BY Vijayendra : ಮಗನನ್ನು ಆಶೀರ್ವದಿಸಿದ ಬಿಎಸ್‌ವೈ, ಆರತಿ ಬೆಳಗಿದ ಅಕ್ಕಂದಿರು Vistara News

ಕರ್ನಾಟಕ

BY Vijayendra : ಮಗನನ್ನು ಆಶೀರ್ವದಿಸಿದ ಬಿಎಸ್‌ವೈ, ಆರತಿ ಬೆಳಗಿದ ಅಕ್ಕಂದಿರು

BY Vijayendra : ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನ ವಿಜಯೇಂದ್ರ ಅವರು ತಂದೆ ಬಿ.ಎಸ್‌. ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು.

VISTARANEWS.COM


on

Vijayendra seeks blessings of BS Yediyurappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ (BJP State President) ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಬಿ.ವೈ ವಿಜಯೇಂದ್ರ (BY Vijayendra) ಅವರು ಗುರುಹಿರಿಯರ ಆಶೀರ್ವಾದ, ಮನೆ ಮಂದಿಯ ಪ್ರೀತಿಯ ಹರಕೆಗಳನ್ನು ಹೊತ್ತು ಮುನ್ನಡೆದಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸುವ ಮುನ್ನ ಅವರು ಡಾಲರ್ಸ್‌ ಕಾಲನಿಯಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ಅವರ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿ ಅಲ್ಲಿ ತಂದೆಯವರ ಕಾಲಿಗೆರಗಿ ಆಶೀರ್ವಾದ ಕೋರಿದರು.

ಒಂದು ಕಾಲದಲ್ಲಿ ಬಿಜೆಪಿಯನ್ನು ಅತ್ಯಂತ ತಳಮಟ್ಟದಿಂದ ಕಟ್ಟಿದ ಯಡಿಯೂರಪ್ಪ ಅವರು ಇದೀಗ ಬಿವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುನ್ನಡೆಸುವುದನ್ನು ಕಾತರದಿಂದ ನಿರೀಕ್ಷಿಸುತ್ತಿದ್ದಾರೆ. ಬುಧವಾರ ಬೆಳಗ್ಗೆ ಪತ್ನಿ ಸಮೇತರಾಗಿ ಬಂದು ಕಾಲಿಗೆರಗಿದ ಬಿವೈ ವಿಜಯೇಂದ್ರ ಅವರನ್ನು ಬಿಎಸ್‌ವೈ ಪ್ರೀತಿಯಿಂದ ಹರಸಿದರು.

ಧವಳಗಿರಿ ನಿವಾಸಕ್ಕೆ ವಿಜಯೇಂದ್ರ ಅವರ ಮೂವರು ಸೋದರಿಯರಾದ ಪದ್ಮಾವತಿ, ಅರುಣಾದೇವಿ, ಉಮಾದೇವಿ ಅವರು ಆಗಮಿಸಿದ್ದು, ಅವರು ತಮ್ಮ ಪ್ರೀತಿಯ ತಮ್ಮನಿಗೆ ಆರತಿ ಬೆಳಗಿ ಶುಭ ಕೋರಿದರು.

Vijayendra couple seeks blessings of god at Dhavalagiri

ತಂದೆ ಮತ್ತು ಸೋದರಿಯರ ಪ್ರೀತಿ ಆಶೀರ್ವಾದ ಪಡೆಯುವ ಜತೆಗೆ ವಿಜಯೇಂದ್ರ ಅವರು ಮನೆ ದೇವರಿಗೂ ನಮಸ್ಕರಿಸಿ ಪ್ರಾರ್ಥನೆ ಸಲ್ಲಿಸಿದರು.

ಇತ್ತ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರನ್ನು ಸ್ವಾಗತಿಸಲು 108 ಪೂರ್ಣ ಕುಂಭ ಕಲಶಗಳನ್ನು ಹೊತ್ತ ಮಹಿಳೆಯರು ಸಜ್ಜಾಗಿದ್ದಾರೆ. ಬಿಜೆಪಿ ರಾಜ್ಯ ಘಟಕದ ಹಾಲಿ ಅಧ್ಯಕ್ಷರಾಗಿರುವ ನಳಿನ್‌ ಕುಮಾರ್‌ ಕಟೀಲ್‌ ಅವರು ಅಧಿಕಾರವನ್ನು ವಿಜಯೇಂದ್ರ ಅವರಿಗೆ ಹಸ್ತಾಂತರ ಮಾಡಲಿದ್ದಾರೆ.

