ಕರ್ನಾಟಕ
Cauvery water dispute : ತಮಿಳುನಾಡಿಗೆ ಕೂಡಲೇ ನೀರು ನಿಲ್ಲಿಸಿ: ಬಸವರಾಜ ಬೊಮ್ಮಾಯಿ ಗುಡುಗು
Cauvery water dispute : ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರನ್ನು 15 ದಿನಗಳ ವರೆಗೆ ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ನೀಡಿರುವ ಆದೇಶವನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರೋಧಿಸಿದ್ದಾರೆ. ಈ ಕೂಡಲೇ ತಮಿಳುನಾಡಿಗೆ ನೀರು ಬಿಡುವುದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.
ಬೆಂಗಳೂರು: ಕಾವೇರಿ ಜಲವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯೂಎಂಎ – Cauvery Water Management Authority – CWMA) ಆದೇಶಿಸಿರುವುದನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದು ಬಣ್ಣಿಸಿದ್ದಾರೆ. ಅಲ್ಲದೆ, ರಾಜ್ಯ ಸರ್ಕಾರಕ್ಕೂ ಚಾಟಿ ಬೀಸಿದ್ದು, ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ (Supreme Court) ಮೊರೆ ಹೋಗಲು ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಸವರಾಜ ಬೊಮ್ಮಾಯಿ ಅವರು, ಈಗ ನೀರು ಬಿಡುವ ಪರಿಸ್ಥಿತಿಯನ್ನು ತಂದುಕೊಂಡಿದ್ದು ರಾಜ್ಯ ಸರ್ಕಾರವೇ ಆಗಿದೆ. ಸುಪ್ರೀಂ ಕೋರ್ಟ್ ಆದೇಶಕ್ಕೆ ಮುಂಚೆ ನೀರು ಬಿಟ್ಟು ತನ್ನ ಕೈಯನ್ನು ತಾನೇ ಕಟ್ಟಿಕೊಂಡಿದೆ. ಈಗ ಕಾನೂನು ಹೋರಾಟ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಬೊಮ್ಮಾಯಿ ಟ್ವೀಟ್‌ನಲ್ಲೇನಿದೆ?
“ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (ಸಿಡಬ್ಲುಆರ್‌ಸಿ) ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಿಡಬ್ಲುಆರ್ ಸಿ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ಮಾಡಿರುವುದು ಇದೊಂದು ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ.
— Basavaraj S Bommai (@BSBommai) September 18, 2023
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್ ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ…
ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು. ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಸಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು” ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಆದೇಶದಲ್ಲೇನಿದೆ?
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯು ನೀಡಿದ್ದ ಆದೇಶವನ್ನು ಮುಂದುವರಿಸಿದೆ. ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶದಲ್ಲಿ ಉಲ್ಲೇಖಿಸಿದೆ. ಆದರೆ, 15 ದಿನಗಳ ಕಾಲ ನೀರು ಬಿಡುವ ಲೆಕ್ಕವನ್ನು ಸೆ. 13ರಿಂದ ಪರಿಗಣಿಸಲಾಗುತ್ತದೆ ಎಂದು ಹೇಳಿದೆ.
ಇದನ್ನೂ ಓದಿ: Cauvery water dispute : ಮತ್ತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬಿಡಲು CWMA ಆದೇಶ!
ರಾಜ್ಯ ಸರ್ಕಾರದ ನಿರ್ಣಯ ಏನು?
ನಮ್ಮ ಕಾವೇರಿ ನದಿಯಲ್ಲಿಯೇ ನೀರಿಲ್ಲ, ಹೀಗಾಗಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಎರಡು ದಿನಗಳ ಹಿಂದಷ್ಟೇ ನಡೆದಿದ್ದ ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀರ್ಮಾನಿಸಿದ್ದರು. ಆದರೆ, ಈಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ ನೀಡಿರುವುದನ್ನು ರಾಜ್ಯ ಸರ್ಕಾರ ಪಾಲನೆ ಮಾಡುತ್ತದೆಯೇ? ಅಥವಾ ಸೆಡ್ಡು ಹೊಡೆದು ನಿಲ್ಲುತ್ತದೆಯೇ ಎಂಬ ಕುತೂಹಲ ಮೂಡಿದೆ. ಅಲ್ಲದೆ, ಮಂಡ್ಯ ಭಾಗದ ರೈತರು, ವಿರೋಧ ಪಕ್ಷಗಳ ನಾಯಕರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಈಗಾಗಲೇ ಬೀದಿಗೆ ಬಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಂದಿನ ನಡೆ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ.
