Site icon Vistara News

Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!

CM Siddaramaiah and BJP Karnataka infront of KRS Dam

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಬೆಂಗಳೂರು ಬಂದ್‌ ತೀವ್ರತೆ ಪಡೆದುಕೊಂಡಿದೆ. ಇದೇ ವೇಳೆ ಪ್ರತಿಭಟನಾಕಾರರನ್ನು ಹತ್ತಿಕ್ಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಇನ್ನು ಬಿಜೆಪಿ ಸಹ ರಾಜಧಾನಿ ಬೆಂಗಳೂರಿನ ಹಲವು ಕಡೆ ಬೀದಿಗಿಳಿದು ಆಕ್ರೋಶ ವ್ಯಕ್ತಪಡಿಸಿದೆ. ಈಗ ಕರ್ನಾಟಕ ಬಿಜೆಪಿಯು (BJP Karnataka) ರಾಜ್ಯ ಸರ್ಕಾರಕ್ಕೆ ಪ್ರಮುಖವಾಗಿ ಏಳು ಪ್ರಶ್ನೆಗಳನ್ನು ಕೇಳಿದೆ. ಅಲ್ಲದೆ, ಜನತಾ ದರ್ಶನದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಏಳು ಪ್ರಶ್ನೆಗಳನ್ನು ಕೇಳಿದೆ.

ತಮಿಳುನಾಡಿಗೆ ಕಾವೇರಿ ನೀರು (Cauvery water to Tamil Nadu) ಬಿಟ್ಟಿರುವ ಕ್ರಮವನ್ನು ಪ್ರಶ್ನಿಸಿರುವ ರಾಜ್ಯ ಬಿಜೆಪಿ, ಅನ್ನಭಾಗ್ಯ ಯೋಜನೆ, ಪ್ರಧಾನಿ ನರೇಂದ್ರ ಮೋದಿ (PM Narendra Modi) ಸರ್ಕಾರದ ಯೋಜನೆಗಳ ಬಗ್ಗೆ ರಾಜ್ಯ ಸರ್ಕಾರದ ನಿಲುವನ್ನು ಪ್ರಶ್ನೆ ಮಾಡಿದೆ. ಇನ್ನು ಬಸ್‌ ಸೌಕರ್ಯ ಹಾಗೂ ಅಭಿವೃದ್ಧಿ ವಿಷಯವನ್ನೂ ಬಿಜೆಪಿ ಎತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ “ಎಕ್ಸ್‌”ನಲ್ಲಿ ಬಿಜೆಪಿ ಕರ್ನಾಟಕ ಪೋಸ್ಟ್‌ವೊಂದನ್ನು ಅಪ್ಲೋಡ್‌ ಮಾಡಿದ್ದು, ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ.

ಇದನ್ನೂ ಓದಿ: Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

ಬಿಜೆಪಿ ಪೋಸ್ಟ್‌ನಲ್ಲೇನಿದೆ?

ಜನತಾ ದರ್ಶನವೆಂಬ (Janata Darshan) ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಎದುರಾದ ಪ್ರಶ್ನೆಗಳಿಗೆ ಅವರ ಬಳಿ ಇಲ್ಲ ಉತ್ತರ..!

ಇದನ್ನೂ ಓದಿ: Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

ಈ ರೀತಿಯಾಗಿ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕೆ ಮಾಡಿದೆ. ಅಲ್ಲದೆ, “ವಿಧಾನಸೌಧದಲ್ಲಿ ಕೈಗೆ ಸಿಗದ ಸಚಿವರು ಅಡಗುತಾಣದಲ್ಲಿ ಅವಿತು ಕುಳಿತಿದ್ದಾರೆ” ಎಂದು ಸಚಿವರ ನಡೆಯನ್ನು ಟೀಕಿಸಿದೆ. ರಾಜ್ಯದ ಜನರು ಬೀದಿಯಲ್ಲಿ ನಿಂತು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟಕ್ಕೆ ಇಳಿದಿದ್ದಾರೆ ಎಂದು ಬಿಜೆಪಿ ಪೋಸ್ಟ್‌ ಮೂಲಕ ಕಿಡಿಕಾರಿದೆ.

Exit mobile version