ಕಾಂಗ್ರೆಸನ್ನು ಮಕಾಡೆ ಮಲಗಿಸ್ತೀವಿ ಎಂದ ಪ್ರಭು ಚೌಹಾಣ್‌

ಇತ್ತ ಧವಳಗಿರಿ ನಿವಾಸದಲ್ಲಿ ಮಾತನಾಡಿದ ಮಾಜಿ ಸಚಿವ ಪ್ರಭು ಚೌಹಾಣ್ ಅವರು, ʻʻಇಂದು ಐತಿಹಾಸಿಕ ದಿನ ಇದೆ. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷ ಆಗ್ತಿದ್ದಾರೆ. ರಾಜ್ಯದಲ್ಲಿ ಪೂರ್ಣ ಉತ್ಸಾಹ ಬಂದಿದೆ. ನಮಗೆ ಖುಷಿ ಇದೆ. ಅವರಿಗೆ ಶುಭಕೋರಲು ಬಂದಿದ್ದೇನೆ. ಯಾವುದೇ ಅಸಮಾಧಾನ ಇಲ್ಲ. ಮೋದಿ, ನಡ್ಡಾ, ಅಮಿತ್ ಶಾ ಎಲ್ಲರೂ ಸೇರಿ ಅಧ್ಯಕ್ಷ ಮಾಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಕಾಡೆ ಮಲಗಿಸ್ತೀವಿʼʼ ಎಂದರು.

ಇದನ್ನೂ ಓದಿ : BJP State President: ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ನಾಳೆ ಪದಗ್ರಹಣ; ಈ ಹಿಂದಿನ ಅಧ್ಯಕ್ಷರು ಯಾರ‍್ಯಾರು?

ಉತ್ಸಾಹ ದುಪ್ಪಟ್ಟು ಆಗಿದೆ ಎಂದ ಪ್ರೀತಂ ಗೌಡ

ʻʻಯುವ ನಾಯಕನಿಗೆ ವರಿಷ್ಠರು ಅವಕಾಶ ನೀಡಿದ್ದಾರೆ. ಇದು ನಮ್ಮ ಕಾರ್ಯಕರ್ತರ ಹುಮ್ಮಸ್ಸು ದುಪ್ಪಟ್ಟು ಮಾಡಿದೆ. ಹಾಸನದಲ್ಲಿ ಬಿಜೆಪಿ ಗೆಲ್ಲುತ್ತದೆ. ಹಾಸನ ಕ್ಷೇತ್ರವನ್ನು ಬಿಜೆಪಿಗೆ ಕೊಡಿ ಎಂದು ಕೇಳ್ತೀವಿ. ಬಿಜೆಪಿ ಇಂದ ಯಾರೇ ಅಭ್ಯರ್ಥಿ ಆದ್ರು ಗೆಲ್ತಾರೆ. ಹಿರಿಯರ ಮಾರ್ಗದರ್ಶನದಲ್ಲಿ ವಿಜಯೇಂದ್ರ ಪಕ್ಷ ಸಂಘಟನೆ ಮಾಡ್ತಾರೆʼʼ ಎಂದು ಹಾಸನದ ಮಾಜಿ ಶಾಸಕ ಪ್ರೀತಮ್‌ ಗೌಡ ಹೇಳಿದರು. ʻʻಹಿರಿಯರ ಅಸಮಾಧಾನ ಇರುವುದು ನಿಜ.. ಅದನ್ನು ಸಮಾಧಾನ ಮಾಡ್ತೀವಿʼʼ ಎಂದು ಪ್ರೀತಂ ಹೇಳಿದರು.

ವಿಜಯೇಂದ್ರ ಪದಗ್ರಹಣದ Live Video ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

BMTC Accident : ಕೆಲವೊಮ್ಮೆ ಚಾಲಕರ ನಿರ್ಲಕ್ಷ್ಯದಿಂದಲೋ ಸವಾರರ ಅಜಾಗರೂಕತೆಯಿಂದಲೂ ಬಿಎಂಟಿಸಿ ಬಸ್‌ಗೆ ಜನರು ಬಲಿಯಾಗುತ್ತಿದ್ದಾರೆ. ಸದ್ಯ ವರ್ಷಕ್ಕೆ ಹತ್ತಾರು ಮಂದಿ ಬಸ್ಸಿಗೆ ಸಿಲುಕಿ ಮೃತಪಡುತ್ತಿದ್ದಾರೆ. ಹೀಗಾಗಿ ಬಿಎಂಟಿಸಿ ಡ್ರೈವರ್‌ಗಳಿಗೆ ಟ್ರಾಫಿಕ್ ಪೊಲೀಸ್‌ರಿಂದ ಟ್ರೈನಿಂಗ್ ನೀಡಲಾಗುತ್ತಿದೆ.

