Cauvery water dispute : ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಲು CWMA ಆದೇಶ! Vistara News
Connect with us

ಕರ್ನಾಟಕ

Cauvery water dispute : ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಲು CWMA ಆದೇಶ!

Cauvery water dispute : ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್‌ ನೀರನ್ನು 15 ದಿನಗಳ ವರೆಗೆ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಆದೇಶಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ. ಈಗ ಸರ್ಕಾರವು ಮುಂದೆ ಯಾವ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಎಂಬ ಕುತೂಹಲ ಮೂಡಿದೆ.

VISTARANEWS.COM


on

Cauvery water dispute KRS DAM
Koo

ನವ ದೆಹಲಿ: ಕಾವೇರಿ ಜಲವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ಮೊದಲೇ ನೀರಿಲ್ಲ ಎಂದು ಪರಿತಪಿಸುತ್ತಿರುವ ಹೊತ್ತಿನಲ್ಲಿ ಮತ್ತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ – Cauvery Water Management Authority – CWMA) ಆದೇಶಿಸಿದೆ. ಮುಂದಿನ 15 ದಿನಗಳ ವರೆಗೆ ಈ ಆದೇಶ ಚಾಲ್ತಿಯಲ್ಲಿರಲಿದೆ.

ನವ ದೆಹಲಿಯಲ್ಲಿ ನಡೆಯುತ್ತಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ನಡೆಸಲಾಗಿದ್ದು, ಕೇರಳ ಮತ್ತು ತಮಿಳುನಾಡು ಅಧಿಕಾರಿಗಳು ಖುದ್ದು ಸಭೆಗೆ ಹಾಜರಾಗಿದ್ದರು. ಆದರೆ, ಕರ್ನಾಟಕ ಹಾಗೂ ಪುದುಚೆರಿ ಅಧಿಕಾರಿಗಳು ವಿಡಿಯೊ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದರು.

ಈ ವೇಳೆ ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಅಧಿಕಾರಿಗಳು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ – CAUVERY WATER MANAGEMENT AUTHORITY) ನೀಡಿರುವ ಆದೇಶವನ್ನು ಕರ್ನಾಟಕ ಪಾಲನೆ ಮಾಡಿಲ್ಲ ಎಂದು ಆರೋಪ ಮಾಡಿದೆ. ತಮಗೆ ನಿತ್ಯ 12,500 ಕ್ಯೂಸೆಕ್ ನೀರು ಬಿಡುವಂತೆ ತಮಿಳುನಾಡು ಪಟ್ಟು ಹಿಡಿದಿತ್ತು.

ಈ ವೇಳೆ ವಿಡಿಯೊ ಕಾನ್ಫರೆನ್ಸ್‌ನಲ್ಲಿದ್ದ (Video conference meeting) ಕರ್ನಾಟಕದ ಅಧಿಕಾರಿಗಳು, ನಮ್ಮ ಕಾವೇರಿ ಕಣಿವೆಯಲ್ಲಿ ನೀರಿಲ್ಲ. ಬರ ಪರಿಸ್ಥಿತಿ ಬಂದೊದಗಿದೆ. ಈ ಕಾರಣಕ್ಕೆ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ವಾದವನ್ನು ಮಂಡಿಸಿದ್ದಾರೆ. ಆದರೆ, ತಮಿಳುನಾಡು ಅಧಿಕಾರಿಗಳು, ಕರ್ನಾಟಕದಿಂದ ಆದೇಶ ಪಾಲನೆ ಆಗಿಲ್ಲ ಎಂಬ ವಾದವನ್ನು ಪದೇ ಪದೇ ಮಂಡಿಸಿದ್ದಾರೆ. ಈಗಾಗಲೇ ನಿತ್ಯ 5 ಸಾವಿರ ಕ್ಯೂಸೆಕ್ ಬಿಡುವಂತೆ ಶಿಫಾರಸು ಮಾಡಲಾಗಿತ್ತು ಎಂದು ಸಹ ಉಲ್ಲೇಖಿಸಿದೆ.

ಮತ್ತೆ 15 ದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಆದೇಶ

ಈ ವೇಳೆ ವಾದ – ಪ್ರತಿವಾದವನ್ನು ಆಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯು ನೀಡಿದ್ದ ಆದೇಶವನ್ನು ಮುಂದುವರಿಸಿದೆ. ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ.

