Citizenship Amendment Act: ಕೋಮುಭಾವನೆ ಕದಡಲು ಮುಂದಾಯ್ತೇ ಕಾಂಗ್ರೆಸ್?‌ ಅಶೋಕ್‌ ಹಾಗೆ ಹೇಳಿದ್ಯಾಕೆ? - Vistara News

ರಾಜಕೀಯ

Citizenship Amendment Act: ಕೋಮುಭಾವನೆ ಕದಡಲು ಮುಂದಾಯ್ತೇ ಕಾಂಗ್ರೆಸ್?‌ ಅಶೋಕ್‌ ಹಾಗೆ ಹೇಳಿದ್ಯಾಕೆ?

Citizenship Amendment Act: ಮಾನವೀಯತೆ ಇಲ್ಲದ ಕಾಂಗ್ರೆಸ್ಸಿಗರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದಾರೆ. ಪೌರತ್ವ ಕೊಡಬೇಕೇ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದು ಆರ್.‌ ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Citizenship Amendment Act Congress trying to disturb communal passions says R Ashok
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (Citizenship Amendment Act) ಜಾರಿಗೆ ತಂದಿದೆ. ಆದರೆ, ಮಾನವೀಯತೆ ಇಲ್ಲದ ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ಪೌರತ್ವ ಕೊಡಬೇಕೆ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ ಎನ್ನುವ ಸಾಮಾನ್ಯ ಜ್ಞಾನವೂ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್‌ (R Ashok) ಕಿಡಿಕಾರಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ಕಾಂಗ್ರೆಸ್ ನಾಯಕರು ಕೋಮುಭಾವನೆ ಕೆರಳಿಸಲು ಸಿಎಎ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿರುವ ಅಲ್ಪಸಂಖ್ಯಾತರಿಗೂ ಈ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಬೇರೆ ದೇಶಗಳಿಂದ ಬಂದ ಅಲ್ಪಸಂಖ್ಯಾತರು ಪಾದಚಾರಿ ಮಾರ್ಗದಲ್ಲಿ ಬದುಕುತ್ತಿದ್ದು, ಆಶ್ರಯ ಕಳೆದುಕೊಂಡಿದ್ದಾರೆ. ಮಾನವೀಯತೆ ಇಲ್ಲದ ಕಾಂಗ್ರೆಸ್ಸಿಗರು ಕಾಮಾಲೆ ಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದಾರೆ. ಪೌರತ್ವ ಕೊಡಬೇಕೇ ಬೇಡವೇ ಎನ್ನುವುದನ್ನು ಕೇಂದ್ರ ಸರ್ಕಾರ ನಿರ್ಧರಿಸುತ್ತದೆ. ಈ ಸಾಮಾನ್ಯ ಜ್ಞಾನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗಿಲ್ಲ ಎಂದರು.

ಬೆಂಗಳೂರು, ಮಂಡ್ಯದಲ್ಲಿ ನೀರಿನ ಕೊರತೆಗೆ ಕಾಂಗ್ರೆಸ್ಸೇ ನೇರ ಕಾರಣ

ರಾಜ್ಯದಲ್ಲಿ ಜನರಿಗೆ ಕುಡಿಯಲು ನೀರಿಲ್ಲ. ಈ ಸಣ್ಣ ಸಮಸ್ಯೆಯನ್ನು ಪರಿಹರಿಸಲು ಕೂಡ ಸರ್ಕಾರಕ್ಕೆ ಯೋಗ್ಯತೆಯಿಲ್ಲ. ಕಾವೇರಿ ಟ್ರಿಬ್ಯುನಲ್‍ನಲ್ಲಿ ಸರಿಯಾಗಿ ವಾದಿಸಿದ್ದರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ. ತಮಿಳುನಾಡಿನ ಆತ್ಮೀಯ ಸ್ನೇಹಿತರಾದ ಮುಖ್ಯಮಂತ್ರಿ ಸ್ಟಾಲಿನ್ ಅವರ ಮನವೊಲಿಕೆಗಾಗಿ ಕಾವೇರಿಯನ್ನು ನೀಡಿದ್ದಾರೆ. ಬೆಂಗಳೂರು, ಮಂಡ್ಯದಲ್ಲಿ ನೀರಿನ ಕೊರತೆಗೆ ಕಾಂಗ್ರೆಸ್ಸೇ ನೇರ ಕಾರಣ. ಜನರು ವಲಸೆ ಹೋಗಲು, ಬೀದಿಗೆ ಬರಲು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿಗೆ ಅಪಕೀರ್ತಿ ತರಲು ಕಾಂಗ್ರೆಸ್ ಸರ್ಕಾರವೇ ಕಾರಣ. ಲೋಕಸಭಾ ಚುನಾವಣೆಯಲ್ಲಿ ಜನರು ಈ ದುರಾಡಳಿತಕ್ಕೆ ತಿಲಾಂಜಲಿ ನೀಡಬೇಕು ಎಂದು ಆರ್‌. ಅಶೋಕ್‌ ಮನವಿ ಮಾಡಿದರು.

ಮೋದಿ ಭಾವಚಿತ್ರವನ್ನೂ ಹಾಕಿ

ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದು ಎಂಬಂತೆ ಬಿಂಬಿಸಿಕೊಳ್ಳುವಷ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಗೆಟ್ಟಿದ್ದಾರೆ. ಕೇಂದ್ರದಿಂದ ಅನುದಾನ ಸಿಗುವ ಯೋಜನೆಗಳ ಜಾಹೀರಾತಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನೂ ಹಾಕಬೇಕು ಎಂದು ಆರ್‌. ಅಶೋಕ್‌ ಆಗ್ರಹಿಸಿದರು.

