Site icon Vistara News

Cauvery Water Dispute : ರಾಜ್ಯ ಸರ್ಕಾರಕ್ಕೆ ರೈತರು, ಕಾನೂನು ತಜ್ಞರು ಈಗ ನೆನಪಾದರೇ? ಬೊಮ್ಮಾಯಿ ಖಡಕ್‌ ಪ್ರಶ್ನೆ

Former CM Basavaraj Bommai

ಬೆಂಗಳೂರು: ಕಾವೇರಿ ಜಲ ವಿವಾದ (Cauvery Water Dispute) ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ (State Congress Government) ಕೆಟ್ಟ ಮೇಲೆ ಬುದ್ಧಿ ಬರುತ್ತಿದ್ದು, ಈಗ ಕಾನೂನು ತಜ್ಞರು, ರೈತರನ್ನು ಕರೆದು ಮಾತನಾಡಿಸುತ್ತಿದೆ. ಈ ಕೆಲಸ ಮೊದಲೇ ಮಾಡಬೇಕಿತ್ತು. ಇವರೆಲ್ಲರೂ ಈಗ ನೆನಪಾದರೇ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Former Chief Minister Basavaraj Bommai) ಖಡಕ್‌ ಆಗಿ ಪ್ರಶ್ನೆ ಮಾಡಿದ್ದಾರೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಈ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ನಡುವೆ ಹೊಂದಾಣಿಕೆಯಿಲ್ಲ. ಅದೇ ರೀತಿ ಗೃಹ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಸಹ ಸಾಬೀತಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ: Cauvery water dispute : ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವೆನೆಂದ ಸಿಎಂ; ನೀರು ಬಿಡದಿದ್ದರೆ ಸರ್ಕಾರವೇ ವಜಾ ಆಗಬಹುದು!

ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ ಈಗ ಕಾನೂನು ಹೋರಾಟ ಮಾಡಲು ಹೊರಟಿದ್ದಾರೆ. ಕಾನೂನು ತಜ್ಞರ ಜೊತೆ ಮಾತನಾಡುವ ಕೆಲಸವನ್ನು ಮುಂಚೆಯೇ ಮಾಡಬೇಕಿತ್ತು. ಈಗಲಾದರೂ ಸರ್ಕಾರ ಪ್ರಾಮಾಣಿಕವಾಗಿ ಕಾನೂನು ಹೋರಾಟ ಮಾಡಿ, ಮುಂದಿನ ದಿನಗಳಲ್ಲಿ ರಾಜ್ಯದ ವಿರುದ್ಧ ಆದೇಶಗಳು ಬರದಂತಾದರೂ ನೋಡಿಕೊಳ್ಳಲಿ ಎಂದು ಬಸವರಾಜ ಬೊಮ್ಮಾಯಿ ಕಿವಿ ಮಾತು ಹೇಳಿದರು.

ಈ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬರುತ್ತಿದೆ. ಕಾನೂನು ತಜ್ಞರು ರೈತರನ್ನು ಮುಂಚೆಯೇ ಮಾತನಾಡಬೇಕಿತ್ತು. ಗಡಿ, ನೆಲ ಜಲ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಪರಿಣಿತರಿದ್ದಾರೆ‌. ಅವರನ್ನು‌ ಕರೆದು ಮಾತನಾಡಿಸಬೇಕಿತ್ತು. ಇನ್ನೂ ಅನೇಕ ಕಾನೂನು ತಜ್ಞರಿದ್ದಾರೆ. ಅವರೊಡನೆ ಮಾತನಾಡಬೇಕಿತ್ತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಬರ ಪರಿಹಾರ ನೀಡಲಿ

ರಾಜ್ಯದಲ್ಲಿ ಬರಗಾಲ ಇದ್ದಾಗ ಇಂತಹ ಸರ್ಕಾರ ಇರೋದು ದುರಂತ‌. ಉತ್ತರ ಕರ್ನಾಟಕದ ನೂರಾರು ತಾಲೂಕುಗಳಲ್ಲಿ ಬರ ಇದೆ. ಇದಕ್ಕೂ ಇವರು ಕೇಂದ್ರದ ಕಡೆಗೆ ಬೆರಳು ತೋರಿಸುತ್ತಾರೆ. ಪ್ರವಾಹ ಬಂದಾಗ ನಾವೇ ಪರಿಹಾರ ಕೊಟ್ಟಿದ್ದೇವೆ. ಕೇಂದ್ರದ ಪರಿಹಾರಕ್ಕಿಂತ ಎರಡು ಪಟ್ಟು ಹಣ ಕೊಟ್ಡಿದ್ದೇವೆ. ಸಂಕಷ್ಟದ ಸಂದರ್ಭದಲ್ಲಿ ಯಾವ ರೀತಿ ವರ್ತಿಸಲಾಗುತ್ತಿದೆ ಎಂಬುದರ ಮೇಲೆ ಸರ್ಕಾರದ ನಡೆ ಗೊತ್ತಾಗುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ: 7th Pay Commission : 7ನೇ ವೇತನ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ; ಮಹತ್ವದ ಚರ್ಚೆ

ಗಲಾಟೆ ಮಾಡುವವರಿಗೆ ಯಾವುದೇ ಭಯ ಇಲ್ಲ

ಇನ್ನು ಕೋಲಾರದಲ್ಲಿ ಈದ ಮಿಲಾದ್ ಸಂದರ್ಭದಲ್ಲಿ ಖಡ್ಗ ಹಿಡಿದು ಮೆರವಣಿಗೆ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಆಡಳಿತ ಹೇಗಿರುತ್ತದೆಯೋ ಹಾಗೆ ಇಂಥವರ ಆಟಗಳು ನಡೆಯುತ್ತವೆ. ಈಗ ಗೂಂಡಾಗಳಿಗೆ, ಗಲಾಟೆ ಮಾಡುವವರಿಗೆ ಯಾವುದೇ ಭಯ ಇಲ್ಲ. ಹೀಗಾಗಿ ಮುಕ್ತವಾಗಿ ಈ ರೀತಿ ತಿರುಗಾಡುವಂತಾಗಿದೆ ಎಂದು ಹೇಳಿದರು.

Exit mobile version