VISTARANEWS.COM


on

By

BMTC Bus hits bike
ಉತ್ತರಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದ ಬಿಎಂಟಿಸಿ
Koo

ಬೆಂಗಳೂರು: ಬಿಎಂಟಿಸಿ ಬೆಂಗಳೂರಿಗರ ಪ್ರಮುಖ ಸಾರ್ವಜನಿಕ ಸಾರಿಗೆ. ಬಿಎಂಟಿಸಿಗೆ ಎಷ್ಟು ಖ್ಯಾತಿ ಇದ್ದಯೋ ಅಷ್ಟೇ ಅಪಖ್ಯಾತಿಯು ಸೇರಿಕೊಂಡಿದೆ. ಚಾಲಕರ ಅತಿವೇಗ ಚಾಲನೆ, ನಿರ್ಲಕ್ಷ್ಯದಿಂದ ಅದೆಷ್ಟೋ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಕಿಲ್ಲರ್‌ ಎಂದೇ ಹೆಸರು ಪಡೆದಿರುವ ಬಿಎಂಟಿಸಿಗೆ ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ (BMTC Accident) ಕಳೆದುಕೊಂಡಿದ್ದಾರೆ.

ತಿಂಗಳಿಗೆ ಒಬ್ಬರಾದರೂ ಬಿಎಂಟಿಸಿಗೆ ಬಲಿಯಾದರು ಎಂಬ ಸುದ್ದಿ ಕೇಳುತ್ತಲೇ ಇರುತ್ತವೆ. ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ನಿಂದ ಅಪಘಾತಗಳು ಹೆಚ್ಚಾಗುತ್ತಲೆ ಇವೆ. ಕಳೆದ ನಾಲ್ಕು ವರ್ಷಕ್ಕೆ ಹೋಲಿಸಿದರೆ, ಸಾವಿನ‌ ಸಂಖ್ಯೆಗಿಂತ ಗಾಯಾಳುಗಳ ಸಂಖ್ಯೆಯೇ ಹೆಚ್ಚಿದೆ. ಈ ವರ್ಷದಲ್ಲಿ ಬಿಎಂಟಿಸಿಯಿಂದ ಸತ್ತವರ ಸಂಖ್ಯೆ 34 ಇದ್ದರೆ, 97 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಎಂಟಿಸಿ ಮಾತ್ರವಲ್ಲ ಕೆಎಸ್‌ಆರ್‌ಟಿಸಿ ಚಾಲಕರ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ. ಇದರಿಂದಾಗಿ ಈ ವರ್ಷ ಹತ್ತು ಮಂದಿ ಮೃತಪಟ್ಟಿದ್ದರೆ, 28 ಅಪಘಾತಗಳಾಗಿರುವ ವರದಿಯಾಗಿದೆ. ಈ ಮಧ್ಯೆ ಸಂಚಾರಿ ನಿಯಮಗಳನ್ನು ಉಲಂಘಿಸುತ್ತಿರುವ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಚಾಲಕರಿಗೆ ಸಂಚಾರಿ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಂಚಾರಿ ಪೊಲೀಸರ ತನಿಖೆಯಲ್ಲಿ ಕೆಲ ಚಾಲಕರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ಚಾಲನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: lawyer Murder: ಕಲಬುರಗಿಯಲ್ಲಿ ವಕೀಲನನ್ನು ಅಟ್ಟಾಡಿಸಿ ಕೊಂದರು! ಹತ್ಯೆಗೆ ಇದುವೇ ಕಾರಣ!

bmtc accident case

ನಿಯಮ ಉಲ್ಲಂಘಿಸಿ 1 ಕೋಟಿ ದಂಡ ಕಟ್ಟಿದ ಬಿಎಂಟಿಸಿ

ಬಿಎಂಟಿಸಿಯಲ್ಲಿ ಬರೋಬ್ಬರಿ 13, 917 ಸಂಚಾರಿ ನಿಯಮ ಉಲ್ಲಂಘಿಸಿದರೆ, ಕೆಎಸ್‌ಆರ್‌ಟಿಸಿ ಚಾಲಕರು ಮೂರು ಸಾವಿರಕ್ಕೂ ಹೆಚ್ಚು ರೂಲ್ಸ್ ಬ್ರೇಕ್ ಮಾಡಿದ್ದಾರೆ. ಬಿಎಂಟಿಸಿ ಬಸ್‌ ಚಾಲಕರಿಂದಲೇ ಹೆಚ್ಚು ಸಂಚಾರ ನಿಯಮ ಉಲ್ಲಂಘನೆ ಆಗಿದೆ. ಹೀಗಾಗಿ 1,04,10,000 ರೂ. ದಂಡವನ್ನು ಬಿಎಂಟಿಸಿ ಇಲಾಖೆ ಕಟ್ಟಿದೆ. 14 ಲಕ್ಷ ರೂ. ದಂಡವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ಕಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿ‌ ನಡೆದಿರುವ ಅಪಘಾತಗಳ‌ ಅಂಕಿ‌ ಅಂಶ ನೋಡುವುದಾದರೆ,..

