Site icon Vistara News

Cauvery water dispute : ಕಾವೇರಿ ಜಲ ವಿವಾದ; ಕಾನೂನು ಹೋರಾಟಕ್ಕೆ ಸರ್ವಪಕ್ಷ ಮುಖಂಡರ ತೀರ್ಮಾನ

Karnataka All Party Meeting at vidhanasoudha and CM Siddaramaai DCM DK Shivakumar and Former CM BS Yediyurappa and other leaders are attending this meeting

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಜಲ ವಿವಾದ (Cauvery water dispute) ಮತ್ತೆ ಮುನ್ನೆಲೆಗೆ ಬಂದಿದೆ. ಈ ಬಾರಿ ರಾಜ್ಯದಲ್ಲಿ ಮಳೆ ಕೊರತೆ (Lack of rain) ಬಹುವಾಗಿ ಕಾಡಿದೆ. ಇದರ ಮಧ್ಯೆಯೂ ತಮಿಳುನಾಡಿಗೆ ನೀರು ಬಿಟ್ಟಿರುವ ಕ್ರಮಕ್ಕೆ ಸರ್ವಪಕ್ಷ ಸಭೆಯಲ್ಲಿ (Karnataka All Party Meeting) ತೀವ್ರ ಆಕ್ಷೇಪ ವ್ಯಕ್ತವಾಯಿತು. ಇನ್ನು ಮುಂದೆ ಯಾವುದೇ ಕಾರಣಕ್ಕೂ ಹೀಗಾಗಬಾರದು. ತಮಿಳುನಾಡಿಗೆ ನೀರು (Cauvery Water to Tamil Nadu) ಬಿಡುವ ವಿಚಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಅಗತ್ಯವಿದೆ ಎಂಬ ಅಭಿಪ್ರಾಯದ ಜತೆಗೆ ಕಾನೂನು ಹೋರಾಟವೇ ಸರಿ ಎಂಬ ತೀರ್ಮಾನಕ್ಕೆ ಬರಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಹೋರಾಟಕ್ಕೆ ಸರ್ವಪಕ್ಷ ಸದಸ್ಯರು ಬೆಂಬಲವನ್ನು ವ್ಯಕ್ತಪಡಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಇದನ್ನೂ ಓದಿ: Weather Report : ಕರಾವಳಿಯಲ್ಲಿ ತುಂತುರು, ಬೆಂಗಳೂರಲ್ಲಿ ಹಗುರ ಮಳೆ

ಕರ್ನಾಟಕ ಮತ್ತು ಕೇರಳದ ಕಾವೇರಿ ಕಣಿವೆಯ ಪ್ರದೇಶದಲ್ಲಿ ನೈಋತ್ಯ ಮಾನ್ಸೂನ್‌ ವೈಫಲ್ಯದಿಂದಾಗಿ 2023-24ರ ಜಲ ವರ್ಷವು ಸಂಕಷ್ಟದ ವರ್ಷವಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತನ್ನ ಸಭೆಯಲ್ಲಿ ಜೂನ್‌ ವರೆಗಿನ ಮಳೆಯ ಕೊರತೆಯನ್ನು ಗಮನಿಸಿದೆ. ಆಗಸ್ಟ್‌ 10 ರಂದು 1,5000 ಕ್ಯೂಸೆಕ್‌ ನೀರು ಬಿಡಲು ಸೂಚಿಸಿತ್ತು. ಇದನ್ನು ರಾಜ್ಯ ಬಲವಾಗಿ ವಿರೋಧಿಸಿದ್ದು, ನೀರಿನ ಪ್ರಮಾಣ 10,000 ಕ್ಯೂಸೆಕ್‌ಗೆ ಇಳಿಕೆ ಮಾಡಿದೆ. ಇದರಿಂದ ಅಸಮಾಧಾನಗೊಂಡ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ನೀರು ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದ್ದು, ಶುಕ್ರವಾರ ಮೂರು ನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆಗೆ ಬರಲಿದೆ ಎಂದು ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು ಸಭೆಯಲ್ಲಿ ಮಾಹಿತಿ ಹಂಚಿಕೊಂಡರು.‌

ಕಾನೂನು ಹೋರಾಟಕ್ಕೆ ಬೆಂಬಲ

ಬಳಿಕ ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯ್ಲಿ, ಸಂಸದರಾದ ಸುಮಲತಾ, ಜಗ್ಗೇಶ್, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು. ಜತೆಗೆ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯವು ಎಲ್ಲರಿಂದ ವ್ಯಕ್ತವಾಯಿತು.

ಸಭೆಯಲ್ಲಿ ಜಲ ಸಂಪನ್ಮೂಲ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್‌ DCM DK Shivakumar), ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಜಗದೀಶ್‌ ಶೆಟ್ಟರ್‌, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯ್ಲಿ, ಸಚಿವರಾದ ಎಚ್‌.ಕೆ. ಪಾಟೀಲ್, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: Dinesh Gundu Rao : ದಿನೇಶ್‌ ಗುಂಡೂರಾವ್‌ ಪುತ್ರಿಯ ʼಅನನ್ಯʼ ಸೇವೆ; ಗಾಂಧಿನಗರ ಅಂಗನವಾಡಿಗಳಿಗೆ ಹೈಟೆಕ್‌ ಟಚ್!‌

ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿಯಿಲ್ಲ: ಡಿ.ಕೆ. ಶಿವಕುಮಾರ್

ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀರಾವರಿ ವಿಷಯದಲ್ಲಿ ರಾಜ್ಯದ ಹಿತ ರಕ್ಷಣೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಸ್ಪಷ್ಟಪಡಿಸಿ, ಸರ್ಕಾರದ ಕಾನೂನು ಹೋರಾಟ ಮುಂದುವರಿಯಲಿದ್ದು, ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರ ಸಹಕಾರ ಕೋರಿದರು. ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು.

Exit mobile version