ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಮಂಗಳವಾರಷ್ಟೇ (ಸೆಪ್ಟೆಂಬರ್ 26) ಬೆಂಗಳೂರು ಬಂದ್ (Bengaluru bandh) ನಡೆದಿದೆ. ಇದಕ್ಕೆ ಬಿಜೆಪಿ ಬೆಂಬಲವನ್ನು ನೀಡಿದ್ದಲ್ಲದೆ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಬಂದ್ ಯಶಸ್ವಿಗೊಳಿಸಬೇಕು. ಜತೆಗೆ ಹೋಟೆಲ್, ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ಘೋಷಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಅಲ್ಲದೆ, ಬೆಂಗಳೂರಿನ ನೀರಿಗಾಗಿ ಜನ ಸ್ವಯಂ ಪ್ರೇರಿತರಾಗಿ ಅಲ್ಲಲ್ಲಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದರು. ಈಗ ಸೆಪ್ಟೆಂಬರ್ 29ರ ಶುಕ್ರವಾರ ಕರ್ನಾಟಕ ಬಂದ್‌ಗೆ (Karnataka bandh) ಕರೆ ನೀಡಲಾಗಿದ್ದು, ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ (BJP and JDS) ಬೆಂಬಲ ಸೂಚಿಸಿದೆ.
ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ (Former Chief Minister BS Yediyurappa), ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (Former Chief Minister and JDS Legislature Party leader HD Kumaraswamy) ಅವರು, ಕರ್ನಾಟಕ ಬಂದ್‌ಗೆ ತಮ್ಮ ಸಂಪೂರ್ಣ ಬೆಂಬಲ ಇದೆ. ಕನ್ನಡ ನಾಡು, ನುಡಿ, ಜಲಕ್ಕೆ ಸಂಬಂಧಪಟ್ಟಂತೆ ನಾವು ಸದಾ ಹೋರಾಟಕ್ಕೆ ಸಿದ್ಧವಿದ್ದೇವೆ. ಈ ಸಂಬಂಧ ಜನರ ಪರವಾಗಿ ನಾವು ನಿಲ್ಲುತ್ತೇವೆ. ಈ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Cauvery water dispute : ಬಿಜೆಪಿ-ಜೆಡಿಎಸ್ ಜಂಟಿ ಹೋರಾಟದಲ್ಲಿ ಕಾಣದ ಸಾಮ್ರಾಟ್; ಈ ಮಾಜಿಗಳೂ ಗೈರು!
ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರ
ಮುಂಬರುವ ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿ (BJP JDS alliance) ಮಾಡಿಕೊಂಡಿವೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಅನ್ನು ಕಟ್ಟಿಹಾಕಲು ರಾಜಕೀಯ ತಂತ್ರಗಾರಿಕೆಯನ್ನು (Political Strategy) ಹೆಣೆಯಲಾಗುತ್ತಿದೆ. ಈ ಮಧ್ಯೆ ಕಾವೇರಿ ವಿವಾದಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ (State Government of Karnataka) ನಿಲುವಿನ ವಿರುದ್ಧ ರಾಜ್ಯದೆಲ್ಲೆಡೆ ಜನಾಕ್ರೋಶ ಭುಗಿಲೆದ್ದಿದೆ. ಇದರ ಸಂಪೂರ್ಣ ಲಾಭವನ್ನು ಪಡೆಯಲು ಮುಂದಾಗಿರುವ ಜೆಡಿಎಸ್ – ಬಿಜೆಪಿಯು ಈಗ ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಇಕಟ್ಟಿಗೆ ಸಿಲುಕಿಸುವ ಯತ್ನಕ್ಕೆ ಮುಂದಾಗಿದೆ.
ಕಾವೇರಿ ಕೊಳ್ಳ ಟಾರ್ಗೆಟ್
ಕಾವೇರಿ ಕೊಳ್ಳದ ಭಾಗದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ. ಇಲ್ಲೆಲ್ಲ ಕಡೆ ರೈತರು ಹಾಗೂ ನಾಗರಿಕರು ಕಾಂಗ್ರೆಸ್ ವಿರುದ್ಧ ತಿರುಗಿಬಿದ್ದಿದ್ದಾರೆ. ಈ ವೇಳೆ ರೈತರ ಜತೆಗೆ ಪಕ್ಷ ನಿಂತರೆ ರಾಜಕೀಯವಾಗಿಯೂ ಲಾಭವಾಗುತ್ತದೆ ಎಂಬ ಲೆಕ್ಕಾಚಾರವನ್ನು ಹಾಕಲಾಗಿದೆ. ಇದಲ್ಲದೆ, ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲ ಸಂಘಟನೆಯನ್ನು ಹೊಂದಿದೆ. ಹೀಗಾಗಿ ಒಟ್ಟಾರೆಯಾಗಿ ಲೋಕಸಭಾ ಚುನಾವಣೆಯಲ್ಲಿ ಇದರ ಲಾಭವನ್ನು ಪಡೆಯುವ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.
ಈ ಎಲ್ಲ ಬೆಳವಣಿಗೆಗಳ ಮಧ್ಯೆ ನಡೆಯುತ್ತಿರುವ ಕರ್ನಾಟಕ ಬಂದ್‌ಗೆ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲ ಸೂಚಿಸುವ ಮೂಲಕ ರಾಜ್ಯದ ಎಲ್ಲ ಕಡೆ ಕಾರ್ಯಕರ್ತರನ್ನು ಬೀದಿಗೆ ಇಳಿಸುವ ಪ್ಲ್ಯಾನ್ ಹಾಕಿಕೊಳ್ಳಲಾಗಿದೆ. ಇದರಿಂದ ಜನಪರ ಹೋರಾಟದಲ್ಲಿ ಭಾಗಿಯಾಗಿದ್ದೇವೆ. ಜನರ ಪರವಾಗಿ ನಾವಿದ್ದೇವೆ ಎಂಬ ಸಂದೇಶವನ್ನು ನೀಡಲು ಉಭಯ ಪಕ್ಷಗಳು ಮುಂದಾಗಿವೆ.
ಇದನ್ನೂ ಓದಿ: Operation Hasta : ಆಪರೇಷನ್ ಹಸ್ತ ಮಾಡಲ್ಲ, ಹಾಲಿ ಶಾಸಕರನ್ನು ಸೆಳೆಯಲ್ಲ; ಡಿ.ಕೆ. ಶಿವಕುಮಾರ್ ಸ್ಪಷ್ಟನೆ
ಕಾವೇರಿ ವಿಚಾರ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಿಫಲವಾಗಿದೆ. ಜನರ ಜೀವನದ ಜತೆ ಆಟವಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಡಿಎಂಕೆ ಪಕ್ಷದ ವಕ್ತಾರರಂತೆ ಆಡುತ್ತಿದ್ದಾರೆ ಎಂದು ಈಗಾಗಲೇ ಬಿಜೆಪಿ ಕಾಂಗ್ರೆಸ್ ಸರ್ಕಾರದ ಮೇಲೆ ಹರಿಹಾಯ್ದಿದೆ.