ಬೆಂಗಳೂರು: ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್ ಇಲ್ಲದೆ ನೀಡಲು ಲೋಕೋಪಯೋಗಿ ಸಚಿವರಿಗೆ ಸೂಚಿಸಿದ್ದೇನೆ. ಇನ್ನು 2013-2018ರ ಅವಧಿಯಲ್ಲಾಗಲೀ, ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಅವಧಿಯಲ್ಲಾಗಲೀ ಗುತ್ತಿಗೆದಾರರಿಂದ ನಿರಾಕ್ಷೇಪಣಾ ಪತ್ರಕ್ಕೆ (NOC) ಐದು ಪೈಸೆ ಲಂಚವನ್ನು ಪಡೆದಿದ್ದರೆ ರಾಜಕೀಯ ನಿವೃತ್ತಿ (Political retirement) ಪಡೆಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸವಾಲು ಹಾಕಿದ್ದಾರೆ.
ಅರಮನೆ ಮೈದಾನದಲ್ಲಿ ನಡೆದ ಗುತ್ತಿಗೆದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದು ಪೈಸೆ ಲಂಚವನ್ನು ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಬಿಜೆಪಿಗರ ಟೀಕೆಗಳಿಗೆ ಪ್ರತ್ಯುತ್ತರ ನೀಡಿದರು.
ಪ್ಯಾಕೇಜ್ ಪದ್ಧತಿ ರದ್ದುಗೊಳಿಸುವುದು, ಬಾಕಿ ಮೊತ್ತವನ್ನು ಪಾವತಿಸುವುದು ಸೇರಿದಂತೆ ಗುತ್ತಿಗೆದಾರರು ಮುಂದಿಟ್ಟ ಎಲ್ಲ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವೇಳೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು.
ಕೇಂದ್ರ ಸರ್ಕಾರದ ಅಸಹಕಾರ
ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆಗಿನ ಸಿಎಂ ಬಸವರಾಜ ಬೊಮ್ಮಾಯಿ ಇಬ್ಬರೂ ಬಜೆಟ್‌ನಲ್ಲೇ ಘೋಷಿಸಿದರು. ಆದರೆ, ಇವತ್ತಿನವರೆಗೂ ಒಂದೇ ಒಂದು ರೂಪಾಯಿ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಎಷ್ಟೇ ಅಸಹಕಾರ ಕೊಟ್ಟರೂ ಗುತ್ತಿಗೆದಾರರ ಅಷ್ಟೂ ಹಣವನ್ನು ನಾವೇ ಹಂತ ಹಂತವಾಗಿ ಪಾವತಿಸುತ್ತೇವೆ ಎಂದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಬೋಸ್ ರಾಜು, ಜಮೀರ್ ಅಹಮದ್ ಖಾನ್ ಸೇರಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
FSL Report: ರಾಷ್ಟ್ರ ದ್ರೋಹಿಗಳ ರಕ್ಷಣೆಯೇ ಆದ್ಯತೆಯೇ; ಸಿಎಂ ಸಿದ್ದರಾಮಯ್ಯಗೆ ಬಿ.ವೈ. ವಿಜಯೇಂದ್ರ ಪ್ರಶ್ನೆ
ರಾಜ್ಯಸಭಾ ಚುನಾವಣೆಯ (Rajyasabha Election) ಫಲಿತಾಂಶ ಪ್ರಕಟವಾದ ಫೆ. 27ರಂದು ಕಾಂಗ್ರೆಸ್‌ನ ವಿಜಯೀ ಅಭ್ಯರ್ಥಿ ನಾಸಿರ್ ಹುಸೇನ್ (Nasir Husein) ಅವರ ವಿಜಯೋತ್ಸವದ ಸಂದರ್ಭದಲ್ಲಿ ವಿಧಾನಸೌಧದ (Vidhana Soudha) ಒಳಗೇ ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ (BJP Karnataka) ಎಫ್‌ಎಸ್‌ಎಲ್ ವರದಿಯನ್ನು (FSL Report) ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಈಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಿ.ವೈ. ವಿಜಯೇಂದ್ರ ಟ್ವೀಟ್‌ನಲ್ಲೇನಿದೆ?
“ಮಾನ್ಯ ಸಿಎಂ ಸಿದ್ದರಾಮಯ್ಯನವರೇ,
ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು ಧೈರ್ಯತೋರುತ್ತಾರೆ, ಇದರ ಬೆನ್ನಲೇ ರಾಜಧಾನಿಯಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದರೆ ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ? ಎಂಬುದು ಬಹುದೊಡ್ಡ ಪ್ರಶ್ನೆಯಾಗಿ ರಾಜ್ಯದ ಜನರನ್ನು ಕಾಡುತ್ತಿದೆ.
ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ. ವರದಿ ತಲುಪಿದರೂ ಏಕೆ ಸುಳ್ಳು ಹೇಳುತ್ತಿದ್ದೀರಿ? ಇದು ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನೆ ಮಾಡುವಂತಾಗಿದೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಗತ ಶಕ್ತಿಗಳಿಗೆ ಸ್ವಾತಂತ್ರ್ಯ ದೊರೆತ ವಾತಾವರಣವು ನಿರ್ಮಾಣವಾಗಿದೆ. ಜನರು ಆತಂಕದ ನೆರಳಿನಲ್ಲಿ ಬದುಕುವ ಸ್ಥಿತಿ ಬಂದೊದಗಿದೆ.
ಮಾನ್ಯ @siddaramaiah ನವರೇ,
— Vijayendra Yediyurappa (@BYVijayendra) March 4, 2024
ರಾಜ್ಯ ಹಾಗೂ ಜನರ ಹಿತಾಸಕ್ತಿಯೇ ನಮ್ಮ ಮೊದಲ ಆದ್ಯತೆ, ದೇಶ ದ್ರೋಹಿ ಉಗ್ರರು ಹಾಗೂ ಪಾತಕಿಗಳಿಗೆ ಕರ್ನಾಟಕ ನೆಲೆಯಾಗಬಾರದೆಂಬುದಷ್ಟೇ ನಮ್ಮ ಪ್ರಾಮಾಣಿಕ ಕಾಳಜಿ, ಪ್ರಜಾಪ್ರಭುತ್ವದ ಹೃದಯ ಮಂದಿರ ವಿಧಾನ ಸೌಧಕ್ಕೆ ಧಾವಿಸಿ ಬಂದು ಪೋಲಿಸರ ಎದುರೇ ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಕೂಗುವಷ್ಟರ ಮಟ್ಟಿಗೆ ವಿದ್ರೋಹಿಗಳು… pic.twitter.com/RWWmeMcc4O
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
‘ಬೆಂದ ಮನೆಯಲ್ಲಿ ಗಳ ಇರಿಯುವ’ ರಾಜಕಾರಣ ಮಾಡುವ ದುರ್ಗತಿ ಬಿಜೆಪಿಗೆ ಬಂದಿಲ್ಲ ವಿಧಾನಸೌಧದಲ್ಲೇ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೇಳಿಬಂದರೆ ನಾವು ಕೈಕಟ್ಟಿ ಕೂರಬೇಕೇ? ಈ ಸಂಬಂಧ ಮಾಧ್ಯಮಗಳ ವರದಿ ನೀವು ನಂಬಲ್ಲಿಲ್ಲ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಲಿಸಲಿಲ್ಲ, ರಾಷ್ಟ್ರ ಹಿತಾಸಕ್ತಿಯ ಈ ಗಂಭೀರ ಪ್ರಕರಣದ ಬಗ್ಗೆ ತಾತ್ಸಾರ ತೋರುತ್ತಿರುವುದರ ನಿಮ್ಮ ವರ್ತನೆ ರಾಷ್ಟ್ರ ದ್ರೋಹಿಗಳನ್ನು ರಕ್ಷಿಸಲು ಆದ್ಯತೆ ನೀಡುತ್ತಿರುವಂತಿದೆ.
ಇದನ್ನೂ ಓದಿ: FSL Report : ಸರ್ಕಾರಿ FSL ವರದಿ ಬಂದಿಲ್ಲ, ಖಾಸಗಿ ವರದಿ ಒಪ್ಪಲ್ಲ; ಬಿಜೆಪಿಗೆ ಪರಮೇಶ್ವರ್ ತಿರುಗೇಟು
ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ
ಖಾಸಗಿ ಎಫ್‌ಎಸ್‌ಎಲ್ ವರದಿ ಈಗಾಗಲೇ ಈ ಕುರಿತು ದೃಢೀಕರಣ ನೀಡಿಯಾಗಿದೆ, ಸರ್ಕಾರಿ ವರದಿ ಕೂಡ ನಿಮ್ಮ ಕೈ ಸೇರಿದೆ ಆದಾಗ್ಯೂ ವರದಿ ಇನ್ನೂ ತಲುಪಿಲ್ಲ ಎಂಬ ಹಸೀ ಸುಳ್ಳು ಹೇಳುತ್ತಿರುವ ನಿಮ್ಮ ನಡೆ, ನಿಮ್ಮ ರಾಷ್ಟ್ರ ಬದ್ಧತೆಯನ್ನು ಪ್ರಶ್ನಿಸುವಂತಾಗಿದೆ” ಎಂದು ವಿಜಯೇಂದ್ರ ಕುಟುಕಿದರು.