BY Vijayendra: ʼವಿಜಯʼ ಸಾರಥ್ಯಕ್ಕೆ 100 ದಿನ; ಕಾರ್ಯಕರ್ತರ ಮನಗೆದ್ದ ವಿಜಯೇಂದ್ರಗೆ ಈಗ ಲೋಕಸಭೆಯೇ ಟಾರ್ಗೆಟ್! - Vistara News

ರಾಜಕೀಯ

BY Vijayendra: ʼವಿಜಯʼ ಸಾರಥ್ಯಕ್ಕೆ 100 ದಿನ; ಕಾರ್ಯಕರ್ತರ ಮನಗೆದ್ದ ವಿಜಯೇಂದ್ರಗೆ ಈಗ ಲೋಕಸಭೆಯೇ ಟಾರ್ಗೆಟ್!

BY Vijayendra: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೂರು ದಿನಗಳನ್ನು ಪೂರೈಸಿದ್ದಾರೆ. ಈ ನೂರು ದಿನಗಳಲ್ಲಿ ಹಲವು ಸವಾಲುಗಳನ್ನು ಒಂದೊಂದಾಗೇ ಬಗೆಹರಿಸುತ್ತಾ ಬಂದಿದ್ದಾರೆ. ಕಳೆದ ನೂರು ದಿನಗಳಲ್ಲಿ ಒಂದು ದಿನವೂ ವಿರಾಮವನ್ನು ತೆಗೆದುಕೊಳ್ಳದ ವಿಜಯೇಂದ್ರ, ಈವರೆಗೆ 10 ಸಾವಿರ ಕಿ.ಮೀ. ಸಂಚರಿಸಿದ್ದಾರೆ. ವಿಧಾನಸಭಾ ಸೋಲಿನಿಂದ ಕಂಗೆಟ್ಟಿದ್ದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ.

VISTARANEWS.COM


on

BY Vijayendra completes 100 days Gearing up for Lok Sabha election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಕಣ್ಣ ಮುಂದಿದೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಹಳಿ ತಪ್ಪಿದ್ದ ರಾಜ್ಯ ಬಿಜೆಪಿಯನ್ನು ಸರಿದಾರಿಗೆ ತರುವುದು ಬಿಜೆಪಿ ಹೈಕಮಾಂಡ್‌ಗೆ (BJP high command) ತಲೆನೋವಾಗಿತ್ತು. ಈ ಹಿನ್ನೆಲೆಯಲ್ಲಿ ಅಳೆದೂ ತೂಗಿ ಬಿಜೆಪಿಯಿಂದ ರಾಜ್ಯಾಧ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ (BY Vijayendra) ಅವರನ್ನು ನೇಮಕ ಮಾಡಲಾಗಿತ್ತು. ಈಗ ವಿಜಯೇಂದ್ರ ಅವರು ಅಧಿಕಾರ ಸ್ವೀಕಾರ ಮಾಡಿ ನೂರು ದಿನಗಳು ಪೂರೈಸಿದ್ದು, ಹಲವಾರು ಸವಾಲುಗಳನ್ನು ಮೆಟ್ಟಿ ನಿಂತಿದ್ದಾರೆ. ಅಲ್ಲದೆ, 100 ದಿನದಲ್ಲಿ 10 ಸಾವಿರ ಕಿ.ಮೀ. ಸಂಚಾರ ಮಾಡಿದ್ದಾರೆ.

ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುತ್ತಿದ್ದಂತೆ ಮೊದಲು ಅವರು ಮಾಡಿದ್ದ ಕೆಲಸ ಬೂತ್‌ ಮಟ್ಟದ ಅಧ್ಯಕ್ಷರೊಬ್ಬರ ಮನೆಗೆ ಭೇಟಿ ನೀಡಿರುವುದು. ಈ ಮೂಲಕ ತಾವು ಮೊದಲು ಕಾರ್ಯಕರ್ತರಿಗೆ ಬೆಲೆ, ಮನ್ನಣೆಯನ್ನು ಕೊಡುತ್ತೇನೆ. ಇದು ಕಾರ್ಯಕರ್ತರ ಪಕ್ಷ, ಕಾರ್ಯಕರ್ತರಿದ್ದರೆ ನಾಯಕರು ಎಂಬ ಸಂದೇಶವನ್ನು ರವಾನೆ ಮಾಡಿದರು. ಇದು ಹೆಚ್ಚಿನ ಕಾರ್ಯಕರ್ತರ ಮನಮುಟ್ಟಿತ್ತು. ಅಲ್ಲದೆ, ರಾಜ್ಯ ಸರ್ಕಾರದಿಂದ ಯಾವುದೇ ರೀತಿಯಾದ ತೊಂದರೆ ಎದುರಾದರೂ ಪಕ್ಷದ ಕಾರ್ಯಕರ್ತರ ಪರವಾಗಿ ನಿಲ್ಲುತ್ತೇನೆ ಎಂಬ ಸಂದೇಶವನ್ನು ಕೊಡುವ ಮೂಲಕ ಕಾರ್ಯಕರ್ತರು ನನ್ನ ಆದ್ಯತೆ ಎಂಬ ಸಂದೇಶವನ್ನೂ ರವಾನೆ ಮಾಡಿದರು. ಈ ಎಲ್ಲದರ ನಡುವೆ ಮುನಿಸಿಕೊಂಡು ಪಕ್ಷ ತೊರೆದಿದ್ದ ನಾಯಕರನ್ನು ವಾಪಸ್‌ ಕರೆತರುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಅಲ್ಲದೆ, ಪಕ್ಷದೊಳಗೇ ಬೇಸರಗೊಂಡಿದ್ದ ನಾಯಕರನ್ನೂ ಸಮಾಧಾನಪಡಿಸುವ ಕಾರ್ಯಕ್ಕೆ ಕೈಹಾಕಿದ್ದಾರೆ.

BY Vijayendra completes 100 days Gearing up for Lok Sabha election

100 ದಿನ – 10 ಸಾವಿರ ಕಿ.ಮೀ ಪ್ರವಾಸ- 10 ಸವಾಲು ಮೆಟ್ಟಿನಿಂತ ವಿಜಯೇಂದ್ರ!

ಬಿ.ವೈ ವಿಜಯೇಂದ್ರ ಅವರು ನೂರು ದಿನಗಳಲ್ಲಿ ಹಲವು ಸವಾಲುಗಳನ್ನು ಒಂದೊಂದಾಗೇ ಬಗೆಹರಿಸುತ್ತಾ ಬಂದಿದ್ದಾರೆ. ಕಳೆದ ನೂರು ದಿನಗಳಲ್ಲಿ ಒಂದು ದಿನವೂ ವಿರಾಮವನ್ನು ತೆಗೆದುಕೊಳ್ಳದ ವಿಜಯೇಂದ್ರ, ಈವರೆಗೆ 10 ಸಾವಿರ ಕಿ.ಮೀ. ಸಂಚರಿಸಿದ್ದಾರೆ. ವಿಧಾನಸಭಾ ಸೋಲಿನಿಂದ ಕಂಗೆಟ್ಟಿದ್ದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ.

ಹಿರಿಯ ನಾಯಕರಿಂದಲೂ ಶಹಬ್ಬಾಸ್‌ಗಿರಿ!

