Narendra Modi: ಮೋದಿ ಬಗ್ಗೆ ಸಂಸ್ಕೃತಿ ಸಚಿವ ಹೀಗೆ ಹೇಳಬಹುದಾ?; ಕಾಂಗ್ರೆಸ್‌ಗೆ ಜೋಶಿ ತರಾಟೆ - Vistara News

ರಾಜಕೀಯ

Narendra Modi: ಮೋದಿ ಬಗ್ಗೆ ಸಂಸ್ಕೃತಿ ಸಚಿವ ಹೀಗೆ ಹೇಳಬಹುದಾ?; ಕಾಂಗ್ರೆಸ್‌ಗೆ ಜೋಶಿ ತರಾಟೆ

ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಕಾಂಗ್ರೆಸ್‌ ನಾಯಕರಿಗೆ ತಕ್ಕ ಉತ್ತರ ಕೊಡುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಎಚ್ಚರಿಸಿದ್ದಾರೆ.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಹುಬ್ಬಳ್ಳಿ: ಕಾಂಗ್ರೆಸ್‌ನವರಿಗೆ ಯಾವಾಗಲೂ ಹೊಡಿಬಡಿ ಸಂಸ್ಕೃತಿಯೇ ಮೈಗೂಡಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ (Pralhad Joshi) ಅವರು ಸಿದ್ದರಾಮಯ್ಯ ಸರ್ಕಾರದಲ್ಲಿನ ಸಚಿವ ಶಿವರಾಜ್ ತಂಗಡಗಿ (Shivaraj Thangadagi) ವಿರುದ್ಧ ಕಿಡಿ ಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಂಗಳವಾರ ಮಾದ್ಯಮದವರೊಂದಿಗೆ ಮಾತನಾಡುತ್ತ, “”ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಇದ್ದುಕೊಂಡು ಹೀಗೆ ಹೊಡಿ ಬಡಿಯುವ ರೀತಿ ಪ್ರಚೋದನೆ ನೀಡುವುದು ಅವರ ವ್ಯಕ್ತಿತ್ವ ಮತ್ತು ಹುದ್ದೆಗೆ ಘನತೆ, ಗೌರವ ತರುವಂಥದ್ದಲ್ಲʼʼ ಎಂದು ಖಂಡಿಸಿದರು.

PM Narendra Modi in kalaburagi

“ಪ್ರಧಾನಿ ಮೋದಿ ವಿರುದ್ಧ ದ್ವೇಷ ಕಾರುವುದೇಕೆ? ರಾಜ್ಯದ ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಬಗ್ಗೆ ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಕಾಂಗ್ರೆಸ್‌ ನಾಯಕರಿಗೆ ತಕ್ಕ ಉತ್ತರ ಕೊಡುತ್ತಾರೆʼʼ ಎಂದು ಜೋಶಿ ಎಚ್ಚರಿಸಿದರು. “ಪ್ರಧಾನಿ ಮೋದಿ ಅವರನ್ನು ಹಳಿದರೆ ವರ್ಚಸ್ಸು ಕುಗ್ಗುವಂತೆ ಮಾಡಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ನೀವೆಷ್ಟು ಮೋದಿ ಅವರನ್ನು ದ್ವೇಷಿಸುತ್ತೀರೋ, ಸೇಡಿನ ಭಾವನೆಯಿಂದ ವರ್ತಿಸುತ್ತಿರೋ? ಅಷ್ಟೇ ಪ್ರೀತಿಯಿಂದ ಜನ ಮೋದಿ ಅವರನ್ನು ಕಾಣುತ್ತಾರೆʼʼ ಎಂದು ಸಚಿವ ಪ್ರಹ್ಲಾದ ಜೋಶಿ ಕಿವಿಮಾತು ಹೇಳಿದರು.

