Cauvery water dispute : ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ! - Vistara News

ಕರ್ನಾಟಕ

Cauvery water dispute : ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Cauvery water dispute : ನೀರಿನ ಮೇಲೆ ವಿಧಿಸುತ್ತಿರುವ ಕರ, ಜಲಮೂಲಗಳ ಶೋಷಣೆ, ಬೆಂಗಳೂರಿಗೆ ಎದುರಾಗಿರುವ ಜಲಕ್ಷಾಮದ ವಿರುದ್ಧ ಜಾಗೃತಿ ಹಾಗೂ ಸಂರಕ್ಷಣೆ, ಎಲ್ಲದಕ್ಕಿಂತ ಹೆಚ್ಚಾಗಿ ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಎದುರಾಗಿರುವ ಅಡ್ಡಿ ಸಂಬಂಧ ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

VISTARANEWS.COM


on

CM siddaramaiah cauvery dispute
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ (Syed Ahmed Hussain) ಪತ್ರ ಬರೆದು ಕೆಲವು ಸಲಹೆಗಳನ್ನು ನೀಡಿದ್ದಾರೆ. ಈ ವಿವಾದ ಬಗೆಹರಿಯಬೇಕಾದರೆ ಉಭಯ ರಾಜ್ಯಗಳ ಸಹಕಾರದ ಅಗತ್ಯವಿದೆ. ನೀರಿಗೂ ತೆರಿಗೆ ಕೊಡುವ ಪರಿಸ್ಥಿತಿ ಬರಬಾರದು ಎಂದು ಕಿವಿಮಾತನ್ನು ಹೇಳಿದ್ದಾರೆ. ಜತೆಗೆ ಜಲ ಸತ್ಯಾಗ್ರಹದ ಬಗ್ಗೆ ಉಲ್ಲೇಖಿಸಿದ್ದಾರೆ. ಇನ್ನು ಬೆಂಗಳೂರಿನವರು ನೀರಿಗಾಗಿ ಏಕೆ ಹೋರಾಟ (fight for water) ಮಾಡಲು ಮುಂದಾಗಿದ್ದಾರೆ ಎಂಬುದನ್ನೂ ಅವರು ವಿವರಿಸಿದ್ದಾರೆ. ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಸೈಯದ್‌ ಜಲ ಪಾಠ ಮಾಡಿದ್ದಾರೆ.

ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ (DCM DK Shivakumar) ಸಹ ಇದೇ ಪತ್ರದ ಪ್ರತಿಯನ್ನು ಕಳುಹಿಸಿದ್ದಾರೆ. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಜಲ ವಿವಾದ ಅಂತ್ಯವಾಗಬೇಕು. ಇದಕ್ಕೆ ಉಭಯ ರಾಜ್ಯಗಳ ಸಹಕಾರ ಅಗತ್ಯವಿದೆ. ಮೇಕೆದಾಟು ಯೋಜನೆ (Mekedatu Project) ಒಂದೇ ಕಾವೇರಿ ವಿವಾದಕ್ಕೆ ಪರಿಹಾರವೆಂದು ತಜ್ಞರು ಹೇಳಿದ್ದಾರೆ. ಕಳೆದ ಸರ್ಕಾರ ಈ ಯೋಜನೆಗೆ ಸಾವಿರ ಕೋಟಿ‌ ರೂಪಾಯಿ ಇಟ್ಟಿದೆ. ಪರಿಸರ ಅನುಮತಿ ಪಡೆಯಲು ವಿಫಲವಾಗಿ ಹಣ ಖರ್ಚಾಗಿಲ್ಲ. ಸದ್ಯ ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಕಳುಹಿಸಲಾಗಿದೆ. ಸಿಡಬ್ಲ್ಯುಎಂಎ ಮತ್ತು ಕೇಂದ್ರ ಪರಿಸರ ಅನುಮತಿ ಪಡೆಯುವ ಹಂತದಲ್ಲಿದೆ. ಸಾಧ್ಯವಾದಷ್ಟು ಬೇಗ ಈ ಯೋಜನೆಗೆ ಅನುಮೋದನೆ ನೀಡಬೇಕು. ಬೆಂಗಳೂರು ನಗರ ಜನರಿಗೆ ಸಹಾಯ ಮಾಡಬೇಕು. ಇದಕ್ಕೆ ರಾಜಕೀಯ ದೃಢ ನಿರ್ಧಾರ ಅಗತ್ಯವಿದೆ. ಹೀಗಾಗಿ ಸಿಎಂ, ಡಿಸಿಎಂ, ಪ್ರಧಾನಿಗಳು ಸೂಕ್ತ ಕ್ರಮವಹಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಯ್ಯದ್‌ ಅಹ್ಮದ್‌ ಹುಸೇನ್‌ ಪತ್ರದಲ್ಲೇನಿದೆ?

ಮಾನ್ಯರೇ, ಭಾರತಕ್ಕೆ ಸ್ವಾತಂತ್ರ್ಯ ನೀಡುವ ಸಂದರ್ಭದಲ್ಲಿ ಇಂಗ್ಲೆಂಡ್ ಪ್ರಧಾನಿ ಹೇಳಿದ ಮಾತೊಂದನ್ನು ಅತ್ಯಂತ ಬೇಸರದಿಂದ ಉಲ್ಲೇಖಿಸಬೇಕೆನಿಸುತ್ತಿದೆ.

ಇದನ್ನೂ ಓದಿ: Cauvery water dispute : ತಮಿಳುನಾಡು ಸಿಎಂ ಜತೆ ಮಾತನಾಡಿ; ಸಿದ್ದರಾಮಯ್ಯಗೆ ಕಿಚ್ಚ ಸುದೀಪ್‌ ಸಲಹೆ

“ಭಾರತಕ್ಕೆ ಸ್ವಾತಂತ್ರ್ಯ ನೀಡಿದರೆ ರಾಜ್ಯಾಧಿಕಾರ ದುಷ್ಟರು, ಸಾಮರ್ಥ್ಯ ಇಲ್ಲದವರು ಹಾಗೂ ಆಯೋಗ್ಯರ ಕೈಗೆ ಹೋಗುತ್ತದೆ. ಭಾರತದ ಎಲ್ಲ ರಾಜಕೀಯ ನಾಯಕರು ಕಡಿಮೆ ಸಾಮರ್ಥ್ಯವಂತರು ಹಾಗೂ ಒಣ ಪೌರುಷವಾದಿಗಳು. ಅವರು ಸಿಹಿ ನಾಲಿಗೆ ಮತ್ತು ಮೂರ್ಖ ಹೃದಯಗಳನ್ನು ಹೊಂದಿರುತ್ತಾರೆ. ಅವರು ಅಧಿಕಾರಕ್ಕಾಗಿ ತಮ್ಮ ತಮ್ಮಲ್ಲೇ ಕಚ್ಚಾಡುತ್ತಾರೆ ಮತ್ತು ರಾಜಕೀಯ ಜಗಳದಲ್ಲಿ ಭಾರತ ಕಳೆದುಹೋಗುತ್ತದೆ. ಭಾರತದಲ್ಲಿ ಗಾಳಿ ಮತ್ತು ನೀರಿಗೆ ತೆರಿಗೆ ವಿಧಿಸುವ ದಿನ ಬರಲಿದೆ” ಎಂದು ಚರ್ಚಿಲ್ ಭವಿಷ್ಯ ನುಡಿದಿದ್ದರು.