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಎಂದರೆ ಅದೊಂದು ಉನ್ನತ ಹುದ್ದೆ ಹಾಗೂ ಗೌರವವಾಗಿದೆ. ಇದಕ್ಕೆ ಹಿರಿಯ ನಾಯಕರನ್ನು ಆಯ್ಕೆ ಮಾಡಿಕೊಂಡು ಬಂದಿರುವುದು ಪರಿಪಾಠವಾಗಿತ್ತು. ಆದರೆ, ಯುವಕರಾಗಿರುವ ಬಿ.ವೈ. ವಿಜಯೇಂದ್ರ ಅವರನ್ನು ನೇಮಕ ಮಾಡಿದ್ದ ಹೈಕಮಾಂಡ್‌ ಕ್ರಮದ ವಿರುದ್ಧ ಕೆಲವು ಹಿರಿಯ ನಾಯಕರು ಬೇಸರಗೊಂಡಿದ್ದರು. ಆದರೆ, ಈಗ ಅವರಿಂದಲೇ ಒಳ್ಳೆಯ ಸಂಘಟಕ ಎಂಬ ಹೆಸರು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ನೂತನವಾಗಿ ರಾಜ್ಯದ ವಿವಿಧ ಮೋರ್ಚಾಗಳ ಅಧ್ಯಕ್ಷರನ್ನು ಬಿ.ವೈ. ವಿಜಯೇಂದ್ರ ನೇಮಕ ಮಾಡಿದ್ದಾರೆ. ಜಿಲ್ಲಾ ಘಟಕಗಳನ್ನು ಪುನರ್ ರಚನೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಿಟ್ಟಿದ್ದ ಹಿರಿಯರನ್ನು ವಾಪಸ್‌ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರನ್ನು ಕಾಂಗ್ರೆಸ್‌ನಿಂದ ಮರಳಿ ಬಿಜೆಪಿಗೆ ಕರೆತರುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ.

ಅಸಮಾಧಾನಿತ ನಾಯಕರನ್ನು ಭೇಟಿ ಮಾಡಿ ಸಮಾಧಾನ ಮಾಡುವ ಕೆಲಸ ಮಾಡಿದ್ದಾರೆ. ಮೈತ್ರಿ ಖಚಿತ ಆದ ಬಳಿಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಸಮನ್ವಯತೆಯನ್ನು ಸಾಧಿಸಿಕೊಂಡಿದ್ದಾರೆ. ಮುಂದಿನ ಹೋರಾಟದ ರೂಪುರೇಷೆಯಲ್ಲಿ ಯಾವುದೇ ರೀತಿಯ ಗೊಂದಲಗಳು ಆಗಬಾರದು ಎಂಬ ರೀತಿಯಲ್ಲಿ ಮುನ್ನೆಚ್ಚರಿಕೆಯ ಹೆಜ್ಜೆಯನ್ನಿಡುತ್ತಿದ್ದಾರೆ. ಇದರ ಭಾಗವಾಗಿ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ.

BY Vijayendra completes 100 days Gearing up for Lok Sabha election

ಸಂಘಟನೆಗೆ ಚುರುಕು

ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಿಂದ ಸಂಘಟನೆಯನ್ನು ಚುರುಕುಗೊಳಿಸಿದ್ದಾರೆ. ಕರ್ನಾಟಕದಲ್ಲಿರುವ 28 ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರವನ್ನೂ ಗೆಲ್ಲುವ ನಿಟ್ಟಿನಲ್ಲಿ ತಮ್ಮದೇ ಆದ ರಣತಂತ್ರವನ್ನು ರೂಪಿಸಲು ಮುಂದಾಗಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸರ್ವೆ ರಿಪೋರ್ಟ್ ಮತ್ತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಂದೇಶವನ್ನು ರವಾನೆ ಮಾಡಿದ್ದಾರೆ.