ಕರ್ನಾಟಕ
Cauvery Protest : ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ; ಕಾವೇರಿ ನೀರಿಗಾಗಿ ವಿದ್ಯಾರ್ಥಿಗಳು ಸಾಥ್
ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಕೊಟ್ಟ ತೀರ್ಪು ಕರ್ನಾಟಕದ ಜನರಿಗೆ ಬರೆ ಎಳೆದಂತಾಗಿದೆ . ಹೀಗಾಗಿ ಮಂಡ್ಯ ಸೇರಿದಂತೆ ಹಲವೆಡೆ ಪ್ರತಿಭಟನೆ ಜೋರಾಗಿದೆ.
ಕಾವೇರಿ ನೀರು ಹಂಚಿಕೆ ಖಂಡಿಸಿ ಸೆ.23ರಂದು ಮಂಡ್ಯ ಬಂದ್‌ಗೆ (Cauvery Protest) ಕರೆ ನೀಡಲಾಗಿದೆ. ಇದರ ಜತೆಗೆ ಬೆಂಗಳೂರು ಗಡಿಭಾಗ ಹಾಗೂ ಮದ್ದೂರಿನಲ್ಲೂ ಬಂದ್‌ಗೆ ಕರೆ ಕೊಡಲಾಗಿದೆ. ಬಂದ್‌ಗೆ ವಿವಿಧ ಸಂಘಟನೆಗಳಿಂದ ಸಾಥ್ ಸಿಕ್ಕಿದ್ಯಾ? ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ.
ಕರ್ನಾಟಕ
CM Siddaramaiah : ಶಾಸಕ, ಸಂಸದರಿಗೆ Good News; ಇನ್ನು ಮುಂದೆ ಪ್ರತಿ ಶನಿವಾರ ಸಿಎಂ ಸಿದ್ದರಾಮಯ್ಯ ನಿಮ್ಮನ್ನು ಭೇಟಿಯಾಗ್ತಾರೆ!
CM Siddaramaiah : ಮುಖ್ಯಮಂತ್ರಿಗಳಾದವರು ಶಾಸಕರ ಜತೆ ನಿರಂತರ ಸಂಪರ್ಕದಲ್ಲಿರಬೇಕು ಎನ್ನುವುದನ್ನು ಅರಿತಿರುವ ಸಿದ್ದರಾಮಯ್ಯ ಅದಕ್ಕಾಗಿ ವಾರದಲ್ಲೊಂದು ದಿನ ಫಿಕ್ಸ್ ಮಾಡಿದ್ದಾರೆ. ಆಡಳಿತಾತ್ಮಕವಾಗಿಯೂ ಇದು ಉತ್ತಮ ನಿರ್ಧಾರ ಎಂದು ತರ್ಕಿಸಲಾಗಿದೆ.
ಬೆಂಗಳೂರು: ಇನ್ನು ಮುಂದೆ ಪ್ರತಿ ಶನಿವಾರ ರಾಜ್ಯದ ಯಾವುದೇ ಸಂಸದರು, ಶಾಸಕರು (Every saturday meet with MLAs and MPs) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಅವರ ಗೃಹ ಕಚೇರಿ ಕೃಷ್ಣಾದಲ್ಲಿ (Home office Krishna) ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇದು ಸೆಪ್ಟೆಂಬರ್ 23ರಿಂದಲೇ ಜಾರಿಗೆ ಬಂದಿದೆ.