ಚರ್ಚಿಲ್ ಅವರ ಹೇಳಿಕೆಯ ಮೊದಲಾರ್ಧ ಭಾಗ ಚರ್ಚೆಯ ವಸ್ತುವಾದರೂ ಕೊನೆಯ ಭಾಗ ಮಾತ್ರ ಸತ್ಯ ಎನ್ನಿಸುತ್ತಿದೆ. ದುರಂತವೆಂದರೆ ಇಂದು ಭಾರತದಲ್ಲಿ ಗಾಳಿ ಮತ್ತು ನೀರಿಗೆ ತೆರಿಗೆ ವಿಧಿಸುವ ಹಂತಕ್ಕೆ ನಮ್ಮ ವ್ಯವಸ್ಥೆ ತಲುಪಿದೆ.

ಕುಡಿವನ ನೀರು, ಆಮ್ಲಜನಕದ ಮೇಲಿನ ಜಿಎಸ್‌ಟಿ ರದ್ದತಿಗೆ ಮನವಿ

ಎಲ್ಲರಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವ ಪ್ರಾಥಮಿಕ ಜವಾಬ್ದಾರಿಯಿಂದ ನಮ್ಮ ಸರ್ಕಾರಗಳು ನುಣುಚಿಕೊಳ್ಳುತ್ತಿವೆ. ನಾವು ಕುಡಿಯುವ ನೀರಿನ ಬಾಟಲಿಗೆ 18% ಮತ್ತು ವೈದ್ಯಕೀಯ ದರ್ಜೆಯ ಆಮ್ಲಜನಕದ ಮೇಲೆ 5% ಜಿಎಸ್‌ಟಿಯನ್ನು ವಿಧಿಸುತ್ತಿದ್ದೇವೆ. ಹೀಗಾಗಿ ಚರ್ಚಿಲ್ ನುಡಿದ ಭವಿಷ್ಯವನ್ನು ಸುಳ್ಳಾಗಿಸಲು ಪ್ಯಾಕ್ ಮಾಡಲಾದ ಕುಡಿಯುವ ನೀರು ಮತ್ತು ವೈದ್ಯಕೀಯ ದರ್ಜೆಯ ಆಮ್ಲಜನಕದ ಮೇಲಿನ GST ತೆರಿಗೆಯನ್ನು ರದ್ದುಪಡಿಸುವಂತೆ ನಾನು ನಿಮ್ಮ ಗಮನವನ್ನು ಸೆಳೆಯಲು ಬಯಸುತ್ತೇನೆ.

ಇನ್ನೊಂದು ಸಂಗತಿಯನ್ನು ನಾನು ಈ ಸಂದರ್ಭದಲ್ಲಿ ನಿಮ್ಮ ಅವಗಾಹನೆಗೆ ತರಲು ಬಯಸುತ್ತೇನೆ. ಈ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಜಲ ಸತ್ಯಾಗ್ರಹ ಪ್ರಾರಂಭಿಸಿದವರು ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್. 1927ರಲ್ಲಿ ದಲಿತರು ಹಾಗೂ ಶೋಷಿತ ವರ್ಗದವರಿಗೆ ಕುಡಿಯುವ ನೀರು ನಿರಾಕರಿಸುತ್ತಿದ್ದ ಅನಿಷ್ಠ ಪದ್ಧತಿಯನ್ನು ಖಂಡಿಸಿ ಅವರು ಪ್ರಾರಂಭಿಸಿದ ಜಲ ಸತ್ಯಾಗ್ರಹ ಇಂದಿಗೂ ಪ್ರಸ್ತುತ ಎಂದು ನಾನು ಭಾವಿಸಿದ್ದೇನೆ. ಇಂದು ದಲಿತರಿಗೆ ಮಾತ್ರವಲ್ಲದೆ ದೇಶದ ಬಹುತೇಕ ಜನವರ್ಗಕ್ಕೆ ನೀರು ಮರೀಚಿಕೆಯಾಗುತ್ತಿದೆ. ಜೀವಜಲಕ್ಕೆ ತೆರಿಗೆ ಕಟ್ಟುವುದು ಅಥವಾ ನೀರನ್ನು ಕೊಂಡು ಕುಡಿಯುವುದು ಸಾಮಾಜಿಕ ವಿಕೃತಿ ಎನ್ನದೇ ವಿಧಿ ಇಲ್ಲ. ಇದು ನಮ್ಮ ಭಾರತೀಯ ಪರಂಪರೆಗೆ ಸಂಪೂರ್ಣ ವಿರುದ್ಧ ಹೀಗಾಗಿ ಎಲ್ಲರಿಗೂ ಉಚಿತ ಹಾಗೂ ಗುಣಮಟ್ಟದ ನೀರು ಲಭಿಸುವಂತೆ ಮಾಡುವುದು ಈ ಕ್ಷಣದ ಅಗತ್ಯತೆ ಮಾತ್ರವಲ್ಲ, ಬದುಕುವ ಹಕ್ಕಿಗೆ ನೀಡುವ ಗೌರವವೂ ಹೌದು.

ಕುಡಿಯುವ ನೀರು ದುಬಾರಿ

ಈ ಸಂದರ್ಭದಲ್ಲಿ ಬೆಂಗಳೂರಿನ ಈಗಿನ ನೀರಿನ ಪರಿಸ್ಥಿತಿಯನ್ನು ಹಂಚಿಕೊಳ್ಳಲು ನನಗೆ ಅತೀವ ಬೇಸರ ಮತ್ತು ನೋವಾಗುತ್ತದೆ. ಬೆಂಗಳೂರಿನ ನಿವಾಸಿಯಾಗಿ ನಾನು ನೀರಿನ ಬಿಕ್ಕಟ್ಟನ್ನು ಹತ್ತಿರದಿಂದ ನೋಡಿದ್ದೇನೆ. ಬೋರ್‌ವೆಲ್‌ ಮತ್ತು ಕಾವೇರಿ: 1 ರಿಂದ 5ನೇ ಹಂತದವರೆಗಿನ ಯೋಜನೆಗಳು ಬೆಂಗಳೂರಿಗರ ನೀರಿನ ಅಗತ್ಯವನ್ನು ಭಾಗಶಃ ಪೂರೈಸಿದೆಯಾದರೂ ಭಾರಿ ವೆಚ್ಚ ತಗುಲಿದೆ. ವಿಶೇಷವಾಗಿ ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಗೊಂಡ ಪ್ರದೇಶಗಳಲ್ಲಿ, ನೀರು ದುಬಾರಿಯಾಗುವ ಜತೆಗೆ ಕುಡಿಯಲು ಯೋಗ್ಯವಾಗಿಲ್ಲ.

ಎಲ್ಲ ವಾರ್ಡ್‌ಗಳಲ್ಲೂ ಜಲ ಸಂಕಷ್ಟ ಎದುರಾಗಬಹುದು ಎಚ್ಚರ!