ಕಳೆದ ನೂರು ದಿನಗಳಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಒಂದಲ್ಲ ಒಂದು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಯುವಕರಲ್ಲಿ ಎಲೆಕ್ಷನ್ ಉತ್ಸಾಹ ಕಂಡು ಬಂದಿದೆ. ಅಲ್ಲದೆ, ಬಿಜೆಪಿಯ ಹಿರಿಯರಲ್ಲಿ ಸಹ ವಿಜಯೇಂದ್ರ ಮೇಲೆ ನಂಬಿಕೆ ಬಂದಿದೆ. ಸದಾನಂದ ಗೌಡ ಸೇರಿದಂತೆ ಹಲವು ಹಿರಿಯ ನಾಯಕರು ವಿಜಯೇಂದ್ರ ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ಈ ಕಾರಣದಿಂದಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಾಧಕ-ಬಾಧಕಗಳನ್ನು ಲೆಕ್ಕ ಹಾಕಿಯೇ ರಾಜ್ಯ ಬಿಜೆಪಿಯ ನೊಗವನ್ನು ಬಿ.ವೈ. ವಿಜಯೇಂದ್ರ ಅವರ ಹೆಗಲಿಗೆ ಕಟ್ಟಿದ್ದಾರೆ. ಹೀಗಾಗಿ ಈಗ ದೆಹಲಿ ನಾಯಕರ ಭೇಟಿ ಸುಗಮವಾಗಿ ಸಿಗುತ್ತಿದೆ.

ಸಂಘಟನೆ ಚುರುಕಿಗೆ ಒತ್ತು

ಕಳೆದ ಚುನಾವಣೆ ವೇಳೆಗೆ ರಾಜ್ಯ ಬಿಜೆಪಿ ನಾವಿಕನಿಲ್ಲದ ದೋಣಿಯಂತೆ ಆಗಿತ್ತು. ಆಗಲೇ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂಬ ಕೂಗು ಕೇಳಿಬಂದಿತ್ತು. ಆದರೆ, ಚುನಾವಣೆಯಲ್ಲಿ ಪಕ್ಷ ಸೋಲು ಕಂಡ ಬಳಿಕ ಒಬ್ಬ ಗಟ್ಟಿ ನಾಯಕನ ಅಗತ್ಯವಿದ್ದು, ಲೋಕಸಭೆಗೆ ಪಕ್ಷವನ್ನು ಸಂಘಟಿಸಬಲ್ಲ, ಎಲ್ಲರನ್ನೂ ಜತೆಗೆ ಕರೆದೊಯ್ಯಬಲ್ಲ ನಾಯಕನ ಅವಶ್ಯಕತೆ ಇತ್ತು. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರ ಗ್ರೌಂಡ್‌ ರಿಪೋರ್ಟ್‌ ಪಡೆದುಕೊಂಡಿದ್ದ ಹೈಕಮಾಂಡ್‌ ಕೊನೆಗೆ ಅವರ ಆಯ್ಕೆಯನ್ನು ಮಾಡಿತ್ತು. ಇಲ್ಲಿ ಕೇವಲ ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ಆಯ್ಕೆ ಮಾನದಂಡವಾಗಿ ಪರಿಗಣನೆಗೆ ತೆಗೆದುಕೊಂಡಿಲ್ಲ ಎಂಬ ಸಂದೇಶವನ್ನು ಸಹ ಹೈಕಮಾಂಡ್‌ ರವಾನೆ ಮಾಡಿತ್ತು. ಏಕೆಂದರೆ, ಅದಾಗಲೇ ರಾಜ್ಯದಲ್ಲಿ ಒಂದೆರಡು ಉಪ ಚುನಾವಣೆಯ ಗೆಲುವು, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ರಾಜ್ಯ ಸುತ್ತಾಟ, ಇದಲ್ಲದೆ, ಯುವ ಜನತೆಗೆ ವಿಜಯೇಂದ್ರ ಮೇಲಿರುವ ಕ್ರೇಜ್‌ ಸೇರಿದಂತೆ ಹಲವು ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿತ್ತು. ಈಗ ಶತದಿನ ಪೂರೈಸಿರುವ ಬಿ.ವೈ. ವಿಜಯೇಂದ್ರ, ಲೋಕಸಭೆ ಚುನಾವಣೆಯಲ್ಲಿ ಕ್ಲೀನ್‌ಸ್ವೀಪ್‌ ಮಾಡಲು ಕಾರ್ಯತಂತ್ರಗಳನ್ನು ಹೆಣೆಯುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

