ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರೇ ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡಬೇಡಿ ಎಂದು ಕೇಂದ್ರದ ಜಲಸಂಪನ್ಮೂಲ ಖಾತೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಅವರು ಕ್ಲಾಸ್ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಕಳೆದ ಕೆಲವು ದಿನಗಳಿಂದ ಕೇಂದ್ರ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳುವ ಉತ್ತರ ಕೊಡಿ ಮೋದಿ (AnswerMadi Modi) ಅಭಿಯಾನ ನಡೆಸುತ್ತಿದ್ದಾರೆ. ಅದರಲ್ಲಿ ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಇನ್ನೂ ಅನುಮತಿ ನೀಡದೆ ಸತಾಯಿಸುತ್ತಿರುವುದನ್ನು ಕೂಡಾ ಪ್ರಶ್ನೆ ಮಾಡಿದ್ದರು. ಅವುಗಳಿಗೆ ಗಜೇಂದ್ರ ಸಿಂಘ ಶೇಖಾವತ್ ಉತ್ತರ ನೀಡುವ ಜತೆಗೆ ಕ್ಲಾಸ್ ಕೂಡಾ ತೆಗೆದುಕೊಂಡಿದ್ದಾರೆ.
ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದೇನು?
1.ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.
2. ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ ತೋರುತ್ತದೆ. ಹೀಗಾಗಿ ವಾಸ್ತವ ಏನೆಂಬುದನ್ನು ನಾವೇ ಹೇಳಬೇಕಾಗಿದೆ.
3. ಮೊದಲನೆಯದಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿಯ ಹಲವು ಸಭೆಗಳಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ಕುರಿತು ಚರ್ಚೆಯನ್ನು ಅಜೆಂಡಾ ವಿಷಯವಾಗಿ ಸೇರಿಸಲಾಗಿತ್ತು. ಆದರೆ ಈ ಕಾರ್ಯಸೂಚಿಯ ಬಗ್ಗೆ ನೆರೆಯ ರಾಜ್ಯಗಳ ನಡುವೆ ಒಮ್ಮತ ಮೂಡದೇ ಇರುವುದರಿಂದ ಈ ಬಗ್ಗೆ ಚರ್ಚೆ ನಡೆಸಲು ಸಾಧ್ಯವಾಗಿಲ್ಲ. ಇದು ಕೇಂದ್ರದ ತಪ್ಪಲ್ಲ.
4. ಕಳಸಾ ಮತ್ತು ಬಂಡೂರ ನಾಲೆ ಯೋಜನೆ ಡಿಪಿಆರ್‌ಗಳನ್ನು ಈಗಾಗಲೇ ಕೇಂದ್ರ ಜಲ ಆಯೋಗ (ಸಿಡಬ್ಲ್ಯೂಸಿ) ಕೆಲವು ಷರತ್ತುಗಳೊಂದಿಗೆ ಅನುಮೋದಿಸಿದೆ ಮತ್ತು ಅದನ್ನು ಕರ್ನಾಟಕ ಸರ್ಕಾರಕ್ಕೆ ಈಗಾಗಲೇ ತಿಳಿಸಲಾಗಿದೆ. ಈ ಮಾಹಿತಿಯನ್ನು ನೀವು ಉದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದೀರಲ್ಲವೇ ?
5. 2017-17ರಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (PMKSY)- ತ್ವರಿತ ನೀರಾವರಿ ಕಾರ್ಯಕ್ರಮದ ಅಡಿಯಲ್ಲಿ ಆದ್ಯತೆ ನೀಡಲಾದ ಕರ್ನಾಟಕದ 5 ಯೋಜನೆಗಳಲ್ಲಿ, ಮೂರು ಪೂರ್ಣಗೊಂಡಿದೆ. ಎರಡು ಕಾಮಗಾರಿ ಚಾಲನೆಯಲ್ಲಿದೆ. ಈ ಯೋಜನೆಗಾಗಿ ಕೇಂದ್ರದ ಪಾಲಿನ 1238.30 ಕೋಟಿ ರೂ.ಗಳ ಪೈಕಿ 1190.05 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಇದು ರಾಜ್ಯದ ಹಣಕಾಸು ಸಚಿವಾಲಯವನ್ನೂ ನಿಭಾಯಿಸುತ್ತಿರುವ ನಿಮ್ಮ ಗಮನಕ್ಕೆ ಬಾರದಿರುವುದು ಚೋದ್ಯವಲ್ಲವೇ ?
ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ @siddaramaiah ನವರೇ,
— Gajendra Singh Shekhawat (@gssjodhpur) October 30, 2023
ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ.
ಮೇಕೆದಾಟು ಯೋಜನೆಯ…
6,ಅಟಲ್ ಭೂ ಜಲ ಯೋಜನೆ ಅಡಿಯಲ್ಲಿ, ಕರ್ನಾಟಕಕ್ಕೆ ಕೇಂದ್ರದಿಂದ ಈಗಾಗಲೇ 629.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆದರೆ 28.10.2023ರ ವರೆಗೆ ಕೇವಲ 274.05 ಕೋಟಿ ರೂ. ಮಾತ್ರ ಬಳಕೆ ಮಾಡಿಕೊಂಡಿದ್ದೀರಿ. ಸತ್ಯದ ಘೋರಿ ಕಟ್ಟಿ ಸುಳ್ಳಿನ ವಿಜೃಂಭಣೆ ಮಾಡುವಾಗ ಕನಿಷ್ಠ ಆತ್ಮಸಾಕ್ಷಿಯನ್ನಾದರೂ ಪ್ರಶ್ನಿಸಿಕೊಳ್ಳಿ. ಇಲ್ಲವಾದರೆ ಸುಳ್ಳಿನ ಉಪಾಸನೆಯೇ ನಿಮ್ಮ ನಿತ್ಯಕರ್ಮವೆಂದು ಕರ್ನಾಟಕದ ಜನ ನಿಮ್ಮ ಬಗ್ಗೆ ಕನಿಕರ ಹಾಗೂ ತಿರಸ್ಕಾರವನ್ನು ತೋರಬಹುದು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳಿದ್ದೇನು?
ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅಗತ್ಯಕ್ಕೆ ತಕ್ಕಷ್ಟು ನೀರು ಒದಗಿಸುವುದು ಬಹುದೊಡ್ಡ ಸವಾಲು, ಈ ಉದ್ದೇಶಕ್ಕಾಗಿಯೇ ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ ಪಾಲಿನ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು? ಕೇಂದ್ರ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ #ಸ್ವಾಭಿಮಾನಿ_ಕನ್ನಡಿಗರಪ್ರಶ್ನೆ ಎಂದಿದ್ದರು. ಜತೆಗೆ ಭದ್ರಾ ಯೋಜನೆ, ಕೃಷ್ಣಾ ಮೇಲ್ದಂಡೆ, ಕಳಸಾ ಬಂಡೂರಿ ಯೋಜನೆಗಳ ಬಗ್ಗೆಯೂ ಪ್ರಶ್ನೆ ಕೇಳಿದ್ದರು,
ಇದನ್ನೂ ಓದಿ: CM Siddaramaiah : ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಅಭಿಯಾನ; ಕೇಂದ್ರ – ಮೋದಿ ವಿರುದ್ಧ ಸಿಎಂ ವಾರ್!
ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅಗತ್ಯಕ್ಕೆ ತಕ್ಕಷ್ಟು ನೀರು ಒದಗಿಸುವುದು ಬಹುದೊಡ್ಡ ಸವಾಲು, ಈ ಉದ್ದೇಶಕ್ಕಾಗಿಯೇ ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ.
— Siddaramaiah (@siddaramaiah) October 28, 2023
ಪ್ರಧಾನಿ @narendramodi ಅವರೇ, ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ… pic.twitter.com/hKbtdNxWKR