ಹೊಸ ಮುಖಗಳಿಗೂ ಅವಕಾಶ

ಎರಡು ಬಾರಿ ಕೇಂದ್ರದ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದು, ಟಿಕೆಟ್ ನಿರ್ಧಾರ ಅಂತಿಮಗೊಳ್ಳುತ್ತಿದೆ. ಹೊಸ ಮುಖಗಳಿಗೂ ಅವಕಾಶ ನೀಡಲಾಗಿದೆ. ಹಳೇ ಬೇರು ಹೊಸ ಚಿಗುರು ಎನ್ನುವುದು ಬಿಜೆಪಿಯ ಧರ್ಮ. ಟಿಕೆಟ್ ಸಿಗುವುದಿಲ್ಲವೆಂದು ಯಾರೂ ಊಹೆ ಮಾಡಿಕೊಂಡು ಮಾತನಾಡುವುದು ಬೇಡ. 28ಕ್ಕೆ 28 ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಟಿಕೆಟ್ ನೀಡಲಾಗುತ್ತಿದೆ. ಹೃದಯ ರೋಗ ತಜ್ಞರಾದ ಡಾ.ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಪಕ್ಷದ ಮಟ್ಟದಲ್ಲೂ ಚರ್ಚೆಯಾಗಿದೆ ಎಂದು ಆರ್‌. ಅಶೋಕ್‌ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ಮಂಡ್ಯ ಜೆಡಿಎಸ್‌ಗೆ ಎಂದ ಎಚ್‌ಡಿಕೆ; ಸುಮಲತಾ ಮುಂದಿನ ನಡೆ ಏನು?

ಮ್ಯಾಚ್ ಆಡಿದರೆ ಗೆಲ್ಲಲು ಸಾಧ್ಯವೇ

ಬಿಜೆಪಿಯಲ್ಲಿ ಹೆಚ್ಚು ಪ್ರಜಾಪ್ರಭುತ್ವವಿದ್ದು, ಇಲ್ಲಿ ಯಾರೂ ಬಂಡಾಯವೇಳುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯ ಮುಂದೆ ಯಾವುದೂ ನಡೆಯುವುದಿಲ್ಲ. ಮ್ಯಾಚ್ ಆಡುವ ಮುನ್ನ ಕ್ಯಾಪ್ಟನ್ ಇರಬೇಕು. ಯುದ್ಧ ಮಾಡಲು ಕೂಡ ಸೇನಾಧಿಪತಿ ಬೇಕು. ಅದು ಯಾರೆಂದು ನಿರ್ಧರಿಸುವ ಯೋಗ್ಯತೆ ಕಾಂಗ್ರೆಸ್‍ಗಿಲ್ಲ. ಇಂಡಿ ಒಕ್ಕೂಟದಲ್ಲಿ ಈಗ ದೊಡ್ಡ ನಾಯಕರಾರೂ ಇಲ್ಲ. ಎಕ್ಸ್ಟ್ರಾ ಪ್ಲೇಯರ್‌ಗಳು ಮಾತ್ರವಿದ್ದು, ಅವರನ್ನಿಟ್ಟುಕೊಂಡು ಮ್ಯಾಚ್ ಆಡಿದರೆ ಗೆಲ್ಲಲು ಸಾಧ್ಯವೇ ಎಂಬುದನ್ನು ಯೋಚಿಸಲಿ ಎಂದು ಆರ್‌. ಅಶೋಕ್‌ ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ಸಿಎಂಗೆ ಸಲ್ಲಿಸಿದ ರೈತರ ಮನವಿ ಪತ್ರ ಕಸದ ಬುಟ್ಟಿಗೆ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ರೈತರೂ ಸೇರಿದಂತೆ ನಾಡಿನ ಜನರ ಬೇಕು ಬೇಡಗಳಿಗೆ ಸ್ಪಂದಿಸದೆ ಸಾಲು ಸಾಲು ಹಗರಣಗಳಲ್ಲಿ ತೊಡಗಿರುವ ಕಾಂಗ್ರೆಸ್ ಅಧಿಕಾರದಲ್ಲಿರುವುದು ನಾಡಿಗೆ ಅಪಾಯಕಾರಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ, ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

VISTARANEWS.COM


on

Union Minister Pralhad Joshi latest Statement
Koo

ಹುಬ್ಬಳ್ಳಿ: ಸಿಎಂಗೆ ರೈತರು ಕೊಟ್ಟ ಮನವಿ ಪತ್ರಗಳು ಕಸದ ಬುಟ್ಟಿ ಸೇರುತ್ತಿವೆ ಎಂದರೆ ಅಪಾಯಕಾರಿ ಬೆಳವಣಿಗೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 10ರಂದು ಚಾಮರಾಜನಗರದಲ್ಲಿ ಅಭಿನಂದನಾ ಸಮಾರಂಭಕ್ಕೆ ತೆರಳಿದಾಗ ಅಲ್ಲಿನ ರೈತರು ಜ್ವಲಂತ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರೆ, ಅವೆಲ್ಲ ಕಸದ ಬುಟ್ಟಿ ಸೇರಿವೆ ಎಂಬ ಬಗ್ಗೆ ವರದಿಯಾಗಿದೆ. ನಿಜಕ್ಕೂ ಇದು ರೈತ ಸಮೂಹದ ಶೋಷಣೆ ಧೋರಣೆಯನ್ನು ತೋರುತ್ತದೆ ಎಂದು ಜೋಶಿ ಆರೋಪಿಸಿದ್ದಾರೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

ನಾಡಿನ ಸಮಸ್ತ ರೈತರ ಪರವಾಗಿ ರೈತರ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗೆ ನೀಡಿದ್ದ ಮನವಿ ಪತ್ರ ಈಗ ಕಸದ ಬುಟ್ಟಿ ಸೇರಿರುವುದು ಸಿದ್ದರಾಮಯ್ಯನವರ ನಿರ್ಲಕ್ಷ್ಯದ ಪರಮಾವಧಿಯನ್ನು ಬಿಂಬಿಸುತ್ತದೆ ಎಂದು ಸಚಿವರು ದೂರಿದ್ದಾರೆ.

