Accident Mangalore Jeep
ಅಪಘಾತ ನಡೆದ ಸ್ಥಳದಲ್ಲಿ ಪೊಲೀಸರು ಮತ್ತು ಒಳಚಿತ್ರದಲ್ಲಿ ಮೃತ ಸಂತೋಷ್‌ ಬೆಳ್ಚಾಡ
Koo

ಉಳ್ಳಾಲ (ಮಂಗಳೂರು): ಮಹೀಂದ್ರಾ ಥಾರ್‌ ಜೀಪ್‌ (Mahindra Thar Jeep) ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಸವಾರರೊಬ್ಬರು (Bike rider dead) ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ (Road Accident). ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ ಥಾರ್‌ ಜೀಪ್‌ನಲ್ಲಿದ್ದವರ ಗಾಂಜಾ ನಶೆಯೇ (Ganja Case) ಕಾರಣ ಎಂದು ಆರೋಪಿಸಲಾಗಿದೆ.

ಥಾರ್‌ ಜೀಪ್‌ ಮಂಗಳೂರಿನಿಂದ ಕಾಸರಗೋಡು ಕಡೆಗೆ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಅದು ಅತಿವೇಗ ಮತ್ತು ಅಜಾಗರೂಕತೆಯಿಂದ ವೇಗವಾಗಿ ಧಾವಿಸಿ ನಿಯಂತ್ರಣ ತಪ್ಪಿ ಎದುರು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಯ ರಭಸ ಎಷ್ಟಿತ್ತೆಂದರೆ ಕಾರಿನ ಚಕ್ರವೇ ಸಿಡಿದು ಹೊರಬಂತು.

ಹಾಗೆ ಕಾರಿನಿಂದ ಸಿಡಿದ ಕಾರು ಮುಂದೆ ಸಾಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯಿತು. ಚಕ್ರದ ಹೊಡೆತಕ್ಕೆ ಒಮ್ಮಿಂದೊಮ್ಮೆಗೇ ಸವಾರ ಕಕ್ಕಾಬಿಕ್ಕಿಯಾದರು. ಆಗ ಬೈಕ್‌ ಹೋಗಿ ಡಿವೈಡರ್‌ಗೆ ಬಡಿಯಿತು. ಬೈಕ್‌ ಸವಾರ ಅಲ್ಲೇ ಉರುಳಿಬಿದ್ದ ಪರಿಣಾಮವಾಗಿ ತಲೆ ರಸ್ತೆಗೆ ಬಡಿದು ಪ್ರಾಣ ಕಳೆದುಕೊಂಡಿದ್ದಾರೆ.

ಕೊಲ್ಯ ನಿವಾಸಿ ಸಂತೋಷ್ ಬೆಳ್ಚಾಡ ( 45) ಮೃತರು. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಅವರು ಕೆಲಸ ಮುಗಿಸಿ ಮನೆ ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ.

ಮಂಗಳೂರು ಕಡೆಯಿಂದ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆಯಲ್ಲಿದ್ದ ಜೀಪ್ ಎದುರಿನಲ್ಲಿ ಧರ್ಮಸ್ಥಳದಿಂದ ಕಾಞಂಗಾಡ್ ಗೆ ಕುಟುಂಬ ಸಮೇತರಾಗಿ ತೆರಳುತ್ತಿದ್ದ ಬಲೇನೋ ಕಾರಿನ ಮುಂಭಾಗಕ್ಕೆ ಢಿಕ್ಕಿ ಹೊಡೆದಿದೆ.

Road Accident mangalore

ಆಯತಪ್ಪಿದ ಕಾರು ಎದುರಿನಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ಬೈಕ್ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಬೈಕ್ ಡಿವೈಡರ್ ಗೆ ಬಡಿದ ಪರಿಣಾಮ ಸಂತೋಷ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ತೆರಳುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ವಿವಾಹಿತರಾಗಿದ್ದ ಸಂತೋಷ್ ಹೆತ್ತವರು, ಇಬ್ಬರು ಹೆಣ್ಮಕ್ಕಳು ಹಾಗೂ ಪತ್ನಿ ಇರುವ ಕುಟುಂಬದ ಆಧಾರಸ್ತಂಭವಾಗಿದ್ದರು.

ಇದನ್ನೂ ಓದಿ : Road Accident : ಡಿವೈಡರ್‌ಗೆ ಬೈಕ್‌ ಡಿಕ್ಕಿ; ಜವರಾಯನ ಮನೆ ಸೇರಿದ ಸವಾರ

ಗಾಂಜಾ ನಶೆಯಿಂದ ಘಟನೆ, ಶಾಶ್ವತ ಸಂಚಾರಿ ಪೊಲೀಸ್, ಬ್ಯಾರಿಕೇಡ್‌ಗೆ ಆಗ್ರಹ

ಘಟನೆ ಸಂಬಂಧ ಆಕ್ರೋಶ ವ್ಯಕ್ತಪಡಿಸಿರುವ ಕೊಲ್ಯ ನಿವಾಸಿಗಳು ತಕ್ಷಣವೇ ಸ್ಥಳದಲ್ಲಿ ಸಂಚಾರಿ ಪೊಲೀಸರು, ಬ್ಯಾರಿಕೇಡ್ ಅಳವಡಿಸಲು ಒತ್ತಾಯಿಸಿದ್ದಾರೆ. ಸ್ಥಳದಲ್ಲಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಲೇ ಇದೆ. ಪೊಲೀಸರು ಯಾವುದೇ ಕ್ರಮ ವಹಿಸುತ್ತಿಲ್ಲ.