ಮುಖ್ಯಮಂತ್ರಿಗಳು ಇನ್ನು ಮುಂದೆ ಪ್ರತಿ ಶನಿವಾರ ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಸಂಸದರು, ರಾಜ್ಯದ ಎಲ್ಲ ವಿಧಾನಸಭೆ ಸದಸ್ಯರು ಮತ್ತು ವಿಧಾನಪರಿಷತ್ ಸದಸ್ಯರ ಭೇಟಿಗೆ ಲಭ್ಯವಿರುತ್ತಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಮತ್ತು ಅನುದಾನಗಳ ಬಗ್ಗೆ ಚರ್ಚೆ ಮಾಡಬಹುದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೆ. ಚಿರಂಜೀವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದು ಪಕ್ಷಾತೀತವಾಗಿ ನಡೆಯುವ ಕಾರ್ಯಕ್ರಮವಿದ್ದು, ಯಾವ ಪಕ್ಷದ ಶಾಸಕರು, ಸಂಸದರು ಬೇಕಾದರೂ ಮುಕ್ತವಾಗಿ ಬಂದು ತಮ್ಮ ಅಹವಾಲುಗಳ ಬಗ್ಗೆ ಮಾತುಕತೆ ನಡೆಸಬಹುದಾಗಿದೆ.
ಭೇಟಿಗೆ ಮೊದಲು ಚೆಕ್ ಮಾಡಿಕೊಳ್ಳಿ
ಇದು ಮುಕ್ತವಾದ ಭೇಟಿಯೇ ಆಗಿದ್ದರೂ ಮುಖ್ಯಮಂತ್ರಿಗಳ ಲಭ್ಯತೆಯ ಆಧಾರದಲ್ಲಿ ನಡೆಯುತ್ತದೆ. ಮುಖ್ಯಮಂತ್ರಿ ತೀರಾ ಅನಿವಾರ್ಯವಾದ ಸಂದರ್ಭ ಹೊರತುಪಡಿಸಿ ಪ್ರತಿ ಶನಿವಾರ ಭೇಟಿಗೆ ಲಭ್ಯರಿರುತ್ತಾರೆ. ಅದರೆ, ಮೊದಲೇ ಅವರ ಇರುವಿಕೆಯನ್ನು ಖಾತರಿ ಮಾಡಿಕೊಂಡು ಬರಬಹುದು ಎಂದು ತಿಳಿಸಲಾಗಿದೆ.
ಎಲ್ಲರೂ ಒಂದೇ ಬಾರಿಗೆ ಬಂದು ಭೇಟಿಯಾಗಲು ಒತ್ತಡ ಸೃಷ್ಟಿಸುವುದಕ್ಕಿಂತ ಒಂದು ದಿನ ಎಷ್ಟು ಜನರು ಭೇಟಿಯಾಗಬಹುದು ಎಂಬುದನ್ನು ಪರಿಗಣಿಸಿ ಒಂದು ದಿನದಲ್ಲಿ ಎಷ್ಟು ಮಂದಿಗೆ ಅವಕಾಶ ನೀಡಬಹುದೋ ಅಷ್ಟು ಜನರು ಮಾತ್ರ ಬಂದರೆ ಒಳ್ಳೆಯದು ಎಂದು ತಿಳಿಸಲಾಗಿದೆ.
ಶಾಕಸರು ಮತ್ತು ಸಂಸದರು ಮುಂದಿನ ಶನಿವಾರದ ಭೇಟಿಗಾಗಿ ಮೊದಲೇ ಬುಕ್ ಮಾಡಿಕೊಂಡರೆ ಸಮಯಾವಕಾಶದ ಜತೆಗೆ ಸಮಯವನ್ನೂ ನಿಗದಿಪಡಿಸಲು ಅವಕಾಶವಾಗುತ್ತದೆ ಎನ್ನಲಾಗಿದೆ. ವಿಶೇಷಾಧಿಕಾರಿಗಳು ಈ ಎಲ್ಲ ಅಂಶಗಳನ್ನು ಪರಿಗಣಿಸಿ ಭೇಟಿಗೆ ಅವಕಾಶ ಕಲ್ಪಿಸಲಿದ್ದಾರೆ.