ಕಾಂಗ್ರೆಸ್‌ಗೆ ನಿಜವಾಗಿ ಯಾರ ಬಗ್ಗೆಯೂ ಕಾಳಜಿ ಇಲ್ಲ. ಹಾಗಾಗಿ ದೇಶಾದ್ಯಂತ ಕಾಂಗ್ರೆಸ್ ಬಲ ಕ್ಷೀಣಿಸಿದೆ. ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಸಹ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ಚೆಕ್‌ ಮಾಡಿ

ರೈತರೂ ಸೇರಿದಂತೆ ನಾಡಿನ ಜನರ ಬೇಕು ಬೇಡಗಳಿಗೆ ಸ್ಪಂದಿಸದೆ ಸಾಲು ಸಾಲು ಹಗರಣಗಳಲ್ಲಿ ತೊಡಗಿರುವ ಕಾಂಗ್ರೆಸ್ ಅಧಿಕಾರದಲ್ಲಿರುವುದು ನಾಡಿಗೆ ಅಪಾಯಕಾರಿ. ಮುಖ್ಯಮಂತ್ರಿ ಈಗಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟ್ವೀಟ್ ಮಾಡಿದ್ದಾರೆ.

Continue Reading

ಕರ್ನಾಟಕ

Dr CN Manjunath: ಶ್ರೀರಾಮ ತಂಗಿದ ನಾಡು ರಾಮನಗರದ ಹೆಸರು ಬದಲಾವಣೆ ಬೇಡ: ಸಿಎಂಗೆ ಪತ್ರ ಬರೆದ ಡಾ. ಸಿ ಎನ್‌ ಮಂಜುನಾಥ್‌

Dr CN Manjunath: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡೋದು ಸಮಂಜಸವಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಶ್ರೀರಾಮ ರಾಮಗಿರಿಯಲ್ಲಿ ತಂಗಿರುವ ಇತಿಹಾಸವಿದೆ ಎಂದು ಡಾ. ಸಿಎನ್‌ ಮಂಜುನಾಥ್‌ (Dr CN Manjunath) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

VISTARANEWS.COM


on

DR CN Manjunath
Koo

ರಾಮನಗರ: ಶ್ರೀರಾಮ ತಂಗಿದ ನಾಡಾಗಿರುವ ರಾಮನಗರ ಜಿಲ್ಲೆಯನ್ನು (Ramanagar District) ಬೆಂಗಳೂರು ದಕ್ಷಿಣ ಜಿಲ್ಲೆ (Bangalore South District) ಎಂದು ಮರುನಾಮಕರಣ ಮಾಡಬಾರದು ಎಂದು ಬೆಂಗಳೂರು ಗ್ರಾಮಾಂತರ (Bangalore Rural) ಕ್ಷೇತ್ರದ ಸಂಸದ ಡಾ. ಸಿ ಎನ್‌ ಮಂಜುನಾಥ್‌ (Dr CN Manjunath) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡೋದು ಸಮಂಜಸವಲ್ಲ. ರಾಮನಗರಕ್ಕೆ ಭಾವನಾತ್ಮಕ, ಧಾರ್ಮಿಕ, ಐತಿಹಾಸಿಕ ಹಾಗೂ ಪೌರಾಣಿಕ ಇತಿಹಾಸವಿದೆ. ಶ್ರೀರಾಮ ರಾಮಗಿರಿಯಲ್ಲಿ ತಂಗಿರುವ ಇತಿಹಾಸವಿದೆ. ಕ್ಲೋಸ್‌ಪೇಟೆಗೆ ರಾಮನಗರವೆಂದು ಮರುನಾಮಕರಣ ಮಾಡಲಾಗಿದೆ. ರಾಮನಗರವು ರೇಷ್ಮೆ ನಾಡೆಂದೇ ಪ್ರಸಿದ್ದಿಯಾಗಿದೆ. ಇಲ್ಲಿರೋ ರಾಮನಗರ, ಚನ್ನಪಟ್ಟಣ ಎಲ್ಲಾ ಜಾಗಗಳು ಆಯಾ ಹೆಸರಿನಿಂದಲೇ ಮಹತ್ವ ಪಡೆದುಕೊಂಡಿದೆ ಎಂದು ಅವರು ಹೇಳಿದ್ದಾರೆ.

ಈಗಾಗಲೇ ಬೆಂಗಳೂರು ದಕ್ಷಿಣ ತಾಲ್ಲೂಕು ಅಸ್ತಿತ್ವದಲ್ಲಿದ್ದು ಬೆಂಗಳೂರು ನಗರ ಜಿಲ್ಲೆಗೆ ಸೇರಿರುತ್ತದೆ. ಹೀಗಿರುವಾಗ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿದರೆ ಹೆಚ್ಚು ಗೊಂದಲ ಸೃಷ್ಟಿಯಾಗುತ್ತದೆ. ಅಲ್ಲದೆ ಮುಂಬರುವ ದಿನಗಳಲ್ಲಿ ಕೋಲಾರ ಜಿಲ್ಲೆಗೆ ಬೆಂಗಳೂರು ಪೂರ್ವ ಜಿಲ್ಲೆಯೆಂದು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆಯೆಂದು ಮರುನಾಮಕರಣ ಮಾಡುವ ಪ್ರಸ್ತಾವನೆಗಳು ಬಂದು ಇನ್ನಷ್ಟು ಗೊಂದಲ ಸೃಷ್ಟಿಸಲಿವೆ ಎಂದಿದ್ದಾರೆ.