ಸೆಪ್ಟೆಂಬರ್ 13ರಿಂದಲೇ ಲೆಕ್ಕ

ಮುಂದಿನ 15 ದಿನದವರೆಗೆ 5 ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎಂಬ ಆದೇಶವನ್ನು ನೀಡಲಾಗಿದೆ. ಆದರೆ, ಈ ಲೆಕ್ಕವನ್ನು ಸೆ. 13ರಿಂದ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Murder Case : ತವರು ಮನೆ ಸೇರಿದ್ದ ಹೆಂಡ್ತಿಗೆ ಗುಂಡು ಹೊಡೆದು ಕೊಂದಿದ್ದ ಪಾಪಿ ಆತ್ಮಹತ್ಯೆಗೆ ಶರಣು!

ರಾಜ್ಯ ಸರ್ಕಾರದ ನಿರ್ಣಯ ಏನು?

ನಮ್ಮ ಕಾವೇರಿ ನದಿಯಲ್ಲಿಯೇ ನೀರಿಲ್ಲ, ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದರು. ಆದರೆ, ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಸೂಚನೆ ನೀಡಿರುವುದನ್ನು ರಾಜ್ಯ ಸರ್ಕಾರ ಪಾಲನೆ ಮಾಡುತ್ತದೆಯೇ? ಅಥವಾ ಸೆಡ್ಡು ಹೊಡೆದು ನಿಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ. ಅಲ್ಲದೆ, ಮಂಡ್ಯ ಭಾಗದ ರೈತರು, ವಿರೋಧ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಈಗಾಗಲೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಡೆ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

Cauvery Water Dispute: ರಾಜ್ಯದ ಸ್ಥಿತಿ ಬಗ್ಗೆ ಕಾವೇರಿ ಜಲ ನಿಯಂತ್ರಣ ಸಮಿತಿಯ ಮುಂದೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

VISTARANEWS.COM


on

Edited by

MLA BY Vijayendra
Koo

ಬೆಂಗಳೂರು: ಬದ್ಧತೆ, ಇಚ್ಛಾಶಕ್ತಿ ಇಲ್ಲದ ಸರ್ಕಾರವೊಂದು ಜನರ ಸಂಕಷ್ಟದೊಂದಿಗೆ ಹೇಗೆ ಚೆಲ್ಲಾಟವಾಡಬಹುದು ಎಂಬುದಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅತ್ಯುತ್ತಮ ಉದಾಹರಣೆಯಾಗಿದೆ. ಮಳೆ ಇಲ್ಲದೆ ಬೆಳೆ ಇಲ್ಲದೆ, ಕುಡಿಯುವ ನೀರಿಗೂ ಸಂಚಕಾರ ಬಂದೊದಗಿರುವ ಕಠೋರ ಪರಿಸ್ಥಿತಿಯನ್ನು. ಕಾವೇರಿ ಜಲ ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) (Cauvery Water Dispute) ಮುಂದೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ‘ಗಾಯದ ಮೇಲೆ ಬರೆ’ ಎಳೆದಂತೆ ಸಿಡಬ್ಲ್ಯುಆರ್‌ಸಿಯಿಂದ ಮತ್ತೆ 3000 ಕ್ಯೂಸೆಕ್ ನೀರು ಬಿಡುವ ಆದೇಶ ಪಡೆದು, ಸರ್ಕಾರವು ಕರ್ನಾಟಕದ ಪಾಲಿಗೆ ಕರಾಳ ಶಾಸನ ಬರೆಸಿಕೊಂಡಿದೆ ಎಂದು ಟೀಕಿಸಿದ್ದಾರೆ.