ಉದಾಹರಣೆಗೆ ಸಾಫ್ಟ್‌ವೇರ್ ರಫ್ತು ಸೇವೆಯಲ್ಲಿ ಅತಿ ಹೆಚ್ಚು ಕೊಡುಗೆ ನೀಡುವ ಐಟಿ ಹಬ್ ಮಹದೇವಪುರದಲ್ಲಿ ಟ್ಯಾಂಕರ್‌ಗಳ ಮೂಲಕ ನೀರನ್ನು ಖರೀದಿಸಲು ಆರ್‌ಡಬ್ಲ್ಯುಎಯ ಅಗತ್ಯತೆಯಿಂದಾಗಿ ನಿರ್ವಹಣಾ ಶುಲ್ಕವನ್ನು ಪಾವತಿಸುವುದರ ಜತೆಗೆ ಶುಲ್ಕ ಕಟ್ಟಬೇಕಾಗಿದೆ. ಮನೆ/ಅಪಾರ್ಟ್‌ಮೆಂಟ್ ವಾಸಿಗಳು ಮಾಸಿಕ ಎರಡು ಸಾವಿರ ರೂ. ನಿಂದ ಮೂರು ಸಾವಿರ ರೂಪಾಯಿವರೆಗೆ ಖರ್ಚು ಮಾಡಬೇಕಾಗುತ್ತದೆ. ಜತೆಗೆ ಕುಡಿಯುವ ನೀರಿನ ಬಾಟಲಿಗಳಿಗಾಗಿ ಹೆಚ್ಚುವರಿಯಾಗಿ ಒಂದು ಸಾವಿರ ರೂಪಾಯಿಯಿಂದ ಒಂದೂವರೆ ಸಾವಿರ ರೂ.ವರೆಗೆ ಖರ್ಚು ಮಾಡಬೇಕಾಗುತ್ತದೆ. ಇದರಿಂದ ಇಲ್ಲಿನ ಪ್ರತಿ ಕುಟುಂಬ ಮಾಸಿಕ ಸರಾಸರಿ 3.5 ಸಾವಿರ ರೂ. ನಿಂದ 4 ಸಾವಿರದವರೆಗೆ ವ್ಯಯಿಸುತ್ತಿದೆ. ಇದು ಮಹಾದೇವಪುರಕ್ಕೆ ಮಾತ್ರ ಸೀಮಿತವಾದ ವಿದ್ಯಮಾನವಲ್ಲ ನಗರದ ಬಹುತೇಕ ವಾರ್ಡ್‌ಗಳಿಗೆ ಕೆಲವೇ ವರ್ಷದಲ್ಲಿ ಈ ಪರಿಸ್ಥಿತಿ ವಿಸ್ತರಣೆಯಾಗುವ ಆತಂಕ ಎದುರಾಗಿದೆ. ಬೆಂಗಳೂರು ಜಾಗತಿಕ ಮಹಾನಗರವೆಂದು ಹೆಸರು ಗಳಿಸಿದ್ದರೂ ದುರದೃಷ್ಟವಶಾತ್ ಇಲ್ಲಿನ ಜಲಮೂಲಗಳು ಅತಿಯಾದ ಶೋಷಣೆ ಹಾಗೂ ಕಲುಷಿತಗೊಂಡಿದೆ.

2011 ರಿಂದ ಭಾರತೀಯ ವಿಜ್ಞಾನ ಸಂಸ್ಥೆ, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ, ಕೇಂದ್ರ ಅಂತರ್ಜಲ ಮಂಡಳಿ ಮತ್ತು ಹಲವಾರು ಪ್ರತಿಷ್ಠಿತ ಸಂಸ್ಥೆಗಳು ಬೆಂಗಳೂರಿನ ನೀರಿನ ಮೂಲಗಳ ಅತಿಯಾದ ಶೋಷಣೆಯಿಂದಾಗಿ ಆರ್ಸೆನಿಕ್ ಅಂಶ ಹೆಚ್ಚುತ್ತಿರುವ ಬಗ್ಗೆ ವಿಶ್ಲೇಷಣಾ ವರದಿಯನ್ನು ಆಗಾಗ ಬಿಡುಗಡೆ ಮಾಡಿವೆ. ಜತೆಗೆ ನೀರಿನಲ್ಲಿ ನೈಟ್ರೇಟ್‌ಗಳು, ಗಡಸುತನ, ಕ್ಯಾಲ್ಸಿಯಂ, ಮೆಗ್ನಿಸಿಯಮ್, ಕರಗಿದ ಘನವಸ್ತುಗಳು, ಸಲ್ಫೇಟ್‌ಗಳು ಮತ್ತು ಫ್ಲೋರೈಡ್‌ಗಳಂತಹ ವಿಷಯುಕ್ತಗಳ ಸಮೀಕರಣ ಹಾಗೂ ಅತಿಯಾದ ಸಾಂದ್ರತೆಯಿಂದಾಗಿ ಬೆಂಗಳೂರಿನ ನೀರಿನ ಮೂಲಗಳು ಹೆಚ್ಚು ಕಲುಷಿತಗೊಂಡಿವೆ ಎಂದು ಕಳವಳ ವ್ಯಕ್ತಪಡಿಸಿವೆ.

ಕೇಂದ್ರೀಯ ಅಂತರ್ಜಲ ಮಂಡಳಿ (CGWB) ನಡೆಸಿದ ಇತ್ತೀಚಿನ ಸಂಶೋಧನೆ ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಅಂತರ್ಜಲವು 30 ug/L (ಮೈಕ್ರೋಗ್ರಾಂ/ಲೀಟರ್) ಗಿಂತ ಹೆಚ್ಚಿನ ಸಾಂದ್ರತೆಯೊಂದಿಗೆ ಅಧಿಕ ಭಾರದ ಮೆಟಲ್ ಯುರೇನಿಯಂ ಅನ್ನು ಒಳಗೊಳ್ಳುತ್ತಿವೆ. ಇದು ಅತ್ಯಂತ ಆತಂಕದ ವಿಚಾರವಾಗಿದೆ.

ಬೆಂಗಳೂರು ವಿಶ್ವದ ಎರಡನೇ ಅತ್ಯಂತ ಕಲುಷಿತ ಜಲ ಮೂಲ ಹೊಂದಿದ ನಗರ

Tapsafe ನಂತಹ ಅಂತಾರಾಷ್ಟ್ರೀಯ ಏಜೆನ್ಸಿಗಳು ಸಹ ತನ್ನ ಇತ್ತೀಚಿನ ವರದಿಯೊಂದರಲ್ಲಿ ಬೆಂಗಳೂರು ವಿಶ್ವದ ಎರಡನೇ ಅತ್ಯಂತ ಕಲುಷಿತ ಜಲ ಮೂಲ ಹೊಂದಿದ ನಗರವಾಗಿದೆ. ಕೊಳವೆ ಬಾವಿಯ ಗುಣಮಟ್ಟವು ಕುಡಿಯುವುದಕ್ಕೆ ಸುರಕ್ಷಿತವಾಗಿಲ್ಲ ಎಂದಿದೆ. ಟ್ಯಾಪ್ ವಾಟರ್ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ದೇಶದಲ್ಲೇ ಅತ್ಯಂತ ಕಲುಷಿತ ನಗರವಾಗಿ ಅಗ್ರಸ್ಥಾನದಲ್ಲಿದೆ. ಮನಿಲಾ ನಂತರ ನಾವು ಎರಡನೇ ಸ್ಥಾನದಲ್ಲಿದ್ದೇವೆ ಎಂಬುದು ನಾಗರಿಕರ ಸುರಕ್ಷತೆ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ.