ಬಿಎಂಟಿಸಿಗೆ ಬಲಿಯಾದವರು- ಗಂಭೀರ ಗಾಯಗೊಂಡವರು

2020ರಲ್ಲಿ 22 ಮಂದಿ ಸಾವು- 49 ಮಂದಿ ಗಾಯಾಳುಗಳು
2021ರಲ್ಲಿ 27 ಮಂದಿ ಸಾವು- 58 ಮಂದಿ ಗಾಯಾಳುಗಳು
2022ರಲ್ಲಿ 37 ಮಂದಿ ಸಾವು- 85 ಮಂದಿ ಗಾಯಾಳುಗಳು
2023ರಲ್ಲಿ 34 ಮಂದಿ ಸಾವು -97 ಮಂದಿ ಗಾಯಾಳುಗಳು

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಪಘಾತಗಳನ್ನು ಹೆಚ್ಚು ಮಾಡುವರ ವಿರುದ್ಧ ಕ್ರಮಕ್ಕೆ ಇಲಾಖೆ ಸೂಚನೆ ನೀಡಿದೆ. ಮುಂದಿನ ದಿನದಲ್ಲಿ ಚಾಲಕರಿಗೆ ತರಬೇತಿ ಕೊಡಲು ಪೊಲೀಸರು ಮುಂದಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!

Karnataka Weather Forecast : ಡಿ.8ರಂದು ಕರ್ನಾಟಕದ ಮುಕ್ಕಾಲು ಭಾಗದಲ್ಲಿ ಶುಷ್ಕ ವಾತಾವರಣವೇ ಇರಲಿದ್ದು, ದಕ್ಷಿಣ ಒಳನಾಡಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ (rain News) ಇದೆ.

VISTARANEWS.COM


on

By

No rain alert dry weather in karnataka
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ (Rain News) ಸಾಧ್ಯತೆ ಇದ್ದರೆ, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ಹಾಗೇ ಮುಂದಿನ 48 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ, ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸೂಚನೆ ಇದೆ.

ಡಿ.8ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಕೋಲಾರ, ರಾಮನಗರದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ ಹಾಗೂ ಬಳ್ಳಾರಿಯಲ್ಲಿ ಒಣಹವೆ ಇರಲಿದೆ.

ಇದನ್ನೂ ಓದಿ: Wedding Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ವೆಡ್ಡಿಂಗ್‌ ಪರ್ಸ್

ಇಲ್ಲೆಲ್ಲ ಶುಷ್ಕ ವಾತಾವರಣ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆಯಾಗುವ ಸೂಚನೆ ಇಲ್ಲ, ಬದಲಿಗೆ ಒಣಹವೆ ಇರಲಿದೆ. ಜತೆಗೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನದಲ್ಲಿ ಶುಷ್ಕ ವಾತಾವರಣವೇ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಹಾಗೂ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶುಷ್ಕ ವಾತಾವರಣ ಇರಲಿದೆ.

ಬೆಂಗಳೂರಲ್ಲಿ ಹಗುರ ಮಳೆ ಸಾಧ್ಯತೆ

ಬೆಂಗಳೂರಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇದ್ದರೆ, ಮಧ್ಯಾಹ್ನದ ನಂತರ ಬಿಸಿಲು ಆವರಿಸಲಿದೆ. ಯಲಹಂಕ, ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದ ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕಲಿದೆ. ಪ್ರತ್ಯೇಕ ಕಡೆಗಳಲ್ಲಿ ಹಗುರಿದಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶ 30 ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ಬುಧವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣ ಹವೆ ಇತ್ತು. ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಡಿಮೆ ಉಷ್ಣಾಂಶ 16.1 ಡಿ.ಸೆ. ವಿಜಯಪುರದಲ್ಲಿ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ಕರ್ನಾಟಕ

Basavaraja Bommai : ಸಿಎಂ ಜತೆ ಐಸಿಸ್‌ ಸಂಪರ್ಕಿತ ಮೌಲ್ವಿ ; NIA ತನಿಖೆಗೆ ಬೊಮ್ಮಾಯಿ ಆಗ್ರಹ

basavaraja Bommai : ಸಿಎಂ ಸಿದ್ದರಾಮಯ್ಯ ಅವರ ಜತೆ ವೇದಿಕೆ ಹಂಚಿಕೊಂಡ ಮೌಲ್ವಿ ತನ್ವೀರ್‌ ಪೀರಾ ಅವರ ಬಗ್ಗೆ ತನಿಖೆ ನಡೆಯಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