ಮಂಗಳವಾರ ನಡೆದಿರುವ ಅಪಘಾತಕ್ಕೆ ಗಾಂಜಾ ನಶೆಯೇ ಕಾರಣ. ಜೀಪಿನಲ್ಲಿದ್ದ ಮೂವರು ಯುವಕರು ನಶೆಯಲ್ಲಿದ್ದರಿಂದ ಘಟನೆ ನಡೆದಿದೆ. ತಕ್ಷಣವೇ ಮೂವರನ್ನು ತನಿಖೆಗೆ ಒಳಪಡಿಸಿ ಮೃತರಿಗೆ ನ್ಯಾಯ ದೊರಕಿಸಿಕೊಡಬೇಕು ಎಂಬ ಆಗ್ರಹವನ್ನು ಸ್ಥಳೀಯ ಶೇಖರ್ ಕನೀರುತೋಟ ಮಾಡಿದ್ದಾರೆ.

Continue Reading
Advertisement
Residential School
ಕರ್ನಾಟಕ3 mins ago

Chikkamagaluru News: ವಸತಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿನಿಯರಿಗೆ ಚಿತ್ರಹಿಂಸೆ; ಕ್ರಮಕ್ಕೆ ಪೋಷಕರ ಆಗ್ರಹ

HD Deve Gowda lashes out at CM Siddaramaiah and Nikhil Kumaraswamy with him
ರಾಜಕೀಯ8 mins ago

HD Devegowda: ಮೋದಿ ಬಗ್ಗೆ ಮಾತನಾಡಲು ನೀವು ಯಾರು? ಸಿಎಂ ಸಿದ್ದರಾಮಯ್ಯಗೆ ಎಚ್‌.ಡಿ. ದೇವೇಗೌಡ ಪ್ರಶ್ನೆ

Expensive Celebrity Saree Draper
ಫ್ಯಾಷನ್9 mins ago

Expensive Celebrity Saree Draper: ಸ್ಟಾರ್‌ಗಳಿಗೆ ಸೀರೆ ಉಡಿಸಿದರೆ ಇವರ ಚಾರ್ಜ್ 2 ಲಕ್ಷ ರೂ.! ಯಾರಿವರು ಡಾಲಿ ಜೈನ್‌?

Weather
ಮಳೆ11 mins ago

karnataka Weather : ರಾಯಚೂರಲ್ಲಿ ತಾಪಮಾನದ ಬಿಸಿ; ಉಳಿದೆಡೆ ಹೇಗೆ?

WPL 2024
ಕ್ರಿಕೆಟ್19 mins ago

WPL 2024: ಡಬ್ಲ್ಯುಪಿಎಲ್​ಗೂ ತಟ್ಟಿದ ಡಿಆರ್​ಎಸ್ ವಿವಾದ; ಅಸಮಾಧಾನ ಹೊರಹಾಕಿದ ಯುಪಿ ತಂಡ

Narendra Modi
ದೇಶ33 mins ago

Narendra Modi: ಕಾಜಿರಂಗ ಅಭಯಾರಣ್ಯದಲ್ಲಿ ರಾತ್ರಿ ಕಳೆಯಲಿರುವ ಮೋದಿ; ಇದರಲ್ಲೂ ಇದೆ ಒಂದು ದಾಖಲೆ!

Road Accident Mangalore Jeep
ದಕ್ಷಿಣ ಕನ್ನಡ37 mins ago

Road Accident : ಗಾಂಜಾ ನಶೆಯಲ್ಲಿ ಎರ‍್ರಾಬಿರ‍್ರಿ ಓಡಿದ ಥಾರ್ ಜೀಪ್; ಬೈಕ್‌ ಸವಾರ ಸಾವು

aadujeevitham
South Cinema38 mins ago

ಮಾ. 28ರಂದು ತೆರೆಗೆ ಬರಲಿದೆ ʼಆಡು ಜೀವಿತಂʼ; ʼಲಾರೆನ್ಸ್ ಆಫ್ ಅರೇಬಿಯಾ’ ಚಿತ್ರಕ್ಕೆ ಹೋಲಿಸಿದ ಎ.ಆರ್.ರೆಹಮಾನ್

Tips To Calm The Mind
ಲೈಫ್‌ಸ್ಟೈಲ್42 mins ago

Tips To Calm The Mind: ಮನಸ್ಸನ್ನು ಪ್ರಶಾಂತಗೊಳಿಸುವುದು ಹೇಗೆ? ಇಲ್ಲಿವೆ ಸುಲಭೋಪಾಯಗಳು!

Attempt to Murder Stabbed again in Shivamogga Two miscreants attack and flee
ಕರ್ನಾಟಕ44 mins ago

Attempt to Murder: ಶಿವಮೊಗ್ಗದಲ್ಲಿ ಮತ್ತೆ ಚಾಕು ಇರಿತ; ಇಬ್ಬರು ದುಷ್ಕರ್ಮಿಗಳಿಂದ ದಾಳಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ1 day ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ3 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