ರಾಮನಗರ ಜಿಲ್ಲೆಯು ರೈತರ ಜಿಲ್ಲೆಯಾಗಿ ಉಳಿಯಬೇಕೇ ಹೊರತು ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿಯ ಬೆಲೆ ಅಧಿಕವಾಗುವುದಕ್ಕಿಂತ ರೈತರು ಬೆಳೆದ ಬೆಳೆಯ ಬೆಲೆಯು ಅಧಿಕವಾಗಬೇಕು. ದಯವಿಟ್ಟು ಸನ್ಮಾನ್ಯ ಮುಖ್ಯಮಂತ್ರಿಯವರು ಈ ಪ್ರಸ್ತಾವನೆಯನ್ನು ತಿರಸ್ಕರಿಸಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ ಎಂದು ಅವರು ಮನವಿ ಮಾಡಿದ್ದಾರೆ.

ಬ್ರಾಂಡ್‌ ರಾಮನಗರ ಬೆಳೆಸಿ

ಇಂದು ಮಾಗಡಿಯಲ್ಲಿ ಮಾತನಾಡಿರುವ ಸಂಸದ ಮಂಜುನಾಥ್, ಹೆಸರು ಬದಲಾವಣೆಗೆ ತಮ್ಮ ಖಂಡತುಂಡವಾದ ವಿರೋಧವನ್ನು ವ್ಯಕ್ತಪಡಿಸಿದರು. ಯಾವುದೇ ಡಿಕ್ಷನರಿ ನೋಡಿದ್ರೂ ರಾಮನಗರಕ್ಕಿಂತ ಒಳ್ಳೆ ಪದ ಬೇರೊಂದು ಸಿಗೋದಿಲ್ಲ. ಆ ಹೆಸರಿಗೆ ಭಾವನಾತ್ಮಕ, ಧಾರ್ಮಿಕ, ಪೌರಾಣಿಕ ಸಂಬಂಧ ಇದೆ. ಕೇವಲ ಹೆಸರು ಬದಲಾವಣೆ ಮಾಡೋದ್ರಿಂದ ಅಭಿವೃದ್ಧಿ ಆಗಲ್ಲ. ಈ ರೀತಿ ಮಾಡೋದಾದ್ರೆ ಬ್ರಾಂಡ್ ರಾಮನಗರ ಅಂತ ಡೆವಲಪ್ ಮಾಡಿ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಬೃಹತ್ತಾಗಿ ಬೆಳೆದು ಅಲ್ಲೇ ಸಾಕಷ್ಟು ಮೂಲಭೂತ ಸಮಸ್ಯೆಗಳಿವೆ. ಭೂಮಿಗೆ ಬೆಲೆ ಜಾಸ್ತಿ ಆದರೆ ಪ್ರಯೋಜನ ಇಲ್ಲ. ಭೂಮಿಯಲ್ಲಿ ಬೆಳೆಯುವ ಬೆಳೆಗೆ ಬೆಲೆ ಜಾಸ್ತಿ ಆಗಬೇಕು. ಯಾವ ಉದ್ದೇಶಕ್ಕೆ ಈ ರೀತಿ ಮಾಡಲು ಹೊರಟಿದ್ದಾರೋ ಗೊತ್ತಿಲ್ಲ. ಬದಲಾವಣೆ ಮಾಡಬಾರದು ಅಂತ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಇದು ರೇಷ್ಮೆ ನಾಡಾಗಿಯೇ ಉಳಿಯಬೇಕು. ರೈತರ ಜಿಲ್ಲೆಯಾಗಿಯೇ ಉಳಿಯಬೇಕು. ಬದಲಾವಣೆ ವೈಜ್ಞಾನಿಕವಾಗಿಯೂ ಸಮಂಜಸ ಅಲ್ಲ ಎಂದಿದ್ದಾರೆ ಮಂಜುನಾಥ್.

‌ʼಜಿಲ್ಲೆ ಮರು ನಾಮಕರಣಕ್ಕೆ ಹಾಸನದವರದು ಮಾತ್ರ ವಿರೋಧʼ ಎಂಬ ಶಾಸಕ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ʼನಾವು 40 ವರ್ಷದಿಂದ ಬೆಂಗಳೂರಲ್ಲೆ ಇದ್ದೇವೆ. ಈ ಹೇಳಿಕೆ ಕೊಟ್ಟವರೇ ಬೆಂಗಳೂರಿನಲ್ಲಿ ಇರಲಿಲ್ಲ. ಹಿಂದೆ ರಾಮನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಯೆ ಆಗಿತ್ತು. ಒಂದು ಸರಿಯಾದ ಮೆಡಿಕಲ್ ಕಾಲೇಜು ಮಾಡಲು ಆಗಿಲ್ಲ. ವೈದ್ಯರ ನೇಮಕ ಮಾಡಲು ಆಗಿಲ್ಲ. ಮೊದಲು ಅದನ್ನು ಮಾಡಿʼ ಎಂದು ಬಾಲಕೃಷ್ಣಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: DK Shivakumar: ರಾಮನಗರ ಜಿಲ್ಲೆ ಹೆಸರು ಬದಲಾವಣೆ; ಡಿಕೆಶಿ- ಎಚ್‌ಡಿಕೆ ನಡುವೆ ಮತ್ತೊಂದು ಮಹಾಸಮರಕ್ಕೆ ಮುನ್ನುಡಿ!

Continue Reading

ದೇಶ

Sanjay Raut: ಇಂದಿರಾ ಗಾಂಧಿ ಹೇರಿದ್ದ ತುರ್ತು ಪರಿಸ್ಥಿತಿಯನ್ನು ಬೆಂಬಲಿಸಿದ ಉದ್ಧವ್ ಬಣದ ಶಿವಸೇನಾ ನಾಯಕ!