VISTARANEWS.COM


on

Tanveer Peera Cm Siddaramaiah Basavaraja Bommai
Koo

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ (ISIS Terror Organization) ಜೊತೆ ಸಂಪರ್ಕ ಇರುವ ಮುಸ್ಲಿಂ ಮೌಲ್ವಿ (Muslim Moulvi) ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್ಐಎಗೆ (NIA Investigation) ಒಪ್ಪಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯ ಜೊತೆ ವೇದಿಕೆ ಹಂಚಿಕೊಂಡ ಮೌಲ್ವಿಯ ವಿರುದ್ದ ವಿಜಯಪುರದಲ್ಲಿ ಪ್ರಚೋದನಾತ್ಮಕ ಭಾಷಣ ಮಾಡಿರುವ ಬಗ್ಗೆ ಪ್ರಕರಣಗಳು ದಾಖಲಾಗಿವೆ. ಅವರಿಗೆ ಐಎಸ್ ಐ ಸಂಪರ್ಕ ಇರುವ ಬಗ್ಗೆ ನಮ್ಮ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿಗಳು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಈ ಹಿಂದೆ ಕುಕ್ಕರ್ ಬಾಂಬ್ ಪ್ರಕರಣದ ಬಗ್ಗೆ ಕಾಂಗ್ರೆಸ್‌ನವರು ಲಘುವಾಗಿ ಪರಿಗಣಿಸಿದ್ದರು. ಆದರೆ, ಅವರಲ್ಲಿ ಐದಾರು ಜನರು ದೇಶದ್ರೋಹ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎನ್ನುವುದು ಬೆಳಕಿಗೆ ಬಂದಿದೆ ಎನ್ನುವುದನ್ನು ನೆನಪಿಸಿದರು.

ಮುಖ್ಯಮಂತ್ರಿಗಳು ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂ. ನೀಡುವುದಾಗಿ ಹೇಳಿರುವುದು ಓಲೈಕೆ ರಾಜಕಾರಣದ ಮುಂದುವರೆದ ಭಾಗ, ಅಲ್ಲದೇ ಪ್ರಚೋದನಾಕಾರಿಯಾಗಿಯೂ ಇದೆ. ಅವರ ಸಚಿವ ಸಂಪುಟದ ಸಹೋದ್ಯೋಗಿಯೊಬ್ಬರು ಅಲ್ಪ ಸಂಖ್ಯಾತರನ್ನು ಸ್ಪೀಕರ್‌ ಮಾಡಿದ್ದೇವೆ, ಎಲ್ಲರೂ ಅವರ ಮುಂದೆ ಜೀ ಹುಜೂರ್ ಅನಬೇಕು ಎನ್ನುತ್ತಾರೆ. ಇದೊಂದು ಪ್ರಚೋದನೆ. ಸಿಎಂ ಆದವರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಬೇಕು. ದೇಶದ ಸಂಪತ್ತನ್ನು ಬೆಳೆಸಲು ಎಲ್ಲರೂ ದುಡಿಯಬೇಕು. ಅದು ದೇಶಕ್ಕೆ ಇರುತ್ತದೆ. ಅದನ್ನು ಹೇಳುವ ಬದಲು ಒಂದು ಸಮುದಾಯಕ್ಕೆ ಸಂಪತ್ತು ಹಂಚಿಕೆ ಮಾಡುವ ಬಗ್ಗೆ ಹೇಳುತ್ತಾರೆ‌. ಇದು ಸಮಾಜ ಒಡೆಯುವ ಕೆಲಸ ಎಂದು ಹೇಳಿದರು.

ರೈತರ ಸಾಲ ವಸೂಲಿ ನಿಲ್ಲಿಸಲಿ ಎಂದ ಬೊಮ್ಮಾಯಿ

ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡಿಗಡೆ ಮಾಡಿಲ್ಲ. ರೈತರಿಗೆ ಬೆಳೆ ಇಲ್ಲ, ಕುಡಿಯುವ ನೀರಿಲ್ಲ, ಜಾನುವಾರುಗಳಿಗೆ ಮೇವಿಲ್ಲ, ಸರ್ಕಾರ ಇದುವರೆಗೂ ಬಿಡಿಗಾಸು ಬಿಡುಗಡೆ ಮಾಡಿಲ್ಲ. ಕೇಂದ್ರದ ಕಡೆಗೆ ಬೆರಳು ಮಾಡಿ ತೋರಿಸುತ್ತಾರೆ. ಹಿಂದೆ ಪ್ರವಾಹ ಬಂದಾಗ ನಾವು ಒಂದು ತಿಂಗಳಲ್ಲಿ ಡಿಬಿಟಿ ಮುಖಾಂತರ ರೈತರಿಗೆ ಸುಮಾರು 2000 ಕೋಟಿ ರೂ. ಬಿಡುಗಡೆ ಮಾಡಿದ್ದೆವು. ಅವರು ಕೇವಲ 2000 ಸಾವಿರ ನೀಡುತ್ತೇನೆ ಎನ್ನುತ್ತಾರೆ. ಇದು ರೈತರಿಗೆ ಅವಮಾನ ಮಾಡಿದಂತೆ. ಕೇಂದ್ರದ ನಿಯಮಂತಾದರೂ ಒಣ ಬೇಸಾಯಕ್ಕೆ ಪ್ರತಿ ಹೆಕ್ಟೇರ್‌ಗೆ ಕನಿಷ್ಠ 6000 ರೂ., ನೀರಾವರಿಗೆ 18 ಸಾವಿರ ರೂ. ನೀಡುವ ಕೆಲಸ ಮಾಡಬೇಕು. ನಾವು ರೈತರಿಗೆ ಕಿಸಾನ್ ಸಮ್ಮಾನ್ ನೀಡುತ್ತಿದ್ದೆವು. ಅದನ್ನು ನಿಲ್ಲಿಸಿದ್ದಾರೆ. ರೈತರಿಂದ ಸಾಲ ವಸೂಲಿ ನಿಲ್ಲಿಸಬೇಕು. ಕೂಡಲೇ ಹೊಸ ಸಾಲ ನೀಡುವ ವ್ಯವಸ್ಥೆ ಮಾಡಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಇದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.