ಶಾಸಕರ ಭೇಟಿಗೆ ಅವಕಾಶ ಕೇಳಿದ್ದ ರಾಯರೆಡ್ಡಿ
ಇತ್ತೀಚಿಗೆ ಶಾಸಕ ಬಸವರಾಜ ರಾಯರೆಡ್ಡಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ವಿವಿಧ ಸಚಿವರು ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಸಿಎಂಗೆ ಪತ್ರ ಬರೆದು ಭೇಟಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ, ಶಾಸಕರ ಭೇಟಿಗೆ ಅವಕಾಶ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿಗಳು ಶಾಸಕರ ಜತೆಗೆ ಮುಕ್ತವಾಗಿ ಮಾತನಾಡಲು ಅವಕಾಶ ಸಿಗುವುದರಿಂದ ಹಲವಾರು ಸಮಸ್ಯೆಗಳು ಬಗೆಹರಿಯುತ್ತವೆ ಎನ್ನಲಾಗಿದೆ. ರಾಜಕೀಯವಾದುದು, ಇತರ ಸಾಮಾಜಿಕ ವಿಚಾರಗಳಿಗೂ ಇದು ಅನುಕೂಲ ಎನ್ನಲಾಗಿದೆ. ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಿಎಂ ಜತೆ ಮಾತನಾಡಲು ಅವಕಾಶವೇ ಸಿಗುತ್ತಿಲ್ಲ, ಅನುದಾನ ಸಿಗುತ್ತಿಲ್ಲ ಎಂಬ ಕಾರಣ ನೀಡಿಯೇ 17 ಶಾಸಕರು ಪಕ್ಷ ಬಿಟ್ಟು ಹೋಗಿದ್ದರು. ವ್ಯವಸ್ಥೆಯಲ್ಲಿ ಶಾಸಕರ ಜತೆ ಸಂವಹನ ಅತ್ಯಂತ ಮುಖ್ಯ ಎಂಬುದನ್ನು ಮನಗಂಡು ಸಿದ್ದರಾಮಯ್ಯ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: CM Siddaramaiah: ಬರಿಗಾಲಲ್ಲಿ ಬರುವವರನ್ನು ಕಾರಲ್ಲಿ ಓಡಾಡೋರು ಗೌರವಿಸಬೇಕು: ಅಧಿಕಾರಿಗಳಿಗೆ ಸಿಎಂ ಸೂಚನೆ
ಸಿದ್ದರಾಮಯ್ಯ ಸಭೆಗಳೆಂದರೆ ಅತ್ಯಂತ ಗಹನ
ಅದರ ಜತೆಗೆ ಆಡಳಿತಾತ್ಮಕ ವಿಷಯದಲ್ಲಿ ಸಾಕಷ್ಟು ಪರಿಣತಿಯನ್ನು ಹೊಂದಿರುವ ಸಿದ್ದರಾಮಯ್ಯ ಅವರು ಯಾವುದೇ ಸಭೆಯನ್ನಾದರೂ ಪರಿಪೂರ್ಣವಾಗಿ ನಡೆಯುತ್ತದೆ. ಅವರು ನಡೆಸುವ ಕೆಡಿಪಿ ಸಭೆಗಳು, ಅಧಿಕಾರಿಗಳ ಸಭೆಗಳೂ ಅತ್ಯಂತ ಗಹನವಾಗಿರುವುದು ಇದೇ ಕಾರಣಕ್ಕಾಗಿ. ಕೆಲವೊಮ್ಮೆ ಅವರು ಮಧ್ಯಾಹ್ನದ ಊಟವನ್ನೂ ಟೇಬಲ್‌ಗೇ ತರಿಸಿಕೊಂಡು ನಿರಂತರ ಏಳೆಂಟು ಗಂಟೆ ಸಭೆ ನಡೆಸಿದ್ದೂ ಇದೆ. ಹಲವಾರು ವಿಚಾರಗಳ ತೀರ್ಮಾನಗಳು ಅಲ್ಲೇ ನಡೆಯುತ್ತವೆ. ಏನು ಮಾಡಬೇಕು, ಏನು ಮಾಡಬಾರದು ಎಂಬ ಸ್ಪಷ್ಟ ಸೂಚನೆಯನ್ನು ಅಲ್ಲೇ ನೀಡಲಾಗುತ್ತದೆ.