ಕರುನಾಡು ಉದ್ವಿಗ್ನ ಗೊಂಡಿದೆ, ಜನರ ಆಕ್ರೋಶ ಮುಗಿಲು ಮುಟ್ಟಿದೆ, ರೈತ ಬಂಧುಗಳು ಕಂಗಾಲಾಗಿದ್ದಾರೆ. ಇಷ್ಟಾದರೂ ಕಾವೇರಿ ಉಳಿಸಲು ನ್ಯಾಯಾಂಗ ವ್ಯವಸ್ಥೆಯಲ್ಲಿ ಸಮರ್ಥವಾಗಿ ಹೋರಾಡಲು ಕನಿಷ್ಠ ಕಾಳಜಿಯೂ ತೋರದೇ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಉಡಾಫೆಯ ಮಾತನಾಡಿಕೊಂಡು ಕನ್ನಡಿಗರ ಕತ್ತು ಹಿಸುಕುತ್ತಿದ್ದಾರೆ. ಕಾವೇರಿ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ | Cauvery water dispute : ಕಾವೇರಿ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಮರಣ ಶಾಸನವೆಂದ ಬಿಎಸ್‌ವೈ

CWRCಯಿಂದ ಮತ್ತೆ ಹೊಡೆತ, ಇನ್ನೂ 18 ದಿನ 3000 ಕ್ಯೂಸೆಕ್‌ ನೀರು ಬಿಡಲು ಆದೇಶ

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ.ಈವರೆಗೆ ಪ್ರತಿದಿನವೂ ಐದು ಸಾವಿರ ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಬೇಕು ಎಂದು ಸೂಚನೆ ಕೊಟ್ಟಿದ್ದ ಸಮಿತಿ ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನ 3000 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ನೀಡಿದೆ.

ಕಳೆದ ಸೆಪ್ಟೆಂಬರ್‌ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5000 ಕ್ಯೂಸೆಕ್‌ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್‌ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿಹಿಡಿಯಲಾಗಿತ್ತು.

ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್‌ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.

ಸೆ. 13ರಂದು ಹದಿನೈದು ದಿನಗಳವರೆಗೆ ಐದು ಸಾವಿರ ಕ್ಯೂಸೆಕ್‌ ನೀರು ಬಿಡಬೇಕು ಎಂದು ನೀಡಿದ ಆದೇಶ ಊರ್ಜಿತದಲ್ಲಿರುವುದರಿಂದ ಸೆ. 28ರಿಂದ ಹೊಸ ಆದೇಶ ಜಾರಿಗೆ ಬರಲಿದೆ. ಆಗ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕಾಗುತ್ತದೆ. ಈ ಆದೇಶವು ಅಕ್ಟೋಬರ್‌ 15ರವರೆಗೆ ಜಾರಿಯಲ್ಲಿ ಇರಲಿದ್ದು, ಅಲ್ಲಿವರೆಗೆ ಪ್ರತಿ ದಿನವೂ 3000 ಕ್ಯೂಸೆಕ್‌ ನೀರು ಬಿಡುಗಡೆ ಮಾಡಬೇಕಾಗುತ್ತದೆ.

CWRC ಯ ಮುಂದೆ ವಾಸ್ತವ ಸ್ಥಿತಿ ಸಲ್ಲಿಕೆ ಮಾಡಿದ ಕರ್ನಾಟಕ

ಇದಕ್ಕಿಂತ ಮೊದಲು ಕರ್ನಾಟಕವು ತನ್ನ ನೀರಿನ ಪರಿಸ್ಥಿತಿಯ ವಿವರಣೆಯನ್ನು ನೀಡಿತು.

25.09.2023 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಟ್ಟೂ ಒಳಹರಿವಿನ ಕೊರತೆ 53.04% ಆಗಿದೆ. ಕರ್ನಾಟಕ ಸರ್ಕಾರವು ದಿನಾಂಕ 13.09.2023 ರ ಆದೇಶದಲ್ಲಿ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಈ ಹಿನ್ನೆಲೆಯಲ್ಲಿ ಈ ಅಂಶಗಳನ್ನು ಈ ಅಂಶವು ಸಮಿತಿ ಗಂಭೀರವಾಗಿ ಪರಿಗಣಿಸಬೇಕೆಂದು ಕರ್ನಾಟಕ ಮನವಿ ಮಾಡಿತು.

ಕರ್ನಾಟಕವು ತನ್ನ ಜಲಾಶಯಗಳಿಂದ ಯಾವುದೇ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ. ರಾಜ್ಯದ ಜಲಾಶಯಗಳಿಂದ ಯಾವುದೇ ಹರಿವನ್ನು ಅಂತಾರಾಜ್ಯ ಗಡಿಯಾದ ಬಿಳಿಗುಂಡ್ಲುನಲ್ಲಿ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿತು.