ಕಾವೇರಿ ವಿಚಾರವಾಗಿ ಕರ್ನಾಟಕ ಹಾಗೂ ತಮಿಳುನಾಡು ಮಧ್ಯೆ ನಡೆಯುತ್ತಿರುವ ವಿವಾದ ನಿಮ್ಮ ಅವಗಾಹನೆಗೆ ಇದೆ ಎಂದು ನಾನು ಭಾವಿಸಿದ್ದೇನೆ. ಇತಿಹಾಸದಲ್ಲಿ ಹಿಂದೆಂದೂ ಕಂಡು ಕೇಳರಿಯದ ನೀರಿನ ಕೊರತೆ ಕಾವೇರಿ ಜಲಾನಯನ ಪಾತ್ರದಲ್ಲಿ ಇದೆ. ಉಭಯ ರಾಜ್ಯಗಳು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿವೆ. ಕರ್ನಾಟಕದಲ್ಲಿ ಪ್ರತಿಭಟನೆ – ಬಂದ್ ನಡೆಯುತ್ತಿದೆ. ಶತಮಾನಗಳಷ್ಟು ಹಳೆಯದಾದ ಕಾವೇರಿ ವಿವಾದವನ್ನು ಬಗೆಹರಿಸುವುದಕ್ಕೆ ಇದು ಸಕಾಲ. ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಅನುಷ್ಠಾನದಿಂದ ಬೆಂಗಳೂರಿಗರು ಎದುರಿಸುವ ನೀರಿನ ಕೊರತೆಯನ್ನು ನೀಗಿಸುವುದಕ್ಕೆ ಸಾಧ್ಯ ಎಂದು ಬಹುತೇಕ ತಜ್ಞರ ಅಂಬೋಣ. ಇದರಿಂದ ಕೆಆರ್‌ಎಸ್ ಜಲಾಶಯದ ಮೇಲಿನ ಪಾರಂಪರಿಕೆ ಅವಲಂಬನೆ ತುಸು ತಗ್ಗಿಸಬಹುದು. ಈ ಯೋಜನೆ ಕಾರ್ಯಗತಗೊಳಿಸಲು ಅಗತ್ಯವಾದ ಅನುಮತಿಗಳನ್ನು ಪಡೆಯುವಲ್ಲಿನ ವಿಳಂಬ ಬೆಂಗಳೂರಿಗೆ ಆತಂಕ ತಂದೊಡ್ಡಿದೆ ಎಂಬ ಕಳವಳವನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಬೆಂಗಳೂರಿಗೆ 20 ಟಿಎಂಸಿಯಷ್ಟು ನೀರಿನ ಕೊರತೆ ಇದೆ. ಪ್ರಸ್ತಾವಿತ ಮೇಕೆದಾಟು ಯೋಜನೆಯನ್ನು ಬೆಂಗಳೂರಿನಿಂದ ಸುಮಾರು 100 ಕಿ.ಮೀ. ದಕ್ಷಿಣಕ್ಕೆ ರಾಮನಗರ ಜಿಲ್ಲೆಯಲ್ಲಿ ನಿರ್ಮಿಸಲು ಯೋಜಿಸಲಾಗಿದೆ ಎಂಬುದು ತಮ್ಮ ಘನ ಅವಗಾಹನೆಯಲ್ಲಿದೆ. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯತೆಗಳನ್ನು ಪರಿಹರಿಸುವುದು ಮತ್ತು ಅಂತರ್ಜಲವನ್ನು ಮರುಪೂರಣಗೊಳಿಸುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ.

ಮೇಕೆದಾಟು ಯೋಜನೆ ಜಾರಿಯಾಗಲಿ

ಮೇಕೆದಾಟು ಸಮತೋಲನ ಜಲಾಶಯದ ಕಲ್ಪನೆಯು ಹಲವಾರು ವರ್ಷಗಳಿಂದ ಚರ್ಚೆಯಲ್ಲಿದೆ. 2014ರಲ್ಲಿ ಕರ್ನಾಟಕ ಸರ್ಕಾರವು ಯೋಜನೆಗೆ ಪ್ರಸ್ತಾಪಿಸಿತು. ಮರು ವರ್ಷದಲ್ಲಿ ವಿವರವಾದ ಯೋಜನಾ ವರದಿಗಾಗಿ ಹಣವನ್ನು ಮಂಜೂರು ಮಾಡಿತು. ನಂತರದ ವರ್ಷಗಳಲ್ಲಿ ಕೇಂದ್ರ ಜಲ ಆಯೋಗವು 2018 ರಲ್ಲಿ ಮೇಕೆದಾಟು ಯೋಜನೆಗೆ ಕಾರ್ಯಸಾಧ್ಯತೆಯ ಅಧ್ಯಯನವನ್ನು ತೆರವುಗೊಳಿಸಿತು. ಬೆಂಗಳೂರಿನ ಕುಡಿಯುವ ನೀರಿನ ಅಗತ್ಯಗಳಿಗೆ ಹೆಚ್ಚುವರಿ ಬೆಂಬಲವನ್ನು ಒದಗಿಸಿತು. ಬೆಳೆಯುತ್ತಿರುವ ನಗರಕ್ಕೆ ಸ್ಥಿರವಾದ ನೀರಿನ ಪೂರೈಕೆಯನ್ನು ಖಾತ್ರಿಪಡಿಸಿತು. 2021-22 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ತನ್ನ ಬಜೆಟ್‌ನಲ್ಲಿ ಈ ಯೋಜನೆಯನ್ನು ಕಾರ್ಯಗತಗೊಳಿಸಲು 1000 ಕೋಟಿ ರೂ.ಗಳನ್ನು ಮೀಸಲಿಟ್ಟಿತು. ಆದರೆ ಪರಿಸರ ಅನುಮತಿ ಮತ್ತು ಇತರ ಕಡ್ಡಾಯ ಅನುಮತಿಗಳನ್ನು ಪಡೆಯುವಲ್ಲಿ ಯಶಸ್ವಿಯಾಗದ ಕಾರಣ ಒಂದು ಪೈಸೆಯನ್ನೂ ಖರ್ಚು ಮಾಡಲು ಸಾಧ್ಯವಾಗಲಿಲ್ಲ.

ವಾಸ್ತವವಾಗಿ, ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕೇಂದ್ರೀಯ ಜಲ ಆಯೋಗಕ್ಕೆ (ಸಿಡಬ್ಲ್ಯೂಸಿ) ಕಳುಹಿಸಲಾಗಿದೆ. ಪ್ರಸ್ತುತ ಇದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲೂ ಎಂಎ) ಮತ್ತು ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಪರಿಸರದ ಅನುಮತಿ ಪಡೆಯುವ ಹಂತದಲ್ಲಿ ಇದೆ. ದಯವಿಟ್ಟು, ಸಾಧ್ಯವಾದಷ್ಟು ಬೇಗ ಈ ಅನುಮೋದನೆಗಳನ್ನು ನೀಡುವ ಮೂಲಕ ಬೆಂಗಳೂರಿನ ಜನರಿಗೆ ಸಹಾಯ ಹಸ್ತ ನೀಡಬೇಕೆಂದು ತಮ್ಮಲ್ಲಿ ಅರಿಕೆ ಮಾಡುತ್ತೇನೆ.