VISTARANEWS.COM


on

ಜೋಸೆಫ್‌ ವಿಜಯ್‌

ಇಂದು ಮಧ್ಯಾಹ್ನ 3ಕ್ಕೆ ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆಯಲಿರುವ ಜೋಸೆಫ್ ವಿಜಯ್‌

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ವಿಜಯ್‌ ಅವರು ಮೂಕಾಂಬಿಕೆ ಸನ್ನಿಧಿಗೆ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿ. ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿಯೂ ಮೂಕಾಂಬಿಕೆ ದೇವಸ್ಥಾನಕ್ಕೆ ವಿಶೇಷ ಸ್ಥಾನಮಾನವಿದೆ. ಮಾಜಿ ಮುಖ್ಯಮಂತ್ರಿ ಎಂಜಿಆರ್‌ ತಮ್ಮ ಆಡಳಿತ ಅವಧಿಯಲ್ಲಿ ಹಲವು ಬಾರಿ ಕೊಲ್ಲೂರಿಗೆ ಭೇಟಿ ನೀಡಿದ್ದರು. ದೇವಸ್ಥಾನದಲ್ಲಿರುವ ಸುಮಾರು 1 ಕೆ.ಜಿ. ತೂಕದ ಚಿನ್ನದ ಖಡ್ಗವನ್ನು ಎಂಜಿಆರ್‌ ದೇಣಿಗೆಯಾಗಿ ನೀಡಿದ್ದರು ಎಂಬುದು ವಿಶೇಷ.

ಎಂಜಿಆರ್‌ ಬಳಿಕ ಅವರ ರಾಜಕೀಯ ಉತ್ತರಾಧಿಕಾರಿಯಾಗಿದ್ದ ಜಯಲಲಿತಾ ಕೂಡ ಮೂಕಾಂಬಿಕೆ ದೇವಿಯ ಅಪಾರ ಭಕ್ತೆಯಾಗಿದ್ದರು. ರಾಜಕೀಯ ಹಾಗೂ ವೈಯಕ್ತಿಕ ಸವಾಲುಗಳ ಸಮಯದಲ್ಲಿ ಅವರು ಕೊಲ್ಲೂರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದರು. ಆಪ್ತ ಜ್ಯೋತಿಷಿಗಳ ಸಲಹೆ ಮೇರೆಗೆ ಜಯಲಲಿತಾ ಅವರು ಮೂಕಾಂಬಿಕೆ ಸನ್ನಿಧಿಯಲ್ಲಿ ಚಂಡಿಕಾ ಹೋಮ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ್ದರು.

ಈಗ ವಿಜಯ್‌ ಅವರ ಭೇಟಿ ಕೂಡ ಇದೇ ಪರಂಪರೆಯ ಮುಂದುವರಿಕೆಯೇ ಅಥವಾ ಕೇವಲ ವೈಯಕ್ತಿಕ ಭಕ್ತಿಯ ಅಭಿವ್ಯಕ್ತಿಯೇ ಎಂಬ ಚರ್ಚೆಗಳು ಜೋರಾಗಿವೆ. ಒಟ್ಟಾರೆ, ತಮಿಳುನಾಡು ರಾಜಕೀಯದ ಪ್ರಮುಖ ನಾಯಕರೊಂದಿಗೆ ಮೂಕಾಂಬಿಕೆ ದೇವಸ್ಥಾನದ ನಂಟು ಮತ್ತೊಮ್ಮೆ ಸುದ್ದಿಯ ಕೇಂದ್ರಬಿಂದುವಾಗಿದೆ.