ಇದನ್ನೂ ಓದಿ | Cauvery water dispute : ತಮಿಳುನಾಡು ಬೇಡಿಕೆ ತಿರಸ್ಕಾರ‌ ಮಾಡಿದ್ದು ಸಂತಸ ತಂದಿದೆ: ಡಿ.ಕೆ. ಶಿವಕುಮಾರ್

ಇದಕ್ಕೆ ಪ್ರತಿಯಾಗಿ ತಮಿಳುನಾಡು ನಿಯಮ ಪ್ರಕಾರ 12500 ಕ್ಯೂಸೆಕ್‌ ನೀರು ಪ್ರತಿದಿನವೂ ಬಿಡುಗಡೆ ಮಾಡಬೇಕು ಎಂಬ ವಾದವನ್ನೇ ಮುಂದೆ ಮಾಡಿತು.

ಅಂತಿಮವಾಗಿ ನಿಯಂತ್ರಣ ಸಮಿತಿಯು ನೀರಿನ ಪ್ರಮಾಣವನ್ನು ಇಳಿಸಿ ಆದೇಶ ಹೊರಡಿಸಿತು.

ಇದೀಗ ಕರ್ನಾಟಕವು ಈ ಅದೇಶವನ್ನು ಮತ್ತೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ಪ್ರಶ್ನಿಸಲು ಅವಕಾಶವಿದೆ.

Continue Reading

ಕಲೆ/ಸಾಹಿತ್ಯ

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

Yakshagana Show: ಮದರ್‌ ಫೌಂಡೇಶನ್‌ ಅರ್ಪಿಸುವ ಯಕ್ಷನೂಪುರ ʼರಾಜಾ ತ್ರೀʼ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್‌ ಚಾನೆಲ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Edited by

Raja Three yakshagana
Koo

ಬೆಂಗಳೂರು: ರಾಜ್‌ ಭಟ್‌ ಜಕ್ಕೂರು ಅವರ ಸಂಯೋಜನೆಯಲ್ಲಿ ಜಲವಳ್ಳಿ ಮೇಳ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಅಕ್ಟೋಬರ್‌ 7ರಂದು ರಾತ್ರಿ 9.30ಕ್ಕೆ ನಗರ ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ, ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನ ಹಾಗೂ ಅಜ್ಞಾನ ಕವಿ ವಿರಚಿತ ʼರಾಜಾ ಉರಗಕೇತನʼ ಯಕ್ಷಗಾನ ಪ್ರಸಂಗ (Yakshagana Show) ಪ್ರದರ್ಶನವಾಗಲಿದೆ.

ಮದರ್‌ ಫೌಂಡೇಶನ್‌ ಅರ್ಪಿಸುವ ಕಾರ್ಯಕ್ರಮವನ್ನು ಸ್ವರ್ಣರೇಖಾ ಇಂಟಿರಿಯರ್ಸ್ ಸಹಯೋಗದಲ್ಲಿ ಆಯೋಜಿಸಲಾಗಿದ್ದು, ವಿಸ್ತಾರ ನ್ಯೂಸ್‌ ಚಾನೆಲ್‌ ಮಾಧ್ಯಮ ಸಹಯೋಗ ನೀಡಿದೆ.

ಕೊಳಗಿ, ಜನ್ಸಾಲೆ, ಮೂಡುಬೆಳ್ಳೆ, ಬ್ರಹ್ಮೂರು ಅವರ ಗಾನ ರಸಧಾರೆ, ಅನಿರುದ್ಧ್‌, ಶಶಾಂಕ್‌, ಶ್ರೀನಿವಾಸ್‌ ಪ್ರಭು, ಸುಜನ್‌ ಹಾಗೂ ಅರುಣ ಅವರ ಚಂಡೆ ಮದ್ದಳೆಯ ಜೇಂಕಾರದಲ್ಲಿ ʼರಾಜಾ ತ್ರೀʼ ಪ್ರದರ್ಶನ ಮೂಡಿಬರಲಿದೆ.