ಕರ್ನಾಟಕ
KSOU Exam: ಪ್ರಶ್ನೆಪತ್ರಿಕೆ ಮಾರಾಟವಾದ ಕಂಪ್ಯೂಟರ್ ಇನ್ ಬ್ಯುಸಿನೆಸ್ ಮರು ಪರೀಕ್ಷೆಗೆ ನಿರ್ಧಾರ, ಯಾವಾಗ ReExam?
KSOU Exam : ಬಿಕಾಂನ ಕಂಪ್ಯೂಟರ್ ಇನ್ ಬ್ಯುಸಿನೆಸ್ ಪ್ರಶ್ನೆ ಪತ್ರಿಕೆ ಪರೀಕ್ಷೆ ಮುನ್ನಾದಿನ ಲೀಕ್ ಆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಹಾಗಿದ್ದರೆ ಪರೀಕ್ಷೆ ಯಾವಾಗ?
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (Karnataka State Open University) ಬಿಕಾಂ ಕಂಪ್ಯೂಟರ್ ಇನ್ ಬ್ಯುಸಿನೆಸ್ (Computer in Business) ಪರೀಕ್ಷೆಯನ್ನು ಮತ್ತೆ ನಡೆಸಲು (Re examination) ನಿರ್ಧರಿಸಿದೆ. ಸೆಪ್ಟೆಂಬರ್ 21ರಂದು ನಡೆದಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆ (KSOU Exam) ಒಂದು ದಿನ ಮೊದಲೇ ವಾಟ್ಸ್ ಆಪ್‌ನಲ್ಲಿ ಹರಿದಾಡಿತ್ತು. ಅದನ್ನು ಎರಡು ಸಾವಿರ ರೂ.ಗಳಿಗೆ ಮಾರಾಟ (Question paper sold) ಮಾಡಲಾಗಿದೆ ಎಂಬ ಬಗ್ಗೆ ದೂರು ದಾಖಲಾಗಿತ್ತು. ಇದೀಗ ವಿವಿಯು ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಮರು ಪರೀಕ್ಷೆ ದಿನಾಂಕವನ್ನು ಸದ್ಯವೇ ಪ್ರಕಟಿಸಲಾಗಿದೆ.
ಪರೀಕ್ಷೆಗೆ ಒಂದು ದಿನ ಮೊದಲೇ ವಿಶ್ವವಿದ್ಯಾಲಯದ ಬಿಕಾಂನ ಕಂಪ್ಯೂಟರ್ ಇನ್ ಬಿಸಿನೆಸ್ ವಿಷಯದ ಪ್ರಶ್ನೆ ಪತ್ರಿಕೆ ಕೆಲವರ ಕೈಯಲ್ಲಿತ್ತು. ಕೆಎಸ್‌ಓಯು ಮಂಗಳೂರು (KSOU Mangalore Center) ಕೇಂದ್ರದ ಸಿಬ್ಬಂದಿ 2000 ರೂ.ಗೆ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್ ಮೂಲಕ ಆರೋಪಿಗಳಿಗೆ ಕಳುಹಿಸಿರುವ ಶಂಕೆ ವ್ಯಕ್ತವಾಗಿತ್ತು. ಪರೀಕ್ಷೆ ದಿನ ನೀಡಿದ ಪ್ರಶ್ನೆ ಪತ್ರಿಕೆ ಹಾಗೂ ಮಾರಾಟವಾದ ಪ್ರಶ್ನೆ ಪತ್ರಿಕೆ ಎರಡು ಒಂದೇ ಆಗಿದ್ದವು. ಈ ಬಗ್ಗೆ ಚಂದು.ಹೆಚ್.ಎಸ್. ಎಂಬ ವಿದ್ಯಾರ್ಥಿ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಪ್ರಶ್ನೆ ಪತ್ರಿಕೆ ಮಾರಾಟ ಪ್ರಕರಣದಲ್ಲಿ ಜಯಲಕ್ಷ್ಮಿಪುರಂ ಪೊಲೀಸರು ನವೀನ್ ಮತ್ತು ಮುರಳೀಧರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಮಾರಾಟ
ವಿದ್ಯಾರ್ಥಿಗಳು ಭಾರಿ ಕಷ್ಟಪಟ್ಟು ಓದಿರುತ್ತಾರೆ. ಸಿಬ್ಬಂದಿಗಳು ಈ ರೀತಿ ಮೋಸದಾಟ ಆಡುವುದರಿಂದ ಅವರಿಗೆ ಅನ್ಯಾಯವಾಗುತ್ತದೆ ಎಂಬ ಮಾತು ಕೇಳಿಬಂದಿದೆ. ಅದಕ್ಕಿಂತಲೂ ಹೆಚ್ಚಾಗಿ ಮುಕ್ತ ವಿವಿಯಲ್ಲಿ ಓದುವ ಹೆಚ್ಚಿನವರು ಬೇರೆ ಬೇರೆ ಉದ್ಯೋಗಗಳಲ್ಲಿ ಇದ್ದಾರೆ. ಅವರು ತಮ್ಮ ಕೆಲಸ ಕಾರ್ಯಗಳ ನಡುವೆ ಕಷ್ಟಪಟ್ಟು ಸಮಯ ಹೊಂದಾಣಿಕೆ ಮಾಡಿಕೊಂಡು ಓದುತ್ತಿರುತ್ತಾರೆ. ಹೆಚ್ಚಿನವರಿಗೆ ಒಂದು ದಿನ ಪರೀಕ್ಷೆಗೆ ಅಟೆಂಡ್ ಆಗಲೂ ಆಗದಷ್ಟು ಕೆಲಸದ ಒತ್ತಡ ಇರುವುದಿಲ್ಲ, ಹೆಚ್ಚಿನವರಿಗೆ ರಜೆಯೂ ಸಿಗುವುದಿಲ್ಲ. ಇಂಥವರಿಗೆ ಮರು ಪರೀಕ್ಷೆ ಕೂಡಾ ಒಂದು ದೊಡ್ಡ ಹೊರೆಯೇ. ಹೀಗಾಗಿ ವಿಶ್ವವಿದ್ಯಾಲಯ ಈ ರೀತಿ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಯಬೇಕು, ಈ ಮೂಲಕ ವಿದ್ಯಾರ್ಥಿಗಳಿಗೆ ಆಗುವ ತೊಂದರೆಯನ್ನು ತಡೆಯುವುದು ಮಾತ್ರವಲ್ಲ, ವಿವಿಯ ಘನತೆಯನ್ನು ಉಳಿಸಬೇಕು ಎಂದು ಒತ್ತಾಯಿಸಲಾಗಿದೆ.
ಇದನ್ನೂ ಓದಿ: KSOU Scam: ಕೆಎಸ್‌ಒಯು ಹಗರಣದ ತನಿಖೆಗೆ ಸಿಬಿಐ ಎಂಟ್ರಿ
ಕರ್ನಾಟಕ
Gold Rate Today: ಏರಿದ ಬಂಗಾರದ ದರ, ರಾಜ್ಯದಲ್ಲಿ ಇಂದು ಬೆಲೆ ಹೀಗಿದೆ
22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.
ಬೆಂಗಳೂರು: 22 ಕ್ಯಾರಟ್ ಮತ್ತು 24 ಕ್ಯಾರಟ್ ಚಿನ್ನದ ಬೆಲೆ (Gold Rate Today) ಶನಿವಾರ ಬೆಂಗಳೂರಿನಲ್ಲಿ ಕ್ರಮವಾಗಿ ₹10 ಹಾಗೂ ₹11 ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ನೀವಿಂದು ಒಂದು ಗ್ರಾಂ 22 ಕ್ಯಾರಟ್ ಚಿನ್ನವನ್ನು ₹5,495ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹43,960 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್ ಚಿನ್ನವನ್ನು ₹ 54,950 ಮತ್ತು ₹ 5,49,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್ ಚಿನ್ನದ ಬೆಲೆ ₹5,995 ಆಗಿದ್ದರೆ, ಎಂಟು ಗ್ರಾಂ ಬೆಲೆ ₹47,960 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹ 59,950 ಮತ್ತು ₹ 5,99,500 ವೆಚ್ಚವಾಗಲಿದೆ.