ಇದನ್ನೂ ಓದಿ: Cauvery water dispute : ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಕಿಚ್ಚು; ಮೈತ್ರಿ ಬಳಿಕ ಮೊದಲ ಜಂಟಿ ಪ್ರತಿಭಟನೆ

ದೃಢವಾದ ಮಧ್ಯಸ್ಥಿಕೆ ಬೇಕು

ಕರ್ನಾಟಕ ಮತ್ತು ತಮಿಳುನಾಡು ನಡುವಿನ ದಶಕಗಳ ಹಳೆಯ ಜಲ ವಿವಾದಕ್ಕೆ ಅಂತ್ಯ ಹಾಡಲು ದೃಢವಾದ ಅಂತಾರಾಜ್ಯ ಸಹಕಾರದ ಅಗತ್ಯವಿದೆ. ಜಲ ನಿರ್ವಹಣೆಯ ವಿಷಯಗಳಲ್ಲಿ ನಿಮ್ಮ ದೃಢವಾದ ಮಧ್ಯಸ್ಥಿಕೆಯಿಂದ ಮಾತ್ರ ವಿವಾದ ಅಂತ್ಯಗೊಳ್ಳಲು ಸಾಧ್ಯವಿದೆ. ಹಂಚಿಕೆಯಾದ ಜಲ ಸಂಪತ್ತಿನ ಸುಸ್ಥಿರ ಮತ್ತು ಸಮಾನ ಬಳಕೆಯನ್ನು ಖಾತ್ರಿಪಡಿಸಿಕೊಳ್ಳಲು ಕಾನೂನು ಚೌಕಟ್ಟುಗಳನ್ನು ಗೌರವಿಸಲು ಮತ್ತು ಒಳಗೊಂಡಿರುವ ಎಲ್ಲ ಪಾಲುದಾರಿಕೆಯ ಜಂಜಡಗಳನ್ನು ಪರಿಹರಿಸಲು ನಿಮ್ಮ ಹೃದಯಪೂರ್ವಕ ಮಧ್ಯಸ್ಥಿಕೆ ನಿರ್ಹಾಯಕವಾಗಿದೆ ಎಂದು ಭಾವಿಸುತ್ತೇನೆ” ಎಂದು ಕೆಪಿಸಿಸಿ ಪ್ರಧಾನ ‌ಕಾರ್ಯದರ್ಶಿ ಸಯ್ಯದ್‌ ಅಹ್ಮದ್ ಹುಸೇನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿನ್ನದ ದರ

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹43 ಏರಿಕೆಯಾಗಿವೆ. ಅಕ್ಷಯ ತದಿಗೆಯ ಭಾರೀ ಏರಿಕೆಯ ಬಳಿಕ ಚಿನ್ನದ ಬೆಲೆಗಳು ಇಳಿದಿದ್ದವು. ಇಂದು ಮತ್ತೆ ಏರಿದೆ.

VISTARANEWS.COM


on

gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹40 ಹಾಗೂ ₹43 ಏರಿಕೆಯಾಗಿವೆ. ಅಕ್ಷಯ ತದಿಗೆಯ ಭಾರೀ ಏರಿಕೆಯ ಬಳಿಕ ಚಿನ್ನದ ಬೆಲೆಗಳು ಇಳಿದಿದ್ದವು. ಇಂದು ಮತ್ತೆ ಏರಿದೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,715ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,720 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹67,150 ಮತ್ತು ₹6,71,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,325 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,600 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹73,250 ಮತ್ತು ₹7,32,500 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹86.50, ಎಂಟು ಗ್ರಾಂ ₹692 ಮತ್ತು 10 ಗ್ರಾಂ ₹865ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,650 ಮತ್ತು 1 ಕಿಲೋಗ್ರಾಂಗೆ ₹86,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,30073,400
ಮುಂಬಯಿ67,150 73,250
ಬೆಂಗಳೂರು67,150 73,250
ಚೆನ್ನೈ67,25073,360

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ಕ್ರೈಂ

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Physical Abuse: ಸೈನಾಜ್‌ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ದಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

VISTARANEWS.COM


on

physical abuse gadag crime
Koo

ಗದಗ: ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿ, ಕೊರೊನಾ (corona virus) ಕಾಲದಲ್ಲಿ ಪತಿಯನ್ನೂ ಕಳೆದುಕೊಂಡಿರುವ ಮುಸ್ಲಿಂ ಮಹಿಳೆಗೆ ಕೆಲವು ಮುಸ್ಲಿಂ ಪುಂಡರು ಲೈಂಗಿಕ ಕಿರುಕುಳ (Physical Abuse) ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮಹಿಳೆಯ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೂ ದುಷ್ಕರ್ಮಿಗಳು ಕಿರುಕುಳ ನೀಡಿದ್ದು, ಹಲ್ಲೆ (Assault case) ನಡೆಸಿದ್ದಾರೆ. ದೂರು ನೀಡಿದರೂ ಪೊಲೀಸರು ಕ್ಯಾರೇ ಎಂದಿಲ್ಲ.

ಗದಗ ಬೆಟಗೇರಿಯ ಆಶ್ರಯ ಕಾಲೋನಿ ನಿವಾಸಿಯಾದ ಸೈನಜಾ ಬೇಗಂ ಎಂಬಾಕೆ ಕಿರುಕುಳಕ್ಕೆ ಒಳಗಾದ ಮಹಿಳೆ. ನಾಲ್ಕು ಜನ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಸೈನಜಾ ಬೇಗಂ, ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ಕೊರೊನಾದಿಂದ ಪತಿ ನಿಧನ ಹೊಂದಿದ್ದರು.

ಇತ್ತೀಚೆಗೆ ಲಿಯಾಕತ್, ಅಲ್ತಾಫ್, ಸೈಯದ್ ಸೇರಿದಂತೆ ಹಲವರು ಈಕೆಗೆ ಕಿರುಕುಳ ನೀಡುತ್ತಿದ್ದು, ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಸೈನಾಜ್‌ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. ನಿನ್ನೆ ರಾತ್ರಿ ಕೂಡ ತಾಯಿ ಸೈನಾಜ್, ಪುತ್ರ ಸದ್ದಾಂ ಮೇಲೆ ಆರೋಪಿ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ.

“ನಮಗೆ ಸೂಕ್ತವಾದ ರಕ್ಷಣೆ ನೀಡಬೇಕುʼʼ ಎಂದು ಮಹಿಳೆ ಒತ್ತಾಯಿಸಿದ್ದಾರೆ. ತಾಯಿ, ಮಕ್ಕಳ ‌ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಘಟನೆ ಕುರಿತು ಬೆಟಗೇರಿ ಪೊಲೀಸ್ ಠಾಣೆಗೆ ಲಿಯಾಕತ್, ಅಲ್ತಾಫ್ ಎಂಬವರ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ನೀಡಿದರೂ ಪೊಲೀಸರು ಮಾತ್ರ ಈ ಕುರಿತು ಕ್ಯಾರೇ ಎಂದಿಲ್ಲ. ಜೊತೆಗೆ ದೂರು ನೀಡಿದರೆ ನಿನ್ನ ಮತ್ತು ಮಕ್ಕಳನ್ನು ಒಳಗೆ ಹಾಕುತ್ತೇವೆ ಎಂದು ಪೊಲೀಸರು ಕೂಡ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರ ವಿರುದ್ಧವೂ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Murder Case: ಪ್ರಿಯತಮನ ಜೊತೆ ಶೋಕಿಗಾಗಿ ಮನೆ ಮಾಲಕಿಯ ಕೊಲೆ ಮಾಡಿದ ಯುವತಿ ಸೆರೆ

ಬೆಂಗಳೂರು: ಮಾಡಿಕೊಂಡ ಸಾಲ ತೀರಿಸಲು, ಶೋಕಿ ಜೀವನ ನಡೆಸಲು ಹಾಗೂ ಪ್ರಿಯತಮನ ಜೊತೆ ಮಜಾ ಉಡಾಯಿಸಲು ಯುವತಿಯೊಬ್ಬಳು ತಾನು ಬಾಡಿಗೆಗೆ ಇದ್ದ ಮನೆಯ ಮಾಲಕಿಯನ್ನೇ ಕೊಲೆ ಮಾಡಿದ್ದಾಳೆ. ಮಾಲಕಿ ಕೊರಳಲ್ಲಿ ಧರಿಸಿದ್ದ ಚಿನ್ನದ ಸರದ ಆಕರ್ಷಣೆ ಕೊಲೆಗೆ ಮೂಲವಾಗಿದೆ.

ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗೃಹಿಣಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೇ 10ರಂದು ಕೆಂಗೇರಿ ಠಾಣೆ ವ್ಯಾಪ್ತಿಯ ಕೋನಸಂದ್ರದಲ್ಲಿ ಘಟನೆ ನಡೆದಿತ್ತು. ದಿವ್ಯಾ ಕೊಲೆಯಾದ ಮಹಿಳೆ. ಮೋನಿಕಾ (24) ಬಂಧಿತ ಆರೋಪಿ. ಶೋಕಿ ಜೀವನಕ್ಕಾಗಿ ಮನೆ ಮಾಲಕಿಯನ್ನೆ ಹತ್ಯೆ ಮಾಡಿದ ದಿವ್ಯಾಳನ್ನು ಬಂಧಿಸಲಾಗಿದೆ.

ಮೋನಿಕಾ ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದಳು. ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನು ಗಂಡ ಎಂದು ಹೇಳಿ ಬಾಡಿಗೆಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಳೇ ವಾಸವಿದ್ದು, ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ.

ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳಲ್ಲದೆ, ಜೊತೆಗೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಿಕೊಡಲು ಹಣಕ್ಕಾಗಿ ಹುಡುಕಾಡುತ್ತಿದ್ದಳು. ಅಷ್ಟರಲ್ಲಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಆಕೆಯ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ನಡೆಸುತ್ತಿದ್ದರು. ದಿವ್ಯಾ ಅತ್ತೆ ಮಾವ ಸಹ ಬೆಳಗ್ಗೆ ಕೆಲಸಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ದಿವ್ಯಾ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನು ಗಮನಿಸಿ ಸ್ಕೆಚ್‌ ಹಾಕಿದ ಮೋನಿಕಾ, ಯಾರೂ ಇಲ್ಲದ ಸಮಯ ನೋಡಿ ಹಿಂಬದಿಯಿಂದ ಬಂದು ದಿವ್ಯಾಳ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ. ನಂತರ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರವನ್ನು ತೆಗೆದುಕೊಂಡು ಪರಾರಿಯಾಗಿದ್ದಳು. ಸದ್ಯ ಪ್ರಕರಣ ದಾಖಲಿಸಿ ಮೋನಿಕಾಳನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Continue Reading

ಕ್ರೈಂ

Murder Case: ʼನೇಹಾ ಹಿರೇಮಠ ಥರ ಕೊಲೆ ಮಾಡ್ತೀನಿ…ʼ ಎಂದವನು ಮಾಡಿಯೇ ಬಿಟ್ಟ! ಪಾಗಲ್‌ ಪ್ರೇಮಿಯಿಂದ ಮತ್ತೊಬ್ಬ ಯುವತಿಯ ಹತ್ಯೆ

Murder Case: ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ.

VISTARANEWS.COM


on

woman murder case
Koo

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚಾಕುವಿನಿಂದ ಇರಿದು (Stabbing) ಮತ್ತೊಬ್ಬ ಯುವತಿಯನ್ನು ಕೊಲೆ (Woman Murder Case) ಮಾಡಲಾಗಿದೆ. ಇದು ಕೂಡ ಪಾಗಲ್‌ ಭಗ್ನಪ್ರೇಮಿಯ ಕೃತ್ಯವಾಗಿದೆ. ನೇಹಾ ಹಿರೇಮಠ (Neha Hiremath murder) ಕೊಲೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಈ ಕೊಲೆಯೂ ಘಟಿಸಿದೆ. ಕೊಲೆಗೆ ಕೆಲ ದಿನಗಳ ಮುನ್ನ ಆರೋಪಿ, ಯುವತಿಗೆ “ನೇಹಾ ಹಿರೇಮಠ ಥರ ಮಾಡ್ತೀನಿ” ಎಂದು ಬೆದರಿಸಿದ್ದ ಎಂದು ಗೊತ್ತಾಗಿದೆ.

ಕೊಲೆ ಮಾಡಿದ ಆರೋಪಿ ಗಿರೀಶ್ ಸಾವಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಂಜಲಿ ಅಂಬಿಗೇರ (20) ಕೊಲೆಯಾಗಿರುವ ಯುವತಿ. ತನ್ನ ಪ್ರೀತಿಯನ್ನು‌ ನಿರಾಕರಿಸಿದ್ದಕ್ಕೆ ಕ್ರುದ್ಧನಾದ ಗಿರೀಶ್‌ ಈ ಕೃತ್ಯ ಎಸಗಿದ್ದಾನೆ ಎಂದು ಗೊತ್ತಾಗಿದೆ. ಬೆಳಗಿನ ಜಾವ 5.30ಕ್ಕೆ ಅಂಜಲಿ ಅವರು ವೀರಾಪೂರ ಓಣಿಯಲ್ಲಿರುವ ತಮ್ಮ ಮನೆಯಲ್ಲಿ ಮಲಗಿದ್ದಾಗ ದುಷ್ಕರ್ಮಿ ಮನೆಗೇ ನುಗ್ಗಿ ಚಾಕುವಿನಿಂದ ಇರಿದಿದ್ದಾನೆ. ಮನೆಯವರು ಪ್ರತಿಭಟಿಸಿದರೂ ಅವರ ಎದುರೇ ಇರಿದಿದ್ದಾನೆ.

ಈ ಸೈಕೋ ಪ್ರೇಮಿ, ಈ ಹಿಂದೆ ಮೈಸೂರಿಗೆ ಬಾ ಎಂದು ಅಂಜಲಿಗೆ ಧಮಕಿ ಹಾಕಿದ್ದ. “ನನ್ನ ಜೊತೆ ಬರದೆ ಹೋದರೆ ನಿರಂಜನ ಹಿರೇಮಠ ಮಗಳಿಗೆ ಹೇಗೆ ಆಗಿದೆ ಹಾಗೆ ಮಾಡ್ತೀನಿ” ಎಂದು ಧಮಕಿ ಹಾಕಿದ್ದ. ಗಿರೀಶ ಬೆದರಿಕೆ ಹಾಕಿರುವುದನ್ನು ಅಂಜಲಿಯ ಅಜ್ಜಿ ಗಂಗಮ್ಮ ಅವರು ಪೊಲೀಸರ ಗಮನಕ್ಕೂ ತಂದಿದ್ದರು. ಆದರೆ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ.