ರತ್ನಾಪುರದ ರಾಮ ವಿರಚಿತ ʼರಾಜಾ ಮಯೂರಕೇತನʼ ಪ್ರಸಂಗದಲ್ಲಿ ತಾಮ್ರಧ್ವಜನಾಗಿ ವಿದ್ಯಾಧರ್‌ ಜಲವಳ್ಳಿ, ಮಯೂರಧ್ವಜನಾಗಿ ಮಂಕಿ ಈಶ್ವರ್‌ ನಾಯ್ಕ, ಕೃಷ್ಣನಾಗಿ ನಿಲ್ಕೋಡು ಶಂಕರ ಹೆಗಡೆ, ಅರ್ಜುನನಾಗಿ ಹೆನ್ನಾಬೈಲ್‌ ವಿಶ್ವನಾಥ್‌, ಹಾಸ್ಯ ಪಾತ್ರಗಳಲ್ಲಿ ರಮೇಶ್‌ ಭಂಡಾರಿ, ಸಿತಾರಾಮ ಕುಮಾರ್‌ ಅಭಿನಯಿಸಲಿದ್ದಾರೆ.

ಇದನ್ನೂ ಓದಿ | ದಶಮುಖ ಅಂಕಣ: ಕೋಶ ಓದಲಾಗದಿದ್ದರೆ ದೇಶವನ್ನಾದರೂ ಸುತ್ತಿ!

ಗುಂಡೂ ಸೀತಾರಾಮಯ್ಯ ವಿರಚಿತ ʼರಾಜಾ ಮಥುರಾನಿಕೇತನʼ ಪ್ರದರ್ಶನದಲ್ಲಿ ಕಂಸನಾಗಿ ತೀರ್ಥಹಳ್ಳಿ ಗೋಪಾಲಾಚಾರ್‌, ಉಗ್ರಸೇನಾ ಪಾತ್ರದಲ್ಲಿ ಪ್ರಸನ್ನ ಶೆಟ್ಟಿಗಾರ್‌, ರುಚಿಮತಿಯಾಗಿ ಸಂತೋಷ್‌ ಹಿಲಿಯಾಣ, ದೂತನಾಗಿ ಸೀತಾರಾಮ್‌ ಕುಮಾರ್‌, ಬ್ರಾಹ್ಮಣನಾಗಿ ಶ್ರೀಧರ್‌ ಕಾಸರಕೋಡು, ಮಾಗಧ ಆಗಿ ನಾಗರಾಜ ಭಂಡಾರಿ, ಆಸ್ತೀಯಾಗಿ ಉದಯ ಕಡಬಾಳ್‌, ಪಾಸ್ತಿಯಾಗಿ ಹರೀಶ್‌ ಜಪ್ತಿ, ದೃಮಿಳ ಆಗಿ ಕಾರ್ತಿಕ್‌ ಕಣ್ಣಿ ಬಣ್ಣ ಹಚ್ಚಲಿದ್ದಾರೆ.

ಅಜ್ಞಾತ ಕವಿ ವಿರಚಿತ ʼʼರಾಜಾ ಉರಗಕೇತನʼ ಯಕ್ಷಗಾನದಲ್ಲಿ ರಾಜೇಶ್‌ ಭಂಡಾರಿ, ಪ್ರಕಾಶ್‌ ಕಿರಾಡಿ, ವಿಶ್ವನಾಥ್‌ ಹೆನ್ನಾಬೈಲ್‌ ಅವರು (ಕೌರವ, ಭೀಮ, ಕೃಷ್ಣ ಪಾತ್ರದಲ್ಲಿ), ವಿನಾಯಕ ಗುಂಡುಬಾಳ, ಕಾರ್ತಿಕ್‌ ಹೆಗಡೆ, ಶ್ರೀಕಾಂತ್‌ ರಟ್ಟಾಡಿ, ನಾಗರಾಜ್‌ ದೇವಲ್ಕುಂದ ಪ್ರಮುಖ ಪಾತ್ರಗಳಲ್ಲಿ ರಂಜಿಸಲಿದ್ದಾರೆ.

ಪ್ರವೇಶ ದರ ಇರಲಿದ್ದು, ಮುಂಗಡ ಟಿಕೆಟ್‌ ಬುಕಿಂಗ್‌ಗಾಗಿ ರಾಜ್‌ ಭಟ್‌ ಮೊ.9019776411 ಸಂಪರ್ಕಿಸಿ.