ಒಂದು ಗ್ರಾಂ ಬೆಳ್ಳಿಯ ಬೆಲೆ ₹ 79.30, ಎಂಟು ಗ್ರಾಂ ₹ 634.40 ಮತ್ತು 10 ಗ್ರಾಂ ₹ 793ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹ 7,930 ಮತ್ತು 1 ಕಿಲೋಗ್ರಾಂಗೆ ₹ 79,300 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.
ನಗರ | 22 ಕ್ಯಾರಟ್ | 24 ಕ್ಯಾರಟ್ |
ದಿಲ್ಲಿ | 54,990 | 59,930 |
ಮುಂಬಯಿ | 54,950 | 59,950 |
ಬೆಂಗಳೂರು | 54,950 | 59,950 |
ಚೆನ್ನೈ | 55,210 | 60,320 |
ಚಿನ್ನದ ದರದ ಮೇಲೆ ಪರಿಣಾಮ ಬೀರುವ ಕೆಲವು ಅಂಶಗಳು ಇಲ್ಲಿವೆ:
ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.
ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.
ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.
-
ಪ್ರಮುಖ ಸುದ್ದಿ17 hours ago
Ipsos poll Survey: ಟ್ರುಡೋ ಜನಪ್ರಿಯತೆ ಕುಸಿತ, ಕೆನಡಾ ಪಿಎಂ ಆಗಲು ಪ್ರತಿಪಕ್ಷ ನಾಯಕನೇ ಬೆಸ್ಟ್!
-
ಉಡುಪಿ23 hours ago
FB Profile Deleted: 20ಕ್ಕೂ ಅಧಿಕ ಹಿಂದು ಜಾಗರಣ ವೇದಿಕೆ ನಾಯಕರ ಫೇಸ್ ಬುಕ್ ಪ್ರೊಫೈಲ್ ಏಕಕಾಲದಲ್ಲಿ ಡಿಲೀಟ್!
-
ಸುವಚನ7 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಗ್ಯಾಜೆಟ್ಸ್20 hours ago
YouTube: ಯುಟ್ಯೂಬ್ ವಿಡಿಯೋ ಮಾಡುವುದು ಇನ್ನೂ ಸುಲಭ! ಹೊಸ ಎಡಿಟಿಂಗ್ ಆ್ಯಪ್ ಲಾಂಚ್
-
ದೇಶ19 hours ago
Prisoners Escape: ವ್ಯಾನ್ನಿಂದ ಜಿಗಿದು ಇಬ್ಬರು ಕೈದಿಗಳು ಪರಾರಿ; ಕತ್ತೆ ಕಾಯುತ್ತಿದ್ದ ಪೊಲೀಸರು!
-
ಕ್ರೈಂ19 hours ago
Assault Case : ಕೈ ತಾಗಿದ್ದಕ್ಕೆ ಯುವಕರ ಮಧ್ಯೆ ಕಿರಿಕ್; ಖಾನಾಪುರದಲ್ಲಿ ಬಿಗುವಿನ ವಾತಾವರಣ
-
ಕರ್ನಾಟಕ13 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಉಡುಪಿ16 hours ago
Dr HS Shetty : ಯಶಸ್ವೀ ಉದ್ಯಮಿ ಡಾ. ಎಚ್.ಎಸ್ ಶೆಟ್ಟಿ ಅವರಿಗೆ ಹುಟ್ಟೂರ ಸನ್ಮಾನ; ಸಾಧನೆ, ಸೇವೆಯ ವಿಸ್ತಾರಕ್ಕೆ ನಮಿಸಿದ ಜನ