Sanjay Raut: 1975ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನಡೆಯನ್ನು ಶಿವಸೇನೆ (ಯುಬಿಟಿ) ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ ಶನಿವಾರ ಸಮರ್ಥಿಸಿಕೊಂಡಿದ್ದಾರೆ. 1975ರ ತುರ್ತು ಪರಿಸ್ಥಿತಿಯ ನೆನಪಿಗಾಗಿ ಜೂನ್ 25 ಅನ್ನು ಸಂವಿಧಾನ್ ಹತ್ಯ ದಿವಸ್ ಎಂದು ಆಚರಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ರಾವತ್, ʼʼಆ ಪರಿಸ್ಥಿತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದರೆ, ಅವರು ಕೂಡ ತುರ್ತು ಪರಿಸ್ಥಿತಿಯನ್ನು ಜಾರಿಗೆ ತರುತ್ತಿದ್ದರುʼʼ ಎಂದು ಹೇಳಿದ್ದಾರೆ.

VISTARANEWS.COM


on

Sanjay Raut
Koo

ನವದೆಹಲಿ: 50 ವರ್ಷಗಳ ಹಿಂದೆ ಅಂದರೆ 1975ರಲ್ಲಿ ತುರ್ತು ಪರಿಸ್ಥಿತಿ (Emergency) ಹೇರಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರ ನಡೆಯನ್ನು ಶಿವಸೇನೆ (ಯುಬಿಟಿ) ಮುಖಂಡ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್ (Sanjay Raut) ಶನಿವಾರ ಸಮರ್ಥಿಸಿಕೊಂಡಿದ್ದಾರೆ.

1975ರ ತುರ್ತು ಪರಿಸ್ಥಿತಿಯ ನೆನಪಿಗಾಗಿ ಜೂನ್ 25 ಅನ್ನು ಸಂವಿಧಾನ್ ಹತ್ಯ ದಿವಸ್ ಎಂದು ಆಚರಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಪ್ರತಿಕ್ರಿಯಿಸಿದ ರಾವತ್, ʼʼಆ ಪರಿಸ್ಥಿತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿಯಾಗಿದ್ದರೆ, ಅವರು ಕೂಡ ತುರ್ತು ಪರಿಸ್ಥಿತಿಯನ್ನು ಜಾರಿಗೆ ತರುತ್ತಿದ್ದರುʼʼ ಎಂದು ಹೇಳಿದ್ದಾರೆ.

ಎಎನ್ಐ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಸಂಜಯ್ ರಾವತ್, “ಬಿಜೆಪಿಗೆ ಮಾಡಲು ಬೇರೆ ಕೆಲಸವಿಲ್ಲ. ತುರ್ತು ಪರಿಸ್ಥಿತಿಗೆ 50 ವರ್ಷಗಳು ಕಳೆದಿವೆ. ಜನರು ತುರ್ತು ಪರಿಸ್ಥಿತಿಯನ್ನು ಮರೆತಿದ್ದಾರೆ. ಈ ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಏಕೆ ಹೇರಲಾಯಿತು? ಎನ್ನುವುದನ್ನು ತಿಳಿದುಕೊಳ್ಳಬೇಕು. ಕೆಲವರು ಇನ್ನೂ ತುರ್ತು ಪರಿಸ್ಥಿತಿಯ ಹೆಸರು ಹೇಳಿಕೊಂಡು ಅರಾಜಕತೆಯನ್ನು ಹರಡಲು ಬಯಸುತ್ತಾರೆ. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದರೆ, ಅವರೂ ತುರ್ತು ಪರಿಸ್ಥಿತಿ ಹೇರುತ್ತಿದ್ದರು” ಎಂದು ಅವರು ಹೇಳಿದ್ದಾರೆ.

“ಅದು ರಾಷ್ಟ್ರೀಯ ಭದ್ರತೆಯ ವಿಷಯವಾಗಿತ್ತು. ಕೆಲವರು ಬಾಂಬ್‌ಗಳನ್ನು ತಯಾರಿಸುತ್ತಿದ್ದರು ಮತ್ತು ಅವುಗಳನ್ನು ವಿವಿಧ ಸ್ಥಳಗಳಲ್ಲಿ ಸ್ಫೋಟಿಸುತ್ತಿದ್ದರು. ಆ ಸಮಯದಲ್ಲಿ ಬಾಳಾಸಾಹೇಬ್ ಠಾಕ್ರೆ ತುರ್ತು ಪರಿಸ್ಥಿತಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದರು ಮತ್ತು ಆರ್‌ಎಸ್‌ಎಸ್‌ ಕೂಡ ಅದನ್ನು ಬೆಂಬಲ ನೀಡಿತ್ತು” ಎಂದು ಅವರು ತಿಳಿಸಿದ್ದಾರೆ.

1975ರ ಜೂನ್‌ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ದೇಶದಲ್ಲಿ ಆಂತರಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಕಾರಣದಿಂದಾಗಿ ಜೂನ್‌ 25 ಅನ್ನು ಸಂವಿಧಾನ ಹತ್ಯಾ ದಿವಸ ಎಂದು ಕೇಂದ್ರ ಸರ್ಕಾರ (Central Government) ಘೋಷಿಸಿದೆ. ಪ್ರತಿವರ್ಷ ಜೂನ್‌ 25ರಂದು ದೇಶಾದ್ಯಂತ ಸಂವಿಧಾನ ಹತ್ಯಾ ದಿವಸ ಎಂದು ಆಚರಿಸಲು ಕೇಂದ್ರ ಸರ್ಕಾರವು ತೀರ್ಮಾನಿಸಿದೆ.