ರಾಜ್‌ ಭಟ್‌ ಜಕ್ಕೂರು ಅವರು ವಿಸ್ತಾರ ನ್ಯೂಸ್‌ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್‌ ಕೋಣೆಮನೆ ಅವರಿಗೆ ಯಕ್ಷನೂಪುರ ರಾಜಾ ತ್ರೀ ಪ್ರದರ್ಶನ ವೀಕ್ಷಣೆಗೆ ಆಗಮಿಸುವಂತೆ ಆಹ್ವಾನ ನೀಡಿದರು

Continue Reading

ವಿಜಯನಗರ

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Vijayanagara News: ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮ ಜರುಗಿತು.

VISTARANEWS.COM


on

Edited by

MLA Dr N T Srinivas drives the foot and mouth disease vaccination campaign at Kudligi
ಕೂಡ್ಲಿಗಿ ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ ನೀಡಿದರು.
Koo

ಕೂಡ್ಲಿಗಿ: ತಾಲೂಕಿನ ನರಸಿಂಹಗಿರಿ ಗ್ರಾಮದ ಪಶುಪಾಲನೆ ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ , ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ಸಹಯೋಗದಲ್ಲಿ ಮಂಗಳವಾರ ಕಾಲುಬಾಯಿ ರೋಗ ಲಸಿಕಾ ಅಭಿಯಾನ (Foot and Mouth Disease Vaccination campaign) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕೂಡ್ಲಿಗಿ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪಶುಪಾಲನೆ ಭಾಗವಾದ ಆಕಳು ಎತ್ತು, ಎಮ್ಮೆ, ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಆರೋಗ್ಯದ ಸಮಸ್ಯೆ ಕಂಡುಬಂದ ವೇಳೆ ತಾಲೂಕಿನ ರೈತರು ಕರೆ ಮಾಡಿದಾಗ ವೈದ್ಯಕೀಯ ತಂಡ ತಕ್ಷಣ ಭೇಟಿ ನೀಡಿ, ಚಿಕಿತ್ಸೆ ನೀಡಲು ಮುಂದಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ

ಇದೇ ವೇಳೆ ಕೂಡ್ಲಿಗಿ ತಾಲೂಕಿನ ವೈದ್ಯರ ಸಿಬ್ಬಂದಿ, ಔಷಧಿ ಗುಣಮಟ್ಟ, ವೈದ್ಯಕೀಯ ಸೇವೆ, ಲಸಿಕೆ ವಿಧಾನ, ಆಸ್ಪತ್ರೆ ಕಟ್ಟಡಗಳ ಸ್ಥಿತಿ ಹಾಗೂ ಸಂಚಾರಿ ತುರ್ತು ಪಶು ಚಿಕಿತ್ಸಾ ವಾಹನ ಕಾರ್ಯ ನಿರ್ವಹಣೆ ಇತ್ಯಾದಿ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಹಿರಿಗುಂಬಳಗುಂಟೆ ಪಶುವೈದ್ಯಾಧಿಕಾರಿ ಡಾ. ಮಂಜುಶ್ರೀ, ಚಿರತಗುಂಡು ಪಶುವೈದ್ಯಾಧಿಕಾರಿ ಡಾ. ಇಸ್ಮಾಯಿಲ್ ಜಬೀಉಲ್ಲ, ಡಾ. ಲೋಹಿತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಶಿವಮೊಗ್ಗ

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

Death News: ಸೊರಬ ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ(80) ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Edited by

Death News Prajna Basavanyappa passed away
ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ಅವರ ಭಾವಚಿತ್ರ.
Koo

ಸೊರಬ: ತಾಲೂಕು ಕಡಸೂರು ಗ್ರಾಮದ ಹಿರಿಯ ಸಾಹಿತಿ, ಪ್ರಾಜ್ಞ ಬಸವಣ್ಯಪ್ಪ (80) ಮಂಗಳವಾರ ಬೆಳಿಗ್ಗೆ ನಿಧನರಾದರು. (Death News)

ಕೇವಲ ನಾಲ್ಕನೇ ತರಗತಿ ಓದಿ, ಸಂಸ್ಕೃತ, ಇಂಗ್ಲೀಷ್, ಕನ್ನಡ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದ ಅವರು ತಮ್ಮ ಇಳಿ ವಯಸ್ಸಿನಲ್ಲಿ ಮೂರು ಕೃತಿಗಳನ್ನು ರಚಿಸಿದ್ದರು.

ಕಾವ್ಯಗಳನ್ನು ರಾಗದ ಮೂಲಕ ರಚಿಸಿ ಮನ್ನಣೆ ಪಡೆದ ಅವರಿಗೆ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತು ದಕ್ಷಿಣ ಭಾರತ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಿತ್ತು.