ಕೊಲೆಪಾತಕಿ ಗಿರೀಶ ಈ ಹಿಂದೆ ಹಲವು ಕಳ್ಳತನ ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿಯ ಯುವತಿ ನೇಹಾ ಹಿರೇಮಠ ಅವರನ್ನು ಪಾಗಲ್‌ ಪ್ರೇಮಿ ಫಯಾಜ್‌ ಕಾಲೇಜ್‌ ಕ್ಯಾಂಪಸ್‌ನಲ್ಲಿಯೇ ಕಳೆದ ತಿಂಗಳು ಕೊಚ್ಚಿ ಕೊಲೆ ಮಾಡಿದ್ದ. ಇದು ಲವ್‌ ಜಿಹಾದ್‌ ಪ್ರಕರಣ ಎಂದು ರಾಜಾದ್ಯಂತ ತೀವ್ರ ಪ್ರತಿಭಟನೆ, ರಾಜಕೀಯ ಕೆಸರೆರಚಾಟಗಳಿಗೆ ಕಾರಣವಾಗಿತ್ತು.

ಆಯ ತಪ್ಪಿ ಬಿದ್ದು ಕಾರ್ಮಿಕ ಸಾವು

ವಿಜಯಪುರ: ಎನ್‌ಟಿಪಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕರೊಬ್ಬರು ಆಯ ತಪ್ಪಿ 133 ಅಡಿ ಮೇಲಿಂದ ಕೆಳಗೆ ಬಿದ್ದು (Labor death) ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯ ಕೂಡಗಿ ಬಳಿಯಿರುವ ಎನ್‌ಟಿಪಿಸಿ ಘಟಕದಲ್ಲಿ ದುರಂತ ನಡೆದಿದೆ.

ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮೇಲಿಂದ ಬಿದ್ದು ಸಾವು ಸಂಭವಿಸಿದೆ. ಕಿಶನ್ ಕುಮಾರ್ ಭಾರಧ್ವಾಜ್ (33) ಮೃತಪಟ್ಟ ಕಾರ್ಮಿಕ. ಉತ್ತರ ಪ್ರದೇಶ ಮೂಲದ ಇವರು ಎನ್‌ಟಿಪಿಸಿ ಘಟಕದಲ್ಲಿ ಹೆಲ್ಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿನ್ನೆ ಸಂಜೆ ಘಟನೆ ನಡೆದಿದ್ದು, ವಿಜಯಪುರ ಖಾಸಗಿ ಆಸ್ಪತ್ರೆಗೆ ಕಾರ್ಮಿಕನ ಮೃತ ದೇಹ ರವಾನಿಸಲಾಗಿದೆ.

ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಲು ಆಗ್ರಹಿಸಿ ಕೂಡಗಿ ಎನ್‌ಟಿಪಿಸಿ ಘಟಕದ ಎದುರು ಬೆಳಿಗ್ಗೆಯಿಂದಲೇ ಕಾರ್ಮಿಕರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

ಬೆಂಕಿ ಆಕಸ್ಮಿಕದಲ್ಲಿ ಮನೆ ಭಸ್ಮ

ಕಲಬುರಗಿ: ವಿದ್ಯುತ್ ಶಾರ್ಟ್ ಸರ್ಕೀಟ್ (Short circuit) ಪರಿಣಾಮ ಕಲಬುರಗಿ ತಾಲ್ಲೂಕಿನ ಆಲಗೂಡ ಗ್ರಾಮದಲ್ಲಿ ಮನೆಯೊಂದು (Fire mishap) ಹೊತ್ತಿ ಉರಿದಿದೆ. ರೈತ ಸೈಬಣ್ಣ ಎನ್ನುವವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.

ಮನೆಯಲ್ಲಿದ್ದ 20 ಸಾವಿರ ನಗದು ಹಣ, 7-8 ತೊಲೆ ಚಿನ್ನಾಭರಣ, ದವಸಧಾನ್ಯ ಹಾಗೂ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮನೆ ಸರ್ವನಾಶವಾದ ಹಿನ್ನೆಲೆಯಲ್ಲಿ ಸೈಬಣ್ಣ ಕುಟುಂಬ ಅತಂತ್ರವಾಗಿದೆ. ಕಲಬುರಗಿ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಟಿ ಛಾಯಾ ಸಿಂಗ್ ಮನೆಯಲ್ಲಿ ಕಳ್ಳತನ, ಮನೆಕೆಲಸದಾಕೆ ಬಂಧನ

ಬೆಂಗಳೂರು: ಕನ್ನಡದ ‘ಅಮೃತಧಾರೆ’ ಧಾರಾವಾಹಿಯ ನಟಿ ಛಾಯಾ ಸಿಂಗ್ (Chaya Singh) ಅವರ ತಾಯಿ ಮನೆಯಲ್ಲಿ ಕಳ್ಳತನ ಮಾಡಿದ್ದ ಮನೆಕೆಲಸದಾಕೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾಳೆ. ಛಾಯಾಸಿಂಗ್ ಅವರ ತಾಯಿ ಚಮನಲತಾ ಅವರ ಬಸವೇಶ್ವರನಗರದ ನಿವಾಸದಲ್ಲಿ ಕಳ್ಳತನ ನಡೆದಿತ್ತು. 66 ಗ್ರಾಂ ಚಿನ್ನಾಭರಣ, 150 ಗ್ರಾಂ ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವಾಗಿದ್ದವು. ಇದೀಗ ಮನೆಯಲ್ಲಿ ಕಳ್ಳತನ ಮಾಡಿರುವುದು ಮನೆಕೆಲಸದಾಕೆ ಎಂಬುವುದು ತಿಳಿದುಬಂದಿದ್ದು, ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ನಟಿಯ ತಾಯಿ ಮನೆಯಲ್ಲಿ ಚಿನ್ನಾಭರಣ ಕಳವಾಗಿದ್ದ ಬಗ್ಗೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಳು. ಇದೀಗ ಆಕೆಯ ಕಳ್ಳತನ ಮಾಡಿರುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಛಾಯಾ ಸಿಂಗ್ ಕುಟುಂಬ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದೆ. ಛಾಯಾ ಸಿಂಗ್ ಪ್ರಸ್ತುತ ಕನ್ನಡದ ‘ಅಮೃತಧಾರೆ’ ಧಾರಾವಾಹಿಯಲ್ಲಿ ನಾಯಕಿ ಭೂಮಿಕಾ ಪಾತ್ರಧಾರಿಯಾಗಿ ನಟಿಸುತ್ತಿದ್ದಾರೆ. ಇನ್ನು ಶಿವರಾಜ್‌ಕುಮಾರ್ ನಟನೆಯ ‘ಭೈರತಿ ರಣಗಲ್ ಸಿನಿಮಾದಲ್ಲಿ ಛಾಯಾ ಸಿಂಗ್ ಅಭಿನಯಿಸಿದ್ದು, ಈ ವರ್ಷಾಂತ್ಯದಲ್ಲಿ ಸಿನಿಮಾ ತೆರೆ ಕಾಣಲಿದೆ.