ಆನೆ ಅರ್ಜುನ ಸಾವಿನ ತನಿಖೆಯಾಗಲಿ

ಆನೆ ಅರ್ಜುನ ಸಾವಿನ ಬಗ್ಗೆ ಸರ್ಕಾರ ಸತ್ಯ ಮುಚ್ಚಿಡುವ ಕೆಲಸ ಮಾಡುತ್ತಿದೆ. ಅದೇ ಕಾರಣಕ್ಕೆ ತರಾತುರಿಯಲ್ಲಿ ಅಂತ್ಯ ಸಂಸ್ಕಾರ ಮಾಡಿದ್ದಾರೆ. ಅರಣ್ಯ ಇಲಾಖೆಯಲ್ಲಿ ಅರಾಜಕತೆ ನಡೆಯುತ್ತಿದೆ. ಐಎಫ್ಎಸ್ ಅಧಿಕಾರಿಗಳ ಹಿಂಡು ಬೆಂಗಳೂರಿನಲ್ಲಿ ಆನೆ ಹಿಂಡಿನಂತಿದ್ದಾರೆ. ಅವರನ್ನು ನಾನು ಕಾಡಿಗೆ ಕಳುಹಿಸುವ ಕೆಲಸ ಮಾಡಿದ್ದೆ, ಈಗ ಮತ್ತೆ ವಾಪಸ್ ಬರುವ‌ ಕೆಲಸ ಮಾಡುತ್ತಿದ್ದಾರೆ. ಐಎಫ್ಎಸ್ ಅಧಿಕಾರಿಗಳು ಬೆಂಗಳೂರಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ ಅವರಿಗೆ ಅರಣ್ಯದ ಜವಾಬ್ದಾರಿ ನೀಡಿ ಕಾಡಿಗೆ ಕಳುಹಿಸಬೇಕು. ಆನೆ ಅರ್ಜುನ ಹಾಗೂ ಬೆಂಗಳೂರಿನ ಚೀತಾ ಸಾವಿನ ಪ್ರಕರಣದಲ್ಲಿ ಸರಿಯಾದ ತರಬೇತಿ‌ ಇಲ್ಲದೆ ಕಾರಣವಾಗಿದೆ ಎಂದು ಹೇಳಿದರು.

ಸೋಮಣ್ಣ ಅವರ ಬಗ್ಗೆ ಹೈಕಮಾಂಡ್ ಮಾತನಾಡುತ್ತದೆ

ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸೋಮಣ್ಣ ಅವರು ಹಿರಿಯ ನಾಯಕರು. ಅವರ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ಎಲ್ಲವೂ ಗೊತ್ತಿದೆ. ಅವರು ಚುನಾವಣೆ ಮುಗಿದ ನಂತರ ದೆಹಲಿಗೆ ಹೋಗುವುದಾಗಿ ಹೇಳಿದ್ದಾರೆ. ಹೈಕಮಾಂಡ್ ಅವರನ್ನು ಕರೆದು ಮಾತನಾಡುತ್ತಾರೆ ಎನ್ನುವ ವಿಶ್ವಾಸ ಇದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿಷಯಕ್ಕೂ ಹೈಕಮಾಂಡ್ ಮಾತನಾಡುತ್ತದೆ ಎಂದರು.

ಮಾಜಿ ಸಚಿವ ಗೂಳುಹಟ್ಟಿ ಶೇಖರ್ ಅವರ ಹೇಳಿಕೆಗೂ ಪ್ರತಿಕ್ರಿಯಿಸಿದ ಅವರು, ಅವರ ಹೇಳಿಕೆ ತಪ್ಪು ಕಲ್ಪನೆಯಿಂದ ಕೂಡಿದೆ. ಸಂಘದಲ್ಲಿ ದಲಿತ ಸಮುದಾಯವರೂ ಎತ್ತರ ಮಟ್ಟದಲ್ಲಿದ್ದಾರೆ ಎಂದರು.

Continue Reading

ವಿಜಯನಗರ

Vijayanagara News: ನಾಗರಕಟ್ಟೆಯಲ್ಲಿ ಸುಗಮ ಸಂಗೀತ ಕಾರ್ಯಕ್ರಮ

Vijayanagara News: ಕೊಟ್ಟೂರು ತಾಲೂಕಿನ ನಾಗರಕಟ್ಟೆಯ ಪ್ರೌಢಶಾಲೆಯ ಆವರಣದಲ್ಲಿ ಬಿ.ನೀಲಪ್ಪ ತಂಡದ ವತಿಯಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.