ಕೇಂದ್ರ ಸರ್ಕಾರದ ತೀರ್ಮಾನದ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ಪ್ರತಿವರ್ಷ ಜೂನ್‌ 25ರಂದು ಸಂವಿಧಾನ ಹತ್ಯಾ ದಿವಸ ಎಂಬುದಾಗಿ ಆಚರಿಸಲಾಗುತ್ತದೆ. ಆ ಮೂಲಕ ತುರ್ತು ಪರಿಸ್ಥಿತಿ ವೇಳೆ ಸಾವು-ನೋವು ಅನುಭವಿಸಿದ ಲಕ್ಷಾಂತರ ಜನರ ಹೋರಾಟ, ತ್ಯಾಗವನ್ನು ಸ್ಮರಿಸಲಾಗುತ್ತದೆ. ಅಲ್ಲದೆ, ದೇಶದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಕಾಂಗ್ರೆಸ್‌ ಹೇಗೆ ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದಿತು ಎಂಬುದನ್ನು ಜನರಿಗೆ ತಿಳಿಸಲಾಗುತ್ತದೆ” ಎಂಬುದಾಗಿ ಮಾಹಿತಿ ನೀಡಿದರು.

ಇದನ್ನೂ ಓದಿ: Droupadi Murmu: ತುರ್ತು ಪರಿಸ್ಥಿತಿ ಸಂವಿಧಾನದ ಮೇಲೆ ನಡೆದಿರುವ ಅತಿದೊಡ್ಡ ದಾಳಿ; ದ್ರೌಪದಿ ಮುರ್ಮು

ಏನಿದು ತುರ್ತು ಪರಿಸ್ಥಿತಿ?

ಅಲಹಾಬಾದ್‌ ಹೈಕೋರ್ಟ್‌ ತೀರ್ಪಿನ ವಿರುದ್ಧ ಕುಪಿತಗೊಂಡಿದ್ದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು 1975ರ ಜೂನ್‌ 25ರಂದು ತುರ್ತು ಪರಿಸ್ಥಿತಿ ಘೋಷಿಸಿದ್ದರು. 21 ತಿಂಗಳು ತುರ್ತು ಪರಿಸ್ಥಿತಿ ಜಾರಿಯಲ್ಲಿತ್ತು. ಇದೇ ವೇಳೆ ಲಕ್ಷಾಂತರ ಜನರನ್ನು ಜೈಲಿಗೆ ಕಳುಹಿಸಲಾಗಿತ್ತು. ಮಾಧ್ಯಮ ಸಂಸ್ಥೆಗಳನ್ನು ಮುಚ್ಚಲಾಗಿತ್ತು. ತಮ್ಮ ವಿರುದ್ಧ ವರದಿ ಪ್ರಕಟಿಸುವ ಪತ್ರಿಕೆಗಳನ್ನು ಮುಚ್ಚಲು ಇಂದಿರಾ ಗಾಂಧಿ ಆದೇಶಿಸಿದ್ದರು. ಜನರ ಹಕ್ಕುಗಳನ್ನು ಕಸಿಯಲಾಗಿತ್ತು. ಹಾಗಾಗಿ, ತುರ್ತು ಪರಿಸ್ಥಿತಿಯು ದೇಶದ ಪ್ರಜಾಪ್ರಭುತ್ವದ ಕರಾಳ ಅಧ್ಯಾಯ ಎನಿಸಿದೆ.

Continue Reading

ರಾಜಕೀಯ

Bypolls Result: 7 ರಾಜ್ಯಗಳ ಉಪಚುನಾವಣೆಯಲ್ಲಿ ಮುನ್ನಡೆ ಸಾಧಿಸಿದ ಇಂಡಿ ಒಕ್ಕೂಟ; ಬಿಜೆಪಿಗೆ ಮುಖಭಂಗ

Bypolls Result: ಉಪಚುನಾವಣೆಯ ಫಲಿತಾಂಶ ಇಂದು (ಜುಲೈ 13) ಹೊರ ಬೀಳುತ್ತಿದ್ದು, ಪ್ರತಿಪಕ್ಷಗಳ ಇಂಡಿ ಒಕ್ಕೂಟ ಮೇಲುಗೈ ಸಾಧಿಸಿದೆ. ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆದಿತ್ತು. ಸದ್ಯ ಇಂಡಿ ಒಕ್ಕೂಟ ಕನಿಷ್ಠ 6 ಕಡೆ ಜಯ ಸಾಧಿಸಿದ್ದು, 4 ಕಡೆ ಮುನ್ನಡೆಯಲ್ಲಿದೆ. ಬಿಜೆಪಿ 1 ಸೀಟು ತನ್ನದಾಗಿಸಿಕೊಂಡಿದೆ.

VISTARANEWS.COM


on

Bypolls Result
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election)ಯ ಬಳಿಕ ನಡೆದ ಉಪಚುನಾವಣೆಯ ಫಲಿತಾಂಶ ಇಂದು (ಜುಲೈ 13) ಹೊರ ಬೀಳುತ್ತಿದ್ದು, ಪ್ರತಿಪಕ್ಷಗಳ ಇಂಡಿ ಒಕ್ಕೂಟ ಮೇಲುಗೈ ಸಾಧಿಸಿದೆ (Bypolls Result). ಜುಲೈ 10ರಂದು ಏಳು ರಾಜ್ಯಗಳ 13 ಅಸೆಂಬ್ಲಿ ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆದಿತ್ತು. ಸದ್ಯ ಇಂಡಿ ಒಕ್ಕೂಟ ಕನಿಷ್ಠ 6 ಕಡೆ ಜಯ ಸಾಧಿಸಿದ್ದು, 4 ಕಡೆ ಮುನ್ನಡೆಯಲ್ಲಿದೆ. ಬಿಜೆಪಿ 1 ಸೀಟು ತನ್ನದಾಗಿಸಿಕೊಂಡಿದೆ.

ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ, ಮತ್ತು ಮಾನಿಕ್ತಾಲಾ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್, ಪಂಜಾಬ್‌ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ಡೆಹ್ರಾ, ಹಮೀರ್‌ಪುರ ಮತ್ತು ನಲಘರ್, ಬಿಹಾರದ ರುಪೌಲಿ, ಮಧ್ಯಪ್ರದೇಶದ ಅಮರ್ವಾರಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇದೀಗ ಹೊರ ಬೀಳುತ್ತಿದೆ.

ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷ (AAP) ಮೊಹಿಂದರ್ ಭಗತ್ 23,000 ಮತಗಳಿಂದ ಗೆದ್ದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ನಾಲ್ಕು ಸ್ಥಾನಗಳಲ್ಲಿಯೂ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ ಹಿನ್ನಡೆಯಲ್ಲಿದೆ. ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಾಂಗ್ರೆಸ್‌ನ ಕಮಲೇಶ್ ಠಾಕೂರ್ ಡೆಹ್ರಾದಲ್ಲಿ ಗೆಲುವು ಸಾಧಿಸಿದ್ದಾರೆ. ನಲಘರ್‌ನಲ್ಲಿ ಕಾಂಗ್ರೆಸ್, ಹಮೀರ್‌ಪುರದಲ್ಲಿ ಬಿಜೆಪಿಯ ಆಶಿಶ್ ಶರ್ಮಾ ಮುನ್ನಡೆ ಸಾಧಿಸಿದ್ದಾರೆ.

ಉತ್ತರಾಖಂಡದ ಬದ್ರಿನಾಥ ಮತ್ತು ಮಂಗಳೌರ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಮಧ್ಯಪ್ರದೇಶದ ಅಮರವಾರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೀರನ್ ಶಾ ಇನ್ವತಿ 4,000 ಮತಗಳ ಮುನ್ನಡೆ ಸಾಧಿಸಿದ್ದಾರೆ. ಬಿಹಾರದ ರುಪೌಲಿಯಲ್ಲಿ ಜೆಡಿಯು ಅಭ್ಯರ್ಥಿ ಕಲಾಧರ್ ಪ್ರಸಾದ್ ಮಂಡಲ್ ಮುನ್ನಡೆ ಸಾಧಿಸಿದ್ದರೆ, ತಮಿಳುನಾಡಿನ ವಿಕ್ರಾವಂಡಿ ವಿಧಾನಸಭಾ ಕ್ಷೇತ್ರದಲ್ಲಿ ಡಿಎಂಕೆಯ ಅಣ್ಣಿಯೂರ್ ಶಿವ 10,000ಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ.

ಯಾಕೆ ಈ ಉಪಚುನಾವಣೆ ?

ಕೆಲವು ಕ್ಷೇತ್ರಗಳ ಸದಸ್ಯರು ಸಾವನ್ನಪ್ಪಿದ್ದು, ಕೆಲವು ಕಡೆ ರಾಜೀನಾಮೆಯಿಂದ ಸ್ಥಾನ ಖಾಲಿಯಾಗಿರುವುದರಿಂದ ಉಪ ಚುನಾವಣೆ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಆಡಳಿತದಲ್ಲಿರುವ ಟಿಎಂಸಿ ಲೋಕಸಭಾ ಚುನಾವಣೆಯಲ್ಲಿನ ತನ್ನ ಯಶಸ್ಸನ್ನು ಮುಂದುವರಿಸಲು ಬಹುತೇಕ ಯಶಸ್ವಿಯಾಗಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಬಹುಮತ ಹೊಂದಲು ವಿಫಲವಾಗಿರುವ ಬಿಜೆಪಿಗೆ ಮತ್ತೊಮ್ಮೆ ಹಿನ್ನಡೆಯಾದಂತಾಗಿದೆ. ಪ್ರತಿಪಕ್ಷ ಇಂಡಿ ಒಕ್ಕೂಟ ಮತ್ತಷ್ಟು ಬಲಿಷ್ಠವಾಗುವ ಮೂಲಕ ಎನ್‌ಡಿಎಗೆ ತಲೆನೋವು ತಂದಿಟ್ಟಿದೆ.

ಇದನ್ನೂ ಓದಿ: KEA Exam: ಕ್ಯಾಮೆರಾ ಕಣ್ಗಾವಲಿನಲ್ಲಿ ಕೆಇಎ ಸ್ಪರ್ಧಾತ್ಮಕ ಪರೀಕ್ಷೆ; ವೆಬ್ ಕಾಸ್ಟಿಂಗ್ ಪರಿಶೀಲಿಸಿದ ಉನ್ನತ ಶಿಕ್ಷಣ ಸಚಿವ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಮೂಲಕ ಸರಳ ಬಹುಮತಕ್ಕೆ 32 ಸೀಟುಗಳ ಕೊರತೆ ಎದುರಾಗಿದ್ದು, ಮಿತ್ರಪಕ್ಷಗಳ ಸಹಾಯದಿಂದ ಸರ್ಕಾರ ರಚಿಸಿದೆ. ಮಿತ್ರಪಕ್ಷಗಳ ಬೆಂಬಲದಿಂದ ಎನ್‌ಡಿಎ ಇದೀಗ 293 ಹೊಂದಿದೆ. ಇತ್ತ ಕಾಂಗ್ರೆಸ್‌ ನೇತೃತ್ವದ ಪ್ರತಿಪಕ್ಷಗಳ ಇಂಡಿ ಒಕ್ಕೂಟ 232 ಸೀಟು ಪಡೆದುಕೊಂಡು ಪ್ರಬಲ ಪೈಪೋಟಿ ಒಡ್ಡಿದೆ. ಈ ಬಾರಿ ಕಾಂಗ್ರೆಸ್‌ 99 ಕಡೆ ಜಯಗಳಿಸಿದೆ.