Does congress karnataka have the power to slap youth for PM Narendra Modi slogan Pralhad Joshi question

ನಿನ್ನೆಯೂ ತಂಗಡಗಿಯನ್ನು ತರಾಟೆಗೆ ತೆಗೆದುಕೊಂಡಿದ್ದ ಜೋಶಿ

ಮೋದಿ ಮೋದಿ ಎಂದು ಜೈಕಾರ ಹಾಕುವ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಚಿವ ಪ್ರಲ್ಹಾದ್‌ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಈ ದೇಶದ ಆಸ್ತಿ. ಈ ದೇಶದ ಪರಿವಾರಕ್ಕೆ ಸೇರಿದವರು. ದೇಶವಾಸಿಗಳ ಆರಕ್ಷಕರು. ಅದಕ್ಕಾಗಿ ಜನರೇ ಮೋದಿಯವರಿಗೆ ಜೈಕಾರ ಕೂಗುತ್ತಿದ್ದಾರೆ. ಹೀಗಿರುವಾಗ ಅವರೆಲ್ಲರ ಕಪಾಳಕ್ಕೆ ಹೊಡೆಯುವ “ಶಕ್ತಿ” ನಿಮ್ಮ “ಕೈ”ಗಿದೆಯೇ? ಎಂದು ಪ್ರಶ್ನಿಸಿದ್ದರು.
ಮೋದಿಯವರಿಗೆ ಜೈಕಾರ ಹಾಕುವವರ ಕಪಾಳಕ್ಕೆ ಹೊಡೆಯಬೇಕೆ? ಯಾವ ಕಾರಣಕ್ಕೆ? ಭಾರತದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಕ್ಕಾಗಿಯೇ? ಅಥವಾ ಜನರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದಕ್ಕಾಗಿಯೇ? ಎಂದು ಪ್ರಲ್ಹಾದ್‌ ಜೋಶಿ ಕಾಂಗ್ರೆಸ್ಸಿಗರನ್ನು ತರಾಟೆಗೆ ತೆಗೆದುಕೊಂಡಿದ್ದರು.
ದೇಶದ ಪ್ರಧಾನ ಮಂತ್ರಿಯನ್ನು ಹೇಗೆ ಗೌರವಿಸಬೇಕು ಎಂಬ ಕಿಂಚಿತ್ತೂ ಆಲೋಚನೆ, ಸೌಜನ್ಯ ಕಾಂಗ್ರೆಸ್ ನಾಯಕರಿಗೆ ಇಲ್ಲ. ತೀರಾ ಉಡಾಫೇ ಮಾತನಾಡುತ್ತಾರೆ. ಇವರ ಅಸಹನೀಯ ಪದ ಬಳಕೆಗೆ ಯುವ ಪಡೆಯೇ ಉತ್ತರ ಕೊಡವ ಕಾಲ ದೂರವಿಲ್ಲ ಎಂದು ಪ್ರಲ್ಹಾದ್‌ ಜೋಶಿ ಎಚ್ಚರಿಸಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಶಿವರಾಜ್‌ ತಂಗಡಗಿ ಒಬ್ಬ ಮಂತ್ರಿಯಾಗಿದ್ದುಕೊಂಡು ಪ್ರಧಾನಿ ಬಗ್ಗೆ, ದೇಶದ ಭವಿಷ್ಯದ ಆಸ್ತಿಯಾಗಿರುವ ಯುವ ಪಡೆ ಬಗ್ಗೆ ಹೀಗೆ ಕಪಾಳ ಮೋಕ್ಷದ ಹೇಳಿಕೆ ನೀಡಿರುವುದು ಅಕ್ಷಮ್ಯ ಎಂದು ಸಚಿವ ಪ್ರಹ್ಲಾದ ಜೋಶಿ ತೀವ್ರವಾಗಿ ಖಂಡಿಸಿದ್ದರು.

ಸಚಿವ ತಂಗಡಗಿ ಹೇಳಿದ್ದೇನು?

ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ ಎಂದು ಪ್ರಶ್ನೆ ಮಾಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
Latest12 hours ago

ಪತ್ನಿ, ಮಗನ ಪ್ರತ್ಯೇಕ ಭೇಟಿಗೆ ಅವಕಾಶ ಕೋರಿದ ದರ್ಶನ್‌

Latest13 hours ago

ದುಬಾರೆಯಲ್ಲಿ ಆನೆಗಳ ಕಾದಾಟದ ವೇಳೆ ಮಹಿಳೆ ಸಾವು

Latest16 hours ago

ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಭಾವುಕ ಪೋಸ್ಟ್‌

Latest17 hours ago

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

ಪ್ರಮುಖ ಸುದ್ದಿ2 days ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest2 days ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest3 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest4 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest4 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest4 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