VISTARANEWS.COM


on

Sugama Sangeetha programme at Kottur
ಕೊಟ್ಟೂರು ತಾಲೂಕಿನ ನಾಗರಕಟ್ಟೆಯ ಪ್ರೌಢಶಾಲೆಯ ಆವರಣದಲ್ಲಿ ಬಿ.ನೀಲಪ್ಪ ತಂಡದ ವತಿಯಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಿತು.
Koo

ಕೊಟ್ಟೂರು: ತಾಲೂಕಿನ ನಾಗರಕಟ್ಟೆಯ ಪ್ರೌಢಶಾಲೆಯ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಿಜಯನಗರ ಹಾಗೂ ಶ್ರೀ ಸಿದ್ದರಾಮೇಶ್ವರ ಭೋವಿ ಯುವಕರ ಸಂಘದ ಸಹಯೋಗದಲ್ಲಿ ಬಿ.ನೀಲಪ್ಪ ತಂಡದ ವತಿಯಿಂದ ಸುಗಮ ಸಂಗೀತ (Sugama Sangeetha) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯ ಸುಭಾಷ್, ಕೀ ಬೋರ್ಡ್ ನುಡಿಸುವುದರ ಮೂಲಕ ಉದ್ಘಾಟಿಸಿದರು.

ಇದನ್ನೂ ಓದಿ: IND vs SA: ದಕ್ಷಿಣ ಆಫ್ರಿಕಾ ತಲುಪಿದ ಯಂಗ್​ ಟೀಮ್​ ಇಂಡಿಯಾ; ಡಿ.10ರಿಂದ ಸರಣಿ ಆರಂಭ

ಬಳಿಕ ಮಾತನಾಡಿದ ಅವರು, ಸಂಗೀತ ಎನ್ನುವುದು ಮನಸ್ಸಿಗೆ ಮುದ ನೀಡುವ ದಿವ್ಯ ಔಷಧಿಯಂತಿದ್ದು, ಸಂಗೀತ ಆಲಿಸುವುದರ ಮೂಲಕ ಮಾನಸಿಕ ನೆಮ್ಮದಿ ಕಾಣಬಹುದಾಗಿದೆ ಹಾಗಾಗಿ ಸಂಗೀತ ಮತ್ತು ಕಲೆ ಉಳಿಯಬೇಕಾದರೆ ಇಂದಿನ ಮಕ್ಕಳು ಕೂಡ ಮೊಬೈಲ್ ಬಳಕೆಗೆ ಒಳಗಾಗದೆ ಸಂಗೀತದಲ್ಲಿ ಆಸಕ್ತಿ ತೋರಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Viral Video: ಗರಿಗರಿ ಬಿಸಿಬಿಸಿ ದೊಡ್ಡ ಜಿಲೇಬಿ! ಇದು ಸೂರ್ಯಕಾಂತಿ ಜಿಲೇಬಿ!

ಕಾರ್ಯಕ್ರಮದಲ್ಲಿ ತೂಲಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸುನಿಲ್, ಕಲಾವಿದ ಸಿದ್ದಲಿಂಗಪ್ಪ, ಮುಖ್ಯ ಶಿಕ್ಷಕ ಅಜಯ್ ಕುಮಾರ್, ಮುಖಂಡರಾದ ಸೋಮಶೇಖರ್, ರಾಜಣ್ಣ, ಚೌಡೇಶ್ ಹಾಗೂ ಶ್ರೀ ಗುರು ಪುಟ್ಟರಾಜ ಸಂಗೀತ ಪಾಠಶಾಲೆಯ ಸಂಗೀತ ಶಿಕ್ಷಕಿ ಕು.ಪ್ರಿಯಾಂಕ ಮತ್ತು ಗಾಯಕರಾದ ಶಿವಕುಮಾರ್, ಶಿವಕುಮಾರ್ ಟಿ., ವಸಂತ ಮೂರ್ತಿ ಮತ್ತು ಶಾಲೆಯ ಸಹ ಶಿಕ್ಷಕರು, ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading
Advertisement
job opportunity
ದೇಶ5 mins ago

Job News: ಕೇಂದ್ರ ಸರ್ಕಾರ, ರಕ್ಷಣಾ ಇಲಾಖೆಗಳಲ್ಲಿ ಶೇ.14ರಷ್ಟು ಉದ್ಯೋಗ ಹೆಚ್ಚಳ

Office Rental Rises in top 7 cities including bengaluru
ದೇಶ8 mins ago

ಬೆಂಗಳೂರು ಸೇರಿ ದೇಶದ ಟಾಪ್ 7 ನಗರಗಳಲ್ಲಿ ಕಚೇರಿ ಬಾಡಿಗೆ ಹೆಚ್ಚಳ!