Also Read: ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

VISTARANEWS.COM


on

ರಾಜ್ಯಸಭೆ

ರಾಜ್ಯಸಭೆಗೆ ಕರ್ನಾಟಕದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ಕರ್ನಾಟಕದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಗೆ ನಾಮಪತ್ರ ವಾಪಸ್ ಪಡೆಯಲು ಇಂದು ಮಧ್ಯಾಹ್ನ 3 ಗಂಟೆಯವರೆಗೆ ಅವಕಾಶವಿತ್ತು. ನಾಮಪತ್ರ ಸಲ್ಲಿಸಿರುವ ಯಾವ ಅಭ್ಯರ್ಥಿಯೂ ತಮ್ಮ ನಾಮಪತ್ರ ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಹಾಗೂ ವಿಧಾನಸಭೆ ಕಾರ್ಯದರ್ಶಿ ಕೆ.ಎಂ. ವಿಶಾಲಾಕ್ಷಿ ನಾಲ್ವರನ್ನು ಅವಿರೋಧವಾಗಿದ್ದಾರೆಂದು ಘೋಷಿಸಿದ್ದಾರೆ.

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್‌ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್‌ ಖೇರಾ, ಮನ್ಸೂರ್‌ ಅಲಿ ಖಾನ್‌ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯುವ ಅವಧಿ ಇಂದು ಮಧ್ಯಾಹ್ನ 3 ಗಂಟೆಗೆ ಅಂತ್ಯಗೊಂಡ ಬಳಿಕ ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ.

Also Read: ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

ಪ್ರಮುಖ ಸುದ್ದಿ

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

VISTARANEWS.COM


on

ರಾಜ್ಯಸಭೆ ಟಿಕೆಟ್‌

ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ- ಹೆಚ್‌ಡಿಡಿ

ರಾಜ್ಯಸಭಾ ಟಿಕೆಟ್‌ಗಾಗಿ ಮೋದಿ ನನ್ನ ಸಂಬಂಧ ಆರಂಭವಾಗಿಲ್ಲ. ಮೋದಿಯವರು ವಿಶ್ವನಾಯಕ, ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆ ಜೆಡಿಎಸ್‌ ಇರುತ್ತದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರಿಗೆ ಟಿಕೆಟ್‌ ಸಿಗದ ವಿಚಾರದ ಕುರಿತು ಚರ್ಚೆ ನಡೆಯುತ್ತಿರುವಾಗಲೇ ಹೆಚ್‌.ಡಿ.ದೇವೇಗೌಡರು ಇಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ರಾಜ್ಯಸಭೆ ಟಿಕೆಟ್‌ ವಿಚಾರವಾಗಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ 18 ಶಾಸಕರು ಇದ್ದಾರೆ. ಹಾಗಾಗಿ ನಾವು ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಬಾಂಧವ್ಯ ಕೇವಲ ರಾಜ್ಯಸಭೆ ಟಿಕೆಟ್ ಅಥವಾ ರಾಜಕೀಯ ಲಾಭಕ್ಕಾಗಿ ಅಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ನನ್ನ ಮತ್ತು ಮೋದಿಯವರ ಸಂಬಂಧ ಒಂದು ರಾಜ್ಯಸಭೆ ಟಿಕೆಟ್‌ನಿಂದ ಆರಂಭವಾಗಿದೆ ಅಥವಾ ಅದಕ್ಕಾಗಿಯೇ ಮುಂದುವರಿಯುತ್ತಿದೆ ಎಂದು ರಾಜ್ಯದ ಜನರು ಭಾವಿಸಬಾರದು. 2014ರಲ್ಲಿ ಮೋದಿ ಅವರು ಮೊದಲ ಬಾರಿಗೆ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಾಗಿನಿಂದಲೇ ಅವರ ಕಾರ್ಯವೈಖರಿಯನ್ನು ಗಮನಿಸುತ್ತಿದ್ದೇನೆ” ಎಂದು ದೇವೇಗೌಡರು ಹೇಳಿದ್ದಾರೆ.