ಇದನ್ನೂ ಓದಿ | Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

Continue Reading

ಉದ್ಯೋಗ

Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Job Alert: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18. ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(BMTC)ಯಲ್ಲಿ ಖಾಲಿ ಇರುವ ಬರೋಬ್ಬರಿ 2,500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Bmtc Conductor Recruitment 2024). ದ್ವಿತೀಯ ಪಿಯುಸಿ ಪಾಸ್‌ ಆದವರೂ ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಏಪ್ರಿಲ್‌ 19ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಮೇ 18 (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಿಕ್ಕುಳಿದ ವೃಂದದಲ್ಲಿ 2,286 ಮತ್ತು ಸ್ಥಳೀಯ ವೃಂದದಲ್ಲಿ 214 (ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳಿವೆ. ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್ ಆದರವರು ಅರ್ಜಿ ಸಲ್ಲಿಸಬಹುದು. 3 ವರ್ಷಗಳ ಡಿಪ್ಲೊಮಾ ತೇರ್ಗಡೆಯಾದವರು ಕೂಡ ಅರ್ಜಿ ಸಲ್ಲಿಸಲು ಅರ್ಹರು. ಜತೆಗೆ ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರುವುದು ಕಡ್ಡಾಯ. ಪುರುಷರ ಎತ್ತರ 160 ಸೆಂಟಿ ಮೀಟರ್‌, ಮಹಿಳೆಯರ ಎತ್ತರ 150 ಸೆಂಟಿ ಮೀಟರ್‌ ಇರಬೇಕು. ಗಮನಿಸಿ: ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿ ಪಾಸಾದವರು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳನ್ನು ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರ ಹಿಂದುಳಿದ ಪ್ರವರ್ಗಗಳಿಗೆ ಸೇರಿದ ಅಭ್ಯರ್ಥಿಗಳು 750 ರೂ. ಮತ್ತು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ವಿಶೇಷ ಚೇತನ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಸಾಮಾನ್ಯ ಸಾಮರ್ಥ್ಯ ಪರೀಕ್ಷೆ (Commong Aptitude Test), ದೇಹದಾರ್ಢ್ಯತೆ ಪರಿಶೀಲನೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸಾಮಾನ್ಯ ಸಾಮರ್ಥ್ಯ ಪರೀಕ್ಷೆ ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಯಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಪ್ರಶ್ನೆಗಳು ಇರಲಿದ್ದು, 200 ಅಂಕಗಳನ್ನು ಹೊಂದಿದೆ. ಗಮನಿಸಿ ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು, ಬರೆಯುವಾಗ ಎಚ್ಚರ ವಹಿಸಬೇಕು. ಈ ಪರೀಕ್ಷೆ ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಧಾಕಾರದ ವೆಬ್‌ಸೈಟ್‌ನಿಂದ ಡೌಲ್‌ಲೋಡ್‌ ಮಾಡಿಕೊಳ್ಳಬೇಕು. ಇದರ ದಿನಾಂಕವನ್ನು ಬಳಿಕ ತಿಳಿಸಲಾಗುವುದು. ಪರೀಕ್ಷೆ ಬರೆಯಲು ಪ್ರವೇಶ ಪತ್ರದೊಂದಿಗೆ ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ ಪೈಕಿ ಒಂದು ಮೂಲ ಗುರುತಿನ ಚೀಟಿ ಹಾಜರು ಪಡಿಸಬೇಕು.

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ವೃತ್ತಿ ತರಬೇತಿ ನೀಡಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ 9,100 ರೂ. ನೀಡಲಾಗುವುದು. ಈ ತರಬೇತಿಯನ್ನು ಸಮರ್ಪಕವಾಗಿ ಪೂರೈಸಿದವರನ್ನು ಎರಡು ವರ್ಷಗಳ ಅವಧಿಗೆ ಖಾಯಂ ಪೂರ್ವ ಪರೀಕ್ಷಾರ್ಥ ಸೇವೆಗೆ ನೇಮಕಗೊಳಿಸಲಾಗುತ್ತದೆ. ಇದನ್ನು ತೃಪ್ತಿಕರವಾಗಿ ಪೂರೈಸಿದವರನ್ನು ನೇಮಕಾತಿ ಪ್ರಾಧಿಕಾರದಿಂದ ಖಾಯಂಗೊಳಿಸಲಾಗುವುದು.

ಬಿಎಂಟಿಸಿ ಅಧಿಸೂಚನೆ-ಕೆಕೆ (ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಬಿಎಂಟಿಸಿ ಅಧಿಸೂಚನೆ-ಆರ್‌ಪಿಸಿ (ಎನ್‌ಎಚ್‌ಕೆ)ಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading
Advertisement
NewsClick case
ದೇಶ21 mins ago

NewsClick Case: ಚೀನಾ ಪರ ಪ್ರಚಾರ; ಬಂಧನದಲ್ಲಿದ್ದ ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ರಿಲೀಸ್‌

Drone Prathap Special Gift For sangeetha sringeri Birthday
ಕಿರುತೆರೆ32 mins ago

Drone Prathap: ದೀದಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬಕ್ಕೆ ಡ್ರೋನ್​ ಪ್ರತಾಪ್​ ಸ್ಪೆಷಲ್​ ಗಿಫ್ಟ್​!

gold rate today
ಚಿನ್ನದ ದರ33 mins ago

Gold Rate Today: ಬಂಗಾರದ ಬೆಲೆ ಏರಿಕೆ; ಮಾರುಕಟ್ಟೆ ದರ ಇಂದು ಹೀಗಿದೆ

Actor Diganth role in Crazystar Ravichandran The Judgement movie Kannada
ಸ್ಯಾಂಡಲ್ ವುಡ್56 mins ago

Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

US sanction
ದೇಶ56 mins ago

US sanction: ನಿರ್ಬಂಧ ಹೇರುವ ಎಚ್ಚರಿಕೆ ನೀಡಿದ್ದ ಅಮೆರಿಕಕ್ಕೆ ಭಾರತ ತಿರುಗೇಟು

Shehbaz Sharif
ವಿದೇಶ1 hour ago

Shehbaz Sharif: ಎಲ್ಲ ಸರ್ಕಾರಿ ಸಂಸ್ಥೆಗಳನ್ನು ಮಾರಲು ನಿರ್ಧರಿಸಿದೆ ದಿವಾಳಿ ಪಾಕಿಸ್ತಾನ!

Rakhi Sawant Rushed to Hospital After Heart-Related Ailment
ಬಾಲಿವುಡ್1 hour ago

Rakhi Sawant: ಆಸ್ಪತ್ರೆಗೆ ದಾಖಲಾದ ನಟಿ ರಾಖಿ ಸಾವಂತ್‌

physical abuse gadag crime
ಕ್ರೈಂ2 hours ago

Physical Abuse: ಹಿಂದೂ ಯುವಕನ ಪ್ರೀತಿಸಿ ಮದುವೆಯಾದವಳಿಗೆ ಲೈಂಗಿಕ ಕಿರುಕುಳ, ಕಣ್ಣೀರಿಟ್ಟ ಮುಸ್ಲಿಂ ಮಹಿಳೆ

Narendra Modi
ದೇಶ2 hours ago

Narendra Modi: “ನಾನು ಹಿಂದೂ-ಮುಸ್ಲಿಂ ಅಂತ ಬೇಧ ಮಾಡಿದರೆ…”: ಪ್ರಧಾನಿ ಮೋದಿ ಹೇಳಿದ್ದೇನು?

Shamita Shetty Undergoes Surgery For Endometriosis
ಸಿನಿಮಾ2 hours ago

Shamita Shetty: ವಿಚಿತ್ರ ಕಾಯಿಲೆಗೆ ತುತ್ತಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ: ಆಸ್ಪತ್ರೆಗೆ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ5 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ7 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ17 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202419 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 202423 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ23 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