Continue Reading
Advertisement
radioactive material
ದೇಶ9 seconds ago

Radioactive Material: ಅನುಮಾನಾಸ್ಪದಅಪಾಯಕಾರಿ ರಾಸಾಯನಿಕ ವಸ್ತು ತುಂಬಿದ್ದ ಬಾಕ್ಸ್‌ಗಳು ಪತ್ತೆ; ಐವರು ಅರೆಸ್ಟ್‌

Ambani Wedding Fashion
ಫ್ಯಾಷನ್8 mins ago

Ambani Wedding Fashion: ಅನಂತ್ ಅಂಬಾನಿ ಶೆರ್ವಾನಿ ಬೆಲೆಯೇ 214 ಕೋಟಿ ರೂ! ಹೇಗಿತ್ತು ನೋಡಿ ಅಂಬಾನಿ ಜೋಡಿಯ ವೆಡ್ಡಿಂಗ್ ಫ್ಯಾಷನ್!

Bagalkot news
ಕರ್ನಾಟಕ14 mins ago

Bagalkot News: ಭಕ್ತರಿಗೆ ಭಂಡಾರ ಹಚ್ಚಿ ಕೊಡಲಿ ಏಟು ನೀಡೋ ಪೂಜಾರಿ; ಮೌಢ್ಯ ನಿಷೇಧ ಕಾಯ್ದೆಯಡಿ ಬಂಧನ!

T20 World Cup 2024
ಕ್ರೀಡೆ23 mins ago

T20 World Cup 2024 : ವಿಶ್ವ ಕಪ್ ಆಯೋಜನೆಯಲ್ಲಿ ಐಸಿಸಿಗೆ ಸಿಕ್ಕಾಪಟ್ಟೆ ನಷ್ಟ ​; ತೆರೆಮರೆಯಲ್ಲಿ ಜೋರು ಚರ್ಚೆ

Anant Ambani Wedding
ಪ್ರಮುಖ ಸುದ್ದಿ44 mins ago

ಅಂಬಾನಿಯನ್ನು ಟೀಕಿಸುತ್ತಿದ್ದ ದೀದಿ, ಅಖಿಲೇಶ್‌, ಲಾಲು ಸೇರಿ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Self Harming
ಬೆಂಗಳೂರು51 mins ago

Self Harming : ಪತಿ ಅಗಲಿಕೆಯ ನೋವು; ಖಿನ್ನತೆಗೊಳಗಾದ ತಾಯಿ ಮತ್ತು ಮಗ ಆತ್ಮಹತ್ಯೆ

Shiva Rajkumar 131 cinema Look out
ಸ್ಯಾಂಡಲ್ ವುಡ್1 hour ago

Shiva Rajkumar: ಶಿವರಾಜ್ ಕುಮಾರ್ ಜನುಮದಿನಕ್ಕೆ 131ನೇ ಸಿನಿಮಾದ ಮೊದಲ ಝಲಕ್ ರಿಲೀಸ್!

YouTuber Dhruv Rathee
ದೇಶ1 hour ago

YouTuber Dhruv Rathee: ಸ್ಪೀಕರ್‌ ಓಂ ಬಿರ್ಲಾ ಪುತ್ರಿ ಬಗ್ಗೆ ಪೋಸ್ಟ್‌; ಯೂಟ್ಯೂಬರ್‌ ಧೃವ್‌ ರಥೀ ವಿರುದ್ಧ FIR

Kapil Dev
ಪ್ರಮುಖ ಸುದ್ದಿ1 hour ago

Kapil Dev : ಅಂಶುಮಾನ್ ಗಾಯಕ್ವಾಡ್​ಗೆ ಕ್ಯಾನ್ಸರ್​, ಬೇಸರ ವ್ಯಕ್ತಪಡಿಸಿದ ಕಪಿಲ್​ ದೇವ್​

Smriti Singh
ದೇಶ1 hour ago

Smriti Singh: ಹುತಾತ್ಮ ಯೋಧನ ಪತ್ನಿ ಬಗ್ಗೆ ಅಶ್ಲೀಲ ಕಮೆಂಟ್;‌ ಅಹ್ಮದ್‌ ವಿರುದ್ಧ ಎಫ್‌ಐಆರ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ5 hours ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

karnataka Rain Effect
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಯಂತಾದ ರಸ್ತೆಯಲ್ಲಿ ಬೈಕ್‌ ಚಲಾಯಿಸಿ ಮುಗ್ಗರಿಸಿ ಬಿದ್ದ ಸವಾರರು; ನಾಳೆಗೂ ರೈನ್‌ ಅಲರ್ಟ್‌

Chikkamagaluru News Police detained youths for consuming liquor at tourist spot in Chikmagaluru
ಮಳೆ4 days ago

Chikkamagaluru News : ಚಿಕ್ಕಮಗಳೂರು ಚಳಿಗೆ ನಶೆ ಏರಿಸಿಕೊಳ್ಳುತ್ತಿದ್ದವರ ಕಿಕ್ಕಿಳಿಸಿದ ಬಣಕಲ್ ಪಿಎಸ್ಐ ರೇಣುಕಾ

karnataka Rain
ಮಳೆ4 days ago

Karnataka Rain : ಭಾರಿ ಮಳೆಯಲ್ಲಿ ದೇವರಮನೆಗುಡ್ಡದಲ್ಲಿ ಪ್ರವಾಸಿಗರ ಹುಚ್ಚಾಟ; ಕೇಸ್‌ ಜಡಿದ ಪೊಲೀಸರು!

karnataka weather Forecast
ಮಳೆ4 days ago

Karnataka Weather : 11 ಜಿಲ್ಲೆಗಳಲ್ಲಿ ರಣಮಳೆ; ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌

Rain Effect
ಮಳೆ5 days ago

Rain Effect : ಭಾರಿ ಮಳೆಗೆ ನೀರಲ್ಲಿ ಕೊಚ್ಚಿ ಹೋದ ಪಾನ್‌ ಶಾಪ್‌, ಕಾರು! ಉಡುಪಿಯ ಶಾಲಾ-ಕಾಲೇಜುಗಳಿಗೆ ನಾಳೆಯೂ ರಜೆ

Karnataka Rain Effect
ಮಳೆ5 days ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ5 days ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

ಟ್ರೆಂಡಿಂಗ್‌