ಗೋಧ್ರಾ ಘಟನೆಯ ಸಂದರ್ಭದಲ್ಲಿ ತಾವು ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮೋದಿ ಅವರನ್ನು ಟೀಕಿಸಿದ್ದ ವಿಚಾರವನ್ನೂ ಅವರು ನೆನಪಿಸಿಕೊಂಡರು. ಆದರೆ ನಂತರ ಪ್ರಧಾನಿಯಾದ ಬಳಿಕ ಮೋದಿ ಅವರನ್ನು ಹಲವು ಬಾರಿ ಭೇಟಿಯಾಗಿ ವಿವಿಧ ರಾಷ್ಟ್ರೀಯ ಹಾಗೂ ರಾಜ್ಯದ ವಿಚಾರಗಳ ಕುರಿತು ಚರ್ಚೆ ನಡೆಸಿರುವುದಾಗಿ ತಿಳಿಸಿದ್ದಾರೆ.

ಕಳೆದ ಹತ್ತು ವರ್ಷಗಳಲ್ಲಿ ದೇಶದ ಅಭಿವೃದ್ಧಿಗಾಗಿ ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗಮನಿಸಿದ್ದೇನೆ. ದೇಶದ ಆರ್ಥಿಕತೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೇಶ ಗಮನಾರ್ಹ ಪ್ರಗತಿ ಸಾಧಿಸಿದೆ. ಜಾಗತಿಕ ಮಟ್ಟದಲ್ಲೂ ಮೋದಿ ಅವರಿಗೆ ವಿಶಿಷ್ಟ ಗೌರವ ಮತ್ತು ಸ್ಥಾನಮಾನ ದೊರೆತಿದೆ ಎಂದು ದೇವೇಗೌಡರು ಮೆಚ್ಚುಗೆ ವ್ಯಕ್ತಪಡಿಸಿದರು.

“ಮೋದಿಯವರಂತಹ ನಾಯಕತ್ವವನ್ನು ಬೇರೆ ಯಾರಿಂದಲೂ ಸರಿಸಾಟಿಯಾಗಿ ನಿರ್ವಹಿಸಲು ಸಾಧ್ಯವಿಲ್ಲ. ವೈಯಕ್ತಿಕವಾಗಿ ಅವರೊಂದಿಗೆ ನನಗೆ ಆತ್ಮೀಯ ಸಂಬಂಧವಿದೆ. ನಾನು ರಾಜ್ಯಸಭಾ ಸದಸ್ಯನಾಗದಿದ್ದರೂ ಆ ಸಂಬಂಧ ಮುಂದುವರಿಯುತ್ತದೆ” ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಚಾರ ಬಂದರೂ ಪ್ರಧಾನಿಯನ್ನು ಭೇಟಿ ಮಾಡುವ ಅಥವಾ ಪತ್ರ ಬರೆಯುವ ಅವಕಾಶ ನನಗಿದೆ. ನಮ್ಮ ಸಂಬಂಧ ರಾಜಕೀಯ ಹುದ್ದೆಗಳಿಗೆ ಸೀಮಿತವಲ್ಲ ಎಂದು ದೇವೇಗೌಡರು ಹೇಳಿದರು.

ಇದೇ ವೇಳೆ, ಎನ್‌ಡಿಎ ಜತೆಗಿನ ಜೆಡಿಎಸ್ ಬಾಂಧವ್ಯದ ಬಗ್ಗೆ ಮಾತನಾಡಿದ ಅವರು, “ಒಂದು ರಾಜ್ಯಸಭೆ ಸ್ಥಾನದ ಕಾರಣಕ್ಕೆ ಎನ್‌ಡಿಎ ಜೊತೆಗಿನ ಸಂಬಂಧ ಮುಕ್ತಾಯವಾಗುವುದಿಲ್ಲ. ನಾವು ರಾಜ್ಯಸಭಾ ಸ್ಥಾನವನ್ನು ಕೇಳಿಯೂ ಇಲ್ಲ ಎಂದ ಅವರು ದೇವೇಗೌಡರು ಇರುವವರೆಗೂ ಎನ್‌ಡಿಎ ಜೊತೆಗಿನ ಮೈತ್ರಿ ಮತ್ತು ಸಂಬಂಧ ಮುಂದುವರಿಯಲಿದೆ” ಎಂದು ಸ್ಪಷ್ಟಪಡಿಸಿದರು.