ಇವರ ವಯೋಸಹಜ ನಿಧನಕ್ಕೆ ಅಭಾಸಾಪ ಸೇರಿದಂತೆ ತಾಲ್ಲೂಕು ಕನ್ನಡ ಸಾಂಸ್ಕೃತಿಕ ಜಗಲಿ, ಕಸಾಪ, ಕಜಾಪ, ಕಸಾಸಾಂವೇ ಸಾಹಿತ್ಯ ಘಟಕಗಳು ಕಂಬನಿ ಮಿಡಿದಿವೆ.

Continue Reading
Advertisement
MLA BY Vijayendra
ಕರ್ನಾಟಕ4 hours ago

Cauvery Water Dispute: ಜನರ ಸಂಕಷ್ಟದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟ: ಬಿ.ವೈ.ವಿಜಯೇಂದ್ರ

jai shankar
ದೇಶ4 hours ago

UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

Raja Three yakshagana
ಕಲೆ/ಸಾಹಿತ್ಯ4 hours ago

Yakshagana Show: ಅ.7ರಂದು ರವೀಂದ್ರ ಕಲಾಕ್ಷೇತ್ರದಲ್ಲಿ ಯಕ್ಷನೂಪುರ ʼರಾಜಾ ತ್ರೀʼ ಪ್ರದರ್ಶನ

What did they wrong, Why they are murdered asked Parents Of Manipur Teens
ದೇಶ4 hours ago

Manipur Horror: ಅಪಹರಿಸಿ ಕೊಂದ್ರಲ್ಲಾ… ನಮ್ಮ ಮಕ್ಕಳು ಮಾಡಿದ ತಪ್ಪಾದ್ರೂ ಏನು? ಹತ್ಯೆಗೀಡಾದ ವಿದ್ಯಾರ್ಥಿಗಳ ಪೋಷಕರ ಪ್ರಶ್ನೆ

Vaidyanath Co-operative sugar factory
ದೇಶ5 hours ago

GST Evasion: ಜಿಎಸ್‌ಟಿ ವಂಚಿಸಿದ ಬಿಜೆಪಿ ನಾಯಕಿಯ ಸಕ್ಕರೆ ಕಾರ್ಖಾನೆಯ 19 ಕೋಟಿ ರೂ. ಮೌಲ್ಯದ ಸೊತ್ತು ಜಪ್ತಿ!

Dale stain
ಕ್ರಿಕೆಟ್5 hours ago

Rohit Sharma : ರೋಹಿತ್ ಶರ್ಮಾ ಪಾಲಿನ ಭಯಾನಕ ಬೌಲರ್ ಯಾರು ಗೊತ್ತೇ? ಅವರೇ ಹೇಳಿದ್ದಾರೆ ಕೇಳಿ

MLA Dr N T Srinivas drives the foot and mouth disease vaccination campaign at Kudligi
ವಿಜಯನಗರ6 hours ago

Vijayanagara News: ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಶಾಸಕ ಡಾ. ಎನ್. ಟಿ. ಶ್ರೀನಿವಾಸ್ ಚಾಲನೆ

Death News Prajna Basavanyappa passed away
ಶಿವಮೊಗ್ಗ6 hours ago

Death News: ಹಿರಿಯ ಸಾಹಿತಿ ಪ್ರಾಜ್ಞ ಬಸವಣ್ಯಪ್ಪ ನಿಧನ

ಕ್ರೈಂ6 hours ago

Vijayanagara News: ಗೋಡೆ ಕಲ್ಲು ಬಿದ್ದು ಮಗು ಸಾವು; ಎಮ್ಮೆ ಗುದ್ದಿದ್ದರಿಂದ ನಡೆಯಿತು ಅನಾಹುತ!

Top 10 news kannada
ಕ್ರೀಡೆ6 hours ago

VISTARA TOP 10 NEWS : ಕಾವೇರಿ ಹೋರಾಟಕ್ಕೆ ಸ್ವಯಂಪ್ರೇರಿತ ಬೆಂಬಲ, ಮತ್ತೆ ಕೇಂದ್ರ-ಸುಪ್ರೀಂ ಜಟಾಪಟಿ ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ1 day ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