BMTC Bus hits bike
ಕರ್ನಾಟಕ21 mins ago

BMTC Accident : ಕಿಲ್ಲರ್‌ ಬಿಎಂಟಿಸಿ ಬಸ್‌ಗೆ 120 ಮಂದಿ ಬಲಿ!

Kapil Sharma and Sunil Grover
ಬಾಲಿವುಡ್23 mins ago

The Kapil Sharma Show: 6 ವರ್ಷದ ಮುನಿಸು ಮರೆತು ಒಟ್ಟಿಗೆ ಪಾರ್ಟಿ ಮಾಡಿದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್!

Virat Kohli
ಕ್ರಿಕೆಟ್29 mins ago

ಕಿಂಗ್​ ಕೊಹ್ಲಿ ಕೈಬಿಟ್ಟ ಬಿಸಿಸಿಐ; ಟಿ20 ವಿಶ್ವಕಪ್​ಗೆ ನೂತನ ಆಟಗಾರನ ಆಯ್ಕೆ!

No rain alert dry weather in karnataka
ಕರ್ನಾಟಕ37 mins ago

Karnataka Weather : ಮುಕ್ಕಾಲು ಕರ್ನಾಟಕದಲ್ಲಿ ಶುಷ್ಕ ವಾತಾವರಣ! ಇಲ್ಲೆಲ್ಲ ಸಣ್ಣ ಮಳೆ!

Winter Black Fashion
ಫ್ಯಾಷನ್37 mins ago

Winter Black Fashion: ವಿಂಟರ್‌ ಸೀಸನ್‌ನಲ್ಲಿ ಟ್ರೆಂಡಿಯಾದ ಬ್ಲ್ಯಾಕ್‌ ಡಿಸೈನರ್‌ವೇರ್ಸ್

Tanveer Peera Cm Siddaramaiah Basavaraja Bommai
ಕರ್ನಾಟಕ52 mins ago

Basavaraja Bommai : ಸಿಎಂ ಜತೆ ಐಸಿಸ್‌ ಸಂಪರ್ಕಿತ ಮೌಲ್ವಿ ; NIA ತನಿಖೆಗೆ ಬೊಮ್ಮಾಯಿ ಆಗ್ರಹ

Nandi Film Award Rishabh Shetty
South Cinema1 hour ago

The Nandi Awards: ನಂದಿ ಫಿಲ್ಮ್‌ ಅವಾರ್ಡ್; ಅತ್ಯುತ್ತಮ ನಟ, ನಿರ್ದೇಶಕ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

2024 t20 world cup
T20 ವಿಶ್ವಕಪ್1 hour ago

T20 World Cup 2024:​ ನೂತನ ಲೋಗೋ ವಿನ್ಯಾಸಕ್ಕೆ ಫಿದಾ ಆದ ಕ್ರಿಕೆಟ್​ ಅಭಿಮಾನಿಗಳು

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

CM-Siddaramaiah
ಕರ್ನಾಟಕ5 hours ago

CM Siddaramaiah: ಮೌಲ್ವಿ ಬಗ್ಗೆ ಕೇಂದ್ರದಿಂದ ತನಿಖೆ ನಡೆಸಿ ಪ್ರೂವ್‌ ಮಾಡಲಿ; ಯತ್ನಾಳ್‌ಗೆ ಸಿಎಂ ಸವಾಲು

Dina Bhavihsya
ಪ್ರಮುಖ ಸುದ್ದಿ13 hours ago

Dina Bhavishya: ಮದುವೆಗಿದ್ದ ಅಡೆತಡೆಗಳು ಮಾಯ; ಈ ರಾಶಿಯವರಿಗೆ ವಿವಾಹ ಯೋಗ!

R ashok and CM siddaramiah in Karnataka Assembly Session
ಕರ್ನಾಟಕ21 hours ago

Belagavi Winter Session: ಮುಸ್ಲಿಮರಿಗೆ 10 ಸಾವಿರ ಕೋಟಿ ಕೊಡ್ತೀರಿ; ರೈತರಿಗೆ 2000 ರು. ಮಾತ್ರವೇ? ಬಿಜೆಪಿ ಕಿಡಿ

CM Siddaramaiah and Tanveer
ಕರ್ನಾಟಕ1 day ago

CM Siddaramaiah: ಸಿಎಂ ಪಕ್ಕ ಐಸಿಸ್‌ ಸಂಪರ್ಕಿತ ಆರೋಪಕ್ಕೆ ಫೋಟೊ ಸಾಕ್ಷಿ ಕೊಟ್ಟ ಯತ್ನಾಳ್!

MLA Basanagouda Patil Yatnal and CM Siddaramaiah
ಕರ್ನಾಟಕ1 day ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ1 day ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 day ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ1 day ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ2 days ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

ಟ್ರೆಂಡಿಂಗ್‌