Also Read: ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

VISTARANEWS.COM


on

ನರೇಂದ್ರ ಮೋದಿ

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅವರು ದೇಶದ ಮೊದಲ ಪ್ರಧಾನಿ ಜವಹರ್‌ ಲಾಲ್‌ ನೆಹರು ಅವರ ದಾಖಲೆಯನ್ನು ಹಿಂದಿಕ್ಕಿ, ಭಾರತದ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಯಾಗಿ ಹೊರಹೊಮ್ಮಿದ್ದಾರೆ.
2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಮೋದಿ, ಇಂದಿಗೆ ( ಜೂನ್ 10)ರ ವೇಳೆಗೆ ನಿರಂತರವಾಗಿ 4,399 ದಿನಗಳ ಕಾಲ ಅಧಿಕಾರದಲ್ಲಿದ್ದು, ನೆಹರೂ ಅವರ 4,398 ದಿನಗಳ ಚುನಾವಣೋತ್ತರ ಪ್ರಧಾನಮಂತ್ರಿ ಅವಧಿಯನ್ನು ಮೀರಿಸಿದ್ದಾರೆ.
ನೆಹರೂ ಅವರು 1947ರಿಂದ ಪ್ರಧಾನಿಯಾಗಿದ್ದರೂ, ಭಾರತದಲ್ಲಿ ಮೊದಲ ಸಾರ್ವತ್ರಿಕ ಚುನಾವಣೆ 1951-52ರಲ್ಲಿ ನಡೆದ ಕಾರಣ, ಚುನಾವಣೆಯ ಮೂಲಕ ಆಯ್ಕೆಯಾದ ಪ್ರಧಾನಿಯಾಗಿ ಅವರ ಅವಧಿಯನ್ನು 1952ರಿಂದ ಲೆಕ್ಕಿಸಲಾಗುತ್ತದೆ. ಇದೇ ಮಾನದಂಡದ ಪ್ರಕಾರ ಮೋದಿ ಇದೀಗ ಹೊಸ ದಾಖಲೆ ನಿರ್ಮಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರ ಸ್ವೀಕರಿಸಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದ ಹಲವೆಡೆ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

Also Read: ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading
Advertisement
ಬಿಡದಿ ಟೌನ್‌ಶಿಪ್‌
Latest1 day ago

ಬಿಡದಿ ಟೌನ್‌ಶಿಪ್‌ ರೈತರ ವಿರೋಧ : ಜೂನ್ 22ರಂದು ‘ಭೈರಮಂಗಲ ಚಲೋ’

ಸಿಎಂ ಡಿಕೆಶಿ
Latest1 day ago

ಸರ್ಕಾರಿ ಕಚೇರಿಯಲ್ಲಿ ಲಂಚ ಕೇಳಿದ್ರೆ ಹುಷಾರ್‌: ಅಧಿಕಾರಿಗಳಿಗೆ ಸಿಎಂ ಡಿಕೆಶಿ ಖಡಕ್ ಸೂಚನೆ

ನೀಟ್ 2026 ಪರೀಕ್ಷೆ
Latest2 days ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest3 days ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ಜೋಸೆಫ್ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

ರಾಜ್ಯಸಭೆ
Latest3 days ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest3 days ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ5 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest5 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest5 